Horoscope Today 15 June: ಜೂನ್ 15 ಈ ದಿನ 7 ರಾಶಿಯವರಿಗೆ ತುಂಬಾನೇ ಮಂಗಳಕರವಾಗಿದೆ

ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಜೂನ್ 15ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ಉತ್ತರಾಯಣ
ಋತು: ವಸಂತ
ಮಾಸ: ಆಷಾಢ
ಪಕ್ಷ: ಕೃಷ್ಣಪಕ್ಷ
ತಿಥಿ: ಏಕಾದಶಿ
ನಕ್ಷತ್ರ: ಅಶ್ವಿನಿ, ಮಧ್ಯಾಹ್ನ 1:40ರ ನಂತರ ಭರಣಿ
ರಾಹುಕಾಲ: ಮಧ್ಯಾಹ್ನ 12:20ರಿಂದ 01:57ರವರೆಗೆ

ಮೇಷ ರಾಶಿ

ಈ ದಿನ ನಿಮಗೆ ಒಳ್ಳೆಯದಿದೆ, ಇಂದು ನಿಮ್ಮ ಪ್ರೀತಿಪಾತ್ರರ ಜೊತೆ ಖುಷಿಯಾಗಿ ಸಮಯ ಕಳೆಯುತ್ತೀರಿ. ಉದ್ಯೋಗಿಗಳಿಗೆ ಈ ದಿನ ಬಹಳ ಮುಖ್ಯವಾಗಿರಲಿದೆ. ನಿಮ್ಮ ಕಠಿಣ ಪರಿಶ್ರಮಕ್ಕೆ ಸರಿಯಾದ ಫಲಿತಾಂಶ ದೊರೆಯಲಿದೆ. ಹಣದ ವಿಷಯದಲ್ಲಿ ಜಾಗರೂಕರಾಗಿರಿ. ನಾವು ಆರೋಗ್ಯದ ಬಗ್ಗೆ ಹೇಳುವುದಾದರೆ ನೀವು ಕಣ್ಣುಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೊಂದಿರಬಹುದು.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 16
ಅದೃಷ್ಟದ ಸಮಯ: ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ರವರೆಗೆ

Dina Bhavishya June 15 2023 Today Rashi Bhavishya, Daily Horoscope in Kannada

ವೃಷಭ ರಾಶಿ

ಇಂದು ನೀವು ನಿಮ್ಮ ಸಂಗಾತಿಯೊಂದಿಗೆ ಅಧಿಕ . ನಿಮ್ಮ ಪ್ರೀತಿಪಾತ್ರರೊಂದಿಗೆ ನಿಮ್ಮ ಮನಸ್ಸನ್ನು ಮುಕ್ತವಾಗಿ ಹಂಚಿಕೊಳ್ಳಬಹುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಇಂದು ನೀವು ಹತ್ತಿರವಿರುವ ಯಾರಿಗಾದರೂ ದುಬಾರಿ ಉಡುಗೊರೆಯನ್ನು ಖರೀದಿಸಬಹುದು. ಕೆಲಸ-ಸಂಬಂಧಿತ ಪ್ರಯತ್ನಗಳಲ್ಲಿ ಯಶಸ್ಸು ಸಿಗಲಿದೆ. ಆರೋಗ್ಯದ ಕಡೆಗೆ ಗಮನ ಹರಿಸಿ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 24
ಅದೃಷ್ಟದ ಸಮಯ: ಮಧ್ಯಾಹ್ನ 3:45 ರಿಂದ ಸಂಜೆ 7 ರವರೆಗೆ

ಮಿಥುನ ರಾಶಿ

ಉದ್ಯೋಗಿಗಳು ಕೆಲಸಕ್ಕೆ ಸಂಬಂಧಿಸಿದಂತೆ ಪ್ರಯಾಣ ಮಾಡಬಹುದು. ಈ ಪ್ರಯಾಣ ನಿಮಗೆ ಲಾಭದಾಯಕವಾಗಿದೆ. ಲಾಭ ಗಳಿಸಲು ಶಾರ್ಟ್‌ಕಟ್‌ಗಳನ್ನು ತೆಗೆದುಕೊಳ್ಳಬೇಡಿ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಉತ್ತಮ ಹೊಂದಾಣಿಕೆ ಇರುತ್ತದೆ. ಆರೋಗ್ಯ ಸಂಬಂಧಿ ಸಮಸ್ಯೆ ಎದುರಾಗಬಹುದು.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ಸಮಯ: ಬೆಳಿಗ್ಗೆ 6 ರಿಂದ 9 ರವರೆಗೆ

ಕರ್ಕ ರಾಶಿ

ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರಿಗೆ ಇಂದು ಸವಾಲಿನ ದಿನ. ವ್ಯಾಪಾರದಲ್ಲಿ ನಷ್ಟವಾಗುವ ಸಾಧ್ಯತೆ ಇದೆ. ನಿಮ್ಮ ಪ್ರಸ್ತುತ ಕೆಲಸದಿಂದ ನೀವು ತೃಪ್ತರಾಗದಿದ್ದರೆ ಮತ್ತು ಕೆಲಸವನ್ನು ಬದಲಾಯಿಸಲು ಬಯಸಿದರೆ ಆತುರಪಡಬೇಡಿ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರಲಿದೆ. ಸಂಗಾತಿಯೊಂದಿಗೆ ವೈಮನಸ್ಸು ಉಂಟಾಗಬಹುದು,
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 8 ರವರೆಗೆ

ಸಿಂಹ ರಾಶಿ

ಆರೋಗ್ಯದಲ್ಲಿ ಹಠಾತ್ ಕುಸಿತ ಉಂಟಾಗಬಹುದು. ಇದೆಲ್ಲವೂ ನಿಮ್ಮ ನಿರ್ಲಕ್ಷ್ಯದ ಫಲ. ನೀವು ಉತ್ತಮ ವೈದ್ಯರನ್ನು ಸಂಪರ್ಕಿಸಬೇಕು. ಕೆಲಸದ ಬಗ್ಗೆ ಅತಿಯಾಗಿ ಚಿಂತೆ ಮಾಡಬೇಡಿ. ಹಣದ ವಿಷಯದಲ್ಲಿ ಈ ದಿನ ಮಿಶ್ರಫಲ. ನೀವು ಅವಿವಾಹಿತರಾಗಿದ್ದರೆ ನಿಮಗೆ ಮದುವೆಯ ಪ್ರಸ್ತಾಪ ಬರಬಹುದು.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 14
ಅದೃಷ್ಟದ ಸಮಯ: ಸಂಜೆ 4:45 ರಿಂದ ರಾತ್ರಿ 9:05 ರವರೆಗೆ

ಕನ್ಯಾ ರಾಶಿ

ಮನೆಯ ವಾತಾವರಣ ಖುಷಿಯಾಗಿರಲಿದೆ. ಒಂದು ವೇಳೆ ಮನೆ ಸದಸ್ಯರ ಜೊತೆಗೆ ಏನಾದರೂ ಅಭಿಪ್ರಾಯ ವ್ಯತ್ಯಾಸವಿದ್ದರೆ ಎಲ್ಲವೂ ಸರಿಯಾಗುವುದರಿಂದ ಮನೆಯಲ್ಲಿ ನೆಮ್ಮದಿ, ಖುಷಿ ಇರಲಿದೆ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಲಕ್ಷಣಗಳಿವೆ. ಉದ್ಯೋಗದಲ್ಲಿರುವವರು ಬಯಸಿದ ವರ್ಗಾವಣೆಯನ್ನು ಪಡೆಯಬಹುದು. ಅದೇ ಸಮಯದಲ್ಲಿ, ವ್ಯಾಪಾರಿಗಳು ಉತ್ತಮ ಲಾಭವನ್ನು ಪಡೆಯುತ್ತಾರೆ. ಆರೋಗ್ಯದ ದೃಷ್ಟಿಯಿಂದ ದಿನವು ಅನುಕೂಲಕರವಾಗಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 8
ಅದೃಷ್ಟದ ಸಮಯ: ಬೆಳಿಗ್ಗೆ 7:55 ರಿಂದ 9:50 ರವರೆಗೆ

ತುಲಾ ರಾಶಿ

ನೀವು ಯಾವುದೇ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬಹುದು. ಈ ದಿನ ನಿರ್ಗತಿಕರಿಗೆ ನಿಮ್ಮ ಕೈಯಲ್ಲಿ ಆದ ಸಹಾಯ ಮಾಡಿ. ಕೆಲಸದ ವಿಷಯದಲ್ಲಿ ಈ ದಿನ ತುಂಬಾ ಕಾರ್ಯನಿರತವಾಗಿರಲಿದೆ. ಬಾಕಿ ಉಳಿದಿರುವ ಕಾರ್ಯಗಳನ್ನು ಪೂರ್ಣಗೊಳಿಸಲು ನೀವು ಹೆಚ್ಚು ಶ್ರಮಿಸಬೇಕಾಗುವುದು. ಹಣಕ್ಕೆ ಸಂಬಂಧಿಸಿದ ಚಿಂತೆಗಳಿಂದ ಉತ್ತಮ ಪರಿಹಾರ ಸಿಗಲಿದೆ. ಆರೋಗ್ಯದ ವಿಷಯದಲ್ಲಿ ಈ ದಿನವು ಮಿಶ್ರಫಲ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಬೆಳಿಗ್ಗೆ 5:25 ರಿಂದ 8:45 ರವರೆಗೆ

ವೃಶ್ಚಿಕ ರಾಶಿ

ಸಂಗಾತಿ ನಿಮ್ಮೊಂದಿಗೆ ಹೆಚ್ಚು ಸಮಯ ಕಳೆಯಲು ಬಯಸಬಹುದು. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನೀವು ಪ್ರಯತ್ನಗಳನ್ನು ಮಾಡುತ್ತಿದ್ದರೆ, ನೀವು ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ಉದ್ಯೋಗಿಗಳಿಗೆ ಕಚೇರಿಯಲ್ಲಿ ತಮ್ಮ ನಡವಳಿಕೆಯ ಬಗ್ಗೆ ಜಾಗ್ರತೆವಹಿಸಲು ಸಲಹೆ ನೀಡಲಾಗಿದೆ. ಅನಗತ್ಯ ಕೋಪವನ್ನು ನಿಯಂತ್ರಿಸಿ, ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಸಮಯ: ಸಂಜೆ 4 ರಿಂದ ರಾತ್ರಿ 8:35 ರವರೆಗೆ

ಧನು ರಾಶಿ

ತಾಯಿಯ ಆರೋಗ್ಯದಲ್ಲಿ ಹಠಾತ್ ಕುಸಿತ ಉಂಟಾಗಬಹುದು. ಅಂತಹ ಪರಿಸ್ಥಿತಿಯಲ್ಲಿ, ಇಂದು ಅವರ ಆರೋಗ್ಯದ ಬಗ್ಗೆ ಅಧಿಕ ಕಾಳಜಿವಹಿಸಬೇಕಾಗಿದೆ. ಹಣಕಾಸಿನ ಸ್ಥಿತಿ ಹದಗೆಡುವ ಸಾಧ್ಯತೆ ಇದೆ. ಈ ದಿನ ಇದ್ದಕ್ಕಿದ್ದಂತೆ ದೊಡ್ಡ ಖರ್ಚು ಬರಬಹುದು. ಹೆಚ್ಚುತ್ತಿರುವ ಕೆಲಸದ ಹೊರೆ ನಿಮ್ಮ ಆತಂಕವನ್ನು ಹೆಚ್ಚಿಸಬಹುದು. ಕೆಲಸದ ಜೊತೆಗೆ ನಿಮ್ಮ ವೈಯಕ್ತಿಕ ಜೀವನದ ಕಡೆಗೂ ಗಮನಹರಿಸಿ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 6
ಅದೃಷ್ಟದ ಸಮಯ: ಮಧ್ಯಾಹ್ನ 2:50 ರಿಂದ ಸಂಜೆ 6 ರವರೆಗೆ

ಮಕರ ರಾಶಿ

ವ್ಯಾಪಾರಕ್ಕೆ ಸಂಬಂಧಿಸಿದ ಕಾನೂನು ವಿಷಯಗಳಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಮಾಡಬೇಡಿ, ಇಲ್ಲದಿದ್ದರೆ ಭಾರಿ ನಷ್ಟ ಉಂಟಾಗಬಹುದು. ಉದ್ಯೋಗಿಗಳಿಗೆ ಈ ದಿನ ಸಾಮಾನ್ಯವಾಗಿರುತ್ತದೆ. ಸಂಗಾತಿಯ ಮನಸ್ಥಿತಿ ಇಂದು ಅಷ್ಟು ಸರಿಯಿರಲ್ಲ, ನೀವು ಅವರೊಂದಿಗೆ ತಾಳ್ಮೆಯಿಂದ ವರ್ತಿಸಿ. ಹಣದ ಪರಿಸ್ಥಿತಿ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಬೆಳಿಗ್ಗೆ 4:05 ರಿಂದ 8:55 ರವರೆಗೆ

ಕುಂಭ ರಾಶಿ

ನೀವು ನಿರುದ್ಯೋಗಿಗಳಾಗಿದ್ದರೆ ಮತ್ತು ಉದ್ಯೋಗವನ್ನು ಹುಡುಕುತ್ತಿದ್ದರೆ, ಇಂದು ನೀವು ಉತ್ತಮ ಅವಕಾಶವನ್ನು ಪಡೆಯಬಹುದು. ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ವ್ಯಾಪಾರಿಗಳಿಗೆ ಲಾಭ ಗಳಿಸಲು ಉತ್ತಮ ಅವಕಾಶ ಸಿಗಲಿದೆ. ಕೌಟುಂಬಿಕ ಜೀವನ ಸುಖಮಯವಾಗಿರಲಿದೆ. ಇಂದು ಮನೆಯ ಸದಸ್ಯರೊಂದಿಗೆ ಖುಷಿಯಿಂದ ಸಮಯ ಕಳೆಯುತ್ತೀರಿ. ಹಣದ ವಿಚಾರದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಮಾಡಬೇಡಿ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಮಧ್ಯಾಹ್ನ 2:30 ರಿಂದ 4:30 ರವರೆಗೆ

ಮೀನ ರಾಶಿ

ನಿಮಗೆ ಈಗಾಗಲೇ ಯಾವುದಾದರು ಆರೋಗ್ಯ ಸಮಸ್ಯೆಯಿದ್ದರೆ ನೀವು ಹೆಚ್ಚು ಜಾಗರೂಕರಾಗಿರಲು ಸಲಹೆ ನೀಡಲಾಗಿದೆ. ಕಚೇರಿಯಲ್ಲಿ ಕೆಲವು ಜವಾಬ್ದಾರಿಯುತ ಕೆಲಸವನ್ನು ನಿಮಗೆ ವಹಿಸಿಕೊಡಬಹುದು, ಅದನ್ನು ತಪ್ಪಾಗದಂತೆ ಮಾಡಿ ಮುಗಿಸಿ. ವ್ಯಾಪಾರಸ್ಥರಿಗೆ ತಕ್ಕ ಲಾಭ ದೊರೆಯಲಿದೆ. ಮನೆಯ ಕಿರಿಯ ಸದಸ್ಯರೊಂದಿಗೆ ನಿಮ್ಮ ಸಂಬಂಧವು ಇನ್ನಷ್ಟು ಬಲವಾಗಲಿದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ ಸಂಜೆ 5 ರವರೆಗೆ

English summary

Dina Bhavishya June 15 2023 Today Rashi Bhavishya, Daily Horoscope in Kannada

Dina Bhavishya- Get Today's Rashi Bhavishy 15 June 2023 In Kannada, Read daily horoscope prediction of aries, taurus, gemini, cancer, leo, virgo, libra, scorpio, Sagittarius, Capricorn, Aquarius, pisces in Kannada.
Story first published: Thursday, June 15, 2023, 4:00 [IST]
X
Desktop Bottom Promotion