Latest Updates
-
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ! -
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ!
ಆಗಸ್ಟ್ 24ರ ದಿನ ಭವಿಷ್ಯ:ಮಿಥುನ ರಾಶಿಯವರಿಗೆ ಆರ್ಥಿಕ ಲಾಭ, ಉಳಿದ ರಾಶಿಗಳ ರಾಶಿಫಲ ಹೇಗಿದೆ?
ವೈದಿಕ ಶಾಸ್ತ್ರದ ಪ್ರಕಾರ ಆಗಸ್ಟ್ 24ರ ರಾಶಿಫಲ ನೀಡಿದ್ದು ಈ ದಿನ 12 ರಾಶಿಗಳಿಗೆ ಹೇಗಿರಲಿದೆ ಎಂದು ನೋಡೋಣ:
ಮೇಷ ರಾಶಿ
ಇಂದು ಕುಟುಂಬದೊಂದಿಗೆ ಖುಷಿಯಿಂದ ಕಳೆಯುವಿರಿ, ನೀವು ಯಾವುದೇ ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡಬಹುದು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ. ಅಧಿಕ ಖರ್ಚು ಮಾಡಲು ಹೋಗಬೇಡಿ. ಬಾಸ್ ನಿಮಗೆ ಕಚೇರಿಯಲ್ಲಿ ಕೆಲವು ಪ್ರಮುಖ ಜವಾಬ್ದಾರಿಯನ್ನು ನೀಡಿದ್ದರೆ ಅದನ್ನು ಪೂರ್ಣಗೊಳಿಸಿ, ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ಸಮಯ: ಬೆಳಗ್ಗೆ 8:55 ರಿಂದ ಮಧ್ಯಾಹ್ನ 12

ವೃಷಭ ರಾಶಿ
ಸಣ್ಣ ವಿಚಾರದಲ್ಲಿ ಸಂಗಾತಿಯೊಂದಿಗೆ ಮನನ್ತಾಪ ಉಂಟಾಗಬಹುದು. ಈ ದಿನ ಮಾನಸಿಕವಾಗಿ ಅಷ್ಟು ಸರಿಯಿರಲ್ಲ, ನೀವು ಎಲ್ಲಾ ಚಿಂತೆಗಳನ್ನು ಮರೆತು ನಿಮ್ಮ ಕೆಲಸದತ್ತ ಗಮನ ಹರಿಸುವುದು ಉತ್ತಮ. ಶೀಘ್ರದಲ್ಲೇ ನಿಮ್ಮ ನಡುವೆ ಎಲ್ಲವೂ ಸಾಮಾನ್ಯವಾಗಿರುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನೀವು ಸರ್ಕಾರಿ ಕೆಲಸ ಮಾಡುತ್ತಿದ್ದರೆ, ಈ ದಿನ ಬಹಳ ಮುಖ್ಯವಾಗಿರುತ್ತದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 29
ಅದೃಷ್ಟದ ಸಮಯ: ಸಂಜೆ 6 ರಿಂದ ರಾತ್ರಿ 8 ರವರೆಗೆ
ಮಿಥುನ ರಾಶಿ
ಆರ್ಥಿಕ ದೃಷ್ಟಿಯಿಂದ ಇಂದು ನಿಮಗೆ ತುಂಬಾ ಒಳ್ಳೆಯ ದಿನವಾಗಿದೆ. ಬರಬೇಕಾಗಿರುವ ಹಣ ಕೈಸೇರಲಿದೆ, ಈ ದಿನ ಕೆಲಸದಲ್ಲಿ ತುಂಬಾ ಬ್ಯುಸಿಯಾಗಿರುತ್ತೀರಿ, ಮೇಲಾಧಿಕಾರಿಗಳ ಸಹಾಯದಿಂದ ಇಂದು ನೀವು ನಿಮ್ಮ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: ಮಧ್ಯಾಹ್ನ 2:50 ರಿಂದ 4 ಗಂಟೆಗೆ
ಕರ್ಕ ರಾಶಿ
ಆರೋಗ್ಯಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿದ್ದರೆ, ನೀವು ತಕ್ಷಣ ಉತ್ತಮ ವೈದ್ಯರನ್ನು ಸಂಪರ್ಕಿಸಬೇಕು. ನಿರ್ಲಕ್ಷ್ಯವು ದುಬಾರಿಯಾಗಲಿದೆ. ಇಂದು ಸಂಗಾತಿಯ ನಡವಳಿಕೆಯಿಂದ ಸ್ವಲ್ಪ ಕಿರಿಕಿರಿಯಾಗುವುದು.ಅನಗ್ಯತ ಚರ್ಚೆಗಳ ಮೂಲಕ ಇಬ್ಬರು ಮನಸ್ಸು ಹಾಳು ಮಾಡಿಕೊಳ್ಳಬೇಡಿ, ಕಚೇರಿಯಲ್ಲಿ, ನಿಮ್ಮ ಸಹೋದ್ಯೋಗಿಗಳನ್ನು ಹೆಚ್ಚು ನಂಬದಿರುವುದು ಒಳ್ಳೆಯದು.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 8
ಅದೃಷ್ಟದ ಸಮಯ: ಸಂಜೆ 5:20 ರಿಂದ ರಾತ್ರಿ 8:20 ರವರೆಗೆ
ಸಿಂಹ ರಾಶಿ
ಈ ದಿನ ನಿಮಗೆ ಉತ್ತಮವಾಗಿರುತ್ತದೆ, ನೀವು ಚಿಕ್ಕ ನಿರ್ಧಾರವನ್ನು ಬಹಳ ಬುದ್ಧಿವಂತಿಕೆಯಿಂದ ತೆಗೆದುಕೊಳ್ಳುತ್ತೀರಿ. ನೀವು ವಿದ್ಯಾರ್ಥಿಯಾಗಿದ್ದರೆ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ ಯಾವುದೇ ಪ್ರಯತ್ನವನ್ನು ಮಾಡುತ್ತಿದ್ದರೆ, ನೀವು ಯಶಸ್ಸನ್ನು ಪಡೆಯುವ ಸಾಧ್ಯತೆಯಿದೆ. ಆರ್ಥಿಕ ಸ್ಥಿತಿಯು ಚೆನ್ನಾಗಿರಲಿದೆ. ಮನೆಯ ಸದಸ್ಯರೊಂದಿಗಿನ ಸಂಬಂಧದಲ್ಲಿ ಉತ್ತಮ ಹೊಂದಾಣಿಕೆ ಇರುತ್ತದೆ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 17
ಅದೃಷ್ಟದ ಸಮಯ: ಬೆಳಿಗ್ಗೆ 5:15 ರಿಂದ 7:50 ರವರೆಗೆ
ಕನ್ಯಾ ರಾಶಿ
ಕಚೇರಿಯಲ್ಲಿ ಚಿಕ್ಕ ತಪ್ಪು ದೊಡ್ಡ ನಷ್ಟವನ್ನು ಉಂಟು ಮಾಡಬಹುದು, ಜಾಗ್ರತೆವಹಿಸಿ, ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರು ಉತ್ತಮ ಲಾಭವನ್ನು ಪಡೆಯುತ್ತಾರೆ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರುತ್ತದೆ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 10
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ
ತುಲಾ ರಾಶಿ
ವ್ಯಾಪಾರಸ್ಥರಿಗೆ ಇಂದು ಅತ್ಯಂತ ಮಂಗಳಕರ ದಿನವಾಗಿರುತ್ತದೆ. ನೀವು ವ್ಯಾಪಾರ ಮಾಡುವ ಯಾವುದೇ ಕ್ಷೇತ್ರದಲ್ಲಿನಿರೀಕ್ಷಿತ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆಯಿದೆ. ಮನೆಯ ವಾತಾವರಣದಲ್ಲಿ ಸುಧಾರಣೆ ಕಂಡುಬರುವುದು. ನಿಮ್ಮ ನಡವಳಿಕೆಯನ್ನು ಸರಿಯಾಗಿ ಇಟ್ಟುಕೊಳ್ಳುವುದು ಉತ್ತಮ. ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೊಂದಿರಬಹುದು.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 21
ಅದೃಷ್ಟದ ಸಮಯ: ಮಧ್ಯಾಹ್ನ 3:20 ರಿಂದ ಸಂಜೆ 6:20 ರವರೆಗೆ
ವೃಶ್ಚಿಕ ರಾಶಿ
ಪ್ರೀತಿಯ ವಿಷಯದಲ್ಲಿ ಈ ದಿನವು ವಿಶೇಷವಾಗಿರುತ್ತದೆ. ಇಷ್ಟಪಡುವವರ ಬಳಿ ನಿಮ್ಮ ಮನಸ್ಸು ಬಿಚ್ಚಿಟ್ಟರೆ ನೀವು ಸಕಾರಾತ್ಮಕ ಉತ್ತರವನ್ನು ಪಡೆಯಬಹುದು. ಹಣಕಾಸಿನ ಸ್ಥಿತಿ ಹದಗೆಡುವ ಸಾಧ್ಯತೆ ಇದೆ. ಆದಾಯಕ್ಕಿಂತ ಹೆಚ್ಚು ಖರ್ಚು ಮಾಡಬೇಡಿ. ಕಚೇರಿಯ ವಾತಾವರಣ ಅಷ್ಟು ಸರಿಯಿರಲ್ಲ. ಅಂತಹ ಪರಿಸ್ಥಿತಿಯಲ್ಲಿ, ನೀವು ಚಿಕ್ಕ ಕೆಲಸವನ್ನು ಕೂಡ ಬಹಳ ಎಚ್ಚರಿಕೆಯಿಂದ ಮಾಡಬೇಕು.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 6
ಅದೃಷ್ಟದ ಸಮಯ: ಬೆಳಿಗ್ಗೆ 4 ರಿಂದ ರಾತ್ರಿ 9 ರವರೆಗೆ
ಧನು ರಾಶಿ
ಇಂದು ನಿಮ್ಮ ಮನಸ್ಸು ಚಂಚಲತೆಯಿಂದ ಕೂಡಿರಲಿದೆ, ನಿಮ್ಮ ಮನಸ್ಸನ್ನು ಆಪ್ತರೊಂದಿಗೆ ಹಂಚಿಕೊಂಡರೆ ಉತ್ತಮ. ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡಿದರೆ, ಪಾಲುದಾರರೊಂದಿಗಿನ ಸಮನ್ವಯವು ಹದಗೆಡಬಹುದು. ವ್ಯಾಪಾರದಲ್ಲಿ ನಷ್ಟದ ಸಾಧ್ಯತೆಯೂ ಇದೆ. ಮತ್ತೊಂದೆಡೆ, ಉದ್ಯೋಗಿಗಳು ಒಂದೇ ಸಮಯದಲ್ಲಿ ಅನೇಕ ಕಾರ್ಯಗಳನ್ನು ನಿಭಾಯಿಸಬೇಕಾಗಬಹುದು. ಆರ್ಥಿಕ ಸ್ಥಿತಿ ಸಹಜವಾಗಿರಲಿದೆ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 15
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ಸಂಜೆ 7 ರವರೆಗೆ
ಮಕರ ರಾಶಿ
ಮಕ್ಕಳು ಶಿಕ್ಷಣ ಕ್ಷೇತ್ರದಲ್ಲಿ ಕೆಲವು ಉತ್ತಮ ಯಶಸ್ಸನ್ನು ಪಡೆಯಬಹುದು. ನೀವು ಕೆಲವು ದಿನಗಳಿಂದ ಹಣದ ಬಗ್ಗೆ ಚಿಂತೆ ಮಾಡುತ್ತಿದ್ದರೆ, ಇಂದು ನಿಮ್ಮ ಸಮಸ್ಯೆಯನ್ನು ಪರಿಹರಿಸಬಹುದು. ಇದ್ದಕ್ಕಿದ್ದಂತೆ ನೀವು ಹಣವನ್ನು ಪಡೆಯುವ ಸಾಧ್ಯತೆಯಿದೆ. ಕೆಲಸದ ವಿಷಯದಲ್ಲಿ ಇಂದು ನಿಮಗೆ ಉತ್ತಮವಾಗಿರಲಿದೆ, ಕೆಲಸದ ಹೊರೆ ಕಡಿಮೆಯಾಗುವ ಸಾಧ್ಯತೆ ಇದೆ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಬೆಳಿಗ್ಗೆ 6:25 ರಿಂದ 9:25 ರವರೆಗೆ
ಕುಂಭ ರಾಶಿ
ಆರೋಗ್ಯದ ಬಗ್ಗೆ ಜಾಗ್ರತೆವಹಿಸಿ, ಹಣದ ವಿಷಯದಲ್ಲಿ, ದಿನವು ಏರಿಳಿತಗಳಿಂದ ಕೂಡಿರಲಿದೆ, ದೈನಂದಿನ ಖರ್ಚುಗಳನ್ನು ಪೂರೈಸುವಲ್ಲಿ ನೀವು ಬಹಳಷ್ಟು ತೊಂದರೆಗಳನ್ನು ಎದುರಿಸಬಹುದು. ನಿಮ್ಮ ಹಣಕಾಸಿನ ನಿರ್ಧಾರಗಳನ್ನು ನೀವು ಎಚ್ಚರಿಕೆಯಿಂದ ತೆಗೆದುಕೊಳ್ಳುವುದು ಉತ್ತಮ. ಕೆಲಸದ ವಿಷಯದಲ್ಲಿ ಇಂದು ಸರಾಸರಿ ದಿನವಾಗಿರುತ್ತದೆ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 24
ಅದೃಷ್ಟದ ಸಮಯ: ಬೆಳಿಗ್ಗೆ 8 ರಿಂದ 11 ರವರೆಗೆ
ಮೀನ ರಾಶಿ
ಕೆಲಸಕ್ಕೆ ಸಂಬಂಧಿಸಿದ ದೀರ್ಘ ಪ್ರಯಾಣ ಮಾಡಬಹುದು, ನಿಮ್ಮ ಈ ಪ್ರಯಾಣವು ಪ್ರಯೋಜನಕಾರಿಯಾಗಲಿದೆ. ಕೆಲಸದಲ್ಲಿ ಬಡ್ತಿಗಾಗಿ ನೀವು ಕಾಯುತ್ತಿದ್ದರೆ ಒಳ್ಳೆಯ ಸುದ್ದಿ ಪಡೆಯಬಹುದು. ಪೋಷಕರ ಆಶೀರ್ವಾದ ಸಿಗಲಿದೆ. ನೀವು ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಲು ಬಯಸಿದರೆ, ನೀವು ಅವರ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: ಸಂಜೆ 5 ರಿಂದ 9:15 ರವರೆಗೆ



Click it and Unblock the Notifications