Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಜುಲೈ 15 ದಿನ ಭವಿಷ್ಯ: ಮೇಷ ರಾಶಿಯವರೇ ಜಾಗ್ರತೆ, ಉಳಿದ ರಾಶಿಗಳ ರಾಶಿಫಲ ಹೇಗಿದೆ?
ಶುಭೋದಯ... ವೈದಿಕ ಶಾಸ್ತ್ರದ ಪ್ರಕಾರ ಜುಲೈ 15 ದ್ವಾದಶ ರಾಶಿಗಳಿಗೆ ಹೇಗಿದೆ ಎಂದು ನೋಡೋಣ...
ದಿನಾಂಕ: ಜುಲೈ 15
ತಿಥಿ: ತ್ರಿಯೋದಶಿ
ನಕ್ಷತ್ರ: ಮೃಗಶೀರ್ಷ
ಪಕ್ಷ: ಕೃಷ್ಣಪಕ್ಷ
ರಾಹುಕಾಲ: ಬೆಳಗ್ಗೆ 09:10ರಿಂದ 10:49ರವರೆಗೆ

ಮೇಷ ರಾಶಿ
ಈ ದಿನ ನೀವು ರಹಸ್ಯ ಶತ್ರುಗಳೊಂದಿಗೆ ನೀವು ಜಾಗರೂಕರಾಗಿರಬೇಕು, ಇಲ್ಲದಿದ್ದರೆ ಅವರು ನಿಮಗೆ ತೊಂದರೆಯುಂಟು ಮಾಡಬಹುದು. ಕೆಲಸದ ಸ್ಥಳದಲ್ಲಿ ನೀವು ಉನ್ನತ ಅಧಿಕಾರಿಗಳೊಂದಿಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳನ್ನು ಹೊಂದಿರಬಹುದು.ಅವರು ಹೇಳಿದ್ದು ನಿಮಗೆ ಸರಿ ಅನಿಸದಿದ್ದರೂ ಚರ್ಚೆ ಬೇಡ ಮೌನವಾಗಿರಿ. ನಿಮ್ಮ ಆರ್ಥಿಕ ಸ್ಥಿತಿ ಸಹಜವಾಗಿರಲಿದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 19
ಅದೃಷ್ಟದ ಸಮಯ: ಮಧ್ಯಾಹ್ನ 12 ರಿಂದ ಸಂಜೆ 4 ರವರೆಗೆ
ವೃಷಭ ರಾಶಿ
ನಿಮ್ಮ ಮೇಲೆ ಹೆಚ್ಚಿನ ಕೆಲಸದ ಒತ್ತಡವನ್ನು ಹಾಕಿಕೊಳ್ಳಬೇಡಿ, ಅತಿಯಾದ ಒತ್ತಡ ನಿಮ್ಮ ಆರೋಗ್ಯ ಹಾಳು ಮಾಡಬಹುದು, ನಿಮ್ಮ ಆರೋಗ್ಯವು ಹದಗೆಡಬಹುದು. ಹಣದ ವಿಷಯದಲ್ಲಿ ಈ ದಿನ ಮಿಶ್ರಫಲ. ಉಳಿತಾಯದ ಕಡೆ ಹೆಚ್ಚು ಗಮನ ಹರಿಸಿ. ಸಂಗಾತಿಯೊಂದಿಗೆ ನಿಮ್ಮ ಸಂಬಂಧ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಬೆಳಗ್ಗೆ 4:30 ರಿಂದ 8:35 ರವರೆಗೆ
ಮಿಥುನ ರಾಶಿ
ಪ್ರೇಮಿಗಳಿಗೆ ಪ್ರಣಯ ಜೀವನದಲ್ಲಿ ಹೊಸ ತಿರುವು ಸಿಗಬಹುದು. ನಿಮ್ಮ ಸಂಬಂಧವನ್ನು ಮುಂದಕ್ಕೆ ಕೊಂಡೊಯ್ಯಲು ನೀವು ನಿರ್ಧರಿಸಬಹುದು. ನಿಮ್ಮ ಸಂಬಂಧಕ್ಕೆ ಕುಟುಂಬದವರ ಅನುಮತಿ ಸಿಗಬಹುದು. ಹಣದ ವಿಷಯದಲ್ಲಿ ಇಂದು ನಿಮಗೆ ಸರಾಸರಿ ದಿನವಾಗಿರಲಿದೆ. ಯಾವುದೇ ದೊಡ್ಡ ಖರ್ಚು ಮಾಡುವ ಮೊದಲು ಎಚ್ಚರಿಕೆಯಿಂದ ಯೋಚಿಸಿ. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ ಸಂಜೆ 5 ರವರೆಗೆ
ಕರ್ಕ ರಾಶಿ
ಪ್ರೇಮಿಗಳಿಗೆ ಹೊಸ ತಿರುವು ಸಿಗಬಹುದು. ನಿಮ್ಮ ಸಂಬಂಧವನ್ನು ಮುಂದಕ್ಕೆ ಕೊಂಡೊಯ್ಯಲು ನೀವು ನಿರ್ಧರಿಸಬಹುದು. ನಿಮ್ಮ ಸಂಬಂಧವು ಕುಟುಂಬ ಸದಸ್ಯರ ಅನುಮೋದನೆಯನ್ನು ಪಡೆಯುವ ಸಾಧ್ಯತೆಯಿದೆ. ಹಣದ ವಿಷಯದಲ್ಲಿ ಇಂದು ನಿಮಗೆ ಸರಾಸರಿ ದಿನವಾಗಲಿದೆ. ಯಾವುದೇ ದೊಡ್ಡ ಖರ್ಚು ಮಾಡುವ ಮೊದಲು ಎಚ್ಚರಿಕೆಯಿಂದ ಯೋಚಿಸಿ. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ ಸಂಜೆ 5 ರವರೆಗೆ
ಸಿಂಹ ರಾಶಿ
ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರಲಿದೆ. ತಂದೆಯೊಂದಿಗಿನ ನಿಮ್ಮ ಸಂಬಂಧವು ಇನ್ನಷ್ಟು ಬಲವಾಗುವುದು. ಇಂದು ನೀವು ಯಾವುದೇ ಪ್ರಮುಖ ನಿರ್ಧಾರವನ್ನು ತೆಗೆದುಕೊಂಡರೆ, ನಿಮ್ಮ ಪ್ರೀತಿಪಾತ್ರರ ಸಂಪೂರ್ಣ ಬೆಂಬಲವನ್ನು ನೀವು ಪಡೆಯುತ್ತೀರಿ. ಉದ್ಯೋಗಸ್ಥರಿಗೆ ಈ ದಿನ ಉತ್ತಮವಾಗಿರಲಿದೆ. ನಿಮಗೆ ಒಳ್ಳೆಯ ಅವಕಾಶ ಸಿಗಬಹುದು. ಆರೋಗ್ಯದ ವಿಷಯದಲ್ಲಿ ಈ ದಿನ ಮಿಶ್ರಫಲ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 15
ಅದೃಷ್ಟದ ಸಮಯ: ಸಂಜೆ 6 ರಿಂದ 8:25 ರವರೆಗೆ
ಕನ್ಯಾ ರಾಶಿ
ಈ ದಿನ ಆನಂದದಿಂದ ಕಳೆಯುತ್ತೀರಿ,ನೀವು ಮನೆಯ ಕೆಲವು ಸದಸ್ಯರೊಂದಿಗೆ ವೈಮನಸ್ಸನ್ನು ಹೊಂದಿರಬಹುದು. ಕೋಪ ಮತ್ತು ದುರಹಂಕಾರವನ್ನು ತ್ಯಜಿಸಲು ನಿಮಗೆ ಸಲಹೆ ನೀಡಲಾಗಿದೆ. ಹಣದ ಪರಿಸ್ಥಿತಿ ಸುಧಾರಿಸಬಹುದು.
ಅದೃಷ್ಟದ ಬಣ್ಣ: ಬೂದು
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ
ತುಲಾ ರಾಶಿ
ನಿಮ್ಮ ಆರೋಗ್ಯದ ಬಗ್ಗೆ ನೀವು ಚಿಂತೆ ಮಾಡುತ್ತಿದ್ದರೆ ಇಂದು ಸುಧಾರಣೆ ಕಾಣಲಿದೆ. ನಿಮಗಾಗಿ ಸಾಕಷ್ಟು ಸಮಯ ಸಿಗಲಿದೆ. ಹಣದ ವಿಷಯದಲ್ಲಿ ದಿನವು ಉತ್ತಮವಾಗಿದೆ. ಮನೆಯ ವಾತಾವರಣ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಸಂಜೆ 4:15 ರಿಂದ ಸಂಜೆ 7 ರವರೆಗೆ
ವೃಶ್ಚಿಕ ರಾಶಿ
ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶ ಪಡೆಯಬಹುದು. ನೀವು ಬಯಸಿದ ಕೆಲಸವನ್ನು ಪಡೆಯುವ ಸಾಧ್ಯತೆಯಿದೆ. ಆರ್ಥಿಕ ಪರಿಸ್ಥಿತಿ ಚೆನ್ನಾಗಿರಲಿದೆ. ನಿಮ್ಮ ಕಠಿಣ ಪರಿಶ್ರಮ ಯಶಸ್ವಿಯಾಗಲಿದೆ. ಸಂಗಾತಿಯೊಂದಿಗೆ ರೊಮ್ಯಾಂಟಿಕ್ ಆಗಿ ಕಳೆಯುವಿರಿ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಮಧ್ಯಾಹ್ನ 12:20 ರಿಂದ ಮಧ್ಯಾಹ್ನ 3 ರವರೆಗೆ
ಧನು ರಾಶಿ
ಹಣದ ವಿಷಯದಲ್ಲಿ ನೀವು ತುಂಬಾ ಜಾಗರೂಕರಾಗಿರಲು ಸಲಹೆ ನೀಡಲಾಗಿದೆ. ನೀವು ಕಚೇರಿಯಲ್ಲಿ ಅತಿಯಾದ ಆತ್ಮವಿಶ್ವಾಸ ಪ್ರಕಟಿಸಲು ಹೋಗಬೇಡಿ, ಇಲ್ಲದಿದ್ದರೆ ಇಂದು ನೀವು ಮುಜುಗರಕ್ಕೊಳಗಾಗಬೇಕಾಗಬಹುದು. ಉದ್ಯಮಿಗಳು ಅಪಾರ ಆರ್ಥಿಕ ಲಾಭವನ್ನು ಪಡೆಯಬಹುದು. ವ್ಯಾಪಾರಸ್ಥರಿಗೆ ಈ ದಿನ ಲಾಭದಾಯಕವಾಗಲಿದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಸಂಜೆ 6 ರಿಂದ ರಾತ್ರಿ 8 ರವರೆಗೆ
ಮಕರ ರಾಶಿ
ಇಂದು ನಿಮಗೆ ತುಂಬಾ ವಿಶೇಷವಾಗಿರಲಿದೆ. ಸಂಗಾತಿಯೊಂದಿಗೆ ಸಮಯ ಚೆನ್ನಾಗಿರಲಿದೆ. ಹಣದ ವಿಷಯದಲ್ಲಿ ದಿನವು ಉತ್ತಮವಾಗಿರಲಿದೆ. ಉದ್ಯೋಗಸ್ಥರಿಗೆ ಈ ದಿನ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 24
ಅದೃಷ್ಟದ ಸಮಯ: ಮಧ್ಯಾಹ್ನ 1:30 ರಿಂದ ಸಂಜೆ 4:30 ರವರೆಗೆ
ಕುಂಭ ರಾಶಿ
ಇಂದು ದಿನದ ಆರಂಭ ತುಂಬಾ ಚೆನ್ನಾಗಿರಲಿದೆ. ತುಂಬಾ ಧನಾತ್ಮಕವಾಗಿರುತ್ತೀರಿ. ನಿಮ್ಮ ಕೆಲಸದ ಕಡೆ ಗಮನಹರಿಸುತ್ತೀರಿ, ಕುಟುಂಬ ಜೀವನದಲ್ಲಿ ಮೂರನೆಯವರ ಹಸ್ತಕ್ಷೇಪ ಮಾಡದಂತೆ ಸಲಹೆ ನೀಡಲಾಗಿದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 8
ಅದೃಷ್ಟದ ಸಮಯ: ಬೆಳಿಗ್ಗೆ 5:05 ರಿಂದ 7:25 ರವರೆಗೆ
ಮೀನ ರಾಶಿ
ಈ ದಿನ ಆರ್ಥಿಕ ಪರಿಸ್ಥಿತಿ ಹದಗೆಡುವ ಲಕ್ಷಣಗಳಿವೆ. ತರಾತುರಿಯಲ್ಲಿ ತೆಗೆದುಕೊಂಡ ತಪ್ಪು ನಿರ್ಧಾರಗಳ ಫಲಿತಾಂಶಗಳನ್ನು ನೀವು ಎದುರಿಸಬೇಕಾಗಬಹುದು. ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನಗಳ ವಿಫಲತೆಯಿಂದಾಗಿ, ನಿಮ್ಮ ಆತ್ಮವಿಶ್ವಾಸ ಕುಸಿಯುತ್ತದೆ. ಆದರೆ ನೀವು ಧನಾತ್ಮಕವಾಗಿ ಇರಬೇಕು.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ಸಂಜೆ 7 ರವರೆಗೆ



Click it and Unblock the Notifications