Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಜುಲೈ 13ರ ರಾಶಿ ಭವಿಷ್ಯ: ಏಕಾದಶಿ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ಜುಲೈ 13ರ ರಾಶಿಫಲದ ಪ್ರಕಾರ ಈ ದಿನ ಕಾಮಿಕ ಏಕಾದಶಿ, ದ್ವಾದಶ ರಾಶಿಗಳ ರಾಶಿಫಲ ಹೇಗಿರಲಿದೆ? ಈ ದಿನ ಕೆಲವೊಂದು ರಾಶಿಗಳಿಗೆ ತುಂಬಾ ಒಳ್ಳೆಯದಿದೆ. ಈ ದಿನ ನಿಮ್ಮ ರಾಶಿಗೆ ಹೇಗಿರಲಿದೆ ಎಂದು ನೋಡೋಣ:
ದಿನಾಂಕ: ಜುಲೈ 13
ತಿಥಿ: ಏಕಾದಶಿ
ನಕ್ಷತ್ರ: ಕೃತಿಕಾ
ಪಕ್ಷ: ಕೃಷ್ಣ ಪಕ್ಷ
ರಾಹುಕಾಲ: ಮಧ್ಯಾಹ್ನ 02:05ರಿಂದ 03:44ರವರೆಗೆ
ಮೇಷ ರಾಶಿ
ಕೆಲವು ಕಾರಣಗಳಿಂದ ನೀವು ನಿಮ್ಮ ಮನೆಯಿಂದ ದೂರವಿದ್ದರೆ ಈ ದಿನ ಅವರನ್ನು ತುಂಬಾ ಮಿಸ್ ಮಾಡುತ್ತಿರಿ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನೀವು ಆರಾಮದಾಯಕವಾದ ಯಾವುದೇ ಬೆಲೆಬಾಳುವ ವಸ್ತುವನ್ನು ಖರೀದಿಸಬಹುದು. ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕು, ಈ ದಿನ ಆತುರ ಮತ್ತು ಗಾಬರಿಯಿಂದ ಯಾವುದೇ ಕೆಲಸ ಮಾಡಬೇಡಿ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 21
ಅದೃಷ್ಟದ ಸಮಯ: ಬೆಳಿಗ್ಗೆ 6:15 ರಿಂದ 9:00 ರವರೆಗೆ

ವೃಷಭ ರಾಶಿ
ಸಂಗಾತಿಯು ಇಂದು ತುಂಬಾ ರೋಮ್ಯಾಂಟಿಕ್ ಮೂಡ್‌ನಲ್ಲಿರುತ್ತಾರೆ, ಅವರು ನಿಮ್ಮ ಜೊತೆ ಸಮಯ ಕಳೆಯಲು ಬಯಸುತ್ತಾರೆ, ನಿಮ್ಮ ಕೆಲಸದ ಕಾರಣ ಹೇಳಿ ಅವರನ್ನು ನಿರಾಸೆ ಮಾಡಬೇಡಿ. ಹಣದ ವಿಷಯದಲ್ಲಿ ಜಾಗ್ರತೆ ವಹಿಸಬೇಕು. ಈ ದಿನ ಬಜೆಟ್‌ಗಿಂತ ಹೆಚ್ಚಾಗಿ ಖರ್ಚು ಮಾಡಬೇಡಿ. ಕೆಲಸಕ್ಕೆ ಸಂಬಂಧಿಸಿದ ಯಾವುದೇ ಪ್ರಮುಖ ನಿರ್ಧಾರದ ಬಗ್ಗೆ ನೀವು ಎಚ್ಚರಿಕೆಯಿಂದ ಯೋಚಿಸಬೇಕು.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 17
ಅದೃಷ್ಟದ ಸಮಯ: ಬೆಳಿಗ್ಗೆ 7:05 ರಿಂದ 9:15 ರವರೆಗೆ
ಮಿಥುನ ರಾಶಿ
ವ್ಯಾಪಾರಿಗಳಿಗೆ ಈ ದಿನ ಪ್ರಯೋಜನಕಾರಿಯಾಗಿದೆ. ಈ ದಿನ ನೀವು ದೊಡ್ಡ ಆರ್ಥಿಕ ಲಾಭವನ್ನು ಪಡೆಯಬಹುದು. ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿರುತ್ತದೆ. ನಿಮ್ಮ ಸಹಚರರು ನಿಮಗಾಗಿ ಅದ್ಭುತವಾದದ್ದನ್ನು ಮಾಡಬಹುದು. ಸಂಗಾತಿ ಜೊತೆ ಬಾಂಧವ್ಯ ಮತ್ತಷ್ಟು ಗಟ್ಟಿಯಾಗುವುದು.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ ಸಂಜೆ 4 ರವರೆಗೆ
ಕರ್ಕ ರಾಶಿ
ಈ ದಿನ ನೀವು ಆರೋಗ್ಯದ ಬಗ್ಗೆ ಜಾಗರೂಕರಾಗಿರಬೇಕು. ನಿರ್ಲಕ್ಷ್ಯವು ನಿಮ್ಮ ಸಮಸ್ಯೆಗಳನ್ನು ಹೆಚ್ಚಿಸಬಹುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ನೀವು ಇಂದು ಹಣಕ್ಕೆ ಸಂಬಂಧಿಸಿದ ವ್ಯವಹಾರಗಳನ್ನು ಮಾಡುವುದಕ್ಕೆ ಹೋಗದಿದ್ದರೆ ಒಳ್ಳೆಯದು. ಈ ದಿನ ನೀವು ಕೋಪವನ್ನು ನಿಯಂತ್ರಿಸಿದರೆ ಒಳ್ಳೆಯದು, ಇಲ್ಲದಿದ್ದರೆ ಮನೆಯ ನೆಮ್ಮದಿ ಹಾಳಾಗುವುದು.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 19
ಅದೃಷ್ಟದ ಸಮಯ: ಸಂಜೆ 6:20 ರಿಂದ ರಾತ್ರಿ 8:20 ರವರೆಗೆ
ಸಿಂಹ ರಾಶಿ
ಇಂದು ನೀವು ಧಾರ್ಮಿಕ ವಿಷಯಗಳ ಕಡೆ ಹೆಚ್ಚಿನ ಗಮನ ಕೊಡಲು ಸಾಧ್ಯವಾಗುವುದು. ಕಚೇರಿಯಲ್ಲಿ ಇಂದು ನೀವು ಖುಷಿಯಾಗಿರುತ್ತಾರೆ, ನಿಮ್ಮ ಕೆಲಸಗಳಿಗೆ ಇಂದು ನೀವು ನಿಮ್ಮ ಪ್ರಗತಿಯ ಸೂಚನೆಯನ್ನು ಸಹ ಪಡೆಯುತ್ತೀರಿ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ನೀವು ಹಣ ಗಳಿಸಲು ಉತ್ತಮ ಅವಕಾಶವನ್ನು ಪಡೆಯಬಹುದು. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಮಾಧುರ್ಯ ಹೆಚ್ಚಾಗಲಿದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 8
ಅದೃಷ್ಟದ ಸಮಯ: ಮಧ್ಯಾಹ್ನ 2:55 ರಿಂದ ಸಂಜೆ 5:20 ರವರೆಗೆ
ಕನ್ಯಾ ರಾಶಿ
ನೀವು ಆಸ್ತಿಗೆ ಸಂಬಂಧಿಸಿದಂತೆ ಕೆಲಸ ಮಾಡುತ್ತಿದ್ದರೆ, ಇಂದು ನಿಮ್ಮ ಯಾವುದೇ ಸ್ಥಗಿತಗೊಂಡ ವ್ಯವಹಾರವನ್ನು ಪೂರ್ಣಗೊಳಿಸಬಹುದು. ಸರ್ಕಾರಿ ಕೆಲಸ ಮಾಡುವವರು ಜಾಗರೂಕರಾಗಿರಬೇಕು. ನೀವು ಅವಿವಾಹಿತರಾಗಿದ್ದರೆ ಮತ್ತು ಪ್ರೇಮ ವಿವಾಹವನ್ನು ಹೊಂದಲು ಬಯಸಿದರೆ ಮನೆಯವರಿಂದ ಒಪ್ಪಿಗೆ ಪಡೆಯುತ್ತೀರಿ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 6
ಅದೃಷ್ಟದ ಸಮಯ: ಮಧ್ಯಾಹ್ನ 2:15 ರಿಂದ ಸಂಜೆ 4 ರವರೆಗೆ
ತುಲಾ ರಾಶಿ
ಈ ನಕಾರಾತ್ಮಕ ಆಲೋಚನೆಗಳಿಂದ ದೂರವಿರಿ, ನೀವು ನಿಮ್ಮ ಕೆಲಸದತ್ತ ಗಮನಹರಿಸಿ. ಎಷ್ಟೇ ಬಿಡುವಿಲ್ಲದ ಕೆಲಸವಾದರೂ ನಿಮಗಾಗಿ, ನಿಮ್ಮವರಿಗಾಗಿ ಸಮಯವನ್ನು ಕಂಡುಕೊಳ್ಳಿ. ನೀವು ಕೆಲಸವನ್ನು ಬದಲಾಯಿಸುವ ಬಗ್ಗೆ ಯೋಚಿಸುತ್ತಿದ್ದರೆ ಈ ಸಮಯದಲ್ಲಿ ನೀವು ಆತುರಪಡಬೇಡಿ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: ಸಂಜೆ 5:15 ರಿಂದ ರಾತ್ರಿ 8 ರವರೆಗೆ
ವೃಶ್ಚಿಕ ರಾಶಿ
ನೀವು ಆರೋಗ್ಯ ಸಂಬಂಧಿತ ಸಮಸ್ಯೆಗಳಿದ್ದರೆ ಈ ದಿನ ಸುಧಾರಣೆ ಕಂಡು ಬರಲಿದೆ. ದೀರ್ಘಕಾಲದಿಂದ ಸ್ಥಗಿತಗೊಂಡಿದ್ದ ಕಾರ್ಯಗಳನ್ನು ಪೂರ್ಣಗೊಳಿಸಲು ನೀವು ನಿಮ್ಮ ಕೈಲಾದಷ್ಟು ಪ್ರಯತ್ನಿಸಬಹುದು. ಕೌಟುಂಬಿಕ ಜೀವನದಲ್ಲಿ ಸಂತೋಷ, ಶಾಂತಿ ಇರಲಿದೆ. ಪ್ರೀತಿಪಾತ್ರರ ಪ್ರೀತಿ, ಬೆಂಬಲ ಸಿಗಲಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಬೆಳಗ್ಗೆ 6:20 ರಿಂದ 9:20 ರವರೆಗೆ
ಧನು ರಾಶಿ
ನಿಮ್ಮ ಒಡಹುಟ್ಟಿದವರೊಂದಿಗೆ ಉತ್ತಮ ಸಂಬಂಧವನ್ನು ಇರಿಸಿಕೊಳ್ಳಲು ಪ್ರಯತ್ನಿಸಿ. ಅನಗತ್ಯ ವಿಷಯಗಳಲ್ಲಿ ಜಗಳವಾಡುವುದನ್ನು ತಪ್ಪಿಸಿ. ಕಚೇರಿಯಲ್ಲಿನ ಉನ್ನತ ಅಧಿಕಾರಿಗಳ ಕಟ್ಟುನಿಟ್ಟಿನ ವರ್ತನೆ ನಿಮ್ಮ ಕಷ್ಟಗಳನ್ನು ಹೆಚ್ಚಿಸಬಹುದು. ಈ ದಿನ ಕೆಲಸದಲ್ಲಿ ನೀವು ನಕಾರಾತ್ಮಕತೆಯನ್ನು ಅನುಭವಿಸುವಿರಿ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ಆರೋಗ್ಯದಲ್ಲಿ ಹಠಾತ್ ಕ್ಷೀಣಿಸಬಹುದು.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಸಂಜೆ 6:30 ರಿಂದ ರಾತ್ರಿ 9 ರವರೆಗೆ
ಮಕರ ರಾಶಿ
ಉದ್ಯೋಗಿಗಳು ತಮ್ಮ ಕೆಲಸದಿಂದ ತಮ್ಮ ಗಮನ ಸೆಳೆಯಲು ಸಾಧ್ಯವಾಗುವುದು. ವ್ಯಾಪಾರಸ್ಥರಿಗೂ ನಿರೀಕ್ಷೆಯಂತೆ ಫಲಿತಾಂಶ ಸಿಗಲಿದೆ. ಇಂದು ಮನೆಯ ವಾತಾವರಣ ಸರಿ ಇರುವುದಿಲ್ಲ. ಕುಟುಂಬದ ಸದಸ್ಯರೊಂದಿಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿರಬಹುದು. ಈ ದಿನ ತಾಳ್ಮೆಯಿಂದ ವರ್ತಿಸುವಂತೆ ಸಲಹೆ ನೀಡಲಾಗಿದೆ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 27
ಅದೃಷ್ಟದ ಸಮಯ: ಮಧ್ಯಾಹ್ನ 12:25 ರಿಂದ ಮಧ್ಯಾಹ್ನ 3 ರವರೆಗೆ
ಕುಂಭ ರಾಶಿ
ಆರೋಗ್ಯಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆ ಇದ್ದರೆ, ಅದನ್ನು ನಿರ್ಲಕ್ಷಿಸುವ ತಪ್ಪನ್ನು ಮಾಡಬೇಡಿ, ಇಲ್ಲದಿದ್ದರೆ ನಿಮ್ಮ ಕಷ್ಟಗಳು ಹೆಚ್ಚಾಗಬಹುದು. ಹಣದ ವಿಷಯದಲ್ಲಿ, ದಿನವು ತುಂಬಾ ದುಬಾರಿಯಾಗಿದೆ. ನಿಮ್ಮ ಬಜೆಟ್ ಅಸಮತೋಲಿತವಾಗಿರಬಹುದು. ಕಚೇರಿಯಲ್ಲಿ ಉನ್ನತ ಅಧಿಕಾರಿಗಳೊಂದಿಗೆ ಸಂಭಾಷಣೆ ನಡೆಸುವಾಗ, ನಿಮ್ಮ ಮಾತುಗಳ ಕಡೆ ಗಮನ ಕೊಡಿ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 10
ಅದೃಷ್ಟದ ಸಮಯ: ಬೆಳಿಗ್ಗೆ 4 ರಿಂದ 8 ರವರೆಗೆ
ಮೀನ ರಾಶಿ
ಪ್ರೀತಿಯ ವಿಷಯದಲ್ಲಿ ಇಂದು ಬಹಳ ರೋಮ್ಯಾಂಟಿಕ್ ದಿನವಾಗಿರಲಿದೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಇಂದು ನೀವು ಉಳಿತಾಯದ ಬಗ್ಗೆ ಹೆಚ್ಚಿನ ಗಮನ ಹರಿಸಲು ಸಾಧ್ಯವಾಗುವುದು. ನಿಮ್ಮ ಕಚೇರಿಯಲ್ಲಿ ದೀರ್ಘಕಾಲದಿಂದ ಯಾವುದೇ ಕೆಲಸ ಬಾಕಿ ಉಳಿದಿದ್ದರೆ, ಆದಷ್ಟು ಬೇಗ ಅದನ್ನು ಪೂರ್ಣಗೊಳಿಸಲು ಪ್ರಯತ್ನಿಸಿ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಸಂಜೆ 4:35 ರಿಂದ ರಾತ್ರಿ 8:35 ರವರೆಗೆ



Click it and Unblock the Notifications
