Horoscope Today 29 June: ಜೂನ್ 29 , ಏಕಾದಶಿ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?

ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಜೂನ್ 29ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ಉತ್ತರಾಯಣ
ಋತು: ವಸಂತ
ಮಾಸ: ಆಷಾಢ
ಪಕ್ಷ: ಶುಕ್ಲಪಕ್ಷ
ತಿಥಿ: ಏಕಾದಶಿ
ನಕ್ಷತ್ರ: ಸಂಜೆ 04:30ರವರೆಗೆ ಸ್ವಾತಿ ನಂತರ ವಿಶಾಖ
ರಾಹುಕಾಲ: ಮಧ್ಯಾಹ್ನ 2ರಿಂದ 03:36ರವರೆಗೆ

ಮೇಷ ರಾಶಿ

ಈ ದಿನ ಕೆಲಸದ ಒತ್ತಡ ಹೆಚ್ಚಿರಲಿದೆ, ಇದರಿಂದ ನೀವು ತುಂಬಾ ಕಿರಿಕಿರಿ ಅನುಭವಿಸಬಹುದು, ಚಿಕ್ಕ ಪುಟ್ಟ ವಿಷಯಕ್ಕೆ ಅಸಮಧಾನ ಉಂಟಾಗಬಹುದು. ಆದರೆ ನಿಮ್ಮ ಕೋಪ ನಿಯಂತ್ರಿಸುವುದು ಒಳ್ಳೆಯದು. ಇಲ್ಲದಿದ್ದರೆ ನಿಮ್ಮ ಸಂಬಂಧಗಳ ಮೇಲೂ ಕೆಟ್ಟ ಪರಿಣಾಮ ಬೀರಬಹುದು. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯ ಸಂಬಂಧಿ ಸಮಸ್ಯೆವಿದ್ದರೆ ಜಾಗ್ರತೆವಹಿಸಿ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 22
ಅದೃಷ್ಟದ ಸಮಯ: ಸಂಜೆ 4:45 ರಿಂದ ರಾತ್ರಿ 9:05 ರವರೆಗೆ

Dina Bhavishya June 29 2023 Today Rashi Bhavishya, Daily Horoscope in Kannada

ವೃಷಭ ರಾಶಿ

ನೀವು ಭೂಮಿ, ಮನೆ, ವಾಹನ ಇತ್ಯಾದಿಗಳನ್ನು ಖರೀದಿಸಲು ಯೋಜಿಸುತ್ತಿದ್ದರೆ ಈ ದಿನ ಮುಖ್ಯವಾದ ತೀರ್ಮಾನ ತೆಗೆದುಕೊಳ್ಳುತ್ತೀರಿ. ಜೀವನ ಸಂಗಾತಿಯ ಪ್ರೀತಿ ಮತ್ತು ಬೆಂಬಲ ಸಿಗಲಿದೆ. ಪ್ರೇಮಿಗಳಿಗೆ ಈ ದಿನ ರೊಮ್ಯಾಂಟಿಕ್ ಆಗಿರಲಿದೆ. ನಿಮ್ಮಿಬ್ಬರ ನಡುವಿ ಸಂಬಂಧ ಮತ್ತಷ್ಟು ಆಳವಾಗುವುದು. ಈ ದಿನ ಹಣಕ್ಕೆ ಸಂಬಂಧಿಸಿದ ಪ್ರಮುಖ ಚಿಂತೆ ದೂರಾಗಲಿದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಬೆಳಿಗ್ಗೆ 8 ರಿಂದ 11 ರವರೆಗೆ

ಮಿಥುನ ರಾಶಿ

ಉದ್ಯೋಗಸ್ಥರಿಗೆ ಈ ದಿನ ಅನುಕೂಲಕರವಾಗಿದೆ. ವಿವಾಹಿತರ ವೈವಾಹಿಕ ಜೀವನ ಚೆನ್ನಾಗಿರಲಿದೆ. ನಿಮ್ಮಿಬ್ಬರ ಸಂಬಂಧ ಮತ್ತಷ್ಟು ಗಟ್ಟಿಯಾಗಲಿದೆ. ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಸಂಜೆ 4:55 ರಿಂದ 7:10 ರವರೆಗೆ

ಕರ್ಕ ರಾಶಿ

ಈ ದಿನ ಹಣದ ಬಗ್ಗೆ ಚಿಂತೆ ಹಚ್ಚಾಗಲಿದೆ. ಸಾಲ ಮಾಡಿದ್ದರೆ ಮರಳಿಸಲು ಒತ್ತಾಯ ಹೆಚ್ಚಾಗಬಹುದು. ಸಂಗಾತಿಯ ನಡವಳಿಕೆ ಮನಸ್ಸು ನೋಯಿಸಬಹುದು. ಇಂದು ನೀವು ಭಾವನಾತ್ಮಕವಾಗಿ ತುಂಬಾ ದುರ್ಬಲರಾಗುತ್ತೀರಿ. ಪ್ರಣಯ ಜೀವನದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ. ನಿಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.
ಅದೃಷ್ಟದ ಬಣ್ಣ: ಗಾಢ ಕೆಂಪು
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಬೆಳಿಗ್ಗೆ 7:20 ರಿಂದ 9:00 ರವರೆಗೆ

ಸಿಂಹ ರಾಶಿ

ಪ್ರೇಮಿಗಳಿಗೆ ಈ ದಿನ ಒತ್ತಡದಿಂದ ಕೂಡಿರುತ್ತದೆ. ಸಂಗಾತಿಯೊಂದಿಗೆ ತಪ್ಪು ತಿಳುವಳಿಕೆ ಹೆಚ್ಚಾಗಬಹುದು. ಇಂದು ನೀವು ಕೆಲಸದಲ್ಲಿ ತುಂಬಾ ಕಾರ್ಯನಿರತರಾಗಿರುತ್ತೀರಿ. ನೀವು ನಿಮ್ಮ ಆರೋಗ್ಯದ ಕಡೆಗೆ ಗಮನಹರಿಸಬೇಕು. ಆರ್ಥಿಕ ಪರಿಸ್ಥಿತಿ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 31
ಅದೃಷ್ಟದ ಸಮಯ: ಸಂಜೆ 5:30 ರಿಂದ ರಾತ್ರಿ 8 ರವರೆಗೆ

ಕನ್ಯಾ ರಾಶಿ

ದಾಂಪತ್ಯ ಜೀವನದಲ್ಲಿ ಖುಷಿ ಇರಲಿದೆ. ಸಂಗಾತಿಯು ನಿಮ್ಮ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಾರೆ. ಅವಾಹಿತರು ಸಂಗಾತಿಯ ಹುಡುಕಾಟದಲ್ಲಿದ್ದರೆ ಈ ದಿನ ವಿಶೇಷ ವ್ಯಕ್ತಿಯನ್ನು ಭೇಟಿಯಾಗುತ್ತೀರಿ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ನಿಮ್ಮ ಸೌಕರ್ಯಗಳು ಹೆಚ್ಚಳವಾಗಲಿದೆ. ನಿಮ್ಮ ದಿನಚರಿಯಲ್ಲಿ ನೀವು ಕೆಲವು ಬದಲಾವಣೆಗಳನ್ನು ಮಾಡಬಹುದು.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಬೆಳಿಗ್ಗೆ 4:30 ರಿಂದ 10:10 ರವರೆಗೆ

ತುಲಾ ರಾಶಿ

ಕೆಲಸದ ಸ್ಥಳದಲ್ಲಿ ಈ ದಿನ ನಿಮಗೆ ತುಂಬಾ ಚೆನ್ನಾಗಿರಲಿದೆ. ಈ ದಿನ ಮನೆಯಲ್ಲಿ ಸಂಗಾತಿಯ ಜೊತೆ ಭಿನ್ನಾಭಿಪ್ರಾಯ ಉಂಟಾಗದಂತೆ ಎಚ್ಚರಹಿಸಿ. ನಿಮ್ಮ ಕೋಪವನ್ನು ನೀವು ನಿಯಂತ್ರಿಸಬೇಕು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರಲಿದೆ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 26
ಅದೃಷ್ಟದ ಸಮಯ: ಸಂಜೆ 6 ರಿಂದ 9:15 ರವರೆಗೆ

ವೃಶ್ಚಿಕ ರಾಶಿ

ನಿಮ್ಮ ಆರೋಗ್ಯವನ್ನು ನಿರ್ಲಕ್ಷ್ಯ ಮಾಡಬೇಡಿ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಉತ್ತಮ ಹೊಂದಾಣಿಕೆ ಇರುತ್ತದೆ. ನೀವಿಬ್ಬರು ಭವಿಷ್ಯದ ಯೋಜನೆಗಳ ಬಗ್ಗೆಯೂ ಚರ್ಚಿಸಬಹುದು. ಹಣದ ವಿಷಯದಲ್ಲಿ, ದಿನವು ಮಿಶ್ರಫಲ. ನಿಮ್ಮ ಖರ್ಚು ಮತ್ತು ಆದಾಯದ ನಡುವೆ ಸಮತೋಲನವನ್ನು ಸಾಧಿಸಲು ಪ್ರಯತ್ನಿಸುವುದು ಒಳ್ಳೆಯದು.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ಸಮಯ: ಬೆಳಿಗ್ಗೆ 8 ರಿಂದ ಮಧ್ಯಾಹ್ನ 12 ರವರೆಗೆ

ಧನು ರಾಶಿ

ಈ ದಿನ ಕುಟುಂಬ ಜೀವನ ಚೆನ್ನಾಗಿರಲಿದೆ, ಏನಾದರೂ ಸಮಸ್ಯೆಯಿದ್ದರೆ ನಿಮ್ಮ ಸಂಬಂಧ ಸುಧಾರಿಸುತ್ತದೆ. ಪ್ರೇಮಿಗಳಿಗೆ ಈ ದಿನ ವಿಶೇಷವಾಗಿರಲಿದೆ, ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಸಮಯ: ಸಂಜೆ 4 ರಿಂದ ರಾತ್ರಿ 8 ರವರೆಗೆ

ಮಕರ ರಾಶಿ

ಮಕರ ರಾಶಿಯ ನಿರುದ್ಯೋಗಿಗಳಿಗೆ ಇಂದು ಅತ್ಯಂತ ಶುಭ ದಿನ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ನಿಮ್ಮ ಸಂಗಾತಿಯ ಸಹಾಯದಿಂದ ನಿಮ್ಮ ಯಾವುದೇ ಪ್ರಮುಖ ಸಮಸ್ಯೆಗಳನ್ನು ಪರಿಹರಿಸಬಹುದು. ಪರಸ್ಪರ ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳುವುದರಿಂದ ಸಂಬಂಧ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 16
ಅದೃಷ್ಟ ಸಮಯ: ಬೆಳಿಗ್ಗೆ 6:15 ರಿಂದ 11 ರವರೆಗೆ

ಕುಂಭ ರಾಶಿ

ನಿಮ್ಮನ್ನು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢವಾಗಿರಿಸಿಕೊಳ್ಳಲು, ಪ್ರತಿದಿನ ಯೋಗ ಮತ್ತು ಧ್ಯಾನ ಮಾಡಬೇಡಿ. ಕೆಲಸದ ಹೊರೆ ಕಡಿಮೆ ಇರಲಿದೆ. ಈ ದಿನ ಶಾಪಿಂಗ್ ಮಾಡುವಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 42
ಅದೃಷ್ಟದ ಸಮಯ: ಬೆಳಿಗ್ಗೆ 7:55 ರಿಂದ ಮಧ್ಯಾಹ್ನ 12 ರವರೆಗೆ

ಮೀನ ರಾಶಿ

ಪ್ರೇಮಿಗಳಿಗೆ ಈ ದಿನ ಚೆನ್ನಾಗಿರಲಿದೆ. ಸಣ್ಣ ವಿಷಯಕ್ಕೆ ಮನಸ್ತಾಪ ತಪ್ಪಿಸಿ. ಹಣದ ವಿಷಯದಲ್ಲಿ ದಿನವು ತುಂಬಾ ದುಬಾರಿಯಾಗಿದೆ. ಅನಗತ್ಯ ಖರ್ಚುಗಳು ಉಂಟಾಗಬಹುದು. ನಿಮ್ಮ ಕೆಲವು ಪ್ರಮುಖ ಕೆಲಸಕ್ಕೆ ಅಡಚಣೆ ಉಂಟಾಗುವುದರಿಂದ ನಿಮ್ಮ ಆತಂಕ ಹೆಚ್ಚಾಗಬಹುದು. ಅಂತಹ ಪರಿಸ್ಥಿತಿಯಲ್ಲಿ, ನಕಾರಾತ್ಮಕ ಆಲೋಚನೆಗಳಿಂದ ದೂರವಿರಿ. ಎಲ್ಲವೂ ಸರಿಯಾಗಲಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 19
ಅದೃಷ್ಟದ ಸಮಯ: ಮಧ್ಯಾಹ್ನ 3:30 ರಿಂದ ಸಂಜೆ 7 ರವರೆಗೆ

English summary

Dina Bhavishya June 29 2023 Today Rashi Bhavishya, Daily Horoscope in Kannada

Dina Bhavishya- Get Today's Rashi Bhavishy 15 June 2023 In Kannada, Read daily horoscope prediction of aries, taurus, gemini, cancer, leo, virgo, libra, scorpio, Sagittarius, Capricorn, Aquarius, pisces in Kannada.
Story first published: Thursday, June 29, 2023, 4:00 [IST]
X
Desktop Bottom Promotion