Latest Updates
-
ಅಕ್ಕಿ ಬೇಡ, ಉದ್ದಿನಬೇಳೆ ಬೇಡ.. 15 ನಿಮಿಷದ ಹೆಸರು ಬೇಳೆ-ತರಕಾರಿ ಇಡ್ಲಿ! ಉಳಿದ ಇಡ್ಲಿ ಫ್ರೆಶ್ ಆಗಿಡೋದು ಹೇಗೆ? -
ಗ್ಯಾಸ್ ಇಲ್ವಾ? ಚಿಂತೆ ಬೇಡ.. ಒಲೆ ಹಚ್ಚದೇ ಮಾಡುವ 5 ಆರೋಗ್ಯಕರ ಊಟಗಳಿವು! -
ಮಿಕ್ಸಿಯಲ್ಲೇ ಮಾಡಿ ಕಬ್ಬಿನ ಹಾಲು! ಕಬ್ಬು ಇಲ್ಲದೆಯೇ ಶುದ್ಧವಾದ ಹಾಲು ಮಾಡೋದು ಹೇಗೆ? ರಸ್ತೆ ಬದಿಗಿಂತ ರುಚಿ -
ಮಘಾ ನಕ್ಷತ್ರಕ್ಕೆ ಕೇತು.. ಈ ಎಲ್ಲಾ ರಾಶಿಯವರ ಜೀವನದಲ್ಲಿ ಭಾರಿ ಬದಲಾವಣೆ! ಯಾರಿಗೆ ಶುಭ? ಯಾರಿಗೆ ಸಮಸ್ಯೆ? -
10 ನಿಮಿಷಗಳ ಅಪ್ಪೆ.. ಹೆಸರುಕಾಳು ಮತ್ತು ಬಟಾಣಿ ಬಳಸಿ ಮಾಡುವ ರೆಸಿಪಿ! ಮೃದುವಾಗಿ ಮಾಡೋದು ಹೇಗೆ ಗೊತ್ತಾ? -
ವಿವಾಹಿತ ದಂಪತಿಗಳಿಗೂ ಈ ದಿನ ಸಂತೋಷದಾಯಕ! ಸಂಗಾತಿ ಮೇಲೆ ಡೌಟ್ ಬೇಡ -
March 13 Horoscope: ಶುಭ ಕಾರ್ಯ ಸಂಬಂಧಿತ ಚರ್ಚೆಗಳಿವೆ -
ಬೇಸಿಗೆಯಲ್ಲಿ ಈ ಗಂಜಿ ಕುಡಿಯಿರಿ.. ಕೊಬ್ಬು ಕಡಿಮೆ, ದೇಹಕ್ಕೂ ತಂಪು! ಈ ಗಂಜಿಯ ಆರೋಗ್ಯ ರಹಸ್ಯ ಇಲ್ಲಿದೆ -
30 ವರ್ಷಗಳ ಬಳಿಕ ಸೂರ್ಯ-ಶನಿ ಸಂಯೋಗ! ಯಾರಿಗೆ ಶುಭ? ಯಾರಿಗೆ ಸಮಸ್ಯೆ? 12 ರಾಶಿಗಳ ಜಾತಕ ತಿಳಿಯಿರಿ -
ಈ 5 ವಿಷಯಗಳಲ್ಲಿ ಮಿತಿ ಮೀರಿದ್ರೆ ಜೀವನ ಸರ್ವನಾಶ! ಅಹಂಕಾರ ಬಿಡಿ.. ಇಂದೇ ಇವುಗಳಿಂದ ದೂರವಿರಿ
Horoscope Today 6 May 2023: ಶನಿವಾರ: ಈ ದಿನ 12 ರಾಶಿಗಳಿಗೆ ಹೇಗಿರಲಿದೆ?
ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಮೇ 6ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ಉತ್ತರಾಯಣ
ಋತು: ವಸಂತ
ಮಾಸ: ಜ್ಯೇಷ್ಠ
ಪಕ್ಷ: ಕೃಷ್ಣಪಕ್ಷ
ತಿಥಿ: ಪ್ರತಿಪಾದ
ನಕ್ಷತ್ರ: ವೈಶಾಖ
ರಾಹುಕಾಲ: ಬೆಳಗ್ಗೆ 08:57ರಿಂದ 10:38ರವರೆಗೆ
ಮೇಷ ರಾಶಿ
ನೀವು ಇಂದು ದೊಡ್ಡ ವ್ಯವಹಾರವನ್ನು ಮಾಡಲು ಹೊರಟಿದ್ದರೆ ಇಂದು ನೀವು ಬಹಳ ಎಚ್ಚರಿಕೆಯಿಂದ ವ್ಯವಹಾರ ಮಾಡಬೇಕು. ನಿಮ್ಮ ಮಾತುಗಳೇ ನಿಮಗೆ ನಷ್ಟತರಬಹುದು. ಉದ್ಯೋಗಸ್ಥರಿಗೆ ಈ ದಿನ ಉತ್ತಮವಾಗುದೆ. ನಿಮ್ಮ ಯಾವುದೇ ಕಷ್ಟಕರವಾದ ಕಾರ್ಯವನ್ನು ಇಂದು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ಸಾಧ್ಯವಾಗುವುದು. ನಿಮ್ಮ ಹಣಕಾಸಿನ ಸ್ಥಿತಿ ಉತ್ತಮವಾಗಿರಲಿದೆ. ಆರೋಗ್ಯದ ಬಗ್ಗೆ ಜಾಗ್ರತೆ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 19
ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ ಸಂಜೆ 4 ರವರೆಗೆ

ವೃಷಭ ರಾಶಿ
ಇಂದು ಮನೆಯ ವಾತಾವರಣ ಸರಿ ಇರುವುದಿಲ್ಲ. ಮನೆಯ ಸದಸ್ಯರ ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಇದರಿಂದಾಗಿ ನೀವು ಚಿಂತೆಗೊಳಗಾಗುತ್ತೀರಿ. ಕಚೇರಿಯಲ್ಲಿ ಕೆಲಸದ ಹೊರೆ ಕಡಿಮೆಯಾಗಲಿದೆ. ಉದ್ಯಮಿಗಳು ಹೊಸ ಕೆಲಸವನ್ನು ಪ್ರಾರಂಭಿಸಲಿದ್ದರೆ, ಇಂದು ಉತ್ತಮ ದಿನವಾಗಿರುತ್ತದೆ. ಹಣದ ಪರಿಸ್ಥಿತಿ ಉತ್ತಮವಾಗಿರಲಿದೆ. ಇಂದು ಯಾವುದೇ ಬೆಲೆಬಾಳುವ ವಸ್ತುವನ್ನು ಸಹ ಖರೀದಿಸಬಹುದು. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ದಿನದಲ್ಲಿ 8 ಗಂಟೆ ನಿದ್ದೆ ಮಾಡಿ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ಸಮಯ: ಬೆಳಿಗ್ಗೆ 6:20 ರಿಂದ 10:10 ರವರೆಗೆ
ಮಿಥುನ ರಾಶಿ
ನಿಮ್ಮ ಸಂಗಾತಿಯೊಂದಿಗೆ ಮನಸ್ತಾಪ ಹೊಂದಿರಬಹುದು. ಇಂದು ಅತಿಯಾದ ಖರ್ಚು ಮಾಡದಿರುವುದು ಒಳ್ಳೆಯದು. ಕೆಲಸದ ವಿಷಯದದಲ್ಲಿ ಈ ದಿನವು ಉತ್ತಮವಾಗಿರಲಿದೆ. ನೀವು ಅನೇಕ ಕಾರ್ಯಗಳನ್ನು ಏಕಕಾಲದಲ್ಲಿ ನಿರ್ವಹಿಸುವುದನ್ನು ತಪ್ಪಿಸಬೇಕು, ಇಲ್ಲದಿದ್ದರೆ ನೀವು ಸಾಕಷ್ಟು ಒತ್ತಡವನ್ನು ಅನುಭವಿಸುವಿರಿ. ಇದರಿಂದಾಗಿ ಯಾವ ಕೆಲಸವನ್ನು ಸರಿಯಾಗಿ ಮಾಡಲು ಸಾಧ್ಯವಾಗುವುದಿಲ್ಲ. ಆರೋಗ್ಯ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಮಧ್ಯಾಹ್ನ 3 ರಿಂದ ರಾತ್ರಿ 8 ರವರೆಗೆ
ಕರ್ಕ ರಾಶಿ
ನೀವು ಇತ್ತೀಚೆಗೆ ದೊಡ್ಡ ಯೋಜನೆಯನ್ನು ಪೂರ್ಣಗೊಳಿಸಿದ್ದರೆ, ಇಂದು ನೀವು ಕಚೇರಿಯಲ್ಲಿ ಹೆಚ್ಚಿನ ಗೌರವವನ್ನು ಪಡೆಯಬಹುದು. ನಿಮಗೆ ಬಡ್ತಿ ಸಿಗುವ ಸಾಧ್ಯತೆಯೂ ಇದೆ. ವ್ಯಾಪಾರಸ್ಥರಿಗೆ ಈ ದಿನ ಲಾಭದಾಯಕವಾಗಿದೆ. ನಿಮ್ಮ ಹಣಕಾಸಿನ ಸಮಸ್ಯೆ ಬಗೆಹರಿಯಲಿದೆ. ಕೆಲಸದ ಜೊತೆಗೆ ನಿಮ್ಮ ಕೌಟುಂಬಿಕ ಜೀವನದ ಬಗ್ಗೆಯೂ ಗಮನ ಹರಿಸಬೇಕು. ಹಣದ ವಿಷಯದಲ್ಲಿ, ದಿನವು ತುಂಬಾ ದುಬಾರಿಯಾಗಲಿದೆ. ಹಳೆಯ ಸಾಲವನ್ನು ಮರುಪಾವತಿಸಬಹುದು. ಆರೋಗ್ಯದ ಬಗ್ಗೆ ಗಮನಹರಿಸುವುದು ಒಳ್ಳೆಯದು.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಸಮಯ: ಸಂಜೆ 5:35 ರಿಂದ ರಾತ್ರಿ 8 ರವರೆಗೆ
ಸಿಂಹ ರಾಶಿ
ಈ ದಿನ ಮಕ್ಕಳ ಬಗ್ಗೆ ಚಿಂತೆ ಮಾಡುವಿರಿ. ಅವರ ಆರೋಗ್ಯ ಅಥವಾ ಶಾಲೆಗೆ ಸಂಬಂಧಿಸಿದ ಚಿಂತೆ ಕಾಡಲಿದೆ. ಹಣದ ಸ್ಥಿತಿ ಉತ್ತಮವಾಗಿರಲಿದೆ. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನೀವು ಕೆಲವೊಂದು ನಿರ್ಧಾರ ತೆಗೆದುಕೊಳ್ಳುತ್ತೀರಿ. ವೈಯಕ್ತಿಕ ಜೀವನದ ತೊಂದರೆಗಳು ನಿಮ್ಮ ಕೆಲಸದಲ್ಲಿ ಮೇಲುಗೈ ಸಾಧಿಸಲು ಬಿಡಬೇಡಿ. ಈ ಸಮಯವು ನಿಮಗೆ ಬಹಳ ಮುಖ್ಯವಾಗಿದೆ, ಆದ್ದರಿಂದ ನಿಮ್ಮ ಅತ್ಯುತ್ತಮವಾದದನ್ನು ನೀಡಲು ಪ್ರಯತ್ನಿಸಿ. ದಿನದ ಎರಡನೇ ಭಾಗದಲ್ಲಿ, ನೀವು ವಿಶೇಷ ವ್ಯಕ್ತಿಯನ್ನು ಭೇಟಿ ಮಾಡಬಹುದು. ಆರೋಗ್ಯಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ನೀವು ಕೋಪ ನಿಯಂತ್ರಿಸುವುದು ಒಳ್ಳೆಯದು.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಸಂಜೆ 5:25 ರಿಂದ 9:05 ರವರೆಗೆ
ಕನ್ಯಾ ರಾಶಿ
ಹಣದ ವಿಷಯದಲ್ಲಿ ಈ ದಿನ ಉತ್ತಮವಾಗಿದೆ. ನೀವು ಯಾರಿಗಾದರೂ ಸಾಲ ನೀಡಿದ್ದರೆ, ಇಂದು ನೀವು ನಿಮ್ಮ ಹಣವನ್ನು ಮರಳಿ ಪಡೆಯಬಹುದು. ಈ ದಿನ ಮಿತಿ ಮೀರಿ ಖರ್ಚು ಮಾಡಬೇಡಿ. ನೀವು ಉನ್ನತ ಸ್ಥಾನದಲ್ಲಿ ಕೆಲಸ ಮಾಡುತ್ತಿದ್ದರೆ, ನೀವು ತುಂಬಾ ಸಮತೋಲಿತವಾಗಿ ವರ್ತಿಸುವಂತೆ ಸಲಹೆ ನೀಡಲಾಗಿದೆ. ವಿಶೇಷವಾಗಿ ಕಿರಿಯರೊಂದಿಗೆ ಅತಿಯಾಗಿ ಕಟ್ಟುನಿಟ್ಟಾಗಿ ವರ್ತಿಸಬೇಡಿ. ವ್ಯಾಪಾರಸ್ಥರಿಗೆ ಮಿಶ್ರ ಲಾಭ ದೊರೆಯಲಿದೆ. ಸಣ್ಣ ವಿಚಾರಕ್ಕೆ ಸಂಗಾತಿಯೊಂದಿಗೆ ಮನಸ್ತಾಪ ಉಂಟಾಗಬಹುದು. ಆರೋಗ್ಯದ ಬಗ್ಗೆ ಹೇಳುವುದಾದರೆ ಕರಿದ ಪದಾರ್ಥ ಸೇವಿಸಬೇಡಿ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ಸಂಜೆ 7 ರವರೆಗೆ
ತುಲಾ ರಾಶಿ
ಇಂದು ನೀವು ವಿರುದ್ಧ ಪರಿಸ್ಥಿತಿಯನ್ನು ಎದುರಿಸಬೇಕಾಗಬಹುದು. ನೀವು ಯಾರನ್ನಾದರೂ ಕುರುಡಾಗಿ ನಂಬಿದರೆ ನಿಮ್ಮ ನಂಬಿಕೆಗೆ ಮೋಸವಾಗಬಹುದು. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ಭಾವನೆಗಳನ್ನು ನಿಯಂತ್ರಿಸಲು ನಿಮಗೆ ಸಲಹೆ ನೀಡಲಾಗಿದೆ. ಕೆಲಸದ ವಿಷಯದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಮಾಡಬೇಡಿ. ಇದರೊಂದಿಗೆ ಉನ್ನತ ಅಧಿಕಾರಿಗಳ ಮಾತನ್ನು ನಿರ್ಲಕ್ಷ್ಯ ಮಾಡುವ ತಪ್ಪು ಮಾಡದಿರಿ. ಹಣದ ವಿಷಯದಲ್ಲಿ ಇಂದು ನಿಮಗೆ ಒಳ್ಳೆಯ ದಿನವಾಗಿರುತ್ತದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಬಿಡುವಿಲ್ಲದ ಕೆಲಸದ ನಡುವೆ ನಿಮಗಾಗಿ ಸ್ವಲ್ಪ ವಿಶ್ರಾಂತಿ ತೆಗೆದುಕೊಳ್ಳಿ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 29
ಅದೃಷ್ಟದ ಸಮಯ: ಬೆಳಿಗ್ಗೆ 5:20 ರಿಂದ 8 ರವರೆಗೆ
ವೃಶ್ಚಿಕ ರಾಶಿ
ಇಂದು ಮನೆಯ ವಾತಾವರಣ ಖುಷಿಯಿಂದ ಕೂಡಿರಲಿದೆ. ವಿಶೇಷವಾಗಿ ತಂದೆಯ ಸಹಾಯದಿಂದ ಇಂದು ನಿಮ್ಮ ಯಾವುದೇ ದೊಡ್ಡ ಸಮಸ್ಯೆಯನ್ನು ಪರಿಹರಿಸಬಹುದು. ಉದ್ಯೋಗಿಗಳು ಕೆಲಸದಲ್ಲಿ ಕೆಲವು ಸಮಸ್ಯೆಗಳನ್ನು ಎದುರಿಸಿದರೂ ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. ವ್ಯಾಪಾರಸ್ಥರು ಇಂದು ತಮ್ಮ ವ್ಯಾಪಾರ ಯೋಜನೆಗಳಲ್ಲಿ ಕೆಲವು ಪ್ರಮುಖ ಬದಲಾವಣೆಗಳನ್ನು ಮಾಡಬಹುದು. ಇದರಿಂದಾಗಿ ಶೀಘ್ರದಲ್ಲೇ ನೀವು ಸರಿಯಾದ ಫಲಿತಾಂಶವನ್ನು ಪಡೆಯುವ ಸಾಧ್ಯತೆಯಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 22
ಅದೃಷ್ಟದ ಸಮಯ: ಸಂಜೆ 6 ರಿಂದ ರಾತ್ರಿ 9 ರವರೆಗೆ
ಧನು ರಾಶಿ
ಧನು ರಾಶಿಯ ವಿದ್ಯಾರ್ಥಿಗಳಿಗೆ ಈ ದಿನ ಉತ್ತಮವಾಗಿದೆ. ಶಿಕ್ಷಣಕ್ಕೆ ಸಂಬಂಧಿಸಿದ ಪ್ರಯತ್ನದಲ್ಲಿ ನೀವು ಯಶಸ್ಸನ್ನು ಪಡೆಯಬಹುದು. ನೀವು ಇತ್ತೀಚೆಗೆ ದೊಡ್ಡ ಕಂಪನಿಯಲ್ಲಿ ಉದ್ಯೋಗಕ್ಕೆ ಸಂದರ್ಶನವನ್ನು ನೀಡಿದ್ದರೆ, ನೀವು ಸಕಾರಾತ್ಮಕ ಉತ್ತರವನ್ನು ಪಡೆಯುವ ಸಾಧ್ಯತೆಯಿದೆ. ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿದೆ. ಹಣಕಾಸಿನ ಸ್ಥಿತಿ ಚೆನ್ನಾಗಿರಲಿದೆ. ಸಂಗಾತಿಯೊಂದಿಗೆ ಅನಗ್ಯತವಾಗಿ ವಾಗ್ವಾದ ಮಾಡಬೇಡಿ. ಆರೋಗ್ಯದ ದೃಷ್ಟಿಯಿಂದ ಈ ದಿನವು ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಬೆಳಿಗ್ಗೆ 7:30 ರಿಂದ 9:55 ರವರೆಗೆ
ಮಕರ ರಾಶಿ
ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯವಿದ್ದರೆ ನಿಮ್ಮ ಸಂಬಂಧದಲ್ಲಿ ಸುಧಾರಣೆ ಕಂಡುಬರಬಹುದು. ಹಣದ ವಿಷಯದಲ್ಲಿ ಈ ದಿನ ಉತ್ತಮವಾಗಿದೆ. ಹಣಗಳಿಸಲು ತರಾತುರಿಯಲ್ಲಿ ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ. ಕೆಲಸದ ದೃಷ್ಟಿಯಿಂದ ದಿನವು ಸಾಮಾನ್ಯವಾಗಿರಲಿದೆ. ನಿಮ್ಮ ಆರೋಗ್ಯದ ಬಗ್ಗೆ ಹೇಳುವುದಾದರೆ ಬೆನ್ನಿಗೆ ಸಂಬಂಧಿಸಿದ ಸಮಸ್ಯೆ ಇರಬಹುದು.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಸಂಜೆ 5:20 ರಿಂದ ರಾತ್ರಿ 8 ರವರೆಗೆ
ಕುಂಭ ರಾಶಿ
ಮನೆಯ ವಾತಾವರಣವು ಚೆನ್ನಾಗಿರಲಿದೆ. ಹಣದ ವಿಷಯದಲ್ಲಿ, ದಿನವು ತುಂಬಾ ದುಬಾರಿಯಾಗಲಿದೆ. ಆದರೂ ಯಾವುದೇ ದೊಡ್ಡ ಸಮಸ್ಯೆ ಇರುವುದಿಲ್ಲ. ಕಚೇರಿಯಲ್ಲಿ ನಿಮ್ಮ ನೆಚ್ಚಿನ ಯೋಜನೆಯಲ್ಲಿ ಕೆಲಸ ಮಾಡಲು ನಿಮಗೆ ಅವಕಾಶವನ್ನು ನೀಡಬಹುದು. ಉದ್ಯಮಿಗಳಿಗೆ ಉತ್ತಮ ಅವಕಾಶ ಸಿಗಲಿದೆ. ಶೀಘ್ರದಲ್ಲೇ ನಿಮ್ಮ ವ್ಯವಹಾರದಲ್ಲಿ ಧನಾತ್ಮಕ ಬದಲಾವಣೆಗಳನ್ನು ಕಾಣಬಹುದು. ಆರೋಗ್ಯದ ದೃಷ್ಟಿಯಿಂದ ದಿನವು ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಬೆಳಿಗ್ಗೆ 6 ರಿಂದ 8:15 ರವರೆಗೆ
ಮೀನ ರಾಶಿ
ನೀವು ನಿಮ್ಮ ಕೆಲಸವನ್ನು ಬದಲಾಯಿಸಲು ಯೋಚಿಸುತ್ತಿದ್ದರೆ ನಿಮಗೆ ಒಳ್ಳೆಯ ಅವಕಾಶ ಸಿಗಲಿದೆ. ವ್ಯಾಪಾರಸ್ಥರು ಇಂದು ದೂರ ಪ್ರಯಾಣ ಮಾಡಬೇಕಾಗಬಹುದು. ನಿಮ್ಮ ಈ ಪಯಣ ತುಂಬಾ ಆಹ್ಲಾದಕರವಾಗಿರುತ್ತದೆ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ಇರುತ್ತದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಅತಿಯಾದ ಮಾನಸಿಕ ಒತ್ತಡ ಕಡಿಮೆ ಮಾಡಿ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ



Click it and Unblock the Notifications












