Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
Horoscope Today 22 March 2023: ಬುಧವಾರದ: ಯುಗಾದಿ ದಿನ 12 ರಾಶಿಗಳ ರಾಶಿಫಲ ಹೇಗಿದೆ ನೋಡೋಣ
ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಮಾರ್ಚ್ 22ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ಉತ್ತರಾಯಣ
ಋತು: ವಸಂತ
ಮಾಸ: ಚೈತ್ರ
ಪಕ್ಷ: ಶುಕ್ಲ ಪಕ್ಷ
ತಿಥಿ: ಪ್ರತಿಪಾದ
ನಕ್ಷತ್ರ: ಉತ್ತರ ಭಾದ್ರಪದ
ರಾಹುಕಾಲ: ಮಧ್ಯಾಹ್ನ 12:27ರಿಂದ 01:58ರವರೆಗೆ

ಮೇಷ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ. ಕೆಲಸದ ಜಾಗದಲ್ಲಿ ನಿಮ್ಮ ನಡವಳಿಕೆ ಕಡೆ ಗಮನ ಹರಿಸಿ. ಸಹೋದ್ಯೋಗಿಗಳಿಗೆ ಕೆಟ್ಟದು ಮಾಡಲು ಆಲೋಚಿಸಿದರೆ ಅದು ನಿಮಗೇ ಮುಳುವಾಗಬಹುದು. ವ್ಯಾಪಾರಸ್ಥರು ಇಂದು ಆರ್ಥಿಕ ಲಾಭವನ್ನು ಪಡೆಯಬಹುದು. ಹಣದ ವಿಷಯದಲ್ಲಿ ಈ ದಿನ ಮಿಶ್ರಫಲ. ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಸಂಜೆ 4 ರಿಂದ ರಾತ್ರಿ 8:45 ರವರೆಗೆ

ವೃಷಭ ರಾಶಿ
ಉದ್ಯೋಗಿಗಳಿಗೆ ಈ ದಿನ ಮುಖ್ಯವಾಗಿಲಿದೆ. ನಿಮ್ಮ ಆದಾಯವನ್ನು ಹೆಚ್ಚಿಸುವ ಬಲವಾದ ಸಾಧ್ಯತೆಯಿದೆ. ನೀವು ಉದ್ಯಮಿಯಾಗಿದ್ದರೆ ಮತ್ತು ಹೊಸ ಕೆಲಸವನ್ನು ಪ್ರಾರಂಭಿಸಲು ಯೋಚಿಸುತ್ತಿದ್ದರೆ ನಿಮ್ಮ ಯೋಜನೆಯಂತೆ ಮುಮದುವರೆಯಬಹುದು. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದಈ ದಿನ ಸರಾಸರಿಯಾಗಿರಲಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಬೆಳಿಗ್ಗೆ 6:25 ರಿಂದ 10:10 ರವರೆಗೆ

ಮಿಥುನ ರಾಶಿ
ಇಂದು ನಿಮಗೆ ತುಂಬಾ ಶುಭದಿನ. ನಿಮ್ಮ ಎಲ್ಲಾ ಕೆಲಸಗಳು ನಿಮ್ಮ ಯೋಜನೆಯ ಪ್ರಕಾರ ಪೂರ್ಣಗೊಳ್ಳುತ್ತವೆ. ಅಲ್ಲದೆ ನೀವು ಮಾನಸಿಕವಾಗಿ ಉತ್ತಮವಾಗುತ್ತೀರಿ. ನಿಮ್ಮ ಕೆಲಸ ಯಾವುದೇ ತೊಂದರೆಯಿಲ್ಲದೆ ಪೂರ್ಣಗೊಳ್ಳುತ್ತದೆ.
ನೀವು ವ್ಯಾಪಾರಸ್ಥರಾಗಿದ್ದರೆ ಮತ್ತು ಕೆಲವು ಕೆಲಸದ ಅಡಚಣೆಯಿಂದ ತೊಂದರೆಗೊಳಗಾಗಿದ್ದರೆ, ನೀವು ಹೆಚ್ಚು ಚಿಂತಿಸಬೇಕಾಗಿಲ್ಲ. ನಿಮ್ಮ ಈ ಸಮಸ್ಯೆ ತಾತ್ಕಾಲಿಕ. ಮನೆಯ ವಾತಾವರಣ ಚೆನ್ನಾಗಿರಲಿದೆ. ಆರೋಗ್ಯ ಕೂಡ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 18
ಅದೃಷ್ಟದ ಸಮಯ: ಸಂಜೆ 4:35 ರಿಂದ ಸಂಜೆ 7 ರವರೆಗೆ

ಕರ್ಕ ರಾಶಿ
ನೀವು ಆಸ್ತಿ ಖರೀದಿಸಲು ಯೋಚಿಸುತ್ತಿದ್ದರೆ ಆತುರ ಬೇಡ, ಕೆಲಸದ ಬಗ್ಗೆ ಹೇಳುವುದಾದರೆ ಇಂದು ಏರಿಳಿತಗಳಿಂದ ತುಂಬಿರುತ್ತದೆ, ವಿಶೇಷವಾಗಿ ವ್ಯಾಪಾರಸ್ಥರಿಗೆ ಬಯಸಿದ ಲಾಭ ಸಿಗುವುದಿಲ್ಲ. ಹಣದ ಪರಿಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯ ಕ್ಷೀಣಿಸುವ ಸಾಧ್ಯತೆ ಇದೆ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: ಬೆಳಿಗ್ಗೆ 8:55 ರಿಂದ 11:20 ರವರೆಗೆ

ಸಿಂಹ ರಾಶಿ
ಕೆಲಸದಲ್ಲಿ ಯಾವುದೇ ನಿರ್ಲಕ್ಷ್ಯ ತೋರಬೇಡಿ. ವ್ಯಾಪಾರಸ್ಥರು ಬಯಸಿದ ಲಾಭ ಪಡೆಯಬಹುದು. ಹಣದ ವಿಷಯದಲ್ಲಿ ದಿನವು ಉತ್ತಮವಾಗಿರುತ್ತದೆ. ನಿಮ್ಮ ಆದಾಯವನ್ನು ಗಮನದಲ್ಲಿಟ್ಟುಕೊಂಡು ಖರ್ಚು ಮಾಡಿದರೆ ಉತ್ತಮ. ಈಗಾಗಲೇ ಆರೋಗ್ಯ ಸಮಸ್ಯೆಯಿದ್ದರೆ ನಿಮ್ಮ ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಿ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 26
ಅದೃಷ್ಟದ ಸಮಯ: ಮಧ್ಯಾಹ್ನ 2:50 ರಿಂದ ಸಂಜೆ 6:05 ರವರೆಗೆ

ಕನ್ಯಾ ರಾಶಿ
ನಿಮ್ಮ ಪ್ರಮುಖ ಕೆಲಸವನ್ನು ಸುಲಭವಾಗಿ ಮಾಡಿ ಮುಗಿಸುವಿರಿ. ವ್ಯಾಪಾರಸ್ಥರಿಗೆ ಈ ದಿನ ಅನುಕೂಲಕರವಾಗಿದೆ. ದಿನದ ಎರಡನೇ ಭಾಗದಲ್ಲಿ, ನೀವು ಮೋಜು ಮಾಡಲು ಅವಕಾಶವನ್ನು ಪಡೆಯುತ್ತೀರಿ. ಆರೋಗ್ಯದ ಬಗ್ಗೆ ಹೇಳುವುದಾದರೆ ಮೈ ತೂಕ ನಿಯಂತ್ರಿಸಲು ಸಲಹೆ ನೀಡಲಾಗುವುದು.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 14
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ಸಂಜೆ 7 ರವರೆಗೆ

ತುಲಾ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ. ಇಂದು ಉದ್ಯಮಿಗಳಿಗೆ ಬಹಳ ವಿಶೇಷವಾದ ದಿನವಾಗಿರುತ್ತದೆ. ಕೌಟುಂಬಿಕ ಜೀವನದಲ್ಲಿ ಕೆಲವು ಭಿನ್ನಾಭಿಪ್ರಾಯ ಮೂಡಬಹುದು. ನಿಮ್ಮ ಆರೋಗ್ಯದ ಬಗ್ಗೆ ಹೇಳುವುದಾದರೆ ಸಮಯಕ್ಕೆ ಸರಿಯಾಗಿ ಆಹಾರ ಸೇವಿಸಿ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಸಮಯ: ಸಂಜೆ 6 ರಿಂದ ರಾತ್ರಿ 9 ರವರೆಗೆ

ವೃಶ್ಚಿಕ ರಾಶಿ
ವ್ಯಾಪಾರಸ್ಥರಿಗೆ ಇಂದು ಒಳ್ಳೆಯ ದಿನ. ಹೂಡಿಕೆಯಿಂದ ಲಾಭ ಪಡೆಯುವಿರಿ. ಹಣಕಾಸಿನ ವಿಚಾರದಲ್ಲಿ ಆತುರ ಬೇಡ, ಚೆನ್ನಾಗಿ ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ. ಇಂದು ಆರೋಗ್ಯ ಸಮಸ್ಯೆಗಳಿರಬಹುದು, ಆದ್ದರಿಂದ ಆರೋಗ್ಯದ ಕಡೆಗ ಗಮನ ಹರಿಸಿ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 18
ಅದೃಷ್ಟದ ಸಮಯ: ಬೆಳಿಗ್ಗೆ 7:20 ರಿಂದ 10:50 ರವರೆಗೆ

ಧನು ರಾಶಿ
ಬ್ಯಾಂಕಿಂಗ್ ಕ್ಷೇತ್ರದವರಿಗೆ ಅದೃಷ್ಟದ ದಿನ. ಹಣದ ವಿಷಯದಲ್ಲಿ, ದಿನವು ತುಂಬಾ ದುಬಾರಿಯಾಗಲಿದೆ. ಹಣ ತುಂಬಾ ಖರ್ಚು ಮಾಡಬೇಡಿ. ಮನೆಯ ವಾತಾವರಣವು ಖುಷಿಯಿಂದ ಕೂಡಿರುತ್ತದೆ. ಆರೋಗ್ಯದ ವಿಷಯದಲ್ಲಿ ಈ ದಿನ ಉತ್ತಮವಾಗಿದೆ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 8 ರವರೆಗೆ

ಮಕರ ರಾಶಿ
ನಿಮ್ಮ ಭಾವನೆಗಳನ್ನು ನಿಯಂತ್ರಿಸಲು ನಿಮಗೆ ಸಲಹೆ ನೀಡಲಾಗುತ್ತದೆ. ಭಾವನೆಗಳಿಂದ ದೂರವಾಗುವ ಮೂಲಕ ಯಾವುದೇ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಲು ಹೋಗಬೇಡಿ. ಇಂದು ಯಾವುದೇ ದೊಡ್ಡ ಹಣಕಾಸಿನ ವಹಿವಾಟು ಮಾಡಲು ಇಂದು ಉತ್ತಮ ದಿನವಲ್ಲ. ಸಂಗಾತಿಯ ಜೊತೆ ಸಂಬಂಧ ಚೆನ್ನಾಗಿರಲಿದೆ. ಆರೋಗ್ಯದ ಕಡೆ ಗಮನಹರಿಸಿ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಬೆಳಿಗ್ಗೆ 4 ರಿಂದ ಸಂಜೆ 7 ರವರೆಗೆ

ಕುಂಭ ರಾಶಿ
ಉದ್ಯಮಿಗಳು ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳುವುದಾದರೆ ನೀವು ಆಲೋಚಿಸಿ ನಿರ್ಧಾರ ತೆಗೆದುಕೊಳ್ಳಿ. ಹಣಕಾಸಿನ ಸ್ಥಿತಿ ದುರ್ಬಲವಾಗಿರುತ್ತದೆ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ಇಲ್ಲದಿದ್ದರೆ ತೊಂದರೆಯಾಗುವುದು.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ

ಮೀನ ರಾಶಿ
ಈ ದಿನ ಒತ್ತಡದಿಂದ ಕೂಡಿರಲಿದೆ. ಹಣದ ಪರಿಸ್ಥತಿ ಸುಧಾರಿಸಲಿದೆ. ನಿಮಗೆ ಹಣ ಬರುವ ಸಾಧ್ಯತೆ ಇದೆ. ಹಣವನ್ನು ಮಿತಿ ಮೀರಿ ಖರ್ಚು ಮಾಡಬೇಡಿ. ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯ ಉಂಟಾಗಬಹುದು. ಆಹಾರಕ್ರಮದ ಕಡೆಗೆ ಗಮಹರಿಸಿ
ಅದೃಷ್ಟದ ಬಣ್ಣ: ಗಾಢ ಹಸಿರು
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಬೆಳಿಗ್ಗೆ 7 ರಿಂದ 11 ರವರೆಗೆ



Click it and Unblock the Notifications