Horoscope Today 25 May 2023: ಗುರುವಾರ: ಈ ದಿನ 12 ರಾಶಿಗಳ ರಾಶಿಫಲ ಹೇಗಿದೆ?

ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಮೇ‌25ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ಉತ್ತರಾಯಣ
ಋತು: ವಸಂತ
ಮಾಸ: ಜ್ಯೇಷ್ಠ
ಪಕ್ಷ: ಶುಕ್ಲಪಕ್ಷ
ತಿಥಿ: ಷಷ್ಠಿ
ನಕ್ಷತ್ರ: ಪುಷ್ಯ ಸಂಜೆ 05:54ರವರೆಗೆ ನಂತರ ಅಶ್ಲೇಷ
ರಾಹುಕಾಲ: ಮಧ್ಯಾಹ್ನ 02:01ರವರೆಗೆ 03:44ರವರೆಗೆ

ಮೇಷ ರಾಶಿ
ಈ ದಿನ ಏರಳಿತಗಳಿಂದ ಕೂಡಿರಲಿದೆ. ಉದ್ಯೋಗ ಅಥವಾ ವ್ಯಾಪಾರದಲ್ಲಿ ನೀವುಪ್ರತಿಕೂಲ ಪರಿಸ್ಥಿತಿಯನ್ನು ಎದುರಿಸಬೇಕಾಗಬಹುದು. ಇಂದು ಕಚೇರಿಯಲ್ಲಿ ನಿಮಗೆ ನೀಡಿದ ಯಾವುದೇ ಪ್ರಮುಖ ಜವಾಬ್ದಾರಿಯನ್ನು ನಿಮ್ಮಿಂದ ಹಿಂಪಡೆಯಬಹುದು. ಇದು ನಿಮ್ಮ ಆತ್ಮವಿಶ್ವಾಸವನ್ನು ಕುಗ್ಗಿಸುತ್ತದೆ. ಆದರೂ ತಾಳ್ಮೆಯಿಂದಿರಲು ಸಲಹೆ ನೀಡಲಾಗಿದೆ. ವ್ಯಾಪಾರಸ್ಥರು ಸಂಕಷ್ಟವನ್ನು ಎದುರಿಸಬೇಕಾಗಬಹುದು. ಕುಟುಂಬ ಜೀವನ ಚೆನ್ನಾಗಿರಲಿದೆ, ಆರೋಗ್ಯದ ಬಗ್ಗೆ ಗಮನಹರಿಸಿ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಸಂಜೆ 6:20 ರಿಂದ ರಾತ್ರಿ 8:20 ರವರೆಗೆ

Dina Bhavishya -May 25 2023 Today Rashi Bhavishya, Daily Horoscope in Kannada

ವೃಷಭ ರಾಶಿ
ಪ್ರೀತಿಯ ವಿಷಯದಲ್ಲಿ ಈ ದಿನ ತುಂಬಾ ಚೆನ್ನಾಗಿದೆ. ಇಂದು ನಿಮ್ಮ ಸಂಗಾತಿಯೊಂದಿಗೆ ನಿಮ್ಮ ನೆಚ್ಚಿನ ಸ್ಥಳಗಳಿಗೆ ಹೋಗಬಹುದು. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಸಾಧ್ಯತೆ ಇದೆ. ನೀವು ಹೊಸ ಆದಾಯದ ಗಳಿಸುತ್ತೀರಿ. ಕಚೇರಿಯಲ್ಲಿ ದೀರ್ಘ ಸಮಯದಿಂದ ಯಾವುದೇ ಕೆಲಸ ಬಾಕಿ ಉಳಿದಿದ್ದರೆ ಪೂರ್ಣಗೊಳಿಸಲು ಪ್ರಯತ್ನಿಸಿ, ವ್ಯಾಪಾರಸ್ಥರಿಗೆ ಅನುಕೂಲಕರವಾಗುದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ನಿಮಗೆ ಒಳ್ಳೆಯದಿದೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಸಂಜೆ 6 ರಿಂದ 8:25 ರವರೆಗೆ

ಮಿಥುನ ರಾಶಿ
ಸಂಗಾತಿಯ ಮನಸ್ಥಿತಿ ಸರಿಯಿರಲ್ಲ. ಅವರ ಜೊತೆ ತರ್ಕ ಮಾಡಲು ಹೋಗಬೇಡಿ. ನಿಮ್ಮ ಮಗುವಿನ ಶಿಕ್ಷಣದ ಬಗ್ಗೆ ಕಾಳಜಿ ಹೆಚ್ಚಾಗಬಹುದು. ನೀವು ಅವರ ಅಧ್ಯಯನಕ್ಕೆ ಸಂಬಂಧಿಸಿದ ಯಾವುದೇ ನಿರ್ಧಾರವನ್ನು ತರಾತುರಿಯಲ್ಲಿ ತೆಗೆದುಕೊಳ್ಳದಿದ್ದರೆ ಅದು ಉತ್ತಮವಾಗಿರುತ್ತದೆ. ಕಚೇರಿಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ಕೆಲಸದಲ್ಲಿ ಖುಷಿಯ ವಾತಾವರಣದಲ್ಲಿ ಇರಲಿದೆ. ನೀವು ವ್ಯಾಪಾರಸ್ಥರಾಗಿದ್ದರೆ ಮತ್ತು ದೊಡ್ಡ ವ್ಯವಹಾರವನ್ನು ಮಾಡಲು ಹೊರಟಿದ್ದರೆ, ಕೆಲವು ಕಾರಣಗಳಿಂದಾಗಿ ನಿಮ್ಮ ಕೆಲಸವು ಮಧ್ಯದಲ್ಲಿ ಸಿಲುಕಿಕೊಳ್ಳಬಹುದು. ಆರೋಗ್ಯದ ದೃಷ್ಟಿಯಿಂದ ನೋಡುವುದಾದರೆ ಈ ದಿನ ಮಿಶ್ರಫಲ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 17
ಅದೃಷ್ಟದ ಸಮಯ: ಮಧ್ಯಾಹ್ನ 12:20 ರಿಂದ ಸಂಜೆ 7:05 ರವರೆಗೆ

ಕರ್ಕ ರಾಶಿ
ಹಣದ ವಿಷಯದಲ್ಲಿ, ದಿನವು ತುಂಬಾ ದುಬಾರಿಯಾಗಲಿದೆ. ವೆಚ್ಚಗಳ ಹಠಾತ್ ಹೆಚ್ಚಳದಿಂದಾಗಿ ನಿಮ್ಮ ಬಜೆಟ್ ಅಸಮತೋಲಿತವಾಗಬಹುದು. ನಿಮ್ಮ ಖರ್ಚುಗಳನ್ನು ನೀವು ನಿಯಂತ್ರಿಸುವುದು ಉತ್ತಮ. ಮನೆಯ ಹಿರಿಯರೊಂದಿಗಿನ ಸಂಬಂಧದಲ್ಲಿ ಉತ್ತಮ ಹೊಂದಾಣಿಕೆಯನ್ನು ಇರಿಸಿಕೊಳ್ಳಲು ಪ್ರಯತ್ನಿಸಿ. ಅವರ ಮಾತನ್ನು ನಿರ್ಲಕ್ಷಿಸಬೇಡಿ, ಇಲ್ಲದಿದ್ದರೆ ನಷ್ಟ ಅನುಭವಿಸಬೇಕಾಗುವುದು. ಕಚೇರಿಯಲ್ಲಿ ನೀಡಿದ ಕೆಲಸವನ್ನು ಉತ್ತಮವಾಗಿ ಪೂರ್ಣಗೊಳಿಸಲು ಪ್ರಯತ್ನಿಸಿ. ಈ ದಿನ ಆರೋಗ್ಯ ಸಂಬಂಧಿ ಸಮಸ್ಯೆಗಳಿರಬಹುದು.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 6
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ರಾತ್ರಿ 8:45 ರವರೆಗೆ

ಸಿಂಹ ರಾಶಿ
ನೀವು ಉದ್ಯಮಿಯಾಗಿದ್ದರೆ ಮತ್ತು ಹೊಸ ವ್ಯವಹಾರವನ್ನು ಪ್ರಾರಂಭಿಸಲು ಯೋಜಿಸುತ್ತಿದ್ದರೆ ಇಂದು ನಿಮ್ಮ ಸಮಸ್ಯೆ ಬಗೆಹರಿಯಲಿದೆ. ಉದ್ಯೋಗಿಗಳಿಗೆ ಅಧಿಕಾರಿಗಳ ಮಾರ್ಗದರ್ಶನ ದೊರೆಯಲಿದೆ . ನಿಮ್ಮ ಸಂಗಾತಿಯೊಂದಿಗೆ ಏನಾದರೂ ಮನಸ್ತಾಪವಿದ್ದರೆ ಮಾತನಾಡುವ ಮೂಲಕ ಬಗೆಹರಿಸಲು ಪ್ರಯತ್ನಿಸಿ. ಹಣದ ವಿಷಯದಲ್ಲಿ ದಿನವು ಸಾಮಾನ್ಯವಾಗಿರಲಿದೆ. ಆರೋಗ್ಯ ಸುಧಾರಿಸಬಹುದು.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 14
ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ ಮಧ್ಯಾಹ್ನ 3 ರವರೆಗೆ

ಕನ್ಯಾ ರಾಶಿ
ಬಹಳ ಸಮಯದ ನಂತರ ನಿಮಗಾಗಿ ಸಾಕಷ್ಟು ಸಮಯ ಸಿಗಲಿದೆ. ಈ ದಿನ ನಿಮ್ಮ ಮನಸ್ಥಿತಿ ಚೆನ್ನಾಗಿರಲಿದೆ. ಕಚೇರಿಯಲ್ಲಿ ನಿಮ್ಮ ಕೆಲಸವನ್ನು ಮೆಚ್ಚಿಕೊಳ್ಳಲಾಗುವುದು. ಆದರೆ ಈ ದಿನ ಯಾರ ಜೊತೆಯೂ ಅಹಂಕಾರದಿಂದ ವರ್ತಿಸಲು ಹೋಗಬೇಡಿ. ಉದ್ಯಮಿಗಳಿಗೆ ಹೂಡಿಕೆ ಮಾಡಲು ಉತ್ತಮ ಅವಕಾಶ ಸಿಗಲಿದೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ನಿಮ್ಮ ತಂದೆಯೊಂದಿಗಿನ ನಿಮ್ಮ ಸಂಬಂಧವು ಇನ್ನಷ್ಟು ಬಲವಾಗಲಿದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: 11:30 ರಿಂದ ಮಧ್ಯಾಹ್ನ 2 ರವರೆಗೆ

ತುಲಾ ರಾಶಿ
ನಿಮ್ಮ ಸಂಗಾತಿಯೊಂದಿಗೆ ಮನಸ್ತಾಪ ಬರಬಹುದು, ಆದರೆ ನಿಮ್ಮ ಮಹಿ ಮಾತುಗಳಿಂದ ಅವರಿಗೆ ನೋಯಿಸದಂತೆ ಎಚ್ಚರವಹಿಸಿ. ವ್ಯಾಪಾರಸ್ಥರು ಕಾನೂನು ವಿಷಯಗಳಲ್ಲಿ ಜಾಗರೂಕರಾಗಿರಲು ಸಲಹೆ ನೀಡಲಾಗಿದೆ. ಈ ದಿನ ಸುಮ್ಮನೆ ಸಮಯ ವ್ಯರ್ಥ ಮಾಡದೆ ನಿಮ್ಮ ಕೆಲಸದತ್ತ ಗಮನಹರಿಸಿ. ಹಣದ ಪರಿಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ನೀವು ಸೊಂಟ ಅಥವಾ ಬೆನ್ನಿಗೆ ಸಂಬಂಧಿಸಿದ ಸಮಸ್ಯೆ ಹೊಂದಿರಬಹುದು.
ಅದೃಷ್ಟದ ಬಣ್ಣ: ತಿಳಿ ಹಳದಿ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಬೆಳಿಗ್ಗೆ 4:40 ರಿಂದ ಮಧ್ಯಾಹ್ನ 3:00 ರವರೆಗೆ

ವೃಶ್ಚಿಕ ರಾಶಿ
ಈ ದಿನ ನಿಮಗೆ ದುಬಾರಿಯಾಗಬಹುದು. ಕೆಲಸದ ವಿಷಯದಲ್ಲಿ ಉತ್ತಮವಾಗಿರುತ್ತದೆ. ನಿಮ್ಮ ಎಲ್ಲಾ ಕೆಲಸಗಳು ಸುಗಮವಾಗಿ ಪೂರ್ಣಗೊಳ್ಳುತ್ತವೆ. ನೀವು ಉದ್ಯಮಿಯಾಗಿದ್ದರೆ ಮತ್ತು ಇತ್ತೀಚೆಗೆ ನೀವು ಸುದೀರ್ಘ ವ್ಯಾಪಾರ ಪ್ರವಾಸವನ್ನು ಕೈಗೊಂಡಿದ್ದರೆ, ಇಂದು ನೀವು ಒಳ್ಳೆಯ ಫಲಿತಾಂಶ ಪಡೆಯಬಹುದು. ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಗಾಢ ಕೆಂಪು
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: ಸಂಜೆ 4:30 ರಿಂದ ರಾತ್ರಿ 8 ರವರೆಗೆ

ಧನು ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ. ನಿಮಗೆ ನಿಮ್ಮ ಪ್ರೀತಿ ಪಾತ್ರರ ಬೆಂಬಲ ಸಿಗುವುದರಿಂದ ಆತ್ಮವಿಶ್ವಾಸ ಹೆಚ್ಚಾಗಲಿದೆ. ಹಣಕ್ಕೆ ಸಂಬಂಧಿಸಿದ ಚಿಂತೆ ದೂರಾಗಬಹುದು. ನೀವು ಹೊಸ ಆದಾಯದ ಮೂಲವನ್ನು ಪಡೆಯುವ ಸಾಧ್ಯತೆಯಿದೆ. ಕೆಲಸದ ಬಗ್ಗೆ ಹೇಳುವುದಾದರೆ ಈ ದಿನವು ಕಾರ್ಯನಿರತವಾಗಿರುತ್ತದೆ. ಆದರೆ, ನಿಮ್ಮ ಕಠಿಣ ಪರಿಶ್ರಮ ಮತ್ತು ತಿಳುವಳಿಕೆಯಿಂದ, ನಿಮ್ಮ ಎಲ್ಲಾ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ನಿಮಗೆ ಸಾಧ್ಯವಾಗುವುದು. ಉತ್ತಮ ಆರೋಗ್ಯಕ್ಕಾಗಿ ಜೀವನಶೈಲಿಯಲ್ಲಿ ಬದಲಾವಣೆ ಮಾಡಿಕೊಳ್ಳಿ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 13
ಅದೃಷ್ಟದ ಸಮಯ: ಬೆಳಿಗ್ಗೆ 10:10 ರಿಂದ ಮಧ್ಯಾಹ್ನ 12:25 ರವರೆಗೆ

ಮಕರ ರಾಶಿ
ಕಚೇರಿಯಲ್ಲಿ ಯಾವುದೋ ವಿಷಯದ ಬಗ್ಗೆ ತುಂಬಾ ಚರ್ಚೆಯಾಗಬಹುದು, ಇದರಿಂದಾಗಿ ನಿಮ್ಮ ಕೆಲಸದ ಮೇಲೆ ಗಮನಹರಿಸಲು ಸಾಧ್ಯವಾಗುವುದಿಲ್ಲ. ನಿಮಗೆ ಏನಾದರೂ ತೊಂದರೆಯಾಗಿದ್ದರೆ, ನಿಮ್ಮ ಮನಸ್ಸನ್ನು ನಿಮ್ಮಆಪ್ತರ ಜೊತೆ ಹಂಚಿಕೊಳ್ಳಿ, ನಿಮ್ಮ ಸಮಸ್ಯೆಗೆ ಪರಿಹಾರ ಸಿಗುವುದು. ವ್ಯಾಪಾರಸ್ಥರಿಗೆ ತಕ್ಕ ಲಾಭ ದೊರೆಯಲಿದೆ. ನಿಮ್ಮ ಸಂಗಾತಿಯೊಂದಿಗೆ ಮಾತನಾಡುವಾಗ ಜಾಗ್ರತೆವಹಿಸಿ, ನಿಮ್ಮ ತಮಾಷೆಯ ನುಡಿ ಅವರ ಮನಸ್ಸು ನೋಯಿಸಬಹುದು. ಹಣದ ವಿಷಯದಲ್ಲಿ ದಿನವು ಸಾಮಾನ್ಯವಾಗಿರುತ್ತದೆ. ಆರೋಗ್ಯದ ಕಡೆ ಗಮನಹರಿಸಿ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: 7:55 ರಿಂದ 11:30 ರವರೆಗೆ

ಕುಂಭ ರಾಶಿ
ನೀವು ಅವಿವಾಹಿತರಾಗಿದ್ದರೆ ಮತ್ತು ಪ್ರೇಮ ವಿವಾಹವನ್ನು ಹೊಂದಲು ಬಯಸಿದರೆ, ನಿಮ್ಮ ಕುಟುಂಬ ಸದಸ್ಯರೊಂದಿಗೆ ಈ ಕುರಿತು ಮಾತನಾಡಲು ಇಂದು ಉತ್ತಮ ದಿನವಾಗಿದೆ. ಅವರಿಂದ ನಿಮ್ಮ ಮದುವೆಗೆ ಒಪ್ಪಿಗೆ ಸಿಗುವ ಸಾಧ್ಯತೆ ಇದೆ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಲಕ್ಷಣಗಳಿವೆ. ಕೆಲಸದ ದೃಷ್ಟಿಯಿಂದ ನೋಡುವುದಾದರೆ ಇಂದು ಸರಾಸರಿ ದಿನವಾಗಿರುತ್ತದೆ. ಆರೋಗ್ಯ ಸಂಬಂಧಿ ಸಮಸ್ಯೆಗಳಿರಬಹುದು, ಜಾಗ್ರತೆವಹಿಸಿ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 39
ಅದೃಷ್ಟದ ಸಮಯ: ಸಂಜೆ 4 ರಿಂದ ರಾತ್ರಿ 8 ರವರೆಗೆ

ಮೀನ ರಾಶಿ
ಕೆಲಸದ ವಿಷಯದಲ್ಲಿ ಇಂದು ನಿಮಗೆ ತುಂಬಾ ಶುಭವಾಗಿದೆ, ನೀವು ವ್ಯಾಪಾರಸ್ಥರಾಗಿದ್ದರೆ ವ್ಯಾಪಾರಕ್ಕಾಗಿ ಪ್ರಯಾಣಿಸಬೇಕಾಗಬಹುದು. ಇದಲ್ಲದೆ, ನಿಮ್ಮ ಯಾವುದೇ ಸ್ಥಗಿತಗೊಂಡ ಕೆಲಸವನ್ನು ಪೂರ್ಣಗೊಳಿಸುವುದರಿಂದ ನೀವು ಆರ್ಥಿಕ ಲಾಭವನ್ನು ಪಡೆಯುತ್ತೀರಿ. ಉದ್ಯೋಗಸ್ಥರು ತಮ್ಮ ಬಡ್ತಿಗಾಗಿ ಬಹಳ ಸಮಯದಿಂದ ಕಾಯುತ್ತಿದ್ದರೆ, ಇಂದು ನೀವು ಒಳ್ಳೆಯ ಸುದ್ದಿಯನ್ನು ಪಡೆಯಬಹುದು. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ಆರೋಗ್ಯದಲ್ಲಿ ಹಠಾತ್ ಕ್ಷೀಣತೆ ಉಂಟಾಗಬಹುದು.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 18
ಅದೃಷ್ಟದ ಸಮಯ: ಮಧ್ಯಾಹ್ನ 12 ರಿಂದ ಸಂಜೆ 7 ರವರೆಗೆ

English summary

Dina Bhavishya -May 25 2023 Today Rashi Bhavishya, Daily Horoscope in Kannada

Dina Bhavishya- Get Today's Rashi Bhavishy 25 May 2023 In Kannada, Read daily horoscope prediction of aries, taurus, gemini, cancer, leo, virgo, libra, scorpio, Sagittarius, Capricorn, Aquarius, pisces in Kannada.
Story first published: Thursday, May 25, 2023, 4:00 [IST]
X
Desktop Bottom Promotion