Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಆಗಸ್ಟ್ 25ರ ದಿನ ಭವಿಷ್ಯ: ವರಮಹಾಲಕ್ಷ್ಮಿ ದಿನ ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
ವೈದಿಕ ಶಾಸ್ತ್ರದ ಪ್ರಕಾರ ಆಗಸ್ಟ್ 25ರ ರಾಶಿಫಲ ನೀಡಿದ್ದು ಈ ದಿನ 12 ರಾಶಿಗಳಿಗೆ ಹೇಗಿರಲಿದೆ ಎಂದು ನೋಡೋಣ:
ಮೇಷ ರಾಶಿ
ಆರ್ಥಿಕ ದೃಷ್ಟಿಯಿಂದ ಈ ದಿನ ಸವಾಲಿನ ದಿನವಾಗಿದೆ.ಈ ದಿನ ಸಾಲ ಕೂಡ ಮಾಡಬೇಕಾಗಿ ಬರುವುದು. ಇದೆಲ್ಲವೂ ನಿಮ್ಮ ತಪ್ಪು ನಿರ್ಧಾರಗಳ ಪರಿಣಾಮ. ಕುಟುಂಬ ಜೀವನದಲ್ಲಿ ಪರಿಸ್ಥಿತಿಯು ಉದ್ವಿಗ್ನವಾಗಿರುತ್ತದೆ. ಚಿಕ್ಕ-ಪುಟ್ಟ ವಿಷಯಕ್ಕೆ ಕೋಪಗೊಳ್ಳಬೇಡಿ, ಕೆಲಸದ ಕಡೆ ಗಮನಕೊಟ್ಟು ಕೆಲಸ ಮಾಡುವಂತೆ ಸಲಹೆ ನೀಡಲಾಗಿದೆ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಮಧ್ಯಾಹ್ನ 1:30 ರಿಂದ ಸಂಜೆ 5 ರವರೆಗೆ

ವೃಷಭ ರಾಶಿ
ಸಂಗಾತಿಯ ಆರೋಗ್ಯದಲ್ಲಿ ದೊಡ್ಡ ಸುಧಾರಣೆ ಕಂಡುಬರುವುದು, ಈ ದಿನ ನಿಮ್ಮ ಚಿಂತೆಗಳು ದೂರಾಗುವುದು. ಇಂದು ನೀವು ನಿಮ್ಮ ಪ್ರೀತಿಪಾತ್ರರ ಜೊತೆ ಹೆಚ್ಚು ಸಮಯ ಕಳೆಯುತ್ತೀರಿ. ಕೆಲಸದ ವಿಷಯದಲ್ಲಿ ಈ ದಿನವು ಮಿಶ್ರಫಲ. ನಿಮ್ಮ ಕೆಲವು ಪ್ರಮುಖ ಕೆಲಸಗಳಲ್ಲಿ ಅಡೆತಡೆಗಳು ಉಂಟಾಗಬಹುದು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ. ಆರೋಗ್ಯದ ಕಡೆ ಗಮನಹರಿಸಿ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 31
ಅದೃಷ್ಟದ ಸಮಯ: ಸಂಜೆ 6 ರಿಂದ ರಾತ್ರಿ 8:30 ರವರೆಗೆ
ಮಿಥುನ ರಾಶಿ
ಸಂಗಾತಿ ಜೊತೆಗೆ ರೊಮ್ಯಾಂಟಿಕ್ ಆಗಿರಲಿದೆ, ಈ ದಿನ ಸಂಗಾತಿಯ ಜೊತೆ ಖುಷಿ-ಖುಷಿಯಾಗಿ ಸಮಯ ಕಳೆಯುವಿರಿ. ಇತರರ ಮಾತು ಕೇಳಿ ತಪ್ಪು ಕೆಲಸ ಮಾಡಬೇಡಿ. ಹಣದ ವಿಷಯದಲ್ಲಿ ಇಂದು ಸರಾಸರಿ ದಿನವಾಗಲಿದೆ. ನಿಮ್ಮ ಆರ್ಥಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಖರ್ಚು ಮಾಡಿ. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 8
ಅದೃಷ್ಟದ ಸಮಯ: ಬೆಳಿಗ್ಗೆ 8:50 ರಿಂದ 10:50 ರವರೆಗೆ
ಕರ್ಕ ರಾಶಿ
ಹೆಚ್ಚಿನ ಲಾಭ ಗಳಿಸಲು ಶಾರ್ಟ್‌ಕಟ್‌ಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಲು ವ್ಯಾಪಾರಿಗಳಿಗೆ ಸಲಹೆ ನೀಡಲಾಗಿದೆ. ನೀವು ಕೆಲಸ ಮಾಡುತ್ತಿದ್ದರೆ ಮತ್ತು ನಿಮ್ಮ ಕೆಲಸ ತಾತ್ಕಾಲಿಕವಾಗಿದ್ದರೆ, ಈ ದಿನ ಉತ್ತಮ ಸುದ್ದಿ ಪಡೆಯಬಹುದು. ಹಣದ ವಿಷಯದಲ್ಲಿ ದಿನವು ಉತ್ತಮವಾಗಿರುತ್ತದೆ. ಇಂದು ನೀವು ಹೆಚ್ಚು ಉಳಿಸಲು ಸಾಧ್ಯವಾಗುತ್ತದೆ. ಈ ದಿನ ನಿಮ್ಮ ಕೋಪ ನಿಯಂತ್ರಿಸುವುದು ಒಳ್ಳೆಯದು.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 14
ಅದೃಷ್ಟದ ಸಮಯ: ಬೆಳಿಗ್ಗೆ 4:15 ರಿಂದ 9:20 ರವರೆಗೆ
ಸಿಂಹ ರಾಶಿ
ಹಣದ ವಿಷಯದಲ್ಲಿ ಈ ದಿನ ನಿಮಗೆ ಉತ್ತಮವಾಗಿದೆ. ನಿಮ್ಮ ಹಣಕಾಸಿನ ಪ್ರಯತ್ನಗಳು ಯಶಸ್ವಿಯಾಗುವ ಬಲವಾದ ಸಾಧ್ಯತೆಯಿದೆ. ವ್ಯಾಪಾರಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ಇಂದು ಲಾಭ ಗಳಿಸಲು ಉತ್ತಮ ಅವಕಾಶವನ್ನು ಪಡೆಯಬಹುದು. ಮತ್ತೊಂದೆಡೆ, ಉದ್ಯೋಗಿಗಳ ಎಲ್ಲಾ ಕೆಲಸಗಳು ಸುಗಮವಾಗಿ ಪೂರ್ಣಗೊಳ್ಳುತ್ತವೆ. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ಸಾಧ್ಯವಾದರೆ, ಇಂದು ನಿಮ್ಮ ಮಕ್ಕಳೊಂದಿಗೆ ಹೆಚ್ಚು ಸಮಯ ಕಳೆಯಲು ಪ್ರಯತ್ನಿಸಿ.
ಅದೃಷ್ಟದ ಬಣ್ಣ: ಬೂದು
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಮಧ್ಯಾಹ್ನ 3 ರಿಂದ ಸಂಜೆ 5 ರವರೆಗೆ
ಕನ್ಯಾ ರಾಶಿ
ಆರೋಗ್ಯದಲ್ಲಿ ಏರುಪೇರು ಕಂಡುಬರುವುದು, ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ. ಅಪಾಯಕಾರಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ಉದ್ಯಮಿಗಳಿಗೆ ಸಲಹೆ ನೀಡಲಾಗುವುದು. ಹಣದ ವಿಷಯದಲ್ಲಿ, ದಿನವು ಮಿಶ್ರಫಲ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 16
ಅದೃಷ್ಟದ ಸಮಯ: ಬೆಳಿಗ್ಗೆ 7 ರಿಂದ 10:30 ರವರೆಗೆ
ತುಲಾ ರಾಶಿ
ನೀವು ಅವಿಭಕ್ತ ಕುಟುಂಬದಲ್ಲಿ ವಾಸಿಸುತ್ತಿದ್ದರೆ, ಮನೆಯ ಸದಸ್ಯರೊಂದಿಗಿನ ಸಂಬಂಧದಲ್ಲಿ ಉತ್ತಮ ಹೊಂದಾಣಿಕೆ ಕಂಡು ಬರಲಿದೆ. ಪೋಷಕರ ಆಶೀರ್ವಾದದಿಂದ, ನಿಮ್ಮ ಯಾವುದೇ ಸ್ಥಗಿತಗೊಂಡ ಕೆಲಸವನ್ನು ಇಂದು ಪೂರ್ಣಗೊಳಿಸಬಹುದು. ಇಂದು ಆನ್‌ಲೈನ್ ವ್ಯಾಪಾರ ಮಾಡುವ ಜನರಿಗೆ ಉತ್ತಮ ಆರ್ಥಿಕ ಲಾಭಗಳ ಬಲವಾದ ಸಾಧ್ಯತೆಯಿದೆ. ನಿಮ್ಮ ವ್ಯಾಪಾರ ಹೆಚ್ಚಾಗುತ್ತದೆ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಮಧ್ಯಾಹ್ನ 3 ರಿಂದ ಸಂಜೆ 7 ರವರೆಗೆ
ವೃಶ್ಚಿಕ ರಾಶಿ
ನೀವು ದೀರ್ಘಕಾಲದಿಂದ ಯಾವುದೇ ಹಳೆಯ ಸಾಲದ ಬಗ್ಗೆ ಚಿಂತೆ ಮಾಡುತ್ತಿದ್ದರೆ, ಇಂದು ನೀವು ಈ ಚಿಂತೆಯಿಂದ ಮುಕ್ತರಾಗಬಹುದು. ಸಾಲವನ್ನು ಮರುಪಾವತಿ ಮಾಡುವಲ್ಲಿ ನೀವು ಯಶಸ್ವಿಯಾಗುತ್ತೀರಿ. ಮನೆಯಲ್ಲಿ ಖುಷಿಯ ವಾತಾವರಣ ಇರಲಿದೆ. ನೀವು ಪ್ರಮುಖ ನಿರ್ಧಾರವನ್ನು ತೆಗೆದುಕೊಂಡರೆ, ನಿಮ್ಮ ಪ್ರೀತಿಪಾತ್ರರ ಸಂಪೂರ್ಣ ಬೆಂಬಲವನ್ನು ನೀವು ಪಡೆಯುತ್ತೀರಿ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 26
ಅದೃಷ್ಟದ ಸಮಯ: ಬೆಳಿಗ್ಗೆ 5:20 ರಿಂದ 9:00 ರವರೆಗೆ
ಧನು ರಾಶಿ
ವ್ಯಾಪಾರಸ್ಥರು ಇಂದು ದೊಡ್ಡ ನಿರ್ಧಾರವನ್ನು ತೆಗೆದುಕೊಂಡರೆ, ಆತುರದಿಂದ ದೂರವಿರಲು ನಿಮಗೆ ಸಲಹೆ ನೀಡಲಾಗಇದೆ, ಇಲ್ಲದಿದ್ದರೆ ದೊಡ್ಡ ನಷ್ಟಗಳು ಉಂಟಾಗಬಹುದು. ತಂದೆಯೊಂದಿಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿರಬಹುದು. ನಿಮ್ಮ ನಿಲುವನ್ನು ಬಹಳ ಬುದ್ಧಿವಂತಿಕೆಯಿಂದ ಪ್ರಸ್ತುತಪಡಿಸಲು ಸಲಹೆ ನೀಡಲಾಗಿದೆ. ಕೆಲಸದಲ್ಲಿ ಅಧಿಕ ಒತ್ತಡವಿರುವುದಿಲ್ಲ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಸಂಜೆ 4 ರಿಂದ ರಾತ್ರಿ 8 ರವರೆಗೆ
ಮಕರ ರಾಶಿ
ಮನೆಗೆ ಕೆಲವು ವಸ್ತುಗಳನ್ನು ಖರೀದಿಸುವುದರ ಬಗ್ಗೆ ಚಿಂತಿಸಬಹುದು. ಸಂಗಾತಿಯು ಉತ್ತಮ ಮನಸ್ಥಿತಿಯಲ್ಲಿರುತ್ತಾರೆ. ನಿಮ್ಮ ನೆಚ್ಚಿನ ಉಡುಗೊರೆಯನ್ನು ನೀವು ಅವರಿಂದ ಪಡೆಯಬಹುದು. ಆರ್ಥಿಕ ಸ್ಥಿತಿ ಚೆನ್ನಾಗಿರುತ್ತದೆ. ಕಚೇರಿಯಲ್ಲಿ ಉನ್ನತ ಅಧಿಕಾರಿಗಳೊಂದಿಗೆ ನೀವು ವಾಗ್ವಾದವನ್ನು ಹೊಂದಿರಬಹುದು. ಕೆಲಸದ ಸ್ಥಳದಲ್ಲಿ ಇಂತಹ ವಿಷಯಗಳನ್ನು ತಪ್ಪಿಸಿ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ ಸಂಜೆ 5 ರವರೆಗೆ
ಕುಂಭ ರಾಶಿ
ಈ ದಿನ ನಿಮ್ಮ ದಿನವು ಅನಗತ್ಯ ವಿಷಯಗಳಲ್ಲಿ ವ್ಯರ್ಥವಾಗಬಹುದು, ಹಾಗಾದಂತೆ ಎಚ್ಚರವಹಿಸಿ. ಇಂದು ಕಚೇರಿಯಲ್ಲಿ ನಿಮ್ಮ ಮೇಲೆ ಕೆಲಸದ ಹೊರೆ ಹೆಚ್ಚಾಗಿರುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ಎಲ್ಲಾ ಕೆಲಸವನ್ನು ಯೋಜನೆಯ ಪ್ರಕಾರ ಪೂರ್ಣಗೊಳಿಸಲು ನಿಮಗೆ ಸಲಹೆ ನೀಡಲಾಗಿದೆ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರಲಿದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದಸ ಸಂಖ್ಯೆ: 10
ಅದೃಷ್ಟದ ಸಮಯ: ಬೆಳಿಗ್ಗೆ 6 ರಿಂದ 10 ರವರೆಗೆ
ಮೀನ ರಾಶಿ
ನೀವು ಆರ್ಥಿಕ ಬಿಕ್ಕಟ್ಟಿನಿಂದ ಹೊರಬರಲು ಬಯಸಿದರೆ, ನಿಮ್ಮ ಖರ್ಚುಗಳನ್ನು ನಿಯಂತ್ರಿಸಲು ನಿಮಗೆ ಸಲಹೆ ನೀಡಲಾಗಿದೆ. ಇದಲ್ಲದೆ, ನಿಮ್ಮ ಆದಾಯವನ್ನು ಹೆಚ್ಚಿಸುವ ನಿಮ್ಮ ಪ್ರಯತ್ನಗಳನ್ನು ನೀವು ವೇಗಗೊಳಿಸಬೇಕು. ಉದ್ಯಮಿಗಳು ಯಾವುದೇ ಕಾಗದಕ್ಕೆ ತರಾತುರಿಯಲ್ಲಿ ಸಹಿ ಮಾಡುವುದನ್ನು ತಪ್ಪಿಸಬೇಕು. ಉದ್ಯೋಗಿಗಳ ದಿನವು ಸಾಮಾನ್ಯವಾಗಿರುತ್ತದೆ. ಕೌಟುಂಬಿಕ ಜೀವನದಲ್ಲಿ ಸ್ವಲ್ಪ ಏರುಪೇರು ಉಂಟಾಗುವುದು.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 32
ಅದೃಷ್ಟದ ಸಮಯ: ಮಧ್ಯಾಹ್ನ 3:30 ರಿಂದ ಸಂಜೆ 7 ರವರೆಗೆ



Click it and Unblock the Notifications










