Horoscope Today 22 June: ಜೂನ್ 22 ಈ ದಿನ ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?

ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಜೂನ್ 22ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ಉತ್ತರಾಯಣ
ಋತು: ವಸಂತ
ಮಾಸ: ಆಷಾಢ
ಪಕ್ಷ: ಶುಕ್ಲಪಕ್ಷ
ತಿಥಿ: ಚತುರ್ದಶಿ
ನಕ್ಷತ್ರ: ಅಶ್ಲೇಷ
ರಾಹುಕಾಲ: ಮಧ್ಯಾಹ್ನ 01:58ರಿಂದ 03:35ರವರೆಗೆ

ಮೇಷ ರಾಶಿ

ಯಾವುದೇ ಪ್ರಮುಖ ದಾಖಲೆಗಳನ್ನು ಮಾಡುವಾಗ ಆತುರದಿಂದ ದೂರವಿರುವಂತೆ ಉದ್ಯಮಿಗಳಿಗೆ ಸಲಹೆ ನೀಡಲಾಗಿದೆ. ಉದ್ಯೋಗಸ್ಥರು ಕಚೇರಿಯಲ್ಲಿ ಅತಿಯಾದ ಆತ್ಮವಿಶ್ವಾಸದಿಂದ ವರ್ತಿಸದಿದ್ದರೆ ಒಳ್ಳೆಯದು, ಇಲ್ಲದಿದ್ದರೆ ನೀವು ಮುಜುಗರಕ್ಕೊಳಗಾಗಬೇಕಾಗಬಹುದು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರಲಿದೆ. ಆರೋಗ್ಯದ ಕಡೆಗೆ ತುಂಬಾ ಗಮನಹರಿಸಿ.
ಅದೃಷ್ಟದ ಬಣ್ಣ: ಗಾಢ ಹಳದಿ
ಅದೃಷ್ಟದ ಸಂಖ್ಯೆ: 18
ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ ಸಂಜೆ 5 ರವರೆಗೆ

Dina Bhavishya June 22 2023 Today Rashi Bhavishya, Daily Horoscope in Kannada

ವೃಷಭ ರಾಶಿ

ಕೆಲಸದ ದೃಷ್ಟಿಯಿಂದ ನೋಡುವುದಾದರೆ ಈ ದಿನ ಉತ್ತಮವಾಗಿದೆ. ಈ ದಿನ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ನೀವು ಅಂದ್ಕೊಂಡಂತೆ ನಡೆಯಲಿದೆ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಉತ್ತಮ ಹೊಂದಾಣಿಕೆ ಇರಲಿದೆ. ವೈವಾಹಿಕ ಜೀವನದಲ್ಲಿ ಖುಷಿ ಇರಲಿದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರಲಿದೆ. ಆರೋಗ್ಯ ಸಂಬಂಧಿ ಸಮಸ್ಯೆಗಳಿದ್ದರೆ ಈ ದಿನ ದೊಡ್ಡ ಸಮಸ್ಯೆ ಇರಲ್ಲ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಸಂಜೆ 6:15 ರಿಂದ ರಾತ್ರಿ 9 ರವರೆಗೆ

ಮಿಥುನ ರಾಶಿ

ಕುಟುಂಬ ಜೀವನದಲ್ಲಿ ಪರಿಸ್ಥಿತಿ ಅಷ್ಟು ಸರಿಯಿರಲ್ಲ. ನೀವು ಹಿರಿಯರ ಮಾತುಗಳನ್ನು ಗೌರವಿಸಬೇಕು. ಆರ್ಥಿಕ ಪರಿಸ್ಥಿತಿ ಹದಗೆಡುವ ಲಕ್ಷಣಗಳಿವೆ. ಹಣದ ನಷ್ಟ ಉಂಟಾಗಬಹುದು. ಕೆಲಸದ ವಿಷಯದಲ್ಲಿ ಈ ದಿನ ಮಿಶ್ರಫಲ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 22
ಅದೃಷ್ಟದ ಸಮಯ: ಬೆಳಿಗ್ಗೆ 6 ರಿಂದ ಮಧ್ಯಾಹ್ನ 12:45 ರವರೆಗೆ

ಕರ್ಕ ರಾಶಿ

ಇಂದು ನಿಮಗೆ ಸರಾಸರಿ ದಿನವಾಗಲಿದೆ. ಕೆಲಸದ ಬಗ್ಗೆ ಅತಿಯಾಗಿ ಒತ್ತಡ ತೆಗೆದುಕೊಳ್ಳಲು ಹೋಗಬೇಡಿ, ಇಲ್ಲದಿದ್ದರೆ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ನೀವು ವಿವಾಹಿತರಾಗಿದ್ದರೆ, ನಿಮ್ಮ ವೈವಾಹಿಕ ಜೀವನದ ಕಡೆಗೆ ಹೆಚ್ಚು ಗಮನ ಹರಿಸಬೇಕು , ಸಂಗಾತಿಯ ಭಾವನೆಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಸಂಜೆ 4:40 ರಿಂದ ರಾತ್ರಿ 8:05 ರವರೆಗೆ

ಸಿಂಹ ರಾಶಿ

ನಿಮ್ಮ ಯಾವುದೇ ಕೆಲಸವು ದೀರ್ಘಸಮಯದಿಂದ ಅಪೂರ್ಣವಾಗಿದ್ದರೆ ಇಂದು ಪೂರ್ಣಗೊಳ್ಳುವ ಬಲವಾದ ಸಾಧ್ಯತೆಯಿದೆ. ಉದ್ಯೋಗಸ್ಥರು ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಮುಂದೆ ಸರಿಯಾಗಿ ವರ್ತಿಸುವಂತೆ ಸೂಚಿಸಲಾಗಿದೆ. ಹಣದ ವಿಷಯದಲ್ಲಿ ಈ ದಿನ ಉತ್ತಮವಾಗಿದೆ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ರಾತ್ರಿ 9 ರವರೆಗೆ

ಕನ್ಯಾ ರಾಶಿ

ಕುಟುಂಬ ಜೀವನದಲ್ಲಿ ಪರಿಸ್ಥಿತಿ ಚೆನ್ನಾಗಿರಲಿದೆ. ಅದು ಉದ್ಯೋಗ ಅಥವಾ ವ್ಯಾಪಾರದಲ್ಲಿ ನಿರೀಕ್ಷೆ ಮಾಡಿದ ಫಲ ಪಡೆಯುವಿರಿ. ನಿಮ್ಮ ಕಠಿಣ ಪರಿಶ್ರಮ ಯಶಸ್ವಿಯಾಗಲಿದೆ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಆರೋಗ್ಯದಲ್ಲಿ ದೊಡ್ಡ ಸುಧಾರಣೆ ಕಂಡುಬರಲಿದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಮಧ್ಯಾಹ್ನ 12 ರಿಂದ ಮಧ್ಯಾಹ್ನ 3 ರವರೆಗೆ

ತುಲಾ ರಾಶಿ

ನೀವು ಭೂಮಿ, ಮನೆ, ವಾಹನ ಇತ್ಯಾದಿಗಳನ್ನು ಖರೀದಿಸಲು ಯೋಜಿಸುತ್ತಿದ್ದರೆ ನಿಮ್ಮ ಆಸೆ ಶೀಘ್ರದಲ್ಲಿಯೇ ನೆರವೇರಲಿದೆ. ಕಚೇರಿಯಲ್ಲಿ ನಿಮ್ಮ ಸ್ಥಾನವು ಬಲವಾಗಿರುತ್ತದೆ. ಇಂವ್ಯಾಪಾರಸ್ಥರಿಗೆ ಉತ್ತಮ ಲಾಭ ದೊರೆಯಲಿದೆ. ವೈವಾಹಿಕ ಜೀವನದಲ್ಲಿ ಖುಷಿ ಇರಲಿದೆ. ಆರೋಗ್ಯದ ದೃಷ್ಟಿಯಿಂದ ದಿನವು ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಸಂಜೆ 4:45 ರಿಂದ ರಾತ್ರಿ 8 ರವರೆಗೆ

ವೃಶ್ಚಿಕ ರಾಶಿ

ಈ ದಿನ ನಿಮಗೆ ಶುಭವಾಗಿದೆ. ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಧನಾತ್ಮಕ ಬದಲಾವಣೆಗಳನ್ನು ಕಾಣಬಹುದು. ಉದ್ಯೋಗವಾಗಲಿ ಅಥವಾ ವ್ಯವಹಾರವಾಗಲಿ, ನಿಮ್ಮ ಕಠಿಣ ಪರಿಶ್ರಮಕ್ಕೆ ಅನುಗುಣವಾಗಿ ನೀವು ಫಲಿತಾಂಶಗಳನ್ನು ಪಡೆಯುತ್ತೀರಿ. ಇಂದು ಖರ್ಚು ಅಧಿಕವಿರಬಹುದು. ಆದರೂ ದೊಡ್ಡ ಚಿಂತೆ ಇರಲ್ಲ. ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ತಿಳಿ ಹಳದಿ
ಅದೃಷ್ಟದ ಸಂಖ್ಯೆ: 16
ಅದೃಷ್ಟದ ಸಮಯ: ಸಂಜೆ 6 ರಿಂದ 8:45ರವರೆಗೆ

ಧನು ರಾಶಿ

ಇಂದು ನೀವು ಹಣಕ್ಕೆ ಸಂಬಂಧಿಸಿದ ಯಾವುದೇ ದೊಡ್ಡ ವ್ಯವಹಾರವನ್ನು ಮಾಡುವುದಾದರೆ ನೀವು ತುಂಬಾ ಜಾಗರೂಕರಾಗಿರಲು ಸಲಹೆ ನೀಡಲಾಗಿದೆ, ಇಲ್ಲದಿದ್ದರೆ ನಷ್ಟವಾಗಬಹುದು. ವ್ಯಾಪಾರಸ್ಥರಿಗೆ ದೊಡ್ಡ ಗ್ರಾಹಕರೊಂದಿಗೆ ವ್ಯವಹರಿಸಲು ಅವಕಾಶ ಸಿಗಲಿದೆ. ಮನೆಯ ಸದಸ್ಯರ ಆರೋಗ್ಯದಲ್ಲಿ ಹಠಾತ್ ಕುಸಿತವು ನಿಮ್ಮ ಆತಂಕವನ್ನು ಹೆಚ್ಚಿಸಬಹುದು.
ಅದೃಷ್ಟದ ಬಣ್ಣ: ಕಡು ನೀಲಿ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಮಧ್ಯಾಹ್ನ 3 ರಿಂದ 4:20ರವರೆಗೆ

ಮಕರ ರಾಶಿ

ಇಂದು ನೀವು ವಾಹನವನ್ನು ಬಹಳ ಎಚ್ಚರಿಕೆಯಿಂದ ಬಳಸಲು ಸಲಹೆ ನೀಡಲಾಗಿದೆ. ಮದ್ಯದ ಅಮಲಿನಲ್ಲಿ ವಾಹನ ಚಲಾಯಿಸಬೇಡಿ, ರಾತ್ರಿ ಗಾಡಿ ಚಲಾಯಿಸಲು ಹೋಗಬೇಡಿ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ.ಯಾವುದೇ ದೊಡ್ಡ ಖರ್ಚು ಮಾಡುವ ಮೊದಲು, ನೀವು ಎಚ್ಚರಿಕೆಯಿಂದ ಯೋಚಿಸಬೇಕು. ಕೆಲಸದ ವಿಷಯದಲ್ಲಿ, ಈ ದಿನವು ಮಿಶ್ರವಾಗಿರುತ್ತದೆ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 3
ಅದೃಷ್ಟದ ಸಮಯ: ಮಧ್ಯಾಹ್ನ 3:30 ರಿಂದ 7:55ರವರೆಗೆ

ಕುಂಭ ರಾಶಿ

ನೀವು ಇತ್ತೀಚೆಗೆ ಹೊಸ ಕೆಲಸಕ್ಕೆ ಸೇರಿದ್ದರೆ ಈ ದಿನ ನೀವು ಕೆಲಸದ ಜಾಗದಲ್ಲಿ ಒಂದಿಷ್ಟೂ ನಿರ್ಲಕ್ಷ್ಯ ಮಾಡಬೇಡಿ. ನಿಮ್ಮ ಶ್ರಮಕ್ಕೆ ತಕ್ಕ ಫಲ ನೀಡಲಿದೆ. ದೊಡ್ಡ ಲಾಭ ಗಳಿಸಲು ವ್ಯಾಪಾರಸ್ಥರು ಹೆಚ್ಚು ಶ್ರಮಿಸಬೇಕು. ಕೌಟುಂಬಿಕ ಜೀವನದಲ್ಲಿ ಭಿನ್ನಾಭಿಪ್ರಾಯವಿರಬಹುದು.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 28
ಅದೃಷ್ಟದ ಸಮಯ: ಬೆಳಿಗ್ಗೆ 10 ರಿಂದ ಮಧ್ಯಾಹ್ನ 2ರವರೆಗೆ

ಮೀನ ರಾಶಿ

ಹಣಕ್ಕೆ ಸಂಬಂಧಿಸಿದ ಚಿಂತೆ ಹೆಚ್ಚಾಗಲಿದೆ. ನೀವು ಹಣಕಾಸಿನ ಸಮಸ್ಯೆ ಎದುರಿಸಬೇಕಾಗಬಹುದು. ಕಚೇರಿಯಲ್ಲಿ ನಿಮ್ಮ ಕಾರ್ಯಕ್ಷಮತೆಯ ಬಗ್ಗೆ ಬಾಸ್ ತುಂಬಾ ಅತೃಪ್ತಿ ಹೊಂದುತ್ತಾರೆ, ಆದ್ದರಿಂದ ಈ ಕುರಿತು ಎಚ್ಚರಿಕೆವಹಿಸಿ. ವೈವಾಹಿಕ ಜೀವನದಲ್ಲಿ ಸಂತೋಷ ಇರಲಿದೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 28
ಅದೃಷ್ಟದ ಸಮಯ: ಬೆಳಿಗ್ಗೆ 9 ರಿಂದ 11ರವರೆಗೆ

English summary

Dina Bhavishya June 22 2023 Today Rashi Bhavishya, Daily Horoscope in Kannada

Dina Bhavishya- Get Today's Rashi Bhavishy 22 June 2023 In Kannada, Read daily horoscope prediction of aries, taurus, gemini, cancer, leo, virgo, libra, scorpio, Sagittarius, Capricorn, Aquarius, pisces in Kannada.
X
Desktop Bottom Promotion