Latest Updates
-
ಬೇಸಿಗೆಯಲ್ಲಿ ಈ ಗಂಜಿ ಕುಡಿಯಿರಿ.. ಕೊಬ್ಬು ಕಡಿಮೆ, ದೇಹಕ್ಕೂ ತಂಪು! ಈ ಗಂಜಿಯ ಆರೋಗ್ಯ ರಹಸ್ಯ ಇಲ್ಲಿದೆ -
30 ವರ್ಷಗಳ ಬಳಿಕ ಸೂರ್ಯ-ಶನಿ ಸಂಯೋಗ! ಯಾರಿಗೆ ಶುಭ? ಯಾರಿಗೆ ಸಮಸ್ಯೆ? 12 ರಾಶಿಗಳ ಜಾತಕ ತಿಳಿಯಿರಿ -
ಈ 5 ವಿಷಯಗಳಲ್ಲಿ ಮಿತಿ ಮೀರಿದ್ರೆ ಜೀವನ ಸರ್ವನಾಶ! ಅಹಂಕಾರ ಬಿಡಿ.. ಇಂದೇ ಇವುಗಳಿಂದ ದೂರವಿರಿ -
ಪಕ್ಕಾ ಹೈದರಾಬಾದಿ ರುಚಿ.. ಅತಿಥಿಗಳು ಬಂದ್ರೆ ಈ ಚಿಕನ್ ಯಖನಿ ಪುಲಾವ್ ಮಾಡಿ! ಸಿಂಪಲ್ & ಸೂಪರ್ ರುಚಿ -
2026ರ ಸೂರ್ಯ ಗೋಚಾರ: ಇವರಿಗೆ ಸಿಗಲಿದೆ ಸರ್ಕಾರಿ ಉದ್ಯೋಗ! ಯಾರಿಗೆ ಮಾನಸಿಕ ಒತ್ತಡ? 12 ರಾಶಿಯವರಿಗೆ ರಾಶಿಫಲ ಇಲ್ಲಿದೆ -
ಹೋಟೆಲ್ ಶೈಲಿಯ ಆಲೂ ಮಸಾಲಾ ಪೂರಿ! ಈ ರೀತಿ ಮನೆಯಲ್ಲೇ ಮಾಡಿ, ಪರ್ಫೆಕ್ಟ್ ಆಗಿ ಉಬ್ಬಿ ಬರುತ್ತೆ -
ಇವರ ಜೀವನದಲ್ಲಿ ಹೊಸ ಕಿಡಿ ಹೊತ್ತಿಕೊಳ್ಳಲಿದೆ! ಹಠಮಾರಿ ಸ್ವಭಾವವನ್ನು ಬಿಡಿ -
March 12 Horoscope: ಹಣಕಾಸಿನ ಸವಾಲುಗಳು ದೊಡ್ಡದಾಗುವ ಸಂಭವ -
ಕೋಮಾದಲ್ಲಿದ್ದ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂ ಒಪ್ಪಿಗೆ: ಈ ಕೇಸ್ ಬಗ್ಗೆ ನಿಮಗೆ ಗೊತ್ತಾ? -
ಪಂಜಾಬಿ ಸ್ಟೈಲ್ ಮಲೈ ಲಸ್ಸಿ! ಈ ರೀತಿ ಮಾಡಿ ಗಟ್ಟಿ ಕೆನೆಯ ಢಾಬಾ ಸ್ಟೈಲ್ ಲಸ್ಸಿ.. ಬಿಸಿಲ ತಾಪಕ್ಕೆ ಬೆಸ್ಟ್ ಕೂಲ್ ಡ್ರಿಂಕ್
ಆಗಸ್ಟ್ 28ರ ದಿನ ಭವಿಷ್ಯ ಈ ದಿನ 12 ರಾಶಿಗಳಿಗೆ ಹೇಗಿರಲಿದೆ?
ವೈದಿಕ ಶಾಸ್ತ್ರದ ಪ್ರಕಾರ ಆಗಸ್ಟ್ 28ರ ರಾಶಿಫಲ ನೀಡಿದ್ದು ಈ ದಿನ 12 ರಾಶಿಗಳಿಗೆ ಹೇಗಿರಲಿದೆ ಎಂದು ನೋಡೋಣ:
ಮೇಷ ರಾಶಿ
ಈ ದಿನ ಅದೃಷ್ಟದ ದಿನವಾಗಿದೆ, ನಿಮ್ಮ ಸ್ಥಗಿತಗೊಂಡ ಕಾರ್ಯಗಳು ಪೂರ್ಣಗೊಳ್ಳುತ್ತವೆ. ನೀವು ವ್ಯಾಪಾರ ವಿಸ್ತರಣೆಗೆ ಯೋಜಿಸುತ್ತಿದ್ದರೆ ಇಂದು ನಿಮಗೆ ಬಹಳ ಮುಖ್ಯವಾಗಿರುತ್ತದೆ. ಉದ್ಯೋಗಸ್ಥರು ತಮ್ಮ ಶ್ರಮಕ್ಕೆ ತಕ್ಕ ಫಲಿತಾಂಶವನ್ನು ಪಡೆಯುತ್ತಾರೆ. ನಿಮ್ಮ ಆರ್ಥಿಕ ಸ್ಥಿತಿಯು ಬಲವಾಗಿರುತ್ತದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.

ವೃಷಭ ರಾಶಿ
ಈ ರಾಶಿಯ ವ್ಯಾಪಾರಿಗಳಿಗೆ ಇಂದು ಉತ್ತಮ ದಿನವಾಗಲಿದೆ. ನೀವು ಶೀಘ್ರದಲ್ಲೇ ಉತ್ತಮ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆಯಿದೆ. ಉದ್ಯೋಗಸ್ಥರಿಗೆ ಪ್ರಗತಿಯ ಬಾಗಿಲು ತೆರೆಯಲಿದೆ. ನೀವು ಉತ್ತಮ ಅವಕಾಶವನ್ನು ಪಡೆಯಬಹುದು. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಸಂಗಾತಿಯ ಜೊತೆ ಚಿಕ್ಕ-ಪುಟ್ಟ ವೈಮನಸ್ಸು ಬಂದರೆ ಸಮಧಾನದಿಂದ ಪರಿಹರಿಸಲು ಬಗೆಹರಿಸಲು ಪ್ರಯತ್ನಿಸಿ.
ಮಿಥುನ ರಾಶಿ
ನೀವು ಯಾವುದೇ ಆರೋಗ್ಯ ಸಂಬಂಧಿತ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಇಂದು ಅದು ಕೊನೆಯಾಗಲಿದೆ, ಇಂದು ನೀವು ನಿಮ್ಮ ಸ್ಥಗಿತಗೊಂಡ ಕೆಲವು ಕಾರ್ಯಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸುತ್ತೀರಿ. ಆರ್ಥಿಕ ಪರಿಸ್ಥಿತಿಯಲ್ಲಿ ಬಲವಿರುತ್ತದೆ. ಹಠಾತ್ ಹಣ ಸಿಗಲಿದೆ. ಕೆಲಸದ ದೃಷ್ಟಿಯಿಂದ ಇಂದು ನಿಮಗೆ ಮಿಶ್ರ ದಿನವಾಗಲಿದೆ. ಮನೆಯ ವಾತಾವರಣ ಚೆನ್ನಾಗಿರಲಿದೆ.
ಕರ್ಕ ರಾಶಿ
ಸಹೋದರ ಅಥವಾ ಸಹೋದರಿಯ ಮದುವೆಯಲ್ಲಿ ಯಾವುದೇ ಸಮಸ್ಯೆ ಇದ್ದರೆ, ಈ ಸಮಸ್ಯೆ ಬಗೆಹರಿಯಲಿದೆ. ಮನೆಯ ಹಿರಿಯರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಹಣದ ವಿಷಯದಲ್ಲಿ, ನೀವು ಜಾಗರೂಕರಾಗಿರಲು ಸಲಹೆ ನೀಡಲಾಗಿದೆ, ಇಲ್ಲದಿದ್ದರೆ ನೀವು ನಷ್ಟವನ್ನು ಅನುಭವಿಸಬಹುದು. ಇತರರ ಸಲಹೆಯ ಮೇರೆಗೆ ನಿಮ್ಮ ಹಣಕಾಸಿನ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ಕಚೇರಿಯಲ್ಲಿ, ನಿಮ್ಮ ಕೆಲಸದ ಮೇಲೆ ಸಂಪೂರ್ಣವಾಗಿ ಕೇಂದ್ರೀಕರಿಸಲು ಸಲಹೆ ನೀಡಲಾಗಿದೆ.
ಸಿಂಹ ರಾಶಿ
ಕೆಲಸದ ವಿಷಯದಲ್ಲಿ ಅತಿಯಾಗಿ ಒತ್ತಡ ತೆಗೆದುಕೊಳ್ಳುವುದರಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಬಹುದು. ನಿಮ್ಮ ಪೂರ್ವಜರ ವ್ಯವಹಾರದೊಂದಿಗೆ ನೀವು ಸಂಬಂಧ ಹೊಂದಿದ್ದರೆ, ಯಾವುದೇ ಪ್ರಮುಖ ನಿರ್ಧಾರವನ್ನು ತರಾತುರಿಯಲ್ಲಿ ತೆಗೆದುಕೊಳ್ಳಬೇಡಿ. ಹಿರಿಯರ ಮಾರ್ಗದರ್ಶನ ತೆಗೆದುಕೊಳ್ಳಿ, ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ.
ಕನ್ಯಾರಾಶಿ
ಇಂದು ನಿಮಗೆ ಮಿಶ್ರಫಲ. ನಿಮ್ಮ ಕೆಲಸದ ಕ್ಷೇತ್ರದಲ್ಲಿ ಯಾವುದೇ ಬದಲಾವಣೆಯನ್ನು ಮಾಡುವ ಆಲೋಚನೆ ಮಾಡಿದರೆ ಈ ಸಮಯ ಉತ್ತಮವಾಗಿದೆ. ನಿಮ್ಮ ಆರೋಗ್ಯದ ಬಗ್ಗೆ ನೀವು ಗಮನ ಹರಿಸಬೇಕು. ಆರೋಗ್ಯದ ಕಡೆ ಗಮನಹರಿಸಿ. ಇಂದು ನೀವು ನಿಮ್ಮ ಮನಸ್ಸಿನಲ್ಲಿರುವ ಯಾವುದೇ ವಿಷಯದ ಬಗ್ಗೆ ನಿಮ್ಮ ಪೋಷಕರೊಂದಿಗೆ ಮಾತನಾಡಬಹು.
ತುಲಾ ರಾಶಿ
ಆಸ್ತಿ ಸಂಬಂಧಿಸಿದ ವ್ಯವಹಾರ ಮಾಡುವವರಿಗೆ ಈ ದಿನ ಉತ್ತಮವಾಗಿದೆ. ಕೆಲಸಕ್ಕೆ ಸಂಬಂಧಿಸಿದ ಪ್ರಮುಖ ಮಾಹಿತಿಯನ್ನು ಇತರರ ಜೊತೆಗೆ ಹಂಚಿಕೊಳ್ಳಬೇಡಿ. ತಂದೆ ಯಾವುದೇ ದೈಹಿಕ ನೋವಿನಿಂದ ಬಳಲುತ್ತಿದ್ದರೆ, ಇಂದು ಅವರ ನೋವು ಕಡಿಮೆಯಾಗಬಹುದು. ಚಾಲನೆ ಮಾಡುವಾಗ ನೀವು ಜಾಗರೂಕರಾಗಿರಬೇಕು, ಅಲ್ಲದೆ ನಿಮ್ಮ ಪ್ರಮುಖ ಸಮಸ್ಯೆ ನಿವಾರಣೆಯಾಗಲಿದೆ.
ವೃಶ್ಚಿಕ ರಾಶಿ
ಈ ದಿನ ನಿಮಗೆ ಸಾಮಾನ್ಯವಾಗಿರುತ್ತದೆ. ಕೆಲಸದ ಸ್ಥಳದಲ್ಲಿ ನಿಮ್ಮ ಸ್ಥಗಿತಗೊಂಡ ಯೋಜನೆಗಳನ್ನು ನೀವು ಪುನರಾರಂಭಿಸಬಹುದು. ವೃತ್ತಿ ಜೀವನದಲ್ಲಿ ಒತ್ತಡ ಇರಲಿದೆ. ನಿಮ್ಮ ಅನುಭವದ ಸಂಪೂರ್ಣ ಪ್ರಯೋಜನವನ್ನು ನೀವು ಪಡೆಯುತ್ತೀರಿ. ಪೋಷಕರ ಆಶೀರ್ವಾದದಿಂದ, ನಿಮ್ಮ ಯಾವುದೇ ಸ್ಥಗಿತಗೊಂಡ ಕೆಲಸವನ್ನು ಪೂರ್ಣಗೊಳಿಸಬಹುದು.
ಧನು ರಾಶಿ
ಇಂದು ಕೆಲಸದ ಕಡೆಗೆ ಹೆಚ್ಚಿನ ಗಮನಹರಿಸಿ. ನಿಮ್ಮ ಕುಟುಂಬ ಸದಸ್ಯರೊಂದಿಗೆ ಏನಾದರೂ ಭಿನ್ನಾಭಿಪ್ರಾಯವಿದ್ದರೆ ಇಂದು ಅದು ಸರಿಯಾಗಲಿದೆ. ಕೆಲಸದ ಬಗ್ಗೆ ಚಿಂತೆ ಕಾಡುವುದು, ಆದರೆ ಭಯ ಪಡಬೇಕಾಗಿಲ್ಲ, ನಿಮ್ಮ ಗುರಿಮುಟ್ಟಲು ಸಾಧ್ಯವಾಗುವುದು. ವಿದ್ಯಾರ್ಥಿಗಳು ತಮ್ಮ ಓದಿನ ಕಡೆಗೆ ಹೆಚ್ಚಿನ ಗಮನಹರಿಸಬೇಕು.
ಮಕರ ರಾಶಿ
ಇಂದು ನಿಮಗೆ ಏರಿಳಿತಗಳು ತುಂಬಿರಲಿದೆ. ನೀವು ಹೊಸ ಕೆಲಸವನ್ನು ಪ್ರಾರಂಭಿಸಲು ಯೋಚಿಸುತ್ತಿದ್ದರೆ, ಇಂದು ಅದಕ್ಕೆ ಉತ್ತಮ ದಿನವಾಗಿರುತ್ತದೆ. ಕೆಲಸದ ಸ್ಥಳದಲ್ಲಿ ನಿಮ್ಮ ಶತ್ರುಗಳೊಂದಿಗೆ ನೀವು ಜಾಗರೂಕರಾಗಿರಬೇಕು.ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಹಾದಿ ಸುಗಮವಾಗಲಿದೆ.
ಕುಂಭ ರಾಶಿ
ಈ ದಿನ ನಿಮಗೆ ತುಂಬಾ ಚೆನ್ನಾಗಿರಲಿದೆ, ಖರ್ಚು ಅಧಿಕ ಇರಲಿದೆ, ಆದರೆ ನೀವು ಖರ್ಚು ನಿಯಂತ್ರಿಸುವ ಕಡೆಗೆ ಗಮನ ಹರಿಸದಿದ್ದರೆ ತೊಂದರೆ ಅನುಭವಿಸಬೇಕಾಗುವುದು. ನೀವು ಬೇರೆ ಕೆಲಸಕ್ಕೆ ಟ್ರೈ ಮಾಡುತ್ತಿದ್ದರೆ ಒಳ್ಳೆಯ ಆಫರ್ ಪಡೆಯಬಹುದು.
ಮೀನ ರಾಶಿ
ಈ ದಿನ ನಿಮಗೆ ಸವಾಲಿನಿಂದ ಕೂಡಿರಲಿದೆ. ಇಂದು ಗಾಡಿ ಚಲಾಯಿಸುವಾಗ ಜಾಗ್ರತೆವಹಿಸಿ, ನೀವು ಕೆಲಸದ ಕ್ಷೇತ್ರದಲ್ಲಿ ಯಾವುದೇ ಬದಲಾವಣೆಯನ್ನು ಮಾಡುವ ಆಲೋಚನೆಯನ್ನು ಮಾಡಿದ್ದರೆ, ನೀವು ಅವಸರ ಪಡಬೇಡಿ ಎಂದು ಸಲಹೆ ನೀಡಲಾಗುವುದು.



Click it and Unblock the Notifications











