Latest Updates
-
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ!
ಅಕ್ಟೋಬರ್ 10 ದಿನ ಭವಿಷ್ಯ: ಮಂಗಳವಾರ ನಿಮ್ಮ ರಾಶಿಗೆ ಹೇಗಿರಲಿದೆ?
ವೈದಿಕ ಶಾಸ್ತ್ರದ ಪ್ರಕಾರ ಅಕ್ಟೋಬರ್ 10ರ ರಾಶಿಫಲ ನೀಡಿದ್ದು ಈ ದಿನ 12 ರಾಶಿಗಳಿಗೆ ಹೇಗಿರಲಿದೆ ಎಂದು ನೋಡೋಣ:
ಮೇಷ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಕೆಲಸದ ಹೊರೆ ಸ್ವಲ್ಪ ಕಡಿಮೆಯಾಗುವ ಸಾಧ್ಯತೆ ಇದೆ. ಈ ದಿನ ಕುಟುಂಬದೊಂದಿಗೆ ಖುಷಿಯಿಂದ ಸಮಯ ಕಳೆಯುವಿರಿ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಮನೆಯ ಖರ್ಚುಗಳನ್ನು ಸುಲಭವಾಗಿ ಭರಿಸಲಾಗುವುದು. ನಿಮ್ಮ ಆರೋಗ್ಯದಲ್ಲಿ ಸುಧಾರಣೆ ಕಂಡು ಬರುವುದು.
ಅದೃಷ್ಟದ ಬಣ್ಣ: ಕೇಸರಿ
ಅದೃಷ್ಟದ ಸಂಖ್ಯೆ: 12
ಶುಭ ಸಮಯ: ಬೆಳಿಗ್ಗೆ 8 ರಿಂದ 11:30 ರವರೆಗೆ

ವೃಷಭ ರಾಶಿ
ಇಂದು ಕೆಲಸದಲ್ಲಿ ತುಂಬಾ ಬ್ಯುಸಿಯಾಗಿರುತ್ತೀರಿ. ಕೆಲಸದಲ್ಲಿ ಚಿಕ್ಕ ತಪ್ಪಾಗದಂತೆ ಜಾಗ್ರತೆವಹಿಸಿ. ವ್ಯಾಪಾರಸ್ಥರಿಗೆ ಈ ದಿನ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ಮೈಕೈ ನೋವು ಇರಬಹುದು.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 35
ಶುಭ ಸಮಯ: ಸಂಜೆ 7:30 ರಿಂದ 9:15 ರವರೆಗೆ
ಮಿಥುನ ರಾಶಿ
ತುಂಬಾ ಸಮಯದಿಂದ ಬಾಕಿ ಉಳಿದಿರುವ ಕೆಲಸವು ಪೂರ್ಣಗೊಳ್ಳುತ್ತದೆ, ನೀವು ಆರ್ಥಿಕ ಲಾಭವನ್ನು ಪಡೆಯಬಹುದು. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಉತ್ತಮ ಹೊಂದಾಣಿಕೆ ಇರಲಿದೆ. ಇಂದು ನಿಮ್ಮ ಪ್ರೀತಿಪಾತ್ರರು ನಿಮ್ಮ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತಾರೆ. ಈ ದಿನ ಯಾರ ಮೇಲಾದರೂ ಅಸಮಧಾನ ಉಂಟಾದರೆ ಕೋಪ ನಿಯಂತ್ರಿಸುವುದು ಒಳ್ಳೆಯದು.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 9
ಶುಭ ಸಮಯ: ಬೆಳಿಗ್ಗೆ 10:10 ರಿಂದ ಮಧ್ಯಾಹ್ನ 12:30 ರವರೆಗೆ
ಕರ್ಕ ರಾಶಿ
ಕರ್ಕ ರಾಶಿಯ ವಿದ್ಯಾರ್ಥಿಗಳಿಗೆ ಇಂದು ಬಹಳ ಮುಖ್ಯವಾದ ದಿನವಾಗಿದೆ. ವಿಶೇಷವಾಗಿ ನೀವು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರೆ, ನಿಮಗೆ ಒಳ್ಳೆಯ ಸುದ್ದಿ ಪಡೆಯಬಹುದು. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಬಲವಾದ ಸಾಧ್ಯತೆಯಿದೆ. ಇಂದು ನೀವು ಹಣಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಜಾಗರೂಕರಾಗಿರಬೇಕು. ಕಛೇರಿಯಲ್ಲಿ ನಿಮ್ಮ ಎಲ್ಲಾ ಕೆಲಸಗಳು ಸಮಯಕ್ಕೆ ಪೂರ್ಣಗೊಳ್ಳುತ್ತವೆ. ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 10
ಶುಭ ಸಮಯ: ಬೆಳಗ್ಗೆ 5:15 ರಿಂದ 9:50 ರವರೆಗೆ
ಸಿಂಹ ರಾಶಿ
ನ್ಯಾಯಾಲಯಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ವಕೀಲರ ಸಲಹೆಯನ್ನು ಪಡೆದು ಮುಂದುವರೆಯುವುದು ಒಳ್ಳೆಯದು. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನೀವು ಸಾಲವನ್ನು ತೆಗೆದುಕೊಳ್ಳುವ ಬಗ್ಗೆ ಯೋಚಿಸುತ್ತಿದ್ದರೆ, ಸಾಲ ಮಾಡದಿರುವುದು ಒಳ್ಲೆಯದು. ಮನೆಯಲ್ಲಿರುವ ಹಿರಿಯರೊಂದಿಗೆ ನಿಮ್ಮ ಸಂಬಂಧ ಇನ್ನಷ್ಟು ಗಟ್ಟಿಯಾಗುತ್ತದೆ. ಪ್ರತಿಕೂಲ ಸಂದರ್ಭಗಳಲ್ಲಿ ನೀವು ಅವರ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಕೆಲಸದ ದೃಷ್ಟಿಯಿಂದ ದಿನವು ಸರಾಸರಿಯಾಗಿರುತ್ತದೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 17
ಶುಭ ಸಮಯ: ಸಂಜೆ 6 ರಿಂದ ರಾತ್ರಿ 8 ರವರೆಗೆ
ಕನ್ಯಾ ರಾಶಿ
ನಿಮ್ಮ ಸಂಗಾತಿಯೊಂದಿಗೆ ಸಂಬಂಧವು ಬಲಗೊಳ್ಳುತ್ತದೆ. ಇಂದು ನಿಮ್ಮ ವೈವಾಹಿಕ ಜೀವನದ ಅತ್ಯಂತ ಸುಂದರವಾದ ದಿನಗಳಲ್ಲಿ ಒಂದಾಗಿರಬಹುದು. ಕೆಲಸದ ಸ್ಥಳದಲ್ಲಿ ನಿಮ್ಮ ಕೆಲಸದಿಂದ ಗುರುತಿಸಿಕೊಳ್ಳಲು ಸಾಧ್ಯವಾಗುವುದು. ನೀವು ಶೀಘ್ರದಲ್ಲೇ ಉತ್ತಮ ಯಶಸ್ಸನ್ನು ಪಡೆಯುತ್ತೀರಿ. ಆರ್ಥಿಕ ಅಂಶವು ಬಲವಾಗಿ ಉಳಿಯುತ್ತದೆ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 4
ಶುಭ ಸಮಯ: ಬೆಳಿಗ್ಗೆ 8 ರಿಂದ ಮಧ್ಯಾಹ್ನ 2 ರವರೆಗೆ
ತುಲಾ ರಾಶಿ
ಇಂದು ನಿಮ್ಮ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಮನಸ್ಸಿನ ಮಾತು ಬದಲಿಗೆ ಬುದ್ಧಿ ಮಾತು ಕೇಳುವುದು ಒಳ್ಳೆಯದು. ನಿಮ್ಮ ಸಂಗಾತಿಯೊಂದಿಗೆ ಭಾವನಾತ್ಮಕ ಬಾಂಧವ್ಯ ಹೆಚ್ಚಾಗುತ್ತದೆ. ಕಚೇರಿಯಲ್ಲಿ ಉನ್ನತ ಅಧಿಕಾರಿಗಳೊಂದಿಗೆ ಮಾತನಾಡುವಾಗ ನಿಮ್ಮ ಮಾತಿನ ಮೇಲೆ ಹಿಡಿತವಿರಲಿ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 20
ಶುಭ ಸಮಯ: ಸಂಜೆ 5:30 ರಿಂದ ರಾತ್ರಿ 8:30 ರವರೆಗೆ
ವೃಶ್ಚಿಕ ರಾಶ
ಹಣದ ವಿಷಯದಲ್ಲಿ ಇಂದು ಉತ್ತಮ ದಿನ. ಕೆಲಸದ ಸ್ಥಳದಲ್ಲಿ ನಿಮ್ಮ ಗೌರವ ಹೆಚ್ಚಾಗುತ್ತದೆ. ನಿಮ್ಮ ಕಠಿಣ ಪರಿಶ್ರಮಕ್ಕೆ ಉತ್ತಮ ಯಶಸ್ಸನ್ನು ಸಾಧಿಸಬಹುದು. ಕೌಟುಂಬಿಕ ಜೀವನದಲ್ಲಿ ಉದ್ವಿಗ್ನತೆ ಹೆಚ್ಚಾಗುತ್ತಿದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 11
ಶುಭ ಸಮಯ: ಬೆಳಿಗ್ಗೆ 6:30 ರಿಂದ 11 ರವರೆಗೆ
ಧನು ರಾಶಿ
ನಿಮ್ಮ ವೈವಾಹಿಕ ಜೀವನದಲ್ಲಿ ಸಂತೋಷ ಇರಲಿದೆ. ನಿಮ್ಮ ಪ್ರೀತಿಪಾತ್ರರನ್ನು ನಿರ್ಲಕ್ಷಿಸುವ ತಪ್ಪನ್ನು ಮಾಡಬೇಡಿ. ಕೆಲಸದ ವಿಷಯದಲ್ಲಿ ದಿನವು ಕಾರ್ಯನಿರತವಾಗಿರುತ್ತದೆ. ಇಂದು ನೀವು ಸಾಕಷ್ಟು ಓಡಬೇಕಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ ನಿಮ್ಮ ಆಯಾಸ ಹೆಚ್ಚಾಗುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 29
ಶುಭ ಸಮಯ: ಮಧ್ಯಾಹ್ನ 12 ರಿಂದ 2:50 ರವರೆಗೆ
ಮಕರ ರಾಶಿ
ಕೆಲಸಕ್ಕೆ ಸಂಬಂಧಿಸಿದ ಯಾವುದೇ ಚಿಂತೆ ನಿಮ್ಮನ್ನು ಕಾಡಬಹುದು. ಅನಗ್ಯತ ವಿಷಯಗಳಿಗೆ ತಲೆಕೆಡಿಸಿಕೊಳ್ಳಬೇಡಿ. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನಿಮ್ಮ ಆದಾಯವನ್ನು ಹೆಚ್ಚಿಸಲು ನೀವು ಪ್ರಯತ್ನಿಸುತ್ತಿದ್ದರೆ, ಇಂದು ನಿಮಗೆ ಪ್ರಮುಖ ದಿನವಾಗಿದೆ. ಆರೋಗ್ಯ ಸಂಬಂಧಿ ಸಮಸ್ಯೆಗಳಿರಬಹುದು.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 4
ಶುಭ ಸಮಯ: ಸಂಜೆ 7 ರಿಂದ 9 ರವರೆಗೆ
ಕುಂಭ ರಾಶಿ
ಪ್ರೇಮಿಗಳಿಗೆ ಈ ದಿನ ರೊಮ್ಯಾಂಟಿಕ್ ಆಗಿರುತ್ತದೆ. ನಿಮ್ಮ ಸಂಬಂಧವನ್ನು ಮದುವೆ ಮೂಲಕ ಗಟ್ಟಿಯಾಗಿಸಲು ನೀವು ನಿರ್ಧರಿಸಬಹುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಇಂದು ನೀವು ಯಾವುದೇ ದುಬಾರಿ ಐಷಾರಾಮಿ ವಸ್ತುಗಳನ್ನು ಖರೀದಿಸಬಹುದು. ಉದ್ಯೋಗವಿರಲಿ, ವ್ಯವಹಾರವಿರಲಿ, ನಿಮ್ಮ ಶ್ರಮಕ್ಕೆ ತಕ್ಕ ಫಲಿತಾಂಶ ಸಿಗುತ್ತದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 19
ಶುಭ ಸಮಯ: ಬೆಳಿಗ್ಗೆ 9:20 ರಿಂದ ಮಧ್ಯಾಹ್ನ 12:50 ರವರೆಗೆ
ಮೀನ ರಾಶಿ
ಕೆಲಸದ ಜೊತೆಗೆ ನಿಮ್ಮ ಮಕ್ಕಳ ಬಗ್ಗೆಯೂ ನೀವು ಗಮನ ಹರಿಸಬೇಕು ಇಲ್ಲದಿದ್ದರೆ ಅಜಾಗರೂಕತೆಯು ದುಬಾರಿಯಾಗಿದೆ. ನೀವು ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ನಿಮ್ಮ ಸಮಸ್ಯೆಯು ಕೊನೆಗೊಳ್ಳುತ್ತದೆ. ಕೆಲಸದ ಕಡೆ ಗಮನ ಅಗ್ಯತ, ಇಲ್ಲದಿದ್ದರೆ ನಿಮಗೆ ನೀಡಿದ ಕೆಲವು ಜವಾಬ್ದಾರಿಗಳನ್ನು ನಿಮ್ಮಿಂದ ಹಿಂತೆಗೆದುಕೊಳ್ಳುವ ಸಾಧ್ಯತೆಯಿದೆ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 7
ಶುಭ ಸಮಯ: ಸಂಜೆ 4:40 ರಿಂದ 7 ರವರೆಗೆ



Click it and Unblock the Notifications










