Latest Updates
-
ಬೇಸಿಗೆಯಲ್ಲಿ ಈ ಗಂಜಿ ಕುಡಿಯಿರಿ.. ಕೊಬ್ಬು ಕಡಿಮೆ, ದೇಹಕ್ಕೂ ತಂಪು! ಈ ಗಂಜಿಯ ಆರೋಗ್ಯ ರಹಸ್ಯ ಇಲ್ಲಿದೆ -
30 ವರ್ಷಗಳ ಬಳಿಕ ಸೂರ್ಯ-ಶನಿ ಸಂಯೋಗ! ಯಾರಿಗೆ ಶುಭ? ಯಾರಿಗೆ ಸಮಸ್ಯೆ? 12 ರಾಶಿಗಳ ಜಾತಕ ತಿಳಿಯಿರಿ -
ಈ 5 ವಿಷಯಗಳಲ್ಲಿ ಮಿತಿ ಮೀರಿದ್ರೆ ಜೀವನ ಸರ್ವನಾಶ! ಅಹಂಕಾರ ಬಿಡಿ.. ಇಂದೇ ಇವುಗಳಿಂದ ದೂರವಿರಿ -
ಪಕ್ಕಾ ಹೈದರಾಬಾದಿ ರುಚಿ.. ಅತಿಥಿಗಳು ಬಂದ್ರೆ ಈ ಚಿಕನ್ ಯಖನಿ ಪುಲಾವ್ ಮಾಡಿ! ಸಿಂಪಲ್ & ಸೂಪರ್ ರುಚಿ -
2026ರ ಸೂರ್ಯ ಗೋಚಾರ: ಇವರಿಗೆ ಸಿಗಲಿದೆ ಸರ್ಕಾರಿ ಉದ್ಯೋಗ! ಯಾರಿಗೆ ಮಾನಸಿಕ ಒತ್ತಡ? 12 ರಾಶಿಯವರಿಗೆ ರಾಶಿಫಲ ಇಲ್ಲಿದೆ -
ಹೋಟೆಲ್ ಶೈಲಿಯ ಆಲೂ ಮಸಾಲಾ ಪೂರಿ! ಈ ರೀತಿ ಮನೆಯಲ್ಲೇ ಮಾಡಿ, ಪರ್ಫೆಕ್ಟ್ ಆಗಿ ಉಬ್ಬಿ ಬರುತ್ತೆ -
ಇವರ ಜೀವನದಲ್ಲಿ ಹೊಸ ಕಿಡಿ ಹೊತ್ತಿಕೊಳ್ಳಲಿದೆ! ಹಠಮಾರಿ ಸ್ವಭಾವವನ್ನು ಬಿಡಿ -
March 12 Horoscope: ಹಣಕಾಸಿನ ಸವಾಲುಗಳು ದೊಡ್ಡದಾಗುವ ಸಂಭವ -
ಕೋಮಾದಲ್ಲಿದ್ದ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂ ಒಪ್ಪಿಗೆ: ಈ ಕೇಸ್ ಬಗ್ಗೆ ನಿಮಗೆ ಗೊತ್ತಾ? -
ಪಂಜಾಬಿ ಸ್ಟೈಲ್ ಮಲೈ ಲಸ್ಸಿ! ಈ ರೀತಿ ಮಾಡಿ ಗಟ್ಟಿ ಕೆನೆಯ ಢಾಬಾ ಸ್ಟೈಲ್ ಲಸ್ಸಿ.. ಬಿಸಿಲ ತಾಪಕ್ಕೆ ಬೆಸ್ಟ್ ಕೂಲ್ ಡ್ರಿಂಕ್
Horoscope Today 18 March 2023: ಶನಿವಾರದ: ಈ ದಿನ ದ್ವಾದಶ ರಾಶಿಗಳಲ್ಲಿಈ 4 ರಾಶಿಗಳಿಗೆ ಒಳ್ಳೆಯದಿದೆ
ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಮಾರ್ಚ್ 18ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ದಕ್ಷಿಣಾಯಣ
ಋತು: ಹೇಮಂತ
ಮಾಸ: ಚೈತ್ರ
ಪಕ್ಷ: ಕೃಷ್ಣಪಕ್ಷ
ತಿಥಿ: ಏಕಾದಶಿ
ನಕ್ಷತ್ರ: ಶ್ರವಣ
ರಾಹುಕಾಲ: ಬೆಳಗ್ಗೆ 09:27ರಿಂದ 10:57ರವರೆಗೆ

ಮೇಷ ರಾಶಿ
ತುಂಬಾ ಸಮಯದಿಂದ ಕಾಡುತ್ತಿರುವ ಚಿಂತೆ ದೂರಾಗಲಿದೆ.ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ. ಈ ದಿನ ಅತಿಯಾಗಿ ಖರ್ಚು ಮಾಡಲು ಹೋಗಬೇಡಿ. ಜವಾಬ್ದಾರಿಗಳ ಹೊರೆ ಹೆಚ್ಚು, ಆದರೆ ನೀವು ನಿಮ್ಮ ಎಲ್ಲಾ ಕೆಲಸಗಳನ್ನು ಪ್ರಾಮಾಣಿಕತೆ ಮತ್ತು ಕಠಿಣ ಪರಿಶ್ರಮದಿಂದ ಪೂರ್ಣಗೊಳಿಸುತ್ತೀರಿ. ಆರೋಗ್ಯ ದುರ್ಬಲವಾಗಬಹುದು.
ಅದೃಷ್ಟದ ಬಣ್ಣ: ಗಾಢ ಕೆಂಪು
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ಸಂಜೆ 7 ರವರೆಗೆ

ವೃಷಭ ರಾಶಿ
ಯಶಸ್ಸು ನಿಮ್ಮದಾಗಲು ಮತ್ತಷ್ಟು ಶ್ರಮಪಟ್ಟು ಕೆಲಸ ಮಾಡಬೇಕಾಗಿದೆ. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಾಣುವಿರಿ. ಆದರೆ ಭವಿಷ್ಯದ ಹಣಕಾಸಿನ ಯೋಜನೆಯನ್ನು ಅಂದರೆ ಹಣದ ಹೂಡಿಕೆಯನ್ನು ಅವಸರದಿಂದ ತೆಗೆದುಕೊಳ್ಖಬೇಡಿ. ಈ ದಿನ ಮಾನಸಿಕ ಒತ್ತಡ ಅಧಿಕವಿರಲಿದೆ, ಆರೋಗ್ಯದಲ್ಲಿ ಸಣ್ಣ-ಪುಟ್ಟ ಸಮಸ್ಯೆಗಳಿರಲಿದೆ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 15
ಅದೃಷ್ಟದ ಸಮಯ: ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ

ಮಿಥುನ ರಾಶಿ
ಕೆಲಸದ ವಿಷಯದಲ್ಲಿ ನೀವು ಜಾಗರೂಕರಾಗಿರಲು ಸಲಹೆ ನೀಡಲಾಗಿದೆ. ಯಾವುದೇ ಕಾನೂನುಬಾಹಿರ ಚಟುವಟಿಕೆ ಮಾಡದಿರಿ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಈ ದಿನ ಬೆಲೆ ಬಾಳುವ ವಸ್ತುಗಳನ್ನು ಖರೀದಿಸಬಹುದು. ಈ ದಿನ ಖುಷಿಯಿಂದ ಇರಲಿದೆ, ಆರೋಗ್ಯ ಕೂಡ ಇಂದು ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಸಂಜೆ 6:15 ರಿಂದ ರಾತ್ರಿ 9 ರವರೆಗೆ

ಕರ್ಕ ರಾಶಿ
ಪ್ರೇಮಿಗಳಿಗೆ ಈ ದಿನ ಅನುಕೂಲಕರವಾಗಿದೆ. ಇಂದು ಹಣಕಾಸಿನ ವಿಷಯದಲ್ಲಿ ಸಮಸ್ಯೆಗ ಇರಬಹುದು. ನಿಮ್ಮ ಕೆಲಸದ ಕಡೆಗೆ ಗಮನ ಹರಿಸಿ. ವ್ಯಾಪಾರಸ್ಥರು ಇಂದು ಒಳ್ಳೆಯ ಲಾಭ ಪಡೆಯಬಹುದು. ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿರ್ಲಕ್ಷ್ಯ ಮಾಡಬೇಡಿ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಬೆಳಗ್ಗೆ 6:55 ರಿಂದ ಸಂಜೆ 4 ರವರೆಗೆ

ಸಿಂಹ ರಾಶಿ
ಸಿಂಹ ರಾಶಿಯವರ ವಿದ್ಯಾರ್ಥಿಗಳು ಮತ್ತಷ್ಟು ಶ್ರಮಪಟ್ಟು ಕಲಿಯಬೇಕಾಗಿದೆ. ಕಚೇರಿಯಲ್ಲಿ ನಿಮ್ಮ ವರ್ತನೆಯತ್ತ ಗಮನಹರಿಸಿ. ವೈಯಕ್ತಿಕ ಜೀವನದ ಬಗ್ಗೆ ನೋಡುವುದಾದರೆ ಈ ದಿನ ಕುಟುಂಬದಲ್ಲಿ ಚಿಕ್ಕ ಪುಟ್ಟ ಸಮಸ್ಯೆಗಳು ಇರಬಹುದು, ನೀವು ಸಮಧಾನದಿಂದನ ಎಲ್ಲವನ್ನು ನಿಭಾಯಿಸಲು ಪ್ರಯತ್ನಿಸಿ. ನಿಮಗೆ ಮೈಗ್ರೇನ್ ಸಮಸ್ಯೆ ಇದ್ದರೆ ಇಂದು ಆ ಸಮಸ್ಯೆ ಹೆಚ್ಚಾಗಬಹುದು.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 16
ಅದೃಷ್ಟದ ಸಮಯ: ಬೆಳಿಗ್ಗೆ 4:05 ರಿಂದ ಮಧ್ಯಾಹ್ನ 3:00 ರವರೆಗೆ

ಕನ್ಯಾ ರಾಶಿ
ಈ ದಿನ ಕೆಲಸದ ಒತ್ತಡ ಕಡಿಮೆಯಿರಲಿದೆ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಆಸ್ತಿಗೆ ಸಂಬಂಧಿಸಿದ ಯಾವುದೇ ವಿಷಯವು ನ್ಯಾಯಾಲಯದಲ್ಲಿ ನಡೆಯುತ್ತಿದ್ದರೆ ವಕೀಲರಿಂದ ಸೂಕ್ತ ಸಲಹೆ ಪಡೆಯಿರಿ. ಇಂದು ನೀವು ಉತ್ತಮ ಆರೋಗ್ಯವನ್ನು ಹೊಂದಿರುತ್ತೀರಿ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಸಂಜೆ 4:15 ರಿಂದ ರಾತ್ರಿ 9:05 ರವರೆಗೆ

ತುಲಾ ರಾಶಿ
ಇಂದು ಖರ್ಚು ಹೆಚ್ಚಿರಲಿದೆ. ನಿಮಗೆ ಸಾಲ ಮರು ಪಾವತಿ ಹೆಚ್ಚಲು ಒತ್ತಡ ಹೆಚ್ಚಾಗಲಿದೆ. ಕೆಲಸ-ಸಂಬಂಧಿತ ಪ್ರಯತ್ನಗಳಲ್ಲಿ ಯಶಸ್ಸು ಇರುತ್ತದೆ ಚಿಲ್ಲರೆ ವ್ಯಾಪಾರಿಗಳು ಉತ್ತಮ ಆರ್ಥಿಕ ಲಾಭವನ್ನು ಪಡೆಯಬಹುದು. ಮಕ್ಕಳ ಕಡೆಯಿಂದ ಸಂತೋಷ ಇರುತ್ತದೆ. ಆರೋಗ್ಯಕರ ಜೀವನಶೈಲಿಗಳತ್ತ ಗಮನ ನೀಡಿ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 30
ಅದೃಷ್ಟದ ಸಮಯ: ಬೆಳಿಗ್ಗೆ 6.20 ರಿಂದ 11.20 ರವರೆಗೆ

ವೃಶ್ಚಿಕ ರಾಶಿ
ಕೆಲಸದ ಹೊರೆ ಹೆಚ್ಚು ಹೆಚ್ಚಿರಲಿದೆ. ಆದರೂ ಕೆಲಸವನ್ನು ಪೂರ್ಣಗೊಳಿಸಲು ಪ್ರಯತ್ನಿಸಿ . ಹಣಕಾಸಿನ ಸ್ಥಿತಿ ಉತ್ತಮವಾಗಿರಲಿದೆ. ಇಂದು ನೀವು ಆರಾಮದಾಯಕವಾದ ಯಾವುದೇ ಬೆಲೆಬಾಳುವ ವಸ್ತುವನ್ನು ಖರೀದಿಸಬಹುದು. ಇಂದು ಸಂಗಾತಿ ಜೊತೆಗೆ ಭಿನ್ನಾಭಿಪ್ರಾಯ ಮೂಡಬಹುದು. ಇಂದು ಮಾನಸಿಕ ಒತ್ತಡ ಹೆಚ್ಚಾಗಲಿದೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 14
ಅದೃಷ್ಟದ ಸಮಯ: ಸಂಜೆ 5:10 ರಿಂದ ರಾತ್ರಿ 8:50 ರವರೆಗೆ

ಧನು ರಾಶ
ಇಂದು ಆಯಾಸ ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಸವಾಲುಗಳು ಹೆಚ್ಚಾಗಲಿದೆ. ಹಣದ ವಿಷಯದಲ್ಲಿ ಈ ದಿನ ಮಿಶ್ರಫಲ. ಇಂದು ಕುಟುಂಬದವರ ಜೊತೆಗೆ ಚೆನ್ನಾಗಿ ಸಮಯ ಕಳೆಯುವಿರಿ. ಪ್ರತಿದಿನ ಬೆಳಗ್ಗೆ ವಾಕ್ ನೋಡಿ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 26
ಅದೃಷ್ಟದ ಸಮಯ: ಬೆಳಗ್ಗೆ 8:55 ರಿಂದ ಮಧ್ಯಾಹ್ನ 12

ಮಕರ ರಾಶಿ
ಈ ದಿನ ನಿಮ್ಮ ಸಂಬಂಧ ಚೆನ್ನಾಗಿರಲಿದೆ. ನಿಮ್ಮ ವ್ಯವಹಾರಗಳು ಯಾವುದೇ ಅಡೆತಡೆಗಳಿಲ್ಲದೆ ಪೂರ್ಣಗೊಳ್ಳುತ್ತವೆ. ನೀವು ಇತ್ತೀಚೆಗೆ ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಿದ್ದರೆ ಇಂದು ನಿರೀಕ್ಷಿತ ಫಲಿತಾಂಶವನ್ನು ಪಡೆಯಬಹುದು. ಸಣ್ಣ ವ್ಯಾಪಾರಿಗಳಿಗೆ ಉತ್ತಮ ಆರ್ಥಿಕ ಲಾಭ ದೊರೆಯಲಿದೆ. ಇಂದು ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಇಂದು ಖರ್ಚು ಕಡಿಮೆ ಇರಲಿದೆ. ನಿಮ್ಮ ಆರೋಗ್ಯ ಸರಿಯಿಲ್ಲದಿದ್ದರೆ ಈ ದಿನ ಸುಧಾರಣೆ ಕಾಣುವಿರಿ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 22
ಅದೃಷ್ಟದ ಸಮಯ: ಸಂಜೆ 4 ರಿಂದ ರಾತ್ರಿ 8:55 ರವರೆಗೆ

ಕುಂಭ ರಾಶಿ
ಇಂದು ಉದ್ಯೋಗಸ್ಥರು ನಿಮ್ಮ ಪರಿಶ್ರಮಕ್ಕೆ ಉತ್ತಮ ಫಲಿತಾಂಶಗಳನ್ನು ಪಡೆಯುವಿರಿ. ಈ ಅವಧಿಯಲ್ಲಿ ನಿಮ್ಮ ಸಂಬಳ ಹೆಚ್ಚಾಗಲಿದೆ. ಇದರೊಂದಿಗೆ ನಿಮ್ಮ ಸಂಬಳವೂ ಹೆಚ್ಚಾಗುತ್ತದೆ. ವ್ಯಾಪಾರಸ್ಥರಿಗೆ ಈ ದಿನ ಲಾಭದಾಯಕವಾಗಿರುತ್ತದೆ. ಹಣದ ವಿಷಯದಲ್ಲಿ ದಿನವು ಸಾಮಾನ್ಯವಾಗಿರುತ್ತದೆ. ನಿಮ್ಮ ಆರೋಗ್ಯ ದುರ್ಬಲವಾಗಿರುತ್ತದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 19
ಅದೃಷ್ಟದ ಸಮಯ: ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ

ಮೀನ ರಾಶಿ
ನೀವು ಉದ್ಯಮಿಯಾಗಿದ್ದರೆ ಇಂದು ನೀವು ಯಾವುದೇ ಹಣಕಾಸಿನ ವ್ಯವಹಾರವನ್ನು ಬಹಳ ಬುದ್ಧಿವಂತಿಕೆಯಿಂದ ಮಾಡಬೇಕು. ಉದ್ಯೋಗಿಗಳಿಗೆ ಈ ದಿನವು ಸಾಮಾನ್ಯವಾಗಿರುತ್ತದೆ. ಹಣಕಾಸಿನ ಸ್ಥಿತಿ ಸಾಮಾನ್ಯವಾಗಿರಲಿದೆ. ಮನೆಯ ಪರಿಸ್ಥಿತಿ ಚೆನ್ನಾಗಿರಲಿದೆ. ಹೊರಗಡೆಯ ಆಹಾರ ಸೇವಿಸಬೇಡಿ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 8
ಅದೃಷ್ಟದ ಸಮಯ: ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ



Click it and Unblock the Notifications











