Latest Updates
-
ಸಿಲಿಂಡರ್ 3 ತಿಂಗಳು ಬರಬೇಕೆ? ಇನ್ಮುಂದೆ ಗ್ಯಾಸ್ ಚಿಂತೆ ಬೇಡ.. LPG ಉಳಿಸಲು ಇಲ್ಲಿದೆ 5 ಸ್ಮಾರ್ಟ್ ಟಿಪ್ಸ್ -
ಅಕ್ಕಿ ಬೇಡ, ಉದ್ದಿನಬೇಳೆ ಬೇಡ.. 15 ನಿಮಿಷದ ಹೆಸರು ಬೇಳೆ-ತರಕಾರಿ ಇಡ್ಲಿ! ಉಳಿದ ಇಡ್ಲಿ ಫ್ರೆಶ್ ಆಗಿಡೋದು ಹೇಗೆ? -
ಗ್ಯಾಸ್ ಇಲ್ವಾ? ಚಿಂತೆ ಬೇಡ.. ಒಲೆ ಹಚ್ಚದೇ ಮಾಡುವ 5 ಆರೋಗ್ಯಕರ ಊಟಗಳಿವು! -
ಮಿಕ್ಸಿಯಲ್ಲೇ ಮಾಡಿ ಕಬ್ಬಿನ ಹಾಲು! ಕಬ್ಬು ಇಲ್ಲದೆಯೇ ಶುದ್ಧವಾದ ಹಾಲು ಮಾಡೋದು ಹೇಗೆ? ರಸ್ತೆ ಬದಿಗಿಂತ ರುಚಿ -
ಮಘಾ ನಕ್ಷತ್ರಕ್ಕೆ ಕೇತು.. ಈ ಎಲ್ಲಾ ರಾಶಿಯವರ ಜೀವನದಲ್ಲಿ ಭಾರಿ ಬದಲಾವಣೆ! ಯಾರಿಗೆ ಶುಭ? ಯಾರಿಗೆ ಸಮಸ್ಯೆ? -
10 ನಿಮಿಷಗಳ ಅಪ್ಪೆ.. ಹೆಸರುಕಾಳು ಮತ್ತು ಬಟಾಣಿ ಬಳಸಿ ಮಾಡುವ ರೆಸಿಪಿ! ಮೃದುವಾಗಿ ಮಾಡೋದು ಹೇಗೆ ಗೊತ್ತಾ? -
ವಿವಾಹಿತ ದಂಪತಿಗಳಿಗೂ ಈ ದಿನ ಸಂತೋಷದಾಯಕ! ಸಂಗಾತಿ ಮೇಲೆ ಡೌಟ್ ಬೇಡ -
March 13 Horoscope: ಶುಭ ಕಾರ್ಯ ಸಂಬಂಧಿತ ಚರ್ಚೆಗಳಿವೆ -
ಬೇಸಿಗೆಯಲ್ಲಿ ಈ ಗಂಜಿ ಕುಡಿಯಿರಿ.. ಕೊಬ್ಬು ಕಡಿಮೆ, ದೇಹಕ್ಕೂ ತಂಪು! ಈ ಗಂಜಿಯ ಆರೋಗ್ಯ ರಹಸ್ಯ ಇಲ್ಲಿದೆ -
30 ವರ್ಷಗಳ ಬಳಿಕ ಸೂರ್ಯ-ಶನಿ ಸಂಯೋಗ! ಯಾರಿಗೆ ಶುಭ? ಯಾರಿಗೆ ಸಮಸ್ಯೆ? 12 ರಾಶಿಗಳ ಜಾತಕ ತಿಳಿಯಿರಿ
Horoscope Today 9 May 2023: ಮಂಗಳವಾರ: ಈ ದಿನ 7 ರಾಶಿಯವರಿಗೆ ಒಳ್ಳೆಯದು, 5ರಾಶಿಯವರು ಜಾಗ್ರತೆ
ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಮೇ 9ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ಉತ್ತರಾಯಣ
ಋತು: ವಸಂತ
ಮಾಸ: ಜ್ಯೇಷ್ಠ
ಪಕ್ಷ: ಕೃಷ್ಣಪಕ್ಷ
ಮೇಷ ರಾಶಿ
ಕೆಲಸದ ದೃಷ್ಟಿಯಿಂದ ಈ ದಿನ ನಿಮಗೆ ಅನುಕೂಲಕರವಾಗಿದೆ. ನಿಮ್ಮ ಕಾರ್ಯಕ್ಷಮತೆಯಲ್ಲಿ ದೊಡ್ಡ ಸುಧಾರಣೆ ಕಂಡುಬರಬಹುದು, ಈ ದಿನ ನಿಮ್ಮ ಕಾರ್ಯಕ್ಷಮತೆ ಹೆಚ್ಚಾಗಲಿದೆ. ವೈವಾಹಿಕ ಜೀವನದಲ್ಲಿ ಕೆಲ ಸಮಸ್ಯೆಗಳಿರಬಹುದು. ನಿಮ್ಮ ಸಂಗಾತಿಯ ಸ್ಥಿತಿ ಸರಿಯಾಗಿರುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ನೀವು ತುಂಬಾ ಸಮತೋಲಿತವಾಗಿ ವರ್ತಿಸುವಂತೆ ಸಲಹೆ ನೀಡಲಾಗಿದೆ. ಹಣದ ವಿಷಯದಲ್ಲಿ ದಿನವು ಉತ್ತಮವಾಗಿರಲಿದೆ. ಈ ದಿನ ಖರ್ಚು ಕಡಿಮೆ ಇರಲಿದೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ಆರೋಗ್ಯ ಚೆನ್ನಾಗಿರಲಿದೆ. ಆದರೆ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಿ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: ಬೆಳಿಗ್ಗೆ 10:10 ರಿಂದ ಮಧ್ಯಾಹ್ನ 2 ರವರೆಗೆ

ವೃಷಭ ರಾಶಿ
ಇಂದು ನೀವು ಒಂಟಿಯಾಗಿರಲು ಇಷ್ಟಪಡುತ್ತೀರಿ. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ಹೊಸ ಯೋಜನೆಗಳನ್ನು ಮಾಡುತ್ತೀರಿ. ನೀವು ಖರ್ಚುಗಳನ್ನು ಮಿತಿಯಲ್ಲಿ ಮಾಡಬೇಕು. ವೃತ್ತಿ ಜೀವನದಲ್ಲಿ ಕೆಲವು ಏರುಪೇರು ಉಂಟಾಗುವುದು. ಅದು ಉದ್ಯೋಗ ಅಥವಾ ವ್ಯವಹಾರವಾಗಿರಲಿ, ನಿಮ್ಮ ಕೆಲವು ಪ್ರಮುಖ ಕೆಲಸಗಳಲ್ಲಿ ಅಡೆತಡೆಗಳು ಉಂಟಾಗಬಹುದು. ಆದರೂ ನಿಮ್ಮ ಈ ಸಮಸ್ಯೆ ತಾತ್ಕಾಲಿಕ. ಆರೋಗ್ಯದ ಬಗ್ಗೆ ಗಮನಹರಿಸಿ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 15
ಅದೃಷ್ಟದ ಸಮಯ: ಬೆಳಗ್ಗೆ 4:05 ರಿಂದ ಮಧ್ಯಾಹ್ನ 12
ಮಿಥುನ ರಾಶಿ
ನೀವು ವ್ಯಾಪಾರಸ್ಥರಾಗಿದ್ದರೆ ಈ ದಿನ ಸವಾಲಿನಿಂದ ಕೂಡಿರಲಿದೆ. ನೀವು ಇತ್ತೀಚೆಗೆ ಯಾವುದೇ ಹೂಡಿಕೆಯನ್ನು ಮಾಡಿದ್ದರೆ ಆ ಸಂಬಂಧಿತ ಆತಂಕ ಕಾಡಬಹುದು. ಇಂದು ನೀವು ನಡವಳಿಕೆ ಕಡೆ ಗಮನಹರಿಸಿ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಇಂದು ನೀವು ಮನೆಯ ಅಲಂಕಾರವನ್ನು ಬದಲಾಯಿಸಲು ಕೆಲವು ಬೆಲೆಬಾಳುವ ವಸ್ತುಗಳನ್ನು ಖರೀದಿಸಬಹುದು. ಜೀವನ ಸಂಗಾತಿಯ ಪ್ರೀತಿ ಮತ್ತು ಬೆಂಬಲ ಸಿಗಲಿದೆ. ಆರೋಗ್ಯದ ವಿಷಯದಲ್ಲಿ ಈ ದಿನ ಮಿಶ್ರಫಲ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 34
ಅದೃಷ್ಟದ ಸಮಯ: ಸಂಜೆ 5 ರಿಂದ 9:15 ರವರೆಗೆ
ಕರ್ಕ ರಾಶಿ
ಇಂದು ನಿಮಗೆ ತುಂಬಾ ಕಾರ್ಯನಿರತವಾಗಿರಲಿದೆ, ಆದರೆ ನಿಮ್ಮ ಕಠಿಣಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಮೇಲಾಧಿಕಾರಿಗಳು ನಿಮ್ಮ ಶ್ರಮವನ್ನು ಮೆಚ್ಚಿಕೊಳ್ಳುತ್ತಾರೆ. ಉದ್ಯಮಿಗಳು ಯಾವುದೇ ಸ್ಥಗಿತಗೊಂಡ ಕೆಲಸವನ್ನು ಪೂರ್ಣಗೊಳಿಸುವಲ್ಲಿ ಯಶಸ್ವಿಯಾಗುತ್ತಾರೆ. ಹಣದ ವಿಷಯದಲ್ಲಿಈ ದಿನ ತುಂಬಾ ಉತ್ತಮವಾಗಿದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಆಹ್ಲಾದಕರವಾಗಿರಲಿದೆ. ಪ್ರತಿಕೂಲ ಸಂದರ್ಭಗಳಲ್ಲಿ, ನಿಮ್ಮ ಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಸಮಯ: ಬೆಳಿಗ್ಗೆ 8 ರಿಂದ ಮಧ್ಯಾಹ್ನ 12 ರವರೆಗೆ
ಸಿಂಹ ರಾಶಿ
ಪ್ರೇಮಿಗಳಿಗೆ ಈ ದಿನ ಅನುಕೂಲಕರವಾಗಿದೆ. ನಿಮ್ಮ ಸಹಚರರು ತಮ್ಮ ಆಲೋಚನೆಗಳನ್ನು ನಿಮ್ಮೊಂದಿಗೆ ಮುಕ್ತವಾಗಿ ಹಂಚಿಕೊಳ್ಳಲು ಸಾಧ್ಯವಾಗುತ್ತದೆ. ಹಣದ ವಿಷಯದಲ್ಲಿ ಈ ದಿನ ಚೆನ್ನಾಗಿದೆ. ನಿಮ್ಮ ಆದಾಯ ಹೆಚ್ಚಾಗುವುದರಿಂದ ಹಣಕಾಸಿನ ಸಮಸ್ಯೆಗಳು ಬಗೆಹರಿಯಲಿದೆ. ಉದ್ಯೋಗಸ್ಥರಿಗೆ ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಬೆಂಬಲ ದೊರೆಯಲಿದೆ. ಇಂದು ನೀವು ನಿಮ್ಮ ಕೆಲಸದ ಮೇಲೆ ಸರಿಯಾಗಿ ಗಮನ ಹರಿಸಲು ಸಾಧ್ಯವಾಗುತ್ತದೆ. ಮತ್ತೊಂದೆಡೆ, ವ್ಯಾಪಾರಕ್ಕೆ ಸಂಬಂಧಿಸಿದ ಜನರು ದೊಡ್ಡ ಆರ್ಥಿಕ ವಹಿವಾಟುಗಳನ್ನು ಮಾಡಲು ಅವಕಾಶವನ್ನು ಸಿಗಲಿದೆ. ಆರೋಗ್ಯದ ದೃಷ್ಟಿಯಿಂದ ದಿನವು ಸರಾಸರಿಯಾಗಿರಲಿದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 18
ಅದೃಷ್ಟದ ಸಮಯ: ಸಂಜೆ 4:30 ರಿಂದ ರಾತ್ರಿ 8:20 ರವರೆಗೆ
ಕನ್ಯಾ ರಾಶಿ
ಈ ದಿನ ಕೆಲಸದ ದೃಷ್ಟಿಯಿಂದ ಉತ್ತಮವಾಗಿದೆ, ಮೇಲಾಧಿಕಾರಿಗಳ ಸಲಹೆ ನಿಮ್ಮ ಕೆಲಸಕ್ಕೆ ತುಂಬಾನೇ ಸಹಾಯವಾಗಲಿದೆ. ಉದ್ಯಮಿಗಳು ಇಂದು ಪ್ರಮುಖ ವ್ಯವಹಾರ ನಿರ್ಧಾರವನ್ನು ತೆಗೆದುಕೊಳ್ಳಬೇಕಾಗಬಹುದು. ನಿಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದ ನಡುವೆ ನೀವು ಸಮತೋಲನವನ್ನು ಸಾಧಿಸಬೇಕು. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯ ದುರ್ಬಲವಾಗಬಹುದು.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಬೆಳಿಗ್ಗೆ 7 ರಿಂದ 11 ರವರೆಗೆ
ತುಲಾ ರಾಶಿ
ಯಾವುದೇ ವೃತ್ತಿ ಸಂಬಂಧಿತ ಸಮಸ್ಯೆಗಳಿದ್ದರೆ ಅಥವಾ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವಲ್ಲಿ ನೀವು ತೊಂದರೆ ಅನುಭವಿಸುತ್ತಿದ್ದರೆ, ಆತುರದ ನಿರ್ಧಾರ ಒಳ್ಳೆಯದಲ್ಲ. ನಿಮ್ಮ ಹಣಕಾಸಿನ ಸ್ಥಿತಿ ಉತ್ತಮವಾಗಿರಲಿದೆ, ನೀವು ಅನಗ್ಯತ ವೆಚ್ಚಗಳನ್ನು ನಿಯಂತ್ರಿಸಬೇಕಾಗಿದೆ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಉತ್ತಮ ಹೊಂದಾಣಿಕೆ ಇರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಅತ್ಯಧಿಕ ಮಾನಸಿಕ ಒತ್ತಡ ಒಳ್ಳೆಯದಲ್ಲ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 30
ಅದೃಷ್ಟದ ಸಮಯ: ಸಂಜೆ 4:35 ರಿಂದ ರಾತ್ರಿ 8 ರವರೆಗೆ
ವೃಶ್ಚಿಕ ರಾಶಿ
ಕೆಲಸದ ವಿಷಯದಲ್ಲಿ ತುಂಬಾ ಮಂಗಳಕರವಾಗಿರಲಿದೆ. ಇಂದು ನಿಮ್ಮ ಎಲ್ಲಾ ಕೆಲಸಗಳು ನಿಮ್ಮ ಯೋಜನೆಯ ಪ್ರಕಾರ ಪೂರ್ಣಗೊಳ್ಳುತ್ತವೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರಲಿದೆ. ನಿಮ್ಮ ಸಂಗಾತಿಯ ಆರೋಗ್ಯದ ಬಗ್ಗೆ ನಿಮ್ಮ ಕಾಳಜಿ ಹೆಚ್ಚಾಗಬಹುದು. ಈ ಸಮಯದಲ್ಲಿ, ಉತ್ತಮ ಆರೈಕೆಯ ಜೊತೆಗೆ, ಅವರಿಗೆ ನಿಮ್ಮ ಭಾವನಾತ್ಮಕ ಬೆಂಬಲವೂ ಬೇಕಾಗುತ್ತದೆ. ಅಲ್ಲದೆ ನಿಮ್ಮ ಆರೋಗ್ಯದ ಕಡೆಯೂ ಗಮನಹರಿಸಿ.
ಅದೃಷ್ಟದ ಬಣ್ಣ: ಕಡು ಹಸಿರು
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಬೆಳಿಗ್ಗೆ 5:15 ರಿಂದ ಮಧ್ಯಾಹ್ನ 12 ರವರೆಗೆ
ಧನು ರಾಶಿ
ವಿದ್ಯಾರ್ಥಿಗಳು ತಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಫಲಿತಾಂಶ ಪಡೆಯಬಹುದು. ನೀವು ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ಹೋಗಲು ಬಯಸಿದರೆ, ಇಂದು ನೀವು ಒಳ್ಳೆಯ ಸುದ್ದಿಯನ್ನು ಪಡೆಯುವ ಸಾಧ್ಯತೆಯಿದೆ. ಇಂದು ಕಚೇರಿಯಲ್ಲಿ ಕೆಲಸದ ಒತ್ತಡ ಅಧಿಕವಾಗಿರಲಿದೆ. ಆದರೆ ತುಂಬಾ ಒತ್ತಡ ತೆಗೆದುಕೊಳ್ಳದಿರುವುದು ಒಳ್ಳೆಯದು ಎಂಬ ಸಲಹೆ ನೀಡಲಾಗಿದೆ. ವ್ಯಾಪಾರಿಗಳು ನಿರೀಕ್ಷೆಯಂತೆ ಫಲಿತಾಂಶವನ್ನು ಪಡೆಯುವ ಸಾಧ್ಯತೆಯಿದೆ. ಮನೆಯ ವಾತಾವರಣವು ಹರ್ಷಚಿತ್ತದಿಂದ ಕೂಡಿರಲಿದೆ. ಆರೋಗ್ಯದ ವಿಷಯದಲ್ಲಿ ಈ ದಿನ ಮಿಶ್ರಫಲ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ 2:55 ರವರೆಗೆ
ಮಕರ ರಾಶಿ
ನಿಮ್ಮ ಆರೋಗ್ಯ ಚೆನ್ನಾಗಿರಲಿದೆ. ವ್ಯಾಪಾರಸ್ಥರು ತೆಗೆದುಕೊಳ್ಳುವಾಗ ಸರಿಯಾದ ನಿರ್ಧಾರದಿಂದ ಅನುಕೂಲಕರವಾಗಿದೆ. ನೀವು ದೊಡ್ಡ ಆರ್ಥಿಕ ಲಾಭವನ್ನು ಗಳಿಸುವ ಸಾಧ್ಯತೆಯಿದೆ. ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ. ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ಆರೋಗ್ಯ ಕೂಡ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 19
ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 8:25 ರವರೆಗೆ
ಕುಂಭ ರಾಶಿ
ನೀವು ಬಹಳ ಸಮಯದಿಂದ ಯಾವುದೇ ಬೆಲೆಬಾಳುವ ವಸ್ತುವನ್ನು ಖರೀದಿಸಲು ಯೋಜಿಸುತ್ತಿದ್ದರೆ, ಇಂದು ನಿಮ್ಮ ಆಸೆ ಈಡೇರಲಿದೆ. ಕುಟುಂಬ ಸದಸ್ಯರ ಪ್ರೀತಿ ಮತ್ತು ಬೆಂಬಲ ಸಿಗಲಿದೆ. ಇಂದು ಕಚೇರಿಯಲ್ಲಿ ನಿಮ್ಮ ಯಾವುದೇ ಕೆಲಸವನ್ನು ಅಪೂರ್ಣವಾಗಿ ಬಿಡಬೇಡಿ. ಇದಲ್ಲದೆ, ನೀವು ಉನ್ನತ ಅಧಿಕಾರಿಗಳ ಸಲಹೆಯನ್ನು ಸಹ ಅನುಸರಿಸಬೇಕಾಗುತ್ತದೆ. ವ್ಯಾಪಾರಸ್ಥರಿಗೆ ಇಂದು ಸರಾಸರಿ ದಿನವಾಗಲಿದೆ. ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು, ನೀವು ಪ್ರತಿದಿನ ಲಘು ವ್ಯಾಯಾಮದೊಂದಿಗೆ ನಿಮ್ಮ ದಿನಚರಿ ಆರಂಭಿಸಿದರೆ ಒಳ್ಳೆಯದು.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 17
ಅದೃಷ್ಟದ ಸಮಯ: ಬೆಳಿಗ್ಗೆ 7 ರಿಂದ 10 ರವರೆಗೆ
ಮೀನ ರಾಶಿ
ನೀವು ಅನಗತ್ಯ ವಿಷಯಗಳಲ್ಲಿ ನಿಮ್ಮ ಅಮೂಲ್ಯ ಸಮಯವನ್ನು ವ್ಯರ್ಥ ಮಾಡಬೇಡಿ. ಇಂದು, ತ್ವರಿತವಾಗಿ ಹಣ ಗಳಿಸುವ ಬಯಕೆಯಿಂದ ಅಡ್ಡಮಾರ್ಗ ಹಿಡಿಯಬೇಡಿ. ಇಲ್ಲದಿದ್ದರೆ ನೀವು ದೊಡ್ಡ ತೊಂದರೆಗೆ ಒಳಗಾಗಬಹುದು. ಕಛೇರಿಯಲ್ಲಿ ನಿಮ್ಮ ಯಾವುದೇ ಪ್ರಮುಖ ಫೈಲ್‌ಗಳು ತಪ್ಪಿಸಿಕೊಂಡರೆ ನಿಮ್ಮ ಕೆಲಸಕ್ಕೆ ಅಡ್ಡಿಯಾಗಬಹುದು. ವ್ಯಾಪಾರಸ್ಥರು ಲಾಭ ಗಳಿಸಲು ಕಷ್ಟಪಡಬೇಕಾಗಬಹುದು. ಆರೋಗ್ಯ ಹದಗೆಡಬಹುದು.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 8
ಅದೃಷ್ಟದ ಸಮಯ: ಮಧ್ಯಾಹ್ನ 12:20 ರಿಂದ ಮಧ್ಯಾಹ್ನ 2 ರವರೆಗೆ



Click it and Unblock the Notifications












