Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಸೆಪ್ಟೆಂಬರ್ 18 ದಿನ ಭವಿಷ್ಯ: ಸೋಮವಾರ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ವೈದಿಕ ಶಾಸ್ತ್ರದ ಪ್ರಕಾರ ಸೆಪ್ಟೆಂಬರ್ 18ರ ರಾಶಿಫಲ ನೀಡಿದ್ದು ಈ ದಿನ 12 ರಾಶಿಗಳಿಗೆ ಹೇಗಿರಲಿದೆ ಎಂದು ನೋಡೋಣ:
ದಿನಾಂಕ: ಸೆಪ್ಟೆಂಬರ್ 18
ತಿಥಿ: ತೃತೀಯಾ
ನಕ್ಷತ್ರ: ಮಧ್ಯಾಹ್ನ 12:08ರವರೆಗೆ ಚಿತ್ರ ನಂತರ ಸ್ವಾತಿ
ಪಕ್ಷ: ಶುಕ್ಲಪಕ್ಷ
ರಾಹುಕಾಲ: ಬೆಳಗ್ಗೆ 07:41ರಿಂದ 09:12ರವರೆಗೆ

ಮೇಷ ರಾಶಿ
ಈ ದಿನ ಮನೆಯ ವಾತಾವರಣ ಚೆನ್ನಾಗಿರಲಿದೆ. ಇಂದು ಪ್ರಮುಖ ಕೆಲಸವನ್ನು ಪೂರ್ಣಗೊಳಿಸಲು ನೀವು ಗಮನಹರಿಸಬೇಕು . ಅಜಾಗರೂಕತೆಯು ನಿಮಗೆ ಹಾನಿಕಾರಕವಾಗಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಎಣ್ಣೆಯುಕ್ತ ಆಹಾರ ಸೇವಿಸಿ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 6
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ 4:20 ರವರೆಗೆ
ವೃಷಭ ರಾಶಿ
ಕೆಲಸದ ವಿಷಯದಲ್ಲಿ ಇಂದು ಉತ್ತಮವಾಗಿದೆ. ನೀವು ವ್ಯಾಪಾರಸ್ಥರಾಗಿದ್ದರೆ, ಯಾವುದೇ ಕೆಲಸವು ಹಣದ ಕೊರತೆಯಿಂದ ಸ್ಥಗಿತಗೊಂಡಿದ್ದರೆ, ಇಂದು ನೀವು ನಿಮ್ಮ ತಂದೆಯಿಂದ ಆರ್ಥಿಕ ಸಹಾಯ ಸಿಗಲಿದೆ. ಉದ್ಯೋಗಸ್ಥರಿಗೆ ಕಚೇರಿಯಲ್ಲಿ ಉತ್ತಮ ಅವಕಾಶಗಳು ಸಿಗಲಿವೆ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಉತ್ತಮ ಹೊಂದಾಣಿಕೆ ಇರಲಿದೆ. ಇಂದು ನೀವು ಕುಟುಂಬಕ್ಕೆ ಸಂಬಂಧಿಸಿದಂತೆ ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 14
ಅದೃಷ್ಟದ ಸಮಯ: ಬೆಳಗ್ಗೆ 8 ರಿಂದ ಮಧ್ಯಾಹ್ನ 12
ಮಿಥುನ ರಾಶಿ
ಆರೋಗ್ಯದ ಬಗ್ಗೆ ಜಾಗ್ರತೆವಹಿಸಬೇಕು. ಆರೋಗ್ಯ ಸಮಸ್ಯೆಯಿದ್ದರೆ ಉತ್ತಮ ವೈದ್ಯರನ್ನು ಸಂಪರ್ಕಿಸಬೇಕು. ಆರ್ಥಿಕ ಪರಿಸ್ಥಿತಿಯಲ್ಲಿ ಕುಸಿತ ಉಂಟಾಗಬಹುದು. ಇಂದು ಖರ್ಚು ಇರಲಿದೆ. ಕಛೇರಿಯಲ್ಲಿನ ಉನ್ನತ ಅಧಿಕಾರಿಗಳ ವರ್ತನೆಯು ನಿಮ್ಮನ್ನು ತುಂಬಾ ಕಾಡಬಹುದು. ಅಂತಹ ಪರಿಸ್ಥಿತಿಯಲ್ಲಿ, ನೀವು ಬುದ್ಧಿವಂತಿಕೆಯಿಂದ ವರ್ತಿಸಲು ಸಲಹೆ ನೀಡಲಾಗಿದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 10
ಅದೃಷ್ಟದ ಸಮಯ: ಸಂಜೆ 7 ರಿಂದ 9 ರವರೆಗೆ
ಕರ್ಕ ರಾಶಿ
ವ್ಯಾಪಾರಸ್ಥರು ಇಂದು ಕೆಲವು ದೊಡ್ಡ ಸಮಸ್ಯೆಗಳಿಂದ ಮುಕ್ತರಾಗಬಹುದು. ನಿಮ್ಮ ವ್ಯವಹಾರದಲ್ಲಿ ತುಂಬಾ ಸಮಯದಿಂದ ಸಮಸ್ಯೆಗಳಿದ್ದರೆ ಇಂದು ನಿಮ್ಮ ಎಲ್ಲಾ ಸಮಸ್ಯೆಗಳು ಬಗೆಹರಿಯಲಿದೆ. ನಿಮ್ಮ ಸಂಗಾತಿಯ ಆರೋಗ್ಯ ಸ್ವಲ್ಪ ದುರ್ಬಲವಾಗಿರುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ನೀವು ಅವರನ್ನು ಚೆನ್ನಾಗಿ ನೋಡಿಕೊಳ್ಳಿ, ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 25
ಅದೃಷ್ಟದ ಸಮಯ: ಬೆಳಗ್ಗೆ 4 ರಿಂದ 9:45 ರವರೆಗೆ
ಸಿಂಹ ರಾಶಿ
ಪ್ರಣಯ ಜೀವನದಲ್ಲಿ ಪ್ರೀತಿ ಮತ್ತು ಪ್ರಣಯ ಉಳಿಯುತ್ತದೆ. ಹಣಕಾಸಿನ ಪರಿಸ್ಥಿತಿಯಲ್ಲಿ ಸುಧಾರಣೆಯ ಸಾಧ್ಯತೆ ಇದೆ. ಆಸ್ತಿಗೆ ಸಂಬಂಧಿಸಿದಂತೆ ಕೆಲವು ಪ್ರಯೋಜನಗಳಿರಬಹುದು. ಅದು ಉದ್ಯೋಗವಾಗಲಿ ಅಥವಾ ವ್ಯವಹಾರವಾಗಲಿ, ನಿಮ್ಮ ಎಲ್ಲಾ ಕೆಲಸಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳುತ್ತವೆ. ಆರೋಗ್ಯದ ದೃಷ್ಟಿಯಿಂದ ದಿನವು ಅನುಕೂಲಕರವಾಗಿರುತ್ತದೆ.
ಅದೃಷ್ಟದ ಬಣ್ಣ: ಬೂದು
ಅದೃಷ್ಟದ ಸಂಖ್ಯೆ: 17
ಅದೃಷ್ಟದ ಸಮಯ: ಬೆಳಿಗ್ಗೆ 7 ರಿಂದ 11:20 ರವರೆಗೆ
ಕನ್ಯಾ ರಾಶಿ
ವೈವಾಹಿಕ ಜೀವನದಲ್ಲಿ ಕಲಹ ಉಂಟಾಗುವುದು. ಇಂತಹ ವಿಷಯಗಳು ನಿಮ್ಮ ಮಕ್ಕಳ ಮೇಲೂ ನಕಾರಾತ್ಮಕ ಪರಿಣಾಮ ಬೀರಬಹುದು. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ದೈನಂದಿನ ಖರ್ಚುಗಳನ್ನು ಸುಲಭವಾಗಿ ಭರಿಸಲಾಗುವುದು. ಕೆಲಸದ ವಿಷಯದಲ್ಲಿ ಇಂದು ನಿಮಗೆ ಮಿಶ್ರಫಲ. ಕೆಲಸದ ಜೊತೆಗೆ ನಿಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಿ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಬೆಳಗ್ಗೆ 7:25 ರಿಂದ 11:10 ರವರೆಗೆ
ತುಲಾ ರಾಶಿ
ನೀವು ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಲಿದ್ದರೆ, ಅನುಭವಿ ಜನರ ಸಲಹೆಯನ್ನು ಪಡೆದ ನಂತರವೇ ನಿಮ್ಮ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುವುದು ಒಳ್ಳೆಯದು. ಮನೆಯ ವಾತಾವರಣ ಶಾಂತವಾಗಿರುತ್ತದೆ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಬಲವಾದ ಸಾಧ್ಯತೆಯಿದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 17
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ
ವೃಶ್ಚಿಕ ರಾಶಿ
ಷೇರು ಮಾರುಕಟ್ಟೆಯಲ್ಲಿ ಆಸಕ್ತಿ ಹೊಂದಿರುವವರಿಗೆ ಇಂದು ಲಾಭದಾಯಕವಾಗಿರಲಿದೆ. ನೀವು ಉತ್ತಮ ಆರ್ಥಿಕ ಲಾಭವನ್ನು ಪಡೆಯಬಹುದು. ಸಂಗಾತಿಯೊಂದಿಗಿನ ಸಂಬಂಧವು ಗಟ್ಟಿಯಾಗುತ್ತದೆ ಇಂದು ನಿಮ್ಮ ಪ್ರಮುಖ ಕೆಲಸ ಬಗೆಹರಿಯಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಆದರೆ ಅತಿ ಹೆಚ್ಚು ದೊಡ್ಡ ಖರ್ಚು ಮಾಡುವುದು ನಿಮಗೆ ಸಮಸ್ಯೆ ಉಂಟು ಮಾಡಬಹುದು.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 6
ಅದೃಷ್ಟದ ಸಮಯ: ಬೆಳಿಗ್ಗೆ 8:20 ರಿಂದ 11 ರವರೆಗೆ
ಧನು ರಾಶಿ
ಕೆಲಸದ ವಿಷಯದಲ್ಲಿ ಇಂದು ನಿಮಗೆ ತುಂಬಾ ಒಳ್ಳೆಯದಿದೆ. ನಿಮ್ಮ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರತಿಷ್ಠಿತ ವ್ಯಕ್ತಿಯನ್ನು ಭೇಟಿ ಮಾಡುವ ಅವಕಾಶವನ್ನುಪಡೆಯುತ್ತೀರಿ. ಹಣವನ್ನು ಗಳಿಸಲು ನೀವು ಯಾವುದೇ ಶಾರ್ಟ್‌ಕಟ್ ಮಾರ್ಗವನ್ನು ಹಿಡಿಯಬೇಡಿ, ಇದರಿಂದ ತೊಂದರೆಗೆ ಸಿಲುಕಿಕೊಳ್ಳಬಹುದು.
ಅದೃಷ್ಟದ ಬಣ್ಣ: ಕಡು ಹಸಿರು
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ ಸಂಜೆ 4 ರವರೆಗೆ
ಮಕರ ರಾಶಿ
ಈ ಅವಧಿ ನಿಮಗೆ ಮುಖ್ಯವಾಗಿದ್ದು ಅನಗ್ಯತವಾಗಿ ನಿಮ್ಮ ಶ್ರಮವನ್ನು ಇತರ ವಿಷಯಗಳಿಗೆ ಹಾಕಬೇಡಿ, ಕೋಪವನ್ನು ನಿಯಂತ್ರಿಸುವುದು ಒಳ್ಳೆಯದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಬೆಳಗ್ಗೆ 5:15 ರಿಂದ 9:50 ರವರೆಗೆ
ಕುಂಭ ರಾಶಿ
ಇಂದು ನೀವು ವಾಹನವನ್ನು ಜಾಗ್ರತೆಯಿಂದ ಚಲಾಯಿಸಿ. ಮದ್ಯ ಸೇವಿಸಿದ ನಂತರ ವಾಹನ ಚಾಲನೆ ಮಾಡಬೇಡಿ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಕಛೇರಿಯಲ್ಲಿ ನಿಮ್ಮ ಕೆಲಸವನ್ನು ಆತ್ಮವಿಶ್ವಾಸದಿಂದ ಪೂರ್ಣಗೊಳಿಸುವಿರಿ. ಇಂದು ನಿಮ್ಮ ಬಾಸ್ ನಿಮ್ಮ ಶ್ರಮವನ್ನು ಗಮನಿಸಬಹುದು.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: ಸಂಜೆ 6:30 ರಿಂದ 9:15 ರವರೆಗೆ
ಮೀನ ರಾಶಿ
ಇಂದು ವ್ಯಾಪಾರಸ್ಥರಿಗೆ ಸವಾಲಿನ ದಿನ. ಉದ್ಯೋಗಿಗಳು ಅಷ್ಟೇ ಕೆಲಸದ ಕಡೆಗೆ ಹೆಚ್ಚಿನ ಗಮನಹರಿಸಬೇಕು. ಹಣದ ವಿಷಯದಲ್ಲಿ ಮಿಶ್ರ ಫಲಿತಾಂಶ. ವೈವಾಹಿಕ ಜೀವನನ ಚೆನ್ನಾಗಿರಲಿದೆ. ಪ್ರೇಮಿಗಳಿಗೂ ಈ ದಿನ ಅನುಕೂಲಕರವಾಗಿದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಮುಹೂರ್ತ: ಮಧ್ಯಾಹ್ನ 1:30 ರಿಂದ 4 ರವರೆಗೆ



Click it and Unblock the Notifications











