Latest Updates
-
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ! -
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ!
ಜುಲೈ 12ರ ರಾಶಿ ಭವಿಷ್ಯ: ಮೀನ ರಾಶಿಯವರಿಗೆ ಒಳ್ಳೆಯದಿದೆ, ಉಳಿದ ರಾಶಿಫಲ ಹೇಗಿದೆ?
ಜುಲೈ 12ರ ರಾಶಿಫಲದ ಪ್ರಕಾರ ಈ ದಿನ ದ್ವಾದಶ ರಾಶಿಗಳ ರಾಶಿಫಲ ಹೇಗಿರಲಿದೆ? ಈ ದಿನ ಕೆಲವೊಂದು ರಾಶಿಗಳಿಗೆ ತುಂಬಾ ಒಳ್ಳೆಯದಿದೆ. ಈ ದಿನ ನಿಮ್ಮ ರಾಶಿಗೆ ಹೇಗಿರಲಿದೆ ಎಂದು ನೋಡೋಣ:
ಮೇಷ ರಾಶಿ
ಕೆಲಸದ ದೃಷ್ಟಿಯಿಂದ ನೋಡುವುದಾದರೆ ಈ ದಿನ ಬಿಡುವಿಲ್ಲದ ದಿನವಾಗಿರುತ್ತದೆ. ಇಂದು ಕೆಲಸದ ಹೊರೆ ಹೆಚ್ಚಾಗಲಿದೆ. ನಿಮ್ಮ ಎಲ್ಲಾ ಕೆಲಸಗಳಿಗೆ ಮುಂಚಿತವಾಗಿ ನೀವು ಯೋಜನೆಗಳನ್ನು ಮಾಡಿದರೆ ನಿಮಗೆ ಸುಲಭವಾಗುವುದು. ಆರ್ಥಿಕ ಪರಿಸ್ಥಿತಿಯಲ್ಲಿ ಕುಸಿತದ ಸಾಧ್ಯತೆ ಇದೆ. ಇಂದು ನೀವು ಹಣದ ವಿಷಯದಲ್ಲಿ ಬಹಳ ಜಾಗರೂಕರಾಗಿರಬೇಕು. ಆರೋಗ್ಯ ಸಂಬಂಧಿ ಸಮಸ್ಯೆ ಎದುರಾಗಬಹುದು.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಬೆಳಿಗ್ಗೆ 6:20 ರಿಂದ 11:20 ರವರೆಗೆ

ವೃಷಭ ರಾಶಿ
ಸಂಗಾತಿಯೊಂದಿಗಿನ ಸಂಬಂಧ ಚೆನ್ನಾಗಿರಲಿದೆ. ಹಣಕಾಸಿನ ಸ್ಥಿತಿ ಚೆನ್ನಾಗಿರಲಿದೆ. ಅನಾರೋಗ್ಯ ಸಮಸ್ಯೆ ಇದ್ದರೆ ಆರೋಗ್ಯದಲ್ಲಿ ದೊಡ್ಡ ಸುಧಾರಣೆ ಕಂಡುಬರಲಿದೆ. ಈ ದಿನ ನೀವು ಖುಷಿಯಿಂದ ಕಳೆಯುವಿರಿ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಮಧ್ಯಾಹ್ನ 3 ರಿಂದ ಸಂಜೆ 6 ರವರೆಗೆ
ಮಿಥುನ ರಾಶಿ
ಕೆಲಸದ ಜಾಗದಲ್ಲಿ ಅತ್ಯಂತ ಸಮತೋಲಿತವಾಗಿ ವರ್ತಿಸಲು ನಿಮಗೆ ಸಲಹೆ ನೀಡಲಾಗಿದೆ. ವಿಶೇಷವಾಗಿ ಉನ್ನತ ಅಧಿಕಾರಿಗಳೊಂದಿಗೆ ಮಾತನಾಡುವಾಗ ನೀವು ಎಚ್ಚರಿಕೆಯಿಂದ ಮಾತನಾಡಿ. ಸಂಗಾತಿಯೊಂದಿಗಿನ ಭಿನ್ನಾಭಿಪ್ರಾಯಗಳು ಮತ್ತಷ್ಟು ಹೆಚ್ಚಾಗಬಹುದು. ನಿಮ್ಮ ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 8
ಅದೃಷ್ಟದ ಸಮಯ: ಬೆಳಿಗ್ಗೆ 7:10 ರಿಂದ 10:50 ರವರೆಗೆ
ಕರ್ಕ ರಾಶಿ
ಹಣದ ವಿಷಯದಲ್ಲಿಇಂದು ನಿಮಗೆ ಏರಿಳಿತಗಳಿಂದ ಕೂಡಿರಲಿದೆ. ದೈನಂದಿನ ಖರ್ಚುಗಳನ್ನು ಪೂರೈಸಲು ನೀವು ಅನೇಕ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಸಂಗಾತಿಯ ಆರೋಗ್ಯ ಸ್ವಲ್ಪ ದುರ್ಬಲವಾಗಿರುತ್ತದೆ. ಇದರಿಂದ ಖರ್ಚು ಹೆಚ್ಚಿರಲಿದೆ. ಕೆಲಸದ ವಿಷಯದಲ್ಲಿ ಇಂದು ನಿಮಗೆ ಮಿಶ್ರಫಲ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 15
ಅದೃಷ್ಟದ ಸಮಯ: ಸಂಜೆ 4:35 ರಿಂದ ಸಂಜೆ 7 ರವರೆಗೆ
ಸಿಂಹ ರಾಶಿ
ಈ ದಿನ ಖುಷಿಯಾಗಿರುತ್ತೀರಿ, ಮನೆಯಲ್ಲೂ ಸಂತೋಷದ ವಾತಾವರಣ ಇರಲಿದೆ. ನಿಮ್ಮ ಕೆಲಸಗಳಿಗೆ ಮನೆಯವರ ಬೆಂಬಲ ಸಿಗಲಿದೆ. ಆರ್ಥಿಕ ಪರಿಸ್ಥಿತಿ ಚೆನ್ನಾಗಿರಲಿದೆ. ನೀವು ಹೊಸ ಆದಾಯದ ಮೂಲವನ್ನು ಪಡೆಯಬಹುದು. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಉತ್ತಮ ಹೊಂದಾಣಿಕೆ ಇರಲಿದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಬೆಳಿಗ್ಗೆ 4:15 ರಿಂದ 9:45 ರವರೆಗೆ
ಕನ್ಯಾ ರಾಶಿ
ಇಂದು ನಿಮ್ಮ ಜೀವನದಲ್ಲಿ ಕೆಲವು ದೊಡ್ಡ ಮತ್ತು ಧನಾತ್ಮಕ ಬದಲಾವಣೆಯನ್ನು ಕಾಣಬಹುದು. ನಿಮ್ಮ ಚಿಕ್ಕ ನಿರ್ಧಾರವನ್ನು ನೀವು ಬಹಳ ಬುದ್ಧಿವಂತಿಕೆಯಿಂದ ತೆಗೆದುಕೊಳ್ಳುತ್ತೀರಿ. ನಿಮ್ಮ ಸಂಗಾತಿಯ ಸಹಾಯದಿಂದ ಇಂದು ನೀವು ಯಾವುದೇ ದೇಶೀಯ ವಿಷಯವನ್ನು ಪರಿಹರಿಸಲು ಸಾಧ್ಯವಾಗುತ್ತದೆ. ಆರ್ಥಿಕ ಭಾಗವು ಬಲವಾಗಿ ಉಳಿಯುತ್ತದೆ. ನಿಮ್ಮ ಸಂಚಿತ ಬಂಡವಾಳವು ಹೆಚ್ಚಾಗುತ್ತದೆ. ಆರೋಗ್ಯ ಸಂಬಂಧಿ ಸಮಸ್ಯೆಗಳು ದೂರವಾಗುತ್ತವೆ. ಮಾನಸಿಕವಾಗಿಯೂ ನೀವು ತುಂಬಾ ಸದೃಢರಾಗಿರುತ್ತೀರಿ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟ ಸಂಖ್ಯೆ: 35
ಅದೃಷ್ಟದ ಸಮಯ: ಮಧ್ಯಾಹ್ನ 3:30 ರಿಂದ ಸಂಜೆ 6:50 ರವರೆಗೆ
ತುಲಾ ರಾಶಿ
ಇಂದು ಯಾವುದೇ ನಿರ್ಗತಿಕರಿಗೆ ಸಹಾಯ ಮಾಡಲು ನಿಮಗೆ ಅವಕಾಶ ಸಿಕ್ಕಿದರೆ, ನಿಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ನೀವು ಅವರಿಗೆ ಸಹಾಯ ಮಾಡಿ. ಹಣದ ವಿಷಯದಲ್ಲಿ ಇಂದು ನಿಮಗೆ ಸಾಮಾನ್ಯವಾಗಿರುತ್ತದೆ. ಸಂಬಂಧದಲ್ಲಿ ಹೊಂದಾಣಿಕೆ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 9 ರವರೆಗೆ
ವೃಶ್ಚಿಕ ರಾಶಿ
ಕೆಲಸದ ದೃಷ್ಟಿಯಿಂದ ನೋಡುವುದಾದರೆ ಈ ದಿನ ಶುಭವಾಗಿದೆ. ನೀವು ಕಡಿಮೆ ಶ್ರಮದಿಂದ ಉತ್ತಮ ಹಣವನ್ನು ಪಡೆಯುತ್ತೀರಿ. ಇಂದು ನಿಮ್ಮ ಸಂಗಾತಿಯೊಂದಿಗೆ ವಿಶೇಷ ದಿನವಾಗಲಿದೆ. ನಿಮ್ಮ ವೈವಾಹಿಕ ಜೀವನದಲ್ಲಿ ಸಂತೋಷ ಇರಲಿದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 14
ಅದೃಷ್ಟದ ಸಮಯ: ಬೆಳಿಗ್ಗೆ 6:30 ರಿಂದ 9:50 ರವರೆಗೆ
ಧನು ರಾಶಿ
ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನೀವು ಶೀಘ್ರದಲ್ಲೇ ಸಾಲವನ್ನು ತೊಡೆದುಹಾಕಲು ಬಯಸಿದರೆ, ನಿಮ್ಮ ನಿರ್ಧಾರಗಳನ್ನು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳಲು ಸಲಹೆ ನೀಡಲಾಗಿದೆ. ಮನೆಯ ಹಿರಿಯರನ್ನು ಸೌಜನ್ಯದಿಂದ ನಡೆಸಿಕೊಳ್ಳಿ. ಆರೋಗ್ಯದ ಕಡೆ ಗಮನಹರಿಸಿ.
ಅದೃಷ್ಟದ ಬಣ್ಣ: ಬೂದು
ಅದೃಷ್ಟದ ಸಂಖ್ಯೆ: 28
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ಸಂಜೆ 5:30 ರವರೆಗೆ
ಮಕರ ರಾಶಿ
ಇಂದು ನಿಮಗೆ ತುಂಬಾ ರೋಮ್ಯಾಂಟಿಕ್ ದಿನವಾಗಿರಲಿದೆ. ನೀವಿಬ್ಬರು ಮತ್ತಷ್ಟು ಹತ್ತಿರವಾಗುತ್ತೀರಿ. ಹಣದ ವಿಷಯದಲ್ಲಿ ದಿನವು ಉತ್ತಮವಾಗಿರುತ್ತದೆ. ಲಕ್ಷ್ಮಿಯ ಆಶೀರ್ವಾದ ನಿಮ್ಮ ಮೇಲೆ ಇರಲಿದೆ. ನಿಮ್ಮ ಆರೋಗ್ಯ ದುರ್ಬಲವಾಗಬಹುದು, ಜಾಗ್ರತೆವಹಿಸಿ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 36
ಅದೃಷ್ಟದ ಸಮಯ: ಸಂಜೆ 4 ರಿಂದ ರಾತ್ರಿ 8 ರವರೆಗೆ
ಕುಂಭ ರಾಶಿ
ಮಕ್ಕಳ ಹಠಮಾರಿ ಸ್ವಭಾವವು ನಿಮ್ಮ ಸಮಸ್ಯೆಗಳನ್ನು ಹೆಚ್ಚಿಸಬಹುದು. ಅಂತಹ ಪರಿಸ್ಥಿತಿಯಲ್ಲಿ, ನೀವು ತುಂಬಾ ಕಿರಿಕಿರಿ ಅನುಭವಿಸುವಿರಿ. ತಾಳ್ಮೆಯಿಂದಿರಲು ಸಲಹೆ ನೀಡಲಾಗಿದೆ. ಕೆಲಸ ಕುರಿತ ನಿಮ್ಮ ನಿಲುವನ್ನು ನೀವು ಬಾಸ್ ಮುಂದೆ ಪೂರ್ಣ ವಿಶ್ವಾಸದಿಂದ ಪ್ರಸ್ತುತಪಡಿಸಬೇಕು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ಇರುತ್ತದೆ. ದಿನದ ಎರಡನೇ ಭಾಗದಲ್ಲಿ ನೀವು ಆರ್ಥಿಕ ಪ್ರಯೋಜನಗಳನ್ನು ಪಡೆಯಬಹುದು.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: ಬೆಳಿಗ್ಗೆ 8:10 ರಿಂದ 11:05 ರವರೆಗೆ
ಮೀನ ರಾಶಿ
ಇಂದು ನಿಮ್ಮ ಕೆಲವು ದೊಡ್ಡ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ, ನೀವು ಉತ್ತಮ ಮನಸ್ಥಿತಿಯಲ್ಲಿ ಇರುತ್ತೀರಿ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಇಂದು ನೀವು ನಿಮ್ಮ ಪ್ರೀತಿಪಾತ್ರರಿಗೆ ಉಡುಗೊರೆಗಳು ಇತ್ಯಾದಿಗಳನ್ನು ಖರೀದಿಸಬಹುದು. ಆರೋಗ್ಯದ ವಿಷಯದಲ್ಲಿ ಈ ದಿನ ಸ್ವಲ್ಪ ಜಾಗ್ರತೆವಹಿಸಿ, ಆರೋಗ್ಯ ಸಮಸ್ಯೆವಿದ್ದರೆ ನಿರ್ಲಕ್ಷ್ಯ ಮಾಡಬೇಡಿ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 19
ಅದೃಷ್ಟದ ಸಮಯ: ಸಂಜೆ 6 ರಿಂದ 8:20 ರವರೆಗೆ



Click it and Unblock the Notifications
