Latest Updates
-
ಬೇಸಿಗೆಯಲ್ಲಿ ಈ ಗಂಜಿ ಕುಡಿಯಿರಿ.. ಕೊಬ್ಬು ಕಡಿಮೆ, ದೇಹಕ್ಕೂ ತಂಪು! ಈ ಗಂಜಿಯ ಆರೋಗ್ಯ ರಹಸ್ಯ ಇಲ್ಲಿದೆ -
30 ವರ್ಷಗಳ ಬಳಿಕ ಸೂರ್ಯ-ಶನಿ ಸಂಯೋಗ! ಯಾರಿಗೆ ಶುಭ? ಯಾರಿಗೆ ಸಮಸ್ಯೆ? 12 ರಾಶಿಗಳ ಜಾತಕ ತಿಳಿಯಿರಿ -
ಈ 5 ವಿಷಯಗಳಲ್ಲಿ ಮಿತಿ ಮೀರಿದ್ರೆ ಜೀವನ ಸರ್ವನಾಶ! ಅಹಂಕಾರ ಬಿಡಿ.. ಇಂದೇ ಇವುಗಳಿಂದ ದೂರವಿರಿ -
ಪಕ್ಕಾ ಹೈದರಾಬಾದಿ ರುಚಿ.. ಅತಿಥಿಗಳು ಬಂದ್ರೆ ಈ ಚಿಕನ್ ಯಖನಿ ಪುಲಾವ್ ಮಾಡಿ! ಸಿಂಪಲ್ & ಸೂಪರ್ ರುಚಿ -
2026ರ ಸೂರ್ಯ ಗೋಚಾರ: ಇವರಿಗೆ ಸಿಗಲಿದೆ ಸರ್ಕಾರಿ ಉದ್ಯೋಗ! ಯಾರಿಗೆ ಮಾನಸಿಕ ಒತ್ತಡ? 12 ರಾಶಿಯವರಿಗೆ ರಾಶಿಫಲ ಇಲ್ಲಿದೆ -
ಹೋಟೆಲ್ ಶೈಲಿಯ ಆಲೂ ಮಸಾಲಾ ಪೂರಿ! ಈ ರೀತಿ ಮನೆಯಲ್ಲೇ ಮಾಡಿ, ಪರ್ಫೆಕ್ಟ್ ಆಗಿ ಉಬ್ಬಿ ಬರುತ್ತೆ -
ಇವರ ಜೀವನದಲ್ಲಿ ಹೊಸ ಕಿಡಿ ಹೊತ್ತಿಕೊಳ್ಳಲಿದೆ! ಹಠಮಾರಿ ಸ್ವಭಾವವನ್ನು ಬಿಡಿ -
March 12 Horoscope: ಹಣಕಾಸಿನ ಸವಾಲುಗಳು ದೊಡ್ಡದಾಗುವ ಸಂಭವ -
ಕೋಮಾದಲ್ಲಿದ್ದ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂ ಒಪ್ಪಿಗೆ: ಈ ಕೇಸ್ ಬಗ್ಗೆ ನಿಮಗೆ ಗೊತ್ತಾ? -
ಪಂಜಾಬಿ ಸ್ಟೈಲ್ ಮಲೈ ಲಸ್ಸಿ! ಈ ರೀತಿ ಮಾಡಿ ಗಟ್ಟಿ ಕೆನೆಯ ಢಾಬಾ ಸ್ಟೈಲ್ ಲಸ್ಸಿ.. ಬಿಸಿಲ ತಾಪಕ್ಕೆ ಬೆಸ್ಟ್ ಕೂಲ್ ಡ್ರಿಂಕ್
Horoscope Today 16 May 2023: ಮಂಗಳವಾರ: ಈ ದಿನ ಯಾವ ರಾಶಿಯವರಿಗೆ ಅದೃಷ್ಟ, ಯಾರು ಜಾಗ್ರತೆವಹಿಸಬೇಕು?
ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಮೇ 16ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ಉತ್ತರಾಯಣ
ಋತು: ವಸಂತ
ಮಾಸ: ಜ್ಯೇಷ್ಠ
ಪಕ್ಷ: ಕೃಷ್ಣಪಕ್ಷ
ತಿಥಿ: ದ್ವಾದಶಿ
ನಕ್ಷತ್ರ: ಉತ್ತರ ಭಾದ್ರಪದ
ರಾಹುಕಾಲ: ಸಂಜೆ 03:41ರಿಂದ 05:23ರವರೆಗೆ

ಮೇಷ ರಾಶಿ
ಈ ದಿನ ನಿಮಗೆ ಸವಾಲಿನಿಮದ ಕೂಡಿರಲಿದೆ. ಈ ದಿನ ಯಾರಿಗೂ ಹಣವನ್ನು ಸಾಲವನ್ನಾಗಿ ನೀಡಬೇಡಿ. ನಿಮ್ಮ ಪ್ರಮುಖ ಕೆಲಸಕ್ಕಾಗು ಸಾಕಷ್ಟು ಓಡಾಡಬೇಕಾಗುವುದು. ಉದ್ಯಮಿಗಳು ಇಂದು ಪ್ರಯಾಣಿಸಬೇಕಾಗಬಹುದು. ವೈವಾಹಿಕ ಜೀವನ ಚೆನ್ನಾಗಿರಲಿದೆ. ಇಂದು ನಿಮ್ಮ ದೊಡ್ಡ ಸಮಸ್ಯೆ ಬಗೆಹರಿಯಲಿದೆ. ನಿಮ್ಮ ಆರೋಗ್ಯದ ಬಗ್ಗೆ ಸ್ವಲ್ಪವೂ ನಿರ್ಲಕ್ಷ್ಯ ಮಾಡಬೇಡಿ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 16
ಅದೃಷ್ಟದ ಸಮಯ: ಬೆಳಗ್ಗೆ 7 ರಿಂದ 11 ರವರೆಗೆ
ವೃಷಭ ರಾಶಿ
ಇಂದು ಚಿಕ್ಕ ಕೆಲಸವಾದರೂ ಅವಸರ ಪಡಬೇಡಿ. ವ್ಯಾಪಾರಸ್ಥರು ನಿರೀಕ್ಷೆಯಂತೆಯೇ ಲಾಭ ಪಡೆಯಬಹುದು. ನಿಮ್ಮ ಹಣಕಾಸಿನ ಸ್ಥಿತಿ ಬಲವಾಗಿರುತ್ತದೆ. ವೈಯಕ್ತಿಕ ಜೀವನದ ಬಗ್ಗೆ ಹೇಳುವುದಾದರೆ ನೀವು ಅವಿವಾಹಿತರಾಗಿದ್ದರೆ, ಪ್ರೀತಿಯಲ್ಲಿದ್ದರೆ ಅಡೆತಡೆಗಳು ಎದುರಾಗಬಹುದು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 8
ಅದೃಷ್ಟದ ಸಮಯ: ಮಧ್ಯಾಹ್ನ 12:35 ರಿಂದ ಮಧ್ಯಾಹ್ನ 2 ರವರೆಗೆ
ಮಿಥುನ ರಾಶಿ
ಉದ್ಯೋಗಿಗಳಿಗೆ ಈ ದಿನ ಶುಭವಾಗಿದೆ. ಈ ದಿನ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ಉದ್ಯಮಿಗಳು ಯಾವುದೋ ಒಂದು ಕೆಲಸ ತುಂಬಾ ಸಮಯದಿಂದ ಅಪೂರ್ಣವಾಗಿದ್ದರೆ ಇಂದು ಪೂರ್ಣವಾಗಬಹುದು. ನೀವು ಆರ್ಥಿಕ ಲಾಭವನ್ನು ಸಹ ಪಡೆಯಬಹುದು. ಆರೋಗ್ಯದ ವಿಷಯದಲ್ಲಿ ಈ ದಿನ ನಿಮಗೆ ಸಾಮಾನ್ಯವಾಗಿರಲಿದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 8:05 ರವರೆಗೆ
ಕರ್ಕ ರಾಶಿ
ನೀವು ಉದ್ಯಮಿಯಾಗಿದ್ದರೆ ಪ್ರಯಾಣಿಸುವಾಗ ಪ್ರಮುಖ ದಾಖಲೆಗಳು ನಿಮ್ಮ ಬಳಿಯೇ ಇರಲಿ. ಉದ್ಯೋಗಿಗಳಿಗೆ ಕಚೇರಿಯಲ್ಲಿ ತಮ್ಮ ಮಾತಿನ ಬಗ್ಗೆ ಸಂಪೂರ್ಣ ಕಾಳಜಿ ವಹಿಸಲು ಸಲಹೆ ನೀಡಲಾಗಿದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಚೆನ್ನಾಗಿರಲಿದೆ. ಸಹೋದರ ಅಥವಾ ಸಹೋದರಿಯರ ವಿದ್ಯಾಭ್ಯಾಸದಲ್ಲಿ ಯಾವುದೇ ಅಡಚಣೆ ಉಂಟಾದರೆ ಈ ಸಮಸ್ಯೆ ಬಗೆಹರಿಯಲಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ನಿಮ್ಮ ಆರೋಗ್ಯದ ಬಗ್ಗೆ ಹೇಳುವುದಾದರೆ ಹಲ್ಲುಗಳಿಗೆ ಸಂಬಂಧಿಸಿದ ಸಮಸ್ಯೆವಿರಬಹುದು.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ 2:45 ರವರೆಗೆ
ಸಿಂಹ ರಾಶಿ
ನೀವು ಉದ್ಯಮಿಯಾಗಿದ್ದರೆ, ದೊಡ್ಡ ಹೂಡಿಕೆಗಳನ್ನು ಮಾಡಲು ಹೋಗಬೇಡಿ. ಉದ್ಯೋಗಿಗಳ ಎಲ್ಲಾ ಕೆಲಸಗಳು ಸಮಯಕ್ಕೆ ಪೂರ್ಣಗೊಳ್ಳುತ್ತವೆ. ಬಾಸ್ ನಿಮ್ಮ ಕಾರ್ಯಕ್ಷಮತೆಯಿಂದ ಸಾಕಷ್ಟು ತೃಪ್ತರಾಗಿ ಕಾಣುತ್ತಾರೆ. ನೀವು ಯಾವುದೇ ಬೆಲೆಬಾಳುವ ವಸ್ತುವನ್ನು ಕಳೆದುಕೊಂಡಿದ್ದರೆ, ಇಂದು ಅದನ್ನು ಮರಳಿ ಪಡೆಯುವ ಬಲವಾದ ಸಾಧ್ಯತೆಯಿದೆ. ವೈವಾಹಿಕ ಜೀವನದಲ್ಲಿ ಖುಷಿ ಇರಲಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಈ ದಿನ ಏರಳಿತಗಳಿಂದ ಕೂಡಿರಲಿದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 24
ಅದೃಷ್ಟದ ಸಮಯ: ಸಂಜೆ 6 ರಿಂದ ರಾತ್ರಿ 9 ರವರೆಗೆ
ಕನ್ಯಾ ರಾಶಿ
ವ್ಯಾಪಾರಸ್ಥರು ಯಾವುದೇ ಒಪ್ಪಂದ ಮಾಡುವುದಾದರೆ ಸರಿಯಾಗಿ ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ. ಉದ್ಯೋಗಿಗಳ ದಿನವು ಸಾಮಾನ್ಯವಾಗಿರಲಿದೆ. ನಿಮ್ಮ ಯಾವುದೇ ಕೆಲಸವನ್ನು ಅಪೂರ್ಣವಾಗಿ ಬಿಡಬೇಡಿ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ಈ ದಿನದ ಹಣದ ಖರ್ಚು ಹೆಚ್ಚಿರಲಿದೆ. ಇದಲ್ಲದೇ ಮಕ್ಕಳ ವಿದ್ಯಾಭ್ಯಾಸಕ್ಕೂ ಒಂದಿಷ್ಟು ಹಣ ವ್ಯಯಿಸಬೇಕಾಗುತ್ತದೆ. ಸಂಗಾತಿ ನಿಮ್ಮನ್ನು ನಿರ್ಲಕ್ಷ್ಯ ಮಾಡುತ್ತಿದ್ದರೆ ಎಂದನಿಸಬಹುದು, ಏನಾದರೂ ಸಮಸ್ಯೆವಿದ್ದರೆ ಅವರೊಂದಿಗೆ ಈ ಕುರಿತು ಮಾತನಾಡಿ. ಆರೋಗ್ಯ ಸಂಬಂಧಿ ಸಮಸ್ಯೆಗಳಿರಬಹುದು
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಬೆಳಿಗ್ಗೆ 8 ರಿಂದ ಮಧ್ಯಾಹ್ನ 2 ರವರೆಗೆ
ತುಲಾ ರಾಶಿ
ಉದ್ಯೋಗಸ್ಥರು ಈ ದಿನ ಜಾಗೂರಾಕರಾಗಿರಬೇಕು. ಕಚೇರಿಯಲ್ಲಿ ನಿಮ್ಮ ಕೆಲಸದ ಬಗ್ಗೆ ಸಂಪೂರ್ಣ ಗಮನ ಕೊಡಿ. ಇದರ ಹೊರತಾಗಿ ಯಾರನ್ನೂ ಅಗತ್ಯಕ್ಕಿಂತ ಹೆಚ್ಚಾಗಿ ನಂಬಬೇಡಿ. ವ್ಯಾಪಾರಸ್ಥರಿಗೆ ಮಿಶ್ರಲಾಭ. ಯಾವುದೇ ವ್ಯವಹಾರ ಪ್ರಸ್ತಾಪವನ್ನು ತರಾತುರಿಯಲ್ಲಿ ಸ್ವೀಕರಿಸಬೇಡಿ. ಕೌಟುಂಬಿಕ ಜೀವನದ ಬಗ್ಗೆ ಹೇಳುವುದಾದರೆ ಮಕ್ಕಳ ಶಿಕ್ಷಣದ ಸಮಸ್ಯೆ ಕಾಡಬಹುದು. ವೆಚ್ಚಗಳ ಹೆಚ್ಚಳದಿಂದಾಗಿ ನಿಮ್ಮ ಬಜೆಟ್ ಅಸಮತೋಲನವಾಗಬಹುದು. ಇಂದು ಆರೋಗ್ಯ ಕ್ಷೀಣಿಸಬಹುದು.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 21
ಅದೃಷ್ಟದ ಸಮಯ: ಸಂಜೆ 5:25 ರಿಂದ 9:15 ರವರೆಗೆ
ವೃಶ್ಚಿಕ ರಾಶಿ
ಮನೆಯ ವಾತಾವರಣದಲ್ಲಿ ಖುಷಿ ಇರಲಿದೆ. ಮನೆಯಲ್ಲಿ ವಿವಾಹ ಯೋಗ್ಯ ಸದಸ್ಯರಿದ್ದರೆ ಅವರಿಗೆ ಸಂಬಂಧ ಕೂಡಿ ಬರುವುದರಿಂದ ಶೀಘ್ರದಲ್ಲೇ ನಿಮ್ಮ ಮನೆಯಲ್ಲಿ ಶುಭ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ಹಣದ ಪರಿಸ್ಥಿತಿ ಉತ್ತಮವಾಗಿರುತ್ತದೆ. ಇಂದು ನೀವು ಹಳೆಯ ಖಾತೆಗಳಲ್ಲಿ ನಿರತರಾಗಿರುತ್ತೀರಿ. ನೀವು ಕಚೇರಿಯಲ್ಲಿ ಆಲಸ್ಯ ಮತ್ತು ಸೋಮಾರಿತನವನ್ನು ತಪ್ಪಿಸಬೇಕು. ಈ ದಿನ ಕೆಲಸದ ಹೊರೆ ಅಧಿಕವಿರಲಿದೆ. ವ್ಯಾಪಾರಿಗಳಿಗೆ ಉತ್ತಮ ಆರ್ಥಿಕ ಲಾಭ ದೊರೆಯಲಿದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 16
ಅದೃಷ್ಟದ ಸಮಯ: ಬೆಳಿಗ್ಗೆ 5:20 ರಿಂದ ಮಧ್ಯಾಹ್ನ 12
ಧನು ರಾಶಿ
ವ್ಯಾಪಾರಸ್ಥರು ಇಂದು ಬಹಳ ಜಾಗರೂಕರಾಗಿರಬೇಕು.ಉದ್ಯೋಗಸ್ಥರು ಕಚೇರಿಯಲ್ಲಿನ ಉನ್ನತ ಅಧಿಕಾರಿಗಳೊಂದಿಗೆ ಉತ್ತಮ ಬಾಂಧವ್ಯವನ್ನು ಇಟ್ಟುಕೊಳ್ಳಲು ಪ್ರಯತ್ನಿಸಬೇಕು. ಹಣದ ವಿಷಯದಲ್ಲಿ ಇಂದು ಅದೃಷ್ಟದ ದಿನ. ಕಡಿಮೆ ಶ್ರಮದಿಂದ ಉತ್ತಮ ಹಣವನ್ನು ಪಡೆಯಬಹುದು. ಇಂದು ನೀವು ನಿಮ್ಮ ಸಂಗಾತಿಯೊಂದಿಗೆ ಖುಷಿಯಿಂದ ಸಮಯ ಕಳೆಯುವಿರಿ. ಆರೋಗ್ಯದ ದೃಷ್ಟಿಯಿಂದ ದಿನವು ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಸಮಯ: ಬೆಳಿಗ್ಗೆ 8 ರಿಂದ 11 ರವರೆಗೆ
ಮಕರ ರಾಶಿ
ವಿದ್ಯಾರ್ಥಿಗಳಿಗೆ ಇಂದು ಸವಾಲಿನ ದಿನವಾಗಿರಲಿದೆ. ನಕಾರಾತ್ಮಕತೆಯು ನಿಮ್ಮ ಮೇಲೆ ಪ್ರಾಬಲ್ಯ ಸಾಧಿಸಬಹುದು.ಆದರೆ ನೀವು ನೆಗೆಟಿವ್ ಆಲೋಚನೆಗಳಿಂದ ಹೊರಬರಲು ಪ್ರಯತ್ನಿಸಬೇಕು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಆದರೆ, ಹಣಕ್ಕೆ ಸಂಬಂಧಿಸಿದ ವಹಿವಾಟುಗಳನ್ನು ಮಾಡುವುದನ್ನು ತಪ್ಪಿಸಲು ನಿಮಗೆ ಸಲಹೆ ನೀಡಲಾಗಿದೆ. ಕೆಲಸದ ಒತ್ತಡ ಅಧಿಕವಿರಲಿದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಆಹ್ಲಾದಕರವಾಗಿರುತ್ತದೆ. ಆರೋಗ್ಯದ ವಿಷಯದಲ್ಲಿ ಈ ದಿನವು ಏರಿಳಿತಗಳಿಂದ ತುಂಬಿರಲಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: ಸಂಜೆ 6 ರಿಂದ ರಾತ್ರಿ 9 ರವರೆಗೆ
ಕುಂಭ ರಾಶಿ
ನಿಮ್ಮ ಪೂರ್ವಿಕರ ಆಸ್ತಿಯನ್ನು ಮಾರಾಟ ಮಾಡಲು ನೀವು ಬಹಳ ಸಮಯದಿಂದ ಯೋಜಿಸುತ್ತಿದ್ದರೆ ಈ ದಿನ ನಿಮ್ಮ ಪ್ರಯತ್ನಕ್ಕೆ ಫಲ ಸಿಗಬಹುದು. ಕೆಲಸದ ವಿಷಯದಲ್ಲಿ ಈ ದಿನ ಒತ್ತಡದಿಂದ ಕೂಡಿರಲಿದೆ. ಕಠಿಣ ಪರಿಶ್ರಮದ ಹೊರತಾಗಿಯೂ, ನೀವು ನಿರೀಕ್ಷಿಸಿದ ಫಲಿತಾಂಶ ದೊರೆಯದಿದ್ದರೆ ನೀವು ನಿರಾಶೆಗೊಳ್ಳುವ ಅಗತ್ಯವಿಲ್ಲ. ನಿಮ್ಮ ಕಠಿಣ ಪರಿಶ್ರಮವನ್ನು ಮುಂದುವರಿಸಿ. ಆರೋಗ್ಯದ ಬಗ್ಗೆ ಹೇಳುವುದಾದರೆ ಆರೋಗ್ಯ ಸಮಸ್ಯೆಗಳಿರಬಹುದು.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 16
ಅದೃಷ್ಟದ ಸಮಯ: ಬೆಳಿಗ್ಗೆ 7:55 ರಿಂದ 10:10 ರವರೆಗೆ
ಮೀನ ರಾಶಿ
ಮನೆಯ ವಾತಾವರಣ ಇಂದು ಉತ್ತಮವಾಗಿರಲಿದೆ. ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನಗಳಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ನೀವು ನಿಮ್ಮ ಕೆಲಸವನ್ನು ತ್ಯಜಿಸಲು ಮತ್ತು ನಿಮ್ಮ ಸ್ವಂತ ವ್ಯವಹಾರವನ್ನು ಪ್ರಾರಂಭಿಸಲು ಬಯಸಿದರೆ, ನಂತರ ನೀವು ನಿಮ್ಮ ಆತ್ಮೀಯರ ಬೆಂಬಲವನ್ನು ಪಡೆಯಬಹುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಸಂಗಾತಿಯೊಂದಿಗೆ ಉತ್ತಮ ನಡವಳಿಕೆಯನ್ನು ಇರಿಸಿಕೊಳ್ಳಲು ಪ್ರಯತ್ನಿಸಿ.ಅನಾವಶ್ಯಕ ವಿಷಯಗಳಿಗೆ ಜಗಳಗಳನ್ನು ತಪ್ಪಿಸಿ. ಆರೋಗ್ಯದ ದೃಷ್ಟಿಯಿಂದ ದಿನವು ಸರಾಸರಿಯಾಗಿರುತ್ತದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 19
ಅದೃಷ್ಟದ ಸಮಯ: ಸಂಜೆ 5:20 ರಿಂದ ರಾತ್ರಿ 8:20 ರವರೆಗೆ



Click it and Unblock the Notifications











