Horoscope Today 15 May 2023: ಸೋಮವಾರ: ಈ ದಿನ ಯಾವ ರಾಶಿಯವರಿಗೆ ಅದೃಷ್ಟ?

ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಮೇ‌ 15ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ಉತ್ತರಾಯಣ
ಋತು: ವಸಂತ
ಮಾಸ: ಜ್ಯೇಷ್ಠ
ಪಕ್ಷ: ಕೃಷ್ಣಪಕ್ಷ
ತಿಥಿ: ಏಕಾದಶಿ
ನಕ್ಷತ್ರ:ಪೂರ್ವಭಾದ್ರಪದ
ರಾಹುಕಾಲ: ಬೆಳಗ್ಗೆ 07:12ರಿಂದ 08:54ರವರೆಗೆ

ಮೇಷ ರಾಶಿ:
ಈ ದಿನ ನಿಗೆ ಉತ್ತಮವಾಗಿದೆ. ನಿಮಗೆ ದೊಡ್ಡ ಕಂಪನಿಯಿಂದ ಕೆಲಸದ ಆಫರ್ ಸಿಗಬಹುದು. ಇದು ನಿಮಗೆ ಸುವರ್ಣಾವಕಾಶವಾಗಬಹುದು. ವ್ಯಾಪಾರಸ್ಥರು ಅಪೇಕ್ಷಿತ ಲಾಭವನ್ನು ಪಡೆಯುವ ಮೂಲಕ ಯಾವುದೇ ದೊಡ್ಡ ಸಮಸ್ಯೆಯನ್ನು ಪರಿಹರಿಸಬಹುದು. ಕುಟುಂಬ ಜೀವನದಲ್ಲಿ ಕೆಲವು ಸಮಸ್ಯೆಗಳಿದ್ದರೂ ಅವೆಲ್ಲವೂ ಶೀಘ್ರದಲ್ಲಿ ಪರಿಹಾರವಾಗಲಿದೆ. ಆರ್ಥಿಕ ಭಾಗ ಈ ದಿನ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ನೀವು ಆರೋಗ್ಯಕರ ಆಹಾರಕ್ರಮದ ಕಡೆ ಗಮನಹರಿಸಿ.
ಅದೃಷ್ಟದ ಬಣ್ಣ: ಗಾಢ ಕೆಂಪು
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ಸಂಜೆ 7 ರವರೆಗೆ

Dina Bhavishya -May 15 2023 Today Rashi Bhavishya, Daily Horoscope in Kannada

ವೃಷಭ ರಾಶಿ
ಈ ದಿನ ನಿಮಗೆ ತುಂಬಾ ಕಾರ್ಯನಿರತವಾಗಿರಲಿದೆ. ಅದು ಉದ್ಯೋಗ ಅಥವಾ ವ್ಯವಹಾರವಾಗಿರಲಿ, ನೀವು ಬಹಳಷ್ಟು ಓಡಬೇಕಾಗಬಹುದು. ಹಣದ ಪರಿಸ್ಥಿತಿ ಉತ್ತಮವಾಗಿರಲಿದೆ. ದಿನನಿತ್ಯದ ಖರ್ಚುಗಳನ್ನು ಸುಲಭವಾಗಿ ಪೂರೈಸಲಾಗುವುದು. ನಿಮ್ಮ ಸಂಗಾತಿಯೊಂದಿಗೆ ಅನಗತ್ಯ ವಾದಗಳನ್ನು ತಪ್ಪಿಸಿ. ನೀವು ಮತ್ತೆ ಪರಸ್ಪರ ಅರ್ಥಮಾಡಿಕೊಳ್ಳಲು ಪ್ರಯತ್ನಿಸಬೇಕು. ಆರೋಗ್ಯಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ಆಯಾಸ ಹೆಚ್ಚಾಗಬಹುದು.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 16
ಅದೃಷ್ಟದ ಸಮಯ: ಬೆಳಿಗ್ಗೆ 4:05 ರಿಂದ ಮಧ್ಯಾಹ್ನ 3:00 ರವರೆಗೆ

ಮಿಥುನ ರಾಶಿ
ಇಂದು ಕಚೇರಿಯ ವಾತಾವರಣ ಅಷ್ಟುಸರಿಯಿರಲ್ಲ. ಕೆಲಸದ ಒತ್ತಡ ಅಧಿಕವಿರಬಹುದು. ಈ ದಿನ ನಿಮ್ಮ ಆತ್ಮವಿಶ್ವಾಸ ಕುಗ್ಗಬಹುದು. ಆದರೆ ನೀವು ಧನಾತ್ಮಕವಾಗಿರಲು ಸಲಹೆ ನೀಡಲಾಗಿದೆ. ನಿಮ್ಮ ಸಾಮರ್ಥ್ಯದಲ್ಲಿ ನಂಬಿಕೆ ಇಡಿ. ವ್ಯಾಪಾರಸ್ಥರಿಗೆ ದಿನವು ಸರಾಸರಿಯಾಗಲಿದೆ. ಮನೆಯ ಸದಸ್ಯರ ಸಂಪೂರ್ಣ ಸಹಕಾರವಿರುತ್ತದೆ. ಇಂದು ತಾಯಿ ಅಥವಾ ತಂದೆಯಿಂದ ಲಾಭ ಸಾಧ್ಯ. ಆರೋಗ್ಯದ ವಿಷಯದಲ್ಲಿ, ದಿನವು ಮಿಶ್ರಫಲ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಬೆಳಿಗ್ಗೆ 6:55 ರಿಂದ ಸಂಜೆ 4 ರವರೆಗೆ

ಕರ್ಕ ರಾಶಿ
ಹಣಕ್ಕೆ ಸಂಬಂಧಿಸಿದ ಚಿಂತೆ ದೂರಾಗಲಿದೆ. ನೀವು ಹಣಕಾಸಿನ ನಿರ್ಧಾರ ಸರಿಯಾಗಿ ತೆಗೆದುಕೊಂಡರೆ ಆರ್ಥಿಕ ಲಾಭವಾಗಲಿದೆ. ಕಛೇರಿಯಲ್ಲಿ ನಿಮ್ಮ ಯಾವುದೇ ಕೆಲಸವನ್ನು ನಾಳೆಯವರೆಗೆ ಮುಂದೂಡಬೇಡಿ, ನಿಮ್ಮ ಎಲ್ಲಾ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ಪ್ರಯತ್ನಿಸಿ. ವ್ಯಾಪಾರಸ್ಥರು ಇಂದು ದೊಡ್ಡ ಗ್ರಾಹಕರೊಂದಿಗೆ ವ್ಯವಹರಿಸಲು ಅವಕಾಶವನ್ನು ಪಡೆಯಬಹುದು. ಆದರೆ ನಿಮ್ಮ ನಾಲಿಗೆಯನ್ನು ನೀವು ನಿಯಂತ್ರಿಸಬೇಕು. ಆತುರದಲ್ಲಿಏನೂ ಹೇಳಬೇಡಿ. ಆರೋಗ್ಯದ ದೃಷ್ಟಿಯಿಂದ ಇಂದು ಸರಾಸರಿ ದಿನವಾಗಲಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಸಂಜೆ 6:15 ರಿಂದ ರಾತ್ರಿ 9 ರವರೆಗೆ

ಸಿಂಹ ರಾಶಿ
ಆರೋಗ್ಯ ಬಗ್ಗೆ ಹೇಳುವುದಾದರೆ ಈ ದಿನ ನಿಮಗೆ ಕಣ್ಣುಗಳಿಗೆ ಸಂಬಂಧಿಸಿದ ಕೆಲವು ಸಮಸ್ಯೆಗಳಿರಬಹುದು. ಯಾವುದೇ ರೀತಿಯಲ್ಲೂ ನಿರ್ಲಕ್ಷ್ಯ ಮಾಡಬೇಡಿ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಈ ಸಮಯ ಅನುಕೂಲಕರವಾಗಿದೆ. ನೀವು ಕಷ್ಟಪಟ್ಟು ಕೆಲಸ ಮಾಡಿದರೆ ಹೆಚ್ಚು ಯಶಸ್ಸು ಸಿಗುತ್ತದೆ. ಹಣದ ವಿಷಯದಲ್ಲಿ ಈ ದಿನವು ಉತ್ತಮವಾಗಿರುತ್ತದೆ. ಯಾರ ಬಳಿ ಸಾಲ ತೆಗೆದುಕೊಳ್ಳಬೇಡಿ. ಕಚೇರಿಯಲ್ಲಿ ಸಹೋದ್ಯೋಗಿಗಳೊಂದಿಗೆ ಉತ್ತಮ ಬಾಂಧವ್ಯವನ್ನು ಇರಿಸಿಕೊಳ್ಳಲು ನೀವು ಪ್ರಯತ್ನಿಸಬೇಕು. ಹೊರಗಿನ ಕೆಲಸದ ಒತ್ತಡ ಮನೆಗೆ ತರಬೇಡಿ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 15
ಅದೃಷ್ಟದ ಸಮಯ: ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ

ಕನ್ಯಾ ರಾಶಿ
ಇಂದು ಕಿರಿಯ ಸಹೋದರ ಅಥವಾ ಸಹೋದರಿಯಿಂದ ಯಾವುದೇ ಒಳ್ಳೆಯ ಸುದ್ದಿ ಬರಬಹುದು. ಅವರ ಬಗ್ಗೆ ತುಂಬಾ ಹೆಮ್ಮೆಪಡುತ್ತೀರಿ. ಹಣಕಾಸಿನ ಸ್ಥಿತಿ ಹದಗೆಡುವ ಸಾಧ್ಯತೆ ಇದೆ. ಹಠಾತ್ ದೊಡ್ಡ ಖರ್ಚು ನಿಮ್ಮ ಬಜೆಟ್ ಅನ್ನು ಅಸಮತೋಲನಗೊಳಿಸಬಹುದು. ನೀವು ಸಾಲವನ್ನೂ ತೆಗೆದುಕೊಳ್ಳುವ ಸಾಧ್ಯತೆಯಿದೆ. ಕೆಲಸದ ಸ್ಥಳದಲ್ಲಿ ನೀವು ಟೀಕೆಗಳನ್ನು ಎದುರಿಸಬೇಕಾಗಬಹುದು. ವ್ಯಾಪಾರಸ್ಥರಿಗೆ ಮಿಶ್ರಫಲ, ಆರೋಗ್ಯದ ಕಡೆ ಗಮನಹರಿಸಿ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 29
ಅದೃಷ್ಟದ ಸಮಯ: ಬೆಳಿಗ್ಗೆ 4:35 ರಿಂದ ಮಧ್ಯಾಹ್ನ 1 ರವರೆಗೆ

ತುಲಾ ರಾಶಿ
ಆರೋಗ್ಯದ ದೃಷ್ಟಿಯಿಂದ ನೋಡುವುದಾದರೆ ಈ ದಿನ ಒಳ್ಳೆಯದಲ್ಲ. ದುರ್ಬಲ ಆರೋಗ್ಯ ನಿಮ್ಮ ಯೋಜನೆಗಳಿಗೆ ಇಂದು ಅಡ್ಡಿಯಾಗಬಹುದು. ನಿಮ್ಮ ಆರೋಗ್ಯದ ಬಗ್ಗೆ ಸ್ವಲ್ಪವೂ ನಿರ್ಲಕ್ಷ್ಯ ವಹಿಸಬೇಡಿ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಆಹ್ಲಾದಕರವಾಗಿರುತ್ತದೆ. ಆತ್ಮೀಯರ ಬೆಂಬಲ ಸಿಗಲಿದೆ. ನೀವು ಪೋಷಕರೊಂದಿಗೆ ಉತ್ತಮ ಸಮಯವನ್ನು ಕಳೆಯಲು ಸಾಧ್ಯವಾಗುವುದು. ಈ ರಾಶಿಯ ವಿವಾಹಿತರಿಗೆ ಇಂದು ಅತ್ಯಂತ ಮಂಗಳಕರ ದಿನವಾಗಿದೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ಸಮಯ: ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ರವರೆಗೆ

ವೃಶ್ಚಿಕ ರಾಶಿ
ಉದ್ಯೋಗಗಳಿಗೆ ಈ ದಿನ ಉತ್ತಮವಾಗಿದೆ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರಿಗೆ ಈ ದಿನ ಉತ್ತಮವಾಗಿರುತ್ತದೆ. ಪಾಲುದಾರರೊಂದಿಗೆ ಹೊಂದಾಣಿಕೆ ಇರಲಿದೆ. ಇಂದು ನೀವು ಕೆಲವು ಪ್ರಮುಖ ವ್ಯವಹಾರ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೀರಿ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ನಿಮ್ಮ ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 31
ಅದೃಷ್ಟದ ಸಮಯ: ಸಂಜೆ 5:55 ರಿಂದ ರಾತ್ರಿ 9 ರವರೆಗೆ

ಧನು ರಾಶಿ
ಮನೆಯ ಹಿರಿಯರು ನಿಮಗೆ ಸಂಬಂಧಿಸಿದ ಯಾವುದೇ ಪ್ರಮುಖ ನಿರ್ಧಾರವನ್ನು ತೆಗೆದುಕೊಂಡರೆ ನೀವು ಅವರ ಮಾತು ಮಾತು ನಿರ್ಲಕ್ಷ್ಯ ಮಾಡಬೇಡಿ. ಕಚೇರಿಯಲ್ಲಿ ಮಾಡಿದ ತಪ್ಪನ್ನೇ ಮತ್ತೆ ಮತ್ತೆ ಮಾಡುವುದರಿಂದ ನಿಮ್ಮ ಕೆಲಸಕ್ಕೆ ತೊಂದರೆ ಉಂಟಾಗಬಹುದು. ವ್ಯಾಪಾರಸ್ಥರು ಇಂದು ಆರ್ಥಿಕ ಬಿಕ್ಕಟ್ಟು ಎದುರಿಸಬಹುದು. ಪ್ರತಿಕೂಲ ಸಂದರ್ಭಗಳಲ್ಲಿ, ನಿಮ್ಮ ಪ್ರೀತಿಪಾತ್ರರ ಬೆಂಬಲವನ್ನು ಪಡೆಯುತ್ತೀರಿ. ನಿಮ್ಮ ಆರೋಗ್ಯ ದುರ್ಬಲವಾಗಿರಲಿದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 30
ಅದೃಷ್ಟದ ಸಮಯ: ಸಂಜೆ 4 ರಿಂದ ಸಂಜೆ 7 ರವರೆಗೆ

ಮಕರ ರಾಶಿ
ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಆರ್ಥಿಕವಾಗಿ ಇಂದು ನೀವು ನಿಮ್ಮ ಹತ್ತಿರವಿರುವ ಯಾರಿಗಾದರೂ ಸಹಾಯ ಮಾಡಬಹುದು. ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನಗಳಲ್ಲಿ ಯಶಸ್ಸನ್ನು ಪಡೆಯುವುದರಿಮದ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ನಿಮ್ಮ ವ್ಯಾಪಾರವನ್ನು ವಿದೇಶದಲ್ಲಿ ವಿಸ್ತರಿಸಲುಯೋಜಿಸುತ್ತಿದ್ದರೆ, ನೀವು ಉತ್ತಮ ಅವಕಾಶವನ್ನು ಪಡೆಯಬಹುದು. ಪ್ರೇಮಿಗಳ ನಡುವೆ ಮನಸ್ತಾಪ ಇರಬಹುದು. ನಿಮ್ಮ ಸಂಗಾತಿಯನ್ನು ಅನಗತ್ಯವಾಗಿ ಅನುಮಾನಿಸುವುದನ್ನು ನೀವು ತಪ್ಪಿಸಬೇಕು. ಇಂದು ನೀವು ಭಾರವಾದ ವಸ್ತುಗಳನ್ನು ಎತ್ತಬೇಡಿ, ಇಲ್ಲದಿದ್ದರೆ ಸ್ನಾಯುಗಳಿಗೆ ಸಂಬಂಧಿಸಿದ ಸಮಸ್ಯೆ ಉಂಟಾಗಬಹುದು.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 21
ಅದೃಷ್ಟದ ಸಮಯ: ಮಧ್ಯಾಹ್ನ 12:40 ರಿಂದ ಸಂಜೆ 6 ರವರೆಗೆ

ಕುಂಭ ರಾಶಿ
ನೀವು ಇತ್ತೀಚೆಗೆ ಯಾವುದೇ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರೆ ನಿಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ. ಕೆಲಸದ ವಿಷಯದಲ್ಲಿ ಈ ದಿನ ಅದೃಷ್ಟದ ದಿನ, ನಿಮ್ಮ ಕಠಿಣ ಪರಿಶ್ರಮ ಮತ್ತು ಆತ್ಮವಿಶ್ವಾಸದ ಬಲದಿಂದ ನೀವು ಉತ್ತಮ ಯಶಸ್ಸನ್ನು ಸಾಧಿಸಬಹುದು. ಆಸ್ತಿಯಲ್ಲಿ ಕೆಲಸ ಮಾಡುವ ಜನರು ಹೆಚ್ಚಿನ ಪ್ರಯೋಜನವನ್ನು ಪಡೆಯಬಹುದು. ಮನೆಯ ವಾತಾವರಣ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: ಬೆಳಿಗ್ಗೆ 7:20 ರಿಂದ ಮಧ್ಯಾಹ್ನ 12 ರವರೆಗೆ

ಮೀನ ರಾಶಿ
ಇಂದು ಸ್ಟಾಕ್ ಮಾರುಕಟ್ಟೆಯಲ್ಲಿ ಕೆಲಸ ಮಾಡುವವರು ಯಾವುದೇ ಆತುರವನ್ನು ಮಾಡದಂತೆ ಸಲಹೆ ನೀಡಲಾಗಿದೆ, ಇಲ್ಲದಿದ್ದರೆ ನಷ್ಟವಾಗಬಹುದು. ನೀವು ಸಣ್ಣ ಉದ್ಯಮಿಗಳಾಗಿದ್ದರೆ ಉತ್ತಮ ಲಾಭವನ್ನು ನಿರೀಕ್ಷಿಸಬಹುದುಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ, ಆದರೆ ಯಾವುದೇ ದೊಡ್ಡ ಸಮಸ್ಯೆ ಇರುವುದಿಲ್ಲ. ಆರೋಗ್ಯದ ಬಗ್ಗೆ ಹೇಳುವುದಾದರೆ ಮಾನಸಿಕವಾಗಿ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 38
ಅದೃಷ್ಟದ ಸಮಯ: ಬೆಳಿಗ್ಗೆ 8 ರಿಂದ ಸಂಜೆ 5 ರವರೆಗೆ

English summary

Dina Bhavishya -May 15 2023 Today Rashi Bhavishya, Daily Horoscope in Kannada

Dina Bhavishya- Get Today's Rashi Bhavishy 15 May 2023 In Kannada, Read daily horoscope prediction of aries, taurus, gemini, cancer, leo, virgo, libra, scorpio, Sagittarius, Capricorn, Aquarius, pisces in Kannada.
Story first published: Monday, May 15, 2023, 4:00 [IST]
X
Desktop Bottom Promotion