Latest Updates
-
March 14 Horoscope: ಪ್ರಯಾಣಗಳ ಮಾಡುವ ದಿನವಾಗಲಿದೆ! -
ಸಿಲಿಂಡರ್ 3 ತಿಂಗಳು ಬರಬೇಕೆ? ಇನ್ಮುಂದೆ ಗ್ಯಾಸ್ ಚಿಂತೆ ಬೇಡ.. LPG ಉಳಿಸಲು ಇಲ್ಲಿದೆ 5 ಸ್ಮಾರ್ಟ್ ಟಿಪ್ಸ್ -
ಅಕ್ಕಿ ಬೇಡ, ಉದ್ದಿನಬೇಳೆ ಬೇಡ.. 15 ನಿಮಿಷದ ಹೆಸರು ಬೇಳೆ-ತರಕಾರಿ ಇಡ್ಲಿ! ಉಳಿದ ಇಡ್ಲಿ ಫ್ರೆಶ್ ಆಗಿಡೋದು ಹೇಗೆ? -
ಗ್ಯಾಸ್ ಇಲ್ವಾ? ಚಿಂತೆ ಬೇಡ.. ಒಲೆ ಹಚ್ಚದೇ ಮಾಡುವ 5 ಆರೋಗ್ಯಕರ ಊಟಗಳಿವು! -
ಮಿಕ್ಸಿಯಲ್ಲೇ ಮಾಡಿ ಕಬ್ಬಿನ ಹಾಲು! ಕಬ್ಬು ಇಲ್ಲದೆಯೇ ಶುದ್ಧವಾದ ಹಾಲು ಮಾಡೋದು ಹೇಗೆ? ರಸ್ತೆ ಬದಿಗಿಂತ ರುಚಿ -
ಮಘಾ ನಕ್ಷತ್ರಕ್ಕೆ ಕೇತು.. ಈ ಎಲ್ಲಾ ರಾಶಿಯವರ ಜೀವನದಲ್ಲಿ ಭಾರಿ ಬದಲಾವಣೆ! ಯಾರಿಗೆ ಶುಭ? ಯಾರಿಗೆ ಸಮಸ್ಯೆ? -
10 ನಿಮಿಷಗಳ ಅಪ್ಪೆ.. ಹೆಸರುಕಾಳು ಮತ್ತು ಬಟಾಣಿ ಬಳಸಿ ಮಾಡುವ ರೆಸಿಪಿ! ಮೃದುವಾಗಿ ಮಾಡೋದು ಹೇಗೆ ಗೊತ್ತಾ? -
ವಿವಾಹಿತ ದಂಪತಿಗಳಿಗೂ ಈ ದಿನ ಸಂತೋಷದಾಯಕ! ಸಂಗಾತಿ ಮೇಲೆ ಡೌಟ್ ಬೇಡ -
March 13 Horoscope: ಶುಭ ಕಾರ್ಯ ಸಂಬಂಧಿತ ಚರ್ಚೆಗಳಿವೆ -
ಬೇಸಿಗೆಯಲ್ಲಿ ಈ ಗಂಜಿ ಕುಡಿಯಿರಿ.. ಕೊಬ್ಬು ಕಡಿಮೆ, ದೇಹಕ್ಕೂ ತಂಪು! ಈ ಗಂಜಿಯ ಆರೋಗ್ಯ ರಹಸ್ಯ ಇಲ್ಲಿದೆ
Horoscope Today 19 March 2023: ದ್ವಾದಶ ರಾಶಿಗಳ ರಾಶಿಫಲ ಹೇಗಿದೆ ನೋಡೋಣ
ಶುಭೋಧಯ.. ಗ್ರಹಗಳ ಶುಭ ಸ್ಥಾನವು ಇಂದು ಯಾವ ರಾಶಿಚಕ್ರ ಚಿಹ್ನೆಗಳಿಗೆ ಪ್ರಯೋಜನವನ್ನು ನೀಡಲಿದೆ. ಯಾರಿಗೆ ಇಂದಿನ ದಿನ ಶುಭ? ಯಾರಿಗೆ ಅಶುಭ ಅನ್ನೋದನ್ನು ಇವತ್ತಿನ ದೈನಂದಿನ ಜಾತದಿಂದ ತಿಳಿಯೋಣ :

ಸಂವತ್ಸರ: ಶುಭಕೃತ್
ಆಯನ: ದಕ್ಷಿಣಾಯನ
ಋತು: ವಸಂತ
ಮಾಸ: ಚೈತ್ರ
ಪಕ್ಷ: ಕೃಷ್ಣಪಕ್ಷ
ತಿಥಿ: ದ್ವಾದಶಿ
ನಕ್ಷತ್ರ: ಧನಿಷ್ಠ
ರಾಹುಕಾಲ: ಸಂಜೆ 5:11 ರಿಂದ ಸಂಜೆ 06:41ರವರೆಗೆ

ಮೇಷ ರಾಶಿ
ಹಠಾತ್ ಕೆಲಸದ ಹೊರೆಯಿಂದಾಗಿ ಕೆಲವೊಂದು ಸಮಸ್ಯೆಗಳನ್ನು ಎದುರಿಸುತ್ತೀರಿ. ನಿಮ್ಮಿಂದ ದೊಡ್ಡ ತಪ್ಪುಗಳಾಗುವ ಸಾಧ್ಯತೆ ಇದ್ದು, ಹುಷಾರಾಗಿರಿ. ಇನ್ನೂ ಉದ್ಯಮಿಗಳು ಇಂದು ಮಿಶ್ರ ಫಲಿತಾಂಶಗಳನ್ನು ಪಡೆಯುತ್ತಾರೆ. ಹೀಗಾಗಿ ವ್ಯಾಪಾರ ಯೋಜನೆಯಲ್ಲಿ ಕೆಲ ಬದಲಾವಣೆಗಳನ್ನು ಮಾಡಿಕೊಳ್ಳಿ. ಇನ್ನೂ ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಮನೆಯಲ್ಲಿ ಸಂತೋಷ ಮತ್ತು ಶಾಂತಿ ನೆಲೆಸಿರುತ್ತದೆ. ಹಿರಿಯರ ಆಶೀರ್ವಾದ ಸಿಗಲಿದೆ. ಜೊತೆಗೆ ಆರೋಗ್ಯದಲ್ಲಿ ಕ್ಷೀಣಿಸುವ ಸಾಧ್ಯತೆ ಕೂಡ ದಟ್ಟವಾಗಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ : ಬೆಳಿಗ್ಗೆ 6:30 ರಿಂದ 10:45 ರವರೆಗೆ

ವೃಷಭ ರಾಶಿ
ಸರಕಾರಿ ಕೆಲಸದಲ್ಲಿದ್ದವರಿಗೆ ಇದ್ದಕ್ಕಿದ್ದಂತೆ ನಿಮ್ಮನ್ನು ವರ್ಗಾವಣೆ ಮಾಡಬಹುದು. ಇನ್ನೂ ಖಾಸಗಿ ಉದ್ಯೋಗಗಳನ್ನು ಮಾಡುವವರಿಗೆ ಅಭಿವೃದ್ಧಿಯನ್ನು ನಿರೀಕ್ಷಿಸಬಹುದು. ಸಣ್ಣ ವ್ಯಾಪಾರಿಗಳೇ ಅಪ್ಪಿ-ಅಪ್ಪಿಯೂ ಸರ್ಕಾರದ ನಿಯಮಗಳನ್ನು ಉಲ್ಲಂಘಿಸಬೇಡಿ ತೊಂದರೆ ಎದುರಾಗಬಹುದು. ಇನ್ನೂ ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಸಂಗಾತಿಯ ಮನಸ್ಥಿತಿ ತುಂಬಾ ಕೆಟ್ಟದಾಗಿರೋದ್ರಿಂದ ಅಂತಹ ಪರಿಸ್ಥಿತಿಯಲ್ಲಿ, ನೀವು ಯಾವುದೇ ವಿವಾದಾತ್ಮಕ ವಿಷಯವನ್ನು ಚರ್ಚಿಸಲು ಹೋಗಬೇಡಿ. ಇದರಿಂದ ಮನೆಯಲ್ಲಿ ಅಶಾಂತಿ ನೆಲೆಸಬಹುದು. ಆರೋಗ್ಯದ ದೃಷ್ಟಿಯಿಂದ ಈ ದಿನವು ನಿಮಗೆ ಅನುಕೂಲಕರವಾಗಿರುತ್ತದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 9 ರವರೆಗೆ

ಮಿಥುನ
ಕೌಟುಂಬಿಕ ಜೀವನದಲ್ಲಿ ಒತ್ತಡ ಹೆಚ್ಚಾಗಬಹುದು. ಮನೆಯ ಸದಸ್ಯರೊಂದಿಗೆ ಜಗಳವಾಡುವ ಪ್ರಸಂಗ ಎದುರಾಗಬಹುದು. ಹೀಗಾಗಿ ಕೋಪ ನಿಯಂತ್ರಣದಲ್ಲಿರಲಿ. ಇಂದು ಉದ್ಯಮಿಗಳಿಗೆ ಬಹಳ ಮುಖ್ಯ ಮತ್ತು ಲಾಭದಾಯಕ ದಿನವಾಗಿದೆ. ನೀವು ಹಿಂದೆ ಮಾಡಿದ ಹೂಡಿಕೆಯ ದುಪ್ಪಟ್ಟು ಲಾಭವನ್ನು ಪಡೆಯಬಹುದು. ಮತ್ತೊಂದೆಡೆ, ಉದ್ಯೋಗಿಗಳಿಗೂ ಇಂದು ಶುಭ ದಿನ. ನಿಮ್ಮ ಕೆಲಸವನ್ನು ನೀವು ಉತ್ಸಾಹದಿಂದ ಪೂರ್ಣಗೊಳಿಸುತ್ತೀರಿ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಲಾಭದಾಯಕ ದಿನವಾಗಿದೆ. ನಿಮ್ಮ ಆರೋಗ್ಯದ ಬಗ್ಗೆ ಸ್ವಲ್ಪ ಗಮನಕೊಡಿ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 26
ಅದೃಷ್ಟದ ಸಮಯ: ಮಧ್ಯಾಹ್ನ 12 ರಿಂದ ಸಂಜೆ 6 ರವರೆಗೆ

ಕರ್ಕಾಟಕ ರಾಶಿ
ನೀವು ಇಂದು ಯಾವುದೇ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಬಹುದು. ಯಾಕಂದ್ರೆ ನಿಮ್ಮ ಕುಟುಂಬ ಸದಸ್ಯರ ಸಂಪೂರ್ಣ ಬೆಂಬಲ ನಿಮಗಿರುತ್ತದೆ. ಸಂಗಾತಿಯೊಂದಿಗಿನ ನಿಮ್ಮ ಸಂಬಂಧವು ಗಟ್ಟಿಯಾಗುತ್ತದೆ. ಇಂದು ನೀವು ನಿಮ್ಮ ಸಂಗಾತಿಯ ಜೊತೆಗೆ ಕ್ಯಾಂಡಲ್ ಲೈಟ್ ಡಿನ್ನರ್‌ಗೆ ಹೋಗುವ ಸಾಧ್ಯತೆಯಿದೆ. ಹಣಕಾಸಿನ ಸ್ಥಿತಿಯು ಉತ್ತಮವಾಗಿರಲಿದೆ. ದನಾತ್ಮಕವಾಗಿರಿ ಮತ್ತು ಕಷ್ಟಪಟ್ಟು ಕೆಲಸ ಮಾಡಿ. ನಿಮ್ಮ ಶ್ರಮಕ್ಕೆ ತಕ್ಕ ಫಲ ಖಂಡಿತಾ ಸಿಗುತ್ತದೆ. ನಿಮಗೆ ರಕ್ತದೊತ್ತಡದ ಸಮಸ್ಯೆ ಇದ್ದರೆ ಜಾಗರೂಕರಾಗಿರಿ.
ಅದೃಷ್ಟದ ಬಣ್ಣ: ತಿಳಿ ಕೆಂಪು
ಅದೃಷ್ಟದ ಸಂಖ್ಯೆ: 45
ಅದೃಷ್ಟದ ಸಮಯ: ಬೆಳಿಗ್ಗೆ 7 ರಿಂದ ಮಧ್ಯಾಹ್ನ 3 ರವರೆಗೆ

ಸಿಂಹ
ಕೆಲಸದ ದೃಷ್ಟಿಯಿಂದ ಇಂದು ನಿಮಗೆ ಶುಭ ದಿನ. ವ್ಯಾಪಾರದಲ್ಲಿ ಲಾಭದ ಸಾಧ್ಯತೆಗಳಿವೆ. ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತಿದೆ. ಪ್ರಮುಖ ಯೋಜನೆಯಲ್ಲಿ ಕೆಲಸ ಮಾಡುವ ಅವಕಾಶ ಸಿಗುತ್ತದೆ. ಬಡ್ತಿ ಪಡೆಯಲು ಇದೊಂದು ಸುವರ್ಣಾವಕಾಶವಾಗಬಹುದು. ಹೀಗಾಗಿ ಯಾವುದೇ ರೀತಿಯ ನಿರ್ಲಕ್ಷ್ಯ ಬೇಡ. ಹಣದ ವಿಷಯದಲ್ಲಿ ಈ ದಿನ ಉತ್ತಮವಾಗಿದೆ. ಮನೆಯ ವಾತಾವರಣ ಚೆನ್ನಾಗಿರುತ್ತದೆ. ಇಂದು ನೀವು ಪೂಜೆ-ಪಾರಾಯಣ, ಭಜನೆ-ಕೀರ್ತನೆ ಇತ್ಯಾದಿಗಳನ್ನು ಆಯೋಜಿಸಬಹುದು. ಈ ದಿನ ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 14
ಅದೃಷ್ಟದ ಸಮಯ: ಸಂಜೆ 5:25 ರಿಂದ ರಾತ್ರಿ 9 ರವರೆಗೆ

ಕನ್ಯಾರಾಶಿ
ವಿದ್ಯಾರ್ಥಿಗಳಿಗೆ ನಿಮ್ಮ ಕಠಿಣ ಪರಿಶ್ರಮಕ್ಕೆ ಅನುಗುಣವಾಗಿ ಫಲಿತಾಂಶಗಳನ್ನು ಪಡೆಯುತ್ತೀರಿ. ನೀವು ಇತ್ತೀಚಿನ ದಿನಗಳಲ್ಲಿ ನೀಡಿದ ಪರೀಕ್ಷೇಯಲ್ಲಿ ಯಶಸ್ಸು ಪಡೆಯುತ್ತೀರಿ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ. ಯೋಚಿಸದೆ ಯಾವುದೇ ದೊಡ್ಡ ಖರೀದಿ ಮಾಡಲು ಹೊರಡುವುದು ಸರಿಯಲ್ಲ. ಕಚೇರಿಯಲ್ಲಿ ಬಾಕಿ ಉಳಿದಿರುವ ಕೆಲಸವನ್ನು ಪೂರ್ಣಗೊಳಿಸಲು ನೀವು ತುಂಬಾ ಕಷ್ಟಪಡಬೇಕಾಗಬಹುದು. ವ್ಯಾಪಾರಸ್ಥರು ಉತ್ತಮ ಲಾಭ ಗಳಿಸುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದಲ್ಲಿ ಸುಧಾರಣೆ ಕಂಡುಬರುತ್ತದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 16
ಅದೃಷ್ಟದ ಸಮಯ: ಬೆಳಿಗ್ಗೆ 4 ರಿಂದ ಮಧ್ಯಾಹ್ನ 2 ರವರೆಗೆ

ತುಲಾ
ವೈವಾಹಿಕ ಜೀವನ ಇಂದು ನಿಮಗೆ ತುಂಬಾ ವಿಶೇಷವಾಗಿರುತ್ತದೆ. ನಿಮ್ಮ ಸಂಗಾತಿಯೊಂದಿಗಿನ ನಿಮ್ಮ ಸಂಬಂಧವು ಇನ್ನಷ್ಟು ಗಟ್ಟಿಯಾಗುತ್ತದೆ. ಆರ್ಥಿಕ ಸ್ಥಿತಿ ಅಭಿವೃದ್ಧಿಯಾಗುತ್ತದೆ. ನಿಮ್ಮ ಹಣಕಾಸಿನ ಸಮಸ್ಯೆಯನ್ನು ಪರಿಹರಿಸಿಕೊಳ್ಳಬಹುದು. ಉದ್ಯೋಗಸ್ಥರಿಗೆ ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಬೆಂಬಲ ಸಿಗಲಿದೆ. ಉದ್ಯಮಿಗಳು ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ಆರೋಗ್ಯದ ದೃಷ್ಟಿಯಿಂದ ಯಾವುದೇ ಸಮಸ್ಯೆಯಿಲ್ಲ. ಇಂದು ನಿಮಗೆ ಶುಭದಿನವಾಗಿದೆ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 30
ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ ಸಂಜೆ 7 ರವರೆಗೆ

ವೃಶ್ಚಿಕ
ಉದ್ಯಮಿಗಳು ದೀರ್ಘ ಪ್ರಯಣ ಕೈಗೊಳ್ಳುವ ಸಾಧ್ಯತೆಗಳಿದೆ. ಉದ್ಯೋಗಿಗಳಿಗೆ ಕಷ್ಟ ಹೆಚ್ಚಾಗಿದ್ದು, ಪದೇ ಪದೇ ಒಂದೇ ತಪ್ಪನ್ನು ಮಾಡಬೇಡಿ. ಹಣದ ವಿಚಾರದಲ್ಲಿ ಇಂದು ಜಾಗರೂಕರಾಗಿದ್ದರೆ ಒಳ್ಳೆಯದು. ಹೆಚ್ಚುತ್ತಿರುವ ವೆಚ್ಚಗಳು ನಿಮ್ಮ ಆತಂಕವನ್ನು ಹೆಚ್ಚಿಸಬಹುದು. ನಿಮ್ಮ ಸಂಗಾತಿಗೆ ಸಾಕಷ್ಟು ಸಮಯವನ್ನು ನೀಡಿ. ನಿಮ್ಮ ಅಸಡ್ಡೆ ವರ್ತನೆ ನಿಮ್ಮ ಪ್ರೀತಿಪಾತ್ರರ ಭಾವನೆಗಳಿಗೆ ಧಕ್ಕೆ ಉಂಟು ಮಾಡಬಹುದು. ಇನ್ನೂ ಆರೋಗ್ಯದ ವಿಚಾರಕ್ಕೆ ಸಂಬಂಧಿಸಿದಂತೆ ಜಾಗರೂಕರಾಗಿರಿ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 35
ಅದೃಷ್ಟದ ಸಮಯ: ಬೆಳಿಗ್ಗೆ 7:15 ರಿಂದ ಮಧ್ಯಾಹ್ನ 2 ರವರೆಗೆ

ಧನು ರಾಶಿ
ತಾಯಿಯ ಆರೋಗ್ಯದಲ್ಲಿ ಇಂದು ಏರುಪೇರಾಗುವ ಸಾಧ್ಯತೆ ಇದೆ. ಅವರಿಗೆ ಉತ್ತಮ ಆರೈಕೆ ನೀಡಿ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಸಾಧ್ಯತೆ ಇದೆ. ಹೊಸ ಆದಾಯದ ಮೂಲವನ್ನು ನೀವು ಪಡೆಯುತ್ತೀರಿ. ಉದ್ಯೋಗಸ್ಥರು ಇಂದು ಹೆಚ್ಚುವರಿ ಕೆಲಸವನ್ನು ಪಡೆಯುವ ಸಾಧ್ಯತೆ ಇದ್ದು, ಒತ್ತಡ ಹೆಚ್ಚಾಗಲಿದೆ. ಇನ್ನೂ ವ್ಯಾಪಾರದ ವಿಚಾರದಲ್ಲಿ ಉದ್ಯಮಿಗಳು ಸಾಕಷ್ಟು ಓಡಬೇಕಾಗಬಹುದು. ಕೆಲಸದ ಜೊತೆಗೆ ನಿಮ್ಮ ಆರೋಗ್ಯದ ಕಡೆಗೂ ಗಮನಕೊಡಿ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಸಂಜೆ 6:45 ರಿಂದ ರಾತ್ರಿ 8 ರವರೆಗೆ

ಮಕರ ಸಂಕ್ರಾಂತಿ
ಸ್ನೇಹಿತರೊಂದಿಗೆ ಮೋಜು ಮಾಡುವ ಅವಕಾಶ ದೊರೆಯಲಿದೆ. ನೀವು ಇಂದು ಸ್ವಲ್ಪ ದೂರ ಪ್ರಯಾಣಿಸುವ ಸಾಧ್ಯತೆ ಇದೆ. ಆದಾಗ್ಯೂ, ನಿಮ್ಮ ಬಜೆಟ್ ಅನ್ನು ಗಮನದಲ್ಲಿಟ್ಟುಕೊಂಡು ಖರ್ಚು ಮಾಡಿದರೆ ಉತ್ತಮ. ಅತಿಯಾದ ಉತ್ಸಾಹದಿಂದ ಅಗತ್ಯಕ್ಕಿಂತ ಹೆಚ್ಚು ಖರ್ಚು ಮಾಡಬೇಡಿ. ಕೆಲಸದ ವಿಚಾರದಲ್ಲಿ ಈ ದಿನವು ಸಾಮಾನ್ಯವಾಗಿರುತ್ತದೆ. ನಿಮ್ಮ ಪ್ರಣಯ ಜೀವನದಲ್ಲಿ ಸುಂದರವಾದ ತಿರುವು ಉಂಟಾಗಬಹುದು. ಇಂದು ನಿಮ್ಮ ಸಂಗಾತಿಯು ಮದುವೆಯ ಪ್ರಸ್ತಾಪವನ್ನು ಮಾಡಬಹುದು. ಇಂದು ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಗಾಢ ಹಳದಿ
ಅದೃಷ್ಟದ ಸಂಖ್ಯೆ: 18
ಅದೃಷ್ಟದ ಸಮಯ: ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ

ಕುಂಭ
ಕೆಲಸದ ವಿಚಾರದಲ್ಲಿ ನೀವು ಇಂದು ಅದೃಷ್ಟಶಾಲಿ. ನೀವು ಹಿಂದೆ ಮಾಡಿದ ಕಠಿಣ ಪರಿಶ್ರಮಕ್ಕೆ ಉತ್ತಮ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆ ಇದೆ. ಉದ್ಯಮಿಗಳ ಆರ್ಥಿಕವಾಗಿ ಮತ್ತಷ್ಟು ಬಲವಾಗುತ್ತಾರೆ. ನಿಮ್ಮ ವ್ಯವಹಾರವನ್ನು ಮುಂದಕ್ಕೆ ಕೊಂಡೊಯ್ಯಲು ನೀವು ಉತ್ತಮ ಅವಕಾಶವನ್ನು ಕೂಡ ಪಡೆಯಬಹುದು. ಕುಟುಂಬದಲ್ಲಿ ಉದ್ವಿಘ್ನ ಪರಿಸ್ಥಿತಿ ಉಂಟಾಗಬಹುದು. ಮನೆಯ ಸದಸ್ಯರ ಆರೋಗ್ಯದಲ್ಲಿ ಸಮಸ್ಯೆ ಉಂಟಾಗಬಹುದು. ಹಣದ ವಿಚಾರದಲ್ಲಿ ಈ ದಿನ ದುಬಾರಿಯಾಗಲಿದೆ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 44
ಅದೃಷ್ಟದ ಸಮಯ: ಸಂಜೆ 6 ರಿಂದ ರಾತ್ರಿ 9 ರವರೆಗೆ

ಮೀನ
ನೀವು ನಿಮ್ಮ ಪೂರ್ವಜರ ಆಸ್ತಿಯನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದರೆ ಇಂದು ನಿಮಗೆ ಶುಭ ಕಾಲ. ನ್ಯಾಯಾಲಯಕ್ಕೆ ಸಂಬಂಧಿಸಿದ ಯಾವುದೇ ವಿಷಯದಲ್ಲಿ ನಿರ್ಲಕ್ಷ್ಯವನ್ನು ತೋರಬೇಡಿ. ಭವಿಷ್ಯದಲ್ಲಿ ಕಷ್ಟವಾಗಬಹುದು. ಇಂದು ನಿಮ್ಮ ಸಂಗಾತಿಯೊಂದಿಗೆ ಉತ್ತಮ ದಿನವಾಗಿರುತ್ತದೆ. ನೀವು ಪರಸ್ಪರ ಹೆಚ್ಚು ಸಮಯ ಕಳೆಯುತ್ತೀರಿ.ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಕೆಲಸ-ಸಂಬಂಧಿತ ಪ್ರಯತ್ನಗಳಲ್ಲಿ ಯಶಸ್ಸು ಇರುತ್ತದೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ, ಪ್ರತಿದಿನ ಯೋಗ ಮತ್ತು ಧ್ಯಾನವನ್ನು ಮಾಡಿದರೆ ಉತ್ತಮ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 36
ಅದೃಷ್ಟದ ಸಮಯ: ಸಂಜೆ 4:00 ರಿಂದ ರಾತ್ರಿ 8ವರೆಗೆ



Click it and Unblock the Notifications











