Latest Updates
-
ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ಈ ಟಿಪ್ಸ್ ಪಾಲಿಸಿ! -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ಆಹಾರಗಳೇ ನಿಮ್ಮ ರಕ್ಷಕ -
ಅಕ್ಷಯ ತೃತೀಯ 2026: ಈ ಹೊಸ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ -
ಮದುವೆಗೂ ಮುನ್ನ ಈ 48 ಗಂಟೆಗಳ ಚೆಕ್ಲಿಸ್ಟ್ ಮರೆಯದಿರಿ
ಅಕ್ಟೋಬರ್ 9ರ ದಿನ ಭವಿಷ್ಯ: ದ್ವಾದಶ ರಾಶಿಗಳಲ್ಲಿ ಈ ದಿನ ಹೇಗಿರಲಿದೆ?
ವೈದಿಕ ಶಾಸ್ತ್ರದ ಪ್ರಕಾರ ಅಕ್ಟೋಬರ್ 9ರ ರಾಶಿಫಲ ನೀಡಿದ್ದು ಈ ದಿನ 12 ರಾಶಿಗಳಿಗೆ ಹೇಗಿರಲಿದೆ ಎಂದು ನೋಡೋಣ:
ಮೇಷ ರಾಶಿ
ಕೆಲವು ಕಾರಣಗಳಿಂದ ನಿಮ್ಮ ಮನಸ್ಸು ಚಂಚಲವಾಗಿದ್ದರೆ, ನಿಮ್ಮ ಮನಸ್ಸನ್ನು ಆಪ್ತರ ಬಳಿ ಹಂಚಿಕೊಳ್ಳಿ. ನಕಾರಾತ್ಮಕ ಆಲೋಚನೆಗಳಿಂದ ದೂರವಿರಲು ನಿಮಗೆ ಸಲಹೆ ನೀಡಲಾಗುವುದ. ವ್ಯಾಪಾರಿಗಳು ದೊಡ್ಡ ಹೂಡಿಕೆ ಮಾಡುವುದನ್ನು ತಪ್ಪಿಸಬೇಕು. ಆರೋಗ್ಯದಲ್ಲಿ ಏರುಪೇರು ಉಂಟಾಗುವುದು, ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 19
ಶುಭ ಸಮಯ: ಮಧ್ಯಾಹ್ನ 1 ರಿಂದ ಸಂಜೆ 4 ರವರೆಗೆ

ವೃಷಭ ರಾಶಿ
ಕುಟುಂಬ ಜೀವನದಲ್ಲಿ ಶಾಂತಿ, ಸಂತೋಷ ಇರುತ್ತದೆ. ಮನೆಯಲ್ಲಿ ಹರ್ಷದ ವಾತಾವರಣ ಇರುತ್ತದೆ. ಈ ಅವಧಿಯಲ್ಲಿ ನಿಮ್ಮ ಸಂಬಂಧಗಳು ಗಟ್ಟಿಯಾಗಿರುತ್ತದೆ. ಹಣದ ವಿಷಯದಲ್ಲಿಅದೃಷ್ಟದ ಸಮಯ. ಕಡಿಮೆ ಶ್ರಮದಿಂದ ಉತ್ತಮ ಹಣ ಗಳಿಸಬಹುದು. ಕೆಲಸದಲ್ಲಿ ಇಂದು ನಿಮಗೆ ಬಿಡುವಿಲ್ಲದ ದಿನವಾಗಿರುತ್ತದೆ.
ಅದೃಷ್ಟದ ಬಣ್ಣ: ಗಾಢ ಹಳದಿ
ಅದೃಷ್ಟದ ಸಂಖ್ಯೆ: 29
ಶುಭ ಸಮಯ: ಬೆಳಿಗ್ಗೆ 5:20 ರಿಂದ 8 ರವರೆಗೆ
ಮಿಥುನ ರಾಶಿ
ಇತರರ ಸಲಹೆಯ ಮೇರೆಗೆ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಿ. ಕಚೇರಿಯಲ್ಲಿ ನಿಮ್ಮ ಕೆಲವು ಕೆಲಸಗಳಲ್ಲಿ ಅಡೆತಡೆಗಳು ಇರಬಹುದು. ಆದರೆ, ನಿಮ್ಮ ಈ ಸಮಸ್ಯೆ ತಾತ್ಕಾಲಿಕ. ಹಣಕಾಸಿನ ಪರಿಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ನಿಮ್ಮ ಆದಾಯವನ್ನು ಹೆಚ್ಚಿಸಲು ನಿಮ್ಮ ಪ್ರಯತ್ನಗಳನ್ನು ನೀವು ಚುರುಕುಗೊಳಿಸಬೇಕು.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 22
ಶುಭ ಸಮಯ: ಸಂಜೆ 6 ರಿಂದ ರಾತ್ರಿ 9 ರವರೆಗೆ
ಕರ್ಕ ರಾಶಿ
ಇಂದು ನೀವು ಆರಾಧನೆಯಲ್ಲಿ ತುಂಬಾ ಆಸಕ್ತಿ ಹೊಂದಿರುತ್ತೀರಿ. ಹಣಕಾಸಿನ ಸ್ಥಿತಿ ಬಲವಾಗಿ ಇರಲಿದೆ. ಆದಾಯ ಹೆಚ್ಚಾಗಬಹುದು. ಸಂಗಾತಿಯ ಮೇಲೆ ಅನುಮಾನ ಪಡುವ ತಪ್ಪು ಮಾಡದಿರಿ. ಕೆಲಸದ ವಿಷಯದಲ್ಲಿ ದಿನವು ಸರಾಸರಿಯಾಗಿರುತ್ತದೆ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 9
ಶುಭ ಸಮಯ: ಬೆಳಿಗ್ಗೆ 7:30 ರಿಂದ 9:55 ರವರೆಗೆ
ಸಿಂಹ ರಾಶಿ
ಈ ರಾಶಿಯ ವಿದ್ಯಾರ್ಥಿಗಳಿಗೆ ಇಂದು ಬಹಳ ಒಳ್ಳೆಯ ದಿನ. ನೀವು ಇತ್ತೀಚೆಗೆ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಿದ್ದರೆ, ನೀವು ಅದ್ಭುತ ಯಶಸ್ಸನ್ನು ಪಡೆಯಬಹುದು. ಮನೆಯಲ್ಲಿ ವಾತಾವರಣ ಸುಧಾರಿಸಲಿದೆ. ನಿಮ್ಮ ಪ್ರೀತಿಪಾತ್ರರೊಂದಿಗಿನ ನಿಮ್ಮ ಸಂಬಂಧವು ಸುಧಾರಿಸುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಬಜೆಟ್‌ಗೆ ಅನುಗುಣವಾಗಿ ಮಾತ್ರ ನೀವು ಖರ್ಚುಮಾಡಿ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 11
ಶುಭ ಸಮಯ: ಸಂಜೆ 5:20 ರಿಂದ 8 ರವರೆಗೆ
ಕನ್ಯಾ ರಾಶಿ
ವಿವಾಹಿತರಿಗೆ ಇಂದು ನಿಮಗೆ ತುಂಬಾ ರೋಮ್ಯಾಂಟಿಕ್ ದಿನವಾಗಲಿದೆ. ಹಣಕಾಸಿನ ಸ್ಥಿತಿ ಬಲವಾಗಿ ಉಳಿಯುತ್ತದೆ. ಕೆಲಸದ ಸ್ಥಳದಲ್ಲಿ ನೀವು ಉನ್ನತ ಅಧಿಕಾರಿಗಳಿಂದ ಬೆಂಬಲವನ್ನು ಪಡೆಯುತ್ತೀರಿ. ಇಂದು ಕಷ್ಟಕರವಾದ ಕೆಲಸಗಳನ್ನು ಕೂಡ ಸುಲಭವಾಗಿ ಪೂರ್ಣಗೊಳಿಸಲು ಸಾಧ್ಯವಾಗುವುದು.
ಅದೃಷ್ಟದ ಬಣ್ಣ: ಬೂದು
ಅದೃಷ್ಟದ ಸಂಖ್ಯೆ: 7
ಶುಭ ಸಮಯ: ಬೆಳಿಗ್ಗೆ 6 ರಿಂದ 8:15 ರವರೆಗೆ
ತುಲಾ ರಾಶಿ
ಮನೆಯಲ್ಲಿ ಇಂದು ಉತ್ತಮ ವಾತಾವರಣ ಇರಲಿದೆ. ಮನೆಯಲ್ಲಿ ಯಾರಾದರೂ ಇತ್ತೀಚೆಗೆ ಮದುವೆಯಾಗಿದ್ದರೆ, ಇಂದು ನೀವು ಅವರಿಂದ ಒಳ್ಳೆಯ ಸುದ್ದಿಯನ್ನು ಪಡೆಯುತ್ತೀರಿ. ಆರ್ಥಿಕ ಬಿಕ್ಕಟ್ಟನ್ನು ತಪ್ಪಿಸಲು, ನೀವು ಉಳಿತಾಯದ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಕಚೇರಿಯಲ್ಲಿ, ನಿಮ್ಮ ಕೆಲಸದ ಮೇಲೆ ಸಂಪೂರ್ಣವಾಗಿ ಗಮನಹರಿಸಿ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 2
ಶುಭ ಸಮಯ: ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ
ವೃಶ್ಚಿಕ ರಾಶಿ
ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರಿಗೆ ಇಂದು ಬಹಳ ಲಾಭದಾಯಕ ದಿನವಾಗಿದೆ. ನೀವು ಉತ್ತಮ ಆರ್ಥಿಕ ಲಾಭವನ್ನು ಪಡೆಯುತ್ತೀರಿ. ಸಂಗಾತಿಯೊಂದಿಗಿನ ಸಂಬಂಧವು ಸುಧಾರಿಸುತ್ತದೆ. ಆರೋಗ್ಯ ಹದಗೆಡಬಹುದು. ಇದೆಲ್ಲವೂ ನಿಮ್ಮ ನಿರ್ಲಕ್ಷ್ಯದ ಫಲ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 10
ಶುಭ ಸಮಯ: ಬೆಳಿಗ್ಗೆ 6:20 ರಿಂದ 10:10 ರವರೆಗೆ
ಧನು ರಾಶಿ
ಇಂದು ನೀವು ತುಂಬಾ ಧನಾತ್ಮಕ ಮತ್ತು ಶಕ್ತಿಯುತವಾಗಿರುತ್ತೀರಿ. ನಿಮ್ಮ ದಕ್ಷತೆ ಹೆಚ್ಚಾಗುತ್ತದೆ. ಕಚೇರಿಯಲ್ಲಿ, ನಿಮ್ಮ ಕೆಲಸವನ್ನು ಸಮಯಕ್ಕೆ ಮುಂಚಿತವಾಗಿ ಪೂರ್ಣಗೊಳಿಸುವಲ್ಲಿ ನೀವು ಯಶಸ್ವಿಯಾಗುತ್ತೀರಿ. ವ್ಯಾಪಾರಸ್ಥರಿಗೆ ಇಂದು ಉತ್ತಮ ದಿನ. ನೀವು ಬಯಸಿದ ಫಲಿತಾಂಶವನ್ನು ಪಡೆಯುತ್ತೀರಿ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರುತ್ತದೆ. ಇಂದು ನಿಮ್ಮ ಪ್ರೀತಿಪಾತ್ರರು ತುಂಬಾ ರೋಮ್ಯಾಂಟಿಕ್ ಮೂಡ್‌ನಲ್ಲಿರುತ್ತಾರೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 9
ಶುಭ ಸಮಯ: ಮಧ್ಯಾಹ್ನ 3 ರಿಂದ ರಾತ್ರಿ 8 ರವರೆಗೆ
ಮಕರ ರಾಶಿ
ನಿಮ್ಮ ಸಂಪೂರ್ಣ ಗಮನವು ನಿಮ್ಮ ಗುರಿಯ ಮೇಲೆ ಇದ್ದರೆ ಒಳ್ಳೆಯದು. ಯಾವುದೇ ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನದಲ್ಲಿ ನೀವು ಯಶಸ್ಸನ್ನು ಪಡೆಯುವ ಬಲವಾದ ಸಾಧ್ಯತೆಯಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 4
ಶುಭ ಸಮಯ: ಸಂಜೆ 5:35 ರಿಂದ 8 ರವರೆಗೆ
ಕುಂಭ ರಾಶಿ
ವ್ಯಾಪಾರಸ್ಥರು ಆರ್ಥಿಕವಾಗಿ ಲಾಭ ಪಡೆಯಬಹುದು. ಉದ್ಯೋಗಿಗಳು ಬಯಸಿದ ವರ್ಗಾವಣೆಯನ್ನು ಪಡೆಯಬಹುದು, ನಿಮ್ಮ ಸಂಗಾತಿಯೊಂದಿಗೆ ನೀವು ವಾದವನ್ನು ಹೊಂದಿರಬಹುದು. ಆದರೆ ಶೀಘ್ರದಲ್ಲೇ ಎಲ್ಲವೂ ನಿಮ್ಮ ನಡುವೆ ಸಾಮಾನ್ಯವಾಗುತ್ತದೆ. ದಿನದ ಎರಡನೇ ಭಾಗದಲ್ಲಿ ನೀವು ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 11
ಶುಭ ಸಮಯ: ಸಂಜೆ 5:25 ರಿಂದ ರಾತ್ರಿ 9:05 ರವರೆಗೆ
ಮೀನ ರಾಶಿ
ನ್ಯಾಯಾಲಯಕ್ಕೆ ಸಂಬಂಧಿಸಿದ ಯಾವುದೇ ವಿಷಯದಲ್ಲಿ ನೀವು ಯಶಸ್ಸನ್ನು ಪಡೆಯುವ ಬಲವಾದ ಸಾಧ್ಯತೆಯಿದೆ. ಇಂದು ನಿಮ್ಮ ದೊಡ್ಡ ಚಿಂತೆ ಪರಿಹಾರವಾಗುತ್ತದೆ. ಇಂದು ಪೋಷಕರ ಮಾರ್ಗದರ್ಶನವನ್ನೂ ಪಡೆಯುತ್ತೀರಿ. ಕೆಲಸಕ್ಕೆ ಸಂಬಂಧಿಸಿದ ಉತ್ತಮ ಸಲಹೆಗಳನ್ನು ನೀವು ಪಡೆಯುತ್ತೀರಿ. ಆರೋಗ್ಯದ ಬಗ್ಗೆ ಗಮನಹರಿಸಿ.
ಅದೃಷ್ಟದ ಬಣ್ಣ: ಬೆಳ್ಳಿ
ಅದೃಷ್ಟದ ಸಂಖ್ಯೆ: 4
ಶುಭ ಸಮಯ: ಮಧ್ಯಾಹ್ನ 2 ರಿಂದ ಸಂಜೆ 7 ರವರೆಗೆ



Click it and Unblock the Notifications











