Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಜುಲೈ 30ರ ದಿನ ಭವಿಷ್ಯ: ಈ ದಿನ 12 ರಾಶಿಗಳಿಗೆ ಹೇಗಿರಲಿದೆ?
ಶುಭೋದಯ.....ಗ್ರಹಗತಿಗಳ ಪ್ರಕಾರ ಈ ದಿನ ಹೇಗಿದೆ ಎಂದು ನೋಡೋಣ ಬನ್ನಿ....
ಮೇಷ ರಾಶಿ
ಈ ರಾಶಿಯ ವ್ಯಾಪಾರಿಗಳಿಗೆ ಇಂದು ಅತ್ಯಂತ ಮಂಗಳಕರ ದಿನವಾಗಿದೆ. ನೀವು ಉತ್ತಮ ಅವಕಾಶವನ್ನು ಪಡೆಯಬಹುದು, ಇದರಿಂದ ನಿಮ್ಮ ವ್ಯವಹಾರ ಮತ್ತಷ್ಟು ಎತ್ತರಕ್ಕೆ ಬೆಳೆಯಲಿದೆ. ವೈವಾಹಿಕ ಜೀವನದಲ್ಲಿ ಖುಷಿ ಇರಲಿದೆ, ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಮಧ್ಯಾಹ್ನ 12:50 ರಿಂದ 1:55 ರವರೆಗೆ

ವೃಷಭ ರಾಶಿ
ಉದ್ಯೋಗಸ್ಥರಿಗೆ ಇಂದು ಏರಿಳಿತಗಳಿಂದ ಕೂಡಿರಲಿದೆ. ಬಾಕಿಯುಳಿಸಿದ ಕೆಲಸದ ಒತ್ತಡ ಹೆಚ್ಚಾಗಲಿದೆ. ಈ ಸಮಯದಲ್ಲಿ ನಿಮ್ಮ ಖರ್ಚು ಹೆಚ್ಚಾಗುವುದು. ಮ್ಮ ಬಜೆಟ್ ಅನ್ನು ಗಮನದಲ್ಲಿಟ್ಟುಕೊಂಡು ಖರ್ಚು ಮಾಡಲು ಸಲಹೆ ನೀಡಲಾಗಿದೆ. ಆರೋಗ್ಯದ ವಿಷಯದಲ್ಲಿ ಈ ದಿನ ನಿಮಗೆ ಮಿಶ್ರಫಲ. ಆರೋಗ್ಯ ಸಮಸ್ಯೆವಿದ್ದರೆ ನಿರ್ಲಕ್ಷ್ಯ ಮಾಡಬೇಡಿ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 8 ರವರೆಗೆ
ಮಿಥುನ ರಾಶಿ
ಈ ದಿನ ಮಾಡುವ ಪ್ರಯಾಣ ತುಂಬಾ ಮುಖ್ಯವಾಗಲಿದೆ. ಉದ್ಯೋಗ ಅಥವಾ ವ್ಯವಹಾರವಾಗಿರಲಿ ಈ ದಿನ ನಿಮಗೆ ಶುಭವಾಗಿದೆ. ನಿಮ್ಮ ಕಠಿಣ ಪರಿಶ್ರಮಕ್ಕೆ ಸರಿಯಾದ ಫಲಿತಾಂಶವನ್ನು ಪಡೆಯಲು ಸಾಧ್ಯವಾಗುವುದು. ಆರ್ಥಿಕ ಪರಿಸ್ಥಿತಿ ಚೆನ್ನಾಗಿರಲಿದೆ. ನೀವು ಹಣ ಸಂಪಾದಿಸಲು ಉತ್ತಮ ಅವಕಾಶವನ್ನು ಪಡೆಯಬಹುದು. ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಗಾಢ ಕೆಂಪು
ಅದೃಷ್ಟದ ಸಂಖ್ಯೆ: 21
ಅದೃಷ್ಟದ ಸಮಯ: ಬೆಳಗ್ಗೆ 4 ರಿಂದ 9:20 ರವರೆಗೆ
ಕರ್ಕ ರಾಶಿ
ಪ್ರೇಮಿಗಳಿಗೆ ಈ ದಿನ ತುಂಬಾ ವಿಶೇಷವಾಗಿರಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಹಾಗಂತ ಅತಿಯಾಗಿ ಖರ್ಚು ಮಾಡಬೇಡಿ. ಕೆಲಸಕ್ಕೆ ಸಂಬಂಧಿಸಿದ ನಿಮ್ಮ ಪ್ರಯತ್ನ ಮತ್ತಷ್ಟು ಚುರುಕು ಮಾಡಿ.
ಅದೃಷ್ಟದ ಬಣ್ಣ: ಗಾಢ ಕೆಂಪು
ಅದೃಷ್ಟದ ಸಂಖ್ಯೆ: 21
ಅದೃಷ್ಟದ ಸಮಯ: ಬೆಳಗ್ಗೆ 4 ರಿಂದ 9:20 ರವರೆಗೆ
ಸಿಂಹ ರಾಶಿ
ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ ಈ ದಿನ ದೊಡ್ಡ ಆರ್ಥಿಕ ಲಾಭ ಪಡೆಯಬಹುದು. ವೈವಾಹಿಕ ಜೀವನದಲ್ಲಿ ಸ್ವಲ್ಪ ಏರುಪೇರಾಗಲಿದೆ. ಸಣ್ಣ ವಿಚಾರದಲ್ಲಿ ಸಂಗಾತಿಯೊಂದಿಗೆ ಮನಸ್ತಾಪ ಉಂಟಾಗುವುದು. ಅತಿಯಾದ ಕೋಪ ಹಾಗೂ ಒತ್ತಡದಿಂದ ಆರೋಗ್ಯ ಹಾಳಾಗಬಹುದು ಜಾಗ್ರತೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 30
ಅದೃಷ್ಟದ ಸಮಯ: ಸಂಜೆ 4 ರಿಂದ 6:45 ರವರೆಗೆ
ಕನ್ಯಾ ರಾಶಿ
ನೀವು ಇಂದು ಹಣಕ್ಕೆ ಸಂಬಂಧಿಸಿದ ಯಾವುದೇ ವ್ಯವಹಾರವನ್ನು ಮಾಡುವುದಾದರೆ ತುಂಬಾನೇ ಜಾಗ್ರತೆ, ಯಾರನ್ನೂ ಕುರುಡಾಗಿ ನಂಬಬೇಡಿ. ಸಂಗಾತಿಯ ಭಾವನೆಗಳನ್ನು ಗೌರವಿಸಿ. ನಿಮ್ಮ ಪ್ರೀತಿಪಾತ್ರರೊಂದಿಗೆ ನೀವು ಸೌಜನ್ಯದಿಂದ ವರ್ತಿಸಬೇಕು. ಕೆಲಸದ ವಿಷಯದಲ್ಲಿ ಈ ದಿನ ಮಿಶ್ರಫಲ. ಆರೋಗ್ಯಕ್ಕಾಗಿ ಆಹಾರಕ್ರಮದ ಕಡೆ ಗಮನಹರಿಸಿ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 24
ಅದೃಷ್ಟದ ಸಮಯ: ಸಂಜೆ 4:25 ರಿಂದ ರಾತ್ರಿ 8:45 ರವರೆಗೆ
ತುಲಾ ರಾಶಿ
ಉದ್ಯಮಿಗಳಿಗೆ ಈ ದಿನ ಶುಭವಾಗಿದೆ, ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಮತ್ತಷ್ಟು ಸುಧಾರಣೆಯಾಗಲಿದೆ, ಉದ್ಯೋಗಸ್ಥರು ಪ್ರಗತಿ ಸಾಧಿಸಲು ಮತ್ತಷ್ಟು ಶ್ರಮಿಸಬೇಕು. ಇಂದು ಸಂಗಾತಿಯ ಮನಸ್ಥಿತಿ ಉತ್ತಮವಾಗಿರುವುದಿಲ್ಲ. ನಿಮ್ಮ ನಡುವಿನ ಭಿನ್ನಾಭಿಪ್ರಾಉ ಹೆಚ್ಚಾಗಬಹುದು. ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು, ಆರೋಗ್ಯ ವಿಚಾರದಲ್ಲಿ ನಿರ್ಲಕ್ಷ್ಯ ಬೇಡ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 8
ಅದೃಷ್ಟದ ಸಮಯ: ಬೆಳಿಗ್ಗೆ 7:20 ರಿಂದ 11:15 ರವರೆಗೆ
ವೃಶ್ಚಿಕ ರಾಶಿ
ಕಚೇರಿಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ಇಂದು ನೀವು ನಿಮ್ಮ ಕೆಲಸವನ್ನು ಶ್ರದ್ಧೆಯಿಂದ ಮಾಡಲು ಸಾಧ್ಯವಾಗುತ್ತದೆ. ನೀವು ಯಾವುದೇ ಕಷ್ಟಕರವಾದ ಕೆಲಸವನ್ನು ಬಹಳ ಬೇಗ ಪೂರ್ಣಗೊಳಿಸಲು ಸಾಧ್ಯವಾಗುವುದು. ಹಣದ ವಿಷಯದಲ್ಲಿ ಈ ದಿನವು ದುಬಾರಿಯಾಗಲಿದೆ. ಕೌಟುಂಬಿಕ ಜೀವನದಲ್ಲಿ ಖುಷಿ ಇರಲಿದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 16
ಅದೃಷ್ಟದ ಸಮಯ: ಸಂಜೆ 6 ರಿಂದ ರಾತ್ರಿ 8 ರವರೆಗೆ
ಧನು ರಾಶಿ
ನಿಮ್ಮ ಸಂಗಾತಿಯೊಂದಿಗೆ ನೀವು ಕೆಲವು ದಿನಗಳಿಂದ ಮನಸ್ತಾಪವನ್ನು ಹೊಂದಿದ್ದರೆ, ಈ ದಿನ ನಿಮ್ಮಿಬ್ಬರ ನಡುವೆ ಎಲ್ಲವೂ ಸರಿಯಾಗುವುದು, ಆದರೆ ನಿಮ್ಮ ಕೋಪದ ಸ್ವಭಾವವನ್ನು ನಿಯಂತ್ರಿಸುವುದು ಉತ್ತಮ. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನೀವು ಹೊಸ ಆದಾಯದ ಮೂಲವನ್ನು ಹುಡುಕುತ್ತಿದ್ದರೆ, ನಿಮ್ಮ ಪ್ರಯತ್ನಗಳನ್ನು ಮತ್ತಷ್ಟು ಚುರುಕುಗೊಳಿಸಿ. ಕೆಲಸದ ವಿಷಯದಲ್ಲಿ ಈ ದಿನವು ಸರಾಸರಿಯಾಗಿರುತ್ತದೆ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 25
ಅದೃಷ್ಟದ ಸಮಯ: ಬೆಳಿಗ್ಗೆ 4:15 ರಿಂದ 9:00 ರವರೆಗೆ
ಮಕರ ರಾಶಿ
ವಿದ್ಯಾರ್ಥಿಗಳಿಗೆ ಇಂದು ಅತ್ಯಂತ ಮಹತ್ವದ ದಿನವಾಗಲಿದೆ. ನಿಮ್ಮ ಅಧ್ಯಯನದಲ್ಲಿ ಯಾವುದೇ ಅಡಚಣೆ ಉಂಟಾದರೆ, ಆ ಸಮಸ್ಯೆಯು ಕೊನೆಗೊಳ್ಳಬಹುದು. ಹಣದ ಕೊರತೆಯಿಂದ ಬಾಕಿಯುಳಿದ ಕೆಲಸ ಪೂರ್ಣವಾಗುವ ಸಾಧ್ಯತೆಯಿದೆ. ಇದರಿಂದ ಆರ್ಥಿಕ ಲಾಭವನ್ನೂ ಪಡೆಯಬಹುದು. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಉತ್ತಮ ಹೊಂದಾಣಿಕೆ ಇರಲಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಸಂಜೆ 5 ರಿಂದ ಸಂಜೆ 7 ರವರೆಗೆ
ಕುಂಭ ರಾಶಿ
ಆರೋಗ್ಯದಲ್ಲಿ ಹಠಾತ್ ಕುಸಿತವು ನಿಮ್ಮ ತೊಂದರೆಗಳನ್ನು ಹೆಚ್ಚಿಸಬಹುದು. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಜೀವನ ಸಂಗಾತಿಯ ಪ್ರೀತಿ ಮತ್ತು ಬೆಂಬಲ ಸಿಗಲಿದೆ. ಹಣದ ವಿಷಯದಲ್ಲಿ ಈ ದಿನ ಉತ್ತಮವಾಗಿದೆ, ಬರಬೇಕಾಗಿರುವ ಹಣ ಮರಳಿ ಬರಲಿದೆ. ಹಣಕ್ಕೆ ಸಂಬಂಧಿಸಿದ ಪ್ರಯತ್ನಕ್ಕೆ ಉತ್ತಮ ಫಲ ಸಿಗಲಿದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ 2:55 ರವರೆಗೆ
ಮೀನ ರಾಶಿ
ಪ್ರೇಮ ಜೀವನದಲ್ಲಿ ನಡೆಯುತ್ತಿರುವ ಕಲಹಗಳು ದೂರವಾಗುತ್ತವೆ. ಇಂದು ನೀವು ನಿಮ್ಮ ಸಂಗಾತಿಯೊಂದಿಗೆ ಸಂಬಂಧ ಉತ್ತಮವಾಗಲಿದೆ, ಹಣದ ವಿಷಯದಲ್ಲಿ, ದಿನವು ಮಿಶ್ರಫಲ. ಅತಿಯಾಗಿ ಖರ್ಚು ಮಾಡಲು ಹೋಗಬೇಡಿ. ನಿಮ್ಮ ಕೆಲಸಕ್ಕೆ ಸಂಬಂಧಿಸಿದಂತೆ ಇಂದು ಕೆಲಸದ ಹೊರೆ ಹೆಚ್ಚು ಇರಲಿದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 18
ಅದೃಷ್ಟದ ಸಮಯ: ಬೆಳಿಗ್ಗೆ 7:50 ರಿಂದ ಮಧ್ಯಾಹ್ನ 12 ರವರೆಗೆ



Click it and Unblock the Notifications
