Horoscope Today 2 June 2023: ಶುಕ್ರವಾರ: ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?

ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಜೂನ್‌ 2ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ಉತ್ತರಾಯಣ
ಋತು: ವಸಂತ
ಮಾಸ: ಜ್ಯೇಷ್ಠ
ಪಕ್ಷ: ಶುಕ್ಲಪಕ್ಷ
ತಿಥಿ: ಮಧ್ಯಾಹ್ನ 12:48ರವರೆಗೆ ತ್ರಯೋದಶಿ ನಂತರ ಚತುರ್ದಶಿ
ನಕ್ಷತ್ರ: ಸ್ವಾತಿ
ರಾಹುಕಾಲ: ಬೆಳಗ್ಗೆ 10:35ರಿಂದ ಮಧ್ಯಾಹ್ನ 12:19ರವರೆಗೆ

ಮೇಷ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ. ಈ ದಿನ ಜೀವನದಲ್ಲಿ ದೊಡ್ಡ ಧನಾತ್ಮಕ ಬದಲಾವಣೆ ಆಗಬಹುದು. ಕೆಲಸಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಇದ್ದರೆ, ಇಂದು ನಿಮ್ಮ ಈ ಸಮಸ್ಯೆಯೂ ಕೊನೆಗೊಳ್ಖಬಹುದು. ನಿಮ್ಮ ಕೆಲಸದ ಕಡೆ ಗಮನ ಹರಿಸಿ. ವ್ಯಾಪಾರಸ್ಥರು ಲಾಭ ಗಳಿಸಬಹುದು. ಈ ದಿನ ಹಳೆಯ ಸಾಲವನ್ನು ಮರಳಿಸಲು ಸಾಧ್ಯವಾಗುವುದು. ಸಂಗಾತಿಯ ಆರೋಗ್ಯದ ಕಡೆ ಗಮನಹರಿಸಿ. ನಿರ್ಲಕ್ಷ್ಯವು ದುಬಾರಿಯಾಗಿದೆ.
ಅದೃಷ್ಟದ ಬಣ್ಣ: ಗಾಢ ಕೆಂಪು
ಅದೃಷ್ಟದ ಸಂಖ್ಯೆ: 6
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ

Dina Bhavishya -June 2 2023 Today Rashi Bhavishya, Daily Horoscope in Kannada

ವೃಷಭ ರಾಶಿ
ಈ ದಿನ ನಿಮಗೆ ಬಿಡುವೇ ಇರುವುದಿಲ್ಲ. ವೈಯಕ್ತಿಕ ಅಥವಾ ವೃತ್ತಿ ಜೀವನದ ಜವಾಬ್ದಾರಿಗಳು ಹೆಚ್ಚಾಗಬಹುದು. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ಇಡೀ ದಿನದ ಯೋಜನೆಗಳನ್ನು ಮುಂಚಿತವಾಗಿ ಮಾಡಿ. ಈ ದಿನ ಕೆಲಸದ ಒತ್ತಡ ಹೆಚ್ಚಿರಲಿದೆ. ಉದ್ಯಮಿಗಳು ಇದ್ದಕ್ಕಿದ್ದಂತೆ ಕೆಲಸಕ್ಕೆ ಸಂಬಂಧಿಸಿದ ದೀರ್ಘ ಪ್ರಯಾಣ ಮಾಡಬೇಕಾಗಿರುವುದು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರಲಿದೆ. ಇಂದು ಆರೋಗ್ಯದಲ್ಲಿ ಏರಳಿತ ಉಂಟಾಗಬಹುದು.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 17
ಅದೃಷ್ಟದ ಸಮಯ: ಬೆಳಿಗ್ಗೆ 7 ರಿಂದ 11 ರವರೆಗೆ

ಮಿಥುನ ರಾಶಿ
ವಿದ್ಯಾರ್ಥಿಗಳಿಗೆ ಇಂದು ಸಂತಸದ ದಿನವಾಗಲಿದೆ. ನೀವು ಇತ್ತೀಚೆಗೆ ಯಾವುದೇ ಪರೀಕ್ಷೆಯನ್ನು ನೀಡಿದ್ದರೆ, ನೀವು ಅದ್ಭುತ ಯಶಸ್ಸನ್ನು ಪಡೆಯಬಹುದು. ಮತ್ತೊಂದೆಡೆ, ನೀವು ನಿಮ್ಮ ಅಧ್ಯಯನವನ್ನು ಪೂರ್ಣಗೊಳಿಸಿ ಉತ್ತಮ ಉದ್ಯೋಗವನ್ನು ಹುಡುಕುತ್ತಿದ್ದರೆ, ಇಂದು ನೀವು ದೊಡ್ಡ ಕಂಪನಿಯಿಂದ ಆಫರ್ ಪಡೆಯಬಹುದು. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಸಾಮಾನ್ಯವಾಗಿರಲಿದೆ. ಸಾಧ್ಯವಾದರೆ, ಮನೆಯ ಹಿರಿಯರೊಂದಿಗೆ ಹೆಚ್ಚು ಸಮಯ ಕಳೆಯಲು ಪ್ರಯತ್ನಿಸಿ. ಅವರ ಭಾವನೆಗಳನ್ನು ನಿರ್ಲಕ್ಷಿಸಬೇಡಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ, ಇಂದು ನೀವು ಉತ್ತಮವಾಗುತ್ತೀರಿ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 8:20 ರವರೆಗೆ

ಕರ್ಕ ರಾಶಿ
ನೀವು ಯಶಸ್ಸನ್ನು ಸಾಧಿಸಲು ನೀವು ಶ್ರಮಿಸಬೇಕು. ಮನೆಯ ವಾತಾವರಣ ಇಂದು ಪ್ರಕ್ಷುಬ್ಧವಾಗಿರಬಹುದು. ಹಣದ ವಿಚಾರದಲ್ಲಿ ಮನೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. ಅಂತಹ ಪರಿಸ್ಥಿತಿಯಲ್ಲಿ, ನೀವು ವಿಷಯವನ್ನು ಬಹಳ ಬುದ್ಧಿವಂತಿಕೆಯಿಂದ ಪರಿಹರಿಸಲು ಸಾಧ್ಯವಾಗುವುದು. ವೈಯಕ್ತಿಕ ಜೀವನದ ಸಮಸ್ಯೆಗಳು ನಿಮ್ಮ ಕೆಲಸದಲ್ಲಿ ಮೇಲುಗೈ ಸಾಧಿಸಬಹುದು. ಈ ದಿನ ಕೆಲಸದ ಕಡೆ ಗಮನ ಹರಿಸಲು ಸಾಧ್ಯವಾಗುವುದಿಲ್ಲ. ನಿಮ್ಮ ಕೆಲವು ಕೆಲಸಗಳು ಇಂದು ಅಪೂರ್ಣವಾಗಿ ಉಳಿಯುವ ಸಾಧ್ಯತೆಯಿದೆ. ಹಣದ ವಿಷಯದಲ್ಲಿ, ದಿನವು ಮಿಶ್ರವಾಗಿರಲಿದೆ. ನಾವು ಆರೋಗ್ಯದ ಬಗ್ಗೆ ಹೇಳುವುದಾದರೆ ನಿಮಗೆ ತಲೆನೋವಿನ ಸಮಸ್ಯೆ ಇರಬಹುದು.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 14
ಅದೃಷ್ಟದ ಸಮಯ: ಬೆಳಿಗ್ಗೆ 4:05 ರಿಂದ 7:45 ರವರೆಗೆ

ಸಿಂಹ ರಾಶಿ
ರಿಯಲ್‌ ಎಸ್ಟೇಟ್‌ನಲ್ಲಿ ಕೆಲಸ ಮಾಡುವವರಿಗೆ, ಆಸ್ತಿ ಸಂಬಂಧಿಸಿದ ವ್ಯವಹಾರ ಮಾಡುವವಿರಗೆ ಇಂದು ತುಂಬಾ ಪ್ರಯೋಜನಕಾರಿಯಾಗಲಿದೆ. ಇಂದು ನೀವು ದೊಡ್ಡ ವ್ಯವಹಾರವನ್ನು ಮಾಡಬಹುದು. ಉದ್ಯೋಗಿಗಳ ಆದಾಯದಲ್ಲಿ ಹೆಚ್ಚಳವಾಗಬಹುದು. ಸಂಗಾತಿಯ ಮನಸ್ಥಿತಿ ಇಂದು ಸರಿಯಿರುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ನೀವು ಯಾವುದೇ ವಿವಾದಾತ್ಮಕ ವಿಷಯವನ್ನು ಚರ್ಚೆ ತಪ್ಪಿಸಬೇಕು. ದಿನದ ಎರಡನೇ ಭಾಗದಲ್ಲಿ, ನೀವು ಸ್ವಲ್ಪ ದೂರ ಪ್ರಯಾಣಿಸುವ ಅವಕಾಶವನ್ನು ಪಡೆಯುತ್ತೀರಿ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ, ಇಂದು ಸ್ವಲ್ಪ ಸುಧಾರಣೆಯನ್ನು ಕಾಣಬಹುದು.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 28
ಅದೃಷ್ಟದ ಸಮಯ: ಬೆಳಿಗ್ಗೆ 8 ರಿಂದ 11:20 ರವರೆಗೆ

ಕನ್ಯಾ ರಾಶಿ
ಪ್ರಣಯ ಜೀವನದಲ್ಲಿ ಕೆಲವು ಏರುಪೇರುಗಳು ಉಂಟಾಗಬಹುದು. ಸಂಗಾತಿ ಹಾಗೂ ನಿಮ್ಮ ನಡುವೆ ಭಿನ್ನಾಭಿಪ್ರಾಯ ಉಂಟಾಗಬಹುದು. ಇಂದು ನೀವು ಹಣದ ವಿಷಯದಲ್ಲಿ ಬಹಳ ಜಾಗರೂಕರಾಗಿರಬೇಕು.ಕಚೇರಿಯಲ್ಲಿ ಕೋಪ ಮತ್ತು ದುರಹಂಕಾರದಿಂದ ವರ್ತಿಸದಂತೆ ಸಲಹೆ ನೀಡಲಾಗಿದೆ. ಉನ್ನತ ಅಧಿಕಾರಿಗಳು ನೀವು ಮಾಡಿದ ಕೆಲಸದಲ್ಲಿ ನ್ಯೂನತೆಗಳ ಬಗ್ಗೆ ಅವರು ಹೇಳಿದರೆ ನಿಮ್ಮ ತಪ್ಪುಗಳನ್ನು ಒಪ್ಪಿ, ಅವುಗಳನ್ನು ಸರಿಪಡಿಸಲು ಪ್ರಯತ್ನಿಸಿ. ವ್ಯಾಪಾರಸ್ಥರಿಗೆ ಇಂದು ಸರಾಸರಿ ದಿನವಾಗಲಿದೆ. ನಾವು ನಿಮ್ಮ ಆರೋಗ್ಯದ ಬಗ್ಗೆ ಹೇಳುವುದಾದರೆ ನಿಮಗೆ ಗ್ಯಾಸ್, ಅಜೀರ್ಣ, ಅಸಿಡಿಟಿ ಮುಂತಾದ ಸಮಸ್ಯೆಗಳಿರಬಹುದು.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 30
ಅದೃಷ್ಟದ ಸಮಯ: ಸಂಜೆ 6 ರಿಂದ 8:15 ರವರೆಗೆ

ತುಲಾ ರಾಶಿ
ಇಂದು ಮನೆಯಲ್ಲಿ ಪೂಜೆ, ಹವನ ಇತ್ಯಾದಿಗಳನ್ನು ಆಯೋಜಿಸಬಹುದು. ಈ ದಿನ ನೀವು ತುಂಬಾ ಖುಷಿಯಾಗಿರುವಿರಿ. ನಿಮ್ಮ ಪ್ರೀತಿಪಾತ್ರರ ಜೊತೆ ಹೆಚ್ಚು ಸಮಯ ಕಳೆಯುವ ಅವಕಾಶ ನಿಮಗೆ ದೊರೆಯುತ್ತದೆ. ಕೆಲಸದ ಬಗ್ಗೆ ಹೇಳುವುದಾದರೆ ಉದ್ಯೋಗಿಗಳಿಗೆ ಅದೃಷ್ಟದ ದಿನವಾಗಲಿದೆ. ನೀವು ದೊಡ್ಡ ಪ್ರಗತಿಯನ್ನು ಸಾಧಿಸಬಹುದು. ನಿಮ್ಮ ಸಂಬಳವು ದೀರ್ಘಕಾಲದಿಂದ ಸ್ಥಗಿತಗೊಂಡಿದ್ದರೆ ಇಂದು ನಿಮ್ಮ ಸಮಸ್ಯೆ ಪರಿಹಾರವಾಗಲಿದೆ. ಉದ್ಯಮಿಗಳು ಬಯಸಿದ ಫಲಿತಾಂಶಗಳನ್ನು ಪಡೆಯಬಹುದು. ಇಂದು ಆರೋಗ್ಯದ ದೃಷ್ಟಿಯಿಂದ ತುಂಬಾ ಒಳ್ಳೆಯ ದಿನವಾಗಲಿದೆ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 24
ಅದೃಷ್ಟದ ಸಮಯ: ಬೆಳಿಗ್ಗೆ 7 ರಿಂದ ರಾತ್ರಿ 9 ರವರೆಗೆ

ವೃಶ್ಚಿಕ ರಾಶಿ
ನೀವು ಕೆಲವು ಸಮಯದಿಂದ ನಿಮ್ಮ ಕೆಲಸದ ಬಗ್ಗೆ ಸರಿಯಾಗಿ ಗಮನ ಹರಿಸಲು ಸಾಧ್ಯವಾಗದಿದ್ದರೆ ಈ ದಿನ ನಿಮ್ಮ ಕೆಲಸದತ್ತ ಸಂಪೂರ್ಣ ಗಮನಹರಿಸಲು ಸಾಧ್ಯವಾಗುವುದು. ಎಲ್ಲಾ ಚಿಂತೆಗಳನ್ನು ಮರೆತು ನಿಮ್ಮ ಕೆಲಸದ ಮೇಲೆ ಗಮನ ಹರಿಸಲು ಸಾಧ್ಯವಾಗುವುದು. ನೀವು ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಸಂಪೂರ್ಣ ಬೆಂಬಲ ಪಡೆಯುತ್ತೀರಿ. ವ್ಯಾಪಾರಸ್ಥರಿಗೆ ಈ ದಿನ ಅನುಕೂಲಕರವಾಗಿದೆ. ಈ ದಿನ ಹಣವನ್ನು ಖರ್ಚು ಮಾಡುವ ಸಾಧ್ಯತೆಯಿದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ಒಳ್ಳೆಯದಿದೆ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಸಂಜೆ 5:05 ರಿಂದ 7:25 ರವರೆಗೆ

ಧನು ರಾಶಿ
ಸಂಗಾತಿಯೊಂದಿಗಿನ ಸಂಬಂಧವು ಸುಧಾರಿಸುತ್ತದೆ. ನಿಮ್ಮ ಮಾತು ಮತ್ತು ನಡವಳಿಕೆಯ ಬಗ್ಗೆ ಸಂಪೂರ್ಣ ಕಾಳಜಿ ವಹಿಸಲು ಸಲಹೆ ನೀಡಲಾಗಿದೆ. ನಿಮ್ಮ ಪ್ರೀತಿಪಾತ್ರರನ್ನು ಪ್ರೀತಿ ಮತ್ತು ಗೌರವದಿಂದ ನೋಡಿಕೊಳ್ಳಿ. ಹಣಕಾಸಿನ ಸ್ಥಿತಿ ಹದಗೆಡುವ ಸಾಧ್ಯತೆ ಇದೆ. ಈ ದಿನ ಹಣ ನಷ್ಟವಾಗುವ ಲಕ್ಷಣಗಳಿವೆ, ಜಾಗ್ರತೆವಹಿಸಿ. ಹಣಕ್ಕೆ ಸಂಬಂಧಿಸಿದ ಯಾವುದೇ ಕೆಲಸವನ್ನು ಇಂದು ಬಹಳ ಎಚ್ಚರಿಕೆಯಿಂದ ಮಾಡಿ. ಇಂದು ವ್ಯಾಪಾರಸ್ಥರು ಯಾವುದೇ ಹೂಡಿಕೆ ಮಾಡದಂತೆ ಸಲಹೆ ನೀಡಲಾಗಿದೆ. ನಿಮ್ಮ ಆರೋಗ್ಯದ ಬಗ್ಗೆ ಹೇಳುವುದಾದರೆ ಕಿವಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೊಂದಿರಬಹುದು.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 15
ಅದೃಷ್ಟದ ಸಮಯ: ಬೆಳಿಗ್ಗೆ 6:45 ರಿಂದ 11:45 ರವರೆಗೆ

ಮಕರ ರಾಶಿ
ವ್ಯಾಪಾರಸ್ಥರಿಗೆ ಇಂದು ಅತ್ಯಂತ ಶುಭ ದಿನವಾಗಲಿದೆ. ನ್ಯಾಯಾಲಯಕ್ಕೆ ಸಂಬಂಧಿಸಿದ ಯಾವುದೇ ಪ್ರಕರಣದಲ್ಲಿ, ನಿರ್ಧಾರವು ನಿಮ್ಮ ಪರವಾಗಿ ಇರಬಹುದು. ಇಂದು ನಿಮ್ಮ ದೊಡ್ಡ ಚಿಂತೆ ದೂರವಾಗಲಿದೆ. ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿದೆ. ಹಣದ ಪರಿಸ್ಥಿತಿ ಉತ್ತಮವಾಗಿರುತ್ತದೆ. ಇತರರನ್ನು ಮೆಚ್ಚಿಸಲು ಹೆಚ್ಚು ಖರ್ಚು ಮಾಡಬೇಡಿ. ಈ ದಿನ ಯಾವುದೇ ಸಾಲ ತೆಗೆದುಕೊಳ್ಳದಂತೆ ಸಲಹೆ ನೀಡಲಾಗಿದೆ. ಮನೆಯ ವಾತಾವರಣ ಖುಷಿಯಿಂದ ಕೂಡಿರಲಿದೆ. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: ಮಧ್ಯಾಹ್ನ 3 ರಿಂದ ಸಂಜೆ 7 ರವರೆಗೆ

ಕುಂಭ ರಾಶಿ
ಸರ್ಕಾರಿ ಕೆಲಸಗಳಲ್ಲಿ ಕೆಲಸ ಮಾಡುವವರು ಬಯಸಿದ ವರ್ಗಾವಣೆಯನ್ನು ಪಡೆಯಬಹುದು. ಇಂದು ನೀವು ತುಂಬಾ ಸಂತೋಷ ಮತ್ತು ಉತ್ಸಾಹದಿಂದ ಇರುತ್ತೀರಿ. ಮತ್ತೊಂದೆಡೆ, ವ್ಯಾಪಾರಿಗಳು ಒಳ್ಳೆಯ ಲಾಭವನ್ನು ಪಡೆಯುವ ಬಲವಾದ ಸಾಧ್ಯತೆಯಿದೆ. ಇಂದು ನೀವು ಹೂಡಿಕೆ ಮಾಡಲು ಉತ್ತಮ ಅವಕಾಶವನ್ನು ಪಡೆಯಬಹುದು. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ನಿಮ್ಮ ಬಜೆಟ್ ಅಸಮತೋಲಿತವಾಗಿರಬಹುದು. ನಿಮ್ಮ ಬಗ್ಗೆ ನಿರ್ಲಕ್ಷ್ಯ ವಹಿಸದಿರುವುದು ಉತ್ತಮ, ಇಲ್ಲದಿದ್ದರೆ ನೀವು ತೊಂದರೆಗೆ ಸಿಲುಕಬಹುದು. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಉತ್ತಮ ಹೊಂದಾಣಿಕೆ ಇರಲಿದೆ. ಆರೋಗ್ಯದ ಕಡೆ ಗಮನಹರಿಸಿ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಬೆಳಿಗ್ಗೆ 8:10 ರಿಂದ 10:50 ರವರೆಗೆ

ಮೀನ ರಾಶಿ
ಕಚೇರಿಯಲ್ಲಿ ನಿಮ್ಮ ಅಸಡ್ಡೆ ವರ್ತನೆ ಬಾಸ್‌ನ ಮನಸ್ಥಿತಿಯನ್ನು ಹಾಳು ಮಾಡುತ್ತದೆ. ಉದ್ಯಮಿಗಳು ಹೊಸ ಕೆಲಸವನ್ನು ಪ್ರಾರಂಭಿಸಲಿದ್ದರೆ, ನಿಮ್ಮ ಹಾದಿಯಲ್ಲಿ ಅಡೆತಡೆಗಳು ಉಂಟಾಗಬಹುದು. ಇಂದು ನಿಮ್ಮ ಆರ್ಥಿಕ ನಷ್ಟದ ಸಾಧ್ಯತೆಯೂ ಇದೆ. ವೈಯಕ್ತಿಕ ಜೀವನದ ಬಗ್ಗೆ ಹೇಳುವುದಾದರೆ ನೀವು ಮನೆಯ ಸದಸ್ಯರೊಂದಿಗೆ ಜಗಳವಾಡಬಹುದು. ನಿಮ್ಮ ಕೋಪವು ಪ್ರೀತಿಪಾತ್ರರ ಭಾವನೆಗಳನ್ನು ಘಾಸಿಗೊಳಿಸಬಹುದು. ನಿಮ್ಮನ್ನು ನೀವು ನಿಯಂತ್ರಿಸಿಕೊಳ್ಳುವುದು ಉತ್ತಮ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಆರೋಗ್ಯ ಕ್ಷೀಣಿಸುವ ಲಕ್ಷಣಗಳಿವೆ, ಜಾಗ್ರತೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಸಂಜೆ 4:35 ರಿಂದ ರಾತ್ರಿ 8 ರವರೆಗೆ

English summary

Dina Bhavishya -June 2 2023 Today Rashi Bhavishya, Daily Horoscope in Kannada

Dina Bhavishya- Get Today's Rashi Bhavishy 2 June 2023 In Kannada, Read daily horoscope prediction of aries, taurus, gemini, cancer, leo, virgo, libra, scorpio, Sagittarius, Capricorn, Aquarius, pisces in Kannada.
Story first published: Friday, June 2, 2023, 4:00 [IST]
X
Desktop Bottom Promotion