Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
Horoscope Today 18 June: ಜೂನ್ 18 ಈ ದಿನ ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಜೂನ್ 18ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ಉತ್ತರಾಯಣ
ಋತು: ವಸಂತ
ಮಾಸ: ಆಷಾಢ
ಪಕ್ಷ: ಕೃಷ್ಣಪಕ್ಷ
ತಿಥಿ: ಅಮವಾಸ್ಯೆ
ನಕ್ಷತ್ರ: ಸಂಜೆ 06:06ರವರೆಗೆ ಮೃಗಶೀರ್ಷ ನಂತರ ಆರ್ದ್ರಾ ನಕ್ಷತ್ರ
ರಾಹುಕಾಲ: ಸಂಜೆ 05:11ರಿಂದ 06:47ರವರೆಗೆ
ಮೇಷ ರಾಶಿ
ನೀವು ಕುಟುಂಬದೊಂದಿಗೆ ದೂರ ಪ್ರಯಾಣ ಮಾಡಬಹುದುಉ. ಕುಟುಂಬದೊಂದಿಗೆ ಸಂತೋಷದಿಂದ ಸಮಯ ಕಳೆಯುತ್ತೀರಿ. ಆದರೆ ನೀವು ನಿಮ್ಮ ಬಜೆಟ್ ಗಮನದಲ್ಲಿಟ್ಟುಕೊಂಡು ಖರ್ಚು ಮಾಡಿದರೆ ಒಳ್ಳೆಯದು. ಇಂದು ಕೆಲಸದ ವಿಷಯದಲ್ಲಿ ತೃಪ್ತಿ ಸಿಗಲಿದೆ. ನಿಮ್ಮ ಯಾವುದೇ ಸ್ಥಗಿತಗೊಂಡ ಕೆಲಸ ಇಂದು ಪೂರ್ಣವಾಗಲಿದೆ.
ಅದೃಷ್ಟದ ಬಣ್ಣ: ಕಡು ಹಸಿರು
ಅದೃಷ್ಟದ ಸಂಖ್ಯೆ: 18
ಅದೃಷ್ಟದ ಸಮಯ: ಬೆಳಿಗ್ಗೆ 9:45 ರಿಂದ ಮಧ್ಯಾಹ್ನ 12

ವೃಷಭ ರಾಶಿ
ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸುಧಾರಣೆ ಕಂಡುಬರಲಿದೆ. ಈ ದಿನ ನಿಮ್ಮ ಮಾತಿನ ಬಗ್ಗೆ ಕಾಳಜಿ ವಹಿಸಲು ಸಲಹೆ ನೀಡಲಾಗಿದೆ. ಕೆಲಸದ ಬಗ್ಗೆ ಹೇಳುವುದಾದರೆ ಕೆಲಸದ ಜಾಗದಲ್ಲಿ ಸುಮ್ಮನೆ ತಮಾಷೆ ಮಾಡಲು ಹೋಗಬೇಡಿ, ತಮಾಷೆ ಸೀರಿಯಸ್ ಆಗಬಹುದು. ಉದ್ಯಮಿಗಳು ತರಾತುರಿಯಲ್ಲಿ ಹಣಕಾಸಿನ ವಹಿವಾಟು ನಡೆಸದಂತೆ ಸೂಚಿಸಲಾಗಿದೆ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 24
ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ ಸಂಜೆ 4 ರವರೆಗೆ
ಮಿಥುನ ರಾಶಿ
ಆಫೀಸ್ ನಲ್ಲಿ ಬಾಸ್ ನ ಮೂಡ್ ಚೆನ್ನಾಗಿರುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಕೆಲಸದ ಬಗ್ಗೆ ಸ್ವಲ್ಪ ಕೂಡ ನಿರ್ಲಕ್ಷ್ಯ ತೋರಿಸಬೇಡಿ, ವ್ಯಾಪಾರಸ್ಥರಿಗೆ ಈ ದಿನ ಮಿಶ್ರಫಲ ದೊರೆಯಲಿದೆ. ಕೆಲಸದ ಜೊತೆಗೆ ನಿಮ್ಮ ಕೌಟುಂಬಿಕ ಜೀವನದ ಬಗ್ಗೆಯೂ ಗಮನ ಹರಿಸುವುದು ಒಳ್ಳೆಯದು. ಸದಾ ಕೆಲಸ ಅಂತ ಕುಟುಂಬದ ಕಡೆ ಗಮನಹರಿಸದಿದ್ದರೆ ಅಸಮಧಾನದಿಂದಾಗಿ ಸಮಸ್ಯೆ ಹೆಚ್ಚಾಗುವುದು. ವೃತ್ತಿ ಹಾಗೂ ವೈಯಕ್ತಿಕ ಬದುಕಿನ ನಡುವೆ ಸಮತೋಲನವಿರಲಿ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 36
ಅದೃಷ್ಟದ ಸಮಯ: ಬೆಳಿಗ್ಗೆ 4:50 ರಿಂದ 10 ರವರೆಗೆ
ಕರ್ಕ ರಾಶಿ
ಕೆಲಸದ ವಿಷಯದಲ್ಲಿ ಈ ದಿನವು ತುಂಬಾ ಕಾರ್ಯನಿರತವಾಗಿರುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ದಿನದ ಯೋಜನೆಗಳನ್ನು ನೀವು ಮುಂಚಿತವಾಗಿ ಮಾಡಿದರೆ ಅದು ಉತ್ತಮವಾಗಿರುತ್ತದೆ. ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರಲಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆ ಇರಬಹುದು.
ಅದೃಷ್ಟದ ಬಣ್ಣ: ಬೂದು
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಬೆಳಿಗ್ಗೆ 9:20 ರಿಂದ ಮಧ್ಯಾಹ್ನ 2:20 ರವರೆಗೆ
ಸಿಂಹ ರಾಶಿ
ಮನೆ ನೆಮ್ಮದಿದಾಗಿ ಹೊರಗಿನ ವಿಷಯವನ್ನು ಹೊರಗಡೆಯೇ ಬಿಡಿ, ಮನೆಗೆ ತರಬೇಡಿ. ನಿಮ್ಮ ಪ್ರೀತಿಪಾತ್ರರ ಸಂತೋಷದ ಕಡೆಯೂ ನೀವು ಕಾಳಜಿ ವಹಿಸಬೇಕು. ಕಚೇರಿಯಲ್ಲಿ ಸಹೋದ್ಯೋಗಿಗಳನ್ನು ಅತಿಯಾಗಿ ನಂಬಲು ಹೋಗಬೇಡಿ, ನಿಮ್ಮ ಯಾವುದೇ ರಹಸ್ಯ ಅವರೊಂದಿಗೆ ಹಂಚಿಕೊಳ್ಳಬೇಡಿ, ಇಲ್ಲದಿದ್ದರೆ ಒಳ ಪಿತೂರಿಗೆ ಬಲಿಯಾಗಬೇಕಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ಈ ದಿನವು ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 8
ಅದೃಷ್ಟದ ಸಮಯ: ಸಂಜೆ 7 ರಿಂದ 8:25 ರವರೆಗೆ
ಕನ್ಯಾ ರಾಶಿ
ವಿದ್ಯಾರ್ಥಿಗಳಿಗೆ ಈ ದಿನವು ಅನುಕೂಲಕರವಾಗಿರಲಿದೆ. ನಿಮ್ಮ ಅಧ್ಯಯನದ ಕಡೆಗೆ ಶ್ರದ್ಧೆಯಿಂದ ಗಮನಹರಿಸಿ. ಹಣದ ಕೊರತೆಯಿಂದ ನಿಮ್ಮ ಯಾವುದೇ ಕೆಲಸವು ಅಪೂರ್ಣವಾಗಿ ಉಳಿದಿದ್ದರೆ ಈ ದಿನ ಪೂರ್ಣವಾಗಲಿದೆ. ಸಂಗಾತಿಯೊಂದಿಗಿನ ಸಂಬಂಧವು ತೀವ್ರವಾಗಿರಲಿದೆ. ಮನೆಯ ಜವಾಬ್ದಾರಿಗಳನ್ನು ಪೂರೈಸುವಲ್ಲಿ ನಿಮ್ಮ ಪ್ರೀತಿಪಾತ್ರರ ಬೆಂಬಲವನ್ನು ನೀವು ಪಡೆಯುತ್ತೀರಿ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 19
ಅದೃಷ್ಟದ ಸಮಯ: ಮಧ್ಯಾಹ್ನ 12 ರಿಂದ 3 ರವರೆಗೆ
ತುಲಾ ರಾಶಿ
ಹಣದ ವಿಷಯದಲ್ಲಿ ನೋಡುವುದಾದರೆ ಈ ದಿನವು ಏರಿಳಿತಗಳಿಂದ ತುಂಬಿರುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸಲಿದೆ, ಆದರೆ ವೆಚ್ಚಗಳು ಹೆಚ್ಚಾಗಬಹುದು. ನಿಮ್ಮ ಕೆಲಸದ ಬಗ್ಗೆ ಸ್ವಲ್ಪವೂ ನಿರ್ಲಕ್ಷ್ಯ ಬೇಡ. ಈ ಸಮಯ ಬಹಳ ಮುಖ್ಯವಾಗಿದ್ದು ಕೆಲಸದ ಕಡೆಗೆ ಗಮನಹರಿಸಿ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಸಂಜೆ 6:30 ರಿಂದ 8:35 ರವರೆಗೆ
ವೃಶ್ಚಿಕ ರಾಶಿ
ಇಂದು ದಿನದ ಆರಂಭವು ತುಂಬಾ ಚೆನ್ನಾಗಿರಲಿದೆ. ಆದರೆ ನೀವು ಚಿಕ್ಕ ನಿರ್ಧಾರವನ್ನೂ ಕೂಡ ತುಂಬಾ ಎಚ್ಚರಿಕೆಯಿಂದ ತೆಗೆದುಕೊಳ್ಳಬೇಕು, ಅದು ವೈಯಕ್ತಿಕ ಬದುಕಿಗೆ ಸಂಬಂಧಿಸಿದ್ದು ಆಗಿರಬಹುದು ಅಥವಾ ವೃತ್ತಿ ಜೀವನಕ್ಕೆ ಸಂಬಂಧಿಸಿದ್ದು ಆಗಿರಬಹುದು. ಈ ದಿನ ಕೆಲಸ ಕಾರ್ಯಗಳು ನೀವು ಬಯಸಿದಂತೆ ನಡೆಯಲಿದೆ. ವ್ಯಾಪಾರಸ್ಥರು ಲಾಭ ಗಳಿಸಲಿದ್ದಾರೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 19
ಅದೃಷ್ಟದ ಸಮಯ: ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ರವರೆಗೆ
ಧನು ರಾಶಿ
ಆರೋಗ್ಯದ ವಿಷಯದಲ್ಲಿ ಈ ದಿನ ನಿಮಗೆ ಉತ್ತಮವಾಗಿದೆ. ಏನಾದರೂ ಆರೋಗ್ಯ ಸಂಬಂಧಿಸಿದ ಸಮಸ್ಯೆ ಇದ್ದರೆ ಈ ದಿನ ಸುಧಾರಣೆ ಕಂಡು ಬರಲಿದೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಕೆಲಸದ ದೃಷ್ಟಿಯಿಂದ ನೋಡುವುದಾದರೆ ಈ ದಿನ ಸವಾಲಿನಿಂದ ಕೂಡಿದೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 16
ಅದೃಷ್ಟದ ಸಮಯ: ಬೆಳಿಗ್ಗೆ 7:25 ರಿಂದ 11 ರವರೆಗೆ
ಮಕರ ರಾಶಿ
ಪ್ರೀತಿಯ ವಿಷಯದಲ್ಲಿ ದಿನವು ತುಂಬಾ ವಿಶೇಷವಾಗಿರಲಿದೆ. ಸಂಗಾತಿಯೊಂದಿಗೆ ಈ ದಿನ ರೊಮ್ಯಾಂಟಿಕ್ ಆಗಿ ಕಳೆಯುತ್ತೀರಿ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ನೀವು ಹಣಕ್ಕೆ ಸಂಬಂಧಿಸಿದ ಕೆಲವು ಪ್ರಮುಖ ಕೆಲಸಗಳನ್ನು ಸಹ ಇಂದು ಮಾಡಬಹುದು. ಕೆಲಸದ ವಿಷಯದಲ್ಲಿ ಈ ದಿನವು ಕಾರ್ಯನಿರತವಾಗಿರಲಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 21
ಅದೃಷ್ಟದ ಸಮಯ: ಸಂಜೆ 7 ರಿಂದ 9:05 ರವರೆಗೆ
ಕುಂಭ ರಾಶಿ
ಈ ದಿನ ಅದೃಷ್ಟದ ದಿನವಾಗಿದೆ. ಕಡಿಮೆ ಪ್ರಯತ್ನದಿಂದ ಉತ್ತಮ ಯಶಸ್ಸನ್ನು ಪಡೆಯಲು ಸಾಧ್ಯವಾಗುವುದು. ಇದು ವೈಯಕ್ತಿಕ ಅಥವಾ ವೃತ್ತಿಪರ ಜೀವನದಲ್ಲಿ ಖುಷಿ ಇರಲಿದೆ, ಕೆಲವು ಧನಾತ್ಮಕ ಬದಲಾವಣೆಗಳನ್ನು ಕಾಣಬಹುದು. ಹಣಕ್ಕೆ ಸಂಬಂಧಿಸಿದ ಚಿಂತೆ ದೂರಾಗಲಿದೆ. ಆರೋಗ್ಯದ ದೃಷ್ಟಿಯಿಂದ ದಿನವು ಉತ್ತಮವಾಗಿದೆ. ಒಟ್ಟಿನಲ್ಲಿ ಈ ದಿನ ಕುಂಭ ರಾಶಿಯವರಿಗೆ ಶುಭವಾಗಿದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಮಧ್ಯಾಹ್ನ 12:30 ರಿಂದ ಸಂಜೆ 4 ರವರೆಗೆ
ಮೀನ ರಾಶಿ
ವೈವಾಹಿಕ ಅಥವಾ ಪ್ರೀತಿ ಜೀವನದ ಬಗ್ಗೆ ಹೇಳುವುದಾದರೆ ಸಂಗಾತಿಯೊಂದಿಗಿನ ಸಂಬಂಧ ಮತ್ತಷ್ಟು ಗಟ್ಟಿಯಾಗಲಿದೆ, ನೀವಿಬ್ಬರು ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸುತ್ತೀರಿ. ಕೆಲಸದ ಜಾಗದಲ್ಲಿ ಕೆಲಸದ ಕಡೆಗೆ ಗಮನ ಹರಿಸಿ, ಇಲ್ಲದಿದ್ದರೆ ಕಚೇರಿಯಲ್ಲಿ ಬಾಸ್ ನ ಕೋಪವನ್ನು ಎದುರಿಸಬೇಕಾಗಬಹುದು. ಒಂದು ಸಣ್ಣ ತಪ್ಪು ನಿಮಗೆ ದುಬಾರಿಯಾಗಬಹುದು. ಹಣದ ವಿಷಯದಲ್ಲಿ ಈ ದಿನವು ದುಬಾರಿಯಾಗಲಿದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ಸಮಯ: ಬೆಳಿಗ್ಗೆ 4 ರಿಂದ ಮಧ್ಯಾಹ್ನ 1:30 ರವರೆಗೆ



Click it and Unblock the Notifications
