Latest Updates
-
ಈ 5 ವಿಷಯಗಳಲ್ಲಿ ಮಿತಿ ಮೀರಿದ್ರೆ ಜೀವನ ಸರ್ವನಾಶ! ಅಹಂಕಾರ ಬಿಡಿ.. ಇಂದೇ ಇವುಗಳಿಂದ ದೂರವಿರಿ -
ಪಕ್ಕಾ ಹೈದರಾಬಾದಿ ರುಚಿ.. ಅತಿಥಿಗಳು ಬಂದ್ರೆ ಈ ಚಿಕನ್ ಯಖನಿ ಪುಲಾವ್ ಮಾಡಿ! ಸಿಂಪಲ್ & ಸೂಪರ್ ರುಚಿ -
2026ರ ಸೂರ್ಯ ಗೋಚಾರ: ಇವರಿಗೆ ಸಿಗಲಿದೆ ಸರ್ಕಾರಿ ಉದ್ಯೋಗ! ಯಾರಿಗೆ ಮಾನಸಿಕ ಒತ್ತಡ? 12 ರಾಶಿಯವರಿಗೆ ರಾಶಿಫಲ ಇಲ್ಲಿದೆ -
ಹೋಟೆಲ್ ಶೈಲಿಯ ಆಲೂ ಮಸಾಲಾ ಪೂರಿ! ಈ ರೀತಿ ಮನೆಯಲ್ಲೇ ಮಾಡಿ, ಪರ್ಫೆಕ್ಟ್ ಆಗಿ ಉಬ್ಬಿ ಬರುತ್ತೆ -
ಇವರ ಜೀವನದಲ್ಲಿ ಹೊಸ ಕಿಡಿ ಹೊತ್ತಿಕೊಳ್ಳಲಿದೆ! ಹಠಮಾರಿ ಸ್ವಭಾವವನ್ನು ಬಿಡಿ -
March 12 Horoscope: ಹಣಕಾಸಿನ ಸವಾಲುಗಳು ದೊಡ್ಡದಾಗುವ ಸಂಭವ -
ಕೋಮಾದಲ್ಲಿದ್ದ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂ ಒಪ್ಪಿಗೆ: ಈ ಕೇಸ್ ಬಗ್ಗೆ ನಿಮಗೆ ಗೊತ್ತಾ? -
ಪಂಜಾಬಿ ಸ್ಟೈಲ್ ಮಲೈ ಲಸ್ಸಿ! ಈ ರೀತಿ ಮಾಡಿ ಗಟ್ಟಿ ಕೆನೆಯ ಢಾಬಾ ಸ್ಟೈಲ್ ಲಸ್ಸಿ.. ಬಿಸಿಲ ತಾಪಕ್ಕೆ ಬೆಸ್ಟ್ ಕೂಲ್ ಡ್ರಿಂಕ್ -
ಮಾರ್ಚ್ ಅಂತ್ಯದಲ್ಲಿ ಗಜಕೇಸರಿ ಯೋಗ: ಈ ಮೂರು ರಾಶಿಯ ಜನರಿಗೆ ಒಲಿಯಲಿದೆ ಅದೃಷ್ಟ! -
ನಾಟಿ ಸ್ಟೈಲ್ನಲ್ಲಿ ಸೋಯಾ ಚಾಪ್ಸ್ ಮಾಡಿ: ಚಪಾತಿ, ಅನ್ನ, ಮುದ್ದೆ ಎಲ್ಲದ್ದಕ್ಕೂ ಬೆಸ್ಟ್!
Horoscope Today 9 April 2023: ಭಾನುವಾರ: ಮೇಷ ರಾಶಿಯವರಿಗೆ ಅದೃಷ್ಟದ ದಿನ, ಉಳಿದ ರಾಶಿಫಲ ಹೇಗಿದೆ?
ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಏಪ್ರಿಲ್ 9ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ಉತ್ತರಾಯಣ
ಋತು: ವಸಂತ
ಮಾಸ: ವೈಶಾಖ
ಪಕ್ಷ: ಕೃಷ್ಣಪಕ್ಷ
ತಿಥಿ: ತೃತೀಯ
ನಕ್ಷತ್ರ: ವೈಶಾಖ, 2 ಗಂಟೆಯ ನಂತರ ಅನುರಾಧ
ರಾಹುಕಾಲ: ಸಂಜೆ 04:59ರಿಂದ 06:32ರವರೆಗೆ

ಮೇಷ ರಾಶಿ
ಈ ದಿನ ವಿದ್ಯಾರ್ಥಗಳಿಗೆ ಅನುಕೂಲಕರವಾಗಿದೆ. ಹಣದ ವಿಷಯದಲ್ಲಿ ಇಂದು ನಿಮಗೆ ದುಬಾರಿಯಾಗಲಿದೆ. ಆದರೂ ನಿಮಗೆ ದೊಡ್ಡ ಸಮಸ್ಯೆಯೇನೂ ಆಗಲ್ಲ. ಕೆಲಸದ ದೃಷ್ಟಿಯಿಂದ ದಿನವು ಕಾರ್ಯನಿರತವಾಗಿರುತ್ತದೆ. ಕೆಲಸದ ಹೊರೆ ಅಧಿಕವಿರಲಿದೆ. ಕುಟುಂಬ ಜೀವನದಲ್ಲಿ ಸುಧಾರಣೆ ಕಂಡು ಬರುವುದು. ನಿಮ್ಮ ಆರೋಗ್ಯದ ಕಡೆಗೆ ಗಮನಹರಿಸಿ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಸಂಜೆ 4:45 ರಿಂದ ರಾತ್ರಿ 8 ರವರೆಗೆ
ವೃಷಭ ರಾಶಿ
ಕುಟುಂಬಕ್ಕೆ ಸಂಬಂಧಿಸಿದ ಯಾವುದೋ ಒಂದು ಚಿಂತೆ ಹೆಚ್ಚಾಗಬಹುದು. ಭಾವನಾತ್ಮಕವಾಗಿ ಇಂದು ನೀವು ಯಾವುದೇ ನಿರ್ಧಾರ ತೆಗೆದುಕೊಳ್ಳಲು ಹೋಗಬೇಡಿ. ನಿಮ್ಮ ಕೆಲಸ ಕಾರ್ಯದ ಕಡೆಗೆ ಅಧಿಕ ಗಮನಹರಿಸಿ. ನಿಮ್ಮ ಕಠಿಣ ಶ್ರಮಕ್ಕೆ ಯಶಸ್ಸು ಸಿಗಲಿದೆ. ವ್ಯಾಪಾರಸ್ಥರು ಕಾನೂನು ವಿಷಯಗಳಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯವನ್ನು ಮಾಡದಂತೆ ಸಲಹೆ ನೀಡಲಾಗಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಈ ದಿನ ಕಿವಿನೊವಿನ ಸಮಸ್ಯೆ ಇರಬಹುದು.
ಅದೃಷ್ಟದ ಬಣ್ಣ: ತಿಳಿ ಹಳದಿ
ಅದೃಷ್ಟದ ಸಂಖ್ಯೆ: 16
ಅದೃಷ್ಟದ ಸಮಯ: ಸಂಜೆ 6 ರಿಂದ 8:45 ರವರೆಗೆ
ಮಿಥುನ ರಾಶಿ
ಪ್ರೇಮಿಗಳಿಗೆ ನಿಮ್ಮ ಸಂಗಾತಿಯ ಭಾವನೆಗಳನ್ನು ನಿರ್ಲಕ್ಷ್ಯ ಮಾಡಬೇಡಿ. ವೈವಾಹಿಕ ಜೀವನದಲ್ಲಿ ಒತ್ತಡ ಪರಿಸ್ಥಿತಿ ಇರಬಹುದು. ಸಂಗಾತಿಯ ಅಸಡ್ಡೆ ವರ್ತನೆ ನಿಮ್ಮ ಮನಸ್ಸಿಗೆ ನೋವುಂಟು ಮಾಡಬಹುದು. ಹಣದ ವಿಷಯದಲ್ಲಿ ದಿನವು ಸಾಮಾನ್ಯವಾಗಿರುತ್ತದೆ. ಕಚೇರಿಯಲ್ಲಿ ಕೆಲಸದ ಕಡೆ ಹೆಚ್ಚು ಕಾಳಜಿ ವಹಿಸಲು ನಿಮಗೆ ಸಲಹೆ ನೀಡಲಾಗಿದೆ. ನಿಮ್ಮ ಇಂದಿನ ಯಾವುದೇ ಕೆಲಸವನ್ನು ನಾಳೆಗೆ ಮುಂದೂಡದೇ ಇದ್ದರೆ ಒಳ್ಳೆಯದು. ವ್ಯಾಪಾರಸ್ಥರಿಗೆ ಈ ದಿನ ಸಾಧಾರಣವಾಗಿದೆ. ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ಒಳ್ಳೆಯದಲ್ಲ.
ಅದೃಷ್ಟದಬಣ್ಣ: ಗಾಢ ನೀಲಿ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಮಧ್ಯಾಹ್ನ 3 ರಿಂದ 4:20 ರವರೆಗೆ
ಕರ್ಕ ರಾಶಿ
ಉದ್ಯೋಗಸ್ಥರಿಗೆ ಇಂದು ಅತ್ಯಂತ ಮಹತ್ವದ ದಿನವಾಗಿದೆ. ಕೆಲಸದಲ್ಲಿ ನಿಮಗೆ ಒಳ್ಳೆಯ ಅವಕಾಶ ಸಿಗಬಹುದು. ನಿಮ್ಮ ವೃತ್ತಿಜೀವನವು ಹೊಸ ದಿಕ್ಕಿನಲ್ಲಿ ಚಲಿಸುತ್ತದೆ. ಉದ್ಯಮಿಗಳು ಇಂದು ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಿದರೆ, ಯಶಸ್ಸಿನ ಬಲವಾದ ಸಾಧ್ಯತೆಯಿದೆ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಲಕ್ಷಣಗಳಿವೆ.ಆದರೆ ಖರ್ಚುಗಳನ್ನು ನೋಡಿಕೊಂಡು ಮಾಡಿದರೆ ಒಳ್ಳೆಯದು. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 3
ಅದೃಷ್ಟದ ಸಮಯ: ಮಧ್ಯಾಹ್ನ 3:30 ರಿಂದ 7:55 ರವರೆಗೆ
ಸಿಂಹ ರಾಶಿ
ನೀವು ಬಹಳ ಸಮಯದಿಂದ ಯಾವುದೇ ಬೆಲೆಬಾಳುವ ವಸ್ತುವನ್ನು ಖರೀದಿಸಲು ಯೋಜಿಸುತ್ತಿದ್ದರೆ, ಇಂದು ನಿಮ್ಮ ಆಸೆ ನೆರವೇರಬಹುದು. ನಿಮ್ಮ ಸಂಗಾತಿಯೊಂದಿಗೆ ಒಳ್ಳೆಯ ಸಮಯ ಕಳೆಯುವಂತಾಗುವುದು. ಬಹಳ ಸಮಯದ ನಂತರ ಇಬ್ಬರು ಡಿನ್ನರ್, ಟ್ರಿಪ್ ಅಂತ ಸುತ್ತಾಡುವಿರಿ. ಕಛೇರಿಯಲ್ಲಿ ನಿಮ್ಮ ಎಲ್ಲಾ ಕೆಲಸಗಳು ಸುಗಮವಾಗಿ ಪೂರ್ಣಗೊಳ್ಳುತ್ತವೆ. ಇದರೊಂದಿಗೆ ಉನ್ನತ ಅಧಿಕಾರಿಗಳ ಸಹಕಾರವೂ ದೊರೆಯಲಿದೆ. ವ್ಯಾಪಾರಸ್ಥರಿಗೆ ಆರ್ಥಿಕ ಸಮಸ್ಯೆ ಬಗೆಹರಿಯಲಿದೆ. ನಿಮ್ಮ ಆರೋಗ್ಯ ಕೂಡ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 28
ಅದೃಷ್ಟದ ಸಮಯ: ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ
ಕನ್ಯಾ ರಾಶಿ
ಕೆಲಸದ ಸ್ಥಳದಲ್ಲಿ ಅತ್ಯಂತ ಸಮತೋಲಿತವಾಗಿ ವರ್ತಿಸಲು ನಿಮಗೆ ಸಲಹೆ ನೀಡಲಾಗುವುದು, ಅತ್ಯಂತ ಕೋಪ ಒಳ್ಳೆಯದಲ್ಲ. ವ್ಯಾಪಾರಿಗಳು ಲಾಭವನ್ನು ಪಡೆಯುತ್ತಾರೆ. ಸಂಗಾತಿ ಹಾಗೂ ನಿಮ್ಮ ನಡುವೆ ಮನಸ್ತಾಪ ಬರಬಹುದು. ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ತರಾತುರಿಯಲ್ಲಿ ಮತ್ತು ಗಾಬರಿಯಿಂದ ಯಾವುದೇ ಕೆಲಸವನ್ನು ಮಾಡಬೇಡಿ, ಇಲ್ಲದಿದ್ದರೆ ನಷ್ಟ ಅನುಭವಿಸಬಹುದು.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 28
ಅದೃಷ್ಟದ ಸಮಯ: ಬೆಳಿಗ್ಗೆ 9 ರಿಂದ 11 ರವರೆಗೆ
ತುಲಾ ರಾಶಿ
ಉದ್ಯೋಗಸ್ಥರಿಗೆ ಇಂದು ಅನುಕೂಲಕರ ದಿನವಾಗಿರುತ್ತದೆ. ನಿಮ್ಮ ಕೆಲವು ಪ್ರಮುಖ ಕೆಲಸಗಳನ್ನು ಪೂರ್ಣಗೊಳಿಸಬಹುದು. ಇದರೊಂದಿಗೆ, ನಿಮ್ಮ ಕಠಿಣ ಪರಿಶ್ರಮದ ಸರಿಯಾದ ಫಲಿತಾಂಶವನ್ನು ಸಹ ನೀವು ಪಡೆಯುತ್ತೀರಿ. ಇಂದು ನಿಮ್ಮಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಖರ್ಚು ಕೂಡ ಕಡಿಮೆ ಇರಲಿದೆ. ಸಂಗಾತಿಯ ಬದಲಾದ ನಡವಳಿಕೆಯು ನಿಮಗೆ ಬೇಸರ ತಂದಿದ್ದರೆ ಈ ಕುರಿತು ಅವರ ಜೊತೆಯಲ್ಲಿ ಮಾತನಾಡಿ. ಆರೋಗ್ಯದಲ್ಲಿ ಕ್ಷೀಣಿಸುವ ಸಾಧ್ಯತೆ ಇದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಮಧ್ಯಾಹ್ನ 12 ರಿಂದ ಮಧ್ಯಾಹ್ನ 3 ರವರೆಗೆ
ವೃಶ್ಚಿಕ ರಾಶಿ
ಇಂದು ಹಿಡಿಯರು ನಿಮಗೆ ಪ್ರಮುಖ ಸಲಹೆ ನೀಡಬಹುದು, ನಿರ್ಲಕ್ಷ್ಯ ಮಾಡಬೇಡಿ. ಅವಾಹಿತರು ಮದುವೆಗೆ ಸಂಬಂಧ ಹುಡುಕುತ್ತಿದ್ದರೆ ಇಂದು ಹಣದ ವಿಷಯದಲ್ಲಿ ಮಿಶ್ರ ಫಲ. ನಿಮ್ಮ ಆದಾಯವನ್ನು ಹೆಚ್ಚಿಸಲು ನಿಮ್ಮ ಪ್ರಯತ್ನಗಳನ್ನು ಮತ್ತಷ್ಟು ತೀವ್ರಗೊಳಿಸಿ. ಕಚೇರಿಯಲ್ಲಿ ಬಾಸ್‌ನ ಮನಸ್ಥಿತಿ ಇಂದು ಚೆನ್ನಾಗಿರುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ನೀವು ತುಂಬಾ ಜಾಗರೂಕರಾಗಿರಬೇಕು. ಉದ್ಯಮಿಗಳು ಆರ್ಥಿಕ ಲಾಭವನ್ನು ಪಡೆಯಬಹುದು. ನೀವು ದೊಡ್ಡ ಆರ್ಡರ್ ಪಡೆಯುವ ಸಾಧ್ಯತೆಯಿದೆ. ಆರೋಗ್ಯವನ್ನು ನಿರ್ಲಕ್ಷಿಸಬೇಡಿ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ರಾತ್ರಿ 9 ರವರೆಗೆ
ಧನು ರಾಶಿ
ಧನು ರಾಶಿಯ ವ್ಯಾಪಾರಿಗಳಿಗೆ ಇಂದು ಅತ್ಯಂತ ಖುಚಿಯ ದಿನವಾಗಲಿದೆ. ಯೋಜನೆಯ ಪ್ರಕಾರ ನಿಮ್ಮ ಎಲ್ಲಾ ಕೆಲಸಗಳು ಪೂರ್ಣಗೊಳ್ಳುತ್ತವೆ. ಇದಲ್ಲದೆ, ನೀವು ಬಯಸಿದ ಲಾಭವನ್ನು ಸಹ ಪಡೆಯುತ್ತೀರಿ. ಉದ್ಯೋಗಿಗಳು ತಮ್ಮ ಕೆಲಸದಲ್ಲಿ ತಪ್ಪಾಗದಂತೆ ಎಚ್ಚರವಹಿಸಿ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ನೀವು ಹಣ ಗಳಿಸಲು ಉತ್ತಮ ಅವಕಾಶವನ್ನು ಪಡೆಯುತ್ತೀರಿ. ಇಂದು ನೀವು ನಿಮ್ಮ ಸಂಗಾತಿಯೊಂದಿಗೆ ಹೆಚ್ಚು ಸಮಯ ಕಳೆಯಲು ಸಾಧ್ಯವಾಗುತ್ತದೆ. ನಿಮ್ಮ ಆರೋಗ್ಯದ ದೃಷ್ಟಿಯಿಂದ ದಿನವು ಅನುಕೂಲಕರವಾಗಿರುತ್ತದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಸಂಜೆ 4:40 ರಿಂದ ರಾತ್ರಿ 8:05 ರವರೆಗೆ
ಮಕರ ರಾಶಿ
ನೀವು ಉದ್ಯಮಿಯಾಗಿದ್ದರೆ ಮತ್ತು ನಿಮ್ಮ ವ್ಯವಹಾರವನ್ನು ಮುಂದಕ್ಕೆ ಕೊಂಡೊಯ್ಯಲು ಬಹಳ ಸಮಯದಿಂದ ಪ್ರಯತ್ನಿಸುತ್ತಿದ್ದರೆ, ಇಂದು ನಿಮ್ಮ ಪ್ರಯತ್ನಗಳು ಫಲಪ್ರದವಾಗಬಹುದು. ನಿಮ್ಮ ಕಠಿಣ ಪರಿಶ್ರಮಕ್ಕೆ ಅನುಗುಣವಾಗಿ ನೀವು ಫಲಿತಾಂಶಗಳನ್ನು ಪಡೆಯುವ ಸಾಧ್ಯತೆಯಿದೆ. ಉದ್ಯೋಗಸ್ಥರಿಗೆ ಕಚೇರಿಯಲ್ಲಿ ಮೇಲಧಿಕಾರಿಗಳ ಸಲಹೆ ಸೂಚನೆಗಳು ಸಿಗುವುದರಿಂದ ನಿಮ್ಮ ಕೆಲಸವನ್ನು ಮತ್ತಷ್ಟು ಚೆನ್ನಾಗಿ ಪೈರ್ಣಗೊಳಿಸುವಿರಿ. ಹಣದ ವಿಷಯದಲ್ಲಿ, ದಿನವು ಮಿಶ್ರ ಫಲಿತಾಂಶಗಳನ್ನು ನೀಡುತ್ತದೆ. ಕ್ರೆಡಿಟ್ ಅಥವಾ ಸಾಲದ ವಹಿವಾಟುಗಳನ್ನು ತಪ್ಪಿಸಲು ನಿಮಗೆ ಸಲಹೆ ನೀಡಲಾಗಿದೆ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಮಾಧುರ್ಯ ಹೆಚ್ಚಾಗುತ್ತದೆ. ಮದ್ಯ ಸೇವಿಸಿದ ನಂತರ ರಾತ್ರಿ ವಾಹನ ಚಲಾಯಿಸಬೇಡಿ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 22
ಅದೃಷ್ಟದ ಸಮಯ: ಬೆಳಿಗ್ಗೆ 6 ರಿಂದ ಮಧ್ಯಾಹ್ನ 12:45 ರವರೆಗೆ
ಕುಂಭ ರಾಶಿ
ಇಂದು ಧಾರ್ಮಿಕ ಕಾರ್ಯಗಳಲ್ಲಿ ನಿಮ್ಮ ಒಲವು ಹೆಚ್ಚಾಗಲಿದೆ. ನೀವು ಮನೆಯಲ್ಲಿಯೇ ಭಜನೆ-ಕೀರ್ತನೆ ಹವನ ಇತ್ಯಾದಿಗಳನ್ನು ಆಯೋಜಿಸಬಹುದು. ಇದಲ್ಲದೆ, ನೀವು ಕೆಲವು ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡುವ ಅವಕಾಶವನ್ನು ಸಹ ಪಡೆಯುತ್ತೀರಿ. ಕೆಲಸದ ವಿಷಯದಲ್ಲಿ ದಿನವು ಸಾಮಾನ್ಯವಾಗಿರುತ್ತದೆ. ಹಣಕಾಸಿನ ಪರಿಸ್ಥಿತಿಯ ಬಗ್ಗೆ ಹೇಳುವುದಾದರೆ ಇಂದು ವೆಚ್ಚಗಳ ಪಟ್ಟಿ ಸ್ವಲ್ಪ ಹೆಚ್ಚಾಗಬಹುದು, ಆದರೆ ನಿಮ್ಮ ತಿಳುವಳಿಕೆಯೊಂದಿಗೆ ನೀವು ಎಲ್ಲವನ್ನೂ ನಿಭಾಯಿಸಲು ಸಾಧ್ಯವಾಗುತ್ತದೆ. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ. ಈ ದಿನ ಲವಲವಿಕೆಯಿಂದ ಇರುವಿರಿ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಸಂಜೆ 6:15 ರಿಂದ ರಾತ್ರಿ 9 ರವರೆಗೆ
ಮೀನ ರಾಶಿ
ಆರ್ಥಿಕ ರಂಗದಲ್ಲಿ ಇಂದು ನಿಮಗೆ ತುಂಬಾ ಅದೃಷ್ಟದ ದಿನ. ಕಡಿಮೆ ಶ್ರಮದಿಂದ ಉತ್ತಮ ಹಣವನ್ನು ಪಡೆಯಬಹುದು. ಇಂದು ನೀವು ನಿಮಗಾಗಿ ಹೊಸ ಬಟ್ಟೆ, ಆಭರಣ ಇತ್ಯಾದಿಗಳನ್ನು ಖರೀದಿಸಬಹುದು. ನೀವು ನಿಮ್ಮ ಕೆಲಸ ಕಾರ್ಯಗಳನ್ನು ಉತ್ತಮವಾಗಿ ಮಾಡಿ ಮುಗಿಸುವಿರಿ. ಯಾವುದೇ ಹೊಸ ವ್ಯವಹಾರ ಪ್ರಸ್ತಾಪವನ್ನು ಸ್ವೀಕರಿಸುವಲ್ಲಿ ಆತುರಪಡದಂತೆ ಉದ್ಯಮಿಗಳಿಗೆ ಸಲಹೆ ನೀಡಲಾಗಿದೆ. ಮನೆಯ ವಾತಾವರಣ ಶಾಂತವಾಗಿರುತ್ತದೆ. ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ.
ಅದೃಷ್ಟದ ಬಣ್ಣ: ಗಾಢ ಹಳದಿ
ಅದೃಷ್ಟದ ಸಂಖ್ಯೆ: 18
ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ ಸಂಜೆ 5 ರವರೆಗೆ



Click it and Unblock the Notifications












