Latest Updates
-
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್! -
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ! -
ಮಳೆಗಾಲದ ರಜೆ: ವರ್ಕ್ ಫ್ರಮ್ ಹೋಮ್ ಪೋಷಕರಿಗೆ ಮಕ್ಕಳನ್ನು ನಿಭಾಯಿಸುವುದು ಹೇಗೆ? ಇಲ್ಲಿದೆ ಸರಳ ಟಿಪ್ಸ್ -
ಮಳೆಗಾಲದಲ್ಲಿ ನಿಮ್ಮ ಮನೆಯ ಗಿಡಗಳು ಸಾಯುತ್ತಿವೆಯೇ? ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಮಳೆಗಾಲದಲ್ಲಿ ಕರೆಂಟ್ ಹೋದರೆ ಫ್ರಿಜ್ ಆಹಾರ ಹಾಳಾಗುತ್ತಾ? ಸುರಕ್ಷಿತವಾಗಿಡಲು ಇಲ್ಲಿವೆ ಸರಳ ಟಿಪ್ಸ್ -
ಐಟಿಆರ್ ಸಲ್ಲಿಕೆಗೆ ಇನ್ನು 4 ದಿನ ಬಾಕಿ: ಭಾರಿ ದಂಡದಿಂದ ಪಾರಾಗಲು ಈ ಕೆಲಸಗಳನ್ನು ಇಂದೇ ಮಾಡಿ! -
IMD ಮಳೆ ಎಚ್ಚರಿಕೆ: ಹೊರಗೆ ಹೋಗಬೇಡಿ, ಮನೆಯಲ್ಲೇ ಈ 12 ನಿಮಿಷದ ವರ್ಕೌಟ್ ಮಾಡಿ ಫಿಟ್ ಆಗಿರಿ!
ಜುಲೈ 3 ರಾಶಿಫಲ: ಕರ್ಕ, ಮಕರದವರೆಗೆ ಧನಲಾಭ, ಉಳಿದ ರಾಶಿಗಳ ರಾಶಿಫಲ ಹೇಗಿದೆ?
ಈ ದಿನ ವೈದಿಕ ಶಾಸ್ತ್ರದ ಪ್ರಕಾರ ದ್ವಾದಶ ರಾಶಿಗಳಿಗೆ ಜುಲೈ 3 ಹೇಗಿರಲಿದೆ ಎಂದು ನೋಡೋಣ:
ಸಂವತ್ಸರ: ಶುಭಕೃತ್
ಆಯನ: ದಕ್ಷಿಣಾಯನ
ಮಾಸ: ಆಷಾಢ
ಪಕ್ಷ: ಶುಕ್ಲಪಕ್ಷ
ತಿಥಿ: ಚತುರ್ದಶಿ
ನಕ್ಷತ್ರ: ಬೆಳಗ್ಗೆ 06:30ರವರೆಗೆ ಅಶ್ಲೇಷ ನಂತರ ಮಘಾ
ರಾಹುಕಾಲ: ಸಂಜೆ 05:13ರಿಂದ 6:50ರವರೆಗೆ
ಮೇಷ ರಾಶಿ
ಇಂದು ನೀವು ಸಣ್ಣ ವಿಷಯಕ್ಕೆ ಮನೆಯ ಸದಸ್ಯರೊಂದಿಗೆ ಜಗಳವಾಡಬಹುದು, ನಿಮ್ಮ ಒರಟು ಮಾತುಗಳನ್ನು ಅವರನ್ನು ನೋಯಿಸದಂತೆ ಎಚ್ಚರವಹಿಸಿ. ಸಂಗಾತಿಯ ದುರ್ಬಲ ಆರೋಗ್ಯವು ನಿಮ್ಮ ಸಮಸ್ಯೆಗಳನ್ನು ಹೆಚ್ಚಿಸಬಹುದು. ಹಣದ ವಿಷಯದಲ್ಲಿ ಈ ದಿನವು ಮಿಶ್ರಫಲ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 15
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ

ವೃಷಭ ರಾಶಿ
ಪ್ರೀತಿಯ ವಿಷಯದಲ್ಲಿ ಇಂದು ನಿಮಗೆ ತುಂಬಾ ವಿಶೇಷವಾಗಿರುತ್ತದೆ. ನಿಮ್ಮ ಪ್ರೇಮಿ ನಿಮ್ಮನ್ನು ಮದುವೆಗೆ ಪ್ರಸ್ತಾಪಿಸಬಹುದು. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನೀವು ದೀರ್ಘಕಾಲ ಪ್ರಯತ್ನಿಸುತ್ತಿದ್ದರೆ ಅದರಲ್ಲಿ ನೀವು ಯಶಸ್ಸನ್ನು ಪಡೆಯಬಹುದು. ಜೀವನ ಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ಗಮನಹರಿಸಿ
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಸಮಯ: ಬೆಳಿಗ್ಗೆ 10:10 ರಿಂದ ಮಧ್ಯಾಹ್ನ 12 ರವರೆಗೆ
ಮಿಥುನ ರಾಶಿ
ಹಣದ ಪರಿಸ್ಥಿತಿ ಉತ್ತಮವಾಗಿರುತ್ತದೆ. ನೀವು ದೊಡ್ಡ ಖರೀದಿಯನ್ನು ಮಾಡಲು ಯೋಜಿಸುತ್ತಿದ್ದರೆ ನೋಡಿಕೊಂಡು ಹಣ ಖರ್ಚು ಮಾಡಲು ನಿಮಗೆ ಸಲಹೆ ನೀಡಲಾಗಿದೆ. ವೈವಾಹಿಕ ಜೀವನ, ಪ್ರೇಮ ಜೀವನದಲ್ಲಿ ಸಮಸ್ಯೆಗಳಿರಬಹುದು. ನಿಮ್ಮ ವೈಯಕ್ತಿಕ ವಿಷಯಗಳಲ್ಲಿ ಮೂರನೇ ವ್ಯಕ್ತಿ ಹಸ್ತಕ್ಷೇಪ ಮಾಡಲು ಬಿಡಬೇಡಿ. ಕೆಲಸದ ಬಗ್ಗೆ ಹೆಚ್ಚು ಚಿಂತಿ ಮಾಡಲು ಹೋಗಬೇಡಿ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಸಂಜೆ 4:30 ರಿಂದ ಸಂಜೆ 7 ರವರೆಗೆ
ಕರ್ಕ ರಾಶಿ
ಇಂದು ನಿಮಗೆ ತುಂಬಾ ಒಳ್ಳೆಯ ದಿನ. ಮಾನಸಿಕವಾಗಿ ನೀವು ತುಂಬಾ ಸದೃಢರಾಗಿರುತ್ತೀರಿ. ನಿಮ್ಮ ಯಾವುದೇ ಕೆಲಸವು ದೀರ್ಘಕಾಲದವರೆಗೆ ಸ್ಥಗಿತಗೊಂಡಿದ್ದರೆ, ಅದು ಇಂದು ಪೂರ್ಣಗೊಳ್ಳುವ ಬಲವಾದ ಸಾಧ್ಯತೆಯಿದೆ. ಜೀವನ ಸಂಗಾತಿಯ ಪ್ರೀತಿ ಮತ್ತು ಬೆಂಬಲ ಸಿಗಲಿದೆ. ನೀವು ಅವಿವಾಹಿತರಾಗಿದ್ದರೆ ಮತ್ತು ನಿಮ್ಮ ಅಪೇಕ್ಷಿತ ಜೀವನ ಸಂಗಾತಿಯನ್ನು ನೀವು ಹುಡುಕುತ್ತಿದ್ದರೆ, ಇಂದು ನಿಮಗೆ ವಿಶೇಷ ದಿನವಾಗಿರುತ್ತದೆ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 21
ಅದೃಷ್ಟದ ಸಮಯ: ಸಂಜೆ 5:15 ರಿಂದ 8:05 ರವರೆಗೆ
ಸಿಂಹ ರಾಶಿ
ಕೆಲಸದ ದೃಷ್ಟಿಯಿಂದ ಇಂದು ನಿಮಗೆ ಬಿಡುವಿಲ್ಲದ ದಿನವಾಗಿರುತ್ತದೆ. ನಿಮ್ಮ ದಿನದ ಯೋಜನೆಗಳನ್ನು ನೀವು ಮುಂಚಿತವಾಗಿ ಮಾಡಿದರೆ ಅದು ಉತ್ತಮವಾಗಿರುತ್ತದೆ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಲಕ್ಷಣಗಳಿವೆ. ನೀವು ಹೊಸ ಆದಾಯದ ಮೂಲವನ್ನು ಪಡೆಯಬಹುದು. ನಿಮ್ಮ ಸಂಗಾತಿಯೊಂದಿಗೆ ನಿಮ್ಮ ಮನಸ್ಸನ್ನು ಹಂಚಿಕೊಳ್ಳಲು ನಿಮಗೆ ಅವಕಾಶ ಸಿಗಲಿದೆ. ನಿಮ್ಮ ಸಂಬಂಧದಲ್ಲಿ ಪ್ರೀತಿ ಮತ್ತು ಮಾಧುರ್ಯ ಹೆಚ್ಚಾಗುತ್ತದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 14
ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ ಸಂಜೆ 5 ರವರೆಗೆ
ಕನ್ಯಾ
ನೀವು ಸರ್ಕಾರಿ ಕೆಲಸ ಮಾಡುತ್ತಿದ್ದರೆ ನೀವು ಬಯಸಿದ ವರ್ಗಾವಣೆಯನ್ನು ಪಡೆಯಬಹುದು. ವೈಯಕ್ತಿಕ ಜೀವನದಲ್ಲಿ ಯಾವುದೇ ಪ್ರಮುಖ ಸಮಸ್ಯೆ ಕೊನೆಗೊಳ್ಳುತ್ತದೆ. ನಿಮ್ಮ ಪ್ರೀತಿಪಾತ್ರರೊಂದಿಗೆ ಉತ್ತಮ ಸಮಯವನ್ನು ಕಳೆಯುವ ಅವಕಾಶವನ್ನು ಪಡೆಯುತ್ತೀರಿ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಇಂದು ನೀವು ಹಣಕ್ಕೆ ಸಂಬಂಧಿಸಿದ ಯಾವುದೇ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಬಹುದು. ಕುಟುಂಬ ಜೀವನ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಬೆಳಿಗ್ಗೆ 4 ರಿಂದ 6:45 ರವರೆಗೆ
ತುಲಾ ರಾಶಿ
ಚರ್ಚೆಯಿಂದ ದೂರವಿರಲು ನಿಮಗೆ ಸಲಹೆ ನೀಡಲಾಗಿದೆ, ಇಲ್ಲದಿದ್ದರೆ ನೀವು ಅನುಪಯುಕ್ತ ವಿಷಯಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ನಿಮ್ಮ ಅಮೂಲ್ಯ ಸಮಯವನ್ನು ವ್ಯರ್ಥ ಮಾಡುತ್ತೀರಿ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ. ನಿಮ್ಮ ಖರ್ಚುಗಳನ್ನು ನೀವು ನಿಯಂತ್ರಿಸಬೇಕಾಗಿದೆ. ನಿಮ್ಮ ಸಂಗಾತಿಯೊಂದಿಗಿನ ಸಂಬಂಧದಲ್ಲಿ ಉತ್ತಮ ಸಮನ್ವಯವನ್ನು ಇರಿಸಿಕೊಳ್ಳಲು ಪ್ರಯತ್ನಿಸಿ. ಆರೋಗ್ಯ ದುರ್ಬಲವಾಗಿದ್ದರೆ ನಿರ್ಲಕ್ಷ್ಯ ಮಾಡಬೇಡಿ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 36
ಅದೃಷ್ಟದ ಸಮಯ: ಮಧ್ಯಾಹ್ನ 3:30 ರಿಂದ ರಾತ್ರಿ 8 ರವರೆಗೆ
ವೃಶ್ಚಿಕ ರಾಶಿ
ಇಂದು ನಿಮಗೆ ತುಂಬಾ ಒತ್ತಡದ ದಿನವಾಗಿರುತ್ತದೆ. ಇದ್ದಕ್ಕಿದ್ದಂತೆ ಕೆಲಸಕ್ಕೆ ಸಂಬಂಧಿಸಿದ ದೀರ್ಘ ಪ್ರಯಾಣವನ್ನು ಮಾಡುವ ಸಾಧ್ಯತೆ ಇದೆ. ಹಣಕಾಸಿನ ಸ್ಥಿತಿ ಹದಗೆಡುವ ಸಾಧ್ಯತೆ ಇದೆ. ಖರ್ಚು ಹೆಚ್ಚಾಗಬಹುದು. ಪ್ರೇಮಿಗಳಿಗೆ ಈ ದಿನ ಚೆನ್ನಾಗಿರಲಿದೆ. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ:1
ಅದೃಷ್ಟದ ಸಮಯ: ಸಂಜೆ 6 ರಿಂದ ರಾತ್ರಿ 9 ರವರೆಗೆ
ಧನು ರಾಶಿ
ನಿಮ್ಮ ಚಿಕ್ಕ ನಿರ್ಧಾರವನ್ನು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳಲು ಸಲಹೆ ನೀಡಲಾಗಿದೆ. ಇತರರ ಮಾತುಕೇಳಿ ತಪ್ಪು ನಿರ್ಧಾರ ತೆಗೆದುಕೊಳ್ಳಬೇಡಿ. ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿದೆ. ಧನು ರಾಶಿಯವರ ಆರ್ಥಿಕ ಸ್ಥಿತಿಯು ಬಲವಾಗಿರುತ್ತದೆ. ಸಂಗಾತಿಯೊಂದಿಗಿನ ಸಂಬಂಧವು ಸುಧಾರಿಸುತ್ತದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 6
ಅದೃಷ್ಟದ ಸಮಯ: ಮಧ್ಯಾಹ್ನ 12:30 ರಿಂದ ಮಧ್ಯಾಹ್ನ 3 ರವರೆಗೆ
ಮಕರ ರಾಶಿ
ಇಂದು ವ್ಯಾಪಾರಸ್ಥರಿಗೆ ಹಠಾತ್ ಲಾಭದ ಪರಿಸ್ಥಿತಿ ಇರುತ್ತದೆ. ಅದೇ ಸಮಯದಲ್ಲಿ, ಉದ್ಯೋಗಿಗಳೂ ಪ್ರಗತಿ ಹೊಂದಬಹುದು. ಹಣಕಾಸಿನ ವಿಚಾರದಲ್ಲಿ ಯಾವುದೇ ಆತುರ ಬೇಡ. ನಿಮ್ಮ ಪ್ರಮುಖ ನಿರ್ಧಾರಗಳನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಿ. ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಆರೋಗ್ಯದ ದೃಷ್ಟಿಯಿಂದ ದಿನವು ಅನುಕೂಲಕರವಾಗಿರುತ್ತದೆ.
ಅದೃಷ್ಟದ ಬಣ್ಣ: ಗಾಢ ಹಳದಿ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಸಂಜೆ 4:15 ರಿಂದ ಸಂಜೆ 7 ರವರೆಗೆ
ಕುಂಭ ರಾಶಿ
ಮನೆಯಲ್ಲಿ ವಯಸ್ಸಾದ ಸದಸ್ಯರಿದ್ದರೆ, ಅವರ ಆರೋಗ್ಯದ ಬಗ್ಗೆ ಕಾಳಜಿವಹಿಸಿ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ನಿಮ್ಮ ವೆಚ್ಚಗಳು ಆದಾಯವನ್ನು ಮೀರಬಹುದು. ಸಂಗಾತಿಯನ್ನು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಿ. ನಿಮ್ಮ ವೈವಾಹಿಕ ಜೀವನದಲ್ಲಿ ಸಂತೋಷ ಇರಲಿದೆ. ಹಳೆಯ ಕಾಯಿಲೆ ಮರುಕಳಿಸಬಹುದು, ಆದ್ದರಿಂದ ಆರೋಗ್ಯದ ಕಡೆಗೆ ಗಮನಹರಿಸಿ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 26
ಅದೃಷ್ಟದ ಸಮಯ: ಸಂಜೆ 6:30 ರಿಂದ 8:20 ರವರೆಗೆ
ಮೀನ ರಾಶಿ
ಈ ದಿನ ಖುಷಿಯಿಂದ ಕಳೆಯುವಿರಿ. ಕೆಲಸದ ದೃಷ್ಟಿಯಿಂದ ಈ ದಿನ ಅನುಕೂಲಕರವಾಗಿದೆ. ನಿಮ್ಮ ಕಠಿಣ ಪರಿಶ್ರಮಕ್ಕೆ ಸರಿಯಾದ ಫಲಿತಾಂಶವನ್ನು ಪಡೆಯಬಹುದು. ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯದ ವಿಚಾರದಲ್ಲಿ ಸ್ವಲ್ಪ ಜಾಗ್ರತೆ ಅಗತ್ಯ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 8
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ಸಂಜೆ 4 ರವರೆಗೆ



Click it and Unblock the Notifications
