Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
Horoscope Today 9 June 2023: ಶುಕ್ರವಾರ: ಈ ದಿನ ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಜೂನ್ 9ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ಉತ್ತರಾಯಣ
ಋತು: ವಸಂತ
ಮಾಸ: ಆಷಾಢ
ಪಕ್ಷ: ಕೃಷ್ಣಪಕ್ಷ
ತಿಥಿ: ಷಷ್ಠಿ
ನಕ್ಷತ್ರ: ಧನಿಷ್ಠ 05:09ರ ನಂತರ ಶತಾಭಿಷ
ರಾಹುಕಾಲ: ಬೆಳಗ್ಗೆ 10:42ರಿಂದ ಮಧ್ಯಾಹ್ನ 12:19ರವರೆಗೆ
ಮೇಷ ರಾಶಿ
ಕೆಲಸದ ವಿಷಯದಲ್ಲಿ ಈ ದಿನ ಚೆನ್ನಾಗಿದೆ. ವಿಶೇಷವಾಗಿ ಉದ್ಯೋಗಸ್ಥರಿಗೆ ಈ ದಿನ ಅನುಕೂಲಕರವಾಗಿದೆ. ನಿಮ್ಮ ಕಠಿಣ ಪರಿಶ್ರಮಕ್ಕೆ ನೀವು ಸರಿಯಾದ ಫಲಿತಾಂಶ ಪಡೆಯುತ್ತೀರಿ. ನಿಮ್ಮ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಈ ದಿನ ಬರಬೇಕಾಗಿದ್ದ ಹಣ ಕೈ ಸೇರಲಿದೆ. ದಿನದ ಎರಡನೇ ಭಾಗದಲ್ಲಿ ಕುಟುಂಬದ ಜೊತೆ ಖುಷಿಯಿಂದ ಸಮಯ ಕಳೆಯುತ್ತೀರಿ. ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 14
ಅದೃಷ್ಟದ ಸಮಯ: ಬೆಳಿಗ್ಗೆ 8:30 ರಿಂದ ಸಂಜೆ 6 ರವರೆಗೆ

ವೃಷಭ ರಾಶಿ
ಕಛೇರಿಯಲ್ಲಿ ತುಂಬಾ ಸಮಯದಿಂದ ಯಾವುದಾದರು ಕೆಲಸ ಬಾಕಿಯುಳಿದಿದ್ದರೆ ಇಂದೇ ಪೂರ್ಣಗೊಳಿಸಲು ಪ್ರಯತ್ನಿಸಿ, ಇಲ್ಲದಿದ್ದರೆ ನೀವು ಬಾಸ್ ಕೋಪವನ್ನು ಎದುರಿಸಬೇಕಾಗಬಹುದು. ಉದ್ಯಮಿಗಳ ಆರ್ಥಿಕ ಸಮಸ್ಯೆ ಬಗೆಹರಿಯಲಿದೆ. ಇಂದು ನೀವು ಪ್ರಮುಖ ವ್ಯವಹಾರ ನಿರ್ಧಾರವನ್ನು ತೆಗೆದುಕೊಳ್ಳಬಹುದು. ಕೆಲಸ ಅಂತ ಆರೋಗ್ಯ ನಿರ್ಲಕ್ಷ್ಯ ಮಾಡಬೇಡಿ. ಸಂಬಂಧದಲ್ಲಿ ಸಗಾತಿಯೊಂದಿಗೆ ಉತ್ತಮ ಹೊಂದಾಣಿಕೆ ಇರಲಿದೆ. ನಿಮ್ಮ ನಡುವಿನ ಪ್ರೀತಿ ಮತ್ತಷ್ಟು ಹೆಚ್ಚಾಗುವುದು.
ಅದೃಷ್ಟದ ಬಣ್ಣ: ಗಾಢ ಕೆಂಪು
ಅದೃಷ್ಟದ ಸಂಖ್ಯೆ: 28
ಅದೃಷ್ಟದ ಸಮಯ: ಬೆಳಿಗ್ಗೆ 10 ರಿಂದ ಮಧ್ಯಾಹ್ನ 3:30 ರವರೆಗೆ
ಮಿಥುನ ರಾಶಿ
ಕೆಲವು ದಿನಗಳಿಂದ ನಿಮ್ಮ ಕುಟುಂಬಕ್ಕೆ ಸಮಯ ನೀಡಲು ಸಾಧ್ಯವಾಗದಿದ್ದರೆ ಇಂದು ಸಾಧ್ಯವಾಗಲಿದೆ. ಈ ದಿನ ನಿಮಗೆ ಉತ್ತಮವಾಗಿರಲಿದೆ. ನಿಮ್ಮ ಪ್ರೀತಿಪಾತ್ರರ ಜೊತೆ ಹೆಚ್ಚಿನ ಸಮಯ ಕಳೆಯ ವಿಷಯದಲ್ಲಿ ಈ ದಿನ ಮಿಶ್ರಫಲ. ನಿಮ್ಮ ಕೆಲಸವನ್ನು ಸಂಪೂರ್ಣ ಕಠಿಣ ಪರಿಶ್ರಮ ಮತ್ತು ಪ್ರಾಮಾಣಿಕತೆಯಿಂದ ಮಾಡಿ. ಶೀಘ್ರದಲ್ಲೇ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ನಿಮ್ಮ ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 28
ಅದೃಷ್ಟದ ಸಮಯ: ಮಧ್ಯಾಹ್ನ 12:30 ರಿಂದ ಸಂಜೆ 6:15 ರವರೆಗೆ
ಕರ್ಕ ರಾಶಿ
ಸಣ್ಣ ವ್ಯಾಪಾರಸ್ಥರಿಗೆ ಇಂದು ಉತ್ತಮ ದಿನ. ನಿಮ್ಮ ಕೆಲಸವನ್ನು ಮುಂದುವರಿಸಲು ನೀವು ಯೋಜಿಸುತ್ತಿದ್ದರೆ ಈ ಸಮಯ ಸೂಕ್ತವಾಗಿದೆ. ನೀವು ಮನೆಯಿಂದ ಕೆಲಸ ಮಾಡುತ್ತಿದ್ದರೆ, ನಿಮ್ಮ ಕೆಲಸದ ಮೇಲೆ ಸಂಪೂರ್ಣವಾಗಿ ಗಮನಹರಿಸಿ. ಸ್ವಲ್ಪ ನಿರ್ಲಕ್ಷ್ಯವು ದುಬಾರಿಯಾಗಬಹುದು. ಹಣದ ಪರಿಸ್ಥಿತಿ ಉತ್ತಮವಾಗಿರುತ್ತದೆ. ಆದರೆ ಯಾವುದೇ ದೊಡ್ಡ ಖರ್ಚು ಮಾಡಲು ದಿನವು ಸೂಕ್ತವಲ್ಲ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಆಹ್ಲಾದಕರವಾಗಿರುತ್ತದೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ತಂಗಳು ಆಹಾರ ಸೇವಿಸಬೇಡಿ.
ಅದೃಷ್ಟದ ಬಣ್ಣ: ಗಾಢ ಹಳದಿ
ಅದೃಷ್ಟದ ಸಂಖ್ಯೆ: 8
ಅದೃಷ್ಟದ ಸಮಯ: ಸಂಜೆ 5:15 ರಿಂದ 7:20 ರವರೆಗೆ
ಸಿಂಹ ರಾಶಿ
ಇಂದು ನೀವು ಆಪ್ತ ಸ್ನೇಹಿತ ಅಥವಾ ಸಂಬಂಧಿಕರನ್ನು ಭೇಟಿ ಮಾಡಬಹುದು. ಬಹಳ ಸಮಯದ ನೀವು ತುಂಬಾ ಖುಷಿಯಿಂದ ಸಮಯ ಕಳೆಯಲು ಸಾಧ್ಯವಾಗುವುದು. ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನಗಳಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ಉದ್ಯೋಗ ಅಥವಾ ವ್ಯವಹಾರವಾಗಿರಲಿ ಈ ದಿನ ನಿಮಗೆ ಉತ್ತಮವಾಗಿರಲಿದೆ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ನಿಮ್ಮ ಬಜೆಟ್‌ಗಿಂತ ಹೆಚ್ಚು ಖರ್ಚು ಮಾಡಬೇಡಿ. ಆರೋಗ್ಯದ ದೃಷ್ಟಿಯಿಂದ ಇಂದು ಉತ್ತಮ ದಿನವಾಗಿರುತ್ತದೆ. ಆದರೆ ಆಹಾರದ ಬಗ್ಗೆ ವಿಶೇಷ ಕಾಳಜಿವಹಿಸಲು ಸಲಹೆ ನೀಡಲಾಗಿದೆ.
ಅದೃಷ್ಟದ ಬಣ್ಣ: ಕೇಸರಿ
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಬೆಳಿಗ್ಗೆ 9:20 ರಿಂದ ಮಧ್ಯಾಹ್ನ 3 ರವರೆಗೆ
ಕನ್ಯಾ ರಾಶಿ
ಇದು ಉದ್ಯೋಗ ಅಥವಾ ವ್ಯವಹಾರವಾಗಿರಲಿ ಈ ದಿನ ಅಡೆತಡೆಗಳು ಬರಬಹುದು. ವ್ಯಾಪಾರಸ್ಥರು ಹಣದ ವಿಷಯದಲ್ಲಿ ಯಾವುದೇ ಆತುರವನ್ನು ಮಾಡಬೇಡಿ, ಇಲ್ಲದಿದ್ದರೆ ನೀವು ಮೋಸ ಹೋಗಬಹುದು. ಮತ್ತೊಂದೆಡೆ, ಉದ್ಯೋಗಿಗಳು ಕಚೇರಿಯಲ್ಲಿ ನಡೆಯುತ್ತಿರುವ ರಾಜಕೀಯದ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕು. ಕೆಲವರು ನಿಮ್ಮ ಇಮೇಜ್ ಹಾಳು ಮಾಡಲು ಪ್ರಯತ್ನಿಸಬಹುದು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ. ಸಂಗಾತಿಯ ಆರೋಗ್ಯದಲ್ಲಿ ಹಠಾತ್ ಕುಸಿತ ಉಂಟಾಗಬಹುದು. ನೀವು ಅವರ ಬಗ್ಗೆ ಕಾಳಜಿವಹಿಸಿ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಬೆಳಿಗ್ಗೆ 8 ರಿಂದ ಮಧ್ಯಾಹ್ನ 12:55 ರವರೆಗೆ
ತುಲಾ ರಾಶಿ
ನೀವು ವಿದ್ಯಾರ್ಥಿಯಾಗಿದ್ದರೆ ಮತ್ತು ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರೆ ಮತ್ತಷ್ಟು ಶ್ರಮಹಾಕಲು ಸಲಹೆ ನೀಡಲಾಗಿದೆ. ನಿಮ್ಮ ಶಿಕ್ಷಕರ ಸಹಾಯವನ್ನೂ ನೀವು ತೆಗೆದುಕೊಳ್ಳಬಹುದು. ನಿಮ್ಮ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ನೀವು ಹಣಕ್ಕೆ ಸಂಬಂಧಿಸಿದ ಯಾವುದೇ ಪ್ರಮುಖ ಹಣಕಾಸಿನ ವಹಿವಾಟು ಮಾಡಲು ಹೋಗಬೇಡಿ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರಿಗೆ ಈ ದಿನ ತುಂಬಾನೇ ಮುಖ್ಯವಾಗಿರುತ್ತದೆ. ಕೆಲಸಕ್ಕೆ ಸಂಬಂಧಿಸಿದ ಯಾವುದೇ ದೊಡ್ಡ ಸಮಸ್ಯೆಯನ್ನು ಪರಿಹರಿಸಬಹುದು. ಉದ್ಯೋಗಿಗಳಿಗೆ ಈ ದಿನವು ಸಾಮಾನ್ಯವಾಗಿರುತ್ತದೆ. ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 34
ಅದೃಷ್ಟದ ಸಮಯ: ಬೆಳಿಗ್ಗೆ 10:50 ರಿಂದ ಮಧ್ಯಾಹ್ನ 2:25 ರವರೆಗೆ
ವೃಶ್ಚಿಕ ರಾಶಿ
ವ್ಯಾಪಾರಸ್ಥರಿಗೆ ಈ ದಿನ ಉತ್ತಮವಾಗಿದೆ. ನೀವು ಕೆಲವು ಹೊಸ ಯೋಜನೆಗಳಲ್ಲಿ ಕೆಲಸ ಮಾಡಲು ಪ್ರಾರಂಭಿಸಬಹುದು. ಶೀಘ್ರದಲ್ಲೇ ನಿಮ್ಮ ವ್ಯವಹಾರದಲ್ಲಿ ಧನಾತ್ಮಕ ಬದಲಾವಣೆಗಳನ್ನು ಕೂಡ ಕಾಣುತ್ತೀರಿ. ಉದ್ಯೋಗಸ್ಥರು ಕಚೇರಿಯಲ್ಲಿ ಹೆಚ್ಚಿನ ಗೌರವವನ್ನು ಪಡೆಯಬಹುದು. ನಿಮ್ಮ ಉತ್ತಮ ಕಾರ್ಯಕ್ಷಮತೆಯನ್ನು ಇಂದು ಪ್ರಶಂಸಿಸಲಾಗುತ್ತದೆ. ಹಣದ ಪರಿಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಆದಾಯವನ್ನು ಹೆಚ್ಚಿಸಲು ನೀವು ಪ್ರಯತ್ನಿಸುತ್ತಿದ್ದರೆ ಅದಕ್ಕೆ ಸಂಬಂಧಿಸಿದಂತೆ ಇಂದು ನೀವು ಕೆಲವು ಪ್ರಮುಖ ಮಾಹಿತಿಯನ್ನು ಪಡೆಯಬಹುದು. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸುಧಾರಣೆ ಕಂಡುಬರಲಿದೆ. ಇಂದು ನೀವು ನಿಮ್ಮ ಪ್ರೀತಿಪಾತ್ರರ ಜೊತೆ ಹೆಚ್ಚು ಸಮಯ ಕಳೆಯುತ್ತೀರಿ, ಆರೋಗ್ಯದ ದುರ್ಬಲವಾಗಬಹುದು.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 14
ಅದೃಷ್ಟದ ಸಮಯ: ಮಧ್ಯಾಹ್ನ 2:20 ರಿಂದ ಸಂಜೆ 4:30 ರವರೆಗೆ
ಧನು ರಾಶಿ
ನಿಮಗೆ ಆಸ್ತಮಾದ ಸಮಸ್ಯೆ ಇದ್ದರೆ ಹವಾಮಾನದಲ್ಲಿನ ಬದಲಾವಣೆಯಿಂದಾಗಿ ನಿಮ್ಮ ಸಮಸ್ಯೆ ಹೆಚ್ಚಾಗಬಹುದು. ಅಂತಹ ಪರಿಸ್ಥಿತಿಯಲ್ಲಿ, ನೀವು ಜಾಗರೂಕರಾಗಿರಬೇಕು. ಕಚೇರಿಯಲ್ಲಿ ಉನ್ನತ ಅಧಿಕಾರಿಗಳೊಂದಿಗೆ ಅಭಿಪ್ರಾಯ ವ್ಯತ್ಯಾಸ ಬರಬಹುದು. ನೀವು ಕೋಪ ಮತ್ತು ಆತುರದಿಂದ ಅಂತಹ ಯಾವುದೇ ಕೆಲಸವನ್ನು ಮಾಡದಿರುವುದು ಒಳ್ಳೆಯದು, ಇಲ್ಲದಿದ್ದರೆ ಮತ್ತೆ ವಿಷಾದಿಸಬೇಕಾಗುವುದು. ದೊಡ್ಡ ಲಾಭ ಗಳಿಸಲು ವ್ಯಾಪಾರಿಗಳು ಹೆಚ್ಚು ಶ್ರಮಿಸಬೇಕು. ಹಣದ ವಿಷಯದಲ್ಲಿ ಇಂದು ನಿಮಗೆ ಮಿಶ್ರ ಫಲ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಬೆಳಿಗ್ಗೆ 8 ರಿಂದ 10:15 ರವರೆಗೆ
ಮಕರ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ. ಕಚೇರಿಯಲ್ಲಿ, ನಿಮ್ಮ ಎಲ್ಲಾ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ನಿಮಗೆ ಸಾಧ್ಯವಾಗುತ್ತದೆ. ಉನ್ನತ ಅಧಿಕಾರಿಗಳ ಸಹಕಾರವೂ ದೊರೆಯಲಿದೆ. ವ್ಯಾಪಾರಸ್ಥರಿಗೆ ಆರ್ಥಿಕ ಲಾಭವಾಗಲಿದೆ. ಆದರೆ, ನಿಮ್ಮ ನಿರ್ಧಾರಗಳನ್ನು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳಲು ಸಲಹೆ ನೀಡಲಾಗಿದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಸಾಮಾನ್ಯವಾಗಿರುತ್ತದೆ.ಆರೋಗ್ಯದ ಬಗ್ಗೆ ಹೇಳುವುದಾದರೆ ಶೀತ, ಕೆಮ್ಮು ಈ ಬಗೆಯ ಸಮಸ್ಯೆಗಳಿರಬಹುದು.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 31
ಅದೃಷ್ಟದ ಸಮಯ: ಬೆಳಿಗ್ಗೆ 10:30 ರಿಂದ ಸಂಜೆ 4:50 ರವರೆಗೆ
ಕುಂಭ ರಾಶಿ
ಮಕ್ಕಳ ವಿಷಯದಲ್ಲಿ ಆತಂಕ ಹೆಚ್ಚಾಗಲಿದೆ. ಇಂದು ನೀವು ಅನಗತ್ಯ ಚಿಂತೆಗಳಿಂದ ದೂರವಿರಿ. ನಿಮ್ಮ ಮನಸ್ಸನ್ನು ಶಾಂತವಾಗಿರಿಸಿಕೊಳ್ಳುವುದು ಮತ್ತು ಧನಾತ್ಮಕವಾಗಿರಲು ಪ್ರಯತ್ನಿಸುವುದು ಒಳ್ಳೆಯದು. ಆಫೀಸ್‌ನಲ್ಲಿ ಮಾಡಿದ ತಪ್ಪನ್ನು ಮತ್ತೆ ಮಾಡಲು ಹೋಗಬೇಡಿ. ವ್ಯಾಪಾರಸ್ಥರಿಗೆ ದೀರ್ಘ ಪ್ರಯಾಣವನ್ನು ತಪ್ಪಿಸಲು ಸಲಹೆ ನೀಡಲಾಗಿದೆ. ಆರ್ಥಿಕ ರಂಗದಲ್ಲಿ ಇಂದು ದುಬಾರಿ ದಿನವಾಗಲಿದೆ. ಆದರೂ ಯಾವುದೇ ದೊಡ್ಡ ಸಮಸ್ಯೆ ಇರುವುದಿಲ್ಲ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ, ಯಾವುದೇ ದೀರ್ಘಕಾಲದ ಕಾಯಿಲೆಯು ನಿಮ್ಮನ್ನು ಕಾಡಬಹುದು.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 21
ಅದೃಷ್ಟದ ಸಮಯ: ಬೆಳಿಗ್ಗೆ 8:30 ರಿಂದ ಮಧ್ಯಾಹ್ನ 3 ರವರೆಗೆ
ಮೀನ ರಾಶಿ
ವಿದ್ಯಾರ್ಥಿಗಳು ವಿದೇಶದಲ್ಲಿ ಅಧ್ಯಯನ ಮಾಡಲು ಬಯಸಿದರೆ ನೀವು ಉತ್ತಮ ಅವಕಾಶವನ್ನು ಪಡೆಯಬಹುದು. ಹಣಕಾಸಿನ ಸ್ಥಿತಿ ಚೆನ್ನಾಗಿರಲಿದೆ. ಹಣವನ್ನು ಇದ್ದಕ್ಕಿದ್ದಂತೆ ಸಂಪಾದಿಸಬಹುದು. ಕೆಲಸದ ವಿಷಯದಲ್ಲಿ ಈ ದಿನ ಅಷ್ಟೊಂದು ಅನುಕೂಲಕರವಲ್ಲ. ವ್ಯಾಪಾರಸ್ಥರಿಗೆ ಆರ್ಥಿಕ ನಷ್ಟ ಉಂಟಾಗಬಹುದು. ಇದೆಲ್ಲವೂ ನಿಮ್ಮ ತಪ್ಪು ನಿರ್ಧಾರಗಳ ಪರಿಣಾಮದಿಂದಾಗುವುದು. ಮಾನಸಿಕವಾಗಿ ಇಂದು ಅಷ್ಟು ಚೆನ್ನಾಗಿರುವುದಿಲ್ಲ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: ಬೆಳಿಗ್ಗೆ 10 ರಿಂದ ಮಧ್ಯಾಹ್ನ 1:30 ರವರೆಗೆ



Click it and Unblock the Notifications
