Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
Horoscope Today 25 March 2023: ಶನಿವಾರ: ಈ ದಿನ ಯಾರಿಗೆ ಶುಭ, ಯಾರು ಜಾಗ್ರತೆಯಿಂದಿರಬೇಕು
ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಮಾರ್ಚ್ 25ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ಉತ್ತರಾಯಣ
ಋತು: ವಸಂತ
ಮಾಸ: ಚೈತ್ರ
ಪಕ್ಷ: ಶುಕ್ಲಪಕ್ಷ
ತಿಥಿ: ಚತುರ್ಥಿ
ನಕ್ಷತ್ರ: ಭರಣಿ
ರಾಹುಕಾಲ: ಬೆಳಗ್ಗೆ 09:23ರಿಂದ 10:25ರವರೆಗೆ

ಮೇಷ ರಾಶಿ
ಇಂದು ಯಾವುದೇ ಅಪಾಯಕಾರಿ ನಿರ್ಧಾರಗಳನ್ನು ತೆಗೆದುಕೊಳ್ಳಲು ಹೋಗಬೇಡಿ. ಉದ್ಯೋಗಿಗಳಿಗೆಈ ದಿನ ಕಾರ್ಯನಿರತವಾಗಿರಲಿದೆ. ಈ ದಿನ ಕೆಲಸದ ಕಾರಣಕ್ಕೆ ಪ್ರಯಾಣಿಸಬೇಕಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರಲಿದೆ. ಈ ದಿನ ಮನೆಯ ವಾತಾವರಣ ಚೆನ್ನಾಗಿರಲಿದೆ. ಆರೋಗ್ಯಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ಈ ದಿನ ವಿಶ್ರಾಂತಿಯತ್ತ ಗಮನ ಕೊಡಿ.
ಅದೃಷ್ಟದ ಬಣ್ಣ: ಗಾಢ ಹಳದಿ
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಬೆಳಗ್ಗೆ 10 ರಿಂದ ಮಧ್ಯಾಹ್ನ 12 ರವರೆಗೆ
ವೃಷಭ ರಾಶಿ
ಇಂದು ನೀವು ಯಾರ ಜೊತೆ ಮಾತನಾಡುವುದಾದರೆ ಈ ದಿನ ಆಲೋಚಿಸಿ ನಿರ್ಧಾರ ತೆಗೆದುಕೊಳ್ಳಿ. ಕೆಲಸದಲ್ಲ ಗಮನ ಕೊಡಿ. ಉದ್ಯಮಿಗಳು ಈ ದಿನ ಬಯಸಿದ ಫಲಿತಾಂಶ ಪಡೆಯಬಹುದು. ಆರ್ಥಿಕ ಸ್ಥಿತಿಯಿಂದ ಈ ದಿನ ಒಳ್ಳೆಯದಿದೆ. ಹಣದ ವಿಷಯದಲ್ಲಿ ಈ ದಿನ ಮಿಶ್ರಫಲ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: ಮಧ್ಯಾಹ್ನ 12:30 ರಿಂದ ಸಂಜೆ 6 ರವರೆಗೆ
ಮಿಥುನ ರಾಶಿ
ದಾಂಪತ್ಯ ಜೀವನ ಚೆನ್ನಾಗಿರಲಿದೆ. ಕಛೇರಿಯಲ್ಲಿ ನೀವು ತುಂಬಾ ಜಾಗರೂಕರಾಗಿರಬೇಕು. ಕೆಲವು ಸಹೋದ್ಯೋಗಿಗಳು ನಿಮ್ಮ ಇಮೇಜ್ ಹಾಳು ಮಾಡಲು ಪ್ರಯತ್ನಿಸಬಹುದು, ಜಾಗ್ರತೆವಹಿಸಿ. ವ್ಯಾಪಾರಸ್ಥರಿಗೆ ಮಿಶ್ರ ಲಾಭ ದೊರೆಯಲಿದೆ. ಹಣದ ವಿಷಯದಲ್ಲಿ ಇಂದು ದುಬಾರಿ ದಿನವಾಗಲಿದೆ. ಈ ದಿನ ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ತಿಳಿ ಕೆಂಪು
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಮಧ್ಯಾಹ್ನ 1:55 ರಿಂದ ಸಂಜೆ 6:50 ರವರೆಗೆ
ಕರ್ಕ ರಾಶಿ
ಉದ್ಯೋಗಸ್ಥರಿಗೆ ಈ ದಿನ ಉತ್ತಮವಾಗಿದೆ. ನಿಮ್ಮ ಕೆಲಸ ಅಪೂರ್ಣವಾಗಿದ್ದರೆ ಪೂರ್ಣಗೊಳಿಸಲು ಪ್ರಯತ್ನಿಸಿ. ಇಂದು ಉದ್ಯಮಿಗಳಿಗೆ ಬಹಳ ಮುಖ್ಯವಾದ ದಿನವಾಗಲಿದೆ. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯವು ದುಬಾರಿಯಾಗಿದೆ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 21
ಅದೃಷ್ಟದ ಸಮಯ: ಮಧ್ಯಾಹ್ನ 2:30 ರಿಂದ ಸಂಜೆ 7:20 ರವರೆಗೆ
ಸಿಂಹ ರಾಶಿ
ಇಂದು ಕಚೇರಿಯಲ್ಲಿ ನಿಮ್ಮ ಶ್ರಮ ಹೆಚ್ಚಬಹುದು. ನಿಮ್ಮ ಶ್ರಮಕ್ಕೆ ಮೇಲಾಧಿಕಾರಿಯಿಂದ ಮೆಚ್ಚುಗೆ ದೊರೆಯಲಿದೆ. ವ್ಯಾಪಾರಸ್ಥರು ದೊಡ್ಡ ಆರ್ಥಿಕ ವಹಿವಾಟು ನಡೆಸಬಹುದು. ನಿಮ್ಮ ವ್ಯಾಪಾರದಲ್ಲಿ ಧನಾತ್ಮಕ ಬದಲಾವಣೆಗಳನ್ನು ಕಾಣಬಹುದು ಕೌಟುಂಬಿಕ ಜೀವನದಲ್ಲಿ ಖುಷಿ ಇರಲಿದೆ. ಆರೋಗ್ಯದ ಕಡೆಗೆ ಗಮನ ಹರಿಸಿ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 6
ಅದೃಷ್ಟದ ಸಮಯ: ಬೆಳಿಗ್ಗೆ 9:40 ರಿಂದ ಮಧ್ಯಾಹ್ನ 2:30 ರವರೆಗೆ
ಕನ್ಯಾ ರಾಶಿ
ವಿದ್ಯಾರ್ಥಿಗಳಿಗೆ ಈ ದಿನ ಅನುಕೂಲಕರವಾಗಿದೆ. ಕೆಲಸಕ್ಕೆ ಸಂಬಂಧಿಸಿದಂತೆ ನೋಡುವುದಾರೆ ಈ ದಿನ ಅದೃಷ್ಟದ ದಿನ. ನಿಮ್ಮ ಶ್ರಮಕ್ಕೆ ತಕ್ಕ ಫಲಿತಾಂಶ ಸಿಗುತ್ತದೆ. ನಿಮ್ಮ ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ. ಆರೋಗ್ಯದ ದೃಷ್ಟಿಯಿಂದ ದಿನ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 30
ಅದೃಷ್ಟದ ಸಮಯ: ಸಂಜೆ 4:30 ರಿಂದ ರಾತ್ರಿ 8:05 ರವರೆಗೆ
ತುಲಾ ರಾಶಿ
ಇಂದು ಪರಿಸ್ಥಿತಿ ಅಷ್ಟೊಂದು ಅನುಕೂಲಕರವಿರುವುದಿಲ್ಲ. ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಸಹ ಸಲಹೆ ನೀಡಲಾಗಿದೆ ಹೆಚ್ಚುತ್ತಿರುವ ಕೆಲಸದ ಹೊರೆ ಒತ್ತಡ ಹೆಚ್ಚಿಸಲಿದೆ. ನಿಮ್ಮ ಶ್ರಮಕ್ಕೆ ತಕ್ಕ ಫಲ ಪಡೆಯುವಿರಿ. ಹಣದ ವಿಷಯದಲ್ಲಿ, ದಿನವು ಏರಿಳಿತಗಳಿಂದ ತುಂಬಿರುತ್ತದೆ. ಅನಗತ್ಯ ಖರ್ಚುಗಳು ಉಂಟಾಗಬಹುದು. ಮನೆಯ ಸದಸ್ಯರೊಂದಿಗೆ ಭಿನ್ನಾಭಿಪ್ರಾಯ ಉಂಟಾಗಬಹುದು.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 14
ಅದೃಷ್ಟದ ಸಮಯ: ಬೆಳಿಗ್ಗೆ 4:20 ರಿಂದ ಮಧ್ಯಾಹ್ನ 12 ರವರೆಗೆ
ವೃಶ್ಚಿಕ ರಾಶಿ
ಹಣದ ವಿಷಯದಲ್ಲಿ ಈ ದಿನ ಉತ್ತಮವಾಗಿರಲಿದೆ. ಈ ದಿನ ಯಾವುದೇ ಸಾಲ ತೆಗೆದುಕೊಳ್ಳದಂತೆ ಸೂಚಿಸಲಾಗಿದೆ. ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನಗಳಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ಉದ್ಯೋಗಿಗಳು ಈ ದಿನ ಒಳ್ಳೆಯ ಸುದ್ದಿಯನ್ನು ಪಡೆಯಬಹುದು, ವ್ಯಾಪಾರಸ್ಥರಿಗೂ ಈ ದಿನ ಒಳ್ಳೆಯದಿದೆ. ನೀವು ಈ ದಿನ ಆರ್ಥಿಕ ಲಾಭ ಪಡೆಯುವಿರಿ. .
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಬೆಳಿಗ್ಗೆ 7:45 ರಿಂದ 11 ರವರೆಗೆ
ಧನು ರಾಶಿ
ನಿಮ್ಮ ಮನೆಯ ವಾತಾವರಣ ಚೆನ್ನಾಗಿರಲಿದೆ. ಏನಾದರೂ ಸಮಸ್ಯೆಯಿದ್ದರೆ ಬಗೆಹರಿಸಲು ಪ್ರಯತ್ನಿಸಿ. ಕೆಲಸದ ಜಾಗದಲ್ಲಿ ಒತ್ತಡ ಅಧಿಕವಿರಲಿದೆ. ಇಂದು ಮನಸ್ಸಿನಲ್ಲಿ ಮನಸ್ಸಿನಲ್ಲಿ ನಕಾರಾತ್ಮಕ ಆಲೋಚನೆ ಹೆಚ್ಚಿರಲಿದೆ. ವ್ಯಾಪಾರಸ್ಥರು ಹಣದ ವಿಷಯದಲ್ಲಿ ಜಾಗರೂಕರಾಗಿರಬೇಕು, ಇಲ್ಲದಿದ್ದರೆ ನೀವು ಮೋಸ ಹೋಗಬಹುದು. ಆರೋಗ್ಯದ ವಿಷಯದಲ್ಲಿ ದಿನವು ಸರಾಸರಿಯಾಗಲಿದೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 16
ಅದೃಷ್ಟದ ಸಮಯ: ಬೆಳಿಗ್ಗೆ 7:15 ರಿಂದ ಮಧ್ಯಾಹ್ನ 2:05 ರವರೆಗೆ
ಮಕರ ರಾಶಿ
ಹಣದ ವಿಷಯದಲ್ಲಿ ಇಂದು ಬಹಳ ಮಂಗಳಕರವಾಗಿದೆ. ಇಂದು ನೀವು ಆತ್ಮವಿಶ್ವಾಸದಿಂದ ಕೂಡಿರುತ್ತೀರಿ. ನೀವು ಉದ್ಯಮಿಯಾಗಿದ್ದರೆ ಮತ್ತು ಯಾವುದೇ ರೀತಿಯ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ, ಚೆನ್ನಾಗಿ ಯೋಚಿಸಿದ ನಂತರ ನಿಮ್ಮ ನಿರ್ಧಾರವನ್ನು ತೆಗೆದುಕೊಳ್ಳಲು ಸಲಹೆ ನೀಡಲಾಗಿದೆ. ಸಂಗಾತಿಯ ನಡವಳಿಕೆ ಮನಸ್ಸಿಗೆ ನೋವಾಗಬಹುದು, ಆದರೆ ತಾಳ್ಮೆಯಿಂದ ಪರಿಸ್ಥಿತಿ ನಿಭಾಯಿಸಿ. ನಿಮ್ಮ ಆರೋಗ್ಯದ ಬಗ್ಗೆ ಹೇಳುವುದಾದರೆ ಮೂಳೆಗೆ ಸಂಬಂಧಿಸಿದ ಸಮಸ್ಯೆ ಇರಬಹುದು.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಬೆಳಿಗ್ಗೆ 10 ರಿಂದ ಸಂಜೆ 7 ರವರೆಗೆ
ಕುಂಭ ರಾಶಿ
ಅಧಿಕ ಕೆಲಸದ ಒತ್ತಡ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಕೆಲಸದ ಜೊತೆಗೆ ನಿಮ್ಮ ಆರೋಗ್ಯದ ಕಡೆಗೆ ಗಮನಕೊಡಿ. ಈ ದಿನ ಹಣಕಾಸಿನ ವಿಷಯದಲ್ಲಿ ಯಾವುದೇ ಚಿಂತೆಯಿಲ್ಲ. ಮನೆಯ ವಾತಾವರಣ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಬೆಳಿಗ್ಗೆ 7:20 ರಿಂದ ಮಧ್ಯಾಹ್ನ 3 ರವರೆಗೆ
ಮೀನ ರಾಶಿ
ರಿಯಲ್ ಎಸ್ಟೇಟ್ ಕೆಲಸ ಮಾಡುವವರಿಗೆ ಇಂದು ತುಂಬಾ ಪ್ರಯೋಜನಕಾರಿಯಾಗಲಿದೆ. ಸ್ವಲ್ಪ ದಿನದಿಂದ ಉದ್ಯೋಗದೊಂದಿಗೆ ನಿಮ್ಮ ಸ್ವಂತ ವ್ಯವಹಾರವನ್ನು ಪ್ರಾರಂಭಿಸಲು ಯೋಜಿಸುತ್ತಿದ್ದರೆ, ಇಂದು ನಿಮಗೆ ಉತ್ತಮ ಅವಕಾಶ ಸಿಗುತ್ತದೆ. ಹಣದ ವಿಷಯದಲ್ಲಿ ಇಂದು ನಿಮಗೆ ಉತ್ತಮವಾಗಿದೆ. ನಿಮ್ಮ ಸಂಚಿತ ಬಂಡವಾಳದಲ್ಲಿ ಹೆಚ್ಚಳವಾಗಬಹುದು. ಇದಲ್ಲದೆ, ನೀವು ಹೊಸ ಆದಾಯದ ಮೂಲವನ್ನು ಪಡೆಯುವ ಸಾಧ್ಯತೆಯಿದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಮಧ್ಯಾಹ್ನ 12 ರಿಂದ ರಾತ್ರಿ 9 ರವರೆಗೆ



Click it and Unblock the Notifications










