Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
Horoscope Today 21 June: ಜೂನ್ 21 ಈ ದಿನ ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಜೂನ್ 21ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ಉತ್ತರಾಯಣ
ಋತು: ವಸಂತ
ಮಾಸ: ಆಷಾಢ
ಪಕ್ಷ: ಶುಕ್ಲಪಕ್ಷ
ತಿಥಿ: ಮಧ್ಯಾಹ್ನ 03:09ರವರೆಗೆ ನಂತರ ಚತುರ್ದಶಿ
ನಕ್ಷತ್ರ: ಪುಷ್ಯಾ
ರಾಹುಕಾಲ: ಮಧ್ಯಾಹ್ನ 12:21ರಿಂದ 01:58ರವರೆಗೆ
ಮೇಷ ರಾಶಿ
ಕೆಲಸಕ್ಕೆ ಸಂಬಂಧಿಸಿದಂತೆ ಖುಷಿ ಕೊಡುವ ಸುದ್ದಿ ನಿಮಗೆ ಸಿಗಲಿದೆ. ಪ್ರಗತಿಯ ಹೊಸ ಅವಕಾಶಗಳು ಸಿಗಲಿದೆ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡು ಬರಲಿದೆ. ಇಂದು ನೀವು ಯಾವುದೇ ಹಳೆಯ ಸಾಲವನ್ನು ಮರುಪಾವತಿಸಲು ಕೂಡ ಸಾಧ್ಯವಾಗುವುದು. ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರಲಿದೆ. ಆರೋಗ್ಯದ ದೃಷ್ಟಿಯಿಂದ ದಿನವು ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 19
ಅದೃಷ್ಟದ ಸಮಯ: ಸಂಜೆ 6:00 ರಿಂದ ರಾತ್ರಿ 8:20 ರವರೆಗೆ

ವೃಷಭ ರಾಶಿ
ಇಂದು ನೀವು ನಿಮ್ಮ ಕುಟುಂಬ ಸದಸ್ಯರೊಂದಿಗೆ ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡಬಹುದು. ಈ ದಿನ ನಿಮಗೆ ಅನುಕೂಲಕರವಾಗಿರಲಿದೆ. ಕಛೇರಿಯಲ್ಲಿ ಬಾಕಿ ಉಳಿದಿರುವ ಕಾರ್ಯಗಳನ್ನು ಉತ್ಸಾಹದಿಂದ ಪೂರ್ಣಗೊಳಿಸುವಿರಿ. ಉನ್ನತ ಅಧಿಕಾರಿಗಳ ಸಹಕಾರವೂ ನಿಮಗೆ ದೊರೆಯಲಿದೆ. ವರ್ತಕರಿಗೆ ಈ ದಿನ ಲಾಭದಾಯಕವಾಗಿದೆ. ಆರೋಗ್ಯದ ದೃಷ್ಟಿಯಿಂದ ಈ ದಿನವು ಅನುಕೂಲಕರವಾಗಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: ಬೆಳಿಗ್ಗೆ 8:10 ರಿಂದ 11:05 ರವರೆಗೆ
ಮಿಥುನ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ, ನಿಮ್ಮ ಸೌಕರ್ಯಕ್ಕಾಗಿ ವಸ್ತುಗಳನ್ನು ಖರೀದಿಸಬಹುದು. ಸಂಗಾತಿಯೊಂದಿಗೆ ಹೊಂದಾಣಿಕೆ ಇರಲಿದೆ. ಅವರ ಜೊತೆ ಸೇರಿ ಭವಿಷ್ಯದ ಕುರಿತು ಪ್ರಮುಖ ತೀರ್ಮಾನ ತೆಗೆದುಕೊಳ್ಳಬಹುದು. ಈ ದಿನ ಕೆಲಸದಲ್ಲಿ ಹೆಚ್ಚು ಗಮನಹರಿಸಲು ಸಾಧ್ಯವಾಗುವುದು. ಆರೋಗ್ಯದ ಬಗ್ಗೆ ಹೇಳುವುದಾದರೆ ಈ ದಿನ ಮಿಶ್ರಫಲ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 36
ಅದೃಷ್ಟದ ಸಮಯ: ಸಂಜೆ 4 ರಿಂದ ರಾತ್ರಿ 8 ರವರೆಗೆ
ಕರ್ಕ ರಾಶಿ
ಕೆಲವು ದಿನಗಳಿಂದ ಆರೋಗ್ಯ ಸಮಸ್ಯೆ ಹೊಂದಿದ್ದರೆ ಇಂದು ಸ್ವಲ್ಪ ಸುಧಾರಣೆಯನ್ನು ಕಾಣಬಹುದು. ಅಧಿಕ ಕೆಲಸದ ಒತ್ತಡ ತೆಗೆದುಕೊಳ್ಳಬೇಡಿ. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿರಲಿದೆ. ಇಂದು ಸಂಗಾತಿಯ ನಡವಳಿಕೆಯಲ್ಲಿ ಕೆಲವು ಬದಲಾವಣೆಗಳನ್ನು ಕಾಣಬಹುದು.
ಅದೃಷ್ಟದ ಬಣ್ಣ: ಬೂದು
ಅದೃಷ್ಟದ ಸಂಖ್ಯೆ: 28
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ಸಂಜೆ 5:30 ರವರೆಗೆ
ಸಿಂಹ ರಾಶಿ
ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು, ನೀವು ಅನಗತ್ಯ ವೆಚ್ಚಗಳನ್ನು ನಿಗ್ರಹಿಸಬೇಕು. ಸಂಗಾತಿಯ ಅಸಡ್ಡೆ ವರ್ತನೆ ನಿಮ್ಮ ಸಮಸ್ಯೆಗಳನ್ನು ಮತ್ತಷ್ಟು ಹೆಚ್ಚಿಸಬಹುದು. ಈ ದಿನ ನೀವು ಕೆಲಸದಲ್ಲಿ ತುಂಬಾ ನಿರತರಾಗಿರುತ್ತೀರಿ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 14
ಅದೃಷ್ಟದ ಸಮಯ: ಬೆಳಿಗ್ಗೆ 6:30 ರಿಂದ 9:50 ರವರೆಗೆ
ಕನ್ಯಾ ರಾಶಿ
ಪ್ರೇಮಿಗಳಿಗೆ ಈ ದಿನ ತುಂಬಾ ರೊಮ್ಯಾಂಟಿಕ್ ಆಗಿರುತ್ತದೆ. ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯಲು ಸಾಧ್ಯವಾಗುವುದು. ಉದ್ಯೋಗಸ್ಥರು ಪ್ರಗತಿ ಸಾಧಿಸಲು ಹೆಚ್ಚು ಶ್ರಮಿಸಬೇಕಾಗುತ್ತದೆ. ಮತ್ತೊಂದೆಡೆ, ಉದ್ಯಮಿಗಳು ಹಣದ ವಿಷಯದಲ್ಲಿ ಜಾಗರೂಕರಾಗಿರಲು ಸಲಹೆ ನೀಡಲಾಗಿದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 9 ರವರೆಗೆ
ತುಲಾ ರಾಶಿ
ಕುಟುಂಬ ಜೀವನದಲ್ಲಿ ಪರಿಸ್ಥಿತಿಯು ಏರಿಳಿತಗಳಿಂದ ತುಂಬಿರಲಿದೆ. ಇಂದು ಕುಟುಂಬದಲ್ಲಿ ವಾಗ್ವಾದ ಉಂಟಾದರೆ ತಾಳ್ಮೆ ಕಳೆದುಕೊಳ್ಳಬೇಡಿ. ಹೆಚ್ಚುತ್ತಿರುವ ಕೆಲಸದ ಒತ್ತಡದಿಂದಾಗಿ ನೀವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಉನ್ನತ ಅಧಿಕಾರಿಗಳು ನಿಮ್ಮ ಕೆಲಸದ ಬಗ್ಗೆ ತುಂಬಾ ಅತೃಪ್ತರಾಗುತ್ತಾರೆ. ಆರೋಗ್ಯ ಹದಗೆಡಬಹುದು. ಆರೋಗ್ಯದ ಕಡೆ ಗಮನಹರಿಸಿ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 35
ಅದೃಷ್ಟದ ಸಮಯ: ಮಧ್ಯಾಹ್ನ 3:30 ರಿಂದ ಸಂಜೆ 6:50 ರವರೆಗೆ
ವೃಶ್ಚಿಕ ರಾಶಿ
ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ, ಹಣಕ್ಕೆ ಸಂಬಂಧಿಸಿದ ವ್ಯವಹಾರ ಮಾಡಲು ಈ ಅವಧಿ ಉತ್ತಮವಾಗಿದೆ. ಸಂಗಾತಿಯೊಂದಿಗಿನ ಸಂಬಂಧವು ಚೆನ್ನಾಗಿರಲಿದೆ. ಉದ್ಯೋಗ ಅಥವಾ ವ್ಯವಹಾರದಲ್ಲಿಈ ದಿನ ನಿಮಗೆ ಅನುಕೂಲಕರವಾಗಿದೆ, ಆರೋಗ್ಯ ಕೂಡ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಬೆಳಿಗ್ಗೆ 4:15 ರಿಂದ 9:45 ರವರೆಗೆ
ಧನು ರಾಶಿ
ನೀವು ಉದ್ಯಮಿಯಾಗಿದ್ದರೆ , ಇತ್ತೀಚೆಗೆ ಹೂಡಿಕೆಯನ್ನು ಮಾಡಿದ್ದರೆ, ಅದರಿಂದ ನೀವು ಉತ್ತಮ ಲಾಭವನ್ನು ಪಡೆಯಬಹುದು. ಉದ್ಯೋಗಸ್ಥರಿಗೆ ಈ ದಿನ ಶುಭವಾಗಿದೆ. ಹಣದ ವಿಷಯದಲ್ಲಿ ಈ ದಿನವು ಉತ್ತಮವಾಗಿರಲಿದೆ. ಈ ದಿನ ಉಳಿತಾಯದ ಕಡೆಗೆ ಗಮನಹರಿಸಲು ಸಾಧ್ಯವಾಗುವುದು.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 15
ಅದೃಷ್ಟದ ಸಮಯ: ಸಂಜೆ 4:35 ರಿಂದ ಸಂಜೆ 7 ರವರೆಗೆ
ಮಕರ ರಾಶಿ
ಮಕರ ರಾಶಿಯವರಿಗೆ ಈ ದಿನ ವಿಶೇಷವಾಗಿರಲಿದೆ. ಪ್ರೇಮ ಜೀವನ, ವೈವಾಹಿಕ ಜೀವನದಲ್ಲಿ ಸಂತೋಷ ಇರಲಿದೆ. ಆರ್ಥಿಕ ಪರಿಸ್ಥಿತಿ ಚೆನ್ನಾಗಿರಲಿದೆ. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ. ನಿಮ್ಮ ಎಲ್ಲಾ ಕೆಲಸಗಳು ನಿಮ್ಮ ಯೋಜನೆಯ ಪ್ರಕಾರ ಪೂರ್ಣಗೊಳ್ಳಲಿದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 8
ಅದೃಷ್ಟದ ಸಮಯ: ಬೆಳಿಗ್ಗೆ 7:10 ರಿಂದ 10:50 ರವರೆಗೆ
ಕುಂಭ ರಾಶಿ
ಉದ್ಯಮಿಗಳು ಕಾನೂನು ವಿಷಯಗಳಲ್ಲಿ ಹೆಚ್ಚು ಜಾಗರೂಕರಾಗಿರಲು ಸಲಹೆ ನೀಡಲಾಗಿದೆ. ಸ್ವಲ್ಪ ನಿರ್ಲಕ್ಷ್ಯವು ದೊಡ್ಡ ನಷ್ಟಕ್ಕೆ ಕಾರಣವಾಗಬಹುದು. ಉದ್ಯೋಗಸ್ಥರು ಕಚೇರಿಯಲ್ಲಿ ತಮ್ಮ ಕೆಲಸವನ್ನು ತ್ವರಿತವಾಗಿ ಪೂರ್ಣಗೊಳಿಸಲು ಸಲಹೆ ನೀಡಲಾಗಿದೆ. ಹಣದ ವಿಷಯದಲ್ಲಿ ಈ ದಿನವು ದುಬಾರಿಯಾಗಲಿದೆ. ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯ ಉಂಟಾಗಬಹುದು.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಮಧ್ಯಾಹ್ನ 3 ರಿಂದ ಸಂಜೆ 6 ರವರೆಗೆ
ಮೀನ ರಾಶಿ
ಇಂದು ದಿನದ ಆರಂಭವು ತುಂಬಾ ಚೆನ್ನಾಗಿರಲಿದೆ ಆರ್ಥಿಕ ಸ್ಥಿತಿಯೂ ಚೆನ್ನಾಗಿರಲಿದೆ. ಹಣಕ್ಕಾಗಿ ಮಾಡುವ ಪ್ರಯತ್ನ ಯಶಸ್ವಿಯಾಗಬಹುದು. ಕಛೇರಿಯಲ್ಲಿ ಹೆಚ್ಚಿನ ಗೌರವ ಪಡೆಯಬಹುದು. ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ವ್ಯಾಪಾರಸ್ಥರ ಆರ್ಥಿಕ ಸಮಸ್ಯೆ ಬಗೆಹರಿಯಲಿದೆ. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಬೆಳಿಗ್ಗೆ 6:20 ರಿಂದ 11:20 ರವರೆಗೆ



Click it and Unblock the Notifications
