Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಅಕ್ಟೋಬರ್ 11 ದಿನ ಭವಿಷ್ಯ: ಬುಧವಾರ 12 ರಾಶಿಗಳಿಗೆ ಹೇಗಿರಲಿದೆ?
ವೈದಿಕ ಶಾಸ್ತ್ರದ ಪ್ರಕಾರ ಅಕ್ಟೋಬರ್ 11ರ ರಾಶಿಫಲ ನೀಡಿದ್ದು ಈ ದಿನ 12 ರಾಶಿಗಳಿಗೆ ಹೇಗಿರಲಿದೆ ಎಂದು ನೋಡೋಣ:
ಮೇಷ ರಾಶಿ
ಇಂದು ನಿಮಗೆ ಮಿಶ್ರ ಫಲಿತಾಂಶಗಳ ದಿನವಾಗಿರುತ್ತದೆ. ಕೆಲಸದಲ್ಲಿ ನೀವು ಜಾಗರೂಕರಾಗಿರಬೇಕು. ನಿಮ್ಮ ಮಾತು ಮತ್ತು ನಡವಳಿಕೆ ಕಡೆ ಗಮನಹಿಸಿ, ಇಲ್ಲದಿದ್ದರೆ ನೀವು ಅನಗತ್ಯ ತೊಂದರೆಗೆ ಸಿಲುಕಿ ನಿಮ್ಮ ಅಮೂಲ್ಯ ಸಮಯವನ್ನು ವ್ಯರ್ಥ ಮಾಡುತ್ತೀರಿ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 12
ಶುಭ ಸಮಯ: ಬೆಳಗ್ಗೆ 8 ರಿಂದ ಮಧ್ಯಾಹ್ನ 12:55

ವೃಷಭ ರಾಶಿ
ಆರೋಗ್ಯ ಸಂಬಂಧಿ ಸಮಸ್ಯೆಗಳಿರಬಹುದು. ಅಂತಹ ಪರಿಸ್ಥಿತಿಯಲ್ಲಿ, ಕಳಪೆ ಆರೋಗ್ಯವು ನಿಮ್ಮ ಕೆಲಸದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಇಂದು ನಿಮ್ಮ ಕೆಲವು ಪ್ರಮುಖ ಕೆಲಸಗಳು ಅಪೂರ್ಣವಾಗಿರುತ್ತವೆ. ಹಣಕಾಸಿನ ಚಿಂತೆ ಇರಲ್ಲ. ಇಂದು ಖರ್ಚು ಕಡಿಮೆ ಇರುತ್ತದೆ. ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯುತ್ತೀರಿ.
ಅದೃಷ್ಟದ ಬಣ್ಣ: ಕೇಸರಿ
ಅದೃಷ್ಟದ ಸಂಖ್ಯೆ: 20
ಶುಭ ಸಮಯ: ಬೆಳಿಗ್ಗೆ 9:20 ರಿಂದ ಮಧ್ಯಾಹ್ನ 3 ರವರೆಗೆ
ಮಿಥುನ ರಾಶಿ
ಕೆಲಸದ ದೃಷ್ಟಿಯಿಂದ ಇಂದು ಬಹಳ ಒಳ್ಳೆಯ ದಿನ. ಇಂದು ನಿಮ್ಮ ದೀರ್ಘಕಾಲದ ಆಸೆ ಈಡೇರುತ್ತದೆ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಉತ್ತಮ ಹೊಂದಾಣಿಕೆ ಇರುತ್ತದೆ. ನಿಮ್ಮ ನಡುವೆ ನಡೆಯುತ್ತಿರುವ ಉದ್ವಿಗ್ನತೆ ಕಡಿಮೆಯಾಗಲಿದೆ. ಆರೋಗ್ಯಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ನೀವು ಕಣ್ಣಿನ ಸಂಬಂಧಿತ ಸಮಸ್ಯೆಗಳನ್ನು ಹೊಂದಿರಬಹುದು.
ಅದೃಷ್ಟದ ಬಣ್ಣ: ಗಾಢ ಹಳದಿ
ಅದೃಷ್ಟದ ಸಂಖ್ಯೆ: 8
ಶುಭ ಸಮಯ: ಸಂಜೆ 5:15 ರಿಂದ 7:20 ರವರೆಗೆ
ಕರ್ಕ ರಾಶಿ
ಇಂದು ನಿಮ್ಮ ಜೀವನದಲ್ಲಿ ಧನಾತ್ಮಕ ಬದಲಾವಣೆಗಳು ಬರಬಹುದು. ಹಣದ ಕೊರತೆಯಿಂದ ನಿಮ್ಮ ಯಾವುದೇ ಕೆಲಸವು ಕೆಲವು ದಿನಗಳಿಂದ ಸ್ಥಗಿತಗೊಂಡಿದ್ದರೆ, ಅದು ಇಂದು ಪೂರ್ಣಗೊಳ್ಳುವ ಬಲವಾದ ಸಾಧ್ಯತೆಯಿದೆ. ಕುಟುಂಬ ಜೀವನದಲ್ಲಿ ಶಾಂತಿ, ಸಂತೋಷ ಇರುತ್ತದೆ. ಉದ್ಯೋಗ ಅಥವಾ ವ್ಯವಹಾರವಾಗಿರಲಿ, ನಿಮ್ಮ ಎಲ್ಲಾ ಕೆಲಸಗಳು ಯೋಜನೆಯ ಪ್ರಕಾರ ಪೂರ್ಣಗೊಳ್ಳುತ್ತವೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 28
ಶುಭ ಸಮಯ: ಮಧ್ಯಾಹ್ನ 12:30 ರಿಂದ ಸಂಜೆ 6:15 ರವರೆಗೆ
ಸಿಂಹ ರಾಶಿ
ಹಣಕಾಸಿನ ಸ್ಥಿತಿ ಚೆನ್ನಾಗಿರಲಿದೆ. ಇತರರ ಸಲಹೆಯ ಮೇರೆಗೆ ನಿಮ್ಮ ಹಣಕಾಸಿನ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ನೀವು ತಪ್ಪಿಸಬೇಕು. ಕೆಲಸದ ಸ್ಥಳದಲ್ಲಿ ನಿಮ್ಮ ಸಹೋದ್ಯೋಗಿಗಳ ಕೆಲಸದಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಬೇಡಿ, ಇಂದು ನಿಮ್ಮ ಸಂಗಾತಿಯ ಮನಸ್ಥಿತಿ ಉತ್ತಮವಾಗಿರುವುದಿಲ್ಲ. ವಿವಾದಾತ್ಮಕ ವಿಷಯಗಳನ್ನು ಚರ್ಚಿಸಲು ಹೋಗಬೇಡಿ.
ಅದೃಷ್ಟದ ಬಣ್ಣ: ಗಾಢ ಕೆಂಪು
ಅದೃಷ್ಟದ ಸಂಖ್ಯೆ: 28
ಶುಭ ಸಮಯ: ಬೆಳಿಗ್ಗೆ 10 ರಿಂದ ಮಧ್ಯಾಹ್ನ 3:30 ರವರೆಗೆ
ಕನ್ಯಾ ರಾಶಿ
ಇಂದು ನೀವು ಅನೇಕ ಚಿಂತೆ ನಿಮ್ಮನ್ನು ಕಾಡುವುದು. ಅನೇಕ ರೀತಿಯ ನಕಾರಾತ್ಮಕ ಆಲೋಚನೆಗಳು ಮನಸ್ಸಿನಲ್ಲಿ ಬರಬಹುದು. ಕೆಲಸದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸಬೇಡಿ. ನಿಮ್ಮ ಸಂಗಾತಿಯೊಂದಿಗೆ ಅನಗತ್ಯ ಜಗಳಗಳನ್ನು ತಪ್ಪಿಸಿ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 14
ಶುಭ ಸಮಯ: ಬೆಳಿಗ್ಗೆ 8:30 ರಿಂದ ಸಂಜೆ 6 ರವರೆಗೆ
ತುಲಾ ರಾಶಿ
ಪ್ರೀತಿಯ ವಿಷಯದಲ್ಲಿ ಇಂದು ಬಹಳ ರೋಮ್ಯಾಂಟಿಕ್ ದಿನವಾಗಲಿ. ಕೆಲಸದಲ್ಲಿ ಇಂದು ಉತ್ತಮ ದಿನ. ಹಣದ ವಿಷಯದಲ್ಲಿ ದಿನವು ಮಿಶ್ರಫಲ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ಆಹಾರಕ್ರಮದ ಕಡೆಗೆ ಗಮನಹರಿಸಿ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 34
ಶುಭ ಸಮಯ: ಬೆಳಿಗ್ಗೆ 10:50 ರಿಂದ ಮಧ್ಯಾಹ್ನ 2:25 ರವರೆಗೆ
ವೃಶ್ಚಿಕ ರಾಶಿ
ವ್ಯಾಪಾರಸ್ಥರು ಕಾನೂನು ತೊಂದರೆಗಳಲ್ಲಿ ಸಿಕ್ಕಿಹಾಕಿಕೊಳ್ಳಬಹುದು ಜಾಗ್ರತೆವಹಿಸಿ. ನಿಮ್ಮ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಇಂದು ನೀವು ಹಣಕ್ಕೆ ಸಂಬಂಧಿಸಿದ ಯಾವುದೇ ವ್ಯವಹಾರ ಮಾಡಬಹುದು. ಆರೋಗ್ಯದ ದೃಷ್ಟಿಯಿಂದ ದಿನವು ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 14
ಶುಭ ಸಮಯ: ಮಧ್ಯಾಹ್ನ 2:20 ರಿಂದ 4:30 ರವರೆಗೆ
ಧನು ರಾಶಿ
ಮನೆಯಲ್ಲಿ ವಯಸ್ಸಾದ ಸದಸ್ಯರು ಇದ್ದರೆ, ನೀವು ಅವರ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಇಂದು ನೀವು ಹಣದ ವಿಷಯದಲ್ಲಿ ಜಾಗರೂಕರಾಗಿರಬೇಕು. ಕಚೇರಿಯಲ್ಲಿ ನಿಮ್ಮ ಯಾವುದೇ ಕಷ್ಟಕರವಾದ ಕೆಲಸವನ್ನು ಸುಲಭವಾಗಿ ಪೂರ್ಣಗೊಳಿಸಿ, ಶೀಘ್ರದಲ್ಲಿಯೇ ನೀವು ಉತ್ತಮ ಪ್ರಯೋಜನ ಪಡೆಯುತ್ತೀರಿ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 9
ಶುಭ ಸಮಯ: ಬೆಳಿಗ್ಗೆ 8 ರಿಂದ 10:15 ರವರೆಗೆ
ಮಕರ ರಾಶಿ
ಕೆಲಸದ ದೃಷ್ಟಿಯಿಂದ ಇಂದು ಶುಭ ಸೂಚನೆಗಯಿದೆ. . ನಿಮಗೆ ಒಳ್ಳೆಯ ಅವಕಾಶ ಸಿಗಬಹುದು. ಸಂಗಾತಿಗೆ ಆರೋಗ್ಯ ಸಮಸ್ಯೆಯಿದ್ದರೆ ಉತ್ತಮ ವೈದ್ಯರಿಗೆ ತೋರಿಸಿ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ಆದಾಯಕ್ಕಿಂತ ಹೆಚ್ಚಿನ ಖರ್ಚು ಇರಬಹುದು.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 31
ಶುಭ ಸಮಯ: ಬೆಳಿಗ್ಗೆ 10:30 ರಿಂದ ಸಂಜೆ 4:50 ರವರೆಗೆ
ಕುಂಭ ರಾಶಿ
ಮನೆಯಲ್ಲಿ ಖುಷಿಯ ವಾತಾವರಣ ಇರುತ್ತದೆ. ಕೆಲಸದಲ್ಲಿ ನೀವು ವಿಭಿನ್ನ ಆನಂದವನ್ನು ಅನುಭವಿಸುವಿರಿ. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನಿಮ್ಮ ಆದಾಯವನ್ನು ಹೆಚ್ಚಿಸಲು ನೀವು ಪ್ರಯತ್ನಿಸುತ್ತಿದ್ದರೆ, ಇಂದು ನಿಮಗೆ ಪ್ರಮುಖ ದಿನವಾಗಿರುತ್ತದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 21
ಶುಭ ಸಮಯ: ಬೆಳಿಗ್ಗೆ 8:30 ರಿಂದ ಮಧ್ಯಾಹ್ನ 3 ರವರೆಗೆ
ಮೀನ ರಾಶಿ
ಆರೋಗ್ಯದಲ್ಲಿ ಏರುಪೇರು ಉಂಟಾದರೆ ನಿರ್ಲಕ್ಷ್ಯ ಮಾಡಬೇಡಿ. ನಿಮ್ಮ ಪೋಷಕರಿಂದ ನೀವು ಪ್ರೀತಿ ಮತ್ತು ಬೆಂಬಲವನ್ನು ಪಡೆಯುತ್ತೀರಿ. ಇಂದು ನೀವು ಅವರಿಂದ ಉತ್ತಮ ಉಡುಗೊರೆಯನ್ನು ಪಡೆಯಬಹುದು. ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನಗಳು ಯಶಸ್ವಿಯಾಗುತ್ತವೆ, ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 2
ಶುಭ ಸಮಯ: ಬೆಳಿಗ್ಗೆ 10 ರಿಂದ ಮಧ್ಯಾಹ್ನ 1:30 ರವರೆಗೆ



Click it and Unblock the Notifications