Latest Updates
-
ಮಘಾ ನಕ್ಷತ್ರಕ್ಕೆ ಕೇತು.. ಈ ಎಲ್ಲಾ ರಾಶಿಯವರ ಜೀವನದಲ್ಲಿ ಭಾರಿ ಬದಲಾವಣೆ! ಯಾರಿಗೆ ಶುಭ? ಯಾರಿಗೆ ಸಮಸ್ಯೆ? -
10 ನಿಮಿಷಗಳ ಅಪ್ಪೆ.. ಹೆಸರುಕಾಳು ಮತ್ತು ಬಟಾಣಿ ಬಳಸಿ ಮಾಡುವ ರೆಸಿಪಿ! ಮೃದುವಾಗಿ ಮಾಡೋದು ಹೇಗೆ ಗೊತ್ತಾ? -
ವಿವಾಹಿತ ದಂಪತಿಗಳಿಗೂ ಈ ದಿನ ಸಂತೋಷದಾಯಕ! ಸಂಗಾತಿ ಮೇಲೆ ಡೌಟ್ ಬೇಡ -
March 13 Horoscope: ಶುಭ ಕಾರ್ಯ ಸಂಬಂಧಿತ ಚರ್ಚೆಗಳಿವೆ -
ಬೇಸಿಗೆಯಲ್ಲಿ ಈ ಗಂಜಿ ಕುಡಿಯಿರಿ.. ಕೊಬ್ಬು ಕಡಿಮೆ, ದೇಹಕ್ಕೂ ತಂಪು! ಈ ಗಂಜಿಯ ಆರೋಗ್ಯ ರಹಸ್ಯ ಇಲ್ಲಿದೆ -
30 ವರ್ಷಗಳ ಬಳಿಕ ಸೂರ್ಯ-ಶನಿ ಸಂಯೋಗ! ಯಾರಿಗೆ ಶುಭ? ಯಾರಿಗೆ ಸಮಸ್ಯೆ? 12 ರಾಶಿಗಳ ಜಾತಕ ತಿಳಿಯಿರಿ -
ಈ 5 ವಿಷಯಗಳಲ್ಲಿ ಮಿತಿ ಮೀರಿದ್ರೆ ಜೀವನ ಸರ್ವನಾಶ! ಅಹಂಕಾರ ಬಿಡಿ.. ಇಂದೇ ಇವುಗಳಿಂದ ದೂರವಿರಿ -
ಪಕ್ಕಾ ಹೈದರಾಬಾದಿ ರುಚಿ.. ಅತಿಥಿಗಳು ಬಂದ್ರೆ ಈ ಚಿಕನ್ ಯಖನಿ ಪುಲಾವ್ ಮಾಡಿ! ಸಿಂಪಲ್ & ಸೂಪರ್ ರುಚಿ -
2026ರ ಸೂರ್ಯ ಗೋಚಾರ: ಇವರಿಗೆ ಸಿಗಲಿದೆ ಸರ್ಕಾರಿ ಉದ್ಯೋಗ! ಯಾರಿಗೆ ಮಾನಸಿಕ ಒತ್ತಡ? 12 ರಾಶಿಯವರಿಗೆ ರಾಶಿಫಲ ಇಲ್ಲಿದೆ -
ಹೋಟೆಲ್ ಶೈಲಿಯ ಆಲೂ ಮಸಾಲಾ ಪೂರಿ! ಈ ರೀತಿ ಮನೆಯಲ್ಲೇ ಮಾಡಿ, ಪರ್ಫೆಕ್ಟ್ ಆಗಿ ಉಬ್ಬಿ ಬರುತ್ತೆ
Horoscope Today 8 June 2023: ಗುರುವಾರ: ಈ ದಿನ ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಜೂನ್ 8ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ಉತ್ತರಾಯಣ
ಋತು: ವಸಂತ
ಮಾಸ: ಆಷಾಢ
ಪಕ್ಷ: ಕೃಷ್ಣಪಕ್ಷ
ತಿಥಿ: ಪಂಚಮಿ
ನಕ್ಷತ್ರ: ಶ್ರವಣ, 6:59ರ ನಂತರ ಧನಿಷ್ಠ
ರಾಹುಕಾಲ: ಮಧ್ಯಾಹ್ನ 01:55ರಿಂದ 03:32ರವರೆಗೆ
ಮೇಷ ರಾಶಿ
ಇಂದು ಯಾವುದೇ ನಿರ್ಗತಿಕರಿಗೆ ಸಹಾಯ ಮಾಡಲು ನಿಮಗೆ ಅವಕಾಶ ಸಿಕ್ಕಿದರೆ, ನಿಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ನೀವು ಅವರಿಗೆ ಸಹಾಯ ಮಾಡಿ. ನಿಮ್ಮ ಸಣ್ಣ ಸಹಾಯವು ಬೇರೆಯವರ ದೊಡ್ಡ ಸಮಸ್ಯೆಯನ್ನು ಪರಿಹರಿಸಬಹುದು. ಕೆಲಸಕ್ಕೆ ಸಂಬಂಧಿಸಿದ ಯಾವುದೇ ಪ್ರಯತ್ನದಲ್ಲಿ ಯಶಸ್ಸು ಸಿಗಲಿದೆ, ಇದರಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ.ಇಂದು ನೀವು ನಿಮ್ಮ ಸಂಗಾತಿಯೊಂದಿಗೆ ಉತ್ತಮ ಸಮಯವನ್ನು ಕಳೆಯುತ್ತೀರಿ. ಇಂದು, ನಿಮ್ಮ ವೈವಾಹಿಕ ಜೀವನದ ಯಾವುದೇ ಹಳೆಯ ನೆನಪುಗಳು ಮತ್ತೊಮ್ಮೆ ರಿಫ್ರೆಶ್ ಆಗಲಿದೆ. ಆರೋಗ್ಯದ ದೃಷ್ಟಿಯಿಂದ ಈ ದಿನವು ತುಂಬಾ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಗಾಢ ಕೆಂಪು
ಅದೃಷ್ಟದ ಸಂಖ್ಯೆ: 6
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ

ವೃಷಭ ರಾಶಿ
ಇಂದು ಉದ್ಯಮಿಗಳಿಗೆ ಹೊಸ ಸವಾಲಿನ ದಿನವಾಗಿರಬಹುದು. ಆದರೆ ನೀವು ಎಲ್ಲಾ ಸವಾಲುಗಳನ್ನು ಪೂರ್ಣ ಧೈರ್ಯದಿಂದ ಎದುರಿಸುತ್ತೀರಿ ಹಾಗೂ ನೀವು ಯಶಸ್ಸನ್ನು ಪಡೆಯುತ್ತೀರಿ. ಉದ್ಯೋಗಸ್ಥರಿಗೆ ಕಚೇರಿಯಲ್ಲಿ ಮೇಲಧಿಕಾರಿಗಳ ಮಾರ್ಗದರ್ಶನ ದೊರೆಯಲಿದೆ. ಇಂದು ನಿಮ್ಮ ಕೆಲಸದಿಂದ ಅವರ ಮನಸ್ಸು ಗೆಲ್ಲುತ್ತೀರಿ. ಹಣಕಾಸಿನ ಪರಿಸ್ಥಿತಿಯಲ್ಲಿ ಸುಧಾರಣೆಯ ಬಲವಾದ ಸಾಧ್ಯತೆಯಿದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಆಹ್ಲಾದಕರವಾಗಿರುತ್ತದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಆಯಾಸ ಹೆಚ್ಚಿರಬಹುದು.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 17
ಅದೃಷ್ಟದ ಸಮಯ: ಬೆಳಿಗ್ಗೆ 7 ರಿಂದ 11 ರವರೆಗೆ
ಮಿಥುನ ರಾಶಿ
ಈ ದಿನ ನೀವು ಅನಗ್ಯತ ಚರ್ಚೆಯಿಂದ ದೂರವಿರಲು ಸಲಹೆ ನೀಡಲಾಗಿದೆ, ಇಲ್ಲದಿದ್ದರೆ ಚಿಕ್ಕ ತಪ್ಪು ದುಬಾರಿಯಾಗಬಹುದು. . ನೀವು ಪ್ರತಿದಿನ ಕಚೇರಿಗೆ ತಡವಾಗಿ ತಲುಪುವವರಾದರೆ ನಿಮ್ಮ ಈ ಅಭ್ಯಾಸವು ನಿಮ್ಮನ್ನು ತೊಂದರೆಗೆ ಸಿಲುಕಿಸಬಹುದು. ವ್ಯಾಪಾರಸ್ಥರಿಗೆ ಮಿಶ್ರಫಲ. ಇಂದು ನೀವು ಯಾವುದೇ ಪ್ರಮುಖ ವ್ಯವಹಾರ ನಿರ್ಧಾರ ತೆಗೆದುಕೊಳ್ಳಲು ಹೋಗಬೇಡಿ. ನಿಮ್ಮ ಆರೋಗ್ಯವನ್ನು ಸುಧಾರಿಸಲು, ನಿಮ್ಮ ದಿನಚರಿಯಲ್ಲಿ ನೀವು ಬದಲಾವಣೆಗಳನ್ನು ಮಾಡಬೇಕು. ಇದರ ಹೊರತಾಗಿ, ಅನಗತ್ಯ ಚಿಂತೆಗಳಿಂದ ದೂರವಿರಿ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 8:20 ರವರೆಗೆ
ಕರ್ಕ ರಾಶಿ
ವ್ಯಾಪಾರಸ್ಥರಿಗೆ ಹೂಡಿಕೆ ಮಾಡಲು ಅವಕಾಶವಿದ್ದರೆ, ನೀವು ನಿಮ್ಮ ನಿರ್ಧಾರವನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಬೇಕು. ತರಾತುರಿಯಲ್ಲಿ ತೆಗೆದುಕೊಂಡ ನಿರ್ಧಾರವು ನಿಮ್ಮ ಸಮಸ್ಯೆಗಳನ್ನು ಹೆಚ್ಚಿಸಬಹುದು. ಈ ಸಮಯದಲ್ಲಿ ಯಾವುದೇ ರೀತಿಯ ಬದಲಾವಣೆ ಮಾಡದಂತೆ ಉದ್ಯೋಗಿಗಳಿಗೆ ಸಲಹೆ ನೀಡಲಾಗಿದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಮನೆಯ ಸದಸ್ಯರಿಗೆ ಅಗತ್ಯವಾದ ಖರೀದಿಗಳನ್ನು ಸಹ ನೀವು ಮಾಡಬಹುದು. ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 14
ಅದೃಷ್ಟದ ಸಮಯ: ಬೆಳಿಗ್ಗೆ 4:05 ರಿಂದ 7:45 ರವರೆಗೆ
ಸಿಂಹ ರಾಶಿ :
ಮನೆಯ ಹಿರಿಯರು ನಿಮಗೆ ಯಾವುದೇ ಪ್ರಮುಖ ಕೆಲಸವನ್ನು ನಿಯೋಜಿಸಿದರೆ, ನೀವು ಅದನ್ನು ಉತ್ತಮವಾಗಿ ನಿರ್ವಹಿಸಲು ಪ್ರಯತ್ನಿಸಬೇಕು. ನಿಮ್ಮ ಅಸಡ್ಡೆ ವರ್ತನೆ ನಿಮ್ಮ ಕುಟುಂಬದ ಸದಸ್ಯರ ಕೋಪ ಹೆಚ್ಚಿಸಬಹುದು. ಇದಲ್ಲದೆ, ನೀವು ಟೀಕೆಗಳನ್ನು ಸಹ ಎದುರಿಸಬೇಕಾಗುತ್ತದೆ. ಇಂದು ಹಣದ ವಿಷಯದಲ್ಲಿ ಉತ್ತಮವಲ್ಲ. ಇಂದು ಸಾಲ ಅಥವಾ ಕ್ರೆಡಿಟ್ ವಹಿವಾಟುಗಳನ್ನು ಮಾಡುವುದನ್ನು ತಪ್ಪಿಸಬೇಕು. ಕಚೇರಿಯ ವಾತಾವರಣ ಉತ್ತಮವಾಗಿರಲಿದೆ. ಕೆಲಸದಲ್ಲಿ ನಿಮಗೆ ಸಂತೋಷ ಸಿಗಲಿದೆ. ಉದ್ಯಮಿಗಳು ಪಾಲುದಾರಿಕೆಯಲ್ಲಿ ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಲಿದ್ದರೆ, ಇಂದು ನೀವು ಒಳ್ಳೆಯ ಸುದ್ದಿ ಪಡೆಯಬಹುದು. ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ಒಳ್ಳೆಯ ದಿನವಾಗಿರುತ್ತದೆ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 28
ಅದೃಷ್ಟದ ಸಮಯ: ಬೆಳಿಗ್ಗೆ 8 ರಿಂದ 11:20 ರವರೆಗೆ
ಕನ್ಯಾ ರಾಶಿ
ವೈವಾಹಿಕ ಜೀವನದಲ್ಲಿ ಇಂದು ಕೆಲ ಸಮಸ್ಯೆಗಳಿರಬಹುದು. ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯ ಹೆಚ್ಚಾಗಬಹುದು. ಹಣಕಾಸಿನ ದೃಷ್ಟಿಯಿಂದಲೂ ಈ ದಿನ ಹೆಚ್ಚು ಅನುಕೂಲಕರವಲ್ಲ. ಹಣ ಸಂಪಾದಿಸುವ ಉತ್ತಮ ಅವಕಾಶ ನಿಮ್ಮ ಕೈಯಿಂದ ಜಾರಿಹೋಗಬಹುದು. ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಸಂಪೂರ್ಣ ಸಹಕಾರ ಸಿಗಲಿದೆ. ನಿಮ್ಮ ಕೆಲಸದ ಮೇಲೆ ಸರಿಯಾಗಿ ಗಮನ ಹರಿಸಲು ಸಾಧ್ಯವಾಗುವುದು. ಉದ್ಯಮಿಗಳು ಆರ್ಥಿಕ ಲಾಭ ಪಡೆಯಬಹುದು. ನಿಮ್ಮ ವ್ಯಾಪಾರ ಯೋಜನೆಗಳಲ್ಲಿ ನೀವು ಕೆಲವು ಬದಲಾವಣೆಗಳನ್ನು ಸಹ ಮಾಡಬಹುದು. ಆರೋಗ್ಯದ ದೃಷ್ಟಿಯಿಂದ ದಿನವು ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 30
ಅದೃಷ್ಟದ ಸಮಯ: ಸಂಜೆ 6 ರಿಂದ 8:15 ರವರೆಗೆ
ತುಲಾ ರಾಶಿ
ವೈಯಕ್ತಿಕ ಜೀವನದಲ್ಲಿ ಪರಿಸ್ಥಿತಿಯು ಆಹ್ಲಾದಕರವಾಗಿರುತ್ತದೆ. ಹಣಕಾಸಿನ ಸ್ಥಿತಿ ತುಂಬಾ ಚೆನ್ನಾಗಿರಲಿದೆ. ಆದರೆ ಹಣದ ಸಂಬಂಧಿತ ವ್ಯವಹಾರಗಳನ್ನು ಮಾಡುವಾಗ ನೀವು ತುಂಬಾ ಜಾಗರೂಕರಾಗಿರಬೇಕು. ನೀವು ಇತ್ತೀಚೆಗೆ ಹೊಸ ವ್ಯವಹಾರವನ್ನು ಪ್ರಾರಂಭಿಸಿದ್ದರೆ ಅದರ ಪ್ರಚಾರದ ಬಗ್ಗೆ ಹೆಚ್ಚು ಗಮನ ಹರಿಸಲು ನಿಮಗೆ ಸಲಹೆ ನೀಡಲಾಗಿದೆ. ಉದ್ಯೋಗಿಗಳಿಗೆ ತಮ್ಮ ಮೇಲೆ ಹೆಚ್ಚಿನ ಕೆಲಸದ ಒತ್ತಡವನ್ನು ಹಾಕುವುದನ್ನು ತಪ್ಪಿಸಲು ಸಲಹೆ ನೀಡಲಾಗಿದೆ, ಇಲ್ಲದಿದ್ದರೆ ನಿಮ್ಮ ಆರೋಗ್ಯದಲ್ಲಿ ಭಾರೀ ಕುಸಿತ ಉಂಟಾಗಬಹುದು.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 24
ಅದೃಷ್ಟದ ಸಮಯ: ಬೆಳಿಗ್ಗೆ 7 ರಿಂದ ರಾತ್ರಿ 9 ರವರೆಗೆ
ವೃಶ್ಚಿಕ ರಾಶಿ
ನೀವು ರಾಜಕೀಯದಲ್ಲಿ ತೊಡಗಿಸಿಕೊಳ್ಳಲು ಯೋಚಿಸುತ್ತಿದ್ದರೆ, ಇಂದು ನೀವು ಪ್ರಭಾವಿ ವ್ಯಕ್ತಿಯಿಂದ ಮಾರ್ಗದರ್ಶನ ಪಡೆಯಬಹುದು. ಮತ್ತೊಂದೆಡೆ, ನೀವು ವಿದೇಶಕ್ಕೆ ಹೋಗಿ ಉದ್ಯೋಗ ಮಾಡಲು ಬಯಸಿದರೆ, ಆದರೆ ನಿಮ್ಮ ದಾರಿಯಲ್ಲಿ ದೊಡ್ಡ ಅಡಚಣೆಯಿದ್ದರೆ, ಇಂದು ನಿಮ್ಮ ಸಮಸ್ಯೆಯನ್ನು ಪರಿಹರಿಸಬಹುದು. ಹಣದ ವಿಷಯದಲ್ಲಿ ಇಂದು ನಿಮಗೆ ಒಳ್ಳೆಯ ದಿನವಾಗಲಿದೆ. ನಿಮಗೆ ಅಗತ್ಯಕ್ಕಿಂತ ಹೆಚ್ಚು ಖರ್ಚು ಮಾಡಬೇಡಿ. ನಿಮ್ಮ ಸಂಗಾತಿಯೊಂದಿಗೆ ಮಾತನಾಡುವಾಗ ಮಾತುಗಳ ಕಡೆಗೆ ಗಮನಹರಿಸಿ. ನಿಮ್ಮ ಜಾರಿದ ನಾಲಿಗೆ ನಿಮ್ಮ ಮನೆಯ ಶಾಂತಿಗೆ ಭಂಗ ತರಬಹುದು.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಸಂಜೆ 5:05 ರಿಂದ 7:25 ರವರೆಗೆ
ಧನು ರಾಶಿ
ನಿಮ್ಮ ಪ್ರಣಯ ಜೀವನದಲ್ಲಿ ಸ್ವಲ್ಪ ಸಮಯದಿಂದ ಏರುಪೇರುಗಳು ಇದ್ದಲ್ಲಿ ಅದನ್ನು ಸರಿಪಡಿಸಲು ಇಂದು ಉತ್ತಮ ದಿನವಾಗಿದೆ.. ನಿಮ್ಮ ನಡುವಿನ ಅಂತರವು ಕಡಿಮೆ ಆಗಿ ನೀವು ಖುಷಿಯಿಂದ ಇರುವಿರಿ. ನೀವು ವಿದ್ಯಾರ್ಥಿಯಾಗಿದ್ದರೆ ಮತ್ತು ಉನ್ನತ ಶಿಕ್ಷಣಕ್ಕಾಗಿ ನಿಮ್ಮ ನೆಚ್ಚಿನ ಕಾಲೇಜಿನಲ್ಲಿ ಪ್ರವೇಶ ಪಡೆಯಲು ಬಯಸಿದರೆ, ಅದಕ್ಕೆ ಸಂಬಂಧಿಸಿದ ಕೆಲವು ಪ್ರಮುಖ ಸುದ್ದಿಗಳನ್ನು ನೀವು ಪಡೆಯುತ್ತೀರಿ. ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಕೆಲಸದ ವಿಷಯದಲ್ಲಿ ಈ, ದಿನವು ಕಾರ್ಯನಿರತವಾಗಿರುತ್ತದೆ. ನಿಮಗಾಗಿ ಸಾಕಷ್ಟು ಸಮಯವನ್ನು ಸಹ ನೀವು ಪಡೆಯದಿರಬಹುದು. ಆರೋಗ್ಯದ ಕಡೆ ಗಮನಹರಿಸಿ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 15
ಅದೃಷ್ಟದ ಸಮಯ: ಬೆಳಿಗ್ಗೆ 6:45 ರಿಂದ 11:45 ರವರೆಗೆ
ಮಕರ ರಾಶಿ
ನೀವು ಯಾವುದೇ ಸಾಮಾಜಿಕ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸಬಹುದು. ಕೆಲವು ನಿರ್ಗತಿಕರಿಗೆ ಸಹಾಯ ಮಾಡುವ ಅವಕಾಶವನ್ನು ಕೂಡ ಪಡೆಯುತ್ತೀರಿ. ಇಂದು ನಿಮ್ಮ ಗೌರವವೂ ಹೆಚ್ಚಾಗುತ್ತದೆ. ಕಚೇರಿಯಲ್ಲಿ ನಿಮ್ಮ ಕಾರ್ಯಕ್ಷಮತೆಯಿಂದ ಬಾಸ್ ತುಂಬಾ ಸಂತೋಷಪಡುತ್ತಾರೆ ಹಾಗೂ ಅವರು ನಿಮ್ಮನ್ನು ತುಂಬಾ ಹೊಗಳುತ್ತಾರೆ. ಆದರೆ ನೀವು ಅಹಂಕಾರ, ನಕಾರಾತ್ಮಕ ಭಾವನೆಗಳಿಂದ ದೂರವಿರಬೇಕು. ಸಾರಿಗೆಯಲ್ಲಿ ಕೆಲಸ ಮಾಡುವವರು ನಿರ್ಲಕ್ಷ್ಯವನ್ನು ಮಾಡದಂತೆ ಸೂಚಿಸಲಾಗಿದೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ. ಆರೋಗ್ಯದ ವಿಷಯದಲ್ಲಿ ಇಂದು ನಿಮಗೆ ಮಿಶ್ರಫಲ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: ಮಧ್ಯಾಹ್ನ 3 ರಿಂದ ಸಂಜೆ 7 ರವರೆಗೆ
ಕುಂಭ ರಾಶಿ
ನೀವು ಇಂದು ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಲಿದ್ದರೆ ನೀವು ಹಿರಿಯರ ಆಶೀರ್ವಾದ ಪಡೆಯಲು ಮರೆಯಬೇಡಿ. ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. ಹಣದ ವಿಷಯದಲ್ಲಿ ಇಂದು ನಿಮಗೆ ಶುಭವಾಗಲಿದೆ. ಹಣವನ್ನು ಇದ್ದಕ್ಕಿದ್ದಂತೆ ಸಂಪಾದಿಸಬಹುದು. ಉದ್ಯೋಗಸ್ಥರಿಗೆ ಇಂದು ಕಷ್ಟದ ದಿನವಾಗಿರುತ್ತದೆ. ನಿಮ್ಮ ಕೆಲಸ ತಾತ್ಕಾಲಿಕವಾಗಿದ್ದರೆ ಇಂದು ನಿಮ್ಮ ಆತಂಕ ಸ್ವಲ್ಪ ಹೆಚ್ಚಾಗಬಹುದು. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ. ನೀವು ಮಕ್ಕಳ ಕಡೆ ಹೆಚ್ಚು ಗಮನ ಹರಿಸಬೇಕು.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಬೆಳಿಗ್ಗೆ 8:10 ರಿಂದ 10:50 ರವರೆಗೆ
ಮೀನ ರಾಶಿ
ನಿಮ್ಮ ಸಂಗಾತಿಯೊಂದಿಗೆ ಮನಸ್ತಾಪವಿರಬಹುದು, ನಿಮ್ಮ ಕೋಪವನ್ನು ನಿಯಂತ್ರಿಸಿ ಹಾಗೂ ನೀವಾಡುವ ಮಾತಿನ ಬಗ್ಗೆ ಜಾಗ್ರತೆವಹಿಸಿ. ಇದಲ್ಲದೆ, ನಿಮ್ಮ ವೈಯಕ್ತಿಕ ವಿಷಯಗಳಲ್ಲಿ ಹೊರಗಿನವರು ಹಸ್ತಕ್ಷೇಪ ಮಾಡಲು ಬಿಡಬೇಡಿ. ಆರ್ಥಿಕ ರಂಗದಲ್ಲಿ ಇಂದು ನಿಮಗೆ ಒಳ್ಳೆಯ ದಿನವಾಗಿರುತ್ತದೆ. ಈ ಸಮಯದಲ್ಲಿ ನೀವು ಉಳಿತಾಯದ ಬಗ್ಗೆ ಹೆಚ್ಚು ಗಮನ ಹರಿಸಬೇಕು. ವ್ಯಾಪಾರಸ್ಥರಿಗೆ ಇಂದು ಉತ್ತಮವಾಗಿದೆ. ನ್ಯಾಯಾಲಯಕ್ಕೆ ಸಂಬಂಧಿಸಿದ ಯಾವುದೇ ವಿಷಯದಲ್ಲಿ ನೀವು ಯಶಸ್ಸನ್ನು ಪಡೆಯಬಹುದು. ಉದ್ಯೋಗಸ್ಥರ ಎಲ್ಲಾ ಕೆಲಸಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳುತ್ತವೆ. ಇಂದು ಆರೋಗ್ಯ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಸಂಜೆ 4:35 ರಿಂದ ರಾತ್ರಿ 8 ರವರೆಗೆ



Click it and Unblock the Notifications












