Horoscope Today 10 May 2023: ಬುಧವಾರ: ಈ ದಿನ 12 ರಾಶಿಗಳ ರಾಶಿಫಲ ಹೇಗಿದೆ?

ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಮೇ‌ 10ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ಉತ್ತರಾಯಣ
ಋತು: ವಸಂತ
ಮಾಸ: ಜ್ಯೇಷ್ಠ
ಪಕ್ಷ: ಕೃಷ್ಣಪಕ್ಷ
ತಿಥಿ: ಪಂಚಮಿ
ನಕ್ಷತ್ರ: ಪೂರ್ವ ಆಷಾಢ
ರಾಹುಕಾಲ: ಮಧ್ಯಾಹ್ನ12:18ರಿಂದ 01:59ರವರೆಗೆ

ಮೇಷ ರಾಶಿ
ಆರ್ಥಿಕವಾಗಿಈ ದಿನ ನಿಮಗೆ ಚೆನ್ನಾಗಿದೆ. ಈ ದಿನ ನೀವು ನಿಮ್ಮ ಕೈಯಲ್ಲಾದ ದಾನ ಕೂಡ ಮಾಡಬಹುದು. ಕುಟುಂಬ ಜೀವನದಲ್ಲಿ ಖುಷಿ ಇರಲಿದೆ. ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನಗಳು ಯಶಸ್ವಿಯಾಗುತ್ತವೆ , ನಿಮ್ಮ ಎಲ್ಲಾ ಕೆಲಸಗಳು ನಿಮ್ಮ ಯೋಜನೆಯ ಪ್ರಕಾರ ಪೂರ್ಣಗೊಳ್ಳುತ್ತದೆ. ಈ ದಿನ ಆರೋಗ್ಯ ಕೂಡ ತುಂಬಾ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಸಂಜೆ 4:35 ರಿಂದ ರಾತ್ರಿ 8 ರವರೆಗೆ

Dina Bhavishya -May 10 2023 Today Rashi Bhavishya, Daily Horoscope in Kannada

ವೃಷಭ ರಾಶಿ
ನೀವು ವ್ಯಾಪಾರಸ್ಥರಾಗಿದ್ದರೆ ಮತ್ತು ಇಂದು ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಿದರೆ ಅದರಲ್ಲಿ ನೀವು ನಿರೀಕ್ಷಿತ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆಯಿದೆ. ಉದ್ಯೋಗಸ್ಥರಿಗೆ ಮೇಲಾಧಿಕಾರಿಗಳ ಸಲಹೆ ದೊರೆಯುವುದರಿಂದ ನಿಮ್ಮ ಕೆಲಸ ಕಾರ್ಯ ಪೂರ್ಣಗೊಳಿಸಲು ಸುಲಭವಾಗುವುದು. ಸಂಗಾತಿ ಜೊತೆ ಏನಾದರೂ ಭಿನ್ನಾಭಿಪ್ರಾಯವಿದ್ದರೆ ಮಾತನಾಡುವ ಮೂಲಕ ಕೊನೆಗೊಳಿಸಲು ಪ್ರಯತ್ನಿಸಿ. ಹಣದ ಪರಿಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳಿರಬಹುದು.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಬೆಳಿಗ್ಗೆ 8:10 ರಿಂದ 10:50 ರವರೆಗೆ

ಮಿಥುನ ರಾಶಿ
ಇಂದು ಕೆಲಸದ ಬಗ್ಗೆ ನಿಮ್ಮ ಕಾಳಜಿ ಸ್ವಲ್ಪ ಹೆಚ್ಚಾಗಬಹುದು. ಈ ಸಮಯದಲ್ಲಿ ನೀವು ಅನುಭವಿಗಳ ಮಾರ್ಗದರ್ಶನದ ಅಗತ್ಯವಿದೆ. ತರಾತುರಿಯಲ್ಲಿ ಯಾವುದೇ ಹೆಜ್ಜೆ ಇಡದಿರುವುದು ಉತ್ತಮ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಖರ್ಚು ಮಿತಿಯಲ್ಲಿ ಮಾಡಿ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಆಹ್ಲಾದಕರವಾಗಿರುತ್ತದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಅನಗ್ಯತ ಚಿಂತೆಗಳಿಂದ ಹೊರಬನ್ನಿ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: ಮಧ್ಯಾಹ್ನ 3 ರಿಂದ ಸಂಜೆ 7 ರವರೆಗೆ

ಕರ್ಕ ರಾಶಿ
ಈ ದಿನ ಏರಿಳಿತಗಳಿಂದ ಕೂಡಿರಲಿದೆ. ಮನಸ್ಸಿನಲ್ಲಿ ಅನೇಕ ರೀತಿಯ ನಕಾರಾತ್ಮಕ ಆಲೋಚನೆಗಳು ಬರಬಹುದು. ನಿಮ್ಮ ಭವಿಷ್ಯಕ್ಕೆ ಸಂಬಂಧಿಸಿದ ಯಾವುದೇ ಪ್ರಮುಖ ನಿರ್ಧಾರವನ್ನು ನೀವು ತೆಗೆದುಕೊಳ್ಳುವುದನ್ನು ತಪ್ಪಿಸಲು ಸಲಹೆ ನೀಡಲಾಗಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಇತರರನ್ನು ಮೆಚ್ಚಿಸಲು ನಿಮ್ಮ ಬಜೆಟ್‌ಗಿಂತ ಹೆಚ್ಚು ಖರ್ಚು ಮಾಡುವ ತಪ್ಪನ್ನು ಮಾಡಬೇಡಿ. ಕೆಲಸದಲ್ಲಿ ಈ ದಿನವು ಸಾಮಾನ್ಯವಾಗಿರುತ್ತದೆ. ನಿಮ್ಮ ಶಕ್ತಿಯನ್ನು ಸರಿಯಾದ ಸ್ಥಳದಲ್ಲಿ ಚಾನೆಲೈಸ್ ಮಾಡಬೇಕಾಗಿದೆ. ಸಂಗಾತಿಯ ಭಾವನೆಗಳನ್ನು ಗೌರವಿಸಿ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 15
ಅದೃಷ್ಟದ ಸಮಯ: ಬೆಳಿಗ್ಗೆ 6:45 ರಿಂದ 11:45 ರವರೆಗೆ

ಸಿಂಹ ರಾಶಿ
ಇಂದು ಉದ್ಯೋಗಸ್ಥರಿಗೆ ಸ್ವಲ್ಪ ಸಮಧಾನ ಉಂಟಾಗಬಹುದು. ಕೆಲಸದ ವಿಷಯದಲ್ಲಿ ಶುಭ ಸುದ್ದಿ ಪಡೆಯಬಹುದು. ನೀವು ಉದ್ಯಮಿಯಾಗಿದ್ದರೆ ಮತ್ತು ಹೊಸ ವ್ಯವಹಾರವನ್ನು ಪ್ರಾರಂಭಿಸಲು ಬಯಸಿದರೆ, ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವುದು ನಿಮಗೆ ತುಂಬಾ ಪ್ರಯೋಜನಕಾರಿಯಾಗಿದೆ. ಆರ್ಥಿಕ ಪರಿಸ್ಥಿತಿಯಲ್ಲಿ ಕುಸಿತದ ಸಾಧ್ಯತೆ ಇದೆ. ನಿಮ್ಮ ಆತುರದ ನಿರ್ಧಾರದ ತಪ್ಪು ಫಲಿತಾಂಶವನ್ನು ನೀವು ಅನುಭವಿಸಬೇಕಾಗಬಹುದು. ಕೌಟುಂಬಿಕ ಜೀವನದಲ್ಲಿಸಮಸ್ಯೆಗಳಿರುವುದರಿಂದ ಮಾನಸಿಕ ಒತ್ತಡ ಹೆಚ್ಚಾಗಲಿದೆ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಸಂಜೆ 5:05 ರಿಂದ 7:25 ರವರೆಗೆ

ಕನ್ಯಾ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ. ವ್ಯಾಪಾರಸ್ಥರು ಇಂದು ಅಪೇಕ್ಷಿತ ಲಾಭವನ್ನು ಪಡೆಯಬಹುದು. ಹಣಕಾಸಿನ ಸ್ಥಿತಿ ಉತ್ತಮವಾಗಿರಲಿದೆ. ಅದ್ದೂರಿಯಾಗಿ ಖರ್ಚು ಮಾಡದಂತೆ ಸಲಹೆ ನೀಡಲಾಗಿದೆ. ನೀವು ಹೊಸ ಆದಾಯದ ಮೂಲವನ್ನು ಹುಡುಕುತ್ತಿದ್ದರೆ, ನಿಮ್ಮ ಪ್ರಯತ್ನಗಳನ್ನು ಚುರುಕುಗೊಳಿಸಬೇಕು. ನಿಮ್ಮ ಉತ್ತಮ ಗುಣಗಳು ಮತ್ತು ಕಾರ್ಯಗಳು ಬಹಳವಾಗಿ ಪ್ರಶಂಸಿಸಲ್ಪಡುತ್ತವೆ. ಇಂದು ನೀವು ಉತ್ತಮ ಗೌರವವನ್ನು ಪಡೆಯಬಹುದು. ನೀವು ಸರ್ಕಾರಿ ಕೆಲಸವನ್ನು ಮಾಡಿದರೆ ಉತ್ತಮ ಪ್ರಗತಿ ಕಾಣುವಿರಿ. ವ್ಯಾಪಾರಸ್ಥರು ಇಂದು ಅಪೇಕ್ಷಿತ ಲಾಭವನ್ನು ಪಡೆಯಬಹುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಅದ್ದೂರಿಯಾಗಿ ಖರ್ಚು ಮಾಡದಂತೆ ಸಲಹೆ ನೀಡಲಾಗಿದೆ. ನೀವು ಹೊಸ ಆದಾಯದ ಮೂಲವನ್ನು ಹುಡುಕುತ್ತಿದ್ದರೆ, ನಿಮ್ಮ ಪ್ರಯತ್ನಗಳನ್ನು ಮತ್ತಷ್ಟು ವೇಗಗೊಳಿಸಬೇಕು.

ತುಲಾ ರಾಶಿ
ಕೇವಲ ಅದೃಷ್ಟವನ್ನು ನೆಚ್ಚಿಕೊಂಡರೆ ಏನನ್ನೂ ಸಾಧಿಸಲಾಗುವುದಿಲ್ಲ. ಯಶಸ್ಸನ್ನು ಸಾಧಿಸಲು ಅಷ್ಟೇ ಶ್ರಮ ಕೂಡ ಮುಖ್ಯ. ಇದರ ಹೊರತಾಗಿ, ಅನಗತ್ಯ ಚಿಂತೆಗಳಿಂದ ದೂರವಿರಿ. ನಿಮ್ಮ ಮನಸ್ಸನ್ನು ಶಾಂತವಾಗಿರಿಸಿಕೊಳ್ಳಿ , ಕೌಟುಂಬಿಕ ಜೀವನದಲ್ಲಿ ಯಾವುದೇ ಸಮಸ್ಯೆ ಇರಲ್ಲ. ಹಣದ ಬಗ್ಗೆ ಬಹಳ ಜಾಗರೂಕರಾಗಿರಲು ನಿಮಗೆ ಸಲಹೆ ನೀಡಲಾಗಿದೆ. ಅತಿಯಾದ ಉತ್ಸಾಹದಿಂದ ನಿಮ್ಮ ಬಜೆಟ್‌ಗಿಂತ ಹೆಚ್ಚು ಖರ್ಚು ಮಾಡಬೇಡಿ. ಇದಲ್ಲದೆ, ಹಣಕ್ಕೆ ಸಂಬಂಧಿಸಿದ ವ್ಯವಹಾರಗಳನ್ನು ಮಾಡಲು ಇಂದು ಉತ್ತಮ ದಿನವಲ್ಲ. ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು, ಪ್ರತಿದಿನ ಯೋಗ ಮತ್ತು ಧ್ಯಾನ ಮಾಡಿ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 30
ಅದೃಷ್ಟದ ಸಮಯ: ಸಂಜೆ 6 ರಿಂದ 8:15 ರವರೆಗೆ

ವೃಶ್ಚಿಕ ರಾಶಿ
ಮಕ್ಕಳ ಕಡೆಯಿಂದ ಇಂದು ಕೆಲವು ಒಳ್ಳೆಯ ಸುದ್ದಿಗಳು ಬರಬಹುದು. ಈ ದಿನ ನೀವು ತುಂಬಾ ಸಂತೋಷವಾಗಿರುತ್ತೀರಿ. ಮನೆಯಲ್ಲಿ ವಿವಾಹ ಯೋಗ್ಯ ಸದಸ್ಯರಿದ್ದರೆ ಶೀಘ್ರದಲ್ಲೇ ಮನೆಯಲ್ಲಿ ಶುಭಕಾರ್ಯಕ್ರಮ ಆಯೋಜಿಸಲಾಗುವುದು. ಕಚೇರಿಯಲ್ಲಿನ ಕೆಲಸದ ಬಗ್ಗೆ ನಿರ್ಲಕ್ಷ್ಯ ಬೇಡ. ವ್ಯಾಪಾರಸ್ಥರಿಗೆ ಈ ದಿನ ಅನುಕೂಲಕರವಾಗಿದೆ, ಆದರೆ ಹೂಡಿಕೆ ಮಾಡುವುದಾದರೆ ಸರಿಯಾಗಿ ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ. ಆರೋಗ್ಯದ ದೃಷ್ಟಿಯಿಂದ ದಿನವು ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 28
ಅದೃಷ್ಟದ ಸಮಯ: ಬೆಳಿಗ್ಗೆ 8 ರಿಂದ 11:20 ರವರೆಗೆ

ಧನು ರಾಶಿ
ನೀವು ವಿದ್ಯಾರ್ಥಿಯಾಗಿದ್ದರೆ ಮತ್ತು ನಿಮ್ಮ ಅಧ್ಯಯನದಲ್ಲಿ ಯಾವುದೇ ಅಡಚಣೆ ಉಂಟಾದರೆ, ನೀವು ನಿಮ್ಮ ಶಿಕ್ಷಕರ ಮಾರ್ಗದರ್ಶನ ಪಡೆಯಿರಿ, ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ಸಾಲವಿದ್ದರೆ ಮರುಪಾವತಿಸಲು ಒತ್ತಡ ಬರಬಹುದು. ಕಚೇರಿಯಲ್ಲಿ ನೀವಾಡುವ ಮಾತಿನ ಬಗ್ಗೆ ಜಾಗ್ರತೆ. ವ್ಯಾಪಾರಸ್ಥರು ಹೊಸ ಒಪ್ಪಂದವನ್ನು ಮಾಡಿಕೊಳ್ಳುವ ಅವಕಾಶವನ್ನು ಪಡೆಯಬಹುದು. ವಿಶೇಷವಾಗಿ ನೀವು ಆಸ್ತಿಗೆ ಸಂಬಂಧಿಸಿದ ಕೆಲಸ ಮಾಡುತ್ತಿದ್ದರೆ ಇಂದು ಲಾಭದಾಯಕವಾಗಿರುತ್ತದೆ. ಆರೋಗ್ಯದ ವಿಷಯದಲ್ಲಿ ಈ ದಿನ ಮಿಶ್ರಫಲ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 14
ಅದೃಷ್ಟದ ಸಮಯ: ಬೆಳಿಗ್ಗೆ 4:05 ರಿಂದ 7:45 ರವರೆಗೆ

ಮಕರ ರಾಶಿ
ಬಿಡುವಿಲ್ಲದ ಕಾರಣ, ಇಂದು ನೀವು ನಿಮ್ಮ ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆಯಲು ಸಾಧ್ಯವಾಗುವುದಿಲ್ಲ. ಆದರೆ, ಸಂಬಂಧಗಳಲ್ಲಿ ಉತ್ತಮ ಹೊಂದಾಣಿಕೆಯ ಕಾರಣ, ಯಾವುದೇ ರೀತಿಯ ಸಮಸ್ಯೆ ಇರುವುದಿಲ್ಲ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಲಕ್ಷಣಗಳಿವೆ. ನಿಮ್ಮ ಆದಾಯವು ಹೆಚ್ಚಾಗಬಹುದು, ಆದರೆ ನಿಮ್ಮ ಹಣಕಾಸಿನ ನಿರ್ಧಾರಗಳನ್ನು ನೀವು ಬುದ್ಧಿವಂತಿಕೆಯಿಂದ ತೆಗೆದುಕೊಳ್ಳಬೇಕಾಗುತ್ತದೆ. ಆರೋಗ್ಯ ಕೂಡ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 8:20 ರವರೆಗೆ

ಕುಂಭ ರಾಶಿ
ನೀವು ಸ್ವಲ್ಪ ಸಮಯದಿಂದ ಅಧಿಕ ಕೆಲಸದ ಒತ್ತಡ ಅನುಭವಿಸುತ್ತಿದ್ದರೆ ಈ ದಿನ ಒತ್ತಡ ಕಡಿಮೆಯಾಗಲಿದೆ. ನಿಮಗಾಗಿ ಸಮಯ ಸಿಗಲಿದೆ, ಕುಟುಂಬದ ಜೊತೆ ಸಮಯ ಕಳೆಯುವುದರಿಂದ ಮನೆಯಲ್ಲೂ ಖುಷಿಯ ವಾತಾವರಣ ಇರಲಿದೆ. ಮನೆಯ ಜವಾಬ್ದಾರಿಗಳನ್ನು ಪೂರೈಸುವಲ್ಲಿ ನಿಮ್ಮ ಪ್ರೀತಿಪಾತ್ರರ ಬೆಂಬಲವನ್ನು ನೀವು ಪಡೆಯುತ್ತೀರಿ. ಹಣಕಾಸಿನ ಸ್ಥಿತಿಯು ಬಲವಾಗಿ ಉಳಿಯುತ್ತದೆ. ಆರೋಗ್ಯದ ದೃಷ್ಟಿಯಿಂದಲೂ ಈ ದಿನ ಚೆನ್ನಾಗಿದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 17
ಅದೃಷ್ಟದ ಸಮಯ: ಬೆಳಿಗ್ಗೆ 7 ರಿಂದ 11 ರವರೆಗೆ

ಮೀನ ರಾಶಿ
ಕಚೇರಿಯಲ್ಲಿ ನಿಮ್ಮ ಕಾರ್ಯಕ್ಷಮತೆಯನ್ನು ಮೆಚ್ಚಿಕೊಳ್ಳಲಾಗುವುದು. ಇಂದು ಅವರು ನಿಮಗೆ ಕೆಲವು ಹೊಸ ಮತ್ತು ಪ್ರಮುಖ ಜವಾಬ್ದಾರಿಯನ್ನು ನೀಡಬಹುದು. ವ್ಯಾಪಾರಸ್ಥರಿಗೆ ಈ ದಿನ ಉತ್ತಮವಾಗಿದೆ. ಈ ದಿನ ಹಣದ ಖರ್ಚು ಅಧಿಕವಿರಲಿದೆ. ಸಂಗಾತಿ ಜೊತೆ ಚಿಕ್ಕ ವಿಷಯಕ್ಕೆ ಮನಸ್ತಾಪ ಉಂಟಾಗಬಹುದು. ಹಣದ ವಿಷಯದಲ್ಲಿ, ದಿನವು ಉತ್ತಮವಾಗಿರುತ್ತದೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ, ನೀವು ಕಣ್ಣುಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೊಂದಿರಬಹುದು.
ಅದೃಷ್ಟದ ಬಣ್ಣ: ಗಾಢ ಕೆಂಪು
ಅದೃಷ್ಟದ ಸಂಖ್ಯೆ: 6
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ

English summary

Dina Bhavishya -May 10 2023 Today Rashi Bhavishya, Daily Horoscope in Kannada

Dina Bhavishya- Get Today's Rashi Bhavishy 10 May 2023 In Kannada, Read daily horoscope prediction of aries, taurus, gemini, cancer, leo, virgo, libra, scorpio, Sagittarius, Capricorn, Aquarius, pisces in Kannada.
Story first published: Wednesday, May 10, 2023, 4:00 [IST]
X
Desktop Bottom Promotion