Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
Horoscope Today 25 June: ಜೂನ್ 25 ಈ ದಿನ ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಜೂನ್ 25ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ಉತ್ತರಾಯಣ
ಋತು: ವಸಂತ
ಮಾಸ: ಆಷಾಢ
ಪಕ್ಷ: ಶುಕ್ಲಪಕ್ಷ
ತಿಥಿ: ಸಪ್ತಮಿ
ನಕ್ಷತ್ರ: ಬೆಳಗ್ಗೆ 10:11ರವರೆಗೆ ಪೂರ್ವ ಫಲ್ಗುಣಿ ನಂತರ ಉತ್ತರ ಫಲ್ಗುಣಿ
ರಾಹುಕಾಲ: ಸಂಜೆ 05:12ರಿಂದ 06:49ರವರೆಗೆ
ಮೇಷ ರಾಶಿ
ಹಣದ ವಿಷಯದಲ್ಲಿ ಈ ದಿನ ಉತ್ತಮವಾಗಿದೆ. ಅಪೂರ್ಣವಾಗಿದ್ದ ಕೆಲಸ ಈ ದಿನ ಪೂರ್ಣವಾಗಲಿದೆ. ಉದ್ಯೋಗಸ್ಥರು ಇಂದು ಜಾಗರೂಕರಾಗಿರಲು ಸಲಹೆ ನೀಡಲಾಗಿದೆ, ಕಚೇರಿಯಲ್ಲಿ ನಡೆಯುತ್ತಿರುವ ಒಳ ರಾಜಕೀಯದ ಬಗ್ಗೆ ಎಚ್ಚರವಹಿಸಿ. ಕೌಟುಂಬಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಈ ದಿನವು ಸರಾಸರಿಯಾಗಿರಲಿದೆ.
ಅದೃಷ್ಟದ ಬಣ್ಣ: ಕಡು ಹಸಿರು
ಅದೃಷ್ಟದ ಸಂಖ್ಯೆ: 27
ಅದೃಷ್ಟದ ಸಮಯ: ಬೆಳಿಗ್ಗೆ 7 ರಿಂದ 11:20 ರವರೆಗೆ

ವೃಷಭ ರಾಶಿ
ಕೆಲಸದ ವಿಷಯದಲ್ಲಿ ಈ ದಿನವು ಕಾರ್ಯನಿರತವಾಗಿರುತ್ತದೆ. ಆದರೆ ನಿಮ್ಮ ಎಲ್ಲಾ ಕೆಲಸಗಳು ಯೋಜನೆಯ ಪ್ರಕಾರ ಪೂರ್ಣಗೊಳ್ಳುವುದರಿಂದ ಯಾವುದೇ ಚಿಂತೆಯಿಲ್ಲ. ಸಂಗಾತಿಯೊಂದಿಗಿನ ಸಂಬಂಧವು ಇನ್ನಷ್ಟು ಗಟ್ಟಿಯಾಗಿರಲಿದೆ. ಮನೆಯ ಜವಾಬ್ದಾರಿ ಚೆನ್ನಾಗಿ ನಿಭಾಯಿಸಲು ಸಾಧ್ಯವಾಗುವುದು. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿಲಿದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ಸಂಜೆ 4 ರವರೆಗೆ
ಮಿಥುನ ರಾಶಿ
ಆರೋಗ್ಯದ ವಿಷಯದಲ್ಲಿ ಈ ದಿನ ಏರಿಳಿತಗಳಿಂದ ತುಂಬಿರಲಿದೆ. ಸ್ವಲ್ಪ ನಿರ್ಲಕ್ಷ್ಯವು ದುಬಾರಿಯಾಗಿರಬಹುದು. ಆರ್ಥಿಕ ಪರಿಸ್ಥಿತಿ ಹದಗೆಡುವ ಲಕ್ಷಣಗಳಿವೆ. ಆದಾಯಕ್ಕಿಂತ ಹೆಚ್ಚಿನ ಖರ್ಚು ಬರಬಹುದು, ಕೆಲಸದ ಬಗ್ಗೆ ಹೆಚ್ಚು ಚಿಂತೆ ಮಾಡುವುದನ್ನು ಬಿಡಿ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 8
ಅದೃಷ್ಟದ ಸಮಯ: ಬೆಳಗ್ಗೆ 8:55 ರಿಂದ ಮಧ್ಯಾಹ್ನ 12
ಕರ್ಕ ರಾಶಿ
ಬಹಳ ಸಮಯದ ನಂತ ಈ ದಿನ ತುಂಬಾ ರಿಲ್ಯಾಕ್ಸ್ ಮೂಡ್‌ನಲ್ಲಿರುತ್ತೀರ. ಮನೆಯ ವಾತಾವರಣ ಚೆನ್ನಾಗಿರಲಿದೆ. ಉದ್ಯೋಗಸ್ಥರಿಗೆ ಈ ದಿನ ಅನುಕೂಲಕರವಾಗಿರಲಿದೆ. ವ್ಯಾಪಾರಸ್ಥರು ಆರ್ಥಿಕ ಲಾಭವನ್ನು ಪಡೆಯುತ್ತೀರಿ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 26
ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 8:20 ರವರೆಗೆ
ಸಿಂಹ ರಾಶಿ
ಪ್ರೇಮಿಗಳಿಗೆ ಈ ದಿನ ತುಂಬಾ ಚೆನ್ನಾಗಿರಲಿದೆ. ಪ್ರೀತಿಸುತ್ತಿದ್ದರೆ ನಿಮ್ಮ ಮದುವೆ ಬಗ್ಗೆ ಮಾತುಕತೆ ನಡೆಯಬಹುದು. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನೀವು ಹೊಸ ಆದಾಯದ ಮೂಲವನ್ನು ಹುಡುಕುತ್ತಿದ್ದರೆ ಈ ದಿನ ಅದಕ್ಕೆ ಸಂಬಂಧಿಸಿದ ಹೊಸ ಮಾರ್ಗಗಳು ತೆರೆದುಕೊಳ್ಳಲಿದೆ. ನಿಮ್ಮ ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 14
ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ 3:15 ರವರೆಗೆ
ಕನ್ಯಾ ರಾಶಿ
ಕೆಲಸದ ದೃಷ್ಟಿಯಿಂದ ಈ ದಿನ ಸವಾಲಿನಿಂದ ಕೂಡಿದೆ. ಸುಲಭವಾಗಿ ಮುಗಿಸುವ ಕೆಲಸಗಳಿಗೂ ಅಡ್ಡಿಯಾಗಬಹುದು. ಮನೆಯ ಸದಸ್ಯರ ಸಂಪೂರ್ಣ ಸಹಕಾರ ದೊರೆಯಲಿದೆ. ಕಷ್ಟದಲ್ಲಿ ಅವರು ನಿಮ್ಮೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಡೆಯುತ್ತಾರೆ. ಈ ದಿನ ಉತ್ತಮ ಮನಸ್ಥಿತಿಯಲ್ಲಿರುತ್ತೀರಿ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 32
ಅದೃಷ್ಟದ ಸಮಯ: ಸಂಜೆ 7 ರಿಂದ ರಾತ್ರಿ 9 ರವರೆಗೆ
ತುಲಾ ರಾಶಿ
ದಾಂಪತ್ಯ ಜೀವನ ಚೆನ್ನಾಗಿರಲಿದೆ. . ಉದ್ಯೋಗಿಗಳಿಗೆ ಕಚೇರಿಯಲ್ಲಿ ಕಷ್ಟಪಟ್ಟು ಕೆಲಸ ಮಾಡಲು ಸಲಹೆ ನೀಡಲಾಗುವುದು. ಒಮ್ಮೆ ಆದ ತಪ್ಪನ್ನು ಮತ್ತೆ ಮತ್ತೆ ಮಾಡುವುದನ್ನು ತಪ್ಪಿಸಿ, ಇಲ್ಲದಿದ್ದರೆ ನಿಮಗೆ ಸಮಸ್ಯೆಯಾಗಬಹುದು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ಬೂದು
ಅದೃಷ್ಟದ ಸಂಖ್ಯೆ: 29
ಅದೃಷ್ಟದ ಸಮಯ: ಬೆಳಿಗ್ಗೆ 4:20 ರಿಂದ 9:50 ರವರೆಗೆ
ವೃಶ್ಚಿಕ ರಾಶಿ
ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರಿಗೆ ಈ ದಿನ ತುಂಬಾ ಪ್ರಯೋಜನಕಾರಿಯಾಗಿದೆ. ನೀವು ಸರ್ಕಾರಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದರೆ, ನಿಮ್ಮ ಪ್ರಯತ್ನಗಳನ್ನು ಮತ್ತಷ್ಟು ಚುರುಕುಗೊಳಿಸಬೇಕು. ವೈವಾಹಿಕ ಜೀವನದಲ್ಲಿ ಖುಷಿ ಇರುತ್ತದೆ. ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 25
ಅದೃಷ್ಟದ ಸಮಯ: ಸಂಜೆ 6:55 ರಿಂದ 8:45 ರವರೆಗೆ
ಧನು ರಾಶಿ
ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರಲಿದೆ. ಮನೆಯ ಹಿರಿಯರ ಮಾರ್ಗದರ್ಶನ ದೊರೆಯಲಿದೆ. ಆರ್ಥಿಕ ಸಮಸ್ಯೆ ಬಗೆಹರಿಯಲಿದೆ. ಈ ದಿನ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಉದ್ಯೋಗವಿರಲಿ, ವ್ಯವಹಾರವಿರಲಿ ಶ್ರಮಕ್ಕೆ ತಕ್ಕ ಫಲ ಸಿಗಲಿದೆ. ನಿಮ್ಮ ಮನಸ್ಥಿತಿ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 8
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ಸಂಜೆ 4 ರವರೆಗೆ
ಮಕರ ರಾಶಿ
ಧಾರ್ಮಿಕ ಕಾರ್ಯಗಳ ಕಡೆಗೆ ಆಸಕ್ತಿ ಹೆಚ್ಚಾಗಲಿದೆ. ಮಕ್ಕಳ ಶಿಕ್ಷಣದ ಬಗ್ಗೆ ಚಿಂತೆ ಕಾಡಬಹುದು. ನೀವು ಸೋಮಾರಿತನವನ್ನು ಬಿಟ್ಟು ನಿಮ್ಮ ಎಲ್ಲಾ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ಸಲಹೆ ನೀಡಲಾಗಿದೆ. ಉದ್ಯಮಿಗಳು ತರಾತುರಿಯಲ್ಲಿ ದೊಡ್ಡ ವ್ಯವಹಾರ ಮಾಡದಂತೆ ಸಲಹೆ ನೀಡಲಾಗಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಬೆಳಿಗ್ಗೆ 6:35 ರಿಂದ 11:05 ರವರೆಗೆ
ಕುಂಭ ರಾಶಿ
ಈ ದಿನ ಮನೆಯ ವಾತಾವರಣ ಅಷ್ಟು ಸರಿ ಇರಲ್ಲ. ಮನೆಯ ಸದಸ್ಯರ ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಇಂದು ಕಚೇರಿಯಲ್ಲಿ, ಬಾಸ್ ನಿಮಗೆ ಕೆಲವು ಪ್ರಮುಖ ಕೆಲಸವನ್ನು ನಿಯೋಜಿಸಬಹುದು. ಆದ್ದರಿಂದ ನಿಮ್ಮ ಅತ್ಯುತ್ತಮವಾದದ್ದನ್ನು ನೀಡಲು ಪ್ರಯತ್ನಿಸಿ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಸಮಯ: ಬೆಳಿಗ್ಗೆ 4:30 ರಿಂದ 9:45 ರವರೆಗೆ
ಮೀನ ರಾಶಿ
ನೀವು ವ್ಯಾಪಾರಸ್ಥರಾಗಿದ್ದರೆ ಮತ್ತು ಇಂದು ಹಣಕ್ಕೆ ಸಂಬಂಧಿಸಿದ ಯಾವುದೇ ದೊಡ್ಡ ವ್ಯವಹಾರವನ್ನು ಮಾಡಲಿದ್ದರೆ, ನೀವು ಹೆಚ್ಚು ಜಾಗರೂಕರಾಗಿರಲು ಸಲಹೆ ನೀಡಲಾಗಿದೆ. ಉದ್ಯೋಗಿಗಳು ತಮ್ಮ ಕೆಲಸದ ಮೇಲೆ ಸಂಪೂರ್ಣವಾಗಿ ಗಮನಹರಿಸಬೇಕು, ಇಲ್ಲದಿದ್ದರೆ ಅದು ನಿಮ್ಮ ಕೆಲಸದ ಮೇಲೆ ಕೆಟ್ಟ ಪ್ರಭಾವ ಬೀರಬಹುದು. ಇಂದು ಮನೆಯಲ್ಲಿ ಪೂಜೆ, ಹವನ ಇತ್ಯಾದಿಗಳನ್ನು ಆಯೋಜಿಸಬಹುದು.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಸಂಜೆ 7 ರಿಂದ 9:15 ರವರೆಗೆ



Click it and Unblock the Notifications
