ಜೂನ್ 11 ಭಾನುವಾರ: ಈ ದಿನ ದ್ವಾದಶ ರಾಶಿಗಳಗೆ ಹೇಗಿರಲಿದೆ?

ಹೊಸ ದಿನ ಎಲ್ಲರಿಗೂ ಶುಭವಾಗಿರಲಿ..... ವೈದಿಕ ಶಾಸ್ತ್ರದ ಪ್ರಕಾರ ಜೂನ್ 11ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ಉತ್ತರಾಯಣ
ಋತು: ವಸಂತ
ಮಾಸ: ಆಷಾಢ
ಪಕ್ಷ: ಕೃಷ್ಣಪಕ್ಷ
ತಿಥಿ: ಅಷ್ಟಮಿ
ನಕ್ಷತ್ರ: ಪೂರ್ವ ಭಾದ್ರಪದ
ರಾಹುಕಾಲ: ಸಂಜೆ 05:09ರಿಂದ 06:46ರವರೆಗೆ

ಮೇಷ ರಾಶಿ

ನೀವು ಅವಿಭಕ್ತ ಕುಟುಂಬದಲ್ಲಿ ವಾಸಿಸುತ್ತಿದ್ದರೆ ನೀವು ಕುಟುಂಬದ ಸದಸ್ಯರ ನಡುವಿನ ಭಿನ್ನಾಭಿಪ್ರಾಯ ಸರಿದೂಗಿಸಿಕೊಂಡು ಹೋಗಲು ಪ್ರಯತ್ನಿಸಿ. ಮನೆಯಲ್ಲಿ ವಾತಾವರಣ ತುಂಬಾ ಉತ್ತಮವಾಗಿರಲಿದೆ, ಈ ಅವಧಿಯಲ್ಲಿ ಸಂಬಂಧ ಮತ್ತಷ್ಟು ಗಟ್ಟಿಯಾಗಲಿದೆ. ನ್ಯಾಯಾಲಯಕ್ಕೆ ಸಂಬಂಧಿಸಿದ ಪ್ರಕರಣವನ್ನು ನ್ಯಾಯಾಲಯದ ಹೊರಗಡೆ ಪರಿಹರಿಸುವುದು ಒಳ್ಳೆಯದು. ಹಣಕಾಸಿನ ಸ್ಥಿತಿ ಉತ್ತಮವಾಗಿರಲಿದೆ. ಅದು ಉದ್ಯೋಗ ಅಥವಾ ವ್ಯವಹಾರವಾಗಿರಲಿ, ಇಂದು ನಿಮಗೆ ತುಂಬಾ ಒಳ್ಳೆಯ ದಿನವಾಗಿರಲಿದೆ. ನಿಮ್ಮ ಶ್ರಮಕ್ಕೆ ತಕ್ಕ ಫಲಿತಾಂಶಸಿಗಲಿದೆ. ಆರೋಗ್ಯದ ದೃಷ್ಟಿಯಿಂದ ದಿನವು ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 14
ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 9 ರವರೆಗೆ

Dina Bhavishya June 11 2023 Today Rashi Bhavishya, Daily Horoscope in Kannada

ವೃಷಭ ರಾಶಿ

ವ್ಯಾಪಾರಸ್ಥರು ಈ ದಿನ ಆರ್ಥಿಕ ಲಾಭ ಪಡೆಯುತ್ತೀರಿ. ಇಂದು ನೀವು ನಿಮ್ಮ ವ್ಯವಹಾರವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಲು ನಿರ್ಧರಿಸಬಹುದು. ಉದ್ಯೋಗಿಗಳಿಗೆ ಕಚೇರಿಯಲ್ಲಿ ತಮ್ಮ ಸಹೋದ್ಯೋಗಿಗಳೊಂದಿಗೆ ಉತ್ತಮ ಬಾಂಧವ್ಯ ಇಟ್ಟುಕೊಳ್ಳುವಂತೆ ಸಲಹೆ ನೀಡಲಾಗಿದೆ. ಅನಗತ್ಯ ಜಗಳ ತಪ್ಪಿಸಿ. ಹಣಕಾಸಿನ ಸ್ಥಿತಿ ಉತ್ತಮವಾಗಿರಲಿದೆ. ಜೀವನ ಸಂಗಾತಿಯ ಬೆಂಬಲ ಸಿಗಲಿದೆ. ಇಂದು ನೀವು ನಿಮ್ಮ ಪ್ರೀತಿಪಾತ್ರರೊಂದಿಗೆ ಬಹಳ ರೋಮ್ಯಾಂಟಿಕ್ ಆಗಿ ಸಮಯ ಕಳೆಯುತ್ತೀರಿ. ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡು ಬರಲಿದೆ. ನಿಮ್ಮ ಆರ್ಥಿಕ ಪರಿಸ್ಥಿತಿ ವು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ಆರೋಗ್ಯದಲ್ಲಿ ದೊಡ್ಡ ಸುಧಾರಣೆ ಕಂಡುಬರಲಿದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 16
ಅದೃಷ್ಟದ ಸಮಯ: ಬೆಳಿಗ್ಗೆ 4:25 ರಿಂದ ಮಧ್ಯಾಹ್ನ 2 ರವರೆಗೆ

ಮಿಥುನ ರಾಶಿ

ಕೆಲಸದ ವಿಷಯದಲ್ಲಿ ಈ ದಿನವು ಕಾರ್ಯನಿರತವಾಗಿರಲಿದೆ. ಇಂದು ನೀವು ಕೆಲಸಕ್ಕಾಗಿ ತುಂಬಾ ದೂರ ಪ್ರಯಾಣಿಸಬಹುದು ಈ ಪ್ರಯಾಣ ತುಂಬಾ ಮುಖ್ಯವಾಗಲಿದೆ. ಹಣಕಾಸಿನ ಸ್ಥಿತಿ ಹದಗೆಡುವ ಲಕ್ಷಣಗಳಿವೆ. ನಿಮ್ಮ ಹಣವು ಕಳ್ಳತನವಾಗಬಹುದು ಅಥವಾ ಕಳೆದು ಹೋಗಬಹುದು. ಅಂತಹ ಪರಿಸ್ಥಿತಿಯಲ್ಲಿ, ನೀವು ತುಂಬಾ ಜಾಗರೂಕರಾಗಿರಬೇಕು. ಕೌಟುಂಬಿಕ ಜೀವನದಲ್ಲಿ ಸಂತೋಷ ಇರಲಿದೆ. ಪೋಷಕರಿಂದ ಭಾವನಾತ್ಮಕ ಬೆಂಬಲ ಸಿಗಲಿದೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ, ನಿಮ್ಮ ಆಹಾರದಲ್ಲಿ ವ್ಯತ್ಯಾಸ ಮಾಡಬೇಡಿ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 36
ಅದೃಷ್ಟದ ಸಮಯ: ಸಂಜೆ 4 ರಿಂದ ರಾತ್ರಿ 8 ರವರೆಗೆ

ಕರ್ಕ ರಾಶಿ

ಇಂದು ಹಣದ ವಿಷಯದಲ್ಲಿ ಉತ್ತಮ ಲಕ್ಷಣವಿದೆ. ಈ ದಿನ ನಿಮಗೆ ಹಣ ಬರುವ ಸಾಧ್ಯತೆ ಇದೆ. ಇಂದು ನೀವು ನಿಮ್ಮ ಪ್ರೀತಿಪಾತ್ರರ ಅಗತ್ಯತೆಗಳ ಬಗ್ಗೆ ಸಂಪೂರ್ಣ ಗಮನ ಹರಿಸಲು ಸಾಧ್ಯವಾಗುವುದು. ಕಚೇರಿಯಲ್ಲಿ ಸಹೋದ್ಯೋಗಿಗಳ ಮೇಲೆ ಅತಿಯಾಗಿ ಅವಲಂಬಿಸಲು ಹೋಗಬೇಡಿ. ವ್ಯಾಪಾರಿಗಳಿಗೆ ನಿರೀಕ್ಷಿತ ಫಲಿತಾಂಶ ದೊರೆಯಲಿದೆ. ಇಂದು ನೀವು ನಿಮ್ಮ ವ್ಯಾಪಾರ ಯೋಜನೆಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಬಹುದು. ಸಂಗಾತಿಯೊಂದಿಗಿನ ಸಂಬಂಧ ತುಂಬಾ ಚೆನ್ನಾಗಿರಲಿದೆ. ಆರೋಗ್ಯದ ವಿಷಯದಲ್ಲಿ ಈ ದಿನವು ಮಿಶ್ರಫಲ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 44
ಅದೃಷ್ಟದ ಸಮಯ: ಸಂಜೆ 6 ರಿಂದ ರಾತ್ರಿ 9 ರವರೆಗೆ

ಸಿಂಹ ರಾಶಿ

ನೀವು ಸಮಾಜಮುಖಿ ಕೆಲಸದಲ್ಲಿ ಭಾಗಿಯಾಗಿರುತ್ತೀರಿ. ವ್ಯಾಪಾರಸ್ಥರಿಗೆ ಇಂದು ಅತ್ಯಂತ ಮಂಗಳಕರ ದಿನವಾಗಿರಲಿದೆ. ನೀವು ಹೊಸ ಕೆಲಸವನ್ನು ಪ್ರಾರಂಭಿಸಲಿದ್ದರೆ, ನಿಮ್ಮ ದಾರಿಯಲ್ಲಿ ಬರುವ ಅಡೆತಡೆಗಳು ನಿವಾರಣೆಯಾಗಲಿದೆ. ಉದ್ಯೋಗಸ್ಥರ ಎಲ್ಲಾ ಕೆಲಸಗಳು ತುಂಬಾ ಚೆನ್ನಾಗಿ ನಡೆಯಲಿದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಅಷ್ಟು ಸರಿಯಿರಲ್ಲ, ನಿಮ್ಮಲ್ಲಿ ಮನಸ್ತಾಪ ಉಂಟಾಗಬಹುದು. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ಆರೋಗ್ಯದ ಕಡೆ ಗಮನಹರಿಸಿ.
ಅದೃಷ್ಟದ ಬಣ್ಣ: ಗಾಢ ಹಳದಿ
ಅದೃಷ್ಟದ ಸಂಖ್ಯೆ: 18
ಅದೃಷ್ಟದ ಸಮಯ: ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ

ಕನ್ಯಾ ರಾಶಿ

ನಿಮ್ಮ ಮನೆಯ ವಾತಾವರಣವನ್ನು ಉತ್ತಮವಾಗಿಡಲು ನೀವು ಬಯಸಿದರೆ, ನೀವು ಚಿಕ್ಕ ವಿಷಯಗಳನ್ನು ನಿರ್ಲಕ್ಷ್ಯ ಮಾಡಲು ಹೋಗಬೇಡಿ. ಅತಿಯಾದ ಕೋಪ ನಿಮ್ಮ ಸಂಬಂಧಕ್ಕೆ ಒಳ್ಳೆಯದಲ್ಲ. ಹಣಕಾಸಿನ ಪರಿಸ್ಥಿತಿಯಲ್ಲಿ ಸುಧಾರಣೆಯ ಸಾಧ್ಯತೆ ಇದೆ. ನಿಮ್ಮ ಆದಾಯ ಹೆಚ್ಚಾಗಬಹುದು. ಕವ್ಯಾಪಾರಸ್ಥರಿಗೆ ದಿನವು ಉತ್ತಮವಾಗಿರುತ್ತದೆ. ನೀವು ಇಂದು ಯಾವುದೇ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳದಿದ್ದರೆ ಅದು ಉತ್ತಮವಾಗಿರಲಿದೆ. ಈ ದಿನ ನಿಮ್ಮ ಆರೋಗ್ಯ ದುರ್ಬಲವಾಗಿರುತ್ತದೆ. ಈ ದಿನ ಸಾಕಷ್ಟು ವಿಶ್ರಾಂತಿ ಪಡೆಯಲು ನಿಮಗೆ ಸಲಹೆ ನೀಡಲಾಗಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಬೆಳಿಗ್ಗೆ 10:50 ರಿಂದ ಸಂಜೆ 4:20 ರವರೆಗೆ

ತುಲಾ ರಾಶಿ

ತುಲಾ ರಾಶಿಯ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಪಡೆಯಲು ಪ್ರಯತ್ನಿಸುತ್ತಿದ್ದರೆ ಈ ದಿನ ತುಂಬಾ ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ಹಣಕಾಸಿನ ಸ್ಥಿತಿ ಚೆನ್ನಾಗಿರಲಿದೆ. ಕೆಲಸದ ದೃಷ್ಟಿಯಿಂದ ಇಂದು ನಿಮಗೆ ಬಿಡುವಿಲ್ಲದ ದಿನವಾಗಿರುತ್ತದೆ. ಆದರೆ , ನಿಮ್ಮ ಎಲ್ಲಾ ಕೆಲಸಗಳು ಯಾವುದೇ ಅಡೆತಡೆಗಳಿಲ್ಲದೆ ಪೂರ್ಣಗೊಳ್ಳುತ್ತವೆ. ಕೌಟುಂಬಿಕ ಜೀವನ ಸುಖಮಯವಾಗಿರಲಿದೆ. ಸಂಗಾತಿಯು ಹೆಚ್ಚು ರೋಮ್ಯಾಂಟಿಕ್ ಮೂಡ್‌ನಲ್ಲಿರುತ್ತಾರೆ. ನಾವು ಆರೋಗ್ಯದ ಬಗ್ಗೆ ಹೇಳುವುದಾದರೆ ಈ ಬದಲಾಗುತ್ತಿರುವ ಋತುವಿನಲ್ಲಿ ನಿಮ್ಮ ಆರೋಗ್ಯದ ಬಗ್ಗೆ ಸಂಪೂರ್ಣ ಕಾಳಜಿ ವಹಿಸಿ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ರಾತ್ರಿ 8 ರವರೆಗೆ

ವೃಶ್ಚಿಕ ರಾಶಿ

ಇಂದು ನೀವು ಕೆಲಸ ಅಥವಾ ವ್ಯಾಪಾರದಲ್ಲಿ ತರಾತುರಿಯಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ.ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ ಈ ದಿನ ಸ ಉತ್ತಮ ದಿನವಾಗಿರುವುದಿಲ್ಲ. ನಿಮ್ಮ ಕೆಲಸದಲ್ಲಿ ಅಡೆತಡೆಗಳು ಉಂಟಾಗಬಹುದು. ಅಂತಹ ಪರಿಸ್ಥಿತಿಯಲ್ಲಿ, ನೀವು ತುಂಬಾ ತಾಳ್ಮೆಯಿಂದ ವರ್ತಿಸಲು ಸಲಹೆ ನೀಡಲಾಗಿದೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ನೀವು ಬುದ್ಧಿವಂತಿಕೆಯಿಂದ ಖರ್ಚು ಮಾಡಿದರೆ ಯಾವುದೇ ದೊಡ್ಡ ಸಮಸ್ಯೆ ಇರುವುದಿಲ್ಲ. ಆರೋಗ್ಯದ ವಿಷಯದಲ್ಲಿ, ದಿನವು ಏರಿಳಿತಗಳಿಂದ ತುಂಬಿರುತ್ತದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 24
ಅದೃಷ್ಟದ ಸಮಯ: ಬೆಳಿಗ್ಗೆ 4:20 ರಿಂದ ಮಧ್ಯಾಹ್ನ 3 ರವರೆಗೆ

ಧನು ರಾಶಿ

ಈ ದಿನ ನಿಮಗೆ ಸವಾಲಿನಿಂದ ಕೂಡಿದೆ. ಇತ್ತೀಚೆಗೆ ನೀವು ಪಾಲುದಾರಿಕೆಯಲ್ಲಿ ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಿದ್ದರೆ, ಅದು ನಷ್ಟದಲ್ಲಿರಬಹುದು. ಆದರೆ, ಅಂತಹ ಸಮಸ್ಯೆಗಳ ಬಗ್ಗೆ ಚಿಂತಿಸುವ ಬದಲು, ನೀವು ಧನಾತ್ಮಕವಾಗಿರಲು ಸಲಹೆ ನೀಡಲಾಗಿದೆ. ಶೀಘ್ರದಲ್ಲೇ ಎಲ್ಲವೂ ಸರಿಯಾಗಲಿದೆ. ಉದ್ಯೋಗಸ್ಥರು ಕಚೇರಿಯಲ್ಲಿ ಉನ್ನತ ಅಧಿಕಾರಿಗಳನ್ನು ಗೌರವದಿಂದ ಕಾಣುವಂತೆ ಸಲಹೆ ನೀಡಲಾಗಿದೆ. ಒಂದು ಸಣ್ಣ ತಪ್ಪು ನಿಮ್ಮನ್ನು ತೊಂದರೆಗೆ ಸಿಲುಕಿಸಬಹುದು. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ಕೆಲಸದ ಜೊತೆಗೆ ಕುಟುಂಬಕ್ಕೆ ಸಾಕಷ್ಟು ಸಮಯವನ್ನು ನೀಡಿ. ಆರೋಗ್ಯದ ಕಡೆಗೆ ಗಮನಹರಿಸಿ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 30
ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ ಸಂಜೆ 7 ರವರೆಗೆ

ಮಕರ ರಾಶಿ

ನೀವು ಕಚೇರಿಯಲ್ಲಿ ದೊಡ್ಡ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದರೆ, ಇಂದು ನೀವು ಟೀಮ್ ವರ್ಕ್ ಮೂಲಕ ನಿಮ್ಮ ಕೆಲಸವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಸಾಧ್ಯವಾಗುವುದು. ಬಾಸ್ ಕೂಡ ನಿಮ್ಮ ಶ್ರಮವನ್ನು ಮೆಚ್ಚುತ್ತಾರೆ. ವ್ಯಾಪಾರಸ್ಥರಿಗೆ ಆರ್ಥಿಕ ಲಾಭವಾಗಬಹುದು. ಆದರೆ, ಇಂದು ತರಾತುರಿಯಲ್ಲಿ ಯಾವುದೇ ಪ್ರಮುಖ ಕೆಲಸವನ್ನು ಮಾಡಲು ಹೋಗಬೇಡಿ. ಹಣದ ಪರಿಸ್ಥಿತಿ ಉತ್ತಮವಾಗಿರುತ್ತದೆ. ಸಂಗಾತಿಯೊಂದಿಗಿನ ಭಿನ್ನಾಭಿಪ್ರಾಯಗಳು ಹೆಚ್ಚಾಗಬಹುದು. ನಿಮ್ಮ ಪ್ರೀತಿಪಾತ್ರರ ಅಸಡ್ಡೆ ವರ್ತನೆ ನಿಮ್ಮ ಸಮಸ್ಯೆಗಳನ್ನು ಹೆಚ್ಚಿಸಬಹುದು. ಆರೋಗ್ಯ ದುರ್ಬಲವಾಗಿರಲಿದೆ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 35
ಅದೃಷ್ಟದ ಸಮಯ: ಬೆಳಿಗ್ಗೆ 7:15 ರಿಂದ ಮಧ್ಯಾಹ್ನ 2 ರವರೆಗೆ

ಕುಂಭ ರಾಶಿ

ನೀವು ವಿದ್ಯಾರ್ಥಿಯಾಗಿದ್ದರೆ ನಿಮ್ಮ ಅಧ್ಯಯನದ ಕಡೆ ಸಂಪೂರ್ಣವಾಗಿ ಗಮನಹರಿಸಲು ಸಲಹೆ ನೀಡಲಾಗಿದೆ. ನಿರ್ಲಕ್ಷ್ಯವು ದುಬಾರಿಯಾಗಲಿದೆ. ಮನೆಯ ಯಾವುದೇ ಸದಸ್ಯರ ಆರೋಗ್ಯ ದುರ್ಬಲವಾಗಿರುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ಆತಂಕವು ಬಹಳಷ್ಟು ಹೆಚ್ಚಾಗಬಹುದು. ಷೇರು ಮಾರುಕಟ್ಟೆಯಲ್ಲಿ ಕೆಲಸ ಮಾಡುತ್ತಿರುವವರು ನಿರೀಕ್ಷಿಸಿದ ಲಾಭ ಪಡೆಯಬಹುದು. ಹಣದ ವಿಷಯದಲ್ಲಿ ಈ ದಿನವು ಮಿಶ್ರಫಲ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಸಂಜೆ 6:45 ರಿಂದ ರಾತ್ರಿ 8 ರವರೆಗೆ

ಮೀನ ರಾಶಿ

ಸ್ವಲ್ಪ ಸಮಯದಿಂದ ನಿಮಗೆ ಕೆಲಸದ ಮೇಲೆ ಸರಿಯಾಗಿ ಗಮನಹರಿಸಲು ಸಾಧ್ಯವಾಗದಿದ್ದರೆ ಇಂದು ನಿಮಗೆ ಆ ಸಮಸ್ಯೆ ಬಗೆಹರಿಯಲಿದೆ. ಉನ್ನತ ಅಧಿಕಾರಿಗಳು ನಿಮ್ಮ ಕೆಲಸದಿಂದ ತುಂಬಾ ತೃಪ್ತರಾಗುತ್ತಾರೆ. ದೊಡ್ಡ ಲಾಭ ಗಳಿಸಲು ಯಾವುದೇ ತಪ್ಪು ನಿರ್ಧಾರ ತೆಗೆದುಕೊಳ್ಳದಂತೆ ಉದ್ಯಮಿಗಳಿಗೆ ಸಲಹೆ ನೀಡಲಾಗಿದೆ. ಕೆಲವರು ನಿಮ್ಮ ಲಾಭ ಪಡೆಯಲು ಪ್ರಯತ್ನಿಸಬಹುದು. ಹಣದ ವಿಷಯದಲ್ಲಿ ದಿನವು ಉತ್ತಮವಾಗಿರುತ್ತದೆ. ಈ ದಿನ ಆರೋಗ್ಯ ಸಂಬಂಧಿ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 16
ಅದೃಷ್ಟದ ಸಮಯ: ಬೆಳಿಗ್ಗೆ 8 ರಿಂದ ಸಂಜೆ 7 ರವರೆಗೆ

English summary

Dina Bhavishya June 11 2023 Today Rashi Bhavishya, Daily Horoscope in Kannada

Dina Bhavishya- Get Today's Rashi Bhavishy 11 June 2023 In Kannada, Read daily horoscope prediction of aries, taurus, gemini, cancer, leo, virgo, libra, scorpio, Sagittarius, Capricorn, Aquarius, pisces in Kannada.
X
Desktop Bottom Promotion