Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ದಿನ ಭವಿಷ್ಯ ಡಿಸೆಂಬರ್ 17: ಭಾನುವಾರದ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ವೈದಿಕಶಾಸ್ತ್ರದ ಪ್ರಕಾರ ಡಿಸೆಂಬರ್ 17 ದ್ವಾದಶ ರಾಶಿಗಳಿಗೆ ಹೇಗಿರಲಿದೆ ನೋಡೋಣ ಬನ್ನಿ:
ಮೇಷ ರಾಶಿ
ಕೆಲಸದ ವಿಷಯದಲ್ಲಿ ಇಂದು ನಿಮಗೆ ತುಂಬಾ ಅದೃಷ್ಟದ ದಿನವಾಗಿದೆ. ಉದ್ಯೋಗಿಗಳು ಇಂದು ಕೆಲವು ಪ್ರಮುಖ ಕೆಲಸಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಪಡೆಯಬಹುದು. ನಿಮ್ಮ ವೃತ್ತಿಪರ ಜೀವನದಲ್ಲಿ ಧನಾತ್ಮಕ ಬದಲಾವಣೆಗಳನ್ನು ಕಾಣಬಹುದು. ನೀವು ಉದ್ಯಮಿಯಾಗಿದ್ದರೆ ಈ ದಿನ ಶುಭವಾಗಲಿದೆ. ಹಣದ ವಿಷಯದಲ್ಲಿ ಇಂದು ಅದೃಷ್ಟದ ದಿನ. ಕುಟುಂಬ ಜೀವನದಲ್ಲಿ ಪರಿಸ್ಥಿತಿಯು ಏರಿಳಿತಗಳಿಂದ ತುಂಬಿರುತ್ತದೆ. ಮನೆಯಲ್ಲಿ ಹಣದ ವಿಚಾರಕ್ಕೆ ವಾಗ್ವಾದಗಳು ಉಂಟಾಗಬಹುದು. ಆರೋಗ್ಯದಲ್ಲಿ ಸುಧಾರಣೆಯ ಲಕ್ಷಣಗಳಿವೆ.
ಅದೃಷ್ಟದ ಬಣ್ಣ: ಗಾಢ ಕೆಂಪು
ಅದೃಷ್ಟದ ಸಂಖ್ಯೆ: 6
ಶುಭ ಸಮಯ: ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ

ವೃಷಭ ರಾಶಿ
ಕೆಲಸದಲ್ಲಿ ಈ ದಿನ ಉತ್ತಮವಾಗಿದೆ. ನಿಮ್ಮ ಕಠಿಣ ಪರಿಶ್ರಮದ ಸರಿಯಾದ ಫಲಿತಾಂಶವನ್ನು ಶೀಘ್ರದಲ್ಲೇ ನೀವು ಪಡೆಯುತ್ತೀರಿ. ವ್ಯಾಪಾರಿಗಳಿಗೆ ಇಂದು ಲಾಭದಾಯಕ ದಿನವಾಗಿದೆ. ನೀವು ನಿರೀಕ್ಷಿಸಿದ್ದಕ್ಕಿಂತ ದುಪ್ಪಟ್ಟು ಲಾಭವನ್ನು ಪಡೆಯಬಹುದು. ಕೌಟುಂಬಿಕ ಜೀವನದಲ್ಲಿ ಪರಿಸ್ಥಿತಿಯು ಆಹ್ಲಾದಕರವಾಗಿರುತ್ತದೆ. ನೀವು ಕುಟುಂಬ ಸದಸ್ಯರಿಂದ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ, ನೀವು ಗ್ಯಾಸ್, ಅಸಿಡಿಟಿ, ಅಜೀರ್ಣ ಮುಂತಾದ ಸಮಸ್ಯೆಗಳನ್ನು ಎದುರಿಸಬಹುದು.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 17
ಶುಭ ಸಮಯ: ಬೆಳಗ್ಗೆ 7 ರಿಂದ 11 ರವರೆಗೆ
ಮಿಥುನ ರಾಶಿ
ಮನೆಯ ವಾತಾವರಣ ಅಷ್ಟು ಚೆನ್ನಾಗಿರಲ್ಲ, ಕುಟುಂಬ ಸದಸ್ಯರ ನಡುವೆ ವ್ಯತ್ಯಾಸಗಳು ಆಳವಾಗಿರಬಹುದು. ಈ ದಿನ ಕೋಪ, ಆತುರದಿಂದ ಏನನ್ನೂ ತೆಗೆದುಕೊಳ್ಳದಿದ್ದರೆ ಉತ್ತಮ. ಹಣದ ವಿಷಯದಲ್ಲಿ ಇಂದು ನಿಮಗೆ ತುಂಬಾ ಅದೃಷ್ಟದ ದಿನವಾಗಿದೆ. ನಿಮ್ಮ ಉಳಿತಾಯ ಹೆಚ್ಚಾಗಬಹುದು. ಆಸ್ತಿ ಸಂಬಂಧಿತ ಕೆಲಸ ಮಾಡುವವರಿಗೆ ಉತ್ತಮ ಅವಕಾಶಗಳು ಸಿಗಲಿದೆ. ನೀವು ವಿದೇಶಕ್ಕೆ ಹೋಗಿ ಉದ್ಯೋಗ ಮಾಡಲು ಬಯಸಿದರೆ ಅದು ಶೀಘ್ರದಲ್ಲಿಯೇ ನೆರವೇರಲಿದೆ. ಆರೋಗ್ಯವನ್ನು ನಿರ್ಲಕ್ಷಿಸಬೇಡಿ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 5
ಶುಭ ಸಮಯ: ಸಂಜೆ 5 ರಿಂದ ರಾತ್ರಿ 8:20 ರವರೆಗೆ
ಕರ್ಕ ರಾಶಿ
ಇಂದು ನಿಮಗೆ ಅತ್ಯಂತ ಮಂಗಳಕರ ದಿನವಾಗಲಿದೆ. ಕಚೇರಿಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ವ್ಯಾಪಾರಿಗಳಿಗೆ ಇಂದು ಏರಿಳಿತಗಳಿಂದ ಕೂಡಿರಲಿದೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ. ಅಗತ್ಯಕ್ಕಿಂತ ಹೆಚ್ಚು ಖರ್ಚು ಮಾಡುವುದನ್ನು ತಪ್ಪಿಸಿ. ಆರೋಗ್ಯದ ಬಗ್ಗೆ ಹೇಳುವುದಾದರೆ ಚರ್ಮದ ಅಲರ್ಜಿಯಿಂದ ಬಳಲುತ್ತಿರಬಹುದು.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 14
ಶುಭ ಸಮಯ: ಬೆಳಗ್ಗೆ 4:05 ರಿಂದ 7:45 ರವರೆಗೆ
ಸಿಂಹ ರಾಶಿ
ನಿಮ್ಮ ಸಂಗಾತಿ ನಿಮ್ಮ ಮುಂದೆ ದೊಡ್ಡ ಬೇಡಿಕೆ ಇಡಬಹುದು. ಇದೇ ಕಾರಣಕ್ಕೆ ನಿಮ್ಮ ನಡುವೆ ಕೆಲವು ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಯಿದೆ. ನೀವು ವಿಷಯವನ್ನು ಬುದ್ಧಿವಂತಿಕೆಯಿಂದ ನಿಭಾಯಿಸಲು ಪ್ರಯತ್ನಿಸಬೇಕು. ನಿಮ್ಮ ಹಣಕಾಸಿನ ಸ್ಥಿತಿಯನ್ನು ಬಲಪಡಿಸಲು, ನಿಮ್ಮ ಖರ್ಚುಗಳ ಕಡೆ ಗಮನಹರಿಸಿ. ನಿರ್ಲಕ್ಷ್ಯವು ದುಬಾರಿಯಾಗಲಿದೆ. ನಿಮ್ಮ ಚಿಕ್ಕ ಕೆಲಸವನ್ನೂ ನೀವು ಎಚ್ಚರಿಕೆಯಿಂದ ಮಾಡಬೇಕು. ವ್ಯಾಪಾರಿಗಳು ಇಂದು ದೊಡ್ಡ ವ್ಯವಹಾರವನ್ನು ಮಾಡಲು ಅವಕಾಶವನ್ನು ಪಡೆಯಬಹುದು. ಆರೋಗ್ಯದ ವಿಷಯದಲ್ಲಿ ಈ ದಿನ ಮಿಶ್ರಫಲ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 28
ಶುಭ ಸಮಯ: ಬೆಳಗ್ಗೆ 8 ರಿಂದ 11:20 ರವರೆಗೆ
ಕನ್ಯಾ ರಾಶಿ
ಉದ್ಯೋಗಿಗಳಿಗೆ ಇಂದು ಉತ್ತಮ ದಿನವಾಗಿದೆ. ನೀವು ಕಚೇರಿಯಲ್ಲಿ ಯಾವುದೇ ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಇಂದು ನಿಮ್ಮ ಸಮಸ್ಯೆಯು ಬಗೆಹರಿಯಲಿದೆ. ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿದೆ. ಶೀಘ್ರದಲ್ಲೇ ನಿಮ್ಮ ವ್ಯವಹಾರದಲ್ಲಿ ಕೆಲವು ಸಕಾರಾತ್ಮಕ ಬದಲಾವಣೆಗಳನ್ನು ನೀವು ನೋಡುತ್ತೀರಿ. ವೈಯಕ್ತಿಕ ಜೀವನದಲ್ಲಿ ಸಮಸ್ಯೆಗಳು ಹೆಚ್ಚಾಗಬಹುದು, ಅನೇಕ ರೀತಿಯ ನಕಾರಾತ್ಮಕ ಆಲೋಚನೆಗಳು ಮನಸ್ಸಿನಲ್ಲಿ ಬರಬಹುದು. ಆತುರದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳದೇ ನಿಮ್ಮನ್ನು ನಿಯಂತ್ರಿಸಿಕೊಂಡರೆ ಉತ್ತಮ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ, ನಿಮ್ಮ ಆರೋಗ್ಯದಲ್ಲಿ ನೀವು ಸುಧಾರಣೆಯನ್ನು ಕಾಣುತ್ತೀರಿ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 30
ಶುಭ ಸಮಯ: ಸಂಜೆ 6 ರಿಂದ 8:15 ರವರೆಗೆ
ತುಲಾ ರಾಶಿ
ನೀವು ವಿದ್ಯಾರ್ಥಿಯಾಗಿದ್ದರೆ ಶಿಕ್ಷಣದಲ್ಲಿ ಯಶಸ್ಸು ಪಡೆಯಲು ನೀವು ಸರಿಯಾದ ದಿಕ್ಕಿನಲ್ಲಿ ಪ್ರಯತ್ನಗಳನ್ನು ಮಾಡಬೇಕಾಗುತ್ತದೆ. ಉದ್ಯೋಗಸ್ಥರಿಗೆ ಪ್ರಗತಿಯ ಸಾಧ್ಯತೆಗಳಿವೆ. ಸಣ್ಣ ವ್ಯಾಪಾರಿಗಳು ಅಪೇಕ್ಷಿತ ಲಾಭವನ್ನು ಪಡೆಯುತ್ತಾರೆ. ಸರ್ಕಾರದ ಕೆಲವು ಯೋಜನೆಗಳಿಂದ ನೀವು ಉತ್ತಮ ಲಾಭವನ್ನು ಪಡೆಯಬಹುದು. ಹಣದ ವಿಚಾರದಲ್ಲಿ ಜಾಗರೂಕರಾಗಿರಿ. ಯಾವುದೇ ಹಣಕಾಸಿನ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ಆರೋಗ್ಯಕ್ಕೆ ಸಂಬಂಧಿಸಿದಂತೆ, ಇಂದು ಉತ್ತಮ ದಿನವಾಗಿರುತ್ತದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 11
ಶುಭ ಸಮಯ: ಸಂಜೆ 4:35 ರಿಂದ ರಾತ್ರಿ 8 ರವರೆಗೆ
ವೃಶ್ಚಿಕ ರಾಶಿ
ಕಚೇರಿಯ ವಾತಾವರಣ ಅಷ್ಟು ಚೆನ್ನಾಗಿರಲ್ಲ. ಅನಗತ್ಯ ಕೋಪ ನಿಮಗೆ ಒಳ್ಳೆಯದಲ್ಲ. ಇಂದು ವ್ಯಾಪಾರಸ್ಥರಿಗೆ ಮಿಶ್ರ ಫಲಿತಾಂಶಗಳ ದಿನವಾಗಿರುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಹೆಚ್ಚು ಹಣವನ್ನು ಖರ್ಚು ಮಾಡಬೇಡಿ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಮನ್ವಯವು ಹದಗೆಡಬಹುದು. ಸಂಭಾಷಣೆಯ ಮೂಲಕ ಅವರ ಆಲೋಚನೆಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುವುದು ಉತ್ತಮ. ಆರೋಗ್ಯದಲ್ಲಿ ಏರುಪೇರು ಉಂಟಾಗುವುದು.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 20
ಶುಭ ಸಮಯ: ಬೆಳಿಗ್ಗೆ 8:10 ರಿಂದ 10:50 ರವರೆಗೆ
ಧನು ರಾಶಿ
ಮನೆಯಲ್ಲಿ ಹರ್ಷದ ವಾತಾವರಣ ಇರಲಿದೆ. ಇಂದು ಮನೆಯಲ್ಲಿ ಕೆಲವು ಶುಭ ಕಾರ್ಯಗಳನ್ನು ಆಯೋಜಿಸಬಹುದು. ನಿಮ್ಮ ಸಂಗಾತಿ ಉತ್ತಮ ಮನಸ್ಥಿತಿಯಲ್ಲಿರುತ್ತಾರೆ. ಹಣಕಾಸಿನ ಪರಿಸ್ಥಿತಿಯಲ್ಲಿ ಸುಧಾರಣೆಯ ಬಲವಾದ ಸಾಧ್ಯತೆಯಿದೆ. ನಿಮ್ಮ ಹಣಕಾಸಿನ ಪ್ರಯತ್ನಗಳು ಯಶಸ್ವಿಯಾಗಬಹುದು. ಶೀಘ್ರದಲ್ಲೇ ನೀವು ಎಲ್ಲಾ ಸಾಲಗಳಿಂದ ಮುಕ್ತರಾಗುತ್ತೀರಿ. ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿದೆ. ಹಿಂದೆ ಮಾಡಿದ ಯಾವುದೇ ಹೂಡಿಕೆಯಿಂದ ನೀವು ಉತ್ತಮ ಲಾಭವನ್ನು ಪಡೆಯಬಹುದು. ಆರೋಗ್ಯದ ದೃಷ್ಟಿಯಿಂದ ದಿನವು ಅನುಕೂಲಕರವಾಗಿರುತ್ತದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 2
ಶುಭ ಸಮಯ: ಮಧ್ಯಾಹ್ನ 3 ರಿಂದ ಸಂಜೆ 7 ರವರೆಗೆ
ಮಕರ ರಾಶಿ
ಇಂದು ನೀವು ಬಹಳಷ್ಟು ಮೋಜು ಮಾಡಲು ಅವಕಾಶವನ್ನು ಪಡೆಯುತ್ತೀರಿ. ಹಣದ ವಿಷಯದಲ್ಲಿ ಇಂದು ನಿಮಗೆ ಒಳ್ಳೆಯ ದಿನವಾಗಿರುತ್ತದೆ. ನಿಮ್ಮ ಹಣಕಾಸಿನ ನಿರ್ಧಾರಗಳನ್ನು ಬುದ್ಧಿವಂತಿಕೆಯಿಂದ ವರ್ತಿಸಿ. ವ್ಯಾಪಾರಿಗಳಿಗೆ ದಿನವಾಗಿದೆ. ಕೆಲಸಕ್ಕೆ ಸಂಬಂಧಿಸಿದಂತೆ ದೂರ ಪ್ರಯಾಣದ ಸಾಧ್ಯತೆ ಇದೆ. ಆದರೆ ನಿಮ್ಮ ಪ್ರಯಾಣದಿಂದ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುವ ಬಲವಾದ ಸಾಧ್ಯತೆಯಿದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 15
ಶುಭ ಸಮಯ: ಬೆಳಗ್ಗೆ 6:45 ರಿಂದ 11:45 ರವರೆಗೆ
ಕುಂಭ ರಾಶಿ
ನೀವು ಇತ್ತೀಚೆಗೆ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಯನ್ನು ನೀಡಿದ್ದರೆ, ನೀವು ಉತ್ತಮ ಯಶಸ್ಸನ್ನು ಸಾಧಿಸಬಹುದು. ನೀವು ಹೀಗೆ ಕಷ್ಟಪಟ್ಟು ಕೆಲಸ ಮಾಡುತ್ತಿರಿ. ನೀವು ಹೊಸ ಆಸ್ತಿ, ವಾಹನ ಇತ್ಯಾದಿಗಳನ್ನು ಖರೀದಿಸಲು ಯೋಜಿಸುತ್ತಿದ್ದರೆ ಇಂದು ನಿಮಗೆ ಬಹಳ ಮುಖ್ಯವಾದ ದಿನವಾಗಿದೆ. ಕೆಲಸದ ವಿಷಯದಲ್ಲಿ ದಿನವು ಉತ್ತಮವಾಗಿರುತ್ತದೆ. ನಿಮ್ಮ ಎಲ್ಲಾ ಕೆಲಸಗಳು ಯೋಜನೆಯ ಪ್ರಕಾರ ಪೂರ್ಣಗೊಳ್ಳುತ್ತವೆ. ನಿಮ್ಮ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 9
ಶುಭ ಸಮಯ: ಸಂಜೆ 5:05 ರಿಂದ 7:25 ರವರೆಗೆ
ಮೀನ ರಾಶಿ
ಉದ್ಯಮಿಗಳಿಗೆ ಈ ದಿನ ಉತ್ತಮವಾಗಿದೆ. ನೀವು ಸಂಬಳಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಯನ್ನು ಎದುರಿಸುತ್ತಿದ್ದರೆ, ನಿಮ್ಮ ಸಮಸ್ಯೆಯನ್ನು ಇಂದು ಪರಿಹರಿಸಬಹುದು. ಸಂಗಾತಿಯ ಮನಸ್ಸಿಗೆ ನೋವುಂಟು ಮಾಡಬೇಡಿ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಬಲವಾದ ಸಾಧ್ಯತೆಯಿದೆ. ಇದರಿಂದ ಶೀಘ್ರದಲ್ಲೇ ಹಣಕಾಸಿನ ಸಮಸ್ಯೆಗಳಿಂದ ಹೊರಬರಲು ಸಾಧ್ಯವಾಗುವುದು
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 24
ಶುಭ ಸಮಯ: ಬೆಳಗ್ಗೆ 7 ರಿಂದ 9 ರವರೆಗೆ



Click it and Unblock the Notifications










