Horoscope Today 20 June: ಜೂನ್ 20 ಈ ದಿನ ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?

ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಜೂನ್ 20 ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ಉತ್ತರಾಯಣ
ಋತು: ವಸಂತ
ಮಾಸ: ಆಷಾಢ
ಪಕ್ಷ: ಶುಕ್ಲಪಕ್ಷ
ತಿಥಿ: ದ್ವಿತೀಯ ಮಧ್ಯಾಹ್ನ 1:07 ವರೆಗೆ
ತೃತೀತ ಮಧ್ಯಾಹ್ನ 1:07ರ ನಂತರ
ನಕ್ಷತ್ರ: ರಾತ್ರಿ 10:37 ರವರೆಗೆ ಪುನರ್ವಸು ನಂತರ ಪುಷ್ಯ
ರಾಹುಕಾಲ: ಸಂಜೆ 4:00 ರಿಂದ ಸಂಜೆ 5:40ರವರೆಗೆ

ಮೇಷ ರಾಶಿ

ಈ ದಿನ ನಿಮ್ಮ ಅದೃಷ್ಟವು ಚೆನ್ನಾಗಿದೆ. ಸ್ವಲ್ಪ ಪ್ರಯತ್ನ ಮಾಡಿದರೂ ಕೂಡ ನೀವು ಉತ್ತಮ ಯಶಸ್ಸನ್ನು ಪಡೆಯುತ್ತೀರಿ. ಕೌಂಟುಬಿಕ ಜೀವನವು ಸಂತೋಷದಿಂದ ಕೂಡಿರುತ್ತದೆ. ಇಂದು ನಿಮ್ಮ ಎಲ್ಲಾ ಕೆಲಸಗಳು ನಿಮ್ಮ ಯೋಜನೆಯ ಪ್ರಕಾರ ಪೂರ್ಣಗೊಳ್ಳುತ್ತವೆ. ನೀವು ದೈಹಿಕವಾಗಿ ಮತ್ತು ಮಾನಸಿಕವಾಗಿ ಉತ್ತಮವಾಗುತ್ತೀರಿ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 18
ಅದೃಷ್ಟದ ಸಮಯ: ಬೆಳಿಗ್ಗೆ 7:50 ರಿಂದ ಮಧ್ಯಾಹ್ನ 12 ರವರೆಗೆ

Dina Bhavishya June 20th 2023 Today Rashi Bhavishya, Daily Horoscope in Kannada

ವೃಷಭ ರಾಶಿ

ನಿಮ್ಮ ಸಂಗಾತಿಯ ಆರೋಗ್ಯದ ಬಗ್ಗೆ ನಿಮ್ಮ ಕಾಳಜಿ ಹೆಚ್ಚಾಗಬಹುದು. ಈ ಸಮಯದಲ್ಲಿ ಅವರ ವಿಶ್ರಾಂತಿಯ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಹಣದ ವಿಚಾರದಲ್ಲಿ ಈ ದಿನವು ದುಬಾರಿಯಾಗಲಿದೆ. ನಿಮ್ಮ ಬಜೆಟ್ ಅಸಮತೋಲಿತವಾಗಿರಬಹುದು. ಹೆಚ್ಚುತ್ತಿರುವ ಕೆಲಸದ ಹೊರೆಯಿಂದಾಗಿ ನೀವು ತುಂಬಾ ದಣಿಯುತ್ತೀರಿ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ 2:55 ರವರೆಗೆ

ಮಿಥುನ ರಾಶಿ

ಕೌಟುಂಬಿಕಾಗಿ ಸಂತೋಷವನ್ನು ಕಾಣುತ್ತೀರಿ. ಕುಟುಂಬ ಸದಸ್ಯರೊಂದಿಗಿನ ಸಂಬಂಧದಲ್ಲಿ ಉತ್ತಮ ಹೊಂದಾಣಿಕೆ ಇರುತ್ತದೆ. ಸಂಗಾತಿಯು ನಿಮಗಾಗಿ ವಿಶೇಷವಾದದ್ದನ್ನು ಮಾಡಬಹುದು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ನೀವು ಉಳಿತಾಯದ ಮೇಲೆ ಹೆಚ್ಚು ಗಮನ ಹರಿಸುತ್ತೀರಿ. ಕೆಲಸಕ್ಕೆ ಸಂಬಂಧಿಸಿದಂತೆ ನೀವು ಯಶಸ್ಸನ್ನು ಪಡೆಯುವ ಸಾಧ್ಯತೆಯಿದೆ. ಆರೋಗ್ಯದ ದೃಷ್ಟಿಯಿಂದ ಈ ದಿನವು ಅನುಕೂಲಕರವಾಗಿರುತ್ತದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಸಂಜೆ 5 ರಿಂದ ಸಂಜೆ 7 ರವರೆಗೆ

ಕರ್ಕಾಟಕ ರಾಶಿ

ಈ ದಿನ ಉದ್ಯೋಗ ಅಥವಾ ವ್ಯವಹಾರವಾಗಿರಲಿ ಕಷ್ಟ ಪಟ್ಟು ಕೆಲಸ ಮಾಡಿದರೆ ಒಳ್ಳೆಯದು. ಈ ಸಮಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ. ಹಣದ ವಿಷಯದಲ್ಲಿ ನೀವು ಹೆಚ್ಚು ಜಾಗರೂಕರಾಗಿರಬೇಕು. ಯಾರನ್ನೂ ಕುರುಡಾಗಿ ನಂಬಬೇಡಿ. ಮನೆಯ ವಾತಾವರಣ ಶಾಂತವಾಗಿರುತ್ತದೆ. ಪೋಷಕರ ಆಶೀರ್ವಾದ ಸಿಗಲಿದೆ. ಆರೋಗ್ಯ ಸಂಬಂಧಿ ಸಮಸ್ಯೆಗಳು ದೂರವಾಗುತ್ತವೆ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 25
ಅದೃಷ್ಟದ ಸಮಯ: ಬೆಳಿಗ್ಗೆ 4:15 ರಿಂದ 9:00 ರವರೆಗೆ

ಸಿಂಹ ರಾಶಿ

ಮನೆಯ ಸದಸ್ಯರೊಂದಿಗೆ ಇಂದು ಉತ್ತಮ ಸಮಯ ಕಳೆಯುತ್ತೀರಿ. ಕೆಲಸದ ಬಗ್ಗೆ ಹೆಚ್ಚು ಚಿಂತಿಸೋದಕ್ಕೆ ಹೋಗಬೇಡಿ. ಇದರಿಂದ ನಿಮ್ಮ ಆರೋಗ್ಯ ಕೆಡುವ ಸಾಧ್ಯತೆಯಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 16
ಅದೃಷ್ಟದ ಸಮಯ: ಸಂಜೆ 6 ರಿಂದ ರಾತ್ರಿ 8 ರವರೆಗೆ

ಕನ್ಯಾ ರಾಶಿ

ಸಂಗಾತಿಯು ನಿಮ್ಮಿಂದ ದೊಡ್ಡದು ಏನನ್ನಾದರೂ ನಿರೀಕ್ಷೇ ಮಾಡುತ್ತಾರೆ. ಹೀಗಾಗಿ ನಿಮ್ಮ ನಡುವೆ ಜಗಳವಾಗುವ ಸಾಧ್ಯತೆಯಿದೆ. ನಿಮ್ಮ ಕೋಪವನ್ನು ನಿಯಂತ್ರಿಸುವುದು ಉತ್ತಮ. ಉದ್ಯೋಗಸ್ಥರು ಇಂದು ಕೆಲಸಕ್ಕಾಗಿ ಪ್ರಯಾಣ ಮಾಡಬೇಕಾಗಿ ಬರಬಹುದುಸ. ಇನ್ನೂ ವ್ಯಾಪಾರಸ್ಥರಿಗೂ ಲಾಭವಾಗಲಿದೆ. ಆರೋಗ್ಯದ ದೃಷ್ಟಿಯಿಂದ ಈ ದಿನವು ಅನುಕೂಲಕರವಾಗಿರುತ್ತದೆ.
ಅದೃಷ್ಟದ ಬಣ್ಣ: ತಿಳಿ ಗುಲಾಬಿ
ಅದೃಷ್ಟದ ಸಂಖ್ಯೆ: 8
ಅದೃಷ್ಟದ ಸಮಯ: ಬೆಳಿಗ್ಗೆ 7:20 ರಿಂದ 11:15 ರವರೆಗೆ

ತುಲಾ

ಈ ದಿನ ಒಳ್ಳೆಯ ಸುದ್ಧಿ ಕೇಳುತ್ತೀರಿ. ಇಂದು ನೀವು ತುಂಬಾ ಉತ್ಸುಕರಾಗಿರುತ್ತೀರಿ.
ಮತ್ತು ಉತ್ಸಾಹದಿಂದ ತುಂಬಿರುತ್ತೀರಿ. ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ. ಕಚೇರಿಯಲ್ಲಿ ಸಹೋದ್ಯೋಗಿಗಳೊಂದಿಗೆ ಹೆಚ್ಚು ಮಾತನಾಡುವುದನ್ನು ಅಥವಾ ನಗುವುದನ್ನು ತಪ್ಪಿಸಿ. ನಿಮ್ಮ ಕೆಲಸದ ಬಗ್ಗೆ ಗಮನ ಕೊಡಿ. ಆರೋಗ್ಯವನ್ನು ನಿರ್ಲಕ್ಷಿಸಬೇಡಿ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 24
ಅದೃಷ್ಟದ ಸಮಯ: ಸಂಜೆ 4:25 ರಿಂದ ರಾತ್ರಿ 8:45 ರವರೆಗೆ

ವೃಶ್ಚಿಕ

ಈ ದಿನ ಹಣದ ವಿಷಯದಲ್ಲಿ ತುಂಬಾ ದುಬಾರಿಯಾಗಲಿದೆ. ಅನಗತ್ಯ ಖರ್ಚುಗಳನ್ನು ಮಾಡಬೇಕಾಗುತ್ತದೆ. ಉದ್ಯೋಗಿಗಳು ಕಷ್ಟ ಅನುಭವಿಸುತ್ತಾರೆ. ನಿಮಗೆ ನೀಡಿದ ಯಾವುದೇ ಪ್ರಮುಖ ಜವಾಬ್ದಾರಿಯನ್ನು ನಿಮ್ಮಿಂದ ಹಿಂಪಡೆಯಬಹುದು. ವ್ಯಾಪಾರಸ್ಥರು ಲಾಭ ಗಳಿಸಲು ಹೆಚ್ಚು ಶ್ರಮಿಸಬೇಕಾಗುತ್ತದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ಸಮಯ: ಮಧ್ಯಾಹ್ನ 12 ರಿಂದ 2:30 ರವರೆಗೆ

ಧನು ರಾಶಿ

ಇಂದು ಆರೋಗ್ಯದ ವಿಷಯದಲ್ಲಿ ಏರಿಳಿತಗಳು ಹೆಚ್ಚಾಗುತ್ತದೆ. ನಿಮ್ಮ ಆರೋಗ್ಯದಲ್ಲಿ ಹಠಾತ್ ಕುಸಿತ ಉಂಟಾಗಬಹುದು. ಕೆಲಸದ ಸ್ಥಳದಲ್ಲಿ ನಕಾರಾತ್ಮಕತೆ ಹೆಚ್ಚಾಗಿರುತ್ತದೆ. ನಿಮ್ಮನ್ನು ನೀವು ನಿಯಂತ್ರಿಸಿಕೊಳ್ಳುವುದು ಉತ್ತಮ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 30
ಅದೃಷ್ಟದ ಸಮಯ: ಸಂಜೆ 4 ರಿಂದ 6:45 ರವರೆಗೆ

ಮಕರ ರಾಶಿ

ಈ ದಿನ ನಿಮಗೆ ತುಂಬಾನೇ ಶುಭಕರವಾಗಿರುತ್ತದೆ. ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಅದ್ಭುತ ಯಶಸ್ಸನ್ನು ಸಾಧಿಸಬಹುದು. ನಿರುದ್ಯೋಗಿಗಳು ಉದ್ಯೋಗ ಪಡೆಯುವ ಸಾಧ್ಯತೆಯಿದೆ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ನಿಮಗೆ ಹಣ ಬರುವ ಸಾಧ್ಯತೆ ಇದೆ. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಗಾಢ ಕೆಂಪು
ಅದೃಷ್ಟದ ಸಂಖ್ಯೆ: 21
ಅದೃಷ್ಟದ ಸಮಯ: ಬೆಳಗ್ಗೆ 4 ರಿಂದ 9:20 ರವರೆಗೆ

ಕುಂಭ ರಾಶಿ

ಸಂಗಾತಿಯೊಂದಿಗಿನ ಸಂಬಂಧದಲ್ಲಿ ಉತ್ತಮ ಹೊಂದಾಣಿಕೆ ಇರುತ್ತದೆ. ನಿಮ್ಮ ನಡುವಿನ ಎಲ್ಲಾ ಕಹಿಯೂ ದೂರವಾಗುತ್ತದೆ. ಉದ್ಯೋಗಸ್ಥರಿಗೆ ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ನೆರವು ದೊರೆಯಲಿದೆ. ಮತ್ತೊಂದೆಡೆ, ಉದ್ಯಮಿಗಳ ಆರ್ಥಿಕ ಸ್ಥಿತಿಯು ಬಲಗೊಳ್ಳುತ್ತದೆ. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 8 ರವರೆಗೆ

ಮೀನ ರಾಶಿ

ಕೆಲಸದ ವಿಚಾರದಲ್ಲಿ ಈ ದಿನ ನಿಮಗೆ ಬಿಡುವಿಲ್ಲದ ದಿನವಾಗಿರುತ್ತದೆ. ಅನಗತ್ಯ ಓಡಾಟ ಮಾಡಬೇಕಾಗಬಹುದು. ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಅನಗತ್ಯ ಖರ್ಚು ಮಾಡೋದಕ್ಕೆ ಹೋಗಬೇಡಿ. ಕುಟುಂಬ ಜೀವನದಲ್ಲಿ ಪರಿಸ್ಥಿತಿಯು ಉದ್ವಿಗ್ನವಾಗಿರುತ್ತದೆ. ಮನೆಯಲ್ಲಿ ಜಗಳಗಳು ಉಂಟಾಗಬಹುದು.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಮಧ್ಯಾಹ್ನ 12:50 ರಿಂದ 1:55 ರವರೆಗೆ

English summary

Dina Bhavishya June 20th 2023 Today Rashi Bhavishya, Daily Horoscope in Kannada

Dina Bhavishya- Get Today's Rashi Bhavishy 20th June 2023 In Kannada, Read daily horoscope prediction of aries, taurus, gemini, cancer, leo, virgo, libra, scorpio, Sagittarius, Capricorn, Aquarius, pisces in Kannada.
Story first published: Tuesday, June 20, 2023, 4:00 [IST]
X
Desktop Bottom Promotion