Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ದಿನ ಭವಿಷ್ಯ: ಸೆಪ್ಟೆಂಬರ್ ತಿಂಗಳ ಮೊದಲ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ವೈದಿಕ ಶಾಸ್ತ್ರದ ಪ್ರಕಾರ ಸೆಪ್ಟೆಂಬರ್ 1ರ ರಾಶಿಫಲ ನೀಡಿದ್ದು ಈ ದಿನ 12 ರಾಶಿಗಳಿಗೆ ಹೇಗಿರಲಿದೆ ಎಂದು ನೋಡೋಣ:
ದಿನಾಂಕ: ಸೆಪ್ಟೆಂಬರ್ 1
ತಿಥಿ: ದ್ವಿತೀಯಾ
ನಕ್ಷತ್ರ: ಮಧ್ಯಾಹ್ನ 02:56ರವರೆಗೆ ಪೂರ್ವ ಭಾದ್ರಪದ ನಂತರ ಉತ್ತರ ಭಾದ್ರಪದ
ಪಕ್ಷ: ಕೃಷ್ಣ ಪಕ್ಷ
ರಾಹುಕಾಲ: ಮಧ್ಯಾಹ್ನ 10:48ರಿಂದ 12:21ರವರೆಗೆ

ಮೇಷ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಈ ದಿನ ನೀವು ಬಯಸಿದ ಫಲಿತಾಂಶಗಳನ್ನು ಪಡೆಯುತ್ತೀರಿ. ನಿಮ್ಮ ಸಂಗಾತಿಯೊಂದಿಗೆ ಪರಸ್ಪರ ಹೊಂದಾಣಿಕೆ ಇರಲಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಈ ಅವಧಿಯಲ್ಲಿ ನೀವು ಉಳಿತಾಯದತ್ತ ಗಮನ ಹರಿಸಬೇಕು. ಆರೋಗ್ಯ ಸಂಬಂಧಿ ಸಮಸ್ಯೆ ದೂರಾಗಬಹುದು.
ಅದೃಷ್ಟದ ಸಂಖ್ಯೆ: 19
ಶುಭ ಸಮಯ: ಬೆಳಿಗ್ಗೆ 7:20 ರಿಂದ ಮಧ್ಯಾಹ್ನ 12:20 ರವರೆಗೆ
ವೃಷಭ ರಾಶಿ
ನಿಮ್ಮ ಸಂಗಾತಿಯೊಂದಿಗಿನ ನಿಮ್ಮ ಸಂಬಂಧ ತುಂಬಾ ಚೆನ್ನಾಗಿರಲಿದೆ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಲಕ್ಷಣಗಳಿವೆ. ಕೆಲಸದ ವಿಷಯದಲ್ಲಿ ಇಂದು ಬಿಡುವಿಲ್ಲದ ದಿನವಾಗಿರುತ್ತದೆ. ಆದರೆ ನಿಮ್ಮ ಎಲ್ಲಾ ಕೆಲಸಗಳು ಯಾವುದೇ ಅಡೆತಡೆಗಳಿಲ್ಲದೆ ಪೂರ್ಣಗೊಳ್ಳುತ್ತವೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 15
ಶುಭ ಸಮಯ: ಸಂಜೆ 7 ರಿಂದ 9:15 ರವರೆಗೆ
ಮಿಥುನ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ. ಹಣದ ಪರಿಸ್ಥಿತಿ ಉತ್ತಮವಾಗಿರುತ್ತದೆ. ಉಳಿತಾಯ ಮಾಡಲು ಸಾಧ್ಯವಾಗುವುದು. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ಅದು ಉದ್ಯೋಗ ಅಥವಾ ವ್ಯವಹಾರವಾಗಿರಲಿ ಈ ದಿನ ನಿಮಗೆ ತುಂಬಾ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 7
ಶುಭ ಮುಹೂರ್ತ: ಮಧ್ಯಾಹ್ನ 1 ರಿಂದ 3 ರವರೆಗೆ
ಕರ್ಕ ರಾಶಿ
ಈ ದಿನ ನೀವು ವಿರೋಧಿಗಳ ಬಗ್ಗೆ ಜಾಗರೂಕರಾಗಿರಬೇಕು, ಅಲ್ಲದೆ ಸಂಗಾತಿ ಜೊತೆ ಭಿನ್ನಾಭಿಪ್ರಾಯವಿರಬಹುದು, ಆದ್ದರಿಂದ ನಿಮ್ಮ ಕೋಪವನ್ನು ನೀವು ನಿಯಂತ್ರಿಸಬೇಕು. ಇಂದು ಕೆಲಸದ ವಿಷಯದಲ್ಲಿ ಏರಿಳಿತಗಳಿಂದ ಕೂಡಿರಲಿದೆ. ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಬೂದು
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಬೆಳಿಗ್ಗೆ 4:15 ರಿಂದ 9:15 ರವರೆಗೆ
ಸಿಂಹ ರಾಶಿ
ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಈ ದಿನ ಕಚೇರಿಯಲ್ಲಿ ಸ್ಥಗಿತಗೊಂಡ ಕೆಲಸಗಳು ಪೂರ್ಣಗೊಳ್ಳಲಿವೆ. ಇಂದು ಬಾಸ್ ಕೂಡ ನಿಮ್ಮ ಕಾರ್ಯಕ್ಷಮತೆಯಿಂದ ತೃಪ್ತರಾಗುತ್ತಾರೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಹಣವನ್ನು ಮಿತಿಯಲ್ಲಿ ಖರ್ಚು ಮಾಡಿ. ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರಲಿದೆ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 26
ಶುಭ ಸಮಯ: ಸಂಜೆ 4:45 ರಿಂದ ರಾತ್ರಿ 8 ರವರೆಗೆ
ಕನ್ಯಾ ರಾಶಿ
ನಿಮ್ಮ ನಿರ್ಧಾರಗಳನ್ನು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳಿ, ಕೆಲಸದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಸಂಗಾತಿಯ ಭಾವನೆಗಳನ್ನು ಗೌರವಿಸಿ. ಇಲ್ಲದಿದ್ದರೆ ಸಂಬಂಧದಲ್ಲಿ ಅಂತರವನ್ನು ಹೆಚ್ಚಿಸಬಹುದು. ಆರೋಗ್ಯದ ವಿಷಯದಲ್ಲಿ ಈ ದಿನ ಸರಾಸರಿಯಾಗಿರಲಿದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಬೆಳಿಗ್ಗೆ 10:10 ರಿಂದ ಮಧ್ಯಾಹ್ನ 12:50 ರವರೆಗೆ
ತುಲಾ ರಾಶಿ
ಹಣದ ಬಗ್ಗೆ ಚಿಂತೆ ಹೆಚ್ಚಾಗಬಹುದು, ಇಂದು ನೀವು ಸಾಲವನ್ನು ತೆಗೆದುಕೊಳ್ಳಬೇಕಾಗಬಹುದು. ಕಛೇರಿಯಲ್ಲಿ ಉನ್ನತ ಅಧಿಕಾರಿಗಳ ತಪ್ಪು ವರ್ತನೆಯು ನಿಮಗೆ ಬಹಳಷ್ಟು ನೋವುಂಟು ಮಾಡುವುದು. ಈ ರೀತಿಯ ಪರಿಸ್ಥಿತಿಯಲ್ಲಿ ನೀವು ಧನಾತ್ಮಕವಾಗಿರಲು ಸಲಹೆ ನೀಡಲಾಗುವುದು, ಆತುರದಿಂದ ಯಾವುದೇ ಕೆಲಸ ಮಾಡಬೇಡಿ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 17
ಅದೃಷ್ಟದ ಸಮಯ: ಸಂಜೆ 6 ರಿಂದ 9:05 ರವರೆಗೆ
ವೃಶ್ಚಿಕ ರಾಶಿ
ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ ಈ ದಿನ ನಿಮಗೆ ಶುಭವಾಗಿರುತ್ತದೆ. ಉದ್ಯೋಗಸ್ಥರು ತಮ್ಮ ಶ್ರಮಕ್ಕೆ ತಕ್ಕಂತೆ ಫಲಿತಾಂಶವನ್ನೂ ಪಡೆಯುತ್ತೀರಿ, ನೀವು ಅವಿವಾಹಿತರಾಗಿದ್ದು ಸಂಗಾತಿಯ ಹುಡುಕಾಟದಲ್ಲಿದ್ದರೆ ಈ ದಿನ ಪ್ರಮುಖವಾಗಿದೆ. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 5
ಶುಭ ಸಮಯ: ಬೆಳಿಗ್ಗೆ 6:35 ರಿಂದ 11 ರವರೆಗೆ
ಧನು ರಾಶಿ
ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿದ್ದರೂ ನಿರ್ಲಕ್ಷ್ಯ ಮಾಡಬೇಡಿ. ವ್ಯಾಪಾರಸ್ಥರಿಗೆ ತಕ್ಕ ಲಾಭ ದೊರೆಯಲಿದೆ. ಮನೆಯ ಸದಸ್ಯರೊಂದಿಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿರಬಹುದು. ಕುಟುಂಬದಲ್ಲಿ ಶಾಂತಿ ಉಳಿಯಲು ಕೋಪವನ್ನು ನಿಯಂತ್ರಿಸುವುದು ಒಳ್ಳೆಯದು.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 27
ಅದೃಷ್ಟದ ಸಮಯ: ಮಧ್ಯಾಹ್ನ 12:50 ರಿಂದ ಮಧ್ಯಾಹ್ನ 3 ರವರೆಗೆ
ಮಕರ ರಾಶಿ
ಇಂದು ವ್ಯಾಪಾರಸ್ಥರಿಗೆ ಶುಭವಲ್ಲ, ಅದೇ ಸಮಯದಲ್ಲಿ ಉದ್ಯೋಗಿಗಳು ಕೆಲ ಸವಾಲುಗಳನ್ನು ಎದುರಿಸಬಹುದು. ಹಣಕಾಸಿನ ಪರಿಸ್ಥಿತಿಯು ಸಾಮಾನ್ಯವಾಗಿರುತ್ತದೆ. ನಿಮ್ಮ ಸಂಗಾತಿಯೊಂದಿಗೆ ನಿಮ್ಮ ನಡವಳಿಕೆಯನ್ನು ಸರಿಯಾಗಿ ಇರಿಸಿಕೊಳ್ಳಲು ನೀವು ಪ್ರಯತ್ನಿಸಬೇಕು. ಅನಗತ್ಯ ಜಗಳ ತಪ್ಪಿಸಿ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 2
ಶುಭ ಸಮಯ: ಬೆಳಗ್ಗೆ 4:30 ರಿಂದ 11:30 ರವರೆಗೆ
ಕುಂಭ ರಾಶಿ
ಹಣದ ವಿಷಯದಲ್ಲಿ ಈ ದಿನ ಉತ್ತಮವಾಗಿರುತ್ತದೆ. ನಿಮ್ಮ ಆರ್ಥಿಕ ಪ್ರಯತ್ನ ಯಶಸ್ವಿಯಾಗಬಹುದು. ಕೌಟುಂಬಿಕ ಜೀವನದಲ್ಲಿ ಸ್ವಲ್ಪ ಒತ್ತಡವಿರುತ್ತದೆ. ಕುಟುಂಬದಲ್ಲಿ ಒತ್ತಡದ ಪರಿಸ್ಥಿತಿ ಇರಲಿದೆ. ಕೆಲಸದ ದೃಷ್ಟಿಯಿಂದ ಇಂದು ನಿಮಗೆ ಒಳ್ಳೆಯ ದಿನವಾಗಿರುತ್ತದೆ. ಆದರೆ , ನೀವು ಯಾವುದೇ ಪ್ರಮುಖ ಕೆಲಸಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಈ ದಿನ ತೆಗೆದುಕೊಳ್ಳಬೇಡಿ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 1
ಅದೃಷ್ಟದ ಸಮಯ: ಸಂಜೆ 5:15 ರಿಂದ 8:15 ರವರೆಗೆ
ಮೀನ ರಾಶಿ
ಈ ದಿನ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ದಿನದ ಎರಡನೇ ಭಾಗದಲ್ಲಿ, ನೀವು ಹಣದ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ಕಚೇರಿಯಲ್ಲಿನ ಉನ್ನತ ಅಧಿಕಾರಿಗಳಿಂದ ನಿಮಗೆ ಸಂಪೂರ್ಣ ಬೆಂಬಲ ಸಿಗಲಿದೆ. ವ್ಯಾಪಾರಸ್ಥರಿಗೆ ಈ ದಿನ ಅನುಕೂಲಕರವಾಗಿದೆ. ನಿಮ್ಮ ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 12
ಶುಭ ಮುಹೂರ್ತ: ಬೆಳಗ್ಗೆ 8 ರಿಂದ ಮಧ್ಯಾಹ್ನ 12



Click it and Unblock the Notifications
