Horoscope Today 12 June: ಜೂನ್ 12 ಈ ದಿನ ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?

ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಜೂನ್ 12ರ ರಾಶಿಫಲ ನೋಡೋಣ:

ಸಂವತ್ಸರ: ಶುಭಕೃತ್
ಆಯನ: ಉತ್ತರಾಯಣ
ಋತು: ವಸಂತ
ಮಾಸ: ಆಷಾಢ
ಪಕ್ಷ: ಕೃಷ್ಣಪಕ್ಷ
ತಿಥಿ: ನವಮಿ
ನಕ್ಷತ್ರ: ಉತ್ತರ ಭಾದ್ರಪದ
ರಾಹುಕಾಲ: ಬೆಳಗ್ಗೆ 07:30ರಿಂದ 09:06ರವರೆಗೆ

daily horoscope

ಮೇಷ ರಾಶಿ
ನೀವು ಆರೋಗ್ಯದ ಕಡೆಗೆ ಅಧಿಕ ಗಮನಹರಿಸಬೇಕಾಗಿದೆ.ಆಹಾರ ಕ್ರಮದ ಕಡೆಗೆ ತುಂಬಾ ಗಮನಹರಿಸಬೇಕು. ಹಣದ ವಿಷಯದಲ್ಲಿ ಈ ದಿನವು ತುಂಬಾ ದುಬಾರಿಯಾಗಲಿದೆ. ನಿಮ್ಮ ಬಜೆಟ್‌ನಲ್ಲಿ ಅಸಮತೋಲನದ ಸಾಧ್ಯತೆಯಿದೆ. ಕೆಲಸದ ವಿಷಯದಲ್ಲಿ, ದಿನವು ಉತ್ತಮವಾಗಿದೆ . ನಿಮ್ಮ ಸ್ಥಗಿತಗೊಂಡಿರುವ ಕೆಲವು ಕೆಲಸಗಳು ಇಂದು ಪೂರ್ಣಗೊಳಿಸಬಹುದು. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಮಾಧುರ್ಯ ಹೆಚ್ಚಾಗಲಿದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 16
ಅದೃಷ್ಟದ ಸಮಯ: ಬೆಳಗ್ಗೆ 11 ರಿಂದ 12:25ರವರೆಗೆ

ವೃಷಭ ರಾಶಿ
ನೀವು ಯಾವುದೇ ಬೆಲೆಬಾಳುವ ವಸ್ತುವನ್ನು ಖರೀದಿಸಲು ಯೋಜಿಸುತ್ತಿದ್ದರೆ ಆತುರದಿಂದ ದೂರವಿರಬೇಕು. ಈ ಸಮಯದಲ್ಲಿ ನೀವು ಉಳಿತಾಯದತ್ತ ಹೆಚ್ಚು ಗಮನಹರಿಸಿದರೆ ತುಂಬಾ ಒಳ್ಳೆಯದು. ಉದ್ಯೋಗಸ್ಥರು ಕಚೇರಿಯಲ್ಲಿ ಹೆಚ್ಚಿನ ಗೌರವವನ್ನು ಪಡೆಯಬಹುದು. ಇಂದು ಆತ್ಮವಿಶ್ವಾಸ ಹೆಚ್ಚಾಗಲಿದೆ. ವ್ಯಾಪಾರಿಗಳಿಗೆ ಲಾಭ ಗಳಿಸಲು ಉತ್ತಮ ಅವಕಾಶ ದೊರೆಯಲಿದೆ. ನೀವು ಆನ್‌ಲೈನ್ ವ್ಯವಹಾರ ಮಾಡುತ್ತಿದ್ದರೆ ಇಂದು ನಿಮಗೆ ತುಂಬಾ ಲಾಭದಾಯಕವಾಗಿರುತ್ತದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ತುಂಬಾ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ನೀವು ಸ್ನಾಯುಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೊಂದಿರಬಹುದು.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಸಂಜೆ 6:30 ರಿಂದ ರಾತ್ರಿ 8 ರವರೆಗೆ

ಮಿಥುನ ರಾಶಿ
ಕೆಲವು ಕಾರಣಗಳಿಂದ, ಸಂಗಾತಿಯ ಮನಸ್ಥಿತಿ ಉತ್ತಮವಾಗಿರುವುದಿಲ್ಲ. ಅವರ ಜೊತೆ ತಾಳ್ಮೆಯಿಂದ ವರ್ತಿಸಿ. ಹಣದ ಬಗ್ಗೆ ಚಿಂತೆಯಿಲ್ಲ. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ಮನೆಯ ಹಿರಿಯರೊಂದಿಗೆ ನಿಮ್ಮ ಸಂಬಂಧ ಇನ್ನಷ್ಟು ಗಟ್ಟಿಯಾಗಲಿದೆ. ಕೆಲಸದ ವಿಷಯದಲ್ಲಿ ಇಂದು ನಿಮಗೆ ಮಿಶ್ರಫಲ. ನೀವು ಕಷ್ಟಪಟ್ಟು ಕೆಲಸ ಮಾಡಿದರೆ, ನೀವು ಉತ್ತಮ ಫಲಿತಾಂಶವನ್ನು ಪಡೆಯುತ್ತೀರಿ. ಆರೋಗ್ಯದ ದೃಷ್ಟಿಯಿಂದ ಈ ದಿನವು ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: 11:30 ರಿಂದ ಮಧ್ಯಾಹ್ನ 3 ರವರೆಗೆ

ಕರ್ಕ ರಾಶಿ
ನಿಮ್ಮ ತಂದೆಯೊಂದಿಗೆ ಭಿನ್ನಾಭಿಪ್ರಾಯ ಉಂಟಾಗಬಹುದು, ಈ ಬಗ್ಗೆ ಜಾಗ್ರತೆವಹಿಸಿ, ಅವರ ಮನಸ್ಸಿಗೆ ನೋವು ಕೊಡಬೇಡಿ.. ಇಂದು ನೀವು ಹಣದ ವಿಷಯದಲ್ಲಿ ತುಂಬಾ ಅದೃಷ್ಟಕರ. ಕಡಿಮೆ ಶ್ರಮದಿಂದ ಉತ್ತಮ ಹಣವನ್ನು ಪಡೆಯಬಹುದು. ಕೆಲಸದಲ್ಲಿ, ಇಂದು ನಿಮಗೆ ಹೊಸ ಸವಾಲುಗಳು ಎದುರಾಗಬಹುದು. ನಿಮ್ಮ ಕೆಲಸದಲ್ಲಿ ಅಡೆತಡೆಗಳು ದೂರಾಗಲಿದೆ. ಆರೋಗ್ಯವು ದುರ್ಬಲವಾಗಿರಲಿದೆ.
ಅದೃಷ್ಟದ ಬಣ್ಣ: ಗಾಢ ನೀಲಿ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ಸಂಜೆ 5:20 ರವರೆಗೆ

ಸಿಂಹ ರಾಶಿ
ಯಾವುದೇ ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆ ದೂರಾಗಲಿದೆ. ಇಂದು ನೀವು ನಿಮ್ಮ ಕೆಲಸದ ಮೇಲೆ ಸರಿಯಾಗಿ ಗಮನ ಹರಿಸಲು ಸಾಧ್ಯವಾಗುತ್ತದೆ. ಉದ್ಯೋಗಸ್ಥರು ತಮ್ಮ ಉತ್ತಮ ಕಾರ್ಯಕ್ಷಮತೆಯ ಆಧಾರದ ಮೇಲೆ ಉನ್ನತ ಅಧಿಕಾರಿಗಳ ವಿಶ್ವಾಸವನ್ನು ಗಳಿಸಲು ಸಾಧ್ಯವಾಗುವುದು. ಅದೇ ಸಮಯದಲ್ಲಿ, ಉದ್ಯಮಿಗಳಿಗೆ ದೊಡ್ಡ ಗ್ರಾಹಕರೊಂದಿಗೆ ವ್ಯವಹರಿಸಲು ಅವಕಾಶ ಸಿಗಲಿದೆ. ಕೋಪ ನಿಯಂತ್ರಿಸಿ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಆರೋಗ್ಯದ ವಿಷಯದಲ್ಲಿ ಈ ದಿನ ಮಿಶ್ರಫಲ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ಸಮಯ: ಬೆಳಿಗ್ಗೆ 6:25 ರಿಂದ ಮಧ್ಯಾಹ್ನ 12:20 ರವರೆಗೆ

ಕನ್ಯಾ ರಾಶಿ
ಇಂದು ಉದ್ಯಮಿಗಳಿಗೆ ಬಹಳ ಅದೃಷ್ಟದ ದಿನವಾಗಿದೆ. ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಲು ಈ ದಿನವು ಸೂಕ್ತವಾಗಿದೆ. ನೀವು ಸರ್ಕಾರಿ ಕೆಲಸವನ್ನು ಮಾಡುತ್ತಿದ್ದರೆ ಮತ್ತು ನೀವು ಬಯಸಿದ ವರ್ಗಾವಣೆಗಾಗಿ ಕಾಯುತ್ತಿದ್ದರೆ, ಈ ದಿನ ನಿಮಗೆ ಶುಭ ಸುದ್ದಿ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ಹಾಗಂತ ಹಣದ ಸಮಸ್ಯೆ ಇರಲ್ಲ. ಸಂಗಾತಿಯ ಮನಸ್ಸು ಅರಿಯಲು ಪ್ರಯತ್ನಿಸುವುದು ಒಳ್ಳೆಯದು. ಆರೋಗ್ಯ ಸಂಬಂಧಿ ಸಮಸ್ಯೆ ಎದುರಾಗಬಹುದು.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 28
ಅದೃಷ್ಟದ ಸಮಯ: ಮಧ್ಯಾಹ್ನ 12 ರಿಂದ ಸಂಜೆ 4:30 ರವರೆಗೆ

ತುಲಾ ರಾಶಿ
ಪೂರ್ವಿಕರ ಆಸ್ತಿಗೆ ಸಂಬಂಧಿಸಿದ ಯಾವುದೇ ವಿಷಯವು ಇಂದು ನಿಮಗೆ ಕಳವಳವನ್ನು ಹೆಚ್ಚಿಸಬಹುದು. ತರಾತುರಿಯಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳದಿರುವುದು ಉತ್ತಮ. ಕಚೇರಿಯಲ್ಲಿ ಕೆಲಸದಲ್ಲಿ ಜಾಗ್ರತೆವಹಿಸಿ. ಯಾವುದೇ ಹೊಸ ಯೋಜನೆಯಲ್ಲಿ ಹಣವನ್ನು ಹೂಡಿಕೆ ಮಾಡುವ ಮೊದಲು ಎಚ್ಚರಿಕೆಯಿಂದ ಯೋಚಿಸಲು ಉದ್ಯಮಿಗಳಿಗೆ ಸಲಹೆ ನೀಡಲಾಗಿದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ. ಆರೋಗ್ಯಕ್ಕೆ ಸಂಬಂಧಿಸಿದಂತೆ, ನಿಮಗೆ ಗ್ಯಾಸ್, ಅಜೀರ್ಣ, ಅಸಿಡಿಟಿ ಮುಂತಾದ ಸಮಸ್ಯೆಗಳಿರಬಹುದು.
ಅದೃಷ್ಟದ ಬಣ್ಣ: ತಿಳಿ ಕೆಂಪು
ಅದೃಷ್ಟದ ಸಂಖ್ಯೆ: 15
ಅದೃಷ್ಟದ ಸಮಯ: ಬೆಳಿಗ್ಗೆ 7:20 ರಿಂದ ಮಧ್ಯಾಹ್ನ 3 ರವರೆಗೆ

ವೃಶ್ಚಿಕ ರಾಶಿ
ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರಲಿದೆ. ಇಂದು ನೀವು ಮನೆಯ ಸದಸ್ಯರೊಂದಿಗೆ ಕೆಲವು ಶುಭ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶವನ್ನು ಪಡೆಯುತ್ತೀರಿ. ಕೆಲಸದ ವಿಷಯದಲ್ಲಿ ನೀವು ಬಡ್ತಿ ಪಡೆಯಬಹುದು. ಉದ್ಯಮಿಗಳ ಆರ್ಥಿಕ ಸ್ಥಿತಿ ತುಂಬಾ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ದಿನವು ಅನುಕೂಲಕರವಾಗಿರುತ್ತದೆ.
ಅದೃಷ್ಟದ ಬಣ್ಣ: ಬೂದು
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಬೆಳಿಗ್ಗೆ 8 ರಿಂದ 10:15 ರವರೆಗೆ

ಧನು ರಾಶಿ
ಪ್ರತಿಕೂಲ ಸಂದರ್ಭಗಳಲ್ಲಿ, ತಾಳ್ಮೆಯಿಂದಿರಲು ನಿಮಗೆ ಸಲಹೆ ನೀಡಲಾಗಿದೆ. ತರಾತುರಿಯಲ್ಲಿ ತೆಗೆದುಕೊಂಡ ತಪ್ಪು ನಿರ್ಧಾರಗಳು ನಿಮ್ಮ ಸಮಸ್ಯೆಗಳನ್ನು ಹೆಚ್ಚಿಸಬಹುದು. ಕಛೇರಿಯಲ್ಲಿ ಕಠಿಣ ಪರಿಶ್ರಮದ ಹೊರತಾಗಿಯೂ ಬಯಸಿದ ಪ್ರತಿಫಲ ದೊರೆಯದಿದ್ದರೆ ನೀವು ನಿರಾಶೆಗೊಳ್ಳುವ ಅಗತ್ಯವಿಲ್ಲ. ಇದು ಬದಲಾವಣೆಯ ಸಮಯ. ಸರಿಯಾದ ದಿಕ್ಕಿನಲ್ಲಿ ಪ್ರಯತ್ನಿಸಿ. ಉದ್ಯಮಿಗಳು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡಲು ಅವಕಾಶವನ್ನು ಪಡೆಯಬಹುದು. ಹಣದ ಸ್ಥಿತಿ ಸಾಮಾನ್ಯವಾಗಿರಲಿದೆ. ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಿ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 14
ಅದೃಷ್ಟದ ಸಮಯ: ಮಧ್ಯಾಹ್ನ 2:20 ರಿಂದ ಸಂಜೆ 4:30 ರವರೆಗೆ

ಮಕರ ರಾಶಿ
ಈ ರಾಶಿಯ ನಿರುದ್ಯೋಗಿಗಳಿಗೆ ಈ ದಿನ ತುಂಬಾ ಉತ್ತಮವಾಗಿದೆ ನೀವು ವ್ಯವಹಾರವನ್ನು ಪ್ರಾರಂಭಿಸಲು ಯೋಜಿಸುತ್ತಿದ್ದರೆ, ನಿಮಗೆ ಉತ್ತಮ ಅವಕಾಶಗಳು ಸಿಗುತ್ತವೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿರಲಿದೆ. ಮನೆಯ ಸ್ಥಿತಿ ಚೆನ್ನಾಗಿರಲಿದೆ. ನಿಮ್ಮ ಮಾತು ಮತ್ತು ನಡವಳಿಕೆಯ ಕಡೆಗೆ ಅಧಿಕ ಕಾಳಜಿ ವಹಿಸಲು ಸಲಹೆ ನೀಡಲಾಗಿದೆ. ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಆದರೆ, ನೀವು ಅಗತ್ಯ ವಸ್ತುಗಳ ಮೇಲೆ ಮಾತ್ರ ಖರ್ಚು ಮಾಡಿದರೆ ಅದು ಉತ್ತಮವಾಗಿರುತ್ತದೆ. ನೀವು ಲ್ಯಾಪ್‌ಟಾಪ್ ಅಥವಾ ಕಂಪ್ಯೂಟರ್ ತುಂಬಾ ಹೊತ್ತು ಬಳಸುತ್ತಿದ್ದರೆ ಕಣ್ಣಿನ ಆರೋಗ್ಯ ಕಡೆಗೆ ಗಮನಹರಿಸಿ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 34
ಅದೃಷ್ಟದ ಸಮಯ: ಬೆಳಿಗ್ಗೆ 11:10 ರಿಂದ ಮಧ್ಯಾಹ್ನ 2:25 ರವರೆಗೆ

ಕುಂಭ ರಾಶಿ
ಕೆಲಸದ ವಿಷಯದಲ್ಲಿ ಈ ದಿನ ನಿಮಗೆ ಬಹಳ ಮುಖ್ಯವಾಗಿರುತ್ತದೆ. ನಿಮ್ಮ ಗುರಿಯ ಮೇಲೆ ಕೇಂದ್ರೀಕರಿಸಲು ನಿಮಗೆ ಸಲಹೆ ನೀಡಲಾಗಿದೆ. ಇಂದು ನೀವು ಪ್ರತಿಷ್ಠಿತ ಮತ್ತು ಪ್ರಭಾವಶಾಲಿ ವ್ಯಕ್ತಿಯನ್ನು ಸಹ ಭೇಟಿ ಮಾಡಬಹುದು. ಹಣದ ವಿಷಯದಲ್ಲಿ ತುಂಬಾ ಅದೃಷ್ಟಕರವಾಗಿದೆ. ನಿಮ್ಮ ಹಣಕಾಸಿನ ಪ್ರಯತ್ನದಲ್ಲಿ ನೀವು ಯಶಸ್ಸನ್ನು ಪಡೆಯಬಹುದು. ಸಂಗಾತಿಯೊಂದಿಗಿನ ಸಂಬಮದ ಚೆನ್ನಾಗಿರಲಿದೆ, ಆರೋಗ್ಯ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 8
ಅದೃಷ್ಟದ ಸಮಯ: ಮಧ್ಯಾಹ್ನ 2:30 ರಿಂದ ಸಂಜೆ 6:40 ರವರೆಗೆ

ಮೀನ ರಾಶಿ
ಕೆಲಸದ ಬಗ್ಗೆ ಹೇಳುವುದಾದರೆ ಉದ್ಯೋಗಿಗಳಿಗೆ ಕಚೇರಿಯಲ್ಲಿ ಶಕ್ತಿ ಮತ್ತು ಆತ್ಮವಿಶ್ವಾಸದಿಂದ ತಮ್ಮ ಕೆಲಸವನ್ನು ಮಾಡಲು ಸಲಹೆ ನೀಡಲಾಗುವುದು. ನಿಮ್ಮ ಕೆಲಸವನ್ನು ಮೇಲಾಧಿಕಾರಿಗಳು ಗಮನಿಸುತ್ತಿರುತ್ತಾರೆ, ಆದ್ದರಿಂದ ನಿರ್ಲಕ್ಷ್ಯ ಬೇಡ. ವ್ಯಾಪಾರಸ್ಥರು ತಕ್ಕ ಲಾಭವನ್ನು ಗಳಿಸಬಹುದು. ಸಂಗಾತಿಯೊಂದಿಗೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ. ಅಂತಹ ಪರಿಸ್ಥಿತಿಯಲ್ಲಿ, ನೀವು ತಪ್ಪು ಪದಗಳನ್ನು ಬಳಸದಂತೆ ಸಲಹೆ ನೀಡಲಾಗಿದೆ. ಹಣಕಾಸಿನ ವಿಚಾರದಲ್ಲಿ ನಿರ್ಲಕ್ಷ್ಯ ಬೇಡ, ಇಲ್ಲದಿದ್ದರೆ ನಷ್ಟವಾಗಬಹುದು. ನಿಮ್ಮ ಆರೋಗ್ಯ ದುರ್ಬಲವಾಗಿರುತ್ತದೆ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಬೆಳಿಗ್ಗೆ 7 ರಿಂದ 10 ರವರೆಗೆ

English summary

Dina Bhavishya June 12 2023 Today Rashi Bhavishya, Daily Horoscope in Kannada

Dina Bhavishya- Get Today's Rashi Bhavishy 11 June 2023 In Kannada, Read daily horoscope prediction of aries, taurus, gemini, cancer, leo, virgo, libra, scorpio, Sagittarius, Capricorn, Aquarius, pisces in Kannada.
Story first published: Monday, June 12, 2023, 4:19 [IST]
X
Desktop Bottom Promotion