Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
Horoscope Today 28 March 2023: ಮಂಗಳವಾರ: ವೃಶ್ಚಿಕ , ಮಕರ ರಾಶಿಯವರಿಗೆ ಶುಭ ದಿನ, ಉಳಿದವರ ರಾಶಿಫಲ ಹೇಗಿದೆ?
ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಮಾರ್ಚ್ 28ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ಉತ್ತರಾಯಣ
ಋತು: ವಸಂತ
ಮಾಸ: ಚೈತ್ರ
ಪಕ್ಷ: ಶುಕ್ಲಪಕ್ಷ
ತಿಥಿ: ಸಪ್ತಮಿ
ನಕ್ಷತ್ರ: ಮೃಗಶೀರ್ಷ
ರಾಹುಕಾಲ: ಮಧ್ಯಾಹ್ನ 03:28ರಿಂದ ಸಂಜೆ 04:59ರವರೆಗೆ

ಮೇಷ ರಾಶಿ
ಕೆಲಸದ ದೃಷ್ಟಿಯಿಂದ ನೋಡುವುದಾದರೆ ಈ ದಿನ ಅನುಕೂಲಕರವಲ್ಲ. ಇಂದು ಚಿಕ್ಕ ತಪ್ಪಿನಿಂದ ದೊಡ್ಡ ನಷ್ಟವಾಗಬಹುದು, ಜಾಗ್ರತೆವಹಿಸಿ. ವ್ಯಾಪಾರಸ್ಥರಿಗೆ ತಕ್ಕ ಲಾಭ ದೊರೆಯಲಿದೆ. ಸಂಗಾತಿ ಜೊತೆ ಮನಸ್ತಾಪ ಇರಬಹುದು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಆರೋಗ್ಯ ದುರ್ಬಲವಾಗಿರಬಹುದು.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 26
ಅದೃಷ್ಟದ ಸಮಯ: ಸಂಜೆ 7 ರಿಂದ 8:20 ರವರೆಗೆ
ವೃಷಭ ರಾಶಿ
ವೃಷಭ ರಾಶಿಯ ವಿದ್ಯಾರ್ಥಿಗಳಿಗೆ ಇಂದು ಅತ್ಯಂತ ಮಹತ್ವದ ದಿನವಾಗಲಿದೆ. ಪರೀಕ್ಷೆಯಲ್ಲಿ ನೀವು ಅದ್ಭುತ ಯಶಸ್ಸನ್ನು ಸಾಧಿಸಬಹುದು. ಇಂದು ಹಣದ ವಿಷಯದಲ್ಲಿ ತುಂಬಾ ದುಬಾರಿಯಾಗಲಿದೆ. ಸಾಲ ಕೂಡ ಮಾಡಬೇಕಾಗಬಹುದು. ಉದ್ಯಮಿಗಳು ಈ ದಿನ ಯಾವುದೇ ದೊಡ್ಡ ಹೂಡಿಕೆ ಮಾಡುವುದನ್ನು ತಪ್ಪಿಸಬೇಕು. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ಆರೋಗ್ಯದ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 19
ಅದೃಷ್ಟದ ಸಮಯ: ಮಧ್ಯಾಹ್ನ 3 ರಿಂದ ರಾತ್ರಿ 9 ರವರೆಗೆ
ಮಿಥುನ ರಾಶಿ
ಇಂದು ಸಂಗಾತಿಯೊಂದಿಗೆ ಯಾವುದೋ ವಿಚಾರದಲ್ಲಿ ವಾಗ್ವಾದ ಉಂಟಾಗಬಹುದು. ಆದರೆ ತಾಳ್ಮೆಯಿಂದ ಪರಿಸ್ಥಿತಿ ನಿಭಾಯಿಸಿ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಲಕ್ಷಣಗಳಿವೆ. ನಿಮ್ಮ ಆರ್ಥಿಕ ಪ್ರಯತ್ನ ಯಶಸ್ವಿಯಾಗಬಹುದು. ಆತುರದಿಂದ ಯಾವುದೇ ಹಣಕಾಸಿನ ವಹಿವಾಟುಗಳನ್ನು ಮಾಡಬೇಡಿ. ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ಸಮಯ: ಬೆಳಗ್ಗೆ 10 ರಿಂದ ಮಧ್ಯಾಹ್ನ 1:20 ರವರೆಗೆ
ಕರ್ಕ ರಾಶಿ
ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರಿಗೆ ಇಂದು ಬಹಳ ಸವಾಲಿನ ದಿನ. ತರಾತುರಿಯಲ್ಲಿ ಯಾವುದೇ ಕೆಲಸ ಮಾಡುವುದನ್ನು ತಪ್ಪಿಸಿ. ಉದ್ಯೋಗಿಗಳಿಗೆ ಈ ದಿನವು ಸಾಮಾನ್ಯವಾಗಿರುತ್ತದೆ. ಆರ್ಥಿಕ ದೃಷ್ಟಿಯಿಂದ ನೋಡುವುದಾದರೆ ಇಂದು ಉತ್ತಮವಾಗಿದೆ. ಆರೋಗ್ಯ ಸಮಸ್ಯೆ ಇದ್ದರೆ ನಿರ್ಲಕ್ಷ್ಯ ಮಾಡಬೇಡಿ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 6
ಅದೃಷ್ಟದ ಸಮಯ: ಬೆಳಿಗ್ಗೆ 7:50 ರಿಂದ ರಾತ್ರಿ 8:18 ರವರೆಗೆ
ಸಿಂಹ ರಾಶಿ
ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ, ಆದರೆ ತುಂಬಾ ಖರ್ಚು ಮಾಡಲು ಹೋಗಬೇಡಿ. ಉದ್ಯೋಗವಿರಲಿ, ವ್ಯವಹಾರವಿರಲಿ, ನಿಮ್ಮ ಶ್ರಮಕ್ಕೆ ತಕ್ಕ ಫಲಿತಾಂಶ ಸಿಗುತ್ತದೆ. ಆರೋಗ್ಯದ ದೃಷ್ಟಿಯಿಂದ ಇಂದು ಉತ್ತಮ ದಿನವಾಗಿರುತ್ತದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಸಮಯ: ಬೆಳಿಗ್ಗೆ 10 ರಿಂದ ಮಧ್ಯಾಹ್ನ 12:55 ರವರೆಗೆ
ಕನ್ಯಾ ರಾಶಿ
ನೀವು ವಿದೇಶಕ್ಕೆ ಹೋಗಿ ಉದ್ಯೋಗ ಮಾಡಲು ಬಯಸಿದರೆ, ಇಂದು ನಿಮಗೆ ಬಹಳ ಮುಖ್ಯವಾಗಿರುತ್ತದೆ. ನೀವು ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ಉದ್ಯಮಿಗಳು ಇಂದು ಆತುರದಿಂದ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ನೀವು ಹೊಸ ಕೆಲಸವನ್ನು ಪ್ರಾರಂಭಿಸಲಿದ್ದರೆ ಕೆಲ ಅಡಚಣೆಗಳ ಸಾಧ್ಯತೆ ಇದೆ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯಗಳಿರಲಿದೆ. ಆರೋಗ್ಯ ಬಗ್ಗೆ ಹೇಳುವುದಾದರೆ ಹೊಟ್ಟೆ ಸಂಬಂಧಿಸಿದ ಸಮಸ್ಯೆ ಇರಬಹುದು.
ಅದೃಷ್ಟದ ಬಣ್ಣ: ಗಾಢ ಕೆಂಪು
ಅದೃಷ್ಟದ ಸಂಖ್ಯೆ: 17
ಅದೃಷ್ಟದ ಸಮಯ: ಮಧ್ಯಾಹ್ನ 12 ರಿಂದ 2:30 ರವರೆಗೆ
ತುಲಾ ರಾಶಿ
ಈ ದಿನ ಯಾವುದೊ ಒಂದು ಚಿಂತೆ ನಿಮ್ಮನ್ನು ತುಂಬಾ ಕಾಡಲಿದೆ. ನೆಗೆಟಿವ್ ಯೋಚನೆ ಮಾಡದಂತೆ ಸಲಹೆ ನೀಡಲಾಗಿದೆ. ಕಚೇರಿಯಲ್ಲಿ ಬಾಕಿ ಉಳಿದಿರುವ ಕೆಲಸಗಳು ಪೂರ್ಣಗೊಳ್ಳಲಿವೆ. ಮತ್ತೊಂದೆಡೆ, ಉದ್ಯಮಿಗಳು ಲಾಭ ಗಳಿಸಲು ಕಷ್ಟಪಡಬೇಕಾಗಬಹುದು.ಆರ್ಥಿಕ ಸ್ಥಿತಿ ಸಾಮಾನ್ಯವಾಗಿರಲಿದೆ.
ಅದೃಷ್ಟದ ಬಣ್ಣ: ತಿಳಿ ಗುಲಾಬಿ
ಅದೃಷ್ಟದ ಸಂಖ್ಯೆ: 34
ಅದೃಷ್ಟದ ಸಮಯ: ಬೆಳಿಗ್ಗೆ 5:25 ರಿಂದ ಮಧ್ಯಾಹ್ನ 2:15 ರವರೆಗೆ
ವೃಶ್ಚಿಕ ರಾಶಿ
ಆರೋಗ್ಯ ಚೆನ್ನಾಗಿರಲಿದೆ. ಕೆಲಸ ಕಾರ್ಯಗಳು ನಿಮ್ಮ ಯೋಜನೆಯಂತೆಯೇ ನಡೆಯಲಿದೆ. ಕುಟುಂಬ ಜೀವನದಲ್ಲಿ ಸಂತೋಷ ಇರಲಿದೆ. ಹಣದ ಬಗ್ಗೆ ಹೇಳುವಾಗ ಮಿತಿಯಲ್ಲಿ ಖರ್ಚು ಮಾಡಿ, ಇಲ್ಲದಿದ್ದರೆ ಹಣದ ಸಮಸ್ಯೆ ಉಂಟಾಗಬಹುದು.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 10
ಅದೃಷ್ಟದ ಸಮಯ: ಮಧ್ಯಾಹ್ನ 1:55 ರಿಂದ ಸಂಜೆ 6:50 ರವರೆಗೆ
ಧನು ರಾಶಿ
ನೀವು ಇತ್ತೀಚೆಗೆ ಕೆಲಸಕ್ಕೆ ಸಂಬಂಧಿಸಿದ ಪ್ರವಾಸವನ್ನು ಕೈಗೊಂಡಿದ್ದರೆ, ಇಂದು ಅದರ ಪ್ರಯೋಜನ ಪಡೆಯುವಿರಿ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಸೌಕರ್ಯಗಳು ಹೆಚ್ಚಾಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಖುಷಿಯ ವಾತಾವರಣ ಇರಲಿದೆ. ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಬೆಳಗ್ಗೆ 8:30 ರಿಂದ ಮಧ್ಯಾಹ್ನ 12:50 ರವರೆಗೆ
ಮಕರ ರಾಶಿ
ಸ್ವಾರ್ಥಿಗಳೊಂದಿಗೆ ಜಾಗರೂಕರಾಗಿರಿ, ಇಲ್ಲದಿದ್ದರೆ ಅವರಿಂದ ತೊಂದರೆ ಉಂಟಾಗಬಹುದು. ಇಂದು ಉದ್ಯಮಿಗಳಿಗೆ ಬಹಳ ವಿಶೇಷವಾದ ದಿನವಾಗಿರುತ್ತದೆ. ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆ ಬಗೆಹರಿಯಲಿದೆ. ಮನೆಯ ವಾತಾವರಣ ಶಾಂತವಾಗಿರುತ್ತದೆ. ಪೋಷಕರ ಆಶೀರ್ವಾದ ಸಿಗಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗುವ ಸಾಧ್ಯತೆ ಇದೆ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ಸಮಯ: ಬೆಳಿಗ್ಗೆ 9 ರಿಂದ ರಾತ್ರಿ 9 ರವರೆಗೆ
ಕುಂಭ ರಾಶಿ
ಇಂದು ಕೆಲಸದಲ್ಲಿ ತುಂಬಾ ಕಾರ್ಯನಿರತವಾಗಿರುವಿರಿ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಇಂದು ನೀವು ಹೆಚ್ಚು ಉಳಿಸಲು ಸಾಧ್ಯವಾಗುತ್ತದೆ. ನಿಮಗೆ ಮೂತ್ರಪಿಂಡಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆ ಇದ್ದರೆ, ನಿರ್ಲಕ್ಷ್ಯ ಮಾಡಬೇಡಿ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 40
ಅದೃಷ್ಟದ ಸಮಯ: ಬೆಳಿಗ್ಗೆ 8 ರಿಂದ ಸಂಜೆ 5 ರವರೆಗೆ
ಮೀನ ರಾಶಿ
ಕಚೇರಿಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ಇಂದು ನಿಮ್ಮ ಎಲ್ಲಾ ಕೆಲಸಗಳು ಯಾವುದೇ ಅಡೆತಡೆಗಳಿಲ್ಲದೆ ಪೂರ್ಣಗೊಳ್ಳುತ್ತವೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ. ನಿಮ್ಮ ಬಜೆಟ್ ಅನ್ನು ಗಮನದಲ್ಲಿಟ್ಟುಕೊಂಡು ಖರ್ಚು ಮಾಡಿದರೆ ಅದು ಉತ್ತಮವಾಗಿರುತ್ತದೆ. ನಿಮ್ಮ ಕುಟುಂಬಕ್ಕೂ ಸ್ವಲ್ಪ ಸಮಯ ಕೊಡಿ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ, ಹೆಚ್ಚು ಚಹಾ ಮತ್ತು ಕಾಫಿ ಸೇವಿಸುವುದನ್ನು ತಪ್ಪಿಸಿ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 29
ಅದೃಷ್ಟದ ಸಮಯ: ಬೆಳಿಗ್ಗೆ 10 ರಿಂದ ಮಧ್ಯಾಹ್ನ 1:20 ರವರೆಗೆ



Click it and Unblock the Notifications
