Latest Updates
-
ಬೇಸಿಗೆಯಲ್ಲಿ ಈ ಗಂಜಿ ಕುಡಿಯಿರಿ.. ಕೊಬ್ಬು ಕಡಿಮೆ, ದೇಹಕ್ಕೂ ತಂಪು! ಈ ಗಂಜಿಯ ಆರೋಗ್ಯ ರಹಸ್ಯ ಇಲ್ಲಿದೆ -
30 ವರ್ಷಗಳ ಬಳಿಕ ಸೂರ್ಯ-ಶನಿ ಸಂಯೋಗ! ಯಾರಿಗೆ ಶುಭ? ಯಾರಿಗೆ ಸಮಸ್ಯೆ? 12 ರಾಶಿಗಳ ಜಾತಕ ತಿಳಿಯಿರಿ -
ಈ 5 ವಿಷಯಗಳಲ್ಲಿ ಮಿತಿ ಮೀರಿದ್ರೆ ಜೀವನ ಸರ್ವನಾಶ! ಅಹಂಕಾರ ಬಿಡಿ.. ಇಂದೇ ಇವುಗಳಿಂದ ದೂರವಿರಿ -
ಪಕ್ಕಾ ಹೈದರಾಬಾದಿ ರುಚಿ.. ಅತಿಥಿಗಳು ಬಂದ್ರೆ ಈ ಚಿಕನ್ ಯಖನಿ ಪುಲಾವ್ ಮಾಡಿ! ಸಿಂಪಲ್ & ಸೂಪರ್ ರುಚಿ -
2026ರ ಸೂರ್ಯ ಗೋಚಾರ: ಇವರಿಗೆ ಸಿಗಲಿದೆ ಸರ್ಕಾರಿ ಉದ್ಯೋಗ! ಯಾರಿಗೆ ಮಾನಸಿಕ ಒತ್ತಡ? 12 ರಾಶಿಯವರಿಗೆ ರಾಶಿಫಲ ಇಲ್ಲಿದೆ -
ಹೋಟೆಲ್ ಶೈಲಿಯ ಆಲೂ ಮಸಾಲಾ ಪೂರಿ! ಈ ರೀತಿ ಮನೆಯಲ್ಲೇ ಮಾಡಿ, ಪರ್ಫೆಕ್ಟ್ ಆಗಿ ಉಬ್ಬಿ ಬರುತ್ತೆ -
ಇವರ ಜೀವನದಲ್ಲಿ ಹೊಸ ಕಿಡಿ ಹೊತ್ತಿಕೊಳ್ಳಲಿದೆ! ಹಠಮಾರಿ ಸ್ವಭಾವವನ್ನು ಬಿಡಿ -
March 12 Horoscope: ಹಣಕಾಸಿನ ಸವಾಲುಗಳು ದೊಡ್ಡದಾಗುವ ಸಂಭವ -
ಕೋಮಾದಲ್ಲಿದ್ದ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂ ಒಪ್ಪಿಗೆ: ಈ ಕೇಸ್ ಬಗ್ಗೆ ನಿಮಗೆ ಗೊತ್ತಾ? -
ಪಂಜಾಬಿ ಸ್ಟೈಲ್ ಮಲೈ ಲಸ್ಸಿ! ಈ ರೀತಿ ಮಾಡಿ ಗಟ್ಟಿ ಕೆನೆಯ ಢಾಬಾ ಸ್ಟೈಲ್ ಲಸ್ಸಿ.. ಬಿಸಿಲ ತಾಪಕ್ಕೆ ಬೆಸ್ಟ್ ಕೂಲ್ ಡ್ರಿಂಕ್
Horoscope Today 19 May 2023: ಶುಕ್ರವಾರ: ಅಮವಾಸ್ಯೆ ದಿನ ಯಾವ ರಾಶಿಯವರು ಜಾಗ್ರತೆ
ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಮೇ 19ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ಉತ್ತರಾಯಣ
ಋತು: ವಸಂತ
ಮಾಸ: ಜ್ಯೇಷ್ಠ
ಪಕ್ಷ: ಕೃಷ್ಣಪಕ್ಷ
ತಿಥಿ: ಅಮವಾಸ್ಯೆ
ನಕ್ಷತ್ರ: ಬೆಳಗ್ಗೆ 07:29ರವರೆಗೆ ಭರಣಿ, ನಂತರ ಕೃತಿಕಾ
ರಾಹುಕಾಲ: 10:35ರಿಂದ 12:18ರವರೆಗೆ
ಮೇಷ ರಾಶಿ
ವ್ಯಾಪಾರಸ್ಥರಿಗೆ ಇಂದು ದಿನದ ಆರಂಭವು ನಿಧಾನವಾಗಿರಬಹುದು, ಆದರೆ ಕ್ರಮೇಣ ಸುಧಾರಣೆ ಕಂಡುಬರುತ್ತದೆ. ನಿಮ್ಮ ಯಾವುದೇ ಸ್ಥಗಿತಗೊಂಡ ಕೆಲಸವನ್ನು ದಿನದ ಎರಡನೇ ಭಾಗದಲ್ಲಿ ಪೂರ್ಣಗೊಳಿಸಬಹುದು. ನೀವು ಹಣಕಾಸಿನ ಲಾಭವನ್ನು ಪಡೆಯುವ ಸಾಧ್ಯತೆಯಿದೆ, ಇಂದು ಉದ್ಯೋಗಿಗಳಿಗೆ ಬಿಡುವಿಲ್ಲದ ದಿನವಾಗಿರುತ್ತದೆ. ಆದರೆ, ನಿಮ್ಮ ಎಲ್ಲಾ ಕೆಲಸಗಳು ಸಮಯಕ್ಕೆ ಪೂರ್ಣಗೊಳ್ಳುತ್ತವೆ. ಹಣದ ಪರಿಸ್ಥಿತಿ ಉತ್ತಮವಾಗಿರಲಿದೆ. ಇಂದು ನೀವು ಹಣಕ್ಕೆ ಸಂಬಂಧಿಸಿದ ಯಾವುದೇ ವ್ಯವಹಾರವನ್ನು ಮಾಡಲು ಅವಕಾಶವನ್ನು ಪಡೆಯುತ್ತೀರಿ. ಜೀವನ ಸಂಗಾತಿಯ ಬೆಂಬಲ ಸಿಗಲಿದೆ. ಆರೋಗ್ಯ ಸಂಬಂಧಿ ಸಮಸ್ಯೆ ಎದುರಾಗಬಹುದು.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 29
ಅದೃಷ್ಟದ ಸಮಯ: ಬೆಳಿಗ್ಗೆ 7 ರಿಂದ ಮಧ್ಯಾಹ್ನ 12:30 ರವರೆಗೆ

ವೃಷಭ ರಾಶಿ
ಇಂದು ಮನೆಯ ವಾತಾವರಣ ಸರಿ ಇರುವುದಿಲ್ಲ. ಹಳೆಯ ವಿವಾದ ಉದ್ಭವಿಸಬಹುದು. ಮಾನಸಿಕವಾಗಿ ತುಂಬಾ ಒತ್ತಡ ಉಂಟಾಗಲಿದೆ, ಇದು ಆರೋಗ್ಯದ ಮೇಲೂ ಪ್ರಭಾವ ಬೀರಲಿದೆ. ಮತ್ತು ಇದು ನಿಮ್ಮ ಕೆಲಸದ ಮೇಲೆ ಪರಿಣಾಮ ಬೀರಬಹುದು. ಆತುರದಿಂದ ದೂರವಿರಲು ಉದ್ಯಮಿಗಳಿಗೆ ಸೂಚಿಸಲಾಗಿದೆ. ನೀವು ಲಾಭ ಗಳಿಸಲು ಯಾವುದೇ ಅವಕಾಶವನ್ನು ಪಡೆದರೆ, ನೀವು ಎಚ್ಚರಿಕೆಯಿಂದ ಯೋಚಿಸಬೇಕು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ಸಮಯ: ಬೆಳಿಗ್ಗೆ 10 ರಿಂದ ಮಧ್ಯಾಹ್ನ 1:20 ರವರೆಗೆ
ಮಿಥುನ ರಾಶಿ
ಆರೋಗ್ಯದ ಲ್ಲಿ ಇಂದು ನಿಮಗೆ ಏರಿಳಿತಗಳಿರಲಿದೆ. ನೀವು ಮಾದಕ ವ್ಯಸನಿಗಳಾಗಿದ್ದರೆ, ಸಾಧ್ಯವಾದಷ್ಟು ಬೇಗ ಅದನ್ನು ತೊಡೆದುಹಾಕಲು ಪ್ರಯತ್ನಿಸಿ, ಇಲ್ಲದಿದ್ದರೆ ನಿಮ್ಮ ಸಮಸ್ಯೆಗಳು ಹೆಚ್ಚಾಗಬಹುದು. ಕಚೇರಿಯಲ್ಲಿ ಬಾಸ್ ನಿಮ್ಮ ಕೆಲಸ ಮೆಚ್ಚುತ್ತಾರೆ. ಬಹುಶಃ ಇಂದು ನಿಮ್ಮ ನೆಚ್ಚಿನ ಯೋಜನೆಯಲ್ಲಿ ಕೆಲಸ ಮಾಡಲು ನಿಮಗೆ ಅವಕಾಶ ನೀಡಲಾಗುವುದು. ಇಂದು ನೀವು ಆತ್ಮವಿಶ್ವಾಸದಿಂದ ಕೂಡಿರುತ್ತೀರಿ. ವ್ಯಾಪಾರಿಗಳಿಗೆ ಅಪೇಕ್ಷಿತ ಲಾಭ ದೊರೆಯಲಿದೆ. ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡಿದರೆ, ಪಾಲುದಾರರೊಂದಿಗಿನ ಸಮನ್ವಯವು ಇನ್ನೂ ಉತ್ತಮವಾಗಿರುತ್ತದೆ. ಹಣದ ಪರಿಸ್ಥಿತಿ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 19
ಅದೃಷ್ಟದ ಸಮಯ: ಮಧ್ಯಾಹ್ನ 1:30 ರಿಂದ ಸಂಜೆ 4 ರವರೆಗೆ
ಕರ್ಕ ರಾಶಿ
ನೀವು ಕಚೇರಿಯಲ್ಲಿ ನಿಮ್ಮ ಕೆಲಸದ ಮೇಲೆ ಕೇಂದ್ರೀಕರಿಸಿದರೆ, ಅದು ನಿಮಗೆ ಉತ್ತಮವಾಗಿರುತ್ತದೆ. ಒಳರಾಜಕೀಯದ ಬಗ್ಗೆ ಮಾತನಾಡಲು ಹೀಗಬೇಡಿ. ವ್ಯಾಪಾರಸ್ಥರು ಇಂದು ಹೊಸ ವ್ಯವಹಾರ ಪ್ರಸ್ತಾಪವನ್ನು ಪಡೆಯಬಹುದು. ನಿಮ್ಮ ವ್ಯವಹಾರದಲ್ಲಿ ಧನಾತ್ಮಕ ಬದಲಾವಣೆಯ ಸಾಧ್ಯತೆಯಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನೀವು ನೋಡಿಕೊಂಡು ಖರ್ಚು ಮಾಡಿದರೆ ಅದು ನಿಮಗೆ ಉತ್ತಮವಾಗಿರುತ್ತದೆ. ನಿಮ್ಮ ಸಂಗಾತಿಯೊಂದಿಗೆ ನಿಮ್ಮ ಸಂಬಂಧ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ದಿನವು ಸರಾಸರಿಯಾಗಿರುತ್ತದೆ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 38
ಅದೃಷ್ಟದ ಸಮಯ: ಬೆಳಿಗ್ಗೆ 7:55 ರಿಂದ 10:30 ರವರೆಗೆ
ಸಿಂಹ ರಾಶಿ
ವ್ಯಾಪಾರಸ್ಥರಿಗೆ ಇಂದು ಉತ್ತಮ ದಿನವಾಗಿರಲಿದೆ. ನೀವು ಇತ್ತೀಚೆಗೆ ನಿಮ್ಮ ಸ್ಟಾಕ್ ಅನ್ನು ಹೆಚ್ಚಿಸಿದ್ದರೆ, ನೀವು ನಿರೀಕ್ಷಿಸಿದಂತೆ ಫಲಿತಾಂಶವನ್ನು ಪಡೆಯಬಹುದು. ಉದ್ಯೋಗದಲ್ಲಿರುವವರು ಬಯಸಿದ ವರ್ಗಾವಣೆಯನ್ನು ಪಡೆಯುವ ಸಾಧ್ಯತೆಯಿದೆ. ನೀವು ಉದ್ಯೋಗದೊಂದಿಗೆ ನಿಮ್ಮ ಸ್ವಂತ ಸಣ್ಣ ಉದ್ಯಮವನ್ನು ಪ್ರಾರಂಭಿಸಲು ಬಯಸಿದರೆ, ನೀವು ಉತ್ತಮ ಅವಕಾಶವನ್ನು ಪಡೆಯಬಹುದು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರಲಿದೆ. ನಿಮ್ಮ ಖರ್ಚುಗಳನ್ನು ನೀವು ಕಡಿತಗೊಳಿಸಬೇಕಾಗಿದೆ.
ಮನೆಯ ವಾತಾವರಣ ಚೆನ್ನಾಗಿರಲಿದೆ, ಆರೋಗ್ಯದ ಕಡೆಗೆ ಗಮನಹರಿಸಿ.
ಅದೃಷ್ಟದ ಬಣ್ಣ: ಗಾಢ ಗುಲಾಬಿ
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಸಮಯ: ಬೆಳಿಗ್ಗೆ 8 ರಿಂದ ಮಧ್ಯಾಹ್ನ 2:30 ರವರೆಗೆ
ಕನ್ಯಾ ರಾಶಿ
ನಿಮ್ಮ ಸಂಗಾತಿಯೊಂದಿಗೆ ಉತ್ತಮ ನಡವಳಿಕೆಯನ್ನು ಇಟ್ಟುಕೊಳ್ಳಿ. ಗ್ರಹಗಳ ಬದಲಾವಣೆ ನಿಮ್ಮ ವೈವಾಹಿಕ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರಬಹುದು. ಹಣದ ವಿಷಯದಲ್ಲಿಈ ದಿನ ಉತ್ತಮವಾಗುದೆ. ನಿಮ್ಮ ಆದಾಯವನ್ನು ಹೆಚ್ಚಿಸಲು ನೀವು ಪ್ರಯತ್ನಿಸಿದರೆ ನೀವು ಯಶಸ್ಸನ್ನು ಪಡೆಯಬಹುದು. ಖಾಸಗಿ ಉದ್ಯೋಗ ಮಾಡುವವರು ಮತ್ತಷ್ಟು ಶ್ರಮ ಪಡಬೇಕಾಗುತ್ತದೆ. ಇಂದು ನೀವು ಮಾನಸಿಕವಾಗಿ ಸಾಕಷ್ಟು ಒತ್ತಡವನ್ನು ಅನುಭವಿಸುವಿರಿ. ಮನಸ್ಸಿನಲ್ಲಿ ಅನೇಕ ರೀತಿಯ ನಕಾರಾತ್ಮಕ ಆಲೋಚನೆಗಳೂ ಬರಬಹುದು. ವ್ಯಾಪಾರಸ್ಥರಿಗೆ ಮಿಶ್ರ ಲಾಭ. ಆರೋಗ್ಯ ಸಮಸ್ಯೆ ನಿರ್ಲಕ್ಷ್ಯ ಮಾಡಬೇಡಿ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಮಧ್ಯಾಹ್ನ 1:30 ರಿಂದ ಸಂಜೆ 7 ರವರೆಗೆ
ತುಲಾ ರಾಶಿ
ವಿದ್ಯಾರ್ಥಿಗಳು ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರೆ, ಧನಾತ್ಮಕವಾಗಿರಿ, ನಿಮ್ಮ ಶ್ರಮಕ್ಕೆ ಫಲ ಸಿಗಲಿದೆ. ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ, ಆದರೆ ಇಂದು ವೆಚ್ಚಗಳು ಸ್ವಲ್ಪ ಹೆಚ್ಚಾಗಬಹುದು. ನಿಮ್ಮ ಬಜೆಟ್‌ಗಿಂತ ಹೆಚ್ಚು ಖರ್ಚು ಮಾಡದಿರುವುದು ಉತ್ತಮ. ಕಚೇರಿಯಲ್ಲಿನ ಉನ್ನತ ಅಧಿಕಾರಿಗಳಿಂದ ನೀವು ಕೆಲವು ಪ್ರಮುಖ ಸಲಹೆಗಳನ್ನು ಪಡೆಯಬಹುದು. ನೀವು ನಿರುದ್ಯೋಗಿಗಳಾಗಿದ್ದರೆ ಮತ್ತು ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮಗೆ ದೊಡ್ಡ ಕಂಪನಿಯಿಂದ ಸಂದರ್ಶನ ಕರೆ ಬರಬಹುದು. ವ್ಯಾಪಾರಸ್ಥರಿಗೆ ಉತ್ತಮ ಲಾಭ ದೊರೆಯಲಿದೆ. ನಿಮ್ಮ ಕೆಲಸ ಕಾರ್ಯಗಳಿಗೆ ಜೀವನ ಸಂಗಾತಿಯ ಬೆಂಬಲ ಸಿಗಲಿದೆ. ಆರೋಗ್ಯದ ದೃಷ್ಟಿಯಿಂದ ದಿನವು ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಬೆಳಿಗ್ಗೆ 8:40 ರಿಂದ ಮಧ್ಯಾಹ್ನ 12:30 ರವರೆಗೆ
ವೃಶ್ಚಿಕ ರಾಶಿ
ನೀವು ಕೆಲವು ಸಮಯದಿಂದ ನಿಮ್ಮ ಕೌಟುಂಬಿಕ ಜೀವನಕ್ಕೆ ಸರಿಯಾದ ಗಮನವನ್ನು ನೀಡಲು ಸಾಧ್ಯವಾಗದಿದ್ದರೆ, ಈ ದಿನ ಕುಟುಂಬದ ಕಡೆ ಗಮನಹರಿಸಲು, ಕುಟುಂಬದ ಜೊತೆ ಸಮಯ ಕಳೆಯಲು ಸಮಯ ಸಿಗುತ್ತದೆ. ವ್ಯಾಪಾರಸ್ಥರು ಇಂದು ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸದಿರುವುದು ಒಳ್ಳೆಯದು. ನಿಮ್ಮ ವಿರೋಧಿಗಳ ಬಗ್ಗೆಯೂ ನೀವು ಜಾಗರೂಕರಾಗಿರಬೇಕು. ಉದ್ಯೋಗಿಗಳಿಗೆ ಈ ದಿನವು ಸಾಮಾನ್ಯವಾಗಿರುತ್ತದೆ. ಹಣದ ವಿಷಯದಲ್ಲಿ ದಿನವು ಸರಾಸರಿಯಾಗಿರಲಿದೆ. ಆರೋಗ್ಯಕ್ಕೆ ಸಂಬಂಧಿಸಿದಂತೆ ನೋಡುವುದಾದರೆ ಈ ದಿನ ಆಲಸ್ಯ ಹೆಚ್ಚಿರಲಿದೆ.
ಅದೃಷ್ಟದ ಬಣ್ಣ: ಗಾಢ ಹಳದಿ
ಅದೃಷ್ಟದ ಸಂಖ್ಯೆ: 14
ಅದೃಷ್ಟದ ಸಮಯ: ಸಂಜೆ 4:05 ರಿಂದ ರಾತ್ರಿ 9 ರವರೆಗೆ
ಧನು ರಾಶಿ
ಹವಾಮಾನ ಬದಲಾವಣೆಯಿಂದ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳಿರಬಹುದು. ನಿಮ್ಮ ದೈನಂದಿನ ದಿನಚರಿಯಲ್ಲಿ ಬದಲಾವಣೆಗಳನ್ನು ಮಾಡಿಕೊಳ್ಳಲು ಸಲಹೆ ನೀಡಲಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಸಂಗಾತಿಯ ಮನಸ್ಥಿತಿ ಸರಿಯಿರಲ್ಲ, ಅವರ ಜೊತೆ ವಾದ ಮಾಡುವುದರಿಂದ ಸಮಸ್ಯೆ ಮತ್ತಷ್ಟು ಹೆಚ್ಚಾಗಬಹುದು. ಉದ್ಯಮಿಗಳಿಗೆ ಹೂಡಿಕೆ ಮಾಡಲು ಉತ್ತಮ ಅವಕಾಶ ಸಿಗಲಿದೆ. ಈ ಹೂಡಿಕೆ ಲಾಭ ಕೂಡ ನೀಡಲಿದೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಬೆಳಿಗ್ಗೆ 6:45 ರಿಂದ 10:25 ರವರೆಗೆ
ಮಕರ ರಾಶಿ
ಮನೆಯ ಹಿರಿಯರೊಂದಿಗೆ ನಿಮ್ಮ ಸಂಬಂಧವನ್ನು ಉತ್ತಮವಾಗಿಡಲು ಪ್ರಯತ್ನಿಸಬೇಕು. ಅವರ ಸಲಹೆ ನಿರ್ಲಕ್ಷ್ಯ ಮಾಡಬೇಡಿ. ನೀವು ಅವಿವಾಹಿತರಾಗಿದ್ದರೆ ಹಾಗೂ ಜೀವನ ಸಂಗಾತಿಯನ್ನು ಹುಡುಕುತ್ತಿದ್ದರೆ, ಇಂದು ನಿಮಗೆ ಒಳ್ಳೆಯ ಮದುವೆಯ ಪ್ರಸ್ತಾಪವು ಬರಬಹುದು. ಶೀಘ್ರದಲ್ಲೇ ನಿಮ್ಮ ಮದುವೆ ಕೂಡಿ ಬರಲಿದೆ. ಹಣದ ವಿಷಯದಲ್ಲಿ ದಿನವು ಉತ್ತಮವಾಗಿದೆ. ನಿಮ್ಮ ಆದಾಯ ಹೆಚ್ಚಾಗಬಹುದು. ಕೆಲಸದ ಬಗ್ಗೆ ಹೇಳುವಯದಾದರೆ ಬದಲಾವಣೆಯ ಸಮಯ ನಡೆಯುತ್ತಿದೆ. ನೀವು ಎಷ್ಟು ಕಷ್ಟಪಟ್ಟು ಕೆಲಸ ಮಾಡುತ್ತೀರೋ ಅಷ್ಟು ಉತ್ತಮ ನೀವು ಪಡೆಯುತ್ತೀರಿ. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 31
ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ ಮಧ್ಯಾಹ್ನ 3 ರವರೆಗೆ
ಕುಂಭ ರಾಶಿ
ಕಚೇರಿಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ಇಂದು ನೀವು ಪ್ರಮುಖ ಸಭೆಯಲ್ಲಿ ಭಾಗಿಯಾಗಬಹುದು. ವ್ಯಾಪಾರಸ್ಥರಿಗೆ ಇಂದು ಸವಾಲಿನ ದಿನವಾಗಿರುತ್ತದೆ. ನೀವು ಕೆಲವು ಕಾನೂನು ವ್ಯವಹಾರದಲ್ಲಿ ಸಿಕ್ಕಿಬೀಳಬಹುದು. ಹಣಕ್ಕೆ ಸಂಬಂಧಿಸಿದ ಚಿಂತೆಗಳು ಹೆಚ್ಚಾಗಬಹುದು. ನೀವು ಹಣಕಾಸಿನ ಮುಗ್ಗಟ್ಟು ಎದುರಿಸಬೇಕಾಗಬಹುದು. ಮನೆಯ ಕಿರಿಯ ಸದಸ್ಯರೊಂದಿಗೆ ಹೆಚ್ಚು ಕಟ್ಟುನಿಟ್ಟಾಗಿರಬೇಡಿ. ನಿಮ್ಮ ಆರೋಗ್ಯ ದುರ್ಬಲವಾಗಿರುತ್ತದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: 11:30 ರಿಂದ ಮಧ್ಯಾಹ್ನ 2 ರವರೆಗೆ
ಮೀನ ರಾಶಿ
ವ್ಯಾಪಾರಸ್ಥರಿಗೆ ಇಂದು ಅತ್ಯಂತ ಮಂಗಳಕರ ದಿನವಾಗಿರುತ್ತದೆ. ನೀವು ದೊಡ್ಡ ಆರ್ಥಿಕ ಲಾಭವನ್ನು ಪಡೆಯಬಹುದು. ಇದಲ್ಲದೆ, ಇಂದು ನಿಮ್ಮ ಯಾವುದೇ ದೊಡ್ಡ ಸಮಸ್ಯೆಗಳನ್ನು ಪರಿಹರಿಸುವ ಸಾಧ್ಯತೆಯಿದೆ. ಉದ್ಯೋಗಸ್ಥರಿಗೆ ಪ್ರಯಾಣದ ಸಾಧ್ಯತೆಯಿದೆ. ನಿಮ್ಮ ಈ ಪ್ರಯಾಣವು ತುಂಬಾ ಪ್ರಯೋಜನಕಾರಿಯಾಗಿದೆ, ನಿಮ್ಮ ಆರ್ಥಿಕ ಸ್ಥಿತಿಯು ಉತ್ತಮವಾಗಿರುತ್ತದೆ. ಕುಟುಂಬ ಜೀವನದಲ್ಲಿ ಖುಷಿ ಇರಲಿದೆ, ಆರೋಗ್ಯ ಕೂಡ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ತಿಳಿ ಹಳದಿ
ಅದೃಷ್ಟ ಸಂಖ್ಯೆ: 9
ಅದೃಷ್ಟದ ಸಮಯ: ಬೆಳಿಗ್ಗೆ 4:40 ರಿಂದ ಮಧ್ಯಾಹ್ನ 3:00 ರವರೆಗೆ



Click it and Unblock the Notifications












