Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
Horoscope Today 23 March 2023: ಗುರುವಾರ ಈ ದಿನ ಯಾವ ರಾಶಿಗಳಿಗೆ ಶುಭ, ಯಾರಿಗಲ್ಲ
ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಮಾರ್ಚ್ 23ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ಉತ್ತರಾಯಣ
ಋತು: ವಸಂತ
ಮಾಸ: ಚೈತ್ರ
ಪಕ್ಷ: ಶುಕ್ಲಪಕ್ಷ
ತಿಥಿ: ದ್ವಿತೀಯಾ
ನಕ್ಷತ್ರ: ರೇವತಿ
ರಾಹುಕಾಲ: ಮಧ್ಯಾಹ್ನ 01:57ರಿಂದ 03:58ರವರೆಗೆ

ಮೇಷ ರಾಶಿ
ಇಂದು ಉದ್ಯಮಿಗಳಿಗೆ ಏರಿಳಿತಗಳಿಂದ ತುಂಬಿರುತ್ತದೆ. ಆತುರಪಡದೆ ನಿರ್ಧಾರ ತೆಗೆದುಕೊಳ್ಲಿ. ಉದ್ಯೋಗಿಗಳು ಕಚೇರಿಯಲ್ಲಿ ತಮ್ಮ ಸಹೋದ್ಯೋಗಿಗಳೊಂದಿಗೆ ಉತ್ತಮ ಬಾಂಧವ್ಯವನ್ನು ಇರಿಸಿಕೊಳ್ಳಲು ಪ್ರಯತ್ನಿಸಿ. ಅನಗತ್ಯ ದುರಹಂಕಾರ ನಿಮ್ಮ ಕೆಲಸಕ್ಕೆ ಹಾನಿಯುಂಟು ಮಾಡುತ್ತದೆ. ಹಣದ ವಿಷಯದಲ್ಲಿಈ ದಿನ ಸಾಮಾನ್ಯವಾಗಿರುತ್ತದೆ.
ಆರೋಗ್ಯಕ್ಕಾಗಿ ಪ್ರತಿದಿನ ಯೋಗ, ಧ್ಯಾನ ಮಾಡಿ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಸಮಯ: ಸಂಜೆ 5:05 ರಿಂದ ರಾತ್ರಿ 8:55 ರವರೆಗೆ

ವೃಷಭ ರಾಶಿ
ನಿಮ್ಮ ವೈವಾಹಿಕ ಜೀವನದಲ್ಲಿ ತುಂಬಾ ಸಮಯದಿಂದ ಇದ್ದ ಸಮಸ್ಯೆ ಬಗೆಹರಿಯಲಿದೆ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ಉದ್ಯೋಗ ಅಥವಾ ವ್ಯಾಪಾರದಲ್ಲಿ ಯಾವುದೇ ಅಡೆತಡೆ ಇರುವುದಿಲ್ಲ. ಶೀಘ್ರದಲ್ಲೇ ನೀವು ಅದರ ಸರಿಯಾದ ಫಲಿತಾಂಶವನ್ನು ಪಡೆಯುತ್ತೀರಿ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ, ಇಂದು ನೀವು ದೈಹಿಕವಾಗಿ ಮತ್ತು ಮಾನಸಿಕವಾಗಿ ಉತ್ತಮವಾಗುತ್ತೀರಿ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 34
ಅದೃಷ್ಟದ ಸಮಯ: ಬೆಳಿಗ್ಗೆ 5 ರಿಂದ ಸಂಜೆ 5:15 ರವರೆಗೆ

ಮಿಥುನ ರಾಶಿ
ಇಂದು ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಲಕ್ಷಣಗಳಿವೆ. ನಿಮ್ಮ ಆರ್ಥಿಕ ಪ್ರಯತ್ನ ಯಶಸ್ವಿಯಾಗಲಿದೆ. ಆದರೆ ಈ ದಿನ ಹಣಕಾಸಿನ ವಿಷಯಗಳಲ್ಲಿ, ನೀವು ತುಂಬಾ ಜಾಗರೂಕರಾಗಿರಲು ಸಲಹೆ ನೀಡಲಾಗಿದೆ. ಉದ್ಯೋಗಸ್ಥರಿಗೆ ಪ್ರಗತಿಯ ಸೂಚನೆ ಇದೆ. ವ್ಯಾಪಾರಸ್ಥರು ನಿರೀಕ್ಷೆಯಂತೆ ಫಲವನ್ನು ಪಡೆಯಬಹುದು. ಆರೋಗ್ಯದ ದೃಷ್ಟಿಯಿಂದ ದಿನವು ಅನುಕೂಲಕರವಾಗಿರುತ್ತದೆ.
ಅದೃಷ್ಟದ ಬಣ್ಣ: ತಿಳಿ ಹಳದಿ
ಅದೃಷ್ಟದ ಸಂಖ್ಯೆ: 25
ಅದೃಷ್ಟದ ಸಮಯ: ಬೆಳಿಗ್ಗೆ 7:20 ರಿಂದ ಮಧ್ಯಾಹ್ನ 2:30 ರವರೆಗೆ

ಕರ್ಕ ರಾಶಿ
ಈ ರಾಶಿಯ ವಿದ್ಯಾರ್ಥಿಗಳಿಗೆ ಇಂದು ಪ್ರಮುಖ ದಿನವಾಗಿದೆ. ನೀವು ಉದ್ಯೋಗ ಸಂಬಂಧಿತ ಪರೀಕ್ಷೆಯನ್ನು ನೀಡಿದ್ದರೆ ಇಂದು ಯಶಸ್ಸನ್ನು ಪಡೆಯುವ ಸಾಧ್ಯತೆಯಿದೆ. ಇಂದು ನಿಮ್ಮೆಲ್ಲಾ ಕೆಲಸಗಳು ಸುಲಭವಾಗಿ ಪೂರ್ಣಗೊಳ್ಳಲಿದೆ. ಹಣದ ಪರಿಸ್ಥಿತಿ ಉತ್ತಮವಾಗಿರುತ್ತದೆ. ಯೋಚಿಸದೆ ದೊಡ್ಡ ಖರ್ಚು ಮಾಡಬೇಡಿ. ಸಂಗಾತಿಯ ಆರೋಗ್ಯದಲ್ಲಿ ಸಮಸ್ಯೆಗಳಿರಬಹುದು. ಅವರ ಆರೋಗ್ಯದ ಕಡೆ ಗಮನ ಹರಿಸಿ.
ಅದೃಷ್ಟದ ಬಣ್ಣ: ಕಡು ನೀಲಿ
ಅದೃಷ್ಟದ ಸಂಖ್ಯೆ: 31
ಅದೃಷ್ಟದ ಸಮಯ: ಮಧ್ಯಾಹ್ನ 2:45 ರಿಂದ ರಾತ್ರಿ 9:30 ರವರೆಗೆ

ಸಿಂಹ ರಾಶಿ
ಈ ದಿನ ನಿಮ್ಮ ಆದಾಯಕ್ಕೆ ತಕ್ಕಂತೆ ಖರ್ಚು ಮಾಡಿ. ಇಲ್ಲದಿದ್ದರೆ ಆರ್ಥಿಕ ತೊಂದರೆ ಉಂಟಾಗಬಹುದು. ಉದ್ಯಮಿಗಳು ಸಾಲ ತೆಗೆದುಕೊಳ್ಳಬೇಡಿ. ಉದ್ಯೋಗಿಗಳಿಗೆ ಕೆಲಸದ ವಿಷಯದಲ್ಲಿ ಸಿಹಿ ಸುದ್ದಿ ಸಿಗಬಹುದು. ಆರೋಗ್ಯದ ವಿಷಯದಲ್ಲಿ, ದಿನವು ಸರಾಸರಿಯಾಗಲಿದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 9 ರವರೆಗೆ

ಕನ್ಯಾ ರಾಶಿ
ಕನ್ಯಾ ರಾಶಿಯವರಿಗೆ ಈ ದಿನ ಉತ್ತಮವಾಗಿದೆ. ಇಂದು ಕೆಲಸದ ಹೊರೆ ಕಡಿಮೆಯಾಗಿದೆ. ಹಣದ ವಿಷಯದಲ್ಲಿ ಈ ದಿನ ಮಿಶ್ರಫಲ. ಇಂದು ನಿಮ್ಮ ವೆಚ್ಚಗಳನ್ನು ನಿಯಂತ್ರಿಸಿ. ವೈವಾಹಿಕ ಜೀವನದಲ್ಲಿ ಪರಿಸ್ಥಿತಿಗಳು ಆಹ್ಲಾದಕರವಾಗಿರುತ್ತದೆ. ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿರ್ಲಕ್ಷಿಸಬೇಡಿ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ಸಮಯ: ಮಧ್ಯಾಹ್ನ 12 ರಿಂದ ಸಂಜೆ 6:30 ರವರೆಗೆ

ತುಲಾ ರಾಶಿ
ತುಲಾ ರಾಶಿಯವರಿಗೂ ಈ ದಿನ ಉತ್ತಮವಾಗಿದೆ. ಉದ್ಯಮಿಗಳು ಹೂಡಿಕೆ ಮಾಡಲು ಉತ್ತಮ ಅವಕಾಶವನ್ನು ಪಡೆಯಬಹುದು. ವೈವಾಹಿಕ ಜೀವನ ಚೆನ್ನಾಗಿರಲಿದೆ. ಹಣಕಾಸಿನ ಸ್ಥಿತಿ ಚೆನ್ನಾಗಿರಲಿದೆ. ಏನಾದರೂ ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 8:25 ರವರೆಗೆ

ವೃಶ್ಚಿಕ ರಾಶಿ
ಹಣದ ವಿಷಯದಲ್ಲಿ ಈ ದಿನ ಅನುಕೂಲಕರವಾಗಿದೆ ಆದಾಯ ಚೆನ್ನಾಗಿರಲಿದೆ, ಆದರೆ ವೆಚ್ಚಗಳು ಇರಬಹುದು. .ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ ಸ್ವಲ್ಪ ಜಾಗ್ರತೆಯಿಂದಿರಿ. ಅವರ ಯಾವುದೇ ನಿರ್ಧಾರಗಳನ್ನು ನೀವು ಒಪ್ಪದಿದ್ದರೆ, ನಿಮ್ಮ ನಿಲುವನ್ನು ಬುದ್ಧಿವಂತಿಕೆಯಿಂದ ಪ್ರಸ್ತುತಪಡಿಸಲು ಸಲಹೆ ನೀಡಲಾಗಿದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಸಾಮಾನ್ಯವಾಗಿರುತ್ತದೆ. ಆರೋಗ್ಯದಲ್ಲಿ ಸಮಸ್ಯೆ ಇರಬಹುದು.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 15
ಅದೃಷ್ಟದ ಸಮಯ: ಬೆಳಿಗ್ಗೆ 8:30 ರಿಂದ ಮಧ್ಯಾಹ್ನ 2:30 ರವರೆಗೆ

ಧನು ರಾಶಿ
ನಿಮ್ಮ ವೈಯಕ್ತಿಕ ವಿಷಯಗಳಲ್ಲಿ ಹೊರಗಿನವರು ಹೆಚ್ಚು ಹಸ್ತಕ್ಷೇಪ ಮಾಡಲು ಬಿಡಬೇಡಿ, ಇಂದು ನೀವು ಹಣದ ವಿಷಯದಲ್ಲಿ ಸ್ವಲ್ಪ ಕಡಿಮೆ ಅದೃಷ್ಟದ ದಿನ. ಕೈಯಲ್ಲಿರುವ ಹಣ ಅಧಿಕ ಖರ್ಚಾಗಬಹುದು. ಮನೆಯ ವಾತಾವರಣವು ಧನಾತ್ಮಕವಾಗಿರುತ್ತದೆ. ವ್ಯಾಪಾರಸ್ಥರಿಗೆ ದಿನವು ಸರಾಸರಿಯಾಗಲಿದೆ. ಆರೋಗ್ಯವನ್ನು ನಿರ್ಲಕ್ಷ್ಯ ಮಾಡಬೇಡಿ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 17
ಅದೃಷ್ಟದ ಸಮಯ: ಮಧ್ಯಾಹ್ನ 12:30 ರಿಂದ ಸಂಜೆ 6 ರವರೆಗೆ

ಮಕರ ರಾಶಿ
ನಿಮ್ಮ ಯಾವುದೋ ಪ್ರಮುಖ ಸಮಸ್ಯೆ ಕಡಿಮೆಯಾಗಲಿದೆ. ಉದ್ಯೋಗವಿರಲಿ, ವ್ಯವಹಾರವಿರಲಿ, ನಿಮ್ಮ ಶ್ರಮಕ್ಕೆ ತಕ್ಕ ಫಲಿತಾಂಶ ಸಿಗುತ್ತದೆ. ಹಣದ ವಿಷಯದಲ್ಲಿ, ದಿನವು ಏರಿಳಿತಗಳಿಂದ ತುಂಬಿರುತ್ತದೆ. ಇಂದು ಖರ್ಚು ಸ್ವಲ್ಪ ಹೆಚ್ಚಾಗಬಹುದು. ಇಂದು ಕೋಪ ಮತ್ತು ಆತುರದಿಮದ ನಿರ್ಧಾರ ತೆಗೆದುಕೊಳ್ಳಬೇಡಿ. ನಿಮಗೆ ಹೃದ್ರೋಗವಿದ್ದರೆ ಇಂದು ಜಾಗರೂಕರಾಗಿರಿ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಬೆಳಿಗ್ಗೆ 7 ರಿಂದ ಮಧ್ಯಾಹ್ನ 3 ರವರೆಗೆ

ಕುಂಭ ರಾಶಿ
ಮನೆಯ ವಾತಾವರಣ ಸಂತೋಷದಿಂದ ಕೂಡಿರಲಿದೆ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ, ಆದರೆ ಯಾವುದೇ ದೊಡ್ಡ ಸಮಸ್ಯೆ ಇರುವುದಿಲ್ಲ. ನೀವು ಇತ್ತೀಚೆಗೆ ಹೊಸ ಕೆಲಸಕ್ಕೆ ಸೇರಿದ್ದರೆ ಅತ್ಯಧಿಕ ಕೆಲಸದ ಒತ್ತಡ ಹೆಚ್ಚಾಗಿರಲಿದೆ. ಸಣ್ಣ ವ್ಯಾಪಾರಸ್ಥರಿಗೆ ಇಂದು ತುಂಬಾ ಪ್ರಯೋಜನಕಾರಿಯಾಗಲಿದೆ. ನೀವು ಸ್ಟಾಕ್ ಅನ್ನು ಹೆಚ್ಚಿಸಲು ಯೋಜಿಸುತ್ತಿದ್ದರೆ ಸಮಯವು ಅನುಕೂಲಕರವಾಗಿರುತ್ತದೆ. ಆರೋಗ್ಯದ ವಿಷಯದಲ್ಲಿ, ದಿನವು ಮಿಶ್ರವಾಗಿರುತ್ತದೆ.
ಅದೃಷ್ಟದ ಬಣ್ಣ: ಗಾಢ ಕೆಂಪು
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಬೆಳಿಗ್ಗೆ 10 ರಿಂದ ಮಧ್ಯಾಹ್ನ 1:30 ರವರೆಗೆ

ಮೀನ ರಾಶಿ
ದಾಂಪತ್ಯ ಜೀವನ ಚೆನ್ನಾಗಿರಲಿದೆ. ನಿಮ್ಮಿಬ್ಬರ ನಡುವೆ ಹೊಂದಾಣಿಕೆ ಚೆನ್ನಾಗಿರಲಿದೆ. ಕೆಲಸ-ಸಂಬಂಧಿತ ಪ್ರಯತ್ನಗಳಲ್ಲಿ ಯಶಸ್ಸು ಇರಲಿದೆ. ಇಂದು ನೀವು ತುಂಬಾ ಧನಾತ್ಮಕ ಮತ್ತು ಆತ್ಮವಿಶ್ವಾಸದಿಂದ ಕೂಡಿರುತ್ತೀರಿ. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನೀವು ಈ ದಿನ ಪ್ರಮುಖ ನಿರ್ಧಾರ ತೆಗೆದುಕೊಳ್ಳುವಿರಿ. ಆರೋಗ್ಯಕ್ಕೆ ಸಂಬಂಧಿಸಿದಂತೆ ನೋಡುವುದಾದರೆ ಕಿರಿಕಿರಿ, ಗ್ಯಾಸ್, ಅಸಿಡಿಟಿ ಮುಂತಾದ ಸಮಸ್ಯೆಗಳಿರಬಹುದು.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಸಮಯ: ಬೆಳಗ್ಗೆ 9:05 ರಿಂದ ಮಧ್ಯಾಹ್ನ 12



Click it and Unblock the Notifications