Horoscope Today 23 June: ಜೂನ್ 23 ಈ ದಿನ ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?

ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಜೂನ್ 23ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ಉತ್ತರಾಯಣ
ಋತು: ವಸಂತ
ಮಾಸ: ಆಷಾಢ
ಪಕ್ಷ: ಶುಕ್ಲಪಕ್ಷ
ತಿಥಿ: ಪಂಚಮಿ
ನಕ್ಷತ್ರ: ಮಘಾ
ರಾಹುಕಾಲ: ಬೆಳಗ್ಗೆ 10:45ರಿಂದ ಮಧ್ಯಾಹ್ನ 12:22ರವರೆಗೆ

ಮೇಷ ರಾಶಿ

ಮಕ್ಕಳ ಕಡೆಯಿಂದ ಖುಷಿಯ ಸುದ್ದಿ ಸಿಗಲಿದೆ. ಕೆಲಸದ ದೃಷ್ಟಿಯಿಂದ ಕೂಡ ಈ ದಿನ ಅನುಕೂಲಕರವಾಗಿದೆ. ಹಣದ ವಿಷಯದಲ್ಲಿ ಈ ದಿನ ಅದೃಷ್ಟದ ದಿನವಾಗಿದೆ. ಆರ್ಥಿಕವಾಗಿಯೂ ಯಾವುದೇ ಸಮಸ್ಯೆ ಇರಲ್ಲ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 17
ಅದೃಷ್ಟದ ಸಮಯ: ಬೆಳಿಗ್ಗೆ 8:20 ರಿಂದ 9:50 ರವರೆಗೆ

Dina Bhavishya June 23 2023 Today Rashi Bhavishya, Daily Horoscope in Kannada

ವೃಷಭ ರಾಶಿ

ಏನಾದರೂ ಆರೋಗ್ಯ ಸಮಸ್ಯೆ ಇದ್ದಿದ್ದರೆ ಈ ದಿನ ಸ್ವಲ್ಪ ಬೆಟರ್ ಅನಿಸುವುದು. ತುಂಬಾ ದಿನಗಳ ನಂತರ ನಿಮ್ಮ ಕೆಲಸದ ಕಡೆಗೆ ಗಮನಹರಿಸಲು ಸಾಧ್ಯವಾಗುವುದು.ವೈವಾಹಿಕ ಜೀವನದ ಬಗ್ಗೆ ಹೇಳುವುದಾದರೆ ಇಬ್ಬರ ನಡುವೆ ವೈಮನಸ್ಸು ಇರಬಹುದು, ಸಮಸ್ಯೆ ಬೆಳೆಯದಂತೆ ನೋಡಿಕೊಳ್ಳಿ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 6
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ

ಮಿಥುನ ರಾಶಿ

ಉದ್ಯೋಗಸ್ಥರಿಗೆ ಈ ದಿನ ತುಂಬಾ ಮುಖ್ಯವಾಗಿದೆ. ಇತ್ತೀಚೆಗೆ, ನೀವು ದೊಡ್ಡ ಯೋಜನೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದರೆ ಅದರ ಉತ್ತಮ ಫಲಿತಾಂಶ ಈ ದಿನ ಪಡೆಯುತ್ತೀರಿ. ಕೌಟುಂಬಿಕ ಜೀವನ ಸುಖಮಯವಾಗಿರಲಿದೆ. ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟ ಸಂಖ್ಯೆ: 10
ಅದೃಷ್ಟದ ಸಮಯ: ಸಂಜೆ 6:55 ರಿಂದ 8:15 ರವರೆಗೆ

ಕರ್ಕ ರಾಶಿ

ಸಂಗಾತಿಯೊಂದಿಗಿನ ಸಂಬಂಧದಲ್ಲಿ ಉತ್ತಮ ಹೊಂದಾಣಿಕೆ ಇರಲಿದೆ. ನೀವಿಬ್ಬರು ಪಿಕ್ನಿಕ್‌ಗೆ ಕೂಡ ಹೋಗಬಹುದು. ಆರ್ಥಿಕ ಸ್ಥಿತಿಯೂ ಚೆನ್ನಾಗಿರಲಿದೆ. ಆದರೆ ನೀವು ಹಣ ಖರ್ಚು ಮಾಡುವಾಗ ಎಚ್ಚರವಹಿಸಿ, ಅತಿಯಾದ ಖರ್ಚು ಸಮಸ್ಯೆ ತರಬಹುದು. ಕೆಲಸದ ವಿಷಯದಲ್ಲಿ ಈ ದಿನ ಕಾರ್ಯನಿರತವಾಗಿರಲಿದೆ. ಕೆಲಸದ ಜೊತೆಗೆ ನಿಮ್ಮ ಆರೋಗ್ಯದ ಕಡೆಯೂ ಗಮನಹರಿಸಿ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 25
ಅದೃಷ್ಟದ ಸಮಯ: ಬೆಳಿಗ್ಗೆ 4:05 ರಿಂದ 9:00 ರವರೆಗೆ

ಸಿಂಹ ರಾಶಿ

ಕೆಲಸಕ್ಕೆ ಸಂಬಂಧಿಸಿದಂತೆ ಪ್ರಯಾಣ ಮಾಡಬೇಕಾಗುವುದು. ನಿಮ್ಮ ಈ ಪ್ರಯಾಣವು ತುಂಬಾ ಪ್ರಯೋಜನಕಾರಿಯಾಗಲಿದೆ. ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರಲಿದೆ. ಹಣದ ವಿಷಯದಲ್ಲಿ ನೋಡುವುದಾದರೆ ಈ ದಿನ ಮಿಶ್ರ ಫಲ. ನಿಮ್ಮ ಆರೋಗ್ಯ ಚೆನ್ನಾಗಿರಲಿದೆ. ನಿದ್ದೆಗೆಡದಂತೆ ಸಲಹೆ ನೀಡಲಾಗುವುದು.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 18
ಅದೃಷ್ಟದ ಸಮಯ: ಮಧ್ಯಾಹ್ನ 12:45 ರಿಂದ ಮಧ್ಯಾಹ್ನ 3 ರವರೆಗೆ್

ಕನ್ಯಾ ರಾಶಿ

ಈ ದಿನ ನಿಮಗೆ ಅನುಕೂಲಕರವಾಗಿರಲಿದೆ. ಕೆಲಸದ ಒತ್ತಡ ಕಡಿಮೆ ಇರುವುದರಿಂದ ನಿಮಗಾಗಿ ಸಮಯ ಸಿಗಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಉದ್ಯೋಗಿಗಳಿಗೆ, ವ್ಯಾಪಾರಸ್ಥರಿಗೆ ಈ ದಿನ ಅನುಕೂಲಕರವಾಗಿದೆ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 10
ಅದೃಷ್ಟದ ಸಮಯ: ಸಂಜೆ 4:30 ರಿಂದ ರಾತ್ರಿ 8:30 ರವರೆಗೆ

ತುಲಾ ರಾಶಿ

ಆರೋಗ್ಯ ಇಂದು ಸ್ವಲ್ಪ ದುರ್ಬಲವಾಗಿರಲಿದೆ. ಸಂಗಾತಿ ಜೊತೆ ವೈಮನಸ್ಸು ಬರಬಹುದು. ಈ ದಿನ ಕೆಲವು ವಿಷಯಕ್ಕೆ ಕೋಪ ಬಂದರೂ ನಿಮ್ಮ ಕೋಪವನ್ನು ನಿಯಂತ್ರಿಸುವುದು ಉತ್ತಮ. ಕಚೇರಿಯಲ್ಲಿ ಏನಾದರೂ ಕೆಲಸ ಬಾಕಿಯುಳಿದಿದ್ದರೆ ಅದನ್ನು ಪೂರ್ಣಗೊಳಿಸಲು ಪ್ರಯತ್ನಿಸಿ. ವ್ಯಾಪಾರಸ್ಥರಿಗೆ ಉತ್ತಮ ಲಾಭ ದೊರೆಯಲಿದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಮಧ್ಯಾಹ್ನ 2:05 ರಿಂದ ಸಂಜೆ 4 ರವರೆಗೆ

ವೃಶ್ಚಿಕ ರಾಶಿ

ಮನೆಯ ವಾತಾವರಣವು ಚೆನ್ನಾಗಿರಲಿದೆ. ಹಾಗಂತ ಅತಿಯಾಗಿ ಖರ್ಚು ಮಾಡದಂತೆ ಸಲಹೆ ನೀಡಲಾಗಿದೆ. ಕೆಲಸದ ದೃಷ್ಟಿಯಿಂದ ಇಂದು ಉತ್ತಮ ದಿನವಾಗಿರಲಿದೆ. ನೀವು ನಿರೀಕ್ಷಿಸಿದಂತೆಈ ದಿನ ಫಲ ಸಿಗಲಿದೆ, ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 15
ಅದೃಷ್ಟದ ಸಮಯ: ಸಂಜೆ 7:30 ರಿಂದ ರಾತ್ರಿ 9:15ರವರೆಗೆ

ಧನು ರಾಶಿ

ಮನೆಯಲ್ಲಿ ಮದುವೆ ಪ್ರಾಯದವರಿದ್ದರೆ ಅವರಿಗೆ ಸಂಬಂಧ ಬರಬಹುದು ಅಥವಾ ಅವರ ಮದುವೆ ಬಗ್ಗೆ ಮಾತುಕತೆ ನಡೆಸಬಹುದು. ಉದ್ಯೋಗಿಗಳಿಗೆ ಈ ದಿನ ತುಂಬಾ ಚೆನ್ನಾಗಿರಲಿದೆ. ಉದ್ಯಮಿಗಳು ಆರ್ಥಿಕ ಲಾಭ ಪಡೆಯಬಹುದು. ಆರೋಗ್ಯದ ದೃಷ್ಟಿಯಿಂದ ದಿನವು ಅನುಕೂಲಕರವಾಗಿರಲಿದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಬೆಳಿಗ್ಗೆ 7 ರಿಂದ 10 ರವರೆಗೆ

ಮಕರ ರಾಶಿ

ಈ ದಿನ ನಿಮಗೆ ತುಂಬಾ ದುಬಾರಿಯಾಗಬಹುದು. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ಬಜೆಟ್ ಅಸಮತೋಲಿತವಾಗಬಹುದು. ವ್ಯಾಪಾರಸ್ಥರು ಇಂದು ಬಹಳ ಜಾಗರೂಕರಾಗಿರಲು ಸಲಹೆ ನೀಡಲಾಗಿದೆ, ಇಲ್ಲದಿದ್ದರೆ ಆರ್ಥಿಕ ನಷ್ಟದ ಸಾಧ್ಯತೆಯಿದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿರಲಿದೆ. ಆರೋಗ್ಯದ ಕಡೆಗೆ ಗಮನಹರಿಸಿ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 22
ಅದೃಷ್ಟದ ಸಮಯ: ಮಧ್ಯಾಹ್ನ 3 ರಿಂದ ಸಂಜೆ 7 ರವರೆಗೆ

ಕುಂಭ ರಾಶಿ

ನೀವು ತೆಗೆದುಕೊಂಡ ಸಾಲವನ್ನು ಮರುಪಾವತಿಸಲು ಸಾಧ್ಯವಾಗುವುದರಿಂದ ನಿಮ್ಮ ದೊಡ್ಡ ಚಿಂತೆ ದೂರಾಗಲಿದೆ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವರಿಗೆ ಈ ದಿನ ಉತ್ತಮವಾಗಿದೆ. ಉದ್ಯೋಗಸ್ಥರಿಗೆ ಇಂದು ಅತ್ಯಂತ ಮಹತ್ವದ ದಿನವಾಗಿದೆ. ಸಂಗಾತಿಯೊಂದಿಗಿನ ಸಂಬಂಧ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಬೆಳಿಗ್ಗೆ 6:50 ರಿಂದ 8:55 ರವರೆಗೆ

ಮೀನ ರಾಶಿ

ಷೇರು ಮಾರುಕಟ್ಟೆಯಲ್ಲಿ ಕೆಲಸ ಮಾಡುವವರಿಗೆ ಇಂದು ತುಂಬಾ ಪ್ರಯೋಜನಕಾರಿಯಾಗಿದೆ. ನಿಮ್ಮ ಉತ್ತಮ ನಿರ್ಧಾರ ಒಳ್ಳೆಯ ಫಲ ನೀಡಲಿದೆ. ಉದ್ಯೋಗಸ್ಥರು ಬಯಸಿದ ವರ್ಗಾವಣೆಯನ್ನು ಪಡೆಯಬಹುದು. ಹಣದ ಪರಿಸ್ಥಿತಿ ಉತ್ತಮವಾಗಿರಲಿದೆ. ಸಂಗಾತಿಯ ಆರೋಗ್ಯ ಸ್ವಲ್ಪ ದುರ್ಬಲವಾಗಿರಬಹುದು.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಸಂಜೆ 4 ರಿಂದ ರಾತ್ರಿ 9 ರವರೆಗೆ

English summary

Dina Bhavishya June 23 2023 Today Rashi Bhavishya, Daily Horoscope in Kannada

Dina Bhavishya- Get Today's Rashi Bhavishy 23 June 2023 In Kannada, Read daily horoscope prediction of aries, taurus, gemini, cancer, leo, virgo, libra, scorpio, Sagittarius, Capricorn, Aquarius, pisces in Kannada.
X
Desktop Bottom Promotion