Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
Horoscope Today 26 March 2023: ಭಾನುವಾರ: ಈ ದಿನ ಯಾವ ರಾಶಿಗಳಿಗೆ ಶುಭ, ಯಾರಿಗಲ್ಲ
ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಮಾರ್ಚ್ 26ರ ರಾಶಿಫಲ ನೋಡೋಣ:

ಮೇಷ ರಾಶಿ
ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿರುತ್ತದೆ. ವ್ಯಾಪಾರಸ್ಥರಿಗೆ ಲಾಭದ ಸಾಧ್ಯತೆಗಳಿವೆ. ದಿನದ ಎರಡನೇ ಭಾಗದಲ್ಲಿ, ನೀವು ದೊಡ್ಡ ಆರ್ಥಿಕ ಲಾಭವನ್ನು ಮಾಡುವ ಸಾಧ್ಯತೆಯಿದೆ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ಖರ್ಚು ಕೂಡ ಅಧಿಕ ಇರಲಿದೆ. ಆರೋಗ್ಯದ ವಿಷಯದಲ್ಲಿ, ದಿನವು ಏರಿಳಿತಗಳಿಂದ ತುಂಬಿರುತ್ತದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 14
ಅದೃಷ್ಟದ ಸಮಯ: ಬೆಳಗ್ಗೆ 8:30 ರಿಂದ ಸಂಜೆ 6 ರವರೆಗೆ
ವೃಷಭ ರಾಶಿ
ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ನಿಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಇಂದು ನೀವು ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ಕೆಲಸದ ವಿಷಯದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಮಾಡಬೇಡಿ. ಕೆಲಸದ ಕಡೆ ಗಮನ ಹರಿಸಬೇಕಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ದಿನವು ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಗಾಢ ಕೆಂಪು
ಅದೃಷ್ಟದ ಸಂಖ್ಯೆ: 28
ಅದೃಷ್ಟದ ಸಮಯ: ಬೆಳಗ್ಗೆ 10 ರಿಂದ ಮಧ್ಯಾಹ್ನ 3:30 ರವರೆಗೆ
ಮಿಥುನ ರಾಶಿ
ಇಂದು ಮಾನಸಿಕ ಒತ್ತಡ ಇರಲಿದೆ. ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳದಂತೆ ಸಲಹೆ ನೀಡಲಾಗಿದೆ. ಇಂದು ವ್ಯಾಪಾರಸ್ಥರಿಗೆ ತುಂಬಾ ಒತ್ತಡದ ದಿನವಾಗಿರುತ್ತದೆ. ಈ ದಿನ ಯಾವುದೇ ಕೆಲಸದ ಒತ್ತಡ ಇರಲಿದೆ. ಹಣದ ವಿಷಯದಲ್ಲಿ ಈ ದಿನ ಮಿಶ್ರಫಲ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 22
ಅದೃಷ್ಟದ ಸಮಯ: ಬೆಳಗ್ಗೆ 7:30 ರಿಂದ ಮಧ್ಯಾಹ್ನ 3:40 ರವರೆಗೆ
ಕರ್ಕ ರಾಶಿ
ವ್ಯಾಪಾರಸ್ಥರಿಗೆ ಈ ದಿನ ಒಳ್ಳೆಯದಿದೆ. ಉದ್ಯೋಗಿಗಳಿಗೆ ಕೋಪ ನಿಯಂತ್ರಿಸಲು ಸಲಹೆ ನೀಡಲಾಗಿದೆ. ಖರ್ಚು ಅಧಿಕವಾಗಬಹುದು. ನಿಮ್ಮ ಖರ್ಚುಗಳನ್ನು ನಿಯಂತ್ರಿಸಲು ಸಲಹೆ ನೀಡಲಾಗಿದೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ಆಯಾಸ ಹೆಚ್ಚಾಗಲಿದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 28
ಅದೃಷ್ಟದ ಸಮಯ: ಮಧ್ಯಾಹ್ನ 12:30 ರಿಂದ ಸಂಜೆ 6:15 ರವರೆಗೆ
ಸಿಂಹ ರಾಶಿ
ಈ ದಿನ ನಿಮ್ಮ ದೊಡ್ಡ ಚಿಂತೆ ದೂರಾಗಲಿದೆ. ನೀವು ದೀರ್ಘಕಾಲದವರೆಗೆ ನಿಮ್ಮ ಆದಾಯವನ್ನು ಹೆಚ್ಚಿಸಲು ಪ್ರಯತ್ನಿಸುತ್ತಿದ್ದರೆ, ನಿಮ್ಮ ಪ್ರಯತ್ನಗಳನ್ನು ವೇಗಗೊಳಿಸಲು ನಿಮಗೆ ಸಲಹೆ ನೀಡಲಾಗುತ್ತದೆ. ಶೀಘ್ರದಲ್ಲೇ ನೀವು ಯಶಸ್ಸನ್ನು ಪಡೆಯುತ್ತೀರಿ. ಉದ್ಯಮಿಗಳಿಗೆ ಇಂದು ಸವಾಲಿನ ದಿನವಾಗಿರಲಿದೆ. ಉದ್ಯೋಗದಲ್ಲಿ ಹೆಚ್ಚಿನ ಗಮನಹರಿಸಿ. ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಗಾಢ ಹಳದಿ
ಅದೃಷ್ಟದ ಸಂಖ್ಯೆ: 8
ಅದೃಷ್ಟದ ಸಮಯ: ಸಂಜೆ 5:15 ರಿಂದ ರಾತ್ರಿ 9:20 ರವರೆಗೆ
ಕನ್ಯಾ ರಾಶಿ
ನಿಮ್ಮ ಕೆಲ ಕೆಲಸಗಳು ಅಪೂರ್ಣವಾಗಿ ಉಳಿಯಬಹುದು, ಆದರೆ ನಿರ್ಲಕ್ಷ್ಯ ಮಾಡಬೇಡಿ. ನೀವು ಉದ್ಯಮಿಯಾಗಿದ್ದರೆ ಮತ್ತು ನಿಮ್ಮ ವ್ಯವಹಾರವನ್ನು ಮುಂದುವರಿಸಲು ಬ್ಯಾಂಕ್‌ನಿಂದ ಸಾಲವನ್ನು ತೆಗೆದುಕೊಳ್ಳಲು ಯೋಚಿಸುತ್ತಿದ್ದರೆ ದೊಡ್ಡ ಸಾಲ ತೆಗೆಯದಂತೆ ಸೂಚಿಸಲಾಗಿದೆ. ಸಂಗಾತಿಯೊಂದಿಗಿನ ಭಿನ್ನಾಭಿಪ್ರಾಯಗಳು ಮತ್ತಷ್ಟು ಹೆಚ್ಚಾಗಬಹುದು. ಹಣದ ವಿಷಯದಲ್ಲಿ, ದಿನವು ಸರಾಸರಿಯಾಗಿರುತ್ತದೆ. ಆರೋಗ್ಯ ಸಂಬಂಧಿ ಸಮಸ್ಯೆ ಇರಬಹುದು.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 6
ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 8:15 ರವರೆಗೆ
ತುಲಾ ರಾಶಿ
ನಿಮ್ಮ ವೃತ್ತಿಗೆ ಸಂಬಂಧಿತ ಸಮಸ್ಯೆಯು ಇಂದು ಬಗೆಹರಿಸಲ್ಪಡುತ್ತದೆ . ನೀವು ಸಣ್ಣ ವ್ಯಾಪಾರ ಮಾಡುತ್ತಿದ್ದರೆ ಸರ್ಕಾರದ ಯೋಜನೆಗಳಿಂದ ಉತ್ತಮ ಲಾಭ ಪಡೆಯಬಹುದು. ಹಣಕಾಸಿನ ಪರಿಸ್ಥಿತಿಯಲ್ಲಿ ಸುಧಾರಣೆಯ ಬಲವಾದ ಸಾಧ್ಯತೆಯಿದೆ. ಆದರೆ ಹಣವನ್ನು ಮಿತಿ ಮೀರಿ ಖರ್ಚು ಮಾಡಬೇಡಿ. ಕುಟುಂಬ ಜೀವನದಲ್ಲಿ ಖುಷಿ ಇರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಕೆಲಸದ ಕಾರಣ ಮಾನಸಿಕ ಒತ್ತಡ ಅಧಿಕವಿರುತ್ತದೆ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 31
ಅದೃಷ್ಟದ ಸಮಯ: ಬೆಳಗ್ಗೆ 10:30 ರಿಂದ ಸಂಜೆ 4:50 ರವರೆಗೆ
ವೃಶ್ಚಿಕ ರಾಶಿ
ಇಂದು ನೀವು ವಾಹನವನ್ನು ಬಳಸುವಾಗ ಸಂಪೂರ್ಣ ಕಾಳಜಿ ವಹಿಸಲು ಸಲಹೆ ನೀಡಲಾಗಿದೆ. ವ್ಯಾಪಾರಸ್ಥರು ನಿರೀಕ್ಷೆಯ ಲಾಭ ಗಳಿಸದೆ ಇರಬಹುದು, ಆದರೆ ಚಿಂತಿಸಬೇಕಾಗಿಲ್ಲ, ಶೀಘ್ರದಲ್ಲಿಯೇ ಎಲ್ಲವೂ ಸರಿಯಾಗಲಿದೆ. ಹಣದ ವಿಷಯದಲ್ಲಿ ದಿನವು ಸರಾಸರಿಯಾಗಲಿದೆ. ನಿಮ್ಮ ಬಜೆಟ್‌ಗೆ ಅನುಗುಣವಾಗಿ ಖರ್ಚು ಮಾಡಬೇಕಾಗುತ್ತದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಗಾಢ ನೀಲಿ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ಸಮಯ: ಸಂಜೆ 4:30 ರಿಂದ ರಾತ್ರಿ 9:05 ರವರೆಗೆ
ಧನು ರಾಶಿ
ಇಂದು ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ, ನೀವು ನಿಮ್ಮ ಕೆಲಸ ಕಾರ್ಯಗಳಲ್ಲಿ ಅಧಿಕ ಗಮನಹರಿಸಿ, ನಿರ್ಲಕ್ಷ್ಯ ಮಾಡಬೇಡಿ. ಇಂದು, ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರು ತಮ್ಮ ನಿರ್ಧಾರಗಳನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಿ. ನಿಮ್ಮ ಮನೆಯಲ್ಲಿ ವಯಸ್ಸಾದವರು ಇದ್ದರೆ ಅವರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 21
ಅದೃಷ್ಟದ ಸಮಯ: ಬೆಳಗ್ಗೆ 8:30 ರಿಂದ ಮಧ್ಯಾಹ್ನ 3 ರವರೆಗೆ
ಮಕರ ರಾಶಿ
ದಾಂಪತ್ಯ ಜೀವನದಲ್ಲಿ ಖುಷಿ ಇರಲಿದೆ. ಉದ್ಯೋಗಿಗಳಿಗೆ ಈ ದಿನ ಸಾಮಾನ್ಯವಾಗಿರಲಿದೆ. ಹಣದ ವಿಷಯದಲ್ಲಿ ದಿನವು ಉತ್ತಮವಾಗಿರುತ್ತದೆ. ಆರ್ಥಿಕ ಪರಿಸ್ಥಿತಿ ಚೆನ್ನಾಗಿರಲಿದೆ. ಆರೋಗ್ಯವಾಗಿರಲು, ನಿಮ್ಮ ಆಹಾರ ಪದ್ಧತಿಯಲ್ಲಿ ನೀವು ಕೆಲವು ಬದಲಾವಣೆಗಳನ್ನು ಮಾಡಬೇಕಾಗುತ್ತದೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: ಬೆಳಗ್ಗೆ 10 ರಿಂದ ಮಧ್ಯಾಹ್ನ 1:30 ರವರೆಗೆ
ಕುಂಭ ರಾಶಿ
ಈ ದಿನ ಮಾನಸಿಕವಾಗಿ ನೀವು ತುಂಬಾ ದೃಢವಾಗಿರುತ್ತೀರಿ ಮತ್ತು ನಿಮ್ಮ ನಿರ್ಧಾರಗಳನ್ನು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳುತ್ತೀರಿ. ನೀವು ವ್ಯಾಪಾರಸ್ಥರಾಗಿದ್ದರೆ ಇಂದು ನಿಮಗೆ ಲಾಭ ಗಳಿಸುತ್ತೀರಿ. ಕಡಿಮೆ ಶ್ರಮದಿಂದ ಉತ್ತಮ ಯಶಸ್ಸನ್ನು ಪಡೆಯುತ್ತೀರಿ. ಉದ್ಯೋಗಿಗಳಿಗೆ ಈ ದಿನ ಚೆನ್ನಾಗಿರಲಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಇಂದು ಕುಟುಂಬದಲ್ಲಿ ಖುಷಿಯ ವಾತಾವರಣ ಇರಲಿದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಬೆಳಗ್ಗೆ 8 ರಿಂದ ಮಧ್ಯಾಹ್ನ 12:55 ರವರೆಗೆ
ಮೀನ ರಾಶಿ
ದಿನದ ಆರಂಭವು ಉತ್ತಮವಾಗಿರುತ್ತದೆ, ಆದರೆ ಮಧ್ಯಾಹ್ನದ ನಂತರ ಆರೋಗ್ಯದಲ್ಲಿ ಹಠಾತ್ ಕ್ಷೀಣತೆಯಿಂದಾಗಿ ನೀವು ಕೆಲವು ಸಮಸ್ಯೆಗಳನ್ನು ಎದುರಿಸಬಹುದು. ನೀವು ಎಚ್ಚರಿಕೆಯಿಂದ ಇರುವುದು ಉತ್ತಮ. ಕಛೇರಿಯಲ್ಲಿ ಒಂದೇ ಸಮಯದಲ್ಲಿ ಅನೇಕ ಕೆಲಸಗಳನ್ನು ನಿರ್ವಹಿಸಬೇಡಿ. ವ್ಯಾಪಾರಸ್ಥರು ಇಂದು ಯಾವುದೇ ಪ್ರಮುಖ ವ್ಯವಹಾರ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ಸಲಹೆ ನೀಡಲಾಗಿದೆ. ಈ ದಿನ ಖರ್ಚು ಹೆಚ್ಚಿರಲಿದೆ.
ಅದೃಷ್ಟದ ಬಣ್ಣ: ಕೇಸರಿ
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಬೆಳಗ್ಗೆ 9:20 ರಿಂದ ಮಧ್ಯಾಹ್ನ 3 ರವರೆಗೆ



Click it and Unblock the Notifications










