Horoscope Today 30 June: ಜೂನ್ 30 ಈ ದಿನ ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?

ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಜೂನ್ 30ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ಉತ್ತರಾಯಣ
ಋತು: ವಸಂತ
ಮಾಸ: ಆಷಾಢ
ಪಕ್ಷ: ಶುಕ್ಲಪಕ್ಷ
ತಿಥಿ: ದ್ವಾದಶಿ
ನಕ್ಷತ್ರ: ಸಂಜೆ 04:10ರವರೆಗೆ ವಿಶಾಖ, ಅನುರಾಧ
ರಾಹುಕಾಲ: ಬೆಳಗ್ಗೆ 10:47ರಿಂದ 12:23ರವರೆಗೆ

ಮೇಷ ರಾಶಿ

ನೀವು ಈ ದಿನ ಕೆಲಸದಲ್ಲಿ ನಿರಾಸಕ್ತಿ ತೋರೊಸಬೇಡಿ, ನಿಮ್ಮ ಅಮೂಲ್ಯ ಸಮಯವನ್ನು ವ್ಯರ್ಥ ಮಾಡುವುದನ್ನು ತಪ್ಪಿಸಿ. ನಿಮ್ಮ ಸಮಯವನ್ನು ನೀವು ಸದುಪಯೋಗಪಡಿಸಿಕೊಂಡರೆ ಮಾತ್ರ ಪ್ರಯೋಜನ ಸಿಗಲಿದೆ. ಪ್ರಣಯ ಜೀವನದಲ್ಲಿ ಪರಿಸ್ಥಿತಿ ಅಷ್ಟು ಚೆನ್ನಾಗಿರಲ್ಲ. ನಿಮ್ಮ ಕೋಪವನ್ನು ನೀವು ನಿಯಂತ್ರಿಸಬೇಕು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ ಸಂಜೆ 5 ರವರೆಗೆ

Dina Bhavishya June 30 2023 Today Rashi Bhavishya, Daily Horoscope in Kannada

ವೃಷಭ ರಾಶಿ

ಇಂದು ಆರೋಗ್ಯದ ದೃಷ್ಟಿಯಿಂದ ದುರ್ಬಲ ದಿನವಾಗಿರುತ್ತದೆ. ಇದೆಲ್ಲವೂ ನಿಮ್ಮ ನಿರ್ಲಕ್ಷ್ಯದ ಫಲ. ವೈದ್ಯರಿಗೆ ಹಾಗೂ ಔಷಧಿಗಳಿಗಾಗಿ ನೀವು ಬಹಳಷ್ಟು ಹಣವನ್ನು ಖರ್ಚು ಮಾಡಬಹುದು. ಕೆಲವು ಕಾರಣಗಳಿಂದ ನಿಮ್ಮ ಸಂಗಾತಿಯೊಂದಿಗೆ ಮನಸ್ತಾಪ ಹೊಂದಿದ್ದರೆಇಂದು ನಿಮ್ಮ ಆತ್ಮೀಯರು ನಿಮ್ಮನ್ನು ಸಮಾಧಾನಪಡಿಸಲು ಪ್ರಯತ್ನಿಸಬಹುದು. ನೀವು ಎಲ್ಲಾ ಅಸಮಾಧಾನಗಳನ್ನು ಮರೆತು ಹೊಸ ಪ್ರಾರಂಭವನ್ನು ಮಾಡುವುದು ಉತ್ತಮ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಸಮಯ: ಬೆಳಿಗ್ಗೆ 6:15 ರಿಂದ 9:20 ರವರೆಗೆ

ಮಿಥುನ ರಾಶಿ

ಕೆಲಸದಲ್ಲಿ ಅದೃಷ್ಟದ ದಿನ. ನೀವು ಅದರ ಲಾಭವನ್ನು ಪಡೆದುಕೊಳ್ಳುವುದು ಉತ್ತಮ. ಸಂಗಾತಿಯ ಭಾವನೆಗಳನ್ನು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಿ. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು, ನಿಮ್ಮ ಹಣಕಾಸಿನ ನಿರ್ಧಾರಗಳನ್ನು ನೀವು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳಬೇಕು. ಆರೋಗ್ಯದ ದೃಷ್ಟಿಯಿಂದ ದಿನವು ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ಸಂಜೆ 5:35 ರವರೆಗೆ

ಕರ್ಕ ರಾಶಿ

ಇಂದು ನೀವು ತುಂಬಾ ಜಾಗರೂಕರಾಗಿರಬೇಕು, ಸ್ವಾರ್ಥಿಗಳಿಂದ ದೂರವಿರಿ, ಇಲ್ಲದಿದ್ದರೆ ಅವರು ನಿಮ್ಮ ಉದಾರತೆಯ ಲಾಭವನ್ನು ಪಡೆಯಬಹುದು. ನಿಮ್ಮ ಸಂಗಾತಿಗೆ ಸಾಕಷ್ಟು ಸಮಯವನ್ನು ನೀಡಲು ನಿಮಗೆ ಸಾಧ್ಯವಾಗುವುದು. ಇಂದು ನಿಮ್ಮ ವೈವಾಹಿಕ ಜೀವನದ ಅತ್ಯುತ್ತಮ ದಿನಗಳಲ್ಲಿ ಒಂದಾಗಿದೆ. ನಿಮ್ಮ ಆರ್ಥಿಕ ಸ್ಥಿತಿಯು ಬಲವಾಗಿರುತ್ತದೆ. ನಿಮ್ಮ ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 26
ಅದೃಷ್ಟದ ಸಮಯ: ಬೆಳಿಗ್ಗೆ 8 ರಿಂದ 10:10 ರವರೆಗೆ

ಸಿಂಹ ರಾಶಿ

ನೀವು ಕುಟುಂಬದ ಕಡೆಗೆ ಹೆಚ್ಚು ಗಮನಹರಿಸುತ್ತೀರಿ. ಇಂದು ನೀವು ಉದ್ಯೋಗ ಅಥವಾ ವ್ಯವಹಾರವಾಗಿರಲಿ ನಿಮ್ಮ ಶ್ರಮಕ್ಕೆ ಅನುಗುಣವಾಗಿ ಫಲಿತಾಂಶಗಳನ್ನು ಪಡೆಯುತ್ತೀರಿ. ಪ್ರೇಮಿಗಳಿಗೆ ಈ ದಿನ ಅನುಕೂಲಕರವಲ್ಲ. ನಿಮ್ಮ ಸಂಗಾತಿ ನಿಮ್ಮನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ನೀವು ಭಾವಿಸುವಿರಿ. ಮನಸ್ತಾಪವಿದ್ದರೆ ಮಾತನಾಡುವ ಮೂಲಕ ಬಗೆಹರಿಸಿ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 22
ಅದೃಷ್ಟದ ಸಮಯ: ಸಂಜೆ 4 ರಿಂದ ರಾತ್ರಿ 9:05 ರವರೆಗೆ

ಕನ್ಯಾ ರಾಶಿ

ಇಂದು ಪ್ರೀತಿ ಹಾಗೂ ವೈವಾಹಿಕ ಜೀವನಕ್ಕೆ ತುಂಬಾ ಅನುಕೂಲಕರವಾಗಿದೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ. ನೀವು ತುಂಬಾ ಖರ್ಚು ಮಾಡಬೇಡಿ. ಈ ರಾಶಿಯ ವಿದ್ಯಾರ್ಥಿಗಳಿಗೆ ಇಂದು ಬಹಳ ಒಳ್ಳೆಯದಿದೆ. ಶಿಕ್ಷಣಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರಯತ್ನದಲ್ಲಿ ನೀವು ಯಶಸ್ಸನ್ನು ಪಡೆಯಬಹುದು. ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟ ಬಣ್ಣ: ಹಳದಿ
ಅದೃಷ್ಟ ಸಂಖ್ಯೆ: 5
ಅದೃಷ್ಟದ ಸಮಯ: ಮಧ್ಯಾಹ್ನ 3 ರಿಂದ ಸಂಜೆ 7 ರವರೆಗೆ

ತುಲಾ ರಾಶಿ

ವೃತ್ತಿ ಜೀವನದಲ್ಲಿ ಧನಾತ್ಮಕ ಬದಲಾವಣೆಗಳಾಗಲಿವೆ. ನೀವು ಅಪಾರ ಯಶಸ್ಸನ್ನು ಪಡೆಯಬಹುದು. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಉತ್ತಮ ಹೊಂದಾಣಿಕೆ ಇರುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಆದಾಯವನ್ನು ಹೆಚ್ಚಿಸಲು ನಿಮ್ಮ ಪ್ರಯತ್ನಗಳನ್ನು ನೀವು ಹೆಚ್ಚಿಸಬೇಕು. ಆರೋಗ್ಯದ ವಿಷಯದಲ್ಲಿ, ದಿನವು ಮಿಶ್ರಫಲ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ಸಮಯ: ಮಧ್ಯಾಹ್ನ 2:15 ರಿಂದ ಸಂಜೆ 4 ರವರೆಗೆ

ವೃಶ್ಚಿಕ ರಾಶಿ

ಪ್ರಣಯ ಜೀವನದಲ್ಲಿ ಸ್ಥಿರತೆ ಇರಲಿದೆ. ಈ ರಾಶಿಯ ವಿವಾಹಿತರಿಗೆ ಇಂದು ವಿಶೇಷ ದಿನವಾಗಲಿದೆ. ನಿಮ್ಮ ವೈವಾಹಿಕ ಜೀವನದಲ್ಲಿ ಹೊಸ ತಿರುವು ಬರಬಹುದು. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಲಕ್ಷಣಗಳಿವೆ. ಕೆಲಸದ ಒತ್ತಡ ಸ್ವಲ್ಪ ಹೆಚ್ಚಾಗಲಿದೆ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 18
ಅದೃಷ್ಟದ ಸಮಯ: ಬೆಳಿಗ್ಗೆ 7:10 ರಿಂದ 10:10 ರವರೆಗೆ

ಧನು ರಾಶಿ

ಸಿಗರೇಟ್ ಮತ್ತು ಮದ್ಯದಂತಹ ಕೆಟ್ಟ ಅಭ್ಯಾಸಗಳಿಂದ ದೂರವಿರಿ. ನೀವು ವಿದ್ಯಾರ್ಥಿಯಾಗಿದ್ದರೆ ಮತ್ತು ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ಹೋಗಲು ಬಯಸಿದರೆ, ಇಂದು ನಿಮಗೆ ಬಹಳ ಮುಖ್ಯವಾಗಲಿದೆ. ಪ್ರಣಯ ಜೀವನದ ಬಗ್ಗೆ ಹೇಳುವುದಾದರೆ ನಿಮ್ಮ ಸಂಗಾತಿಯೊಂದಿಗೆ ಮನಸ್ತಾಪ ಉಂಟಾಗಬಹುದು, ಕೋಪವನ್ನು ನಿಯಂತ್ರಿಸಿ, ಸುಳ್ಳನ್ನು ಆಶ್ರಯಿಸುವುದನ್ನು ತಪ್ಪಿಸಿ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಸಂಜೆ 6 ರಿಂದ ರಾತ್ರಿ 9 ರವರೆಗೆ

ಮಕರ ರಾಶಿ

ಪ್ರೇಮಿಗಳಿಗೆ ಈ ದಿನ ವಿಶೇಷವಾಗಿರಲಿದೆ. ಹಣದ ವಿಷಯದಲ್ಲಿ ಇಂದು ಶುಭದಿನ. ಆರ್ಥಿಕ ಸ್ಥಿತಿ ಚೆನ್ನಾಗಿರಲುದೆ. ಸರ್ಕಾರಿ ಕೆಲಸ ಮಾಡುವವರಿಗೆ ಪ್ರಗತಿಯಾಗುತ್ತಿದೆ. ನೀವು ಉನ್ನತ ಸ್ಥಾನವನ್ನು ಪಡೆಯುವ ಸಾಧ್ಯತೆಯಿದೆ. ಆರೋಗ್ಯದ ದೃಷ್ಟಿಯಿಂದ ದಿನವು ಅನುಕೂಲಕರವಾಗಿರುತ್ತದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 14
ಅದೃಷ್ಟದ ಸಮಯ: ಬೆಳಿಗ್ಗೆ 4 ರಿಂದ ರಾತ್ರಿ 9 ರವರೆಗೆ

ಕುಂಭ ರಾಶಿ

ಕಚೇರಿಯಲ್ಲಿ ನಡೆಯುವ ರಾಜಕೀಯದ ಬಗ್ಗೆ ಎಚ್ಚರವಿರಲಿ, ಇಲ್ಲದಿದ್ದರೆ ಕಷ್ಟವಾಗಬಹುದು. ನೀವು ಹಣಕ್ಕೆ ಸಂಬಂಧಿಸಿದ ಯಾವುದೇ ವ್ಯವಹಾರವನ್ನು ಮಾಡಲಿದ್ದರೆ, ನೀವು ತುಂಬಾ ಜಾಗರೂಕರಾಗಿರಲು ಸಲಹೆ ನೀಡಲಾಗಿದೆ. ಸಂಗಾತಿಯ ನಡವಳಿಕೆಯಲ್ಲಿ ಬದಲಾವಣೆ ಕಂಡು ಬರುವುದು. ಸಣ್ಣ ವಿಚಾರಕ್ಕೆ ನಿಮ್ಮ ನಡುವೆ ಘರ್ಷಣೆಯಾಗುವ ಸಾಧ್ಯತೆ ಇದೆ. ಇಂದು ಆರೋಗ್ಯ ಹದಗೆಡಬಹುದು.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಸಂಜೆ 5:20 ರಿಂದ ರಾತ್ರಿ 8:20 ರವರೆಗೆ

ಮೀನ ರಾಶಿ

ವೈವಾಹಿಕ ಜೀವನದಲ್ಲಿ ಪರಿಸ್ಥಿತಿಗಳು ಅಷ್ಟು ಸರಿಯಿರಲ್ಲ. ನಿಮ್ಮ ನಡುವೆ ನಂಬಿಕೆಯ ಕೊರತೆ ಇರುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನೀವು ಯಾವುದೇ ಬೆಲೆಬಾಳುವ ವಸ್ತುವನ್ನು ಸಹ ಖರೀದಿಸಬಹುದು. ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನಗಳಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ ಮತ್ತು ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಉತ್ತಮ ಆರೋಗ್ಯಕ್ಕಾಗಿ, ನಿಮ್ಮ ಆಹಾರ ಪದ್ಧತಿಯನ್ನು ಬದಲಾಯಿಸಲು ಸಲಹೆ ನೀಡಲಾಗಿದೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 15
ಅದೃಷ್ಟದ ಸಮಯ: ಬೆಳಿಗ್ಗೆ 4:10 ರಿಂದ 8:50 ರವರೆಗೆ

English summary

Dina Bhavishya June 30 2023 Today Rashi Bhavishya, Daily Horoscope in Kannada

Dina Bhavishya- Get Today's Rashi Bhavishy 30 June 2023 In Kannada, Read daily horoscope prediction of aries, taurus, gemini, cancer, leo, virgo, libra, scorpio, Sagittarius, Capricorn, Aquarius, pisces in Kannada.
Story first published: Friday, June 30, 2023, 4:00 [IST]
X
Desktop Bottom Promotion