Latest Updates
-
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್! -
ಸಸ್ಯಜನ್ಯ ಹಾಲು: ತೂಕ ಇಳಿಕೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಇದುವೇ ಬೆಸ್ಟ್ ಪರ್ಯಾಯ! -
ಸಕ್ಕರೆ ಬೆಲೆ ಏರಿಕೆ ಬಿಸಿ: ಹಬ್ಬದ ಸಿಹಿ ಬಜೆಟ್ ಉಳಿಸಲು ಇಲ್ಲಿದೆ 300 ರೂಪಾಯಿಯ ಸ್ಮಾರ್ಟ್ ಟಿಪ್ಸ್ -
ವರಮಹಾಲಕ್ಷ್ಮೀ ವ್ರತದ ಶಾಸ್ತ್ರೋಕ್ತ ವಿಧಾನ ಮತ್ತು ಪೂಜಾ ನಿಯಮಗಳು -
ವರಮಹಾಲಕ್ಷ್ಮೀ ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬಿಸಿ: ಕೆ.ಆರ್. ಮಾರುಕಟ್ಟೆಯಲ್ಲಿ ಗಗನಕ್ಕೇರಿದ ಹೂವು-ಹಣ್ಣುಗಳ ದರ -
BWF ವಿಶ್ವ ಚಾಂಪಿಯನ್ಷಿಪ್: ದೆಹಲಿಯಲ್ಲಿ ಭಾರತೀಯ ಆಟಗಾರರ ಅಬ್ಬರ, ಅಭಿಮಾನಿಗಳಿಗೆ ಇಲ್ಲಿದೆ ವಿಶೇಷ ಗೇಮ್ ಪ್ಲಾನ್! -
ವರಮಹಾಲಕ್ಷ್ಮಿ ಹಬ್ಬದ ದಿನಾಂಕದ ಗೊಂದಲ: ಆಗಸ್ಟ್ 21 ಅಥವಾ 28? ಇಲ್ಲಿದೆ ಸ್ಪಷ್ಟ ಮಾಹಿತಿ! -
ವಿಶ್ವ ಸೊಳ್ಳೆ ದಿನ: ಮಳೆಗಾಲದಲ್ಲಿ ಬಾಲ್ಕನಿಯಲ್ಲಿ ಯೋಗ ಮಾಡುವಾಗ ಸೊಳ್ಳೆ ಕಡಿತದಿಂದ ಪಾರಾಗುವುದು ಹೇಗೆ? -
BWF ವರ್ಲ್ಡ್ಸ್ ದೆಹಲಿ: ಕ್ಯೂನಲ್ಲಿ ನಿಂತು ಸುಸ್ತಾಗಿದ್ದೀರಾ? ಈ 8 ನಿಮಿಷದ ವ್ಯಾಯಾಮ ನಿಮ್ಮ ನೋವನ್ನು ಮರೆಸುತ್ತೆ!
Horoscope Today 16 June: ಜೂನ್ 16 ಈ ದಿನ ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಜೂನ್ 16ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ಉತ್ತರಾಯಣ
ಋತು: ವಸಂತ
ಮಾಸ: ಆಷಾಢ
ಪಕ್ಷ: ಕೃಷ್ಣಪಕ್ಷ
ತಿಥಿ: ತ್ರಯೋದಶಿ 08:39ರ ನಂತರ ಕೃತಿಕಾ
ನಕ್ಷತ್ರ: ಕೃತಿಕಾ 03:07ರವರೆಗೆ ರೋಹಿಣಿ
ರಾಹುಕಾಲ: ಬೆಳಗ್ಗೆ 10:44ರಿಂದ 12:20ರವರೆಗೆ
ಮೇಷ ರಾಶಿ
ಕಛೇರಿಯಲ್ಲಿ ಅತ್ಯಂತ ಸಮತೋಲಿತವಾಗಿ ವರ್ತಿಸಲು ನಿಮಗೆ ಸಲಹೆ ನೀಡಲಾಗಿದೆ. ನಿಮ್ಮಿಂದ ತಪ್ಪುಗಳಾದರೆ ಅದನ್ನು ಒಪ್ಪಿಕೊಳ್ಳಿ. ಉನ್ನತ ಅಧಿಕಾರಿಗಳೊಂದಿಗೆ ಈ ದಿನ ವಾದ ಮಾಡಲು ಹೋಗಬೇಡಿ. ವ್ಯಾಪಾರಸ್ಥರಿಗೆ ಇಂದು ಮಿಶ್ರಫಲ. ಜೀವನ ಸಂಗಾತಿಯ ಪ್ರೀತಿ ಮತ್ತು ಬೆಂಬಲ ಸಿಗಲಿದೆ. ಆರೋಗ್ಯಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ನಿಮಗೆ ಗ್ಯಾಸ್, ಅಜೀರ್ಣ, ಅಸಿಡಿಟಿ ಮುಂತಾದ ಸಮಸ್ಯೆಗಳಿರಬಹುದು.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 6
ಅದೃಷ್ಟದ ಸಮಯ: ಮಧ್ಯಾಹ್ನ 2:15 ರಿಂದ ಸಂಜೆ 4 ರವರೆಗೆ

ವೃಷಭ ರಾಶಿ
ಈ ದಿನ ತುಂಬಾ ಚೆನ್ನಾಗಿರಲಿದೆ. ಈ ದಿನ ನೀವು ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ಈ ದಿನ ನೀವು ತುಂಬಾ ಖುಷಿಯಾಗಿರುವಿರಿ. ವ್ಯವಹಾರಸ್ಥರು ಈ ದಿನ ಲಾಭ ಪಡೆಯಬಹುದು. ಆರ್ಥಿಕ ಪರಿಸ್ಥಿತಿ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ತುಂಬಾ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: ಸಂಜೆ 5:15 ರಿಂದ ರಾತ್ರಿ 8 ರವರೆಗೆ
ಮಿಥುನ ರಾಶಿ
ಸಂಗಾತಿಯೊಂದಿಗಿನ ಸಂಬಂಧದಲ್ಲಿ ಉತ್ತಮ ಹೊಂದಾಣಿಕೆ ಇರಲಿದೆ. ಹಣದ ಪರಿಸ್ಥಿತಿ ಉತ್ತಮವಾಗಿರಲಿದೆ. ಈ ದಿನ ದುಂದು ವೆಚ್ಚ ಮಾಡಬೇಡಿ. ಕೆಲಸದ ಬಗ್ಗೆ ಯಾವುದೇ ರೀತಿಯ ನಿರ್ಲಕ್ಷ್ಯ ಮಾಡಬೇಡಿ. ಆರೋಗ್ಯವಾಗಿರಲು ಈ ದಿನ ಆಹಾರಕ್ರಮದ ಕಡೆಗೆ ಗಮನಹರಿಸಿ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಬೆಳಿಗ್ಗೆ 6:20 ರಿಂದ 9:20 ರವರೆಗೆ
ಕರ್ಕ ರಾಶಿ
ಈ ದಿನ ಕಚೇರಿಯಲ್ಲಿ ಪ್ರಮುಖ ಘಟನೆ ನಡೆಯಲಿದೆ. ಈ ದಿನ ನೀವು ನಿಮ್ಮ ಅಭಿಪ್ರಾಯವನ್ನು ಆತ್ಮವಿಶ್ವಾಸದಿಂದ ಪ್ರಸ್ತುತ ಪಡಿಸುತ್ತೀರಿ. ವ್ಯಾಪಾರಸ್ಥರು ಲಾಭ ಗಳಿಸಲು ಆತುರಪಡಬಾರದು. ವೈಯಕ್ತಿಕ ಜೀವನದಲ್ಲಿ ಈ ದಿನ ಒತ್ತಡವಿರಲಿದೆ. ಸಂಗಾತಿಯ ಆರೋಗ್ಯ ಕ್ಷೀಣಿಸಬಹುದು.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಸಂಜೆ 6:30 ರಿಂದ ರಾತ್ರಿ 9 ರವರೆಗೆ
ಸಿಂಹ ರಾಶಿ
ಈ ದಿನ ಮಾತನಾಡುವಾಗ ನೀವು ನಿಮ್ಮ ಮಾತಿನ ಕಡೆಗೆ ಗಮನಹರಿಸಿ. ನಿಮ್ಮ ಮಾತುಗಳಿಂದ ಯಾರನ್ನೂ ನೋಯಿಸಬೇಡಿ. ಹಣಕಾಸಿನ ವಿಷಯಗಳಲ್ಲಿ ನೀವು ಜಾಗರೂಕರಾಗಿರಬೇಕು. ತರಾತುರಿಯಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 27
ಅದೃಷ್ಟದ ಸಮಯ: ಮಧ್ಯಾಹ್ನ 12:25 ರಿಂದ ಮಧ್ಯಾಹ್ನ 3 ರವರೆಗೆ
ಕನ್ಯಾ ರಾಶಿ
ನೀವು ಉದ್ಯಮಿಯಾಗಿದ್ದರೆ ಈ ದಿನ ನಿಮ್ಮ ಕೆಲಸದಲ್ಲಿ ಅಡೆತಡೆ ಇರಬಹುದು. ಕೆಲವು ಕಾರಣಗಳಿಂದಾಗಿ ನಿಮ್ಮ ಕೆಲಸಕ್ಕೆ ಅಡೆತಡೆ ಉಂಟಾಗಬಹುದು. ಉದ್ಯೋಗಿಗಳು ತಮ್ಮ ಕೆಲಸವನ್ನು ಬಾಕಿಯುಳಿಸಬೇಡಿ. ಹಣದ ವಿಷಯದಲ್ಲಿ ಈ ದಿನವು ಮಿಶ್ರಫಲ. ನಿಮ್ಮನ್ನು ತಾಜಾ ಮತ್ತು ಆರೋಗ್ಯಕರವಾಗಿಡಲು ವಿಶ್ರಾಂತಿ ಕಡೆಗೆ ಗಮನಹರಿಸಿ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 10
ಅದೃಷ್ಟದ ಸಮಯ: ಬೆಳಿಗ್ಗೆ 4 ರಿಂದ 8 ರವರೆಗೆ
ತುಲಾ ರಾಶಿ
ಪ್ರೇಮಿಗಳಿಗೆ ಈ ದಿನ ಬಹಳ ರೋಮ್ಯಾಂಟಿಕ್ ದಿನವಾಗಲಿದೆ. ನಿಮ್ಮ ಕೆಲಸ ತಾತ್ಕಾಲಿಕವಾಗಿದ್ದರೆ ಇಂದು ಕೆಲಸದ ವಿಷಯದಲ್ಲಿ ಅಭದ್ರತೆ ಕಾಡಬಹುದು. ವ್ಯಾಪಾರಸ್ಥರಿಗೆ ತಕ್ಕ ಲಾಭ ದೊರೆಯಲಿದೆ. ನಿಮ್ಮ ಆರೋಗ್ಯದ ಬಗ್ಗೆ ಹೇಳುವುದಾದರೆ ನೀವು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಹೊಂದಿರಬಹುದು.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಸಂಜೆ 4:35 ರಿಂದ ರಾತ್ರಿ 8:35 ರವರೆಗೆ
ವೃಶ್ಚಿಕ ರಾಶಿ
ಹಣದ ವಿಷಯದಲ್ಲಿ ಈ ದಿನ ಉತ್ತಮವಾಗಿದೆ. ನಿಮ್ಮ ಆದಾಯ ಹೆಚ್ಚಾಗಬಹುದು. ವ್ಯಾಪಾರಸ್ಥರು ತಮ್ಮ ಕೆಲಸಕ್ಕೆ ಸಂಬಂಧಿಸದಂತೆ ಪ್ರಯಾಣ ಮಾಡಬೇಕಾಗುವುದು. ನಿಮ್ಮ ಈ ಪ್ರಯಾಣವು ತುಂಬಾ ಪ್ರಯೋಜನಕಾರಿಯಾಗಲಿದೆ. ಕೆಲಸದ ಜೊತೆಗೆ ನಿಮ್ಮ ಕುಟುಂಬದ ಬಗ್ಗೆಯೂ ಗಮನ ಹರಿಸಬೇಕು. ಈ ದಿನ ನಿಮ್ಮ ವರ್ತನೆ ನಿಮ್ಮ ಪ್ರೀತಿಪಾತ್ರರ ಮನಸ್ಸು ನೋಯಿಸಬಹುದು.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 8
ಅದೃಷ್ಟದ ಸಮಯ: ಮಧ್ಯಾಹ್ನ 2:55 ರಿಂದ ಸಂಜೆ 5:20 ರವರೆಗೆ
ಧನು ರಾಶಿ
ಸಂಗಾತಿಯೊಂದಿಗಿನ ಭಿನ್ನಾಭಿಪ್ರಾಯ ಹೆಚ್ಚಾಗಬಹುದು. ನಿಮ್ಮ ಸಂಗಾತಿಯ ನಡವಳಿಕೆ ನಿಮ್ಮ ಮನಸ್ಸು ನೋಯಿಸಬಹುದು. ನೀವಿಬ್ಬರು ಪರಸ್ಪರ ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಿ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ಇದು ಉದ್ಯೋಗ ಅಥವಾ ವ್ಯವಹಾರವಾಗಿರಲಿ ಒತ್ತಡ ಅಧಿಕವಿರಲಿದೆ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 14
ಅದೃಷ್ಟದ ಸಮಯ: ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ರವರೆಗೆ
ಮಕರ ರಾಶಿ
ನೀವು ಕೆಲವು ದಿನಗಳಿಂದ ಕೆಲಸದಲ್ಲಿ ತುಂಬಾ ಬ್ಯುಸಿಯಾಗಿದ್ದರೆ ಮತ್ತು ನಿಮ್ಮ ಕುಟುಂಬದ ಕಡೆಗೆ ಗಮನ ಹರಿಸದಿದ್ದರೆ ಈ ದಿನ ಕುಟುಂಬದ ಕಡೆಗೆ ಗಮನಹರಿಸಲು ಸಾಧ್ಯವಾಗುವುದು. ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ಈ ದಿನ ನಿಮ್ಮ ಕೆಲಸಗಳಿಗೆ ಕುಟುಂಬದವರ ಬೆಂಬಲ ಸಿಗಲಿದೆ. ಆರೋಗ್ಯದ ದೃಷ್ಟಿಯಿಂದ ದಿನವು ಅನುಕೂಲಕರವಾಗಿರಲಿದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 19
ಅದೃಷ್ಟದ ಸಮಯ: ಸಂಜೆ 6:20 ರಿಂದ ರಾತ್ರಿ 8:20 ರವರೆಗೆ
ಕುಂಭ ರಾಶಿ
ಉದ್ಯಮಿಗಳು ಈ ದಿನ ಬಯಸಿದ ಫಲಿತಾಂಶ ಪಡೆಯಬಹುದು. ನೀವು ಇತ್ತೀಚೆಗೆ ಹೂಡಿಕೆ ಮಾಡಿದ್ದರೆ ಅದರ ಲಾಭ ಪಡೆಯುತ್ತೀರಿ. ಉದ್ಯೋಗಸ್ಥರಿಗೆ ಮೇಲಧಿಕಾರಿಯ ಮಾರ್ಗದರ್ಶನ ದೊರೆಯಲಿದೆ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಉತ್ತಮ ಹೊಂದಾಣಿಕೆ ಇರುತ್ತದೆ. ಆರೋಗ್ಯಕ್ಕೆ ಸಂಬಂಧಿಸಿದ ಚಿಂತೆಗಳು ದೂರವಾಗಲಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ ಸಂಜೆ 4 ರವರೆಗೆ
ಮೀನ ರಾಶಿ
ನೀವು ದೀರ್ಘ ಪ್ರಯಾಣವನ್ನು ಮಾಡಲು ಬಯಸಿದರೆ ಈ ದಿನ ಹೆಚ್ಚು ಜಾಗರೂಕರಾಗಿರಬೇಕು. ಈ ದಿನ ನಿಮ್ಮ ವಸ್ತುಗಳ ಕಡೆ ಗಮನಹರಿಸಿ, ಇಲ್ಲದಿದ್ದರೆ ಬಾಸ್ ನಿಮ್ಮ ಕೆಲಸದ ಬಗ್ಗೆ ಅತೃಪ್ತಿ ವ್ಯಕ್ತಪಡಿಸಬಹುದು. ವ್ಯಾಪಾರಸ್ಥರು ಹಣಕ್ಕೆ ಸಂಬಂಧಿಸಿದ ವಹಿವಾಟುಗಳನ್ನು ಮಾಡದಂತೆ ಸೂಚಿಸಲಾಗಿದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 17
ಅದೃಷ್ಟದ ಸಮಯ: ಬೆಳಿಗ್ಗೆ 7:05 ರಿಂದ 9:15 ರವರೆಗೆ



Click it and Unblock the Notifications
