Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಅಕ್ಟೋಬರ್ 19 ದಿನ ಭವಿಷ್ಯ: ಈ ದಿನ ನಿಮ್ಮ ರಾಶಿಗೆ ಹೇಗಿರಲಿದೆ?
ವೈದಿಕ ಶಾಸ್ತ್ರದ ಪ್ರಕಾರ ಅಕ್ಟೋಬರ್ 19ರ ರಾಶಿಫಲ ನೀಡಿದ್ದು ಈ ದಿನ 12 ರಾಶಿಗಳಿಗೆ ಹೇಗಿರಲಿದೆ ಎಂದು ನೋಡೋಣ:
ಮೇಷ ರಾಶಿ
ನಿಮ್ಮ ಬಿಡುವಿನ ಸಮಯವನ್ನು ಸದುಪಯೋಗಪಡಿಸಿಕೊಳ್ಳಿ, ಅನುಪಯುಕ್ತ ವಿಷಯಗಳಿಗೆ ವ್ಯರ್ಥ ಮಾಡಬೇಡಿ. ನೀವು ಉದ್ಯಮಿಯಾಗಿದ್ದರೆ, ಹೊಸ ಯೋಜನೆಯಲ್ಲಿ ಕೆಲಸವನ್ನು ಪ್ರಾರಂಭಿಸಲಿದ್ದರೆ, ನಿಮ್ಮ ನಿರ್ಧಾರವನ್ನು ತೆಗೆದುಕೊಳ್ಳುವ ಮೊದಲು ನೀವು ಎಚ್ಚರಿಕೆಯಿಂದ ಯೋಚಿಸಿ ನಂತರ ನಿರ್ಧಾರ ತೆಗೆದುಕೊಳ್ಳಬೇಕು. ಅದೇ ಸಮಯದಲ್ಲಿ, ಉದ್ಯೋಗಿಗಳು ಕಚೇರಿಯಲ್ಲಿ ಪ್ರತಿಕೂಲ ಪರಿಸ್ಥಿತಿಗಳನ್ನು ಎದುರಿಸಬೇಕಾಗಬಹುದು. ನಿಮ್ಮ ಅಸಡ್ಡೆ ವರ್ತನೆ ಇಂದು ಉನ್ನತ ಅಧಿಕಾರಿಗಳ ಮುಂದೆ ನಿಮ್ಮ ಇಮೇಜ್ ಅನ್ನು ಹಾಳು ಮಾಡುತ್ತದೆ. ಹಣದ ವಿಚಾರದಲ್ಲಿ ಸ್ವಲ್ಪ ಜಾಗರೂಕರಾಗಿರಬೇಕು. ಅದರಲ್ಲೂ ಆತುರದಲ್ಲಿ ಹಣಕಾಸಿನ ವಹಿವಾಟು ಮಾಡಬೇಡಿ. ವಿದ್ಯಾರ್ಥಿಗಳು ಇಂದು ತಮ್ಮ ಶಿಕ್ಷಣ ಸಂಬಂಧಿತ ಪ್ರಯತ್ನಗಳಲ್ಲಿ ಯಶಸ್ಸನ್ನು ಪಡೆಯಲಿದೆಸ. ರೊಮ್ಯಾಂಟಿಕ್ ಜೀವನ ಉತ್ತಮವಾಗಿರುತ್ತದೆ. ಆರೋಗ್ಯದ ವಿಷಯದಲ್ಲಿ ಈ ದಿನ ಮಿಶ್ರಫಲ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 5
ಶುಭ ಸಮಯ: ಬೆಳಿಗ್ಗೆ 4 ರಿಂದ 8 ರವರೆಗೆ

ವೃಷಭ ರಾಶಿ
ನೀವು ಹಣಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಇಂದು ನಿಮ್ಮ ಸಮಸ್ಯೆಗೆ ಪರಿಹಾರ ಸಿಗಲಿದೆ. ನಿಮ್ಮ ಹಣಕಾಸಿನ ಪ್ರಯತ್ನಗಳು ಯಶಸ್ವಿಯಾಗುವ ಬಲವಾದ ಸಾಧ್ಯತೆಯಿದೆ. ಇಂದು ನೀವು ಕಚೇರಿಯಲ್ಲಿ ಕೆಲವು ಜವಾಬ್ದಾರಿಯುತ ಕೆಲಸವನ್ನು ನಿಯೋಜಿಸಬಹುದು. ಆವಾಗ ನೀವು ಅಜಾಗರೂಕರಾಗಿರಬಾರದು. ಉದ್ಯಮಿಗಳು ಹೊಸ ವ್ಯವಹಾರ ಪ್ರಸ್ತಾಪವನ್ನು ಪಡೆಯಬಹುದು. ಆದರೆ, ನೀವು ಗೊಂದಲದ ಮನಸ್ಥಿತಿಯಲ್ಲಿ ಇರುತ್ತೀರಿ. ಆವಾಗ ನೀವು ನಿಮ್ಮ ಆಪ್ತರ ಬಳಿಯಿಂದ ನೀವು ಸಲಹೆಯನ್ನು ಪಡೆಯಬಹುದು. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರಲಿದೆ. ನಿಮ್ಮ ಪ್ರೀತಿಪಾತ್ರರು ನಿಮ್ಮ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತಾರೆ. ಪ್ರೇಮ ಜೀವನದಲ್ಲಿ ಸ್ಥಿರತೆ ಇರಲಿದೆ. ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ತೊಡೆದುಹಾಕಲು, ನೀವು ಅನಗತ್ಯ ಚಿಂತೆಗಳಿಂದ ದೂರವಿರಬೇಕು.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 12
ಶುಭ ಸಮಯ: ಸಂಜೆ 5:30 ರಿಂದ ರಾತ್ರಿ 9:15 ರವರೆಗೆ
ಮಿಥುನ ರಾಶಿ
ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರಿಗೆ ಇಂದು ಸವಾಲಿನ ದಿನವಾಗಿದೆ. ನಿಮ್ಮ ಸಂಗಾತಿಯೊಂದಿಗಿನ ಹೊಂದಾಣಿಕೆ ಹದಗೆಡಬಹುದು. ವ್ಯಾಪಾರದಲ್ಲಿಯೂ ನಷ್ಟವಾಗುವ ಸಂಭವವಿದೆ. ಉದ್ಯೋಗಸ್ಥರ ಮನಸ್ಸಿನಲ್ಲೂ ಅತೃಪ್ತಿಯ ಭಾವನೆ ಇರಲಿದೆ. ನಿಮ್ಮ ನಿರ್ಧಾರಗಳನ್ನು ನೀವು ಬುದ್ಧಿವಂತಿಕೆಯಿಂದ ತೆಗೆದುಕೊಂಡರೆ ಉತ್ತಮ. ನಿಮ್ಮ ಬಿಡುವಿಲ್ಲದ ವೇಳಾಪಟ್ಟಿಯಿಂದಾಗಿ, ಇಂದು ನಿಮ್ಮ ಸಂಗಾತಿಗೆ ಸಾಕಷ್ಟು ಸಮಯವನ್ನು ನೀಡಲು ನಿಮಗೆ ಸಾಧ್ಯವಾಗುವುದಿಲ್ಲ. ಹಣದ ವಿಷಯದಲ್ಲಿ ದಿನವು ಸರಾಸರಿಯಾಗಲಿದೆ. ಆರೋಗ್ಯಕ್ಕೆ ಸಂಬಂಧಿಸಿದಂತೆ, ನೀವು ಸ್ನಾಯು ಸಂಬಂಧಿತ ಸಮಸ್ಯೆಗಳನ್ನು ಹೊಂದಿರಬಹುದು.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 7
ಶುಭ ಸಮಯ: ಬೆಳಿಗ್ಗೆ 11:10 ರಿಂದ ಸಂಜೆ 4:10 ರವರೆಗೆ
ಕರ್ಕ ರಾಶಿ
ಈ ದಿನ ನಿಮಗೆ ಶುಭವಾಗಿದೆ. ಬಹುಕಾಲದಿಂದ ಬಾಕಿ ಉಳಿದಿರುವ ಕೆಲಸಗಳು ಪೂರ್ಣಗೊಳ್ಳಲಿದೆ. ನೀವು ಹಣಕಾಸಿನ ಪ್ರಯೋಜನಗಳನ್ನು ಪಡೆಯುವ ಬಲವಾದ ಸಾಧ್ಯತೆ ಇದೆ. ಇಂದು ನಿಮ್ಮ ಹಾಗೂ ಸಂಗಾತಿಯ ನಡುವೆ ಹೊಂದಾಣಿಕೆ ಇರಲಿದೆ. ಉದ್ಯೋಗಸ್ಥರಿಗೆ ಕಚೇರಿಯಲ್ಲಿ ಒಳ್ಳೆಯ ಸುದ್ದಿ ಸಿಗಲಿದೆ. ನೀವು ಪ್ರಗತಿ ಹೊಂದಬಹುದು, ನಿಮ್ಮ ಆದಾಯವೂ ಹೆಚ್ಚಾಗುವ ಸಾಧ್ಯತೆಯಿದೆ. ವ್ಯಾಪಾರಸ್ಥರಿಗೆ ದೂರ ಪ್ರಯಾಣದ ಸಾಧ್ಯತೆಗಳಿವೆ. ನಿಮ್ಮ ಈ ಪ್ರಯಾಣವು ತುಂಬಾ ಪ್ರಯೋಜನಕಾರಿಯಾಗಲಿದೆ. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 20
ಶುಭ ಸಮಯ: ಮಧ್ಯಾಹ್ನ 3:30 ರಿಂದ ಸಂಜೆ 7 ರವರೆಗೆ
ಸಿಂಹ ರಾಶಿ
ಇಂದು ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳಿರಬಹುದು. ಅಂತಹ ಪರಿಸ್ಥಿತಿಯಲ್ಲಿ, ದಿನದ ನಿಮ್ಮ ಯೋಜನೆಗಳು ಅಡ್ಡಿಪಡಿಸುತ್ತವೆ. ಹಣದ ವಿಷಯದಲ್ಲಿ ಇಂದು ದುಬಾರಿ ದಿನವಾಗಲಿದೆ. ನಿಮ್ಮ ಬಜೆಟ್ ಅಸಮತೋಲಿತವಾಗಿರಬಹುದು. ಕಚೇರಿಯಲ್ಲಿನ ಮೇಲಾಧಿಕಾರಿಗಳಿಂದ ನಿಮಗೆ ಸಂಪೂರ್ಣ ಬೆಂಬಲ ಸಿಗಲಿದೆ. ಇಂದು ಕೆಲಸದ ಹೊರೆಯೂ ಹಗುರವಾಗಲಿದೆ. ವ್ಯಾಪಾರಸ್ಥರು ಯಾವುದೇ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಇಂದು ಅದಕ್ಕೆ ಒಳ್ಳೆಯ ದಿನವಾಗಲಿದೆ. ಇಂದು ನೀವು ಕೆಲವು ಹೊಸ ಜನರೊಂದಿಗೆ ಸಂಪರ್ಕ ಸಾಧಿಸುವ ಅವಕಾಶವನ್ನು ಪಡೆಯುತ್ತೀರಿ. ಕುಟುಂಬ ಸದಸ್ಯರೊಂದಿಗೆ ನಿಮ್ಮ ನಡವಳಿಕೆಯನ್ನು ಸೌಜನ್ಯದಿಂದ ಇಟ್ಟುಕೊಳ್ಳಿ. ಸಣ್ಣ ವಿಷಯಗಳಿಗೆ ಕೋಪಗೊಳ್ಳಬೇಡಿ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 18
ಶುಭ ಸಮಯ: ಸಂಜೆ 5:20 ರಿಂದ 8:25 ರವರೆಗೆ
ಕನ್ಯಾ ರಾಶಿ
ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯಗಳಿರಬಹುದು. ನಿಮ್ಮ ಅನುಚಿತ ವರ್ತನೆಯು ನಿಮ್ಮ ಸಂಗಾತಿಯ ಭಾವನೆಗಳನ್ನು ಘಾಸಿಗೊಳಿಸಬಹುದು. ನಿಮ್ಮ ಸಂಬಂಧದಲ್ಲಿ ಅನುಮಾನ ಒಳ್ಳೆಯದಲ್ಲ. ಪ್ರೀತಿಯ ವಿಷಯದಲ್ಲಿ ಇಂದು ವಿಶೇಷವಾದದ್ದೇನೂ ಇರುವುದಿಲ್ಲ. ಕೆಲಸದ ಸ್ಥಳದಲ್ಲಿ ನಿಮ್ಮ ಸ್ಥಾನವು ಬಲಗೊಳ್ಳುತ್ತದೆ. ಇಂದು ನೀವು ಯಾವುದೇ ಕಷ್ಟಕರವಾದ ಕೆಲಸವನ್ನು ಬಹಳ ಸುಲಭವಾಗಿ ಪೂರ್ಣಗೊಳಿಸಲು ಸಾಧ್ಯವಾಗುವುದು. ದೊಡ್ಡ ಲಾಭವನ್ನು ಗಳಿಸಲು ವ್ಯಾಪಾರಿಗಳು ಅಡ್ಡದಾರಿ ಹಿಡಿಯಬೇಡಿ. ಇಂದು ನಿಮ್ಮ ಆರ್ಥಿಕ ಪರಿಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ನೀವು ಆರೋಗ್ಯಕ್ಕಾಗಿ ಕೆಟ್ಟ ಚಟುವಟಿಕೆಗಳಿಂದ ದೂರವಿರಿ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 15
ಶುಭ ಸಮಯ: ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ರವರೆಗೆ
ತುಲಾ ರಾಶಿ
ಕಚೇರಿಯಲ್ಲಿನ ಉನ್ನತ ಅಧಿಕಾರಿಗಳು ನಿಮ್ಮ ಕೆಲಸದಲ್ಲಿ ತಪ್ಪು ಕಂಡು ಹಿಡಿಯಲು ಅವಕಾಶ ಕೊಡಬೇಡಿ. ಮಾಡಿದ ತಪ್ಪು ಮತ್ತೆ ಮಾಡಲೇಬೇಡಿ. ಉದ್ಯಮಿಗಳಿಗೆ ಇಂದು ಮಿಶ್ರಫಲಿತಾಂಶ. ಸಂಗಾತಿಯೊಂದಿಗೆ ಈ ದಿನ ಖುಷಿಯಾಗಿ ಸಮಯ ಕಳೆಯುತ್ತೀರಿ. ನೀವು ಪರಸ್ಪರ ಸಮಯ ಕೊಡಿ. ಹಣಕಾಸಿನ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಿ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 14
ಶುಭ ಸಮಯ: ಮಧ್ಯಾಹ್ನ 1 ರಿಂದ ಸಂಜೆ 5 ರವರೆಗೆ
ವೃಶ್ಚಿಕ ರಾಶಿ
ಹವಾಮಾನ ಬದಲಾವಣೆಯಿಂದಾಗಿ ಶೀತ, ಕೆಮ್ಮು, ಜ್ವರ ಮುಂತಾದ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಆರೋಗ್ಯದ ಕಡೆ ಗಮನ ಹರಿಸಿ. ನೀವು ಕೆಲಸದ ಬಗ್ಗೆ ಅನಗ್ಯತ ಚಿಂತೆ ಮಾಡಬೇಡಿ. ಸೂಕ್ತ ಸಮಯ ಬಂದಾಗ ನಿಮ್ಮ ಸಮಸ್ಯೆ ಬಗೆಹರಿಯಲಿದೆ. ಮೆಡಿಸಿನ್, ಇಂಜಿನಿಯರಿಂಗ್, ಕಾನೂನು ಇತ್ಯಾದಿಗಳನ್ನು ಓದುತ್ತಿರುವವರಿಗೆ ಈ ದಿನ ಮುಖ್ಯವಾಗಿದೆ. ಈ ದಿನ ನೀವು ಉತ್ತಮ ಅವಕಾಶವನ್ನು ಪಡೆಯಬಹುದು. ಇಂದು ಕೆಲಸದಲ್ಲಿ ತುಂಬಾ ಕಾರ್ಯನಿರತವಾಗಿರುತ್ತೀರಿ. ಹಣದ ವಿಷಯದಲ್ಲಿ ಈ ದಿನವು ಉತ್ತಮವಾಗಿರುತ್ತದೆ. ನಿಮ್ಮ ಆದಾಯವನ್ನು ಗಮನದಲ್ಲಿಟ್ಟುಕೊಂಡು ಖರ್ಚು ಮಾಡಿದರೆ ದೊಡ್ಡ ಸಮಸ್ಯೆ ಇರುವುದಿಲ್ಲ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 30
ಶುಭ ಸಮಯ: ಬೆಳಗ್ಗೆ 5:15 ರಿಂದ 8:50 ರವರೆಗೆ
ಧನು ರಾಶಿ
ಇಂದು ನಿಮ್ಮ ವೈವಾಹಿಕ ಜೀವನ ತುಂಬಾ ಚೆನ್ನಾಗಿರಲಿದೆ. ನಿಮ್ಮ ಸಂಗಾತಿಯ ಪ್ರೀತಿ ಮತ್ತು ಬೆಂಬಲ ಸಿಗಲಿದೆ. ನೀವು ವಿದ್ಯಾರ್ಥಿಯಾಗಿದ್ದರೆ ಮತ್ತು ಇತ್ತೀಚೆಗೆ ಯಾವುದೇ ಪರೀಕ್ಷೆಯನ್ನು ನೀಡಿದ್ದರೆ, ನಿಮ್ಮ ನಿರೀಕ್ಷೆಗಳಿಗೆ ಅನುಗುಣವಾಗಿ ಫಲಿತಾಂಶಗಳನ್ನು ಪಡೆಯುವ ಬಲವಾದ ಸಾಧ್ಯತೆಯಿದೆ. ನೀವು ಕೆಲಸಕ್ಕೆ ಸಂಬಂಧಿಸಿದ ಯಾವುದೇ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ, ನೀವು ಯಾವುದೇ ಅಪಾಯವನ್ನು ತೆಗೆದುಕೊಳ್ಳಬೇಡಿ, ಇಲ್ಲದಿದ್ದರೆ ನೀವು ಲಾಭದ ಬದಲು ನಷ್ಟವನ್ನು ಅನುಭವಿಸಬಹುದು. ಆರೋಗ್ಯದ ದೃಷ್ಟಿಯಿಂದ ಇಂದು ಉತ್ತಮ ದಿನವಾಗಿರುತ್ತದೆ. ನಿಮ್ಮನ್ನು ಫಿಟ್ ಆಗಿ ಮತ್ತು ಸಕ್ರಿಯವಾಗಿರಿಸಿಕೊಳ್ಳಲು ವ್ಯಾಯಾಮದ ಕಡೆ ಗಮನ ಹರಿಸಿ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 11
ಶುಭ ಸಮಯ: ಮಧ್ಯಾಹ್ನ 3 ರಿಂದ ರಾತ್ರಿ 8 ರವರೆಗೆ
ಮಕರ ರಾಶಿ
ನೀವು ದುಃಖ ಮತ್ತು ಖಿನ್ನತೆಗೆ ಒಳಗಾಗಬೇಡಿ, ಧನಾತ್ಮಕವಾಗಿರಿ. ಶೀಘ್ರದಲ್ಲೇ ಎಲ್ಲವೂ ಸರಿಯಾಗಲಿದೆ. ಹಣದ ವಿಷಯದಲ್ಲಿ ಇಂದು ನಿಮಗೆ ಉತ್ತಮ ದಿನವಾಗಿರುತ್ತದೆ. ಇಂದು ನೀವು ಹೆಚ್ಚು ಉಳಿಸಲು ಸಾಧ್ಯವಾಗುವುದು, ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಕೆಲಸದ ದೃಷ್ಟಿಯಿಂದ ಇಂದು ನಿಮಗೆ ಮಿಶ್ರ ಫಲಿತಾಂಶ. ಕಛೇರಿಯಲ್ಲಿ ಯಾವುದೇ ಪ್ರಮುಖ ಕೆಲಸವನ್ನು ಮಾಡುವಾಗ ನೀವು ಅತ್ಯಂತ ಜಾಗರೂಕರಾಗಿರಲು ಸಲಹೆ ನೀಡಲಾಗುವುದು. ಇಂದು ನೀವು ಯಾವುದೇ ತಪ್ಪು ಮಾಡಿದರೆ, ನಿಮಗೆ ನೀಡಿದ ಜವಾಬ್ದಾರಿಯನ್ನು ನಿಮ್ಮಿಂದ ಹಿಂಪಡೆಯಬಹುದು. ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳನ್ನೂ ನಿರ್ಲಕ್ಷ್ಯಪಡಬೇಡಿ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 4
ಶುಭ ಸಮಯ: ಸಂಜೆ 6 ರಿಂದ ರಾತ್ರಿ 9 ರವರೆಗೆ
ಕುಂಭ ರಾಶಿ
ನೀವು ಮನೆಯಲ್ಲಿ ಹಿರಿಯರೊಂದಿಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳನ್ನು ಹೊಂದಿದ್ದರೆ ಕೋಪದ ಬದಲಿಗೆ ತಾಳ್ಮೆಯಿಂದ ಬಗೆಹರಿಸಲು ಪ್ರಯತ್ನಿಸಿ. ಆರ್ಥಿಕ ಸ್ಥಿತಿ ಬಲವಾಗಿ ಉಳಿಯುವುದರಿಂದ ಹಣದ ಚಿಂತೆಯಿಲ್ಲ, ನಿಮ್ಮ ಉಳಿತಾಯ ಹೆಚ್ಚಾಗುತ್ತದೆ. ಕೆಲಸದ ಸ್ಥಳದಲ್ಲಿ ನೀವು ಉನ್ನತ ಅಧಿಕಾರಿಗಳೊಂದಿಗೆ ಪ್ರಮುಖ ಚರ್ಚೆಯನ್ನು ನಡೆಸಬಹುದು. ನಿಮ್ಮ ಆತ್ಮವಿಶ್ವಾಸ ಇಂದು ಎಲ್ಲರನ್ನೂ ಮೆಚ್ಚಿಸುತ್ತದೆ. ಉದ್ಯಮಿಗಳು ಲಾಭ ಗಳಿಸಲು ಉತ್ತಮ ಅವಕಾಶವನ್ನು ಪಡೆಯಬಹುದು. ನಿಮ್ಮ ಹಣಕಾಸಿನ ಸಮಸ್ಯೆ ಬಗೆಹರಿಯಲಿದೆ. ಇಂದು ನೀವು ತುಂಬಾ ಧನಾತ್ಮಕವಾಗಿರುತ್ತದೆ.
ಅದೃಷ್ಟದ ಬಣ್ಣ: ಬೂದು
ಅದೃಷ್ಟದ ಸಂಖ್ಯೆ: 37
ಶುಭ ಸಮಯ: ಬೆಳಿಗ್ಗೆ 6:30 ರಿಂದ 8:35 ರವರೆಗೆ
ಮೀನ ರಾಶಿ
ಈ ರಾಶಿಯ ಉದ್ಯಮಿಗಳಿಗೆ ಇಂದು ಒಳ್ಳೆಯ ದಿನವಾಗಿರುತ್ತದೆ. ನೀವು ಕೆಲವು ದೊಡ್ಡ ಯಶಸ್ಸನ್ನು ಪಡೆಯಬಹುದು. ಉದ್ಯೋಗಿಗಳ ಆದಾಯದಲ್ಲಿ ಹೆಚ್ಚಳವಾಗುವ ಬಲವಾದ ಸಾಧ್ಯತೆಯಿದೆ. ಇದೆಲ್ಲವೂ ನಿಮ್ಮ ಶ್ರಮದ ಫಲ. ಕುಟುಂಬ ಜೀವನದಲ್ಲಿ ಶಾಂತಿ ಮತ್ತು ಸಂತೋಷ ಇರುತ್ತದೆ. ಮಕ್ಕಳೊಂದಿಗೆ ಬಹಳ ಮೋಜಿನ ಸಮಯವನ್ನು ಕಳೆಯುವಿರಿ. ತಂದೆ ನೀಡುವ ಸಲಹೆ ನಿರ್ಲಕ್ಷ್ಯ ಮಾಡಬೇಡಿ. ಹಣಕಾಸಿನ ಸ್ಥಿತಿ ಉತ್ತಮವಾಗಿರಲಿದೆ. ಇಂದು ನೀವು ನಿಮ್ಮ ಪ್ರೀತಿಪಾತ್ರರಿಗೆ ಸಾಕಷ್ಟು ಶಾಪಿಂಗ್ ಮಾಡಬಹುದು. ನಿಮ್ಮ ಸಂಗಾತಿಯ ಆರೋಗ್ಯ ಸ್ವಲ್ಪ ದುರ್ಬಲವಾಗಿರುತ್ತದೆ. ಅವರ ಆರೋಗ್ಯದ ಕಡೆ ಗಮನಹರಿಸಿ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 4
ಶುಭ ಸಮಯ: ಮಧ್ಯಾಹ್ನ 1:30 ರಿಂದ 4 ರವರೆಗೆ



Click it and Unblock the Notifications