Latest Updates
-
ಎಲ್ಜಿಪಿ ಬಳಸದೆ ನೀರಿನಿಂದ ಅಡುಗೆ ಮಾಡಿ: ರವಿಶಂಕರ್ ಗುರೂಜಿ ವಿಡಿಯೋ ವೈರಲ್ -
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ
ಆಗಸ್ಟ್ 3: ಈ ದಿನ ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
ವೈದಿಕ ಶಾಸ್ತ್ರದ ಪ್ರಕಾರ ದ್ವಾದಶ ರಾಶಿಗಳ ರಾಶಿಫಲ ಹೇಗಿದೆ ನೋಡೋಣ:
ದಿನಾಂಕ: ಆಗಸ್ಟ್ 3
ತಿಥಿ: ದ್ವಿತೀಯಾ
ನಕ್ಷತ್ರ: ಬೆಳಗ್ಗೆ 09:56ರವರೆಗೆ ಧನಿಷ್ಠ ನಂತರ ಶತಾಭಿಷ
ಪಕ್ಷ: ಕೃಷ್ಣಪಕ್ಷ
ರಾಹುಕಾಲ: ಮಧ್ಯಾಹ್ನ 02:04ರಿಂದ 03:41ರವರೆಗೆ
ಮೇಷ ರಾಶಿ
ನೀವು ಇತ್ತೀಚೆಗೆ ಹೊಸ ಕೆಲಸಕ್ಕೆ ಸೇರಿದ್ದರೆ ಈ ದಿನ ನಿಮಗೆ ಮುಖ್ಯವಾಗಿರುತ್ತದೆ. ನಿಮ್ಮ ಕೌಶಲ್ಯ ತೋರಿಸಲು ಸುವರ್ಣಾವಕಾಶ ಸಿಗಲಿದೆ. ಈ ಅವಕಾಶವನ್ನು ನೀವು ಸಂಪೂರ್ಣವಾಗಿ ಬಳಸಿಕೊಳ್ಳುವುದು ಒಳ್ಳೆಯದು. ಹಣದ ವಿಷಯದಲ್ಲಿ ಈ ದಿನ ಅದೃಷ್ಟ ಕಡಿಮೆ, ಹಣ ನಷ್ಟವಾಗುವ ಸಾಧ್ಯತೆ ಇದೆ, ಜಾಗ್ರತೆವಹಿಸಿ. ಕೈಯಲ್ಲಿರುವ ಹಣ ಸುಲಭವಾಗಿ ಜಾರಿಕೊಳ್ಳಬಹುದು. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರಲಿದೆ. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 8
ಅದೃಷ್ಟದ ಸಮಯ: ಮಧ್ಯಾಹ್ನ 3:30 ರಿಂದ ರಾತ್ರಿ 8 ರವರೆಗೆ

ವೃಷಭ ರಾಶಿ
ಕೆಲಸದ ಜಾಗದಲ್ಲಿ ಸಮತೋಲಿತವಾಗಿ ವರ್ತಿಸಲು ಸಲಹೆ ನೀಡಲಾಗಿದೆ. ಅತಿಯಾಗಿ ಕೋಪಗೊಳ್ಳಬೇಡಿ, ವ್ಯಾಪಾರಸ್ಥರು ಇಂದು ಹೊಸ ವ್ಯವಹಾರ ಪ್ರಸ್ತಾಪವನ್ನು ಪಡೆಯಬಹುದು. ವೈಯಕ್ತಿಕ ಜೀವನದಲ್ಲಿ ಪರಿಸ್ಥಿತಿ ಚೆನ್ನಾಗಿರಲಿದೆ. ನಿಮ್ಮ ಜೀವನ ಸಂಗಾತಿಯ ತಿಳುವಳಿಕೆಯೊಂದಿಗೆ, ಭಿನ್ನಾಭಿಪ್ರಾಯವಿದ್ದರೆ ಇಂದು ಎಲ್ಲಾ ಸರಿಹೋಗಲಿದೆ. ಆರ್ಥಿಕ ಪರಿಸ್ಥಿತಿ ಹದಗೆಡುವ ಲಕ್ಷಣಗಳಿವೆ. ಹಣದ ನಷ್ಟ ಉಂಟಾಗಬಹುದು.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 16
ಅದೃಷ್ಟದ ಸಮಯ: ಬೆಳಿಗ್ಗೆ 7:10 ರಿಂದ ಮಧ್ಯಾಹ್ನ 12:10 ರವರೆಗೆ
ಮಿಥುನ ರಾಶಿ
ಪ್ರೇಮಿಗಳಿಗೆ ಅನುಕೂಲಕರವಲ್ಲ. ನಿಮ್ಮಿಬ್ಬರ ನಡುವೆ ಅಂತರ ಹೆಚ್ಚಾಗಬಹುದು, ನಿಮ್ಮ ನಡುವಿನ ಸಮಸ್ಯೆಗಳನ್ನು ಮಾತುಕತೆಯ ಮೂಲಕ ಬಗೆಹರಿಸಲು ಪ್ರಯತ್ನಿಸಿದರೆ ಉತ್ತಮ. ಕೆಲಸದ ಬಗ್ಗೆ ಯಾವುದೇ ರೀತಿಯ ನಿರ್ಲಕ್ಷ್ಯ ಮಾಡಬೇಡಿ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 45
ಅದೃಷ್ಟದ ಸಮಯ: ಸಂಜೆ 4:30 ರಿಂದ ಸಂಜೆ 7 ರವರೆಗೆ
ಕರ್ಕ ರಾಶಿ
ಇಂದು ಆರೋಗ್ಯದ ದೃಷ್ಟಿಯಿಂದ ಬಹಳ ಒಳ್ಳೆಯದಿದೆ. ನೀವು ತುಂಬಾ ಧನಾತ್ಮಕವಾಗಿರುತ್ತೀರಿ. ಸಂಗಾತಿಯೊಂದಿಗೆ ಬಾಂಧವ್ಯ ಮತ್ತಷ್ಟು ಉತ್ತಮವಾಗಲಿದೆ. ನಿಮ್ಮ ಹಣಕಾಸಿನ ಸ್ಥಿತಿ ಚೆನ್ನಾಗಿರಲಿದೆ, ಈ ದಿನ ದುಬಾರಿ ವಸ್ತು ಕೂಡ ಖರೀದಿಸಬಹುದು.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 8 ರವರೆಗೆ
ಸಿಂಹ ರಾಶಿ
ಮಕ್ಕಳ ಕಡೆಯಿಂದ ಖುಷಿ ಸಿಗಲಿದೆ, ಸಂಗಾತಿಯ ಆರೋಗ್ಯದಲ್ಲಿ ದೊಡ್ಡ ಸುಧಾರಣೆ ಕಂಡುಬರಲಿದೆ. ಈ ಸಮಯದಲ್ಲಿ ನಿಮ್ಮ ಚಿಂತೆ ದೂರವಾಗುತ್ತದೆ. ಅದು ಉದ್ಯೋಗ ಅಥವಾ ವ್ಯವಹಾರವಾಗಿರಲಿ, ಇಂದು ನಿಮ್ಮ ಎಲ್ಲಾ ಕೆಲಸಗಳು ನಿಮ್ಮ ಯೋಜನೆಯಂತೆಯೇ ಪೂರ್ಣಗೊಳ್ಳುತ್ತವೆ. ದಿನದ ಎರಡನೇ ಭಾಗದಲ್ಲಿ ನೀವು ಕೆಲಸಕ್ಕಾಗಿ ಪ್ರಯಾಣಿಸಬೇಕಾಗಬಹುದು. ಆದರೆ ನಿಮ್ಮ ಆರೋಗ್ಯವನ್ನು ನಿರ್ಲಕ್ಷಿಸಬೇಡಿ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 14
ಅದೃಷ್ಟದ ಸಮಯ: ಬೆಳಿಗ್ಗೆ 6:15 ರಿಂದ 8:25 ರವರೆಗೆ
ಕನ್ಯಾ ರಾಶಿ
ಈ ದಿನ ನಿಮಗೆ ತುಂಬಾ ರೊಮ್ಯಾಂಟಿಕ್ ಆಗಿರಲಿದೆ. ನಿಮ್ಮ ಸಂಗಾತಿಯೊಂದಿಗೆ ನೀವು ಉತ್ತಮ ಸಮಯವನ್ನು ಕಳೆಯುತ್ತೀರಿ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನೀವು ಯಾರಿಗಾದರೂ ಆರ್ಥಿಕವಾಗಿ ಸಹಾಯ ಮಾಡಬಹುದು. ಕೆಲಸದ ದೃಷ್ಟಿಯಿಂದ ಈ ದಿನ ಸಾಮಾನ್ಯವಾಗಿರುತ್ತದೆ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 8
ಅದೃಷ್ಟದ ಸಮಯ: ಸಂಜೆ 4 ರಿಂದ 6:30 ರವರೆಗೆ
ತುಲಾರಾಶಿ
ನಿಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದ ನಡುವೆ ಸಮತೋಲನವನ್ನು ಸಾಧಿಸಲು ನಿಮಗೆ ಸಲಹೆ ನೀಡಲಾಗುವುದು.ಕೆಲಸದ ಜೊತೆಗೆ ನಿಮ್ಮ ಕುಟುಂಬಕ್ಕೆ ಸಾಕಷ್ಟು ಸಮಯವನ್ನು ನೀಡಲು ಪ್ರಯತ್ನಿಸಿ.ಹಣದ ವಿಷಯದಲ್ಲಿ ಈ ದಿನ ಮಿಶ್ರಫಲ. ನಿಮ್ಮ ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟ ಸಂಖ್ಯೆ: 26
ಅದೃಷ್ಟದ ಸಮಯ: ಬೆಳಗ್ಗೆ 9:50 ರಿಂದ ಮಧ್ಯಾಹ್ನ 12
ವೃಶ್ಚಿಕ ರಾಶಿ
ಕೆಲವು ದಿನಗಳಿಂದ ನೀವು ಕೆಲವು ಪ್ರಮುಖ ಕೆಲಸಗಳಲ್ಲಿ ಅಡೆತಡೆಗಳನ್ನು ಎದುರಿಸುತ್ತಿದ್ದರೆ ಈ ದಿನ ನಿಮಗೆ ಉತ್ತಮವಾಗಿದೆ. ನಿಮ್ಮ ಸಮಸ್ಯೆ ಬಗೆಹರಿಯಲಿದೆ.ಸಂಗಾತಿಯೊಂದಿಗಿನ ಸಂಬಂಧದಲ್ಲಿ ಉತ್ತಮ ಹೊಂದಾಣಿಕೆ ಇರಲಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಉದ್ಯೋಗಸ್ಥರಿಗೆ ಈ ದಿನ ಉತ್ತಮವಾಗಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 30
ಅದೃಷ್ಟದ ಸಮಯ: ಬೆಳಿಗ್ಗೆ 5:05 ರಿಂದ 9:15 ರವರೆಗೆ
ಧನು ರಾಶಿ
ಅಧಿಕ ಕೆಲಸದ ಒತ್ತಡದಿಂದ ಆಯಾಸ ಹೆಚ್ಚಾಗಲಿದೆ, ಇಂದು ನೀವು ಆರೋಗ್ಯ ಸಂಬಂಧಿತ ಸಮಸ್ಯೆಯೂ ಕಾಡಬಹುದು.ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ, ಮನೆಯ ಹಿರಿಯರೊಂದಿಗೆ ನಿಮ್ಮ ಸಂಬಂಧವನ್ನು ಉತ್ತಮವಾಗಿಡಲು ಪ್ರಯತ್ನಿಸಿ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಹಾಗಂತ ತುಂಬಾ ಖರ್ಚು ಮಾಡಲು ಹೋಗಬೇಡಿ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಸಂಜೆ 6:30 ರಿಂದ ರಾತ್ರಿ 9 ರವರೆಗೆ
ಮಕರ ರಾಶಿ
ವಿದ್ಯಾರ್ಥಿಗಳಿಗೆ ಇಂದು ಉತ್ತಮ ದಿನವಾಗಿರಲಿದೆ, ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರಲಿದೆ. ತಂದೆಯ ಮಾರ್ಗದರ್ಶನ ದೊರೆಯಲಿದೆ. ಹಣಕಾಸಿನ ವಿಚಾರದಲ್ಲಿ ಯಾವುದೇ ಆತುರ ಬೇಡ. ಯೋಚಿಸದೆ ಯಾವುದೇ ಸಾಲದ ವ್ಯವಹಾರ ಮಾಡಬೇಡಿ. ಉದ್ಯೋಗ ಹಾಗೂ ವ್ಯವಹಾರದಲ್ಲಿ ನಿರೀಕ್ಷಿತ ಫಲ ಸಿಗಲಿದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಸಂಜೆ 4 ರಿಂದ 7:30 ರವರೆಗೆ
ಕುಂಭ ರಾಶಿ
ಹಣದ ವಿಷಯದಲ್ಲಿ ಇಂದು ನಿಮಗೆ ತುಂಬಾ ಶುಭ ದಿನವಾಗಿದೆ, ನಿಮ್ಮ ಆದಾಯ ಹೆಚ್ಚಾಗಲಿದೆ, ಕೆಲಸದ ಸ್ಥಳದಲ್ಲಿ ನೀವು ತುಂಬಾ ಜಾಗರೂಕರಾಗಿರಬೇಕು. ಕೆಲವು ಅಸೂಯೆ ಪಟ್ಟ ಸಹೋದ್ಯೋಗಿಗಳು ನಿಮ್ಮ ಇಮೇಜ್ ಅನ್ನು ಹಾಳುಮಾಡಲು ಪ್ರಯತ್ನಿಸಬಹುದು, ಅಂಥವರ ಬಗ್ಗೆ ಜಾಗ್ರತೆವಹಿಸಿ. ನಿಮ್ಮ ಸಂಗಾತಿಯೊಂದಿಗೆ ಏನಾದರೂ ಭಿನ್ನಾಭಿಪ್ರಾಯವಿದ್ದರೆ ಶಾಂತ ರೀತಿಯಲ್ಲಿ ಪರಿಸ್ಥಿತಿ ನಿಭಾಯಿಸಲು ಪ್ರಯತ್ನಿಸಿ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಬೆಳಿಗ್ಗೆ 8:20 ರಿಂದ 11:20 ರವರೆಗೆ
ಮೀನ ರಾಶಿ
ಈಗಾಗಲೇ ಏನಾದರೂ ಆರೋಗ್ಯ ಸಮಸ್ಯೆಯಿದ್ದರೆ ಆರೋಗ್ಯದಲ್ಲಿ ಭಾರೀ ಕುಸಿತ ಉಂಟಾಗಬಹುದು ಕೋಪವನ್ನು ನಿಯಂತ್ರಿಸಿ, ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ನಿಮ್ಮ ಬಜೆಟ್ ಅನ್ನು ಗಮನದಲ್ಲಿಟ್ಟುಕೊಂಡು ಖರ್ಚು ಮಾಡಿದರೆ ಒಳ್ಳೆಯದು, ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಸಂಗಾತಿಯೊಂದಿಗೆ ಭಾವನಾತ್ಮಕ ಬಾಂಧವ್ಯ ಹೆಚ್ಚಾಗುತ್ತದೆ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 24
ಅದೃಷ್ಟದ ಸಮಯ: ಬೆಳಗ್ಗೆ 4 ರಿಂದ 8:30 ರವರೆಗೆ



Click it and Unblock the Notifications












