Latest Updates
-
ಅಬ್ಬಬ್ಬಾ ಎಂಥಾ ರುಚಿ ಈ ಈರುಳ್ಳಿ ಮಂಚೂರಿಯನ್: ನೀವೂ ಕೂಡ ಟ್ರೈ ಮಾಡಿ -
ಮಾರ್ಚ್ನಲ್ಲಿ ಕಾಳಸರ್ಪ ಯೋಗ: ಈ ರಾಶಿಯವರಿಗೆ ಯೋಗದಿಂದ ಇದೆ ದೊಡ್ಡ ಲಾಭ! -
ದೇಹದಲ್ಲಿ ರಕ್ತ ಕಡಿಮೆ ಆಗಿದ್ರೆ ಈ ಎಳ್ಳುಂಡೆ ಮಾಡಿ: ತಿಂಗಳ ಕಾಲ ಇಟ್ಟು ಸವಿಯಬಹುದು! -
ಕರ್ನಾಟಕ ಬಜೆಟ್ 2026: ಆರೋಗ್ಯ ವಲಯಕ್ಕೆ ಬಂಪರ್, ಹೊಸ ಯೋಜನೆಗಳೇನು ನೋಡಿ! -
ನಾಳೆ ಸೂರ್ಯ-ಬುಧ ಸಂಯೋಗ: ಬುಧಾದಿತ್ಯ ಯೋಗದಿಂದ ಈ ರಾಶಿಯವರ ಬದುಕಲ್ಲಿ ಬೆಳಕು! -
ತೂಕ ಇಳಿಸಲು ಪೇಪರ್ ಅಷ್ಟು ತೆಳುವಾದ ರಾಗಿ ದೋಸೆ ಮಾಡಿ! -
ಜೀವನದಲ್ಲಿ ಮಹತ್ವದ ಬದಲಾವಣೆ, ವೈವಾಹಿಕ ಯೋಗ! ಕೊಂಚ ಒತ್ತಡ, ತಾಳ್ಮೆ ಇರಲಿ -
March 06 Horoscope: ಸಾಲ ನೀಡುವಾಗ ಹತ್ತು ಬಾರಿ ಆಲೋಚಿಸಿ! -
ಮೈದಾ, ಮೊಟ್ಟೆ ಎರಡೂ ಬೇಡ! ಈ ಹೊಸ ರುಚಿಯ ಕೇಕ್ ಮಾಡಿ ನೋಡಿ.. ಶುಗರ್ ಇರುವವರು ತಿನ್ನಬಹುದು -
ಉದ್ದು ಬೇಡ 1 ಕಪ್ ರವೆ ಇದ್ರೆ ಥಟ್ ಅಂತ ವಡೆ ಮಾಡಿಕೊಳ್ಳಿ: ಬ್ರೇಕ್ಫಾಸ್ಟ್ಗೆ ಇದು ಬೆಸ್ಟ್ ರೆಸಿಪಿ!
Horoscope Today 27 July: ಜುಲೈ 27 ಈ ದಿನ ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಜುಲೈ 27ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ಉತ್ತರಾಯಣ
ಋತು: ವಸಂತ
ಮಾಸ: ಆಷಾಢ
ಪಕ್ಷ: ಶುಕ್ಲಪಕ್ಷ
ತಿಥಿ: ನವಮಿ
ನಕ್ಷತ್ರ: 02:23ರವರೆಗೆ ಹಸ್ತಾ ನಂತರ ಚಿತ್ರ
ರಾಹುಕಾಲ: ಮಧ್ಯಾಹ್ನ 03:36ರಿಂದ 05:13ರವರೆಗೆ
ಮೇಷ ರಾಶಿ
ಮೇಷ ರಾಶಿವರಿಗೆ ಈ ದಿನ ಅನುಕೂಲಕರವಾಗಿದೆ. ಪ್ರೇಮಿಗಳಿಗೆ ಈ ದಿನ ರೊಮ್ಯಾಂಟಿಕ್ ಆಗಿರಲಿದೆ. ಇನ್ನು ಇತರರನ್ನು ಮೆಚ್ಚಿಸಲು ತುಂಬಾ ಖರ್ಚು ಮಾಡಬೇಡಿ. ಉಳಿತಾಯದ ಕಡೆ ಹೆಚ್ಚು ಗಮನ ಹರಿಸಿದರೆ ಉತ್ತಮ. ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಚಿಂತೆ ಮಾಡಬೇಡಿ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಬೆಳಿಗ್ಗೆ 8 ರಿಂದ ಮಧ್ಯಾಹ್ನ 12 ರವರೆಗೆ

ವೃಷಭ ರಾಶಿ
ಇಂದು ಸಂಬಂಧದ ವಿಷಯದಲ್ಲಿ ಏರಳಿತಗಳಿಂದ ಕೂಡಿರಲಿದೆ. ಕುಟುಂಬದಲ್ಲಿ ಅಥವಾ ನಿಮ್ಮ ಸಂಗಾತಿ ಬಳಿ ಭಿನ್ನಾಭಿಪ್ರಾಯದಿಂದ ಸಮಸ್ಯೆಗಳು ಹೆಚ್ಚಾಗಬಹುದು, ಅಂತಹ ಪರಿಸ್ಥಿತಿಯಲ್ಲಿ, ನೀವು ತುಂಬಾ ಸಮತೋಲಿತವಾಗಿ ವರ್ತಿಸುವಂತೆ ಸಲಹೆ ನೀಡಲಾಗಿದೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರಲಿದೆ. ನೀವು ಹೊಸ ಆದಾಯದ ಮೂಲವನ್ನು ಹುಡುಕುತ್ತಿದ್ದರೆ, ನಿಮ್ಮ ಪ್ರಯತ್ನಗಳನ್ನು ಮತ್ತಷ್ಟು ಚುರುಕುಗೊಳಿಸಿ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ:1
ಅದೃಷ್ಟದ ಸಮಯ: ಸಂಜೆ 5:15 ರಿಂದ 8:15 ರವರೆಗೆ
ಮಿಥುನ ರಾಶಿ
ನಿಮ್ಮ ಸಂಬಮಧ ಚೆನ್ನಾಗಿರಲಿದೆ. ನೀವು ಅವಿವಾಹಿತರಾಗಿದ್ದರೆ ನಿಮ್ಮ ಮದುವೆ ಬಗ್ಗೆ ಮನೆಯಲ್ಲಿ ಚರ್ಚಿಸಬಹುದು. ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿದೆ. ಹಣಕ್ಕೆ ಸಂಬಂಧಿಸಿದ ಚಿಂತೆ ದೂರವಾಗುವುದು. ಹಣಕ್ಕೆ ಸಂಬಂಧಿಸಿದ ನಿಮ್ಮ ಪ್ರಯತ್ನ ಯಶಸ್ವಿಯಾಗಲಿದೆ. ನಿಮ್ಮ ಆರೋಗ್ಯ ದುರ್ಬಲವಾಗಿದ್ದರೆ ನಿರ್ಲಕ್ಷ್ಯ ಮಾಡಬೇಡಿ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: ಬೆಳಿಗ್ಗೆ 4:30 ರಿಂದ 11:30 ರವರೆಗೆ
ಕರ್ಕ ರಾಶಿ
ಹಳೆಯ ವಿಷಯಗಳ ಬಗ್ಗೆ ಯೋಚಿಸುತ್ತಾ ನಿಮ್ಮ ಅಮೂಲ್ಯ ಸಮಯವನ್ನು ವ್ಯರ್ಥ ಮಾಡಬೇಡಿ. ನಿಮ್ಮ ಸಮಯವನ್ನು ಸದುಪಯೋಗಪಡಿಸಿಕೊಂಡು ಮುಂದುವರಿಯಿರಿ. ಕೆಲಸದ ಜೊತೆಗೆ ನಿಮ್ಮ ಪ್ರೀತಿಪಾತ್ರರ ಬಗ್ಗೆಯೂ ಗಮನ ಹರಿಸಿ. ನಿಮ್ಮ ಅಸಡ್ಡೆ ವರ್ತನೆ ನಿಮ್ಮ ಆಪ್ತರ ಮನಸ್ಸು ನೋಯಿಸಬಹುದು. ಹಣದ ವಿಷಯದಲ್ಲಿ, ದಿನವು ಮಿಶ್ರಫಲ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 27
ಅದೃಷ್ಟದ ಸಮಯ: ಮಧ್ಯಾಹ್ನ 12:50 ರಿಂದ ಮಧ್ಯಾಹ್ನ 3 ರವರೆಗೆ
ಸಿಂಹ ರಾಶಿ
ಸಂಗಾತಿಯೊಂದಿಗಿನ ಸಂಬಂಧದಲ್ಲಿ ಉತ್ತಮ ಹೊಂದಾಣಿಕೆ ಇರಲಿದೆ. ಪ್ರೇಮಿಗಳಿಗೆ ಪ್ರಣಯ ಜೀವನದಲ್ಲಿ ಕೆಲವು ಏರುಪೇರುಗಳ ಸಾಧ್ಯತೆ ಇದೆ. ವೈವಾಹಿಕ ಜೀವನದ ಬಗ್ಗೆ ಹೇಳುವುದಾದರೆ ಸಂಗಾತಿಯನ್ನು ಅನಗತ್ಯವಾಗಿ ಅನುಮಾನಿಸಬೇಡಿ. ಆರ್ಥಿಕ ದೃಷ್ಟಿಯಿಂದ ಈ ದಿನ ನಿಮಗೆ ಒಳ್ಳೆಯದಿದೆ. ಆರೋಗ್ಯದಲ್ಲಿ ಸುಧಾರಣೆಯ ಬಲವಾದ ಸಾಧ್ಯತೆಯಿದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಬೆಳಿಗ್ಗೆ 6:35 ರಿಂದ 11 ರವರೆಗೆ
ಕನ್ಯಾ ರಾಶಿ
ಇಂದು ಹಣದ ವಿಷಯದಲ್ಲಿ ತುಂಬಾ ದುಬಾರಿಯಾಗಲಿದೆ. ದೈನಂದಿನ ಖರ್ಚುಗಳನ್ನು ಪೂರೈಸುವಲ್ಲಿ ನೀವು ಬಹಳಷ್ಟು ತೊಂದರೆಗಳನ್ನು ಎದುರಿಸಬಹುದು. ಜೀವನ ಸಂಗಾತಿಯ ಪ್ರೀತಿ ಮತ್ತು ಬೆಂಬಲ ಸಿಗಲಿದೆ. ಪ್ರತಿಕೂಲ ಸಂದರ್ಭಗಳಲ್ಲಿ, ನಿಮ್ಮ ಆತ್ಮೀಯರು ಹೆಗಲಿಗೆ ಹೆಗಲು ಕೊಟ್ಟು ನಡೆಯುತ್ತಾರೆ. ಪ್ರಣಯ ಜೀವನದಲ್ಲಿ ಸ್ಥಿರತೆ ಇರಲಿದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 17
ಅದೃಷ್ಟದ ಸಮಯ: ಸಂಜೆ 6 ರಿಂದ 9:05 ರವರೆಗೆ
ತುಲಾ ರಾಶಿ
ನಿಮ್ಮ ಜೀವನದಲ್ಲಿ ಧನಾತ್ಮಕ ಬದಲಾವಣೆ ಆಗಬಹುದು. ಈ ದಿನ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ನೀವು ಯಾರಿಗಾದರೂ ಪ್ರೀತಿ ಪ್ರಪೋಸ್ ಮಾಡಬೇಕೆಂದಿದ್ದರೆ ಈ ದಿನ ಚೆನ್ನಾಗಿದೆ. ಹಣದ ವಿಷಯದಲ್ಲೂ ಈ ದಿನ ಉತ್ತಮವಾಗಿದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಬೆಳಿಗ್ಗೆ 10:10 ರಿಂದ ಮಧ್ಯಾಹ್ನ 12:50 ರವರೆಗೆ
ವೃಶ್ಚಿಕ ರಾಶಿ
ವಿದ್ಯಾಭ್ಯಾಸ ಮುಗಿಸಿ ಉದ್ಯೋಗ ಹುಡುಕುತ್ತಿರುವ ವಿದ್ಯಾರ್ಥಿಗಳಿಗೆ ಇಂದು ಅದೃಷ್ಟದ ದಿನವಾಗಲಿದೆ. ನೀವು ದೊಡ್ಡ ಕಂಪನಿಯಿಂದ ಉತ್ತಮ ಆಫರ್ ಪಡೆಯಬಹುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ಇರಲಿದೆ. ಕೌಟುಂಬಿಕ ಜೀವನದಲ್ಲಿ ಖುಷಿ ಇರಲಿದೆ. ಆರ್ಥಿಕ ದೃಷ್ಟಿಯಿಂದ ನೋಡುವುದದರೆ ಈ ದಿನ ಸಾಮಾನ್ಯವಾಗಿದೆ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 26
ಅದೃಷ್ಟದ ಸಮಯ: ಸಂಜೆ 4:45 ರಿಂದ ರಾತ್ರಿ 8 ರವರೆಗೆ
ಧನು ರಾಶಿ
ಆರೋಗ್ಯ ಸಂಬಂಧಿ ಸಮಸ್ಯೆ ಇದ್ದರೆ ನೀವು ಎಚ್ಚರಿಕೆಯಿಂದ ಇರಬೇಕು. ನೀವು ಉತ್ತಮ ವೈದ್ಯರನ್ನು ಸಂಪರ್ಕಿಸಿ. ಸಂಗಾತಿಯೊಂದಿಗೆ ಕಲಹ ಉಂಟಾಗುವ ಸಾಧ್ಯತೆ ಇದೆ. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ಕೋಪವನ್ನು ನಿಯಂತ್ರಿಸಲು ಸಲಹೆ ನೀಡಲಾಗಿದೆ, ಇಲ್ಲದಿದ್ದರೆ ನಿಮ್ಮ ಮನಃಶಾಂತಿ ಹಾಳಾಗುವುದು. ನೀವು ನಕಾರಾತ್ಮಕ ಚಿಂತೆಯಿಂದ ದೂರವಿರಿ.
ಅದೃಷ್ಟದ ಬಣ್ಣ: ಬೂದು
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಬೆಳಿಗ್ಗೆ 4:15 ರಿಂದ 9:15 ರವರೆಗೆ
ಮಕರ ರಾಶಿ
ಸಂಗಾತಿ ಹಾಗೂ ನಿಮ್ಮ ನಡುವೆ ಭಿನ್ನಾಭಿಪ್ರಾಯ ಇರಬಹುದು. ಪ್ರೇಮಿಗಳಿಗೆ ಈ ದಿನ ಅನುಕೂಲಕರವಲ್ಲ, ಸಣ್ಣ ವಿಚಾರಕ್ಕೆ ನಿಮ್ಮ ನಡುವೆ ವಾಗ್ವಾದ ಉಂಟಾಗಬಹುದು. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು, ನಿಮ್ಮ ನಿರ್ಧಾರಗಳನ್ನು ನೀವು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳಬೇಕು.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ ಮಧ್ಯಾಹ್ನ 3 ರವರೆಗೆ
ಕುಂಭ ರಾಶಿ
ಇಂದು ನಿಮಗೆ ತುಂಬಾ ರೋಮ್ಯಾಂಟಿಕ್ ಆಗಿರಲಿದೆ. ನಿಮ್ಮ ಸಂಗಾತಿಯೊಂದಿಗೆ ನೀವು ಕೆಲವು ಸುಂದರವಾದ ಸ್ಥಳಕ್ಕೆ ಪ್ರವಾಸಕ್ಕೆ ಹೋಗಲು ತೀರ್ಮಾನಿಸಬಹುದು. ನಿಮ್ಮ ಸಂಗಾತಿಯೊಂದಿಗೆ ನಿಮ್ಮ ಆಲೋಚನೆಗಳನ್ನು ಮುಕ್ತವಾಗಿ ಹಂಚಿಕೊಳ್ಳಲು ನಿಮಗೆ ಸಾಧ್ಯವಾಗಲಿದೆ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 15
ಅದೃಷ್ಟದ ಸಮಯ: ಸಂಜೆ 7 ರಿಂದ 9:15 ರವರೆಗೆ
ಮೀನ ರಾಶಿ
ಸಂಬಂಧದ ಬಗ್ಗೆ ಹೇಳುವುದಾದರೆ ಚಿಕ್ಕ ವಿಷಯ ದೊಡ್ಡದು ಮಾಡಲು ಹೋಗಬೇಡಿ, ಇಲ್ಲದಿದ್ದರೆ ನಿಮ್ಮ ಸಂಬಂಧವು ಹದಗೆಡಬಹುದು. ದಿನದ ಎರಡನೇ ಭಾಗದಲ್ಲಿ ಪ್ರಯಾಣ ಮಾಡಬಹುದು. ಹಣಕಾಸಿನ ಸ್ಥಿತಿ ಚೆನ್ನಾಗಿರಲಿದೆ, ಆರೋಗ್ಯದ ಬಗ್ಗೆ ಹೇಳುವುದಾದರೆ ಮಾನಸಿಕ ಒತ್ತಡವಿರಬಹುದು.
ಅದೃಷ್ಟದ ಬಣ್ಣ: ಕಡು ಹಸಿರು
ಅದೃಷ್ಟದ ಸಂಖ್ಯೆ: 19
ಅದೃಷ್ಟದ ಸಮಯ: ಬೆಳಿಗ್ಗೆ 7:20 ರಿಂದ ಮಧ್ಯಾಹ್ನ 12:20 ರವರೆಗೆ



Click it and Unblock the Notifications












