Horoscope Today 14 June: ಜೂನ್ 14 ಈ ದಿನ ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?

ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಜೂನ್ 14ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ಉತ್ತರಾಯಣ
ಋತು: ವಸಂತ
ಮಾಸ: ಆಷಾಢ
ಪಕ್ಷ: ಕೃಷ್ಣಪಕ್ಷ
ತಿಥಿ: ಏಕಾದಶಿ
ನಕ್ಷತ್ರ: ಅಶ್ವಿನಿ, ಮಧ್ಯಾಹ್ನ 1:40ರ ನಂತರ ಭರಣಿ
ರಾಹುಕಾಲ: ಮಧ್ಯಾಹ್ನ 12:20ರಿಂದ 01:57ರವರೆಗೆ

ಮೇಷ ರಾಶಿ

ಕೆಲಸ ರಾಶಿಯವಿರಿಗೆ ಶುಭ ದಿನ. ನೀವು ಈ ದಿನ ಒಳ್ಳೆಯ ಸುದ್ದಿ ಪಡೆಯಬಹುದು. ನಿಮ್ಮ ಯಾವುದೇ ಸ್ಥಗಿತಗೊಂಡ ಕೆಲಸವನ್ನು ಪೂರ್ಣಗೊಳಿಸುವುದರಿಂದ ಆರ್ಥಿಕ ಲಾಭವನ್ನು ಪಡೆಯಬಹುದು. ಉದ್ಯೋಗಿಗಳಿಗೆ ಈ ದಿನವು ಸಾಮಾನ್ಯವಾಗಿರುತ್ತದೆ. ಕೌಟುಂಬಿಕ ಜೀವನ ಸುಖಮಯವಾಗಿರಲಿದೆ. ಇಂದು ಮನೆಯಲ್ಲಿ ಧಾರ್ಮಿಕ ಕಾರ್ಯಗಳು ನಡೆಯಬಹುದು
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಸಮಯ: ಬೆಳಿಗ್ಗೆ 8 ರಿಂದ 11:20 ರವರೆಗೆ

Dina Bhavishya June 14 2023 Today Rashi Bhavishya, Daily Horoscope in Kannada

ವೃಷಭ ರಾಶಿ

ಈ ದಿನ ನೀವು ನಿಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದ ನಡುವೆ ಸಮತೋಲನವನ್ನು ಸಾಧಿಸುವಲ್ಲಿ ಇಂದು ನೀವು ಬಹಳಷ್ಟು ತೊಂದರೆಗಳನ್ನು ಎದುರಿಸಬಹುದು. ಮನೆ , ಕೆಲಸದ ಹೊರೆ ಹೆಚ್ಚಿರಲಿದೆ, ಇದರಿಂದ ತುಂಬಾನೇ ಮಾನಸಿಕ ಒತ್ತಡ ಉಂಟಾಗುವುದು. ಆರ್ಥಿಕ ಪರಿಸ್ಥಿತಿ ಹದಗೆಡುವ ಲಕ್ಷಣಗಳಿವೆ. ಆರೋಗ್ಯ ದುರ್ಬಲವಾಗಿರಲಿದೆ. ಈ ದಿನ ನೀವು ತುಂಬಾ ಆಯಾಸವನ್ನು ಅನುಭವಿಸುವಿರಿ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 14
ಅದೃಷ್ಟದ ಸಮಯ: ಮಧ್ಯಾಹ್ನ 3:50 ರಿಂದ ಸಂಜೆ 7 ರವರೆಗೆ

ಮಿಥುನ ರಾಶಿ

ಈ ದಿನ ಉದ್ಯೋಗ ಅಥವಾ ವ್ಯವಹಾರವಾಗಿರಲಿ ಇಂದು ನೀವು ಆತುರದಿಂದ ದೂರವಿರಲು ಸಲಹೆ ನೀಡಲಾಗಿದೆ. ಈ ರಾಶಿಯ ವಿದ್ಯಾರ್ಥಿಗಳಿಗೆ ಇಂದು ಅತ್ಯಂತ ಮಹತ್ವದ ದಿನವಾಗಲಿದೆ. ಶಿಕ್ಷಣಕ್ಕೆ ಸಂಬಂಧಿಸಿದ ಯಾವುದೇ ಪ್ರಯತ್ನದಲ್ಲಿ ನೀವು ಯಶಸ್ಸನ್ನು ಪಡೆಯಬಹುದು. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಉತ್ತಮ ಹೊಂದಾಣಿಕೆ ಇರಲಿದೆ, ಒಟ್ಟಿನಲ್ಲಿ ಈ ದಿನ ನಿಮಗೆ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ಗಾಢ ಕೆಂಪು
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಬೆಳಿಗ್ಗೆ 5:05 ರಿಂದ 8:25 ರವರೆಗೆ

ಕರ್ಕ ರಾಶಿ

ಈ ದಿನ ಹಣಕ್ಕೆ ಸಂಬಂಧಿಸಿದ ಚಿಂತೆ ದೂರಾಗಲಿದೆ, ಇಂದು ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ. ಕೆಲಸದ ವಿಷಯದಲ್ಲಿ ಈ ದಿನವು ಸರಾಸರಿಯಾಗಿರಲಿದೆ. ಈ ದಿನ ಮನೆಯ ಸದಸ್ಯರ ಜೊತೆಗೆ ವೈಮನಸ್ಸು ಉಂಟಾಗಬಹುದು. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ಕೋಪವನ್ನು ನಿಯಂತ್ರಿಸಲು ಸಲಹೆ ನೀಡಲಾಗಿದೆ. ಆರೋಗ್ಯದ ಬಗ್ಗೆ ಹೆಚ್ಚು ಚಿಂತೆ ಮಾಡಬೇಡಿ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 32
ಅದೃಷ್ಟದ ಸಮಯ: ಸಂಜೆ 5 ರಿಂದ 8:35 ರವರೆಗೆ

ಸಿಂಹ ರಾಶಿ

ನೀವು ವ್ಯಾಪಾರಸ್ಥರಾಗಿದ್ದರೆ, ನಿಮ್ಮ ಕೆಲಸಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಪ್ರಯಾಣಿಸಿದ್ದರೆ ಈ ದಿನ ಅದರ ಸರಿಯಾದ ಫಲಿತಾಂಶಗಳನ್ನು ಪಡೆಯಬಹುದು. ಉದ್ಯೋಗಸ್ಥರಿಗೆ ಈ ದಿನ ಅನುಕೂಲಕರವಾಗಿದೆ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ನಿಮ್ಮ ಬಜೆಟ್ ಅಸಮತೋಲಿತವಾಗಿರಬಹುದು. ಈ ದಿನ ನೋಡಿಕೊಂಡು ಹಣವನ್ನು ಖರ್ಚು ಮಾಡಿ. ಇಂದು ನೀವು ನಿಮ್ಮ ಕುಟುಂಬ ಸದಸ್ಯರೊಂದಿಗೆ ಉತ್ತಮ ಸಮಯವನ್ನು ಕಳೆಯುತ್ತೀರಿ. ಈ ದಿನ ಖುಷಿ ಖುಷಿಯಾಗಿರುವಿರಿ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: ಬೆಳಿಗ್ಗೆ 7 ರಿಂದ 10 ರವರೆಗೆ

ಕನ್ಯಾ ರಾಶಿ

ಇಂದು ನೀವು ಕೆಲಸದಲ್ಲಿ ತುಂಬಾ ಕಾರ್ಯನಿರತರಾಗಿರುತ್ತೀರಿ. ಕೆಲಸದ ಒತ್ತಡ ಅಧಿಕವಿರುವುದರಿಂದ ಮನೆ ಕಡೆ ಗಮನಹರಿಸಲು ಸಾಧ್ಯವಾಗುವುದಿಲ್ಲ. ದಿನದ ಎರಡನೇ ಭಾಗದಲ್ಲಿ ನೀವು ಪ್ರಯಾಣಮಾಡಬಹುದು. ನಿಮ್ಮ ಈ ಪಯಣ ಬಹುಮುಖ್ಯವಾಗಲಿದೆ. ಆರ್ಥಿಕ ಸ್ಥಿತಿ ಸಹಜವಾಗಿರಲಿದೆ. ಆರೋಗ್ಯವನ್ನು ನಿರ್ಲಕ್ಷ್ಯ ಮಾಡಬೇಡಿ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 25
ಅದೃಷ್ಟದ ಸಮಯ: ಸಂಜೆ 6:15 ರಿಂದ 9:05 ರವರೆಗೆ

ತುಲಾ ರಾಶಿ

ಮಕ್ಕಳ ಕಡೆಯಿಂದ ಖುಷಿ ಸುದ್ದಿ ಸಿಗಲಿದೆ. ವಿದ್ಯಾರ್ಥಿಗಳು ತಮ್ಮ ಅಧ್ಯಯನದತ್ತ ಸಂಪೂರ್ಣ ಗಮನಹರಿಸಬೇಕು. ಅನಗತ್ಯ ವಿಷಯಗಳಲ್ಲಿ ನಿಮ್ಮ ಅಮೂಲ್ಯ ಸಮಯವನ್ನು ವ್ಯರ್ಥ ಮಾಡುವುದನ್ನು ತಪ್ಪಿಸಿ. ಆರ್ಥಿಕ ಪರಿಸ್ಥಿತಿಯಲ್ಲಿ ಕುಸಿತ ಉಂಟಾಗಬಹುದು. ಕೆಲಸದ ಬಗ್ಗೆ ಅನಗ್ಯತ ಚಿಂತೆ ಮಾಡಿ ಮನಸ್ಸಿನ ನೆಮ್ಮದಿ ಹಾಳು ಮಾಡಬೇಡಿ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 19
ಅದೃಷ್ಟದ ಸಮಯ: ಮಧ್ಯಾಹ್ನ 2:50 ರಿಂದ ಸಂಜೆ 4:50 ರವರೆಗೆ

ವೃಶ್ಚಿಕ ರಾಶಿ

ಕಚೇರಿಯಲ್ಲಿ ನಿಮ್ಮ ಶ್ರಮವನ್ನು ಮೇಲಧಿಕಾರಿ ಗಮನಿಸುತ್ತಾರೆ, ನೀವಿಂದು ನಿಮ್ಮ ಕಠಿಣ ಪರಿಶ್ರಮಕ್ಕೆ ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ಉದ್ಯಮಿಗಳು ಬಯಸಿದ ಲಾಭವನ್ನು ಪಡೆಯಬಹುದು. ನಿಮ್ಮ ಸಂಗಾತಿಯೊಂದಿಗೆ ಈ ದಿನ ತುಂಬಾ ರೋಮ್ಯಾಂಟಿಕ್ ಆಗಿ ಸಮಯ ಕಳೆಯುತ್ತೀರಿ, ಏನಾದರೂ ಆರೋಗ್ಯ ಸಮಸ್ಯೆಯಿದ್ದರೆ ಈ ದಿನ ಆರೋಗ್ಯದಲ್ಲಿ ಸುಧಾರಣೆ ಕಂಡು ಬರಲಿದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 6
ಅದೃಷ್ಟದ ಸಮಯ: ಬೆಳಗ್ಗೆ 4ರಿಂದ ಮಧ್ಯಾಹ್ನ 12:15ರವರೆಗೆ

ಧನು ರಾಶಿ

ಉದ್ಯೋಗಸ್ಥರು ಈ ದಿನ ತಮ್ಮ ಕೆಲಸದಲ್ಲಿ ಅಧಿಕ ಗಮನಹರಿಸಬೇಕಾಗಿದೆ. ಈ ಸಮಯದಲ್ಲಿ ದೊಡ್ಡ ಹೂಡಿಕೆ ಮಾಡದಂತೆ ಉದ್ಯಮಿಗಳಿಗೆ ಸಲಹೆ ನೀಡಲಾಗಿದೆ. ಮನೆಯ ವಾತಾವರಣ ಚೆನ್ನಾಗಿರಲಿದೆ. ನೀವು ಪೋಷಕರ ಪ್ರೀತಿ ಮತ್ತು ಬೆಂಬಲವನ್ನು ಪಡೆಯುತ್ತೀರಿ. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 15
ಅದೃಷ್ಟದ ಸಮಯ: ಸಂಜೆ 6 ರಿಂದ ರಾತ್ರಿ 8 ರವರೆಗೆ

ಮಕರ ರಾಶಿ

ಆಸ್ತಿ ಸಂಬಂಧಿಸಿದ ವ್ಯವಹಾರ ಮಾಡಿದವರು ಇಂದು ಉತ್ತಮ ಆರ್ಥಿಕ ಲಾಭವನ್ನು ಪಡೆಯಬಹುದು. ಮತ್ತೊಂದೆಡೆ, ವಿದೇಶದಲ್ಲಿ ಉದ್ಯೋಗ ಪಡೆಯುವ ಕನಸು ಹೊಂದಿರುವವರು ಇಂದು ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ಹಣದ ಪರಿಸ್ಥಿತಿ ಸುಧಾರಿಸಲಿದೆ. ಈ ದಿನ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ದಾಂಪತ್ಯ ಜೀವನ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 22
ಅದೃಷ್ಟದ ಸಮಯ: ಬೆಳಿಗ್ಗೆ 8:05 ರಿಂದ 11 ರವರೆಗೆ

ಕುಂಭ ರಾಶಿ

ಈ ದಿನ ಆರೋಗ್ಯ ಸಂಬಂಧಿ ಸಮಸ್ಯೆ ಎದುರಾಗಬಹುದು. ದುರ್ಬಲ ಆರೋಗ್ಯದಿಂದಾಗಿ ನಿಮ್ಮ ದಿನನಿತ್ಯದ ಯೋಜನೆಗಳಿಗೆ ಅಡ್ಡಿಯಾಗುತ್ತದೆ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಬಹುದು . ಅನಾರೋಗ್ಯದ ಕಾರಣ ಅಥವಾ ಮಾನಸಿಕ ಒತ್ತಡದಿಂದಾಗಿ ಕೆಲಸದ ಕಡೆಗೆ ಗಮನಹರಿಸಲು ಸಾಧ್ಯವಾಗುವುದಿಲ್ಲ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 17
ಅದೃಷ್ಟದ ಸಮಯ: ಸಂಜೆ 4 ರಿಂದ 7:05 ರವರೆಗೆ

ಮೀನ ರಾಶಿ

ನಿಮ್ಮ ಸಂಗಾತಿಯೊಂದಿಗೆ ಧಾರ್ಮಿಕ ಪ್ರವಾಸಕ್ಕೆ ಹೋಗುವ ಅವಕಾಶ ಸಿಗಲಿದೆ. ನಿಮ್ಮ ಈ ಪ್ರಯಾಣವು ತುಂಬಾ ಆಹ್ಲಾದಕರವಾಗಿರುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಕೆಲಸ-ಸಂಬಂಧಿತ ಪ್ರಯತ್ನಗಳಲ್ಲಿ ಯಶಸ್ಸು ಸಿಗಲಿದೆ, ಈ ದಿನ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುವುದು.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 10
ಅದೃಷ್ಟದ ಸಮಯ: ಬೆಳಗ್ಗೆ 5:15 ರಿಂದ 8 ರವರೆಗೆ

English summary

Dina Bhavishya June 14 2023 Today Rashi Bhavishya, Daily Horoscope in Kannada

Dina Bhavishya- Get Today's Rashi Bhavishy 14 June 2023 In Kannada, Read daily horoscope prediction of aries, taurus, gemini, cancer, leo, virgo, libra, scorpio, Sagittarius, Capricorn, Aquarius, pisces in Kannada.
Story first published: Wednesday, June 14, 2023, 4:00 [IST]
X
Desktop Bottom Promotion