Latest Updates
-
ಬೇಸಿಗೆಯಲ್ಲಿ ಈ ಗಂಜಿ ಕುಡಿಯಿರಿ.. ಕೊಬ್ಬು ಕಡಿಮೆ, ದೇಹಕ್ಕೂ ತಂಪು! ಈ ಗಂಜಿಯ ಆರೋಗ್ಯ ರಹಸ್ಯ ಇಲ್ಲಿದೆ -
30 ವರ್ಷಗಳ ಬಳಿಕ ಸೂರ್ಯ-ಶನಿ ಸಂಯೋಗ! ಯಾರಿಗೆ ಶುಭ? ಯಾರಿಗೆ ಸಮಸ್ಯೆ? 12 ರಾಶಿಗಳ ಜಾತಕ ತಿಳಿಯಿರಿ -
ಈ 5 ವಿಷಯಗಳಲ್ಲಿ ಮಿತಿ ಮೀರಿದ್ರೆ ಜೀವನ ಸರ್ವನಾಶ! ಅಹಂಕಾರ ಬಿಡಿ.. ಇಂದೇ ಇವುಗಳಿಂದ ದೂರವಿರಿ -
ಪಕ್ಕಾ ಹೈದರಾಬಾದಿ ರುಚಿ.. ಅತಿಥಿಗಳು ಬಂದ್ರೆ ಈ ಚಿಕನ್ ಯಖನಿ ಪುಲಾವ್ ಮಾಡಿ! ಸಿಂಪಲ್ & ಸೂಪರ್ ರುಚಿ -
2026ರ ಸೂರ್ಯ ಗೋಚಾರ: ಇವರಿಗೆ ಸಿಗಲಿದೆ ಸರ್ಕಾರಿ ಉದ್ಯೋಗ! ಯಾರಿಗೆ ಮಾನಸಿಕ ಒತ್ತಡ? 12 ರಾಶಿಯವರಿಗೆ ರಾಶಿಫಲ ಇಲ್ಲಿದೆ -
ಹೋಟೆಲ್ ಶೈಲಿಯ ಆಲೂ ಮಸಾಲಾ ಪೂರಿ! ಈ ರೀತಿ ಮನೆಯಲ್ಲೇ ಮಾಡಿ, ಪರ್ಫೆಕ್ಟ್ ಆಗಿ ಉಬ್ಬಿ ಬರುತ್ತೆ -
ಇವರ ಜೀವನದಲ್ಲಿ ಹೊಸ ಕಿಡಿ ಹೊತ್ತಿಕೊಳ್ಳಲಿದೆ! ಹಠಮಾರಿ ಸ್ವಭಾವವನ್ನು ಬಿಡಿ -
March 12 Horoscope: ಹಣಕಾಸಿನ ಸವಾಲುಗಳು ದೊಡ್ಡದಾಗುವ ಸಂಭವ -
ಕೋಮಾದಲ್ಲಿದ್ದ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂ ಒಪ್ಪಿಗೆ: ಈ ಕೇಸ್ ಬಗ್ಗೆ ನಿಮಗೆ ಗೊತ್ತಾ? -
ಪಂಜಾಬಿ ಸ್ಟೈಲ್ ಮಲೈ ಲಸ್ಸಿ! ಈ ರೀತಿ ಮಾಡಿ ಗಟ್ಟಿ ಕೆನೆಯ ಢಾಬಾ ಸ್ಟೈಲ್ ಲಸ್ಸಿ.. ಬಿಸಿಲ ತಾಪಕ್ಕೆ ಬೆಸ್ಟ್ ಕೂಲ್ ಡ್ರಿಂಕ್
Horoscope Today 20 May 2023: ಶನಿವಾರ: ಈ ದಿನ 12 ರಾಶಿಗಳ ರಾಶಿಫಲ ಹೇಗಿರಲಿದೆ?
ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಮೇ 20ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ಉತ್ತರಾಯಣ
ಋತು: ವಸಂತ
ಮಾಸ: ಜ್ಯೇಷ್ಠ
ಪಕ್ಷ: ಶುಕ್ಲಪಕ್ಷ
ತಿಥಿ: ಪ್ರತಿಪಾದ
ನಕ್ಷತ್ರ: ಬೆಳಗ್ಗೆ 08:03ರವರೆಗೆ ಕೃತಿಕಾ ನಂತರ ರೋಹಿಣಿ
ರಾಹುಕಾಲ: ಬೆಳಗ್ಗೆ 08:53ರಿಂದ 10:35ರವರೆಗೆ
ಮೇಷ ರಾಶಿ
ಷೇರು ಮಾರುಕಟ್ಟೆಯಲ್ಲಿ ಕೆಲಸ ಮಾಡುವವರಿಗೆ ಇಂದು ಬಹಳ ಒಳ್ಳೆಯ ದಿನ. ನೀವು ಬಯಸಿದ ಫಲಿತಾಂಶವನ್ನು ಪಡೆಯಬಹುದು. ಖಾಸಗಿ ಉದ್ಯೋಗಗಳು ಮಾಡುವ ಜನರು ತಮ್ಮ ಕಠಿಣ ಪರಿಶ್ರಮಕ್ಕೆ ಉತ್ತಮ ಫಲಿತಾಂಶವನ್ನು ಪಡೆಯುತ್ತಾರೆ. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ಇಂದು ನೀವು ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಬಹುದು. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿರಲಿದೆ. ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ತೊಡೆದುಹಾಕಲು, ನೀವು ನಿಮ್ಮ ಆಹಾರಕ್ರಮದ ಕಡೆ ಗಮನಹರಿಸಿ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 15
ಅದೃಷ್ಟದ ಸಮಯ: ಸಂಜೆ 6 ರಿಂದ 8:25 ರವರೆಗೆ

ವೃಷಭ ರಾಶಿ
ನಿಮ್ಮ ಮಗುವಿನ ಶಿಕ್ಷಣಕ್ಕೆ ಸಂಬಂಧಿಸಿದ ಚಿಂತೆ ನಿಮ್ಮನ್ನು ಕಾಡುತ್ತಿದ್ದರೆ ಇಂದು ನಿಮ್ಮ ಸಮಸ್ಯೆಯು ಕೊನೆಗೊಳ್ಳಬಹುದು. ಶಿಕ್ಷಣ ಕ್ಷೇತ್ರದಲ್ಲಿ ಅವರ ಸಾಧನೆ ಉತ್ತಮವಾಗಿರುತ್ತದೆ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ನೀವು ಸಾಲವನ್ನು ತೆಗೆದುಕೊಳ್ಳಬೇಕಾಗಬಹುದು. ನಿಮ್ಮ ಹೆಚ್ಚುತ್ತಿರುವ ವೆಚ್ಚಗಳನ್ನು ಪರಿಶೀಲಿಸಲು ನಿಮಗೆ ಸಲಹೆ ನೀಡಲಾಗಿದೆ. ಕಚೇರಿಯಲ್ಲಿ, ಕೋಪ ಮತ್ತು ದುರಹಂಕಾರದಂತಹ ನಕಾರಾತ್ಮಕ ಭಾವನೆಗಳನ್ನು ತಪ್ಪಿಸಲು ನಿಮಗೆ ಸಲಹೆ ನೀಡಲಾಗಿದೆ. ನೀವು ನಿಮ್ಮ ಕೆಲಸದ ಮೇಲೆ ಗಮನ ಕೇಂದ್ರೀಕರಿಸುತ್ತೀರಿ. ವ್ಯಾಪಾರಸ್ಥರಿಗೆ ಮಿಶ್ರ ಲಾಭ ದೊರೆಯಲಿದೆ. ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ಒಳ್ಳೆಯ ದಿನವಲ್ಲ.
ಅದೃಷ್ಟದ ಬಣ್ಣ: ಆಕಾಶ
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಮಧ್ಯಾಹ್ನ 1:35 ರಿಂದ ಸಂಜೆ 4:35 ರವರೆಗೆ
ಮಿಥುನ ರಾಶಿ
ನೀವು ಅವಿಭಕ್ತ ಕುಟುಂಬದಲ್ಲಿ ವಾಸಿಸುತ್ತಿದ್ದರೆ, ಇಂದು ಆತುರದಿಂದ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ನಿಮ್ಮ ಪ್ರೀತಿಪಾತ್ರರ ಸಂತೋಷವನ್ನು ನೀವು ನೋಡಿಕೊಳ್ಳಬೇಕು. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಬಲವಾದ ಸಾಧ್ಯತೆಯಿದೆ. ನಿಮ್ಮ ಆರ್ಥಿಕ ಪ್ರಯತ್ನ ಯಶಸ್ವಿಯಾಗಬಹುದು. ನೀವು ಕಚೇರಿಯಲ್ಲಿ ಕೆಲಸದ ಕಡೆ ಗಮನರಿಸಿ. ನಿರ್ಲಕ್ಷ್ಯ ಒಳ್ಳೆಯದಲ್ಲ. ವ್ಯಾಪಾರಸ್ಥರು ದೂರ ಪ್ರಯಾಣ ಮಾಡಬೇಕಾಗಬಹುದು. ಈ ಪ್ರವಾಸದಿಂದ ನೀವು ನಿರೀಕ್ಷಿತ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆಯಿದೆ. ನಿಮಗೆ ಆಸ್ತಮಾದ ದೂರು ಇದ್ದರೆ ನಿಮ್ಮ ಸಮಸ್ಯೆ ಹೆಚ್ಚಾಗಬಹುದು.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 17
ಅದೃಷ್ಟದ ಸಮಯ: ಬೆಳಗ್ಗೆ 5 ರಿಂದ 8:20 ರವರೆಗೆ
ಕರ್ಕ ರಾಶಿ
ವಿದ್ಯಾರ್ಥಿಗಳು ತಮ್ಮ ಸಮಯವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಸಲಹೆ ನೀಡಲಾಗುದೆ. ಉದ್ಯೋಗಿಗಳು ಹಾಗೂ ವ್ಯಾಪಾರಸ್ಥರು ಹೆಚ್ಚಿನ ಶ್ರಮವಹಿಸಬೇಕಾಗಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನೀವು ಹಣ ಗಳಿಸುವ ಅವಕಾಶವನ್ನು ಪಡೆಯಬಹುದು. ಆದರೆ, ನೀವು ತರಾತುರಿಯಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳುವುದನ್ನು ತಪ್ಪಿಸಬೇಕು. ವೈವಾಹಿಕ ಜೀವನದಲ್ಲಿ ಖುಷಿ ಇರಲಿದೆ. ನಿಮ್ಮ ಆರೋಗ್ಯದ ಬಗ್ಗೆ ಹೇಳುವುದಾದರೆ ಕಣ್ಣುಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೊಂದಿರಬಹುದು.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಮಧ್ಯಾಹ್ನ 12:55 ರಿಂದ ಸಂಜೆ 6 ರವರೆಗೆ
ಸಿಂಹ ರಾಶಿ
ತಾಯಿಯ ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಈಗಾಗಲೇ ಅವರಿಗೆ ಆರೋಗ್ಯ ಸಮಸ್ಯೆ ಇದ್ದರೆ, ಇಂದು ಅವರ ಸಮಸ್ಯೆ ಹೆಚ್ಚಾಗಬಹುದು. ಕಚೇರಿಯಲ್ಲೂ ಕೆಲಸದಲ್ಲಿ ಒಳ್ಳೆಯ ಗಮನ ನೀಡದರೆ ಬಾಸ್ ಕೋಪಕ್ಕೆ ಗುರಿಯಾಗಬೇಕಾಗುತ್ತದೆ. ಇದರಿಂದ ಆತ್ಮವಿಶ್ವಾಸ ಕಡಿಮೆಯಾಗಬಹುದು. ಉದ್ಯಮಿಗಳು ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ದೊರೆಯಲಿದೆ. ಹಣದ ವಿಷಯದಲ್ಲಿ ಮಿಶ್ರಫಲ. ಅಗತ್ಯಕ್ಕಿಂತ ಹೆಚ್ಚು ಖರ್ಚು ಮಾಡಬೇಡಿ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 14
ಅದೃಷ್ಟದ ಸಮಯ: ಸಂಜೆ 4:20 ರಿಂದ 7:20 ರವರೆಗೆ
ಕನ್ಯಾ ರಾಶಿ
ನೀವು ಪಾಲುದಾರಿಕೆಯಲ್ಲಿ ಹೊಸ ಕೆಲಸವನ್ನು ಪ್ರಾರಂಭಿಸಲಿದ್ದರೆ ಒಳ್ಳೆಯ ಲಾಭ ಗಳಿಸಬಹುದು. ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ನೀವು ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಂಡರೆ ನಿಮ್ಮ ಹಿರಿಯರ ಬೆಂಬಲ ನಿಮಗೆ ಸಿಗುತ್ತದೆ. ಹಣದ ವಿಷಯದಲ್ಲಿ ಈ ದಿನವು ಸಾಮಾನ್ಯವಾಗಿರುತ್ತದೆ. ಆರೋಗ್ಯಕ್ಕೆ ಸಂಬಂಧಿಸಿದಂತೆ, ನೀವು ಸ್ನಾಯುಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೊಂದಿರಬಹುದು.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಸಮಯ: ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ರವರೆಗೆ
ತುಲಾ ರಾಶಿ
ಇಂದು ಉದ್ಯಮಿಗಳಿಗೆ ಬಹಳ ಅದೃಷ್ಟದ ದಿನವಾಗಿದೆ. ನಿಮ್ಮ ವ್ಯಾಪಾರದಲ್ಲಿ ಒಳ್ಳೆಯ ಲಾಭಗಳಿಸಬಹುದು. ಈ ದಿನ ನಿಮ್ಮ ಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಉದ್ಯೋಗಸ್ಥರು ತಮ್ಮ ಪ್ರತಿಭೆಯಿಂದ ಗುರುತಿಸಿಕೊಳ್ಳುವಿರಿ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಮನೆಯಲ್ಲಿ ಈ ದಿನ ವಾತಾವರಣ ಚೆನ್ನಾಗಿರಲಿದೆ. ಆರೋಗ್ಯಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ತುಂಬಾ ಆಯಾಸ ಮಾಡಿಕೊಳ್ಳುವ ಬದಲಿಗೆ ವಿಶ್ರಾಂತಿ ಕಡೆ ಗಮನಹರಿಸಿದರೆ ಒಳ್ಳೆಯದು.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 6
ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 9:05 ರವರೆಗೆ
ವೃಶ್ಚಿಕ ರಾಶಿ
ವೈವಾಹಿಕ ಜೀವನದಲ್ಲಿ ಏನಾದರೂ ಸಮಸ್ಯೆಯಿದ್ದರೆ ಶೀಘ್ರದಲ್ಲೇ ಎಲ್ಲವೂ ನಿಮ್ಮ ನಡುವೆ ಸಾಮಾನ್ಯವಾಗಿರುತ್ತದೆ. ನಿಮ್ಮ ಪ್ರೀತಿಪಾತ್ರರ ಭಾವನೆಗಳನ್ನು ನೀವು ಗೌರವಿಸಬೇಕು. ಹಣಕಾಸಿನ ಸ್ಥಿತಿ ಚೆನ್ನಾಗಿರಲಿದೆ. ರಿಯಲ್ ಎಸ್ಟೇಟ್ ವ್ಯವಹಾರ ಮಾಡುವವರಿಗೆ ಲಾಭದಾಯಕವಾಗಲಿದೆ. ಆಫೀಸ್‌ನಲ್ಲಿ ಯಾವುದೇ ಕೆಲಸ ಬಾಕಿಯುಳಿಸಬೇಡಿ. ವ್ಯಾಪಾರಸ್ಥರು ಲಾಭ ಗಳಿಸಲು ಕಷ್ಟಪಡಬೇಕಾಗಬಹುದು. ಆರೋಗ್ಯದ ದೃಷ್ಟಿಯಿಂದ ದಿನವು ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಗಾಢ ಹಸಿರು
ಅದೃಷ್ಟದ ಸಂಖ್ಯೆ: 28
ಅದೃಷ್ಟದ ಸಮಯ: ಬೆಳಿಗ್ಗೆ 6:20 ರಿಂದ 8:45 ರವರೆಗೆ
ಧನು ರಾಶಿ
ಉದ್ಯೋಗದ ಹುಡುಕಾಟದಲ್ಲಿದ್ದರೆ ನಿಮಗೆ ಉತ್ತಮ ಅವಕಾಶ ದೊರೆಯಲಿದೆ. ನಿಮಗೆ ಒಳ್ಳೆಯ ಅವಕಾಶ ಸಿಗಲಿದೆ. ವೈವಾಹಿಕ ಜೀವನದಲ್ಲಿ ಪರಿಸ್ಥಿತಿಗಳು ಆಹ್ಲಾದಕರವಾಗಿರುತ್ತದೆ. ಇಂದು ನೀವು ನಿಮ್ಮ ಸಂಗಾತಿಯಿಂದ ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ಹಣದ ವಿಷಯದಲ್ಲಿ ನೀವು ತುಂಬಾ ಅದೃಷ್ಟದ ದಿನವಾಗಿದೆ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಸಮಯ: ಸಂಜೆ 4:15 ರಿಂದ 8:15 ರವರೆಗೆ
ಮಕರ ರಾಶಿ
ಕಛೇರಿಯಲ್ಲಿ ಅಲ್ಲಿ ಇಲ್ಲಿ ಮಾತನಾಡುತ್ತಾ ನಿಮ್ಮ ಅಮೂಲ್ಯ ಸಮಯವನ್ನು ವ್ಯರ್ಥ ಮಾಡಬೇಡಿ. ಕೆಲಸದ ಕಡೆ ಗಮನಹರಿಸಿ. ನೀವು ಉದ್ಯಮಿಯಾಗಿದ್ದರೆ ಮತ್ತು ಇತ್ತೀಚೆಗೆ ಹೊಸ ವ್ಯವಹಾರವನ್ನು ಪ್ರಾರಂಭಿಸಿದ್ದರೆ, ನೀವು ಅದರ ಪ್ರಚಾರದ ಕಡೆ ಹೆಚ್ಚು ಗಮನ ಹರಿಸಬೇಕು. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಸಾಮಾನ್ಯವಾಗಿರುತ್ತದೆ. ಕೆಲಸದ ಜೊತೆಗೆ ಕುಟುಂಬಕ್ಕೆ ಸಾಕಷ್ಟು ಸಮಯವನ್ನು ನೀಡಲು ಪ್ರಯತ್ನಿಸಿ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯದ ಬಗ್ಗೆ ನೋಡುವುದಾದರೆ ಸಣ್ಣಪುಟ್ಟ ಸಮಸ್ಯೆಗಳಿರಬಹುದು.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ ಮಧ್ಯಾಹ್ನ 3 ರವರೆಗೆ
ಕುಂಭ ರಾಶಿ
ನೀವು ಉದ್ಯಮಿಯಾಗಿದ್ದರೆ ಮತ್ತು ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಲಿದ್ದರೆ, ಸ್ವಲ್ಪ ಸಮಯ ಕಾಯಲು ನಿಮಗೆ ಸಲಹೆ ನೀಡಲಾಗುವುದು. ಆತುರ ನಿಮಗೆ ಒಳ್ಳೆಯದಲ್ಲ. ಉದ್ಯೋಗಸ್ಥರು ಕೆಲಸದ ಕಡೆ ಗಮನಹರಿಸಬೇಕು, ಕೆಲಸದಲ್ಲಿ ತಪ್ಪುಗಳಾಗದಂತೆ ಎಚ್ಚರವಹಿಸಿ. ಮನೆಯ ವಾತಾವರಣ ಚೆನ್ನಾಗಿರುತ್ತದೆ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಮಾಧುರ್ಯ ಹೆಚ್ಚಾಗುತ್ತದೆ. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಗಾಢ ಕೆಂಪು
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಬೆಳಿಗ್ಗೆ 6:55 ರಿಂದ 8 ರವರೆಗೆ
ಮೀನ ರಾಶಿ
ಹಣಕ್ಕೆ ಸಂಬಂಧಿಸಿದ ಚಿಂತೆ ಹೆಚ್ಚಾಗಬಹುದು, ಆರ್ಥಿಕ ಸಮಸ್ಯೆ ಅಧಿಕವಿರಲಿದೆ. ದಿನನಿತ್ಯದ ಖರ್ಚುಗಳನ್ನು ನಿಭಾಯಿಸಲು ಸಹ ನಿಮಗೆ ಕಷ್ಟವಾಗಬಹುದು. ಸಂಗಾತಿಯ ಆರೋಗ್ಯದಲ್ಲಿ ಹಠಾತ್ ಕುಸಿತ ಉಂಟಾಗಬಹುದು. ಈ ಸಮಯದಲ್ಲಿ ನಿಮ್ಮ ಆತ್ಮೀಯರಿಗೆ ಸರಿಯಾದ ಆರೈಕೆಯ ಅಗತ್ಯವಿದೆ. ಅತಿಯಾಗಿ ಕೆಲಸದ ಒತ್ತಡ ತೆಗೆದುಕೊಳ್ಳುವುದನ್ನು ತಪ್ಪಿಸಿ. ನೀವು ಒಂದೇ ಸಮಯದಲ್ಲಿ ಹಲವಾರು ಕಾರ್ಯಗಳನ್ನು ನಿರ್ವಹಿಸುವುದನ್ನು ತಪ್ಪಿಸಬೇಕು. ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢವಾಗಿರಲು, ಪ್ರತಿದಿನ ಯೋಗ ಮತ್ತು ಧ್ಯಾನ ಮಾಡಿ. ನೀವು ನಕಾರಾತ್ಮಕ ಆಲೋಚನೆಗಳಿಂದ ದೂರವಿರಬೇಕು.
ಅದೃಷ್ಟದ ಬಣ್ಣ: ಬೂದು
ಅದೃಷ್ಟದ ಸಂಖ್ಯೆ: 34
ಅದೃಷ್ಟದ ಸಮಯ: ಸಂಜೆ 4:30 ರಿಂದ ಸಂಜೆ 7 ರವರೆಗೆ



Click it and Unblock the Notifications












