Horoscope Today 3 May 2023: ಬುಧವಾರ:ಈ ದಿನ ದ್ವಾದಶ ರಾಶಿಗಳಿಗೆ ಹೇಗಿದೆ?

ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಮೇ‌ 3ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ಉತ್ತರಾಯಣ
ಋತು: ವಸಂತ
ಮಾಸ: ವೈಶಾಖ
ಪಕ್ಷ: ಶುಕ್ಲಪಕ್ಷ
ತಿಥಿ: ತ್ರಯೋದಶಿ
ನಕ್ಷತ್ರ: ರಾತ್ರಿ 08:56ರವರೆಗೆ ಹಸ್ತ, ನಂತರ ಚಿತ್ರ
ರಾಹುಕಾಲ: ಮಧ್ಯಾಗ್ನ 12:18ರಿಂದ 01:58ರವರೆಗೆ

ಮೇಷ ರಾಶಿ
ಈ ದಿನ ರಿಲ್ಯಾಕ್ಸ್ ಅನಿಸುವುದು, ಬಹಳ ಸಮಯದ ನಂತರ ಮಾನಸಿಕ ಒತ್ತಡ ಕಡಿಮೆಯಾಗಿ ಆರಾಮವಾಗಿದ್ದೇನೆ ಎಂದನಿಸುವುದು. ಉದ್ಯೋಗಿಗಳು ಸಮಯಕ್ಕೆ ಸರಿಯಾಗಿ ಕಚೇರಿಗೆ ತಲುಪಲು ಸೂಚಿಸಲಾಗಿದೆ. ವ್ಯಾಪಾರಸ್ಥರಿಗೆ ಮಿಶ್ರ ಲಾಭ ದೊರೆಯಲಿದೆ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ಕೆಲಸದ ಒತ್ತಡ ಆರೋಗ್ಯದ ಮೇಲೂ ಪರಿಣಾಮ ಬೀರುವುದು.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 19
ಅದೃಷ್ಟದ ಸಮಯ: ಬೆಳಿಗ್ಗೆ 9:45 ರಿಂದ ಮಧ್ಯಾಹ್ನ 3 ರವರೆಗೆ

Dina Bhavishya -May 3 2023 Today Rashi Bhavishya, Daily Horoscope in Kannada

ವೃಷಭ ರಾಶಿ
ಇಂದು ಉದ್ಯಮಿಗಳಿಗೆ ಸವಾಲಿನ ದಿನವಾಗಿರುವುದರಿಂದ ಯಾವುದೇ ನಿರ್ಲಕ್ಷ್ಯದಿಂದ ಭಾರೀ ನಷ್ಟವು ಸಾಧ್ಯತೆ ಇದೆ ಹಾಗಾಗಿ ತುಂಬಾನೇ ಜಾಗ್ರತೆವಹಿಸಿ. ಹೆಚ್ಚುತ್ತಿರುವ ಕೆಲಸದ ಹೊರೆಯು ನಿಮ್ಮನ್ನು ಮಾನಸಿಕವಾಗಿ ಮತ್ತು ದೈಹಿಕವಾಗಿ ದಣಿಯುವಂತೆ ಮಾಡುತ್ತದೆ. ಕೆಲಸದ ಜೊತೆಗೆ ನಿಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಿ. ಹಣದ ಪರಿಸ್ಥಿತಿ ಉತ್ತಮವಾಗಿರಲಿದೆ. ಸಂಗಾತಿಯೊಂದಿಗಿನ ಸಂಬಂಧವು ಉತ್ತಮವಾರಲಿದೆ. ಹಣಕಾಸಿನ ಸ್ಥಿತಿ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 24
ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 9:05 ರವರೆಗೆ

ಮಿಥುನ ರಾಶಿ
ಪ್ರೇಮಿಗಳಿಗೆ ಈ ದಿನ ಅನುಕೂಲಕರವಾಗಿದೆ. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನೀವು ಇತ್ತೀಚೆಗೆ ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದ್ದರೆ, ನೀವು ಇಂದು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ಶೀಘ್ರದಲ್ಲೇ ನೀವು ಯಾವುದೇ ಹಳೆಯ ಕುಟುಂಬದ ಸಾಲವನ್ನು ತೆರವುಗೊಳಿಸಲು ಸಾಧ್ಯವಾಗುವುದು. ಕಚೇರಿಯಲ್ಲಿ, ನೀವು ಏಕಕಾಲದಲ್ಲಿ ಅನೇಕ ಕಾರ್ಯಗಳನ್ನು ನಿರ್ವಹಿಸುವುದನ್ನು ತಪ್ಪಿಸಬೇಕು, ಇಲ್ಲದಿದ್ದರೆ ತಪ್ಪಗಳಾಗುವ ಸಾಧ್ಯತೆ ಇದೆ. ಉದ್ಯಮಿಗಳು ಉತ್ತಮ ಅವಕಾಶಗಳನ್ನು ಪಡೆಯಬಹುದು. ಆರೋಗ್ಯದ ದೃಷ್ಟಿಯಿಂದ ದಿನವು ಅನುಕೂಲಕರವಾಗಿರುತ್ತದೆ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 17
ಅದೃಷ್ಟದ ಸಮಯ: ಬೆಳಿಗ್ಗೆ 5:10 ರಿಂದ ಮಧ್ಯಾಹ್ನ 2 ರವರೆಗೆ

ಕರ್ಕ ರಾಶಿ
ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಸಂಗಾತಿಯ ನಡವಳಿಕೆಯಲ್ಲಿ ಧನಾತ್ಮಕ ಬದಲಾವಣೆಗಳನ್ನು ಕಾಣಬಹುದು. ಇಂದು, ನಿಮ್ಮ ಪ್ರೀತಿಪಾತ್ರರ ಸಹಾಯದಿಂದ, ನಿಮ್ಮ ಕೆಲವು ದೊಡ್ಡ ಸಮಸ್ಯೆ ಬಗೆಹರಿಯಲಿದೆ. ಯಾವುದೇ ಪ್ರಮುಖ ವೃತ್ತಿ ಸಂಬಂಧಿತ ಸಮಸ್ಯೆಯು ಅಂತ್ಯಗೊಳ್ಳುತ್ತದೆ, ಈ ದಿನ ನೀವು ಕೆಲಸದ ಮೇಲೆ ಗಮನಹರಿಸಲು ಸಲಹೆ ನೀಡಲಾಗಿದೆ. ಉದ್ಯಮಿಗಳು ಹೂಡಿಕೆ ಮಾಡಲು ಅವಕಾಶವನ್ನು ಪಡೆಯಬಹುದು. ಧನಿಹಾನಿಯಾಗುವ ಸಾಧ್ಯತೆ ಇರುವುದರಿಂದ ಎಚ್ಚರವಹಿಸಿ. ಹಣಕ್ಕೆ ಸಂಬಂಧಿಸಿದ ಯಾವುದೇ ಕೆಲಸವನ್ನು ಅವಸರದಲ್ಲಿ ಮಾಡಬೇಡಿ. ಆರೋಗ್ಯದ ವಿಷಯದಲ್ಲಿ ಈ ದಿನ ಮಿಶ್ರಫಲ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ಸಂಜೆ 7 ರವರೆಗೆ

ಸಿಂಹ ರಾಶಿ
ವಿದ್ಯಾರ್ಥಿಗಳು ನಿಮ್ಮ ಶಿಕ್ಷಕರಿಂದ ಮಾರ್ಗದರ್ಶನವನ್ನೂ ಪಡೆಯುತ್ತೀರಿ. ಕಚೇರಿಯಲ್ಲಿ ನಿಮ್ಮ ಕಾರ್ಯನಿರ್ವಹಣೆಯು ತುಂಬಾ ಉತ್ತಮವಾಗಿರುತ್ತದೆ. ಉನ್ನತ ಅಧಿಕಾರಿಗಳು ನಿಮ್ಮ ಕೆಲಸವನ್ನು ಪ್ರಶಂಸಿಸಬಹುದು. ಆದರೆ ಅತಿಯಾದ ಆತ್ಮವಿಶ್ವಾಸವನ್ನು ತಪ್ಪಿಸಲು ನಿಮಗೆ ಸಲಹೆ ನೀಡಲಾಗಿದೆ. ಹಣದ ವಿಷಯದಲ್ಲಿ ಈ ದಿನವು ಏರಿಳಿತಗಳಿಂದ ತುಂಬಿರಲಿದೆ. ಈ ದಿನ ಸಾಲ ಪಡೆಯಬಹುದು. ಸಂಗಾತಿಯೊಂದಿಗಿನ ಸಂಬಂಧದ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: ಬೆಳಿಗ್ಗೆ 8 ರಿಂದ ಸಂಜೆ 5 ರವರೆಗೆ

ಕನ್ಯಾ ರಾಶಿ
ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ಇಂದು ಕೆಲವು ಅತಿಥಿಗಳು ಮನೆಗೆ ಬರಬಹುದು. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ಇತರರನ್ನು ಮೆಚ್ಚಿಸಲು ನಿಮ್ಮ ಬಜೆಟ್‌ಗಿಂತ ಹೆಚ್ಚು ಖರ್ಚು ಮಾಡುವ ತಪ್ಪನ್ನು ಮಾಡಬೇಡಿ. ಈ ದಿನ ಮೇಲಾಧಿಕಾರಿಗಳು ನೀಡುವ ಸಲಹೆ ಸೂಚನೆ ಪಾಲಿಸಿ. ನೀವು ಸರ್ಕಾರಿ ಉದ್ಯೋಗಿಯಾಗಿದ್ದರೆ ಕೆಲವು ಜವಾಬ್ದಾರಿಯುತ ಕೆಲಸ ನಿಮಗೆ ವಹಿಸಬಹುದು, ಅದನ್ನು ಉತ್ತಮವಾಗಿ ನಿಭಾಯಿಸಲು ಪ್ರಯತ್ನಿಸಿ. ಉದ್ಯಮಿಗಳ ಆರ್ಥಿಕ ಪರಿಸ್ಥಿತಿ ಚೆನ್ನಾಗಿರಲಿದೆ. ಅನಗ್ಯತ ಚಿಂತೆಗಳಿಂದ ದೂರವಿರಿ
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 16
ಅದೃಷ್ಟದ ಸಮಯ: ಸಂಜೆ 6 ರಿಂದ ರಾತ್ರಿ 9 ರವರೆಗೆ

ತುಲಾ ರಾಶಿ
ಈ ದಿನವನ್ನು ಖುಷಿಯಿಂದ ಕಳೆಯುವಿರಿ. ಇದಲ್ಲದೆ, ನಿಮ್ಮ ವ್ಯಕ್ತಿತ್ವವನ್ನು ಸುಧಾರಿಸಲು ನೀವು ಕೆಲವು ಅಗತ್ಯ ಪ್ರಯತ್ನಗಳನ್ನು ಮಾಡುತ್ತೀರಿ. ಹಣದ ವಿಷಯದಲ್ಲಿ ಈ ದಿನ ಉತ್ತಮವಾಗಿರಲಿದೆ. ನಿಮಗೆ ಹಣ ಬರುವ ಸಾಧ್ಯತೆ ಇದೆ. ಆದರೆ ಅತಿಯಾದ ಖರ್ಚು ಮಾಡಬೇಡಿ.ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಆಹ್ಲಾದಕರವಾಗಿರುತ್ತದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 8
ಅದೃಷ್ಟದ ಸಮಯ: ಬೆಳಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ

ವೃಶ್ಚಿಕ ರಾಶಿ
ನಿಮ್ಮ ಮೊಂಡುತನದ ಸ್ವಭಾವವು ಇಂದು ನಿಮ್ಮ ಕಷ್ಟಗಳನ್ನು ಹೆಚ್ಚಿಸಬಹುದು. ಈ ದಿನ ಯಾವುದೇ ಅವಸರದ ನಿರ್ಧಾರ ತೆಗೆದುಕೊಳ್ಳಬೇಡಿ. ಕಚೇರಿಯಲ್ಲಿ ಉನ್ನತ ಅಧಿಕಾರಿಗಳು ಕೆಲಸಕ್ಕೆ ಸಂಬಂಧಿಸಿದ ಸಲಹೆಗಳನ್ನು ನೀಡಿದರೆ ಅವರ ಮಾತನ್ನು ನಿರ್ಲಕ್ಷಿಸಬೇಡಿ. ವ್ಯಾಪಾರಸ್ಥರು ಪಾಲುದಾರಿಕೆಯಲ್ಲಿ ಹೊಸ ಕೆಲಸವನ್ನು ಪ್ರಾರಂಭಿಸುವ ಅವಕಾಶವನ್ನು ಪಡೆಯಬಹುದು. ಅನಗತ್ಯ ಕೋಪವು ನಿಮ್ಮ ಸಂಬಂಧದಲ್ಲಿ ದೂರವನ್ನು ಹೆಚ್ಚಿಸಬಹುದು. ಹಣದ ಸ್ಥಿತಿ ಸಾಮಾನ್ಯವಾಗಿರಲಿದೆ. ಆರೋಗ್ಯ ಸ್ವಲ್ಪ ದುರ್ಬಲವಾಗಲಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 19
ಅದೃಷ್ಟದ ಸಮಯ: ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ

ಧನು ರಾಶಿ
ಸ್ವಲ್ಪ ಸಮಯದಿಂದ ನಿಮ್ಮ ಆರೋಗ್ಯ ಸರಿಯಿಲ್ಲದಿದ್ದರೆ ಇಂದು ಸ್ವಲ್ಪ ಸುಧಾರಣೆ ಕಂಡು ಬರಲಿದೆ. ನಿಮ್ಮ ಆರೋಗ್ಯದಲ್ಲಿ ದೊಡ್ಡ ಸುಧಾರಣೆ ಕಂಡು ಬರಲಿದೆ. ಸಮಯಕ್ಕೆ ಸರಿಯಾಗಿ ಔಷಧವನ್ನು ತೆಗೆದುಕೊಳ್ಳಿ. ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಪೋಷಕರ ಬೆಂಬಲ ಸಿಗಲಿದೆ. ದೊಡ್ಡ ಹೂಡಿಕೆಗಳನ್ನು ಮಾಡುವ ಮೊದಲು ಎಚ್ಚರಿಕೆಯಿಂದ ಯೋಚಿಸಲು ಉದ್ಯಮಿಗಳಿಗೆ ಸಲಹೆ ನೀಡಲಾಗಿದೆ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 22
ಅದೃಷ್ಟದ ಸಮಯ: ಸಂಜೆ 4 ರಿಂದ ರಾತ್ರಿ 8 ರವರೆಗೆ

ಮಕರ ರಾಶಿ
ಪ್ರಣಯ ಜೀವನದಲ್ಲಿ ಸಮಸ್ಯೆಗಳು ಇರಲಿದೆ. ಹಣದ ವಿಷಯದಲ್ಲಿ ಈ ದಿನ ತುಂಬಾ ಅದೃಷ್ಟದ ದಿವಾಗಲಿದೆ. ನಿಮ್ಮ ಆದಾಯ ಹೆಚ್ಚಾಗಬಹುದು. ನೀವು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಸರಿಯಾದ ಸ್ಥಳದಲ್ಲಿ ಹೂಡಿಕೆ ಮಾಡಿದರೆ, ಶೀಘ್ರದಲ್ಲೇ ನಿಮ್ಮ ಎಲ್ಲಾ ಸಮಸ್ಯೆಗಳು ಕೊನೆಗೊಳ್ಳಲಿದೆ. ದುಡಿಯುವ ಜನರಿಗೆ ಈ ದಿನ ಬಹುಮುಖ್ಯವಾಗಿದೆ. ನಿಮ್ಮ ವೃತ್ತಿ ಜೀವನದಲ್ಲಿ ಹೊಸ ತಿರುವು ಸಿಗಬಹುದು. ವ್ಯಾಪಾರಸ್ಥರು ಈ ದಿನ ಬಯಸಿದ ಲಾಭ ಪಡೆಯಬಹುದು. ನಿಮ್ಮ ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 26
ಅದೃಷ್ಟದ ಸಮಯ: ಬೆಳಗ್ಗೆ 8:55 ರಿಂದ ಮಧ್ಯಾಹ್ನ 12

ಕುಂಭ ರಾಶಿ
ನೀವು ಅವಿಭಕ್ತ ಕುಟುಂಬದಲ್ಲಿ ವಾಸಿಸುತ್ತಿದ್ದರೆನಿಮ್ಮ ಜವಾಬ್ದಾರಿಗಳ ಬಗ್ಗೆ ನಿರ್ಲಕ್ಷ್ಯ ಬೇಡ. ಸಂಗಾತಿಯೊಂದಗೆ ಹಣದ ವಿಷಯಕ್ಕೆ ಮನಸ್ತಾಪ ಮೂಡಬಹುದು. ಇಂದು ಕಚೇರಿಯಲ್ಲಿ ನಿಮ್ಮ ಯಾವುದೇ ಕೆಲಸವು ಅಪೂರ್ಣವಾಗಿದ್ದರೆ, ಅದು ನಿಮ್ಮ ಮೇಲೆ ಕೆಟ್ಟ ಪರಿಣಾಮ ಬೀರುವುದರಿಂದ ನಿಮ್ಮ ಕೆಲಸವನ್ನು ಪೂರ್ಣಗೊಳಿಸಿ. ವ್ಯಾಪಾರಸ್ಥರು ಗ್ರಾಹಕರ ಜೊತೆ ಅನಗ್ಯತ ಚರ್ಚೆಯಿಂದ ದೂರವಿರಲು ಸಲಹೆ ನೀಡಲಾಗಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ನಿದ್ರಾಹೀನತೆ ಸಮಸ್ಯೆ ಇರಬಹುದು.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 14
ಅದೃಷ್ಟದ ಸಮಯ: ಸಂಜೆ 5:10 ರಿಂದ ರಾತ್ರಿ 9:50 ರವರೆಗೆ

ಮೀನ ರಾಶಿ
ನಿಮ್ಮ ಮನೆಯಲ್ಲಿ ವಿವಾಹಯೋಗ್ಯ ಸದಸ್ಯರಿದ್ದರೆ ಅವರ ಮದುವೆಗೆ ಇದ್ದ ಅಡಚಣೆ ದೂರಾಗಲಿದೆ. ಶೀಘ್ರದಲ್ಲೇ ನಿಮ್ಮ ಮನೆಯಲ್ಲಿ ಶುಭ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಈ ದಿನ ನೀವು ಕಷ್ಟಕರವಾದ ಕೆಲಸವನ್ನು ಬಹಳ ಸುಲಭವಾಗಿ ಪೂರ್ಣಗೊಳಿಸುತ್ತೀರಿ. ಪಾರಸ್ಥರು ಇಂದು ಲಾಭ ಗಳಿಸಲು ಉತ್ತಮ ಅವಕಾಶವನ್ನು ಪಡೆಯಬಹುದು. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ಕಣ್ಣಿನ ಆರೋಗ್ಯ ಸಮಸ್ಯೆ ಇರಬಹುದು.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಸಂಜೆ 4:15 ರಿಂದ ರಾತ್ರಿ 8 ರವರೆಗೆ

English summary

Dina Bhavishya -May 3 2023 Today Rashi Bhavishya, Daily Horoscope in Kannada

Dina Bhavishya- Get Today's Rashi Bhavishy 3 May 2023 In Kannada, Read daily horoscope prediction of aries, taurus, gemini, cancer, leo, virgo, libra, scorpio, Sagittarius, Capricorn, Aquarius, pisces in Kannada.
X
Desktop Bottom Promotion